ನವ ದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಯಾನ್ಸರ್ ಔಷಧಿಗಳು ಮತ್ತು ಮೊಬೈಲ್ ಫೋನ್‌ಗಳ ಮೇಲಿನ ಕಸ್ಟಮ್ಸ್ ಸುಂಕದಲ್ಲಿ ಭಾರಿ ಕಡಿತವನ್ನು ಘೋಷಿಸಿದ್ದಾರೆ. ಇದು ಚಿಲ್ಲರೆ ಮಾರುಕಟ್ಟೆಯಲ್ಲಿ ಅವುಗಳ ಬೆಲೆಗಳನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ಆಮದು ಮಾಡಿದ ಚಿನ್ನ, ಬೆಳ್ಳಿ, ಚರ್ಮದ ವಸ್ತುಗಳು ಮತ್ತು ಸೀಫುಡ್ ಕೂಡ ಅಗ್ಗವಾಗಲಿದೆ.
“ಸರ್ಕಾರವು ಇನ್ನೂ 3 ಕ್ಯಾನ್ಸರ್ ಚಿಕಿತ್ಸಾ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡಲಿದೆ. ಮೊಬೈಲ್ ಫೋನ್‌ಗಳು, ಚಾರ್ಜರ್‌ಗಳು ಮತ್ತು ಇತರ ಮೊಬೈಲ್ ಬಿಡಿಭಾಗಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಸಹ ಕಡಿಮೆ ಮಾಡುತ್ತಿದ್ದೇವೆ” ಎಂದು ನಿರ್ಮಲಾ ಸೀತಾರಾಮನ್ 2024 ರ ಬಜೆಟ್ ಭಾಷಣದಲ್ಲಿ ಹೇಳಿದರು.