Wednesday, August 20, 2025

ಸತ್ಯ | ನ್ಯಾಯ |ಧರ್ಮ

ಇಂದಿನಿಂದ ಬಜೆಟ್ ಅಧಿವೇಶನ: ಪಕ್ಷಗಳ ನಡುವೆ ಕಾವೇರಿದ ಚರ್ಚೆ ʼಗ್ಯಾರಂಟಿʼ

ಬೆಂಗಳೂರು: ಕರ್ನಾಟಕ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಡುವೆ ಭಾರೀ ತಿಕ್ಕಾಟದ ನಾಟಕೀಯ ಕಲಾಪಕ್ಕೆ ಈ ಅಧಿವೇಶನ ಸಾಕ್ಷಿಯಾಗುವ ನಿರೀಕ್ಷೆಯಿದೆ. ಉಭಯ ಪಕ್ಷಗಳ ನಾಯಕರು ಬಿಸಿ ಬಿಸಿ ಚರ್ಚೆಯಲ್ಲಿ ತೊಡಗುವ ಸಾಧ್ಯತೆಯಿದೆ.

ಫೆಬ್ರವರಿ 12-23ರವರೆಗೆ 10 ದಿನಗಳ ಅಧಿವೇಶನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಫೆ.16ರಂದು ರಾಜ್ಯ ಬಜೆಟ್ ಮಂಡಿಸಲಿದ್ದು, 15ನೇ ಬಜೆಟ್ ಮಂಡನೆಯಾಗಲಿದೆ. ವಾರ್ಷಿಕ 55,000 ಕೋಟಿ ರೂಪಾಯಿ ವೆಚ್ಚದ ಗ್ಯಾರಂಟಿ ಯೋಜನೆಗಳ ಆದಾಯದ ಮೇಲೆ ಎಲ್ಲರ ಕಣ್ಣುಗಳು ನೆಟ್ಟು ಕುಳಿತಿವೆ.

ಬಜೆಟ್‌ ಅಧಿವೇಶನ-2024 | ನೇರಪ್ರಸಾರ | Live | BUDGET Session-2024

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯ ಬೆಳವಣಿಗೆಯಿಂದ ಉತ್ತೇಜಿತವಾಗಿರುವ ಬಿಜೆಪಿ, 40 ಪರ್ಸೆಂಟ್ ಕಮಿಷನ್ ಆರೋಪ ಮತ್ತು ಹನುಮಾನ್ ಧ್ವಜ ತೆರವು ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು ಸಿದ್ಧವಾಗಿದೆ. ಮತ್ತೊಂದೆಡೆ, ರಾಜ್ಯಕ್ಕೆ ಕೇಂದ್ರ ಬಜೆಟ್ ಹಂಚಿಕೆಯಲ್ಲಿನ ವ್ಯತ್ಯಾಸಗಳ ಆರೋಪಗಳನ್ನು ಹೈಲೈಟ್ ಮಾಡಲು ಕಾಂಗ್ರೆಸ್ ಸರ್ಕಾರ ಸಿದ್ಧವಾಗಿದೆ.

ಬಿಜೆಪಿ ಬೇಡಿಕೆಯಂತೆ ಕೇಂದ್ರ ಸರ್ಕಾರ ನೀಡಿರುವ ಅನುದಾನ ಬಳಕೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಶ್ವೇತಪತ್ರ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಫಲಕಗಳಲ್ಲಿ ಕನ್ನಡ ಭಾಷೆಯ ಪ್ರಾಮುಖ್ಯತೆಯನ್ನು ಖಚಿತಪಡಿಸುವ ಉದ್ದೇಶದಿಂದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ನಡೆಸಿದ ಪ್ರತಿಭಟನೆ ಇತ್ತೀಚೆಗೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.

ರಾಜ್ಯಕ್ಕೆ ಹೆಚ್ಚಿನ ಹಣ ನೀಡುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ವಿಷಯವು ಕಾಂಗ್ರೆಸ್ ಸರ್ಕಾರ ಮತ್ತು ಬಿಜೆಪಿ ನಡುವೆ ಫ್ಲ್ಯಾಶ್ ಪಾಯಿಂಟ್ ಆಗಿದ್ದು, ಎರಡೂ ಪಕ್ಷಗಳ ನಾಯಕರು ಇದರ ಬಗ್ಗೆ ಕಿಡಿಕಾರುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page