ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತಕ್ಕೆ ಕಾರಣರಾದ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಟ್ಟಡದ ಮಾಲೀಕ ಮುನಿರಾಜ ರೆಡ್ಡಿ, ಮೋಹನ್ ರೆಡ್ಡಿ ಮತ್ತು ಏಳುಮಲೈ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹನ್ನೂರು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಸದ್ಯ ಕಟ್ಟಡದ ಮಾಲೀಕ ಮುನಿರಾಜ ರೆಡ್ಡಿ ಪುತ್ರ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಉಣಿಯಪ್ಪ ತಮ್ಮ ವಶದಲ್ಲಿದ್ದಾರೆ ಎಂದು ಬೆಂಗಳೂರು ಪೂರ್ವ ಡಿಸಿಪಿ ತಿಳಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಏಳು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಕೆಲವರು ಸುರಕ್ಷಿತವಾಗಿ ಪಾರಾದರೆ, ಮೂವರು ಸಾವಿಗೀಡಾಗಿದ್ದಾರೆ.