Home ದೇಶ ಯುಪಿಯಲ್ಲಿ ಭೀಕರ ರಸ್ತೆ ಅಪಘಾತ. ಐವರು ಸಾವು, 15 ಮಂದಿಗೆ ಗಾಯ

ಯುಪಿಯಲ್ಲಿ ಭೀಕರ ರಸ್ತೆ ಅಪಘಾತ. ಐವರು ಸಾವು, 15 ಮಂದಿಗೆ ಗಾಯ

0

ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇ ರಸ್ತೆ ನಿನ್ನೆ ತಡರಾತ್ರಿ ಮತ್ತೆ ಅಪಘಾತವೊಂದಕ್ಕೆ ಸಾಕ್ಷಿಯಾಗಿದೆ. ಖಾಸಗಿ ಸಾರಿಗೆ ಸಂಸ್ಥೆಗೆ ಸೇರಿದ ವೋಲ್ವೋ ಬಸ್ಸೊಂದು ನುಜ್ಜುಗುಜ್ಜಾಗಿದೆ

ವೇಗವಾಗಿ ಬರುತ್ತಿದ್ದ ಬಸ್ಸು ಲಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದೇ ವೇಳೆ ದೆಹಲಿಯಿಂದ ಅಝಂಘಡ್‌ ಕಡೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್‌ಗೆ ಸೇರಿದ ಡಬಲ್ ಡೆಕ್ಕರ್ ಬಸ್ ತಪ್ಪಲ್ ಬಳಿ ಎದುರಿಗೆ ಬರುತ್ತಿದ್ದ ಖಾಲಿ ಬಿಯರ್ ಬಾಟಲ್ ಹೊತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಅವರಲ್ಲಿ ಒಂದು ಹೆಣ್ಣು ಮಗು, ಮಹಿಳೆ ಹಾಗೂ ಮೂವರು ಪುರುಷರು ಎಂದು ತಿಳಿದುಬಂದಿದೆ. ಇತರ 15 ಮಂದಿ ಗಾಯಗೊಂಡಿದ್ದಾರೆ. ಅಪಘಾತದಿಂದಾಗಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸಿಕ್ಕಿಬಿದ್ದಿದ್ದ ಪ್ರಯಾಣಿಕರನ್ನು ಕಷ್ಟಪಟ್ಟು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೇವಾರ್‌ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

https://x.com/praveen_singh5/status/1859319032714780688

You cannot copy content of this page

Exit mobile version