Saturday, June 15, 2024

ಸತ್ಯ | ನ್ಯಾಯ |ಧರ್ಮ

ಬಸ್‌ ಮತ್ತು ಟ್ರಕ್‌ ಡಿಕ್ಕಿ: 8 ಮಂದಿ ಸಾವು, 25 ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶ: ಉತ್ತರಪ್ರದೇಶದ ಜಿಲ್ಲೆ ಲಖಿಂಪುರ ಖೇರಿಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿ 8 ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಲಖಿಂಪುರ ಖೇರಿ ಎಡಿಎಂ ಸಂಜಯ್ ಕುಮಾರ್, ಲಖನೌಗೆ ತೆರಳುತ್ತಿದ್ದ ಟ್ರಕ್ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದರು.

ಈ ಹಿನ್ನಲೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಮರಣಹೊಂದಿದವರಿಗೆ ಸಂತಾಪ ಸೂಚಿಸಿದ್ದಾರೆ ಮತ್ತು  ತಕ್ಷಣ ಅಪಘಾತವಾಗಿರುವ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರು ಮೃತರ  ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF ) ಯಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು. ಇನ್ನು ಅಪಘಾತದಲ್ಲಿ ಗಾಯಾಗೊಂಡಿರುವವರಿಗೆ ಮುಂದಿನ ಚಿಕಿತ್ಸೆಗಾಗಿ 50,000 ರೂಪಾಯಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು