Home ದೇಶ ಜಮ್ಮು-ಕಾಶ್ಮೀರದಲ್ಲಿ ಬಸ್ ಅಪಘಾತ: 36 ಮಂದಿ ಸಾವು

ಜಮ್ಮು-ಕಾಶ್ಮೀರದಲ್ಲಿ ಬಸ್ ಅಪಘಾತ: 36 ಮಂದಿ ಸಾವು

0
ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್ ಅಸ್ಸಾರ್ ಬಳಿ ಬಸ್ ನಿಯಂತ್ರಣ ತಪ್ಪಿ 300 ಅಡಿ ಕಂದರಕ್ಕೆ ಬಿದ್ದಿದೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ದೋಡಾದಲ್ಲಿ ಬಸ್ ಕಣಿವೆಗೆ ಬಿದ್ದ ಪರಿಣಾಮ 36 ಮಂದಿ ಸಾವನ್ನಪ್ಪಿದ್ದಾರೆ. 19 ಮಂದಿ ಗಾಯಗೊಂಡಿದ್ದು, ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ಕಿಷ್ತ್ವಾಡ್‌ನಿಂದ 50ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ಬಸ್‌ ಹೊರಟಿತ್ತು. ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್ ಅಸ್ಸಾರ್ ಬಳಿ ಬಸ್ ನಿಯಂತ್ರಣ ತಪ್ಪಿ 300 ಅಡಿ ಕಂದರಕ್ಕೆ ಬಿದ್ದಿದೆ ಎಂದು ಜಮ್ಮು ವಿಭಾಗೀಯ ಆಯುಕ್ತ ರಮೇಶ್ ಕುಮಾರ್ ತಿಳಿಸಿದ್ದಾರೆ. ಗಾಯಾಳುಗಳನ್ನು ಕಿಶ್ತ್ವಾರ್ ಮತ್ತು ದೋಡಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ದೋಡಾ ಬಸ್ ಅಪಘಾತದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ. ಅವರು ಬಸ್ ಅಪಘಾತ ನೋವು ತಂದಿದೆ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಮೃತರಿಗೆ ರೂ. 2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ 50 ಸಾವಿರ ನೆರವು ಘೋಷಿಸಲಾಗಿದೆ.

You cannot copy content of this page

Exit mobile version