Home ಅಪಘಾತ ಹೈದರಾಬಾದ್–ಬೆಂಗಳೂರು ವೋಲ್ವೋ ಬಸ್ ಭೀಕರ ಅಪಘಾತ; ಸೇತುವೆಯಿಂದ ಕೆಳಗೆ ಉರುಳಿದ ಬಸ್, 40ಕ್ಕೂ ಹೆಚ್ಚು ಮಂದಿಗೆ...

ಹೈದರಾಬಾದ್–ಬೆಂಗಳೂರು ವೋಲ್ವೋ ಬಸ್ ಭೀಕರ ಅಪಘಾತ; ಸೇತುವೆಯಿಂದ ಕೆಳಗೆ ಉರುಳಿದ ಬಸ್, 40ಕ್ಕೂ ಹೆಚ್ಚು ಮಂದಿಗೆ ಗಾಯ

0

ಅನಂತಪುರ: ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ವೋಲ್ವೋ ಬಸ್‌ವೊಂದು ಭಾನುವಾರ ಮುಂಜಾನೆ ಆಂಧ್ರಪ್ರದೇಶದ ಅನಂತಪುರ ಸಮೀಪ ಭೀಕರ ಅಪಘಾತಕ್ಕೀಡಾಗಿದೆ. ವೋಲ್ವೋ ಬಸ್ ಹಾಗೂ ಐಚರ್ ವಾಹನದ ನಡುವೆ ಸಂಭವಿಸಿದ ಅಪಘಾತದ ರಭಸಕ್ಕೆ ಎರಡೂ ವಾಹನಗಳು ಪೊಗುರೂರು ಸೇತುವೆಯಿಂದ ಕೆಳಗೆ ಉರುಳಿ ಬಿದ್ದಿವೆ.

ಅಪಘಾತದಲ್ಲಿ ಬಸ್‌ನಲ್ಲಿದ್ದ ಸುಮಾರು 40 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 10 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಸೇತುವೆಯ ಕೆಳಗೆ ಬಿದ್ದಿದ್ದ ಬಸ್ ಹಾಗೂ ಐಚರ್ ವಾಹನವನ್ನು ಜೆಸಿಬಿ ಯಂತ್ರಗಳ ನೆರವಿನಿಂದ ಮೇಲಕ್ಕೆತ್ತಿ, ಅದರೊಳಗಿದ್ದವರನ್ನು ಸುರಕ್ಷಿತವಾಗಿ ಹೊರತೆಗೆಯಲಾಯಿತು.

ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವವರಿಗಾಗಿ ವೈದ್ಯರು ತುರ್ತು ಚಿಕಿತ್ಸೆ ಮುಂದುವರಿಸಿದ್ದಾರೆ.

ಚಾಲಕನ ನಿರ್ಲಕ್ಷ್ಯವೇ? ತಾಂತ್ರಿಕ ದೋಷವೇ?
ಘಟನೆಯ ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯ ಕಾರಣವೇ ಅಥವಾ ವಾಹನದಲ್ಲಿನ ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿದೆಯೇ ಎಂಬ ಕುರಿತು ತನಿಖೆ ಆರಂಭಿಸಿದ್ದಾರೆ.

You cannot copy content of this page

Exit mobile version