Saturday, October 4, 2025

ಸತ್ಯ | ನ್ಯಾಯ |ಧರ್ಮ

ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಆಯ್ಕೆ

ಬೆಂಗಳೂರು:

ಬೆಂಗಳೂರು: ಈ ದಿನದ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಈ ಕುರಿತು ಆದೇಶ ನೀಡಿದ್ದು, ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.

ಬಹಳ ದಿನಗಳಿಂದ ಬಾಕಿಯಿದ್ದ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನಗಳಲ್ಲಿ ಒಂದು ಸ್ಥಾನ ಭರ್ತಿಯಾಗಿದ್ದು, ಮುಂದಿನ ಚಳಿಗಾಲದ ಅಧಿವೇಶನದ ಒಳಗೆ ವಿರೋಧ ಪಕ್ಷದ ನಾಯಕನ ಸ್ಥಾನವೂ ಭರ್ತಿಯಾಗುವ ನಿರೀಕ್ಷೆಯಿದೆ.

ಪಕ್ಷದಲ್ಲಿ ನಾಯಕರುಗಳ ಸ್ಥಾನ ಖಾಲಿಯಿರುವ ಕುರಿತು ಹೈಕಮಾಂಡ್‌ ವಿರುದ್ಧ ರಾಜ್ಯ ನಾಯಕರು ಪದೇಪದೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page