Home ದೇಶ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

0

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಂದ ತೆರವಾಗಿದ್ದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಭಾರತದ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ನಡೆದ ಉಪರಾಷ್ಟ್ರಪತಿ ಸ್ಥಾನದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ರಾಧಾಕೃಷ್ಣನ್ ಹಾಗೂ ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಬಿ. ಸುದರ್ಶನ್ ರೆಡ್ಡಿ ಅವರು 300 ಮತಗಳನ್ನು ಪಡೆದಿದ್ದಾರೆ ಎನ್ನಲಾಗಿದೆ.

ಸಿ.ಪಿ. ರಾಧಾಕೃಷ್ಣನ್ 452 ಮತಗಳನ್ನು ಪಡೆದಿದ್ದಾರೆ. ಮಾಜಿ ಮಹಾರಾಷ್ಟ್ರ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್ ಅವರು ಮೊದಲ ಸುತ್ತಿನಲ್ಲೇ 452 ಮತಗಳನ್ನು ಗಳಿಸಿದ್ದರು.

ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಸದಸ್ಯರು ರಹಸ್ಯ ಮತದಾನದಲ್ಲಿ ತಮ್ಮ ಮತಗಳನ್ನು ಚಲಾಯಿಸಿದರು. ರಾಧಾಕೃಷ್ಣನ್ ಅವರು ಐದು ದಶಕಗಳ ಸಾರ್ವಜನಿಕ ವಲಯದಲ್ಲಿ ಗುರುತಿಸಿಕೊಂಡಿದ್ದು, ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭಾ ಸಂಸದರಾಗಿ, ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಮತ್ತು ಜಾರ್ಖಂಡ್ ಮತ್ತು ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ದಕ್ಷಿಣ ಭಾರತದಿಂದ ಉಪರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ ಮೊದಲ ಒಬಿಸಿ ನಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಸಿಪಿ ರಾಧಾಕೃಷ್ಣನ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

You cannot copy content of this page

Exit mobile version