Home ಬೆಂಗಳೂರು ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ. ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ:...

ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ. ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

0

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಡ್ಡಿಪಡಿಸಲು ಕೆಲವು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭಾನುವಾರ ಆರೋಪಿಸಿದ್ದಾರೆ.

“ಬಿಜೆಪಿಯಲ್ಲಿ ಕೆಲವರು ದೆಹಲಿ ಮಟ್ಟದಲ್ಲಿ ನನಗೆ ಬಲವಾದ ಬಾಂಧವ್ಯವಿದೆ ಎನ್ನುವ ಕಾರಣಕ್ಕಾಗಿ ನನ್ನನ್ನು ಸಮಸ್ಯೆಯಲ್ಲಿ ಸಿಲುಕಿಸಲು ನೋಡುತ್ತಿದ್ದಾರೆ

ಈ ಬಗ್ಗೆ ನಾನೂ ಕೇಳಿದ್ದೇನೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಅಡ್ಡಿಪಡಿಸಲು ಹಲವರು ಕೆಲಸ ಮಾಡುತ್ತಿದ್ದಾರೆ. ನನ್ನ ಖ್ಯಾತಿಗೆ ಧಕ್ಕೆ ತರಲು ಸಂಘಟಿತ ಪ್ರಯತ್ನ ನಡೆಯುತ್ತಿದೆ, ಆದರೆ ಅದು ಯಶಸ್ವಿಯಾಗುವುದಿಲ್ಲ” ಎಂದು ಕುಮಾರಸ್ವಾಮಿ ಹೇಳಿದರು.

ಭಾನುವಾರ ಸಂಜೆ ಮಂಡ್ಯ ಜಿಲ್ಲೆಯಿಂದ ವಾಪಸಾದ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಮುಡಾ ಹಗರಣದ ದಾಖಲೆಗಳನ್ನು ವಿಮಾನದ ಮೂಲಕ ಸ್ಥಳಾಂತರಿಸಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ
ಬಿಜೆಪಿ ಎಂಎಲ್ಸಿ ಸಿ ಪಿ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಆರೋಪಿಸಿದರು.

“ಅವರು ನನ್ನ ಕೈ ಮೀರಿದ್ದಾರೆ; ಪ್ರಭಾವಿ ವ್ಯಕ್ತಿ. ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಅವರ ಬಗ್ಗೆ ನಾನೇಕೆ ಚರ್ಚಿಸಬೇಕು? ಅವರು ಏನು ಯೋಜಿಸುತ್ತಿದ್ದಾರೆಂದು ನನಗೆ ತಿಳಿದಿಲ್ಲ. ನಾನು ಮಾಧ್ಯಮಗಳ ಮೂಲಕ ಎಲ್ಲವನ್ನೂ ತಿಳಿದುಕೊಳ್ಳುತ್ತಿದ್ದೇನೆ. ಅವರು ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದು, ಬಿಜೆಪಿಯ ಹಿರಿಯ ನಾಯಕರಿಗೆ ಇದೆಲ್ಲದರ ಅರಿವಿದೆ’’ ಎಂದು ಯೋಗೇಶ್ವರ್ ಕುರಿತು ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ನಾನು ಪ್ರತಿನಿಧಿಸುವ ಕ್ಷೇತ್ರದ ಬಗ್ಗೆ ನಾನೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಿಜೆಪಿಯ ಹಿರಿಯ ನಾಯಕರು ಈಗಾಗಲೇ ಹಲವು ಬಾರಿ ಹೇಳಿಕೆ ನೀಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ಇನ್ನೂ ಮೂರು ವರ್ಷಗಳ ಕಾಲ ಕಾಯುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ ಕುಮಾರಸ್ವಾಮಿ, “ಯಾವ ಕಾರಣಕ್ಕೂ ಕಾಂಗ್ರೆಸ್‌ ಪರಿಸ್ಥಿತಿಯ ಲಾಭ ಪಡೆಯಲು ಬಿಡುವುದಿಲ್ಲ” ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ಗೆ ನೆಲೆ ಇಲ್ಲ ಎಂದ ಕುಮಾರಸ್ವಾಮಿ,
ಆ ಪಕ್ಷದ ನಾಯಕರು ರಾಜಕೀಯಕ್ಕಾಗಿ ಹಣ ಮತ್ತು ಅಧಿಕಾರ ದುರುಪಯೋಗವನ್ನು ನೆಚ್ಚಿಕೊಂಡಿದ್ದಾರೆ ಎಂದರು.

ಕೆಲವರು ಈಗ ಕಾಂಗ್ರೆಸ್‌ನ ಷಡ್ಯಂತ್ರಕ್ಕೆ ಜೋತು ಬೀಳುತ್ತಿದ್ದಾರೆ ಎಂದು ಅವರು ಹೇಳಿದರು.

You cannot copy content of this page

Exit mobile version