Sunday, April 28, 2024

ಸತ್ಯ | ನ್ಯಾಯ |ಧರ್ಮ

ಸಿ.ಪಿ ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ : ಸಿಎಂ ಖಂಡನೆ

ರಾಮನಗರ: ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ. ಪಿ ಯೋಗೇಶ್ವರ್ ಅವರ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿರುವ ಘಟನೆ ನಡೆದಿದ್ದು, ಸಿಎಂ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ.

ಸರ್ಕಾರದ 50 ಕೋಟಿ ವಿಶೇಷ ಅನುದಾನದ ಅಡಿ ವಿವಿಧ ಕಾಮಗಾರಿಗೆ ಚಾಲನೆ ನೀಡಲು ಸಿ. ಪಿ ಯೋಗೇಶ್ವರ್ ಅವರು ರಾಮನಗರದ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣಕ್ಕೆ ಬಂದಿದ್ದರು. ಈ ವೇಳೆ ಹೆಚ್ ಡಿ ಕುಮಾರಸ್ವಾಮಿ ಅವರಿಲ್ಲದೆ ಕಾರ್ಯಕ್ರಮ ಚಾಲನೆ ನಡೆಸಲಾಗುತ್ತಿದೆ ಎಂದು ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಯೋಗೇಶ್ವರ್ ಅವರ ಕಾರಿನ ಮೇಲೆ ಕಲ್ಲು ಮತ್ತು ಮೊಟ್ಟೆ ತೂರಾಟವನ್ನು ಮಾಡಿ ಪ್ರತಿಭಟನೆ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು “ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ.ಪಿ ಯೋಗಿಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ, ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರೆಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು.” ಎಂದು ಅಸಮಾಧಾನವನ್ನು ವ್ಯಕ್ತ ಪಡಿಸಿದ್ದಾರೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ಬಹುಶಃ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಇದೇ ರೀತಿ ಸ್ಪಂದನೆ ಸಿಗುತ್ತದೆ ಎಂದು ಬಿಜೆಪಿಗೆ ಭಯ ಶುರುವಾಗಿದೆ. ದೇಶದ ಜನರ ಅಭಿಪ್ರಾಯ ಬದಲಾಗುತ್ತಿದೆ, ಜನ ಭಯದಿಂದ ಹೊರಬರುತ್ತಿದ್ದಾರೆ. ಹೀಗಾಗಿ ಬಿಜೆಪಿ ನಮ್ಮ ವಿರುದ್ಧ ಅಪಪ್ರಚಾರ ಮಾಡಲು ಆರಂಭಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

https://fb.watch/fTWMN8bpIX/

Related Articles

ಇತ್ತೀಚಿನ ಸುದ್ದಿಗಳು