Tuesday, July 29, 2025

ಸತ್ಯ | ನ್ಯಾಯ |ಧರ್ಮ

ಸಿ.ಟಿ ರವಿ ವಿರುದ್ಧ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಮನವಿ

ಚಿಕ್ಕಮಗಳೂರು: 2023 ರ ವಿಧಾನಸಭೆ ಚುನಾಚಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿಯ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವಂತೆ ಚಿಕ್ಕಮಗಳೂರು ಕಿಸಾನ್ ಕಾಂಗ್ರೆಸ್ ಮನವಿ ಮಾಡಿದೆ.

ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಾಕ್ರಮದಲ್ಲಿ ಕಿಸಾನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚ್ಚಿನ್ ಮೀಗಾ ನೇತೃತ್ವದ ತಂಡ ಸಿದ್ದರಾಮಯ್ಯ ಅವರಿಗೆ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದರು.

ಚಿಕ್ಕಮಗಳೂರು ವಿಧಾನಸಭೆ ಕ್ಷೇತ್ರದ ಹಾಲಿ ಶಾಸಕ ಸಿ.ಟಿ.ರವಿಯವರ ಆಡಳಿತದ ಬಗ್ಗೆ ಜನರು ಬೇಸತ್ತಿದ್ದಾರೆ. ಈ ಕುರಿತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧಿಸಲು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿರುವುದರ ಬಗ್ಗೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಾರೆ ಎಂಬುದು ಇನ್ನೂ ನಿಗೂಢ ಇರುವಾಗ ಸಚ್ಚಿನ್ ಮೀಗಾ ಅವರ ಮನವಿ ಬಹಳಷ್ಟು ಚರ್ಚೆಗೆ ಒಳಪಟ್ಟಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page