Home ಬೆಂಗಳೂರು ರಾಷ್ಟ್ರೋತ್ಥಾನಕ್ಕೆ ಸಿಎ ನಿವೇಶನ: ಬೊಮ್ಮಾಯಿ ಸೇರಿದಂತೆ 8 ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ರಾಷ್ಟ್ರೋತ್ಥಾನಕ್ಕೆ ಸಿಎ ನಿವೇಶನ: ಬೊಮ್ಮಾಯಿ ಸೇರಿದಂತೆ 8 ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

0

ಬೆಂಗಳೂರು: ಬಳ್ಳಾರಿಯ ಕುವೆಂಪು ನಗರದ ಬಡಾಣೆಯಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು ನಿಯಮಬಾಹಿರವಾಗಿ ರಾಷ್ಟ್ರೋತ್ಥಾನ ಪರಿಷತ್‌ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಟ್ಟು 8 ಜನರ ವಿರುದ್ಧ ಕರ್ನಾಟಕ ರಾಷ್ಟ್ರಾಸಮಿತಿಯು ಲೋಕಾಯುಕ್ತಕ್ಕೆ ದೂರು ದಾಖಲಿಸಿದೆ.

ದೂರಿನಲ್ಲಿರುವ ಮಾಹಿತಿ ಪ್ರಕಾರ, 8 ಜನರ ಪೈಕಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭರತಿ ಬಸವರಾಜು, ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರ ಮೇಲೂ ಪ್ರಕರಣ ದಾಖಲಾಗಿರುವ ಕುರಿತು ʼದಿ ಫೈಲ್‌ʼ ವಿವರವಾಗಿ ವರದಿ ಮಾಡಿದೆ.

ಈ ಕುರಿತಂತೆ, ಕರ್ನಾಟಕ ರಾಷ್ಟ್ರಸಮಿತಿಯ ರಾಜ್ಯ ಕಾರ್ಯದರ್ಶಿ ಬಿ.ಎಸ್‌. ಮಲ್ಲಿಕಾರ್ಜುನಯ್ಯ ಅವರು ಕರ್ತವ್ಯಲೋಪ ಮತ್ತು ಭ್ರಷ್ಟಾಚಾರ ಆರೋಪದ ಅಡಿಯಲ್ಲಿ ದೂರು ದಾಖಲಿಸಿದ್ದು, ಬಳ್ಳಾರಿ ನಗರದ ಶಾಸಕ ಜಿ. ಸೋಮಶೇಖರ್‌ ರೆಡ್ಡಿ, ಸಂಸದ ವೈ. ದೇವೇಂದ್ರಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಆಯುಕ್ತ, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರನ್ನೂಸಹ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿಸಿದ್ದಾರೆ. ಈ ಕುರಿತ ಪ್ರತಿಯು ʼದಿ ಪೈಲ್‌ʼಗೆ ಲಭ್ಯವಾಗಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಲೋಕಯುಕ್ತರಿಗೆ ನೀಡಿದ ದೂರಿನಲ್ಲಿ, ನಾಗರಿಕ ಸೌಲಭ್ಯ ನಿವೇಶನವನ್ನು ನಿಯಮಬಾಹಿರವಾಗಿ ಬಳ್ಳಾರಿಯ ಕುವೆಂಪು ನಗರದಲ್ಲಿನ ಬಹುಕೋಟಿ ಬೆಲೆಬಾಳುವ 24,008 ಚ.ಮೀ ವಿಸ್ತೀರ್ಣದ ನಿವೇಶನವನ್ನು, ಆಡಳಿತಾತ್ಮಕ ಭ್ರಷ್ಟಾಚಾರ ನಡೆಸಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ರಾಜ್ಯ ಸರ್ಕಾರವು ರಾಜ್ಯೋತ್ಥಾನ ಪರಿಷತ್‌ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಿದ್ದರಿಂದ ಬೊಕ್ಕಸಕ್ಕೆ ಅಂದಾಜು 7.50 ಕೋಟಿ ನಷ್ಟ ಸಂಭವಿಸಿದೆ ಎಂದು ತಿಳಿಸಿದೆ.

ಬೆಂಗಳೂರಿನ ರಾಜ್ಯೋತ್ಥಾನ ಪರಿಷತ್‌ಗೆ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ, ವಿವಿಧೆಡೆ ಗೋಮಾಳವನ್ನು ಕಾನೂನು ಇಲಾಖೆಯ ವಿರೋಧದ ನಡುವೆ ಮತ್ತು ಪ್ರಚಲಿತ ಮಾರುಕಟ್ಟೆ ದರಕ್ಕಿಂತಲೂ ಚಿಲ್ಲರೆ ದರಕ್ಕೆ ಮಂಜೂರು ಮಾಡಿರುವ ರಾಜ್ಯ ಸರ್ಕಾರ, ಬಳ್ಳಾರಿ ನಗರದಲ್ಲಿಯೂ ನಿಯಮಬಾಹಿರವಾಗಿ ಒಟ್ಟಾರೆ 24,008.00 ಚ ಮೀ ವಿಸ್ತೀರ್ಣದ ನಾಗರಿಕ ಸೌಲಭ್ಯದ ನಿವೇಶನವನ್ನು 30 ವರ್ಷ ಅವಧಿಗೆ ಗುತ್ತಿಗೆ ಮಂಜೂರು ಮಾಡಿದೆ ಎಂದು ಹೇಳಿದೆ.

ಅಂಗವಿಕಲರ ಹಾಗೂ ಬುದ್ಧಿಮಾಂದ್ಯರ ಕಲ್ಯಾಣಕ್ಕಾಗಿ ಸ್ಥಾಪಿಸಲಾದ ಸಂಸ್ಥೆಗಳಿಗೆ, ಕನ್ನಡ ಮಾಧ್ಯಮದಲ್ಲಿ ಶಾಲೆ ನಡೆಸುವ ಸಂಸ್ಥೆಗಳಿಗೆ ಮತ್ತು ಕೇಂದ್ರ, ರಾಜ್ಯ ಸರ್ಕಾರದ ಅಂಗ ಸಂಸ್ಥೆಗಳಿಗೆ ಮಾತ್ರ ಪ್ರಾಧಿಕಾರವು ನಿಗದಿಪಡಿಸಿದ ಮೊತ್ತದ ಶೇ.50ರ ದರದಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು ಮಂಜೂರು ಮಾಡಲು ಅವಕಾಶವಿದೆ. ಆದರೆ ಇತರ ಸಂಘ ಸಂಸ್ಥೆಗಳಿಗೆ ನಿಗದಿತ ಮೊತ್ತಕ್ಕೆ ರಿಯಾಯಿತಿ ನೀಡಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಕಾನೂನು ಇಲಾಖೆಯು ನೀಡಿದ್ದ ಸ್ಪಷ್ಟ ಅಭಿಪ್ರಾಯವನ್ನು ಮುಖ್ಯಮಂತ್ರಿ ನಗರಾಭಿವ್ರುದ್ಧಿ ಸಚಿವರು ಸೇರಿದಂತ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಭ್ರಷ್ಟಾಚಾರ ಮಾಡಲು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿ ಬದಿಗೆ ಸರಿಸಲಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ದೂರಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರ ಒತ್ತಡಕ್ಕೆ ಮಣಿದ ನಗರಾಭಿವೃದ್ಧಿ ಇಲಾಖೆಯು ನಿಯಮ ಉಲ್ಲಂಘಿಸಿ ಬಹುಕೋಟಿ ಬೆಲೆ ಬಾಳುವ ಜಮೀನನ್ನು ಪ್ರಚಲಿತ ಮಾರುಕಟ್ಟೆ ದರ ಶೇ. 25 ರಷ್ಟು ದರಕ್ಕೆ ಮಂಜೂರು ಮಾಡಿರುವುದರ ಹಿಂದೆ ಅಧಿಕಾರಿಗಳ ಕರ್ತವ್ಯಲೋಪ ಮತ್ತು ಭ್ರಷ್ಟಾಚಾರ ನಡಿದಿದೆ ಎಂದು ಕರ್ನಾಟಕ ರಾಷ್ಟಸಮಿತಿಯು ದೂರಿನಲ್ಲಿ ಆಪಾದಿಸಿದೆ.

You cannot copy content of this page

Exit mobile version