Monday, September 1, 2025

ಸತ್ಯ | ನ್ಯಾಯ |ಧರ್ಮ

ಸಿಎಎ ಜಾರಿ: ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ

ಉಡುಪಿ, ಮಾರ್ಚ್ 13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಪಕ್ಷಕ್ಕೆ ಬಲ

ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page