Friday, February 27, 2026

ಸತ್ಯ | ನ್ಯಾಯ |ಧರ್ಮ

ಧಾರವಾಡ ಪ್ರತಿಭಟನೆ ಎಫೆಕ್ಟ್?; 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ

ರಾಜ್ಯದಲ್ಲಿನ ಉದ್ಯೋಗಾಕಾಂಕ್ಷಿಗಳಿಗೆ ಬಹುಕಾಲದ ನಿರೀಕ್ಷೆಗೆ ತೆರೆ ಬೀಳುವಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿರುವ ಒಟ್ಟು 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಹಸಿರು ನಿಶಾನೆ ತೋರಲಾಗಿದೆ. ವರ್ಷಗಳಿಂದ ಖಾಲಿಯಾಗಿರುವ ಹುದ್ದೆಗಳ ಭರ್ತಿಗೆ ತಾತ್ಕಾಲಿಕ ಪರಿಹಾರ ರೂಪಿಸಿ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಮೀಸಲಾತಿ ಸೂತ್ರದಲ್ಲಿ ತಾತ್ಕಾಲಿಕ ವ್ಯವಸ್ಥೆ
ನೇಮಕಾತಿ ವೇಳೆ ಶೇಕಡ 15 ರಷ್ಟು ಎಸ್‌ಸಿ ಮೀಸಲಾತಿಗೆ ಒಳ ಮೀಸಲು ನೀಡಿ ಭರ್ತಿ ನಡೆಸಲು ತೀರ್ಮಾನಿಸಲಾಗಿದೆ. ಒಟ್ಟು ಮೀಸಲಾತಿ ಪ್ರಮಾಣವು ಶೇಕಡ 50ರ ಮಿತಿಯನ್ನು ಮೀರದಂತೆ ಎಚ್ಚರಿಕೆ ವಹಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಎಸ್‌ಸಿ ಒಳ ಮೀಸಲಾತಿಯನ್ನು ಶೇಕಡ 17ಕ್ಕೆ ಹೆಚ್ಚಿಸುವ ವಿಚಾರ ಕಾನೂನು ಸವಾಲುಗಳಿಗೆ ಒಳಪಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಹಳೆಯ ನಿಯಮಾವಳಿಯನ್ನೇ ಅನುಸರಿಸಲು ಸರ್ಕಾರ ನಿರ್ಧರಿಸಿದೆ. ರಾಜ್ಯಪಾಲರ ಅನುಮೋದನೆ ಇದ್ದರೂ ಕಾನೂನು ಹೋರಾಟದ ಹಂತ ಮುಂದುವರಿದಿರುವುದರಿಂದ ತಾತ್ಕಾಲಿಕ ಕ್ರಮವಾಗಿ ಈ ವಿಧಾನವನ್ನು ಅನುಸರಿಸಲಾಗುತ್ತಿದೆ.

ಧಾರವಾಡ ಪ್ರತಿಭಟನೆ ಬಳಿಕ ತ್ವರಿತ ಕ್ರಮ
ಇತ್ತೀಚೆಗೆ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದ್ದರು. ನೇಮಕಾತಿ ವಿಳಂಬದ ವಿರುದ್ಧ ವಿದ್ಯಾರ್ಥಿ ಸಮೂಹ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.
ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಇದೀಗ ಸ್ಪಷ್ಟ ನಿರ್ಧಾರ ಕೈಗೊಂಡಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page