Friday, October 10, 2025

ಸತ್ಯ | ನ್ಯಾಯ |ಧರ್ಮ

ಔದ್ಯೋಗಿಕ ಮಹಿಳೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್; “ಋತುಚಕ್ರ ರಜೆ”ಗೆ ಸಂಪುಟ ಅಸ್ತು

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಅದರಂತೆ ವೇತನ ಸಹಿತ ಒಂದು ದಿನ ‘ಋತುಚಕ್ರ’ ರಜೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ವಿಚಾರಕ್ಕೆ ಸರ್ಕಾರ ಅನುಮೋದನೆ ನೀಡಿದೆ.

ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಖಾಸಗಿ ಕಂಪನಿ, ಕೈಗಾರಿಕಾ ವಲಯದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತು ಚಕ್ರ ರಜೆ ನೀತಿ 2025 ಜಾರಿಗೆ ತರುವ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಈ ಬಗ್ಗೆ ಹಲವಷ್ಟು ಬೇಡಿಕೆ ಇತ್ತು. ಬಿಹಾರ, ಕೇರಳ, ಒಡಿಶಾ ರೀತಿ ರಾಜ್ಯದಲ್ಲಿಯೂ ರಾಜ್ಯ ನೀತಿ ಜಾರಿಗೆ ಒತ್ತಾಯವೂ ಕೇಳಿ ಬಂದಿತ್ತು. ಈಗ ಅದರಂತೆ ರಾಜ್ಯ ಸರ್ಕಾರ ಋತುಚಕ್ರ ರಜೆಗೆ ಅನುಮೋದನೆ ನೀಡಿದೆ.

ಋತುಚಕ್ರದ ಅವಧಿಯಲ್ಲಿ ಮಹಿಳೆಯರಲ್ಲಿ ಆಗುವ ಶಾರೀರಿಕ ಬದಲಾವಣೆ, ಸಂಕಷ್ಟ, ಸವಾಲು, ವಿಶ್ರಾಂತಿ ಅಗತ್ಯದ ಬಗ್ಗೆ ಪ್ರಸ್ತಾಪಿಸಿ, ಇತ್ತೀಚೆಗೆ 18 ಸದಸ್ಯರ ಸಮಿತಿಯೊಂದು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ರಾಜ್ಯ ಸರ್ಕಾರ ಈ ಮನವಿ ಪುರಸ್ಕರಿಸಿ ರಜೆಗೆ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ, ಖಾಸಗಿ ಕಂಪನಿ ಸೇರಿದಂತೆ ಎಲ್ಲಾ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ನೀಡಲು ತೀರ್ಮಾನ ಕೈಗೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page