Friday, February 6, 2026

ಸತ್ಯ | ನ್ಯಾಯ |ಧರ್ಮ

ಹಾಸನ ಜಿಲ್ಲೆಗೆ ಎರಡು ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು : ಹಾಸನ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಎರಡು ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ. ಈ ಎರಡೂ ಯೋಜನೆಗಳು ನೀರಾವರಿ ಇಲಾಖೆ ಕೈಗೆತ್ತಿಕೊಳ್ಳಲಿದೆ, ಜಿಲ್ಲೆಯ ಬರಪೀಡಿತ ಪ್ರದೇಶಗಳ ನೀರಿನ ಅಗತ್ಯವನ್ನು ಪೂರೈಸುವ ಉದ್ದೇಶ ಹೊಂದಿವೆ.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅರಸೀಕೆರೆ ತಾಲೂಕಿನ ಹೋಬಳಿಯ ಕೆಂಕೆರೆ ಸೇರಿ 20ಕ್ಕೂ ಹೆಚ್ಚು ಕೆರೆಗಳಿಗೆ ಹೇಮಾವತಿ ನದಿಯಿಂದ ಲಿಫ್ಟ್ ನೀರಾವರಿ ಮೂಲಕ ನೀರು ಪೂರೈಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರ ವಿಷಯವನ್ನು ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚನೆ ನೀಡಿದ್ದರು. ಅದರಂತೆ, ಬರಪ್ರದೇಶದ ನೀರಿನ ಸಮಸ್ಯೆ ನಿವಾರಣೆಗೆ 32 ಕೋಟಿ ರೂ. ವೆಚ್ಚದ ಈ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಇನ್ನೊಂದೆಡೆ, ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಲಿಫ್ಟ್ ನೀರಾವರಿ ಯೋಜನೆ ಪುನಶ್ಚೇತನಕ್ಕೂ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಈಗಿರುವ ಈ ಯೋಜನೆ ನಿರಂತರ ತಾಂತ್ರಿಕ ದೋಷ, ಪಂಪುಗಳ ವೈಫಲ್ಯ, ರೈಜಿಂಗ್ ಮೇನ್ ಹಾಗೂ ಕಾಲುವೆಗಳ ಹಾನಿಯಿಂದ ಬಳಲುತ್ತಿದೆ. ಹೀಗಾಗಿ ಹೊಸ ಪಂಪುಗಳು, ವಾಹನಗಳು, ಪೈಪ್‌ಲೈನ್‌ಗಳ ಅಳವಡಿಕೆ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು 11.50 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ.
ಈ ಮೂಲಕ ಹಾಸನ ಜಿಲ್ಲೆ ಎರಡು ನೀರಾವರಿ ಯೋಜನೆಗಳಿಗೆ ಒಟ್ಟಾರೆ 43.50 ಕೋಟಿ ರೂ. ಯೋಜನೆಗಳಿಗೆ ರಾಜ್ಯ ಸರ್ಕಾರದ ಅನುಮೋದನೆ ವೆಚ್ಚವನ್ನು ನೀಡಿ. ಜಿಲ್ಲೆಯ ಪರವಾಗಿ, ಜಿಲ್ಲೆಯ ಜನತೆಯ ಅಗತ್ಯಗಳಿಗೆ ಸ್ಪಂದಿಸಿ ಈ ಮಹತ್ವದ ಯೋಜನೆಗಳನ್ನು ಮಂಜೂರು ಮುಖ್ಯಮಂತ್ರಿಗಳು ಮಾಡಿದರು ಉಪಮುಖ್ಯಮಂತ್ರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಕೃತಜ್ಞತೆಸಲ್ಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page