ಬೆಂಗಳೂರು : ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ಮಂಡಿ ನೋವಿಗೆ ತೀವ್ರವಾಗಿ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಇದೇ ಫೆ.17ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಸಿಎಂ ಅನಾರೋಗ್ಯದ ಕಾರಣದಿಂದ ಮುಂದೂಡಲಾಗಿದೆ. ಇದಲ್ಲದೇ ಫಲಾನುಭವಿಗಳ ಸಮಾವೇಶವನ್ನೂ ಸರ್ಕಾರ ಮುಂದೂಡಿದೆ. ಆದರೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸಚಿವ ಸಂಪುಟ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.
ಫೆ.16ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಬೃಹತ್ ಸಮಾವೇಶ ಮತ್ತು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮಗಳ ರದ್ದುಗಾಗಿವೆ. ಈ ಕಾರ್ಯಕ್ರಮಗಳ ನಡೆಯುವ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಹೇಳಿದ್ದಾರೆ.