Home ಜನ-ಗಣ-ಮನ ಕಲೆ – ಸಾಹಿತ್ಯ 2023  ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ

2023  ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ

0

ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ ‘ವಿಭಾ ಸಾಹಿತ್ಯ ಪ್ರಶಸ್ತಿ-2023’ ಕ್ಕಾಗಿ ಕನ್ನಡದ ಕವಿ/ಕವಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು  ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ.10000/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ವಿನಂತಿಸಲಾಗಿದೆ. ಯಾವುದೇ ಕಾರಣಕ್ಕೂ ಹಸ್ತಪ್ರತಿಯನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ ಮೂಲಕ ಕಳಿಸುವುದಕ್ಕಿಂತ ಡಿಟಿಪಿ ಮಾಡಿದ ಹಸ್ತಪ್ರತಿ ಕಳಿಸಿಕೊಡಬೇಕು, ಬರವಣಿಗೆ ಮಾಡಿದ ಹಸ್ತಪ್ರತಿಯನ್ನೂ ಕಳಿಸಬಹುದು ಎಂದೂ ಪ್ರಕಟಣೆ ತಿಳಿಸಿದೆ. ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ ಜುಲೈ 10, 2023.

ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ-

ಸುನಂದಾ, ಪ್ರಕಾಶ ಕಡಮೆ, ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-2023, ನಂ. 90, ‘ನಾಗಸುಧೆ ಜಗಲಿ’,6 /ಬಿ ಕ್ರಾಸ್, ಕಾಳಿದಾಸನಗರ, ವಿದ್ಯಾನಗರ ವಿಸ್ತೀರ್ಣ, ಹುಬ್ಬಳ್ಳಿ- 580031 ದೂರವಾಣಿ; 9845779387

You cannot copy content of this page

Exit mobile version