ವರದಕ್ಷಿಣೆಗಾಗಿ ಪತ್ನಿಯನ್ನು ಕೊಂದ ಕಮಾಂಡೊ: ಆಪರೇಷನ್‌ ಸಿಂಧೂರದಲ್ಲಿ ಭಾಗವಹಿಸಿದ್ದೀರಿ ಎನ್ನುವ ಕಾರಣಕ್ಕೆ ರಕ್ಷಣೆ ಸಿಗದು ಎಂದ ಸುಪ್ರೀಂ

ದೆಹಲಿ: ಪತ್ನಿಯ ವರದಕ್ಷಿಣೆ ಕೊಲೆ ಆರೋಪದ ಪ್ರಕರಣದಲ್ಲಿ ಬ್ಲ್ಯಾಕ್‌ ಕ್ಯಾಟ್ ಕಮಾಂಡೋ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಆಪರೇಷನ್ ಸಿಂಧೂರ್‌ ಕಾರ್ಯಾಚರಣೆಯಲ್ಲಿನ ತನ್ನ ಸೇವೆ ಮತ್ತು ರಾಷ್ಟ್ರೀಯ ರೈಫಲ್ಸ್‌ನಲ್ಲಿ 20 ವರ್ಷಗಳ ಸೇವೆಯ ಆಧಾರದ ಮೇಲೆ ಪ್ರಕರಣದಿಂದ ವಿನಾಯಿತಿ ನೀಡುವಂತೆ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಈ ಆಧಾರದ ಮೇಲೆ, ಪ್ರಕರಣಕ್ಕೆ ರಕ್ಷಣೆ ನೀಡಲಾಗುವುದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಅರ್ಜಿದಾರರು ಎರಡು ವಾರಗಳಲ್ಲಿ ಶರಣಾಗುವಂತೆ ಅದು ನಿರ್ದೇಶಿಸಿದೆ.

ಮದುವೆಯಾದ ಕೇವಲ ಎರಡು ವರ್ಷಗಳ ನಂತರ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಕೊಂದ ಆರೋಪದ ಮೇಲೆ ಬಲ್ಜಿಂದರ್ ಸಿಂಗ್ ವಿರುದ್ಧ 2004ರಲ್ಲಿ ಅಮೃತಸರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಮೂರು ವರ್ಷಗಳ ಜೈಲುವಾಸದ ನಂತರ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಅವರ ಮೇಲ್ಮನವಿ ಬಾಕಿ ಇರುವುದರಿಂದ ಅವರು ವರ್ಷಗಳ ಕಾಲ ಜೈಲಿನಿಂದ ಹೊರಗಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ, ಹೈಕೋರ್ಟ್ ಅವರ ಮೇಲ್ಮನವಿಯನ್ನು ವಜಾಗೊಳಿಸಿತು ಮತ್ತು ಅವರ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಎತ್ತಿಹಿಡಿದಿದೆ. ಆರೋಪಿಗೆ ಬಂಧನದಿಂದ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಅದು ಹೇಳಿದೆ. ಆರೋಪಿಗಳು ಈ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು.

Related Articles

ಇತ್ತೀಚಿನ ಸುದ್ದಿಗಳು