Home ಬೆಂಗಳೂರು ಮೈತ್ರಿಯಲ್ಲಿ ಒಡಕು: ಬಿಜೆಪಿಯೆದುರು ಇನ್ನು ಬಾಗಲು ಸಾಧ್ಯವಿಲ್ಲ ಎಂದ ಕುಮಾರಸ್ವಾಮಿ

ಮೈತ್ರಿಯಲ್ಲಿ ಒಡಕು: ಬಿಜೆಪಿಯೆದುರು ಇನ್ನು ಬಾಗಲು ಸಾಧ್ಯವಿಲ್ಲ ಎಂದ ಕುಮಾರಸ್ವಾಮಿ

0

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ತೊಡಕಿಗೆ ಸಂಬಂಧಿಸಿದಂತೆ ಮೈತ್ರಿ ಪಕ್ಷ ಬಿಜೆಪಿ ಕಾರ್ಯವೈಖರಿ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಜೆಡಿಎಸ್‌ನ ಎಚ್‌ಡಿ ಕುಮಾರಸ್ವಾಮಿ ಅವರು, ಇನ್ನು ಮುಂದೆ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಷಯದಲ್ಲಿ ತಾನು “ಬಗ್ಗಲು” ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಹಾಕಿದ್ದ ಬಿಜೆಪಿ-ಜೆಡಿ (ಎಸ್) ಮೈತ್ರಿಯಲ್ಲಿ ಬಿರುಕುಗಳು ಕಾಣಿಸಿವೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯ ಸಿಪಿ ಯೋಗೇಶ್ವರ್, ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ನವೆಂಬರ್ 13ರಂದು ಚನ್ನಪಟ್ಟಣದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ, ಆದರೆ ಕುಮಾರಸ್ವಾಮಿ ಈ ತೆರವುಗೊಂಡ ಸ್ಥಾನವನ್ನು ಜೆಡಿಎಸ್ ಬಳಿಯೇ ಉಳಿಸಿಕೊಳ್ಳಲು ಬಯಸಿದ್ದಾರೆ.

ಯೋಗೇಶ್ವರ್ ಅವರನ್ನು ಚನ್ನಪಟ್ಟಣದಿಂದ ಜೆಡಿಎಸ್ ಟಿಕೆಟ್‌ನಲ್ಲಿ ಕಣಕ್ಕಿಳಿಸುವಂತೆ ನಡ್ಡಾ ಅವರು ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ
“ನಾನು (ಕೇಂದ್ರ) ಸಚಿವನಾಗಿ ನಾಲ್ಕು ತಿಂಗಳಾಗಿದೆ, ನನ್ನ ಆರೋಗ್ಯವನ್ನು ಪಣಕ್ಕಿಟ್ಟು ನಾನು ಈ ಸ್ಥಾನದಲ್ಲಿ ಏಕೆ ಇರಬೇಕು? ನಾನು NDA ಸರ್ಕಾರದಲ್ಲಿ ಇರುವುದಕ್ಕೆ ಮೋದಿ ಕಾರಣ. ಅವರಂತೆ ಯಾರೂ ನಮ್ಮ ದೇವೇಗೌಡರನ್ನು ಯಾರೂ ಗೌರವಿಸುವುದಿಲ್ಲ” ಎಂದು ಕುಮಾರಸ್ವಾಮಿ ಹೇಳಿದರು.

ನಾಲ್ಕು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಂದ ಕರೆ ಬಂದಿತ್ತು ಎಂದು ಕುಮಾರಸ್ವಾಮಿ ಹೇಳಿದ್ದಾರೆ. “ಜೆಡಿ(ಎಸ್) ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಯೋಗೇಶ್ವರ್ ಅವರನ್ನು ಕೇಳುವುದಾಗಿ ನಡ್ಡಾ ಹೇಳಿದರು. ನಾನು ಒಪ್ಪಿಕೊಂಡೆ, ಏಕೆಂದರೆ ನಾನು ನಮ್ಮ ಸಂಬಂಧದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತೇನೆ. ಎನ್‌ಡಿಎ ಗೆಲ್ಲಬೇಕೆಂದು ನಾನು ಬಯಸುತ್ತೇನೆ” ಎಂದು ಅವರು ಹೇಳಿದರು. “ನಾವು ಈಗಾಗಲೇ ನೆಲದ ತನಕ ಬಾಗಿದ್ದೇವೆ. ಇದಕ್ಕೂ ಹೆಚ್ಚು ಬಾಗಲು ಸಾಧ್ಯವಿಲ್ಲ. ಈ ಕಾರಣಕ್ಕಾಗಿ ನಾನು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರೊಂದಿಗಿನ ಸಂಬಂಧವನ್ನು ಕಡಿತಗೊಳಿಸಿಕೊಳ್ಳಬೇಕೆ?” ಎಂದು ಅವರು ಹೇಳಿದರು.

ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಪಕ್ಷದ ಕಾರ್ಯಕರ್ತರು ಪದೇ ಪದೇ ಘೋಷಣೆ ಕೂಗಿದ್ದರಿಂದಾಗಿ ಕುಮಾರಸ್ವಾಮಿ ತಮ್ಮ ಮಾತನ್ನು ಅರ್ಧಕ್ಕೆ ಮೊಟಕುಗೊಳಿಸಬೇಕಾಯಿತು. ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ನಿರ್ಧಾರ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಹ್ಲಾದ್‌ ಜೋಶಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿ ಅಭ್ಯರ್ಥಿಗೆ ಬಿಟ್ಟುಕೊಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು.

You cannot copy content of this page

Exit mobile version