Monday, July 28, 2025

ಸತ್ಯ | ನ್ಯಾಯ |ಧರ್ಮ

ಜಮ್ಮು ಕಾಶ್ಮೀರ : ಗುಂಡಿನ ಕಾಳಗದಲ್ಲಿ ಮೈಸೂರು ಮೂಲದ ಕ್ಯಾಪ್ಟನ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಬುಧವಾರ ಭಯೋತ್ಪಾದಕರು ಮತ್ತು ಸೈನಿಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಅದರಲ್ಲಿ ಒಬ್ಬರು ಮೈಸೂರು ಮೂಲದವರೆಂದು ತಿಳಿದು ಬಂದಿದೆ.

ಇಬ್ಬರು ಅಧಿಕಾರಿಗಳ ಪೈಕಿ ಒಬ್ಬರು ಕ್ಯಾಪ್ಟನ್ ಎಂವಿ ಪ್ರಾಂಜಲ್ (29) ಮೈಸೂರು ಮೂಲದವರಾಗಿದ್ದಾರೆ. ಹಲವಾರು ವರ್ಷಗಳ ಕಾಲ ಎಂಆರ್‌ಪಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಎಂ.ವೆಂಕಟೇಶ್ ಎನ್ನುವವರ ಏಕೈಕ ಪುತ್ರನಾಗಿದ್ದ ಎಂ.ವಿ.ಪ್ರಾಂಜಲ್ ಸೇನೆಯಲ್ಲಿ ಸೇವೆ ಸಲ್ಲಿಸುವ ಮಹದುದ್ದೇಶ ಹೊಂದಿದ್ದರು.

ಕ್ಯಾಪ್ಟನ್ ಪ್ರಾಂಜಲ್ ಮಂಗಳೂರಿನ ಸುರತ್ಕಲ್‌ನ ಎಂಆರ್‌ಪಿಎಲ್‌ ಬಳಿ ಇರುವ ಡೆಲ್ಲಿ ಪಬ್ಲಿಕ್‌ ಸ್ಕೂಲ್‌ನಲ್ಲಿ ಎಸ್‌ಎಸ್‌ಎಲ್‌ಸಿವರೆಗೆ ಓದಿದ್ದಾರೆ. ನಂತರ, ಅವರು ತಮ್ಮ ಎಂಜಿನಿಯರಿಂಗ್ ಪದವಿಯನ್ನು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಪೂರ್ಣಗೊಳಿಸಿದರು.

ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದು, ಬನ್ನೇರುಘಟ್ಟದಲ್ಲಿ ಸೇನಾ ಗೌರವದೊಂದಿಗೆ ಅಂತಿಮ ವಿಧಿವಿಧಾನಗಳು ನಡೆಯಲಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page