Monday, June 17, 2024

ಸತ್ಯ | ನ್ಯಾಯ |ಧರ್ಮ

ಘೋರ ಅಪಘಾತ: ನಿಂತಿದ್ದ ಟ್ಯಾಂಕರಿಗೆ ಕಾರು ಡಿಕ್ಕಿ ಹೊಡೆದು ಮಗು ಸೇರಿದಂತೆ 10 ಮಂದಿ ಸಾವು

ಅಹಮದಾಬಾದ್: ಗುಜರಾತ್ ರಾಜ್ಯದ ಖೇಡಾ ಜಿಲ್ಲೆಯಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್‌ವೇಯಲ್ಲಿ ನಾಡಿಯಾಡ್ ಪಟ್ಟಣದ ಬಳಿ ಬುಧವಾರ ನಿಂತಿದ್ದ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದಿದೆ.

ಅತಿ ವೇಗದಿಂದಾಗಿ ಕಾರು ಮುಂದೆ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐದು ವರ್ಷದ ಮಗು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ನಾಡಿಯಾಡ್ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕಿರಿತ್ ಚೌಧರಿ ತಿಳಿಸಿದ್ದಾರೆ. ವಡೋದರಾದಿಂದ ಅಹಮದಾಬಾದ್ ಕಡೆಗೆ ಕಾರು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಟ್ಯಾಂಕರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 8 ಮಂದಿ ತಕ್ಷಣ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಇತರ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ಇನ್ಸ್‌ಪೆಕ್ಟರ್ ಕಿರಿತ್ ಚೌಧರಿ ತಿಳಿಸಿದ್ದಾರೆ.

ಈ ಅಪಘಾತದಿಂದಾಗಿ 93 ಕಿಮೀ ಉದ್ದದ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ, ಎರಡು ಆಂಬ್ಯುಲೆನ್ಸ್‌ಗಳು ಮತ್ತು ಎಕ್ಸ್‌ಪ್ರೆಸ್ ಹೈವೇ ಗಸ್ತು ತಂಡವನ್ನು ಸ್ಥಳಕ್ಕೆ ರವಾನಿಸಲಾಯಿತು ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು.

ನಾಡಿಯಾಡ್ ಶಾಸಕ ಪಂಕಜ್ ದೇಸಾಯಿ ಈ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕೆಲವು ತಾಂತ್ರಿಕ ದೋಷದಿಂದ ಟ್ರಕ್ ಎಕ್ಸ್‌ಪ್ರೆಸ್‌ವೇಯ ಎಡ ಲೇನ್‌ನಲ್ಲಿ ನಿಂತಿತ್ತು. ಕಾರಿನ ವೇಗದಿಂದಾಗಿ ಚಾಲಕನಿಗೆ ಸಕಾಲದಲ್ಲಿ ಬ್ರೇಕ್ ಹಾಕಲು ಸಾಧ್ಯವಾಗಲಿಲ್ಲ. ಲಾರಿಗೆ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಹಾಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಾವು ಸಂಭವಿಸಿದೆ ಎಂದರು.

Related Articles

ಇತ್ತೀಚಿನ ಸುದ್ದಿಗಳು