ಶಿಮ್ಲಾ: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಣಿವೆಗೆ ಕಾರು ಬಿದ್ದ ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶುಕ್ರವಾರ ರಾತ್ರಿ ರಾಜೇಶ್ ಎಂಬುವವರು ತಮ್ಮ ಕುಟುಂಬದವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಬೆಟ್ಟದಿಂದ ಬಿದ್ದ ಕಲ್ಲೊಂದು ಕಾರಿಗೆ ಬಡಿದಿದೆ. ಇದರಿಂದ ನಿಯಂತ್ರಣ ತಪ್ಪಿದ ಕಾರು ಆಳವಾದ ಕಮರಿಗೆ ಬಿದ್ದಿದೆ.
ಈ ದುರ್ಘಟನೆಯಲ್ಲಿ ಒಂದೇ ಕುಟುಂಬದವರಾದ ರಾಜೇಶ್, ಅವರ ಪತ್ನಿ ಹನ್ಸೊ (36), ಮಗಳು ಆರತಿ (17), ಮಗ ದೀಪಕ್ (15), ಭಾವಮೈದುನ ಹಿಮರಾಜ್ ಮತ್ತು ಇನ್ನೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.
ಪೊಲೀಸರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.