ಲಕ್ಷ್ಮೀ ಹೆಬ್ಬಾಳ್ಕರ್ ಮೇಲೆ ಅಶ್ಲೀಲ ಪದ ಪ್ರಯೋಗ ಪ್ರಕರಣ; ಸಚಿವೆ ಆಪ್ತರ ವಿರುದ್ದ ಪ್ರಕರಣ ದಾಖಲು

ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಮೇಲೆ ಎಫ್ಐಆರ್ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆಪ್ತನೂ ಸೇರಿದಂತೆ, 10 ಮಂದಿ ಮೇಲೆ ಪ್ರಕರಣ ದಾಖಲಾಗಿದೆ.

ಎಂಎಲ್ಸಿ ಸಿಟಿ ರವಿ ಕಡೆಯಿಂದ ಅಶ್ಲೀಲ ಪದ ಬಂದ ಬಳಿಕ ನಡೆದ ಹೈಡ್ರಾಮಾ ನಂತರ ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಬೆಳಗಾವಿಯ ಸುವರ್ಣ ಸೌಧದೊಳಕ್ಕೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೇ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ಸಹ ದಾಖಲಾಗಿತ್ತು. ಇದರ ನಡುವೆ ಈಗ ಸಿ.ಟಿ ರವಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಖಾನಾಪುರ ಪೊಲೀಸ್ ಠಾಣೆಗೆ ಸಿ.ಟಿ ರವಿ ಲಿಖಿತ ದೂರು ಸಲ್ಲಿಸಿದ್ದರು. ಈ ಪ್ರಕರಣವನ್ನು ಹಿರೇಬಾಗೇವಾಡಿ ಠಾಣೆಗೆ ವರ್ಗಾಯಿಸಲಾಗಿತ್ತು. ಭಾನುವಾರ ಸಿ.ಟಿ ರವಿ ಅವರು ನೀಡಿದ್ದ ಲಿಖಿತ ದೂರಿನ ಪ್ರತಿ ಪೋಸ್ಟ್‌ ಮೂಲಕ ಪೊಲೀಸರ ಕೈ ಸೇರಿದ ಬೆನ್ನಲ್ಲೇ ಬೆಳಗಾವಿ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು