Monday, September 30, 2024

ಸತ್ಯ | ನ್ಯಾಯ |ಧರ್ಮ

ಕುಂಭಮೇಳದಲ್ಲಿ ಭಾರೀ ಪ್ರಮಾಣದಲ್ಲಿ ಗಾಂ*ಜಾ ಸೇವನೆ ಮಾಡುತ್ತಾರೆ. ಅದರ ಸೇವನೆ ಕಾನೂನು ಬದ್ಧ ಮಾಡಿ ಎಂದ ಸಂಸದನ ವಿರುದ್ಧ ಪ್ರಕರಣ

ಲಕ್ನೋ: ಸಂಸದರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕುಂಭಮೇಳದಲ್ಲಿ ದೊಡ್ಡ ಮಟ್ಟದಲ್ಲಿ ಗಾಂಜಾ ಸೇವನೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಂಜಾವನ್ನು ಸಕ್ರಮಗೊಳಿಸುವಂತೆಯೂ ಒತ್ತಾಯಿಸಿದರು.

ಹಿಂದೂ ಸಮುದಾಯಗಳು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಂಸದರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಖಿಲೇಶ್ ಯಾದವ್ ನೇತೃತ್ವದ ಪ್ರಮುಖ ಪ್ರತಿಪಕ್ಷ ಸಮಾಜವಾದಿ ಪಕ್ಷದ (ಎಸ್‌ಪಿ) ಗಾಜಿಪುರ ಸಂಸದ ಅಫ್ಜಲ್ ಅನ್ಸಾರಿ ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದರು.

ಕುಂಭಮೇಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಾಂಜಾ ಸೇವನೆಯಾಗುತ್ತದೆ ಎಂದು ಅವರು ಹೇಳಿದರು. ಕುಂಭಮೇಳದಲ್ಲಿ ಗಾಂಜಾ ತುಂಬಿದ ಗೂಡ್ಸ್ ರೈಲು ತಂದು ನಿಲ್ಲಿಸಿದರೂ ಸಾಕಾಗುವುದಿಲ್ಲ ಎಂದು ವಾದಿಸಿದರು. ಧಾರ್ಮಿಕ ಕಾರ್ಯಕ್ರಮ, ಹಬ್ಬ ಹರಿದಿನಗಳಲ್ಲಿ ಗಾಂಜಾವನ್ನು ‘ಪ್ರಸಾದ’ವಾಗಿ ಬಳಸುತ್ತಾರೆ ಎಂದರು. ಈ ಹಿನ್ನೆಲೆಯಲ್ಲಿ ಗಾಂಜಾವನ್ನು ಸಕ್ರಮಗೊಳಿಸುವಂತೆ ಒತ್ತಾಯಿಸಿದರು.

ಏತನ್ಮಧ್ಯೆ, ಎಸ್ಪಿ ಸಂಸದ ಅಫ್ಜಲ್ ಅನ್ಸಾರಿ ಅವರ ಹೇಳಿಕೆಗೆ ಸಾಧುಗಳು ಮತ್ತು ಹಿಂದೂ ಸಮುದಾಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಜಿಪುರ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ದಂಡ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಸ್‌ಪಿ ಸಂಸದ ಅಫ್ಜಲ್ ಅನ್ಸಾರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page