Home ಬ್ರೇಕಿಂಗ್ ಸುದ್ದಿ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಜೆಡಿಎಸ್ ಕಾರ್ಯಕರ್ತರ ಕೈವಾಡ ರಾಜಕೀಯ ಪಿತೂರಿ – ಶಾಸಕ ಎಚ್.ಪಿ. ಸ್ವರೂಪ್

ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಜೆಡಿಎಸ್ ಕಾರ್ಯಕರ್ತರ ಕೈವಾಡ ರಾಜಕೀಯ ಪಿತೂರಿ – ಶಾಸಕ ಎಚ್.ಪಿ. ಸ್ವರೂಪ್

ಹಾಸನ: ಅಶ್ಲೀಲ ವೀಡಿಯೋಗಳುಳ್ಳ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಸೇರ್ಪಡೆಗೊಳಿಸಿರುವುದು ರಾಜಕೀಯ ಪಿತೂರಿಯ ಭಾಗವಾಗಿದೆ ಎಂದು ಹಾಸನ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಆರೋಪಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿಷ್ಪಕ್ಷಪಾತವಾಗಿ ತನಿಖೆ ನಡೆಸಿಲ್ಲ ಎಂದು ಟೀಕಿಸಿದರು. ತಮ್ಮ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಕುಟುಂಬದ ನಡುವಿನ ಸಂಬಂಧ ಹಾಳು ಮಾಡುವ ಉದ್ದೇಶದಿಂದಲೇ ಇಂತಹ ಪಿತೂರಿ ರೂಪಿಸಲಾಗಿದೆ ಎಂದು ಹೇಳಿದರು. ಜೆಡಿಎಸ್ ಕಾರ್ಯಕರ್ತರನ್ನು ವಿನಾಕಾರಣವಾಗಿ ಪ್ರಕರಣದಲ್ಲಿ ಸೇರಿಸಲಾಗಿದ್ದು, ಇದರಿಂದ ಕಾರ್ಯಕರ್ತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪಕ್ಷವು ಅವರ ಬೆಂಬಲಕ್ಕೆ ದೃಢವಾಗಿ ನಿಂತಿದೆ ಎಂದು ಭರವಸೆ ನೀಡಿದರು.

ಇದಲ್ಲದೆ, ಪ್ರಕರಣದಲ್ಲಿ ಕೆಲ ಪ್ರಭಾವಿ ವ್ಯಕ್ತಿಗಳ ಹೆಸರನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂಬ ಆರೋಪವನ್ನೂ ಅವರು ಮಾಡಿದರು. ಈ ಕುರಿತು ಕಾನೂನು ಹೋರಾಟ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ವರೂಪ್ ಪ್ರಕಾಶ್ ಹೇಳಿದರು.

You cannot copy content of this page

Exit mobile version