ಹಾಸನ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ಹಾಸನ ಜಿಲ್ಲಾ ಪೋಕ್ಸೊ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೊ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಅಲ್ಲದೆ, ದಂಡದ ಮೊತ್ತವಾಗಿ ₹25 ಸಾವಿರ ಪಾವತಿಸುವಂತೆ ಆದೇಶಿಸಿದೆ.
ಇದೇ ವೇಳೆ, ಪ್ರಕರಣದ ಸಂತ್ರಸ್ತೆ ಬಾಲಕಿಗೆ ಸರ್ಕಾರದಿಂದ ₹7 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.
