ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಗಣೇಶ ಪ್ರತಿಮೆಯ ವಿಸರ್ಸಜನೆಯ ಮೆರವಣಿಗೆಯಲ್ಲಿ ನಾಥೂರಾಂ ಗೋಡ್ಸೆಯ ಪೋಸ್ಟರ್‌ಗಳನ್ನು ಪ್ರದರ್ಶಿಸಲಾದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್‌ಗಳು 505 (1) (ಸಿ) 505 1 (ಬಿ) ಅಡಿಯಲ್ಲಿ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯ ನಿವಾಸಿ ಹನುಮಂತಪ್ಪ ಅವರ ದೂರಿನ ಮೇರೆಗೆ FIR ದಾಖಲಿಸಲಾಗಿದೆ.
ಅಕ್ಟೋಬರ್ 8 ರಂದು (ಭಾನುವಾರ) ಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ಶೋಭಾ ಯಾತ್ರೆ ವೇಳೆ ಈ ಘಟನೆ ನಡೆದಿದೆ. ಆರೋಪಿಗಳು ಗೋಡ್ಸೆಯ ಪೋಸ್ಟರ್‌ಗಳನ್ನು ಪ್ರದರ್ಶಿಸುವ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುತ್ತಿದ್ದಾರೆ ಎಂದು ದೂರುದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ವಿಶ್ವ ಹಿಂದೂ ಪರಿಷತ್ ವತಿಯಿಂದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಡಿಜೆ ಸಂಗೀತದೊಂದಿಗೆ ವಿಸರ್ಜನಾ ಮೆರವಣಿಗೆಯನ್ನು ಅದ್ಧೂರಿಯಾಗಿ ಆಯೋಜಿಸಲಾಗಿತ್ತು. ರಾಜ್ಯಾದೆಲ್ಲೆಡೆಯ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕದಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತರಾದ ವೀರ್ ಸಾವರ್ಕರ್, ಶರತ್ ಮಡಿವಾಳ್, ಹರ್ಷ, ಹಾಗೂ ನಾಥೂರಾಂ ಗೋಡ್ಸೆ ಅವರ ಪೋಸ್ಟರ್ ಗಳೊಂದಿಗೆ ಯುವಕರು ಕುಣಿದು ಕುಪ್ಪಳಿಸಿದ್ದರು. ಈ ಬೆಳವಣಿಗೆ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.