Tuesday, July 29, 2025

ಸತ್ಯ | ನ್ಯಾಯ |ಧರ್ಮ

ಮನೇಕಾ ಗಾಂಧಿ ವಿರುದ್ಧ 100 ಕೋಟಿ ಮೌಲ್ಯದ ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

ಹೊಸದೆಹಲಿ: ಇಸ್ಕಾನ್ ಗೋಶಾಲೆಗಳಲ್ಲಿನ ಗೋವುಗಳನ್ನು ಮಾರಾಟ ಮಾಡುತ್ತಿದೆ ಎಂದು ಬಿಜೆಪಿ ಸಂಸದೆ ಮೇನಕಾ ಗಾಂಧಿ ಆರೋಪ ಮಾಡಿದ್ದ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಈ ಸಂಬಂಧ ಅವರ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಕೋಲ್ಕತ್ತಾದ ಇಸ್ಕಾನ್‌ನ ಉಪಾಧ್ಯಕ್ಷ ರಾಧಾರಾಮಣ್ ದಾಸ್ ಹೇಳಿದ್ದಾರೆ.

ಹೆಚ್ಚಿನ ವಿವರಗಳಿಗೆ ಈ ವರದಿಯನ್ನು ಓದಿ: ಇಸ್ಕಾನ್‌ ಕಟುಕರಿಗೆ ಮಾರಿದಷ್ಟು ದನಗಳನ್ನು ಇನ್ಯಾರೂ ಮಾರಿಲ್ಲ! – ಮೇನಕಾ ಗಾಂಧಿ

ಮನೇಕಾ ಗಾಂಧಿಯವರ ಹೇಳಿಕೆಗಳು ದುರದೃಷ್ಟಕರ ಮತ್ತು ಅವರ ಹೇಳಿಕೆಗಳು ಪ್ರಪಂಚದಾದ್ಯಂತ ಇರುವ ಇಸ್ಕಾನ್ ಭಕ್ತರಿಗೆ ನೋವುಂಟು ಮಾಡಿದೆ ಎಂದು ಅವರು ಹೇಳಿದರು. ಇಂದು ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದರು. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಇಷ್ಟು ದೊಡ್ಡ ಸಂಸ್ಥೆಯ ಮೇಲೆ ಆರೋಪ ಮಾಡಿರುವುದು ತಮಗೆ ನೋವು ತಂದಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page