ಕ್ರೀಡೆ – Peepal Media

ಸೋಲಿನೊಂದಿಗೆ ಸರಣಿ ಆರಂಭ, ಆಸಿಸ್ ವಿರುದ್ಧ ಮುಗ್ಗರಿಸಿದ ಭಾರತ
ಆಸ್ಟ್ರೇಲಿಯಾ : ಭಾರತ vs ಆಸ್ಟ್ರೇಲಿಯಾ (India vs Australia) ನಡುವಿನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 7 ವಿಕೆಟ್​ಗಳ ಜಯ ಸಾಧಿಸಿದೆ. ಇಂದು (ಅ.20) ಪರ್ತ್ ಮೈದಾನದಲ್ಲಿ (Perth stadium) ನಡೆದ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಪಂದ್ಯವನ್ನು 26 ಓವರ್​ಗಳಿಗೆ ಸೀಮಿತಗೊಳಿಸಲಾಯಿತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ (Team India) 9 ವಿಕೆಟ್​ಗಳ ನಷ್ಟಕ್ಕೆ 136 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ ಜಯ ಸಾಧಿಸಿದೆ.

ಇಂದಿನ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬರೋಬ್ಬರಿ 7 ತಿಂಗಳುಗಳ ನಂತರ ನೀಲಿ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇಂದಿನ ಪಂದ್ಯದಲ್ಲಿ ಈ ಇಬ್ಬರೂ ವಿಫಲರಾಗಿದ್ದು, ಆಸ್ಟ್ರೇಲಿಯಾದ ಜನ ಇನ್ನಷ್ಟು ಸುಲಭವಾಗಿದೆ. ಈ ಮೈದಾನದಲ್ಲಿ ಆಸ್ಟ್ರೇಲಿಯಾ ತನ್ನ ಮೊದಲ ಗೆಲುವನ್ನು ದಾಖಲಿಸಿದೆ.

ಭಾರತ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ 38 ರನ್, ಅಕ್ಷರ್ ಪಟೇಲ್ 31 ರನ್, ಮತ್ತು ನಿತೀಶ್ ಕುಮಾರ್ ರೆಡ್ಡಿ ಅಜೇಯ 19 ರನ್ ಬಾರಿಸಿ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು. ಆದ್ರೆ ಆಸ್ಟ್ರೇಲಿಯಾ ಕೇವಲ 3 ವಿಕೆಟ್ ಕಳೆದುಕೊಂಡು ನಿರಾಯಾಸವಾಗಿ ಗೆಲುವು ಸಾಧಿಸಿದೆ

9ನೇ ಬಾರಿಗೆ ಏಷ್ಯಾಕಪ್ ಎತ್ತಿಹಿಡಿದ ಟೀಂ ಇಂಡಿಯಾ
Team India Champions : ದುಬೈನಲ್ಲಿ ನಡೆದ 2025ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ, ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿದೆ. 41 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉಭಯ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಪಾಕಿಸ್ತಾನದ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿತು. ಈ ಭರ್ಜರಿ ಗೆಲುವಿನೊಂದಿಗೆ ಭಾರತ ಒಂಬತ್ತನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಎತ್ತಿಹಿಡಿದು ದಾಖಲೆ ನಿರ್ಮಿಸಿದೆ.

IND vs PAK ಏಷ್ಯಾ ಕಪ್‌ ಫೈನಲ್ 146 ರನ್​​ಗಳಿಗೆ ಪಾಕ್ ಆಲೌಟ್
ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಭಾರತಕ್ಕೆ 147 ರನ್‌ಗಳ ಗುರಿಯನ್ನು ನೀಡಿದೆ. ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕ್, ಕುಲ್ದೀಪ್ ಯಾದವ್ ಅವರ ಮಾರಕ ದಾಳಿಗೆ ತತ್ತರಿಸಿ 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಯಿತು. ಪಾಕಿಸ್ತಾನ ಪರ ಆರಂಭಿಕ ಆಟಗಾರ ಸಾಹಿಬ್‌ಜಾದಾ ಫರ್ಹಾನ್ ಅತಿ ಹೆಚ್ಚು 57 ರನ್ ಗಳಿಸಿದರೆ, ಭಾರತ ಪರ ಕುಲ್ದೀಪ್ ಯಾದವ್ ನಾಲ್ಕು ವಿಕೆಟ್ ಪಡೆದರು. ಏತನ್ಮಧ್ಯೆ, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರು.

ಏಷ್ಯಾ ಕಪ್ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಸುಲಭ ಜಯ
ದುಬೈ : ಏಷ್ಯಾ ಕಪ್ ನ ಆರನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಭಾರತ ಸುಲಭವಾಗಿ ಮಣಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಭಾರತಕ್ಕೆ ಕೇವಲ 128 ರನ್ ಗಳ ಸುಲಭದ ಗುರಿ ನೀಡಿತ್ತು. ಆದರೆ ಭಾರತ 3 ವಿಕೆಟ್ ಕಳೆದುಕೊಂಡು ಕೇವಲ 15.5 ಓವರುಗಳಲ್ಲಿ ಗುರಿ ಮುಟ್ಟಿತು.‌ ಇದರೊಂದಿಗೆ ಈ ಬಾರಿಯ ಏಷ್ಯಾ ಕಪ್ ನಲ್ಲಿ ಸಮಿಫೈನಲ್ ಗೇರಿದ ಮೊದಲ ತಂಡ ಎನಿಸಿಕೊಂಡಿತು.

ಸಂಘಟಿತ ಆಟದ ನೆರವಿನಿಂದ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಏಷ್ಯಾ ಕಪ್ ನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 7 ವಿಕೆಟ್ ಗಳಿಂದ ಪರಾಭವಗೊಳಿಸಿದೆ. ಸ್ಪಿನ್ ಬೌಲಿಂಗ್ ಗೆ ನೆರವು ನೀಡುತ್ತಿದ್ದ ಪಿಚ್ ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕಿಸ್ತಾನ ತಂಡ ಅದಕ್ಕೆ ತಕ್ಕ ಬೆಲೆ ತೆರುವಂತಾಯಿತು. ಇದೀಗ ಸತತ ಎರಡು ಗೆಲುವಿನ ಮೂಲಕ ಭಾರತ ತಂಡ ಎ ಬಣದಿಂದ ಸೂಪರ್ 4 ಹಂತಕ್ಕೆ ಮೊದಲ ತಂಡವಾಗಿ ಅರ್ಹತೆ ಪಡೆದಿದೆ.

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಾಕಿಸ್ತಾನ ತಂಡವು ಭಾರತದ ದಿಟ್ಟ ಬೌಲಿಂಗ್ ದಾಳಿಯನ್ನು ಎದುರಿಸಲಾಗದೆ 20 ಓವರ್ ಗಳಲ್ಲಿ ಕೇವಲ 9 ವಿಕೆಟ್ ಕಳೆದುಕೊಂಡು 127 ರನ್ ಗಳಿಸಲಷ್ಟೇ ಶಕ್ತವಾಯಿತು. ಇದಕ್ಕುತ್ತರವಾಗಿ ಭಾರತ ತಂಡ ಕೇವಲ 15.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ವಿಶ್ವಕಪ್ ಜವಾಬ್ದಾರಿ ಹೊತ್ತ ಮಹಿಳಾ ಅಧಿಕಾರಿಗಳು, ಲಿಂಗಸಮಾನತೆಗಾಗಿ ಐತಿಹಾಸಿಕ ಹೆಜ್ಜೆ
2025 ರ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ಗೆ (ICC World Cup) ಮುಂಚಿತವಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಒಂದು ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದು, ಪಂದ್ಯಾವಳಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಪೂರ್ಣ ಮಹಿಳೆಯರೇ ನಿರ್ವಹಿಸಲಿದ್ದಾರೆ.

ಬರ್ಮಿಂಗ್ಲಾಮ್‌ನಲ್ಲಿ ನಡೆದ 2022 ರ ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಕಳೆದ ಎರಡು ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗಳಲ್ಲಿ ಸಂಪೂರ್ಣ ಮಹಿಳಾ ಅಧಿಕಾರಿ ಸಮಿತಿಗಳು ಈ ಹಿಂದೆ ಕಾಣಿಸಿಕೊಂಡಿದ್ದರೂ, ಮಹಿಳಾ ವಿಶ್ವಕಪ್‌ನಲ್ಲಿ ಇಂತಹ ಸಮಿತಿಯನ್ನು ನಿಯೋಜಿಸಲಾಗುತ್ತಿರುವುದು ಇದೇ ಮೊದಲು.

ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥೇಯತ್ವದಲ್ಲಿ ನಡೆಯುವ ವಿಶ್ವಕಪ್ ಸೆಪ್ಟೆಂಬರ್ 30ರಂದು ಗುವಾಹಟಿಯಲ್ಲಿ ಭಾರತ–ಶ್ರೀಲಂಕಾ ನಡುವಿನ ಪಂದ್ಯದಿಂದ ಆರಂಭಗೊಳ್ಳಲಿದೆ. ಎಂಟು ತಂಡಗಳು ಭಾಗವಹಿಸುವ ಈ ಟೂರ್ನಿಯ ಫೈನಲ್ ನವೆಂಬರ್ 2ರಂದು ನಡೆಯಲಿದೆ. ಪಂದ್ಯಗಳನ್ನು ಭಾರತದ ನಾಲ್ಕು ನಗರಗಳಲ್ಲಿ ಹಾಗೂ ಶ್ರೀಲಂಕಾದ ಕೊಲಂಬೊದಲ್ಲಿ ಆಯೋಜಿಸಲಾಗಿದೆ

ಇನ್ನು ಈ ಬಗ್ಗೆ ಐಸಿಸಿ ಅಧ್ಯಕ್ಷ ಜಯ್ ಶಾ, ಈ ಕ್ರಮವನ್ನು ಮಹಿಳಾ ಕ್ರಿಕೆಟ್‌ಗೆ ನಿರ್ಣಾಯಕ ಕ್ಷಣವೆಂದು ಶ್ಲಾಘಿಸಿದ್ದಾರೆ. ಹೆಚ್ಚಿನ ಮಹಿಳಾ ಭಾಗವಹಿಸುವಿಕೆಗೆ ಪ್ರೇರಣೆ ನೀಡುವ ಜೊತೆಗೆ, ಕ್ರೀಡೆಯಲ್ಲಿ ಭವಿಷ್ಯದ ಹಾದಿ ತೋರಿಸುವವರಿಗೆ ದಾರಿ ಮಾಡಿಕೊಡುವ ಸಾಮರ್ಥ್ಯ ಇದಕ್ಕಿದೆ ಎಂದರು. ಎಲ್ಲಾ ಮಹಿಳಾ ಪಂದ್ಯಾಧಿಕಾರಿಗಳ ಸಮಿತಿಯ ಸೇರ್ಪಡೆ ಒಂದು ಪ್ರಮುಖ ಮೈಲಿಗಲ್ಲಾಗಿದ್ದು, ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆಯನ್ನು ಮುನ್ನಡೆಸುವ ಐಸಿಸಿಯ ಅಚಲ ಬದ್ಧತೆಯ ಪ್ರಬಲ ಪ್ರತಿಬಿಂಬವಾಗಿದೆ ಎಂದು ಶಾ ತಿಳಿಸಿದರು.ಅಂಪೈರ್‌ಗಳ ಪ್ಯಾನಲ್‌ನಲ್ಲಿ ಭಾರತದ ಮಾಜಿ ಆಟಗಾರ್ತಿಯರಾದ ವೃಂದಾ ರಾಥಿ, ಎನ್. ಜನನಿ ಮತ್ತು ಗಾಯತ್ರಿ ವೇಣುಗೋಪಾಲನ್ ಸ್ಥಾನ ಪಡೆದಿದ್ದಾರೆ. ಇದೇ ವೇಳೆ, ಮೊದಲ ಮಹಿಳಾ ಮ್ಯಾಚ್ ರೆಫ್ರಿಯಾಗಿರುವ ಜಿ.ಎಸ್. ಲಕ್ಷ್ಮಿ ಸೇರಿದಂತೆ ನಾಲ್ವರು ಮಹಿಳಾ ರೆಫ್ರಿಗಳು ಪಂದ್ಯಗಳನ್ನು ನಿರ್ವಹಿಸಲಿದ್ದಾರೆ.

2025 ರ ಮಹಿಳಾ ವಿಶ್ವಕಪ್ ನ ಅಧಿಕಾರಿಗಳ ಪಟ್ಟಿಯನ್ನು ವೀಕ್ಷಿಸುವುದಾದರೆ,

ಮ್ಯಾಚ್ ರೆಫ್ರಿಗಳು: ಟ್ರುಡಿ ಆ್ಯಂಡರ್ಸನ್, ಶಾಂಡ್ರೆ ಪ್ರಿಟ್ಸ್, ಜಿ.ಎಸ್.ಲಕ್ಷ್ಮಿ, ಮಿಚೆಲ್ ಪೆರೀರಾ.

ಅಂಪೈರ್ಸ್‌: ಲಾರೆನ್ ಅಜೆನ್‌ಬಗ್, ಕ್ಯಾಂಡೇಸ್ ಲಾ ಬೋರ್ಡೆ, ಕಿಮ್ ಕಾಟನ್, ಸಾರಾ ದಂಬನೆವನ, ಶಾತಿರಾ ಜಾಖರ್ ಜೆಸಿ, ಕೆರಿನ್ ಕ್ಲಾಸ್ಟ್, ಜನನಿ ಎನ್., ನಿಮಲಿ ಪೆರೀರಾ, ಕ್ಷೇರ್ ಪೊಲೊಸಾಕ್, ವೃಂದಾ ರಾಥಿ, ನ್ಯೂ ರೆಡ್‌ಫೆರ್ನ್, ಎಲೊಯಿಸ್ ಶೆರಿದನ್, ಗಾಯತ್ರಿ ವೇಣುಗೋಪಾಲನ್, ಜಾಕ್ವೆಲಿನ್ ವಿಲಿಯಮ್ಸ್

ಹಾಕಿ ಫೈನಲ್ ನಲ್ಲಿ ದಕ್ಷಿಣ ಕೊರಿಯಾವನ್ನು ಸೋಲಿಸಿ ಏಷ್ಯಾ ಕಪ್ ತನ್ನದಾಗಿಸಿಕೊಂಡ ಭಾರತ
ಹರ್ಮನ್​​ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು ಭರ್ಜರಿ 4-1 ಗೋಲುಗಳಿಂದ ಸೋಲಿಸಿ ಏಷ್ಯಾ ಕಪ್ ಪ್ರಶಸ್ತಿ ಗೆದ್ದುಕೊಂಡಿದೆ. ಫೈನಲ್​ ಪ್ರವೇಶಿಸಿದ್ದ ಭಾರತ ತಂಡ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದಂತಾಗಿದೆ.

ಸೂಪರ್ 4 ಸುತ್ತಿನಲ್ಲಿ ಇದೇ ದಕ್ಷಿಣ ಕೊರಿಯಾ ವಿರುದ್ಧದ ಪಂದ್ಯವನ್ನು 2-2 ರಿಂದ ಡ್ರಾ ಮಾಡಿಕೊಂಡಿದ್ದ ಭಾರತ ಹಾಕಿ ತಂಡ ಫೈನಲ್ ಪಂದ್ಯದಲ್ಲಿ ದಕ್ಷಿಣ ಕೊರಿಯಾಕ್ಕೆ ಯಾವುದೇ ಅವಕಾಶ ನೀಡದೆ ಏಕಪಕ್ಷೀಯವಾಗಿ ಪಂದ್ಯವನ್ನು ಗೆದ್ದುಕೊಂಡಿತು . ಈ ಗೆಲುವಿನೊಂದಿಗೆ , ಟೀಂ ಇಂಡಿಯಾ ನೆದರ್ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯಲಿರುವ 2026 ರ FIH ಪುರುಷರ ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

ಪಂದ್ಯದಲ್ಲಿ ಭಾರತ ತಂಡ ಪ್ರಾಬಲ್ಯ ಮೆರೆಯುತ್ತಲೇ ಇತ್ತು ಆದರೆ ಕೊರಿಯಾದ ರಕ್ಷಣಾ ಪಡೆಗಳನ್ನು ಭೇದಿಸುವುದು ಅಷ್ಟು ಸುಲಭವಾಗಿರಲಿಲ್ಲ. ಈ ಕಾರಣದಿಂದಾಗಿ ಮೂರನೇ ಗೋಲು ಬರಲು ಸಾಕಷ್ಟು ಸಮಯ ಹಿಡಿಯಿತು. ಆದರೆ 45 ನೇ ನಿಮಿಷದಲ್ಲಿ ದಿಲ್‌ಪ್ರೀತ್ ಸಿಂಗ್ ವೈಯಕ್ತಿಕವಾಗಿ ಎರಡನೇ ಗೋಲು ಬಾರಿಸಿ ಅಂತರವನ್ನು 3-0 ಗೇರಿಸಿದರು. ಆದರೆ ದಕ್ಷಿಣ ಕೊರಿಯಾ ಪಂದ್ಯದ 57 ನೇ ನಿಮಿಷದಲ್ಲಿ ಗೋಲು ಗಳಿಸಿ ಅಂತರವನ್ನು ಕೊಂಚ ತಗ್ಗಿಸುವ ಕೆಲಸ ಮಾಡಿತು.

ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿರುವ ದಕ್ಷಿಣ ಕೊರಿಯಾ 5 ಬಾರಿ ಟ್ರೋಫಿ ಎತ್ತಿ ಹಿಡಿದಿದೆ. ಇದಕ್ಕೂ ಮೊದಲು, ಉಭಯ ದೇಶಗಳ ನಡುವೆ 3 ಫೈನಲ್‌ಗಳು ನಡೆದಿದ್ದು, ಅದರಲ್ಲಿ 2 ರಲ್ಲಿ ದಕ್ಷಿಣ ಕೊರಿಯಾ ಮತ್ತು ಒಂದು ಪಂದ್ಯದಲ್ಲಿ ಭಾರತ ಜಯಗಳಿಸಿದೆ. ಅಷ್ಟೇ ಅಲ್ಲ, ಈ ಪ್ರಶಸ್ತಿ ಗೆಲುವಿನೊಂದಿಗೆ, ಟೀಂ ಇಂಡಿಯಾ ಬೆಲ್ಜಿಯಂ ಮತ್ತು ನೆದರ್‌ಲ್ಯಾಂಡ್ಸ್‌ನಲ್ಲಿ ನಡೆಯಲಿರುವ 2026 ರ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆದಿದೆ.

ಐಪಿಎಲ್ ವೀಕ್ಷಕರಿಗೆ ಹೆಚ್ಚುವರಿ ಸುಂಕದ ಹೊರೆ; ಟಿಕೆಟ್ ಬೆಲೆ ಶೇ 40% ಏರಿಸಿದ ಸರ್ಕಾರ
ಐಪಿಎಲ್ ಅಭಿಮಾನಿಗಳಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ‌. ಐಪಿಎಲ್ ಟಿಕೆಟ್ ದರದಲ್ಲಿ ಈಗ ಹೆಚ್ಚಿನ ಹೊರೆ ಹಾಕುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಸರ್ಕಾರ ಐಪಿಎಲ್ ಟಿಕೆಟ್‌ಗಳ ಮೇಲಿನ ಜಿಎಸ್‌ಟಿಯನ್ನು 28% ರಿಂದ 40% ಕ್ಕೆ ಏರಿಸಿದೆ.

ಐಪಿಎಲ್ ಅನ್ನು ಕ್ಯಾಸಿನೊ ಮತ್ತು ಐಷಾರಾಮಿ ಆಟದ ಶ್ರೇಣಿಯಲ್ಲಿ ಇರಿಸಿದ ಸರ್ಕಾರ, ಐಪಿಎಲ್ ಅನ್ನು ಐಶಾರಾಮಿ ಚಟುವಟಿಕೆ ಎಂದು ವರ್ಗೀಕರಿಸಿದೆ. ಆದಾಗ್ಯೂ ನಿಯಮಿತ ಕ್ರಿಕೆಟ್ ಪಂದ್ಯಗಳು 18% ನಲ್ಲಿ ತೆರಿಗೆಯನ್ನು ಉಳಿಸಿಕೊಳ್ಳುತ್ತವೆ ಎಂದು ಮಾಹಿತಿ ಲಭ್ಯವಾಗಿದೆ.

₹500 ಟಿಕೆಟ್‌ಗಳ ಬೆಲೆ ಈಗ ₹700, ₹1,000 ಟಿಕೆಟ್‌ಗಳು ₹1,400 ಕ್ಕೆ ಏರುತ್ತವೆ ಮತ್ತು ₹2,000 ಟಿಕೆಟ್‌ಗಳು ₹2,800 ತಲುಪುತ್ತವೆ. ಈ ಅಂಕಿಅಂಶಗಳು ಕ್ರೀಡಾಂಗಣ ಶುಲ್ಕಗಳು ಮತ್ತು ಆನ್‌ಲೈನ್ ಬುಕಿಂಗ್ ಶುಲ್ಕಗಳಂತಹ ಹೆಚ್ಚುವರಿ ವೆಚ್ಚಗಳನ್ನು ಹೊರತುಪಡಿಸಿ, ಪ್ರೇಕ್ಷಕರ ಮೇಲೆ ಮತ್ತಷ್ಟು ಹೊರೆಯಾಗುತ್ತವೆ.

ಕ್ರೀಡಾ ಮನರಂಜನೆಯನ್ನು ಐಷಾರಾಮಿ ಎಂದು ಪರಿಗಣಿಸುವ ಈ ಹೊಸ ನೀತಿಯು ದೇಶದಾದ್ಯಂತ ಕ್ರೀಡಾಂಗಣಗಳಲ್ಲಿ ಪಂದ್ಯಗಳನ್ನು ನೇರವಾಗಿ ವೀಕ್ಷಿಸುವವರ ಮೇಲೆ ಹೆಚ್ಚು ಪರಿಣಾಮ ಬೀರಲಿದೆ.

ಏಷ್ಯಾ ಕಪ್ 2025: ಕಜಕಿಸ್ತಾನ್ ವಿರುದ್ಧ ಭರ್ಜರಿ ಜಯ, ಸೂಪರ್-4ಗೆ ಅರ್ಹತೆ ಪಡೆದ ಭಾರತ !
ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ ಭಾರತದ ನಾಗಾಲೋಟ ಮುಂದುವರೆದಿದೆ. ಈಗಾಗಲೇ ಚೀನಾ ಮತ್ತು ಜಪಾನ್ ವಿರುದ್ಧ ಜಯ ಸಾಧಿಸಿದ್ದ ಭಾರತ, ಈಗ ಕಜಕಿಸ್ತಾನವನ್ನು ಸೋಲಿಸಿದೆ.

ಮೊದಲ ಎರಡು ಪಂದ್ಯಗಳನ್ನು ಗೆದ್ದಿದ್ದರೂ ತನ್ನ ಮಟ್ಟಕ್ಕೆ ತಕ್ಕಂತೆ ಆಡದಿದ್ದ ಭಾರತ, ಮೂರನೇ ಪಂದ್ಯದಲ್ಲಿ ಅಬ್ಬರಿಸಿದೆ. ಬಿಹಾರದ ರಾಜ್ಗೀರ್‌ನಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಭಾರತ 15-0 ಅಂತರದಿಂದ ಕಜಕಿಸ್ತಾನವನ್ನು ಮಣಿಸಿದೆ.

ಈ ಗೆಲುವಿನೊಂದಿಗೆ ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ತಂಡ ಸೂಪರ್-4 ಹಂತಕ್ಕೆ ಪ್ರವೇಶಿಸಿದೆ.

ಭಾರತ ತಂಡದ ಪರ ಅಭಿಷೇಕ್ (5ನೇ, 8ನೇ, 20ನೇ, 59ನೇ ನಿಮಿಷಗಳಲ್ಲಿ) ನಾಲ್ಕು ಗೋಲು ಗಳಿಸಿದರೆ, ಸುಖ್‌ಜೀತ್ ಸಿಂಗ್ (15, 32, 38ನೇ ನಿಮಿಷ) ಮತ್ತು ಜುಗ್ರಾಜ್ ಸಿಂಗ್ (24, 31, 47ನೇ ನಿಮಿಷಗಳಲ್ಲಿ) ತಲಾ ಮೂರು ಗೋಲುಗಳನ್ನು ಗಳಿಸಿದರು. ಹರ್ಮನ್‌ಪ್ರೀತ್ (26ನೇ ನಿಮಿಷ), ಅಮಿತ್ ರೋಹಿದಾಸ್ (29ನೇ ನಿಮಿಷ), ರಾಜೀಂದರ್ ಸಿಂಗ್ (32ನೇ ನಿಮಿಷ), ಸಂಜಯ್ ಸಿಂಗ್ (54ನೇ ನಿಮಿಷ) ಮತ್ತು ದಿಲ್‌ಪ್ರೀತ್ (55ನೇ ನಿಮಿಷ) ತಲಾ ಒಂದು ಗೋಲು ಗಳಿಸಿದರು.

ಈ ಪಂದ್ಯದಲ್ಲಿ ಭಾರತ ಸರಾಸರಿ ಪ್ರತಿ 4 ನಿಮಿಷಕ್ಕೆ ಒಂದು ಗೋಲು ಗಳಿಸಿದ್ದು ವಿಶೇಷ. ಗ್ರೂಪ್-ಎನಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಜಯ ಗಳಿಸಿದ ಭಾರತ, ಅಗ್ರಸ್ಥಾನದೊಂದಿಗೆ ಸೂಪರ್-4ಗೆ ಅರ್ಹತೆ ಪಡೆದಿದೆ.

ಗ್ರೂಪ್-ಎಯಿಂದ ಎರಡನೇ ಸ್ಥಾನ ಪಡೆದ ಚೀನಾ ಕೂಡ ಸೂಪರ್-4 ಹಂತಕ್ಕೆ ಅರ್ಹತೆ ಗಳಿಸಿದೆ. ಸೋಮವಾರ ಜಪಾನ್ ವಿರುದ್ಧ ನಡೆದ ಪಂದ್ಯದಲ್ಲಿ ಚೀನಾ 2-2 ಗೋಲುಗಳೊಂದಿಗೆ ಡ್ರಾ ಮಾಡಿಕೊಂಡಿತು. ಈ ಎರಡೂ ತಂಡಗಳು ಸಮಾನ ಅಂಕ ಗಳಿಸಿದ್ದರೂ, ಗೋಲುಗಳ ಅಂತರದಲ್ಲಿ ಚೀನಾ ಮೇಲುಗೈ ಸಾಧಿಸಿ ಸೂಪರ್-4 ಹಂತದ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಮತ್ತೆ ಅಖಾಡಕ್ಕಿಳಿಯುವ ಮುನ್ಸೂಚನೆ; ದುರ್ಘಟನೆಯ ಮೂರು ತಿಂಗಳ ಬಳಿಕ ಶ್ರದ್ಧಾಂಜಲಿ ಪೋಸ್ಟ್, ಅಭಿಮಾನಿಗಳ ಅಂಗಲಾಚಿದ ಆರ್‌ಸಿಬಿ
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 3 ತಿಂಗಳ ಬಳಿಕ ಐಪಿಎಲ್ ಫ್ರಾಂಚೈಸಿ ಆರ್‌ಸಿಬಿ ತಂಡ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಕೆಯ ಪೋಸ್ಟ್ ಹಾಕಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು. ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ಧವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ ಎಂದು X ಮೂಲಕ ಪೋಸ್ಟ್ ಹಾಕಿದೆ.

ಯಾವುದೇ ಪೂರ್ವಾನುಮತಿ ಇಲ್ಲದೆ ಆರ್‌ಸಿಬಿ ಫ್ರಾಂಚೈಸಿ ಸಂಭ್ರಮಾಚರಣೆಯ ಪೋಸ್ಟ್ ಹಾಕಿ ಅಭಿಮಾನಿಗಳಿಗೆ ಗೆಲುವಿನ ಸಂಭ್ರಮಕ್ಕೆ ಬರಲು ಆಹ್ವಾನಿಸಿತ್ತು. ಆ ನಂತರ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತದಲ್ಲಿ ಹಲವು ಮಂದಿ ಮೃತಪಟ್ಟಿದ್ದರು. ಈ ಬೆಳವಣಿಗೆ ಐಪಿಎಲ್ ಇತಿಹಾಸದ ಕರಾಳ ದಿನಗಳಾಗಿ ಉಳಿಯಿತು. ಸಧ್ಯ ಮುಂದಿನ ದಿನಗಳಲ್ಲಿ ಐಪಿಎಲ್ ಶುರುವಾಗುವ ಈ ಹಂತದಲ್ಲಿ ಬೆಂಬಲಕ್ಕಾ ಮತ್ತೆ ಅಭಿಮಾನಿಗಳ ಬಳಿ ಅಂಗಲಾಚಿರುವ ಪೋಸ್ಟ್ ಮುಂದಿನ ದಿನಗಳಲ್ಲಿ ಬೆಂಬಲ ಕೋರಿದ ಪೀಠಿಕೆ ಎಂಬಂತೆ ಕಂಡಿದೆ. ಅಷ್ಟೇ ಅಲ್ಲದೆ ದುರ್ಘಟನೆ ಸಂಭವಿಸಿ, ಮೂರು ತಿಂಗಳ ಬಳಿಕ ಈ ಪೋಸ್ಟ್ ಹರಿದಾಡಿದ್ದು ಆರ್‌ಸಿಬಿ ಮತ್ತೆ ಅಖಾಡಕ್ಕೆ ಬರುವ ಮುನ್ಸೂಚನೆ ನೀಡಿದೆ.

ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ಧೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು. ಅದರ ಫಲವೇ ಆರ್ಸಿಬಿ ಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒ೦ದು ಯೋಜನೆ.ಇ೦ದು ನಾವು ಮರಳಿದ್ದೇವೆ; ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತ, ಕರ್ನಾಟಕದ ಹೆಮ್ಮೆಯಾಗಿ ಮು೦ದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ. ಆರ್ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.ಹೆಚ್ಚಿನ ಮಾಹಿತಿ… ಶೀಘ್ರದಲ್ಲೇ” ಎಂಬಂತೆ X ಮೂಲಕ ಪೋಸ್ಟ್ ಹಾಕಿದೆ.

Dear 12th Man Army, this is our heartfelt letter to you!

𝗜𝘁’𝘀 𝗯𝗲𝗲𝗻 𝗰𝗹𝗼𝘀𝗲 𝘁𝗼 𝘁𝗵𝗿𝗲𝗲 𝗺𝗼𝗻𝘁𝗵𝘀 𝘀𝗶𝗻𝗰𝗲 𝘄𝗲 𝗹𝗮𝘀𝘁 𝗽𝗼𝘀𝘁𝗲𝗱 𝗵𝗲𝗿𝗲.

The Silence wasn’t Absence. It was Grief.

This space was once filled with energy, memories and moments that you… pic.twitter.com/g0lOXAuYbd
— Royal Challengers Bengaluru (@RCBTweets) August 28, 2025

ಏಷ್ಯಾಕಪ್​ಗೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್ ನಾಯಕ ಸಂಜುಗೆ ಸ್ಥಾನ
ಏಷ್ಯಾಕಪ್ 2025 (Asia Cup 2025) ಟೂರ್ನಿಗೆ ಭಾರತ ತಂಡವನ್ನು (India Team) ಪ್ರಕಟಿಸಲಾಗಿದೆ (Announced). ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು 15 ಸದಸ್ಯರುಗಳ ತಂಡ ಪ್ರಕಟಿಸಿದ್ದು, ಈ ತಂಡವನ್ನು ಸೂರ್ಯಕುಮಾರ್ ಯಾದವ್ (Suryakumar Yadav) ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ.

ತಂಡದಲ್ಲಿ ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಹಾಗೂ ಯಶಸ್ವಿ ಜೈಸ್ವಾಲ್​ಗೆ ಅವಕಾಶ ನೀಡಿಲ್ಲ. ಮೊಹಮ್ಮದ್ ಸಿರಾಜ್​ಗೆ ವಿಶ್ರಾಂತಿ ನೀಡಲಾಗಿದ್ದರೆ, ಗಾಯಾಳು ರಿಷಭ್ ಪಂತ್​ರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರನ್ನು ನೋಡುವುದಾದರೆ, ಆರಂಭಿಕರಾಗಿ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಕಾಣಿಸಿಕೊಂಡಿದ್ದಾರೆ. ಮೂರನೇ ಕ್ರಮಾಂಕಕ್ಕೆ ಎಡಗೈ ಆಟಗಾರ ತಿಲಕ್ ವರ್ಮಾ, ನಾಲ್ಕನೇ ಕ್ರಮಾಂಕಕ್ಕೆ ನಾಯಕ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ರಿಂಕು ಸಿಂಗ್ ಆಡಿದರೆ, ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಶಿವಂ ದುಬೇ ಸ್ಥಾನ ಪಡೆದಿದ್ದಾರೆ. ಬೌಲರ್​​ಗಳಾಗಿ ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಹಾಗೂ ಜಸ್​ಪ್ರೀತ್ ಬುಮ್ರಾ ತಂಡದಲ್ಲಿದ್ದಾರೆ.

ಏಷ್ಯಾ ಕಪ್​ಗೆ ಭಾರತ ತಂಡ
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಅದರಂತೆ ಭಾರತ, ಪಾಕಿಸ್ತಾನ್, ಯುಎಇ, ಒಮಾನ್ ತಂಡಗಳು ಗ್ರೂಪ್ ಎ ನಲ್ಲಿ ಕಣಕ್ಕಿಳಿದರೆ, ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್ ಹಾಗೂ ಹಾಂಗ್​ಕಾಂಗ್ ತಂಡಗಳು ಗ್ರೂಪ್ ಬಿ ನಲ್ಲಿ ಸೆಣಲಿಸಲಿದೆ. ಈ ತಂಡಗಳಲ್ಲಿ 4 ಟೀಮ್​ಗಳು ಸೂಪರ್-4 ಹಂತಕ್ಕೇರಲಿದೆ.