ನಿಧನ ಸುದ್ದಿ – Peepal Media

ಥೈರಾಯ್ಡ್ ಕ್ಯಾನ್ಸರ್; ಸ್ಯಾಂಡಲ್‌ವುಡ್ ನಟ ಹರೀಶ್ ರಾಯ್ ನಿಧನ
ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ನಟ ಹರೀಶ್ ರಾಯ್ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್‌ ಕ್ಯಾನ್ಸರ್‌ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.

ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಸಾಮಾಜಿಕ ಜಾಲತಾಣದಲ್ಲಿ ಸಹಾಯಕ್ಕಾಗಿ ಅಂಗಲಾಚಿದ್ದ ನಟನಿಗೆ ಹಲವು ನಟ ನಟಿಯರು, ನಿರ್ಮಾಪಕರ ಕಡೆಯಿಂದ ಕೊಂಚ ಮಟ್ಟಿಗಿನ ಸಹಾಯ ದೊರಕಿತ್ತು. ಆದರೆ ಇದೀಗ ಬಂದ ಮಾಹಿತಿಯಂತೆ ಯಾವ ಚಿಕಿತ್ಸೆಯೂ ಫಲಕಾರಿಯಾಗದೆ ಹರೀಶ್ ರಾಯ್ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರ ನಟನೆಯ ಓಂ ಸಿನೆಮಾ ಮತ್ತು ಕೊನೆಯ ದಿನಗಳಲ್ಲಿ ನಟಿಸಿದ ಕೆಜಿಎಫ್ ಸಿನಿಮಾ ಹೆಚ್ಚು ಜನಪ್ರಿಯತೆ ತಂದುಕೊಟ್ಟ ಸಿನಿಮಾಗಳಾಗಿವೆ.

ಬೆಂಗಳೂರು ಅಂಡರ್ ವರ್ಲ್ಡ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ ಸೇರಿದಂತೆ ನೂರಾರು ಸಿನೆಮಾಗಳಲ್ಲಿ ನಟಿಸಿದ್ದಾರೆ.

ಕಾಂಗ್ರೆಸ್ ಶಾಸಕ ಹೆಚ್.ವೈ.ಮೇಟಿ ನಿಧನ
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ (79) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಟಿ ಅವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H​.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ ಜನಿಸಿದ್ದರು. 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್​ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ  ಗೆದ್ದಿದ್ದರು.

ಹೆಚ್​.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ನಾಳೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.

ಸಿದ್ದರಾಮಯ್ಯ ಸಂತಾಪ
ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆಯ ಸೃಷ್ಟಿಕರ್ತ, ಜಾಹೀರಾತು ದಿಗ್ಗಜ ಪಿಯೂಷ್ ಪಾಂಡೆ ನಿಧನ
ದೆಹಲಿ: ಸಾಂಪ್ರದಾಯಿಕ ಜಾಹೀರಾತುಗಳ ಮತ್ತು “ಅಬ್ ಕಿ ಬಾರ್, ಮೋದಿ ಸರ್ಕಾರ್” (ಈ ಬಾರಿ, ಮೋದಿ ಸರ್ಕಾರ) ಎಂಬ ಘೋಷಣೆಯ ಹಿಂದಿನ ನಿರ್ಮಾತೃ ಪಿಯೂಷ್ ಪಾಂಡೆ ಶುಕ್ರವಾರ ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ಪಾಂಡೆ ಅವರು ಸೋಂಕಿನಿಂದ ಬಳಲುತ್ತಿದ್ದರು. ಇವರು ಫೆವಿಕಾಲ್, ಕ್ಯಾಡ್ಬರಿ, ಏಷ್ಯನ್ ಪೇಂಟ್ಸ್‌ನಂತಹ ಪ್ರಖ್ಯಾತ ಬ್ರ್ಯಾಂಡ್‌ಗಳಿಗೆ ಅವರು ಜಾಹೀರಾತುಗಳನ್ನು ರೂಪಿಸಿದ್ದರು.

ಕಳೆದ ಕೆಲವು ದಿನಗಳಿಂದ ಅವರು ಸೋಂಕಿನಿಂದ ಬಳಲುತ್ತಿದ್ದರು. ಶನಿವಾರ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ. ಅವರು ಸುಮಾರು ನಾಲ್ಕು ದಶಕಗಳ ಕಾಲ ಜಾಹೀರಾತು ಉದ್ಯಮದಲ್ಲಿ ಸೇವೆ ಸಲ್ಲಿಸಿದ್ದರು. ಅವರು ಓಗ್ಲಿವಿ (Ogilvy) ಜಾಹೀರಾತು ಕಂಪನಿಯಲ್ಲಿ ಮುಖ್ಯ ಸೃಜನಾತ್ಮಕ ಅಧಿಕಾರಿ (Chief Creative Officer) ಮತ್ತು ಕಾರ್ಯಕಾರಿ ಅಧ್ಯಕ್ಷರಾಗಿ (Executive Chairman) ಕಾರ್ಯನಿರ್ವಹಿಸಿದ್ದರು.

ವೃತ್ತಿಜೀವನ ಮತ್ತು ಪ್ರಮುಖ ಜಾಹೀರಾತುಗಳು:

ಪಾಂಡೆ ಅವರು 1982ರಲ್ಲಿ ಓಗ್ಲಿವಿ ಕಂಪನಿಯನ್ನು ಸೇರಿದರು. ಸನ್‌ಲೈಟ್ ಡಿಟರ್ಜೆಂಟ್‌ಗಾಗಿ ಅವರು ಮೊದಲು ಜಾಹೀರಾತು ಬರೆದರು. ಆರು ವರ್ಷಗಳ ನಂತರ ಕಂಪನಿಯ ಸೃಜನಾತ್ಮಕ ವಿಭಾಗವನ್ನು ಸೇರಿಕೊಂಡರು. ನಂತರ ಅವರು ಅನೇಕ ಜನಪ್ರಿಯ ಜಾಹೀರಾತುಗಳನ್ನು ಸಿದ್ಧಪಡಿಸಿದರು. ಫೆವಿಕಾಲ್, ಕ್ಯಾಡ್ಬರಿ, ಏಷ್ಯನ್ ಪೇಂಟ್ಸ್ , ಲೂನಾ ಮೊಪೆಡ್, ಫಾರ್ಚೂನ್ ಆಯಿಲ್ ಸೇರಿದಂತೆ ಹಲವು ಬ್ರ್ಯಾಂಡ್‌ಗಳಿಗೆ ಜಾಹೀರಾತುಗಳನ್ನು ತಯಾರಿಸಿದರು.

ಅವರ ನೇತೃತ್ವದಲ್ಲಿ ಓಗ್ಲಿವಿ ಇಂಡಿಯಾ ಜಾಹೀರಾತು ಏಜೆನ್ಸಿಯು ಸತತ 12 ವರ್ಷಗಳ ಕಾಲ ನಂಬರ್ ಒನ್ ಸ್ಥಾನದಲ್ಲಿ ಮುಂದುವರೆಯಿತು.

ಪ್ರಶಸ್ತಿಗಳು ಮತ್ತು ಕೊಡುಗೆಗಳು:

ಪಾಂಡೆ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದರು. 2016ರಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರು ಸಿನಿಮಾಗಳಲ್ಲಿಯೂ ನಟಿಸಿದ್ದರು; 2013ರಲ್ಲಿ ಬಿಡುಗಡೆಯಾದ ‘ಮದ್ರಾಸ್ ಕೆಫೆ’ ಚಿತ್ರದಲ್ಲಿ ನಟಿಸಿದ್ದರು.

ರಾಷ್ಟ್ರೀಯ ಸಮಗ್ರತೆಗಾಗಿ ರಚಿಸಲಾದ ಪ್ರಸಿದ್ಧ ಗೀತೆ ‘ಮಿಲೆ ಸುರ್ ಮೇರಾ ತುಮ್ಹಾರಾ’ ಹಾಡಿಗೆ ಸಾಹಿತ್ಯವನ್ನು ಅವರೇ ಒದಗಿಸಿದ್ದರು. ‘ಭೋಪಾಲ್ ಎಕ್ಸ್‌ಪ್ರೆಸ್’ ಎಂಬ ಚಿತ್ರಕ್ಕೆ ಅವರು ಸ್ಕ್ರೀನ್‌ಪ್ಲೇ ಸಹಕಾರ ನೀಡಿದ್ದರು.

ಗಣ್ಯರಿಂದ ಸಂತಾಪ:

ಪಿಯೂಷ್ ಪಾಂಡೆ ಅವರ ನಿಧನಕ್ಕೆ ಅನೇಕ ಗಣ್ಯರು, ಸೆಲೆಬ್ರಿಟಿಗಳು ಮತ್ತು ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಜಾಹೀರಾತು ಕ್ಷೇತ್ರದಲ್ಲಿ ಅವರು ದಂತಕಥೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಪಿಯೂಷ್ ಪಾಂಡೆ ಅವರ ಸೃಜನಶೀಲತೆ ಅದ್ಭುತವಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರ ನಿಧನಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ.

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮ*ತ್ಯೆ
ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದೀಪ್ ಆತ್ಮಹತ್ಯೆ ಮಾಡಿಕೊಂಡಿರುವ ಮಾಜಿ ಶಾಸಕರ ಪುತ್ರ. ಸುದೀಪ್ ಬಾರ್ಕೂರಿನಲ್ಲಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ.

ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಬ್ರಿ ನಿವಾಸಿಯಾಗಿದ್ದ ಸುದೀಪ್ ಭಂಡಾರಿ ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬ್ರಹ್ಮಾವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಾಸ್ತು ಹೌಸಿಂಗ್ ಫೈನಾನ್ಸ್ ಕಿರುಕುಳಕ್ಕೆ ಸಕಲೇಶಪುರದ ಮಹಿಳೆ ಬಲಿ
ಸಕಲೇಶಪುರ: ಸಾಲದ ಕಂತು ಪಾವತಿಸಲು ಒತ್ತಡ ಹೇರಿದ ಖಾಸಗಿ ಫೈನಾನ್ಸ್ ಸಂಸ್ಥೆಯ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿಯ ಸಿಡಗಳಲೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಮಲ್ಲೇಶ್ ಅವರ ಪತ್ನಿ ಪುಟ್ಟಲಕ್ಷ್ಮೀ (45). ಹಾಸನದ ಖಾಸಗಿ ವಾಸ್ತು ಹೌಸಿಂಗ್ ಫೈನಾನ್ಸ್ ಸಂಸ್ಥೆಯಿಂದ ಮನೆ ಕಟ್ಟಲು ಸಾಲ ಪಡೆದಿದ್ದ ಅವರು ಕಳೆದ ಒಂದು ವರ್ಷದಿಂದ ಯಾವುದೇ ಬಾಕಿ ಉಳಿಸದೇ ಪ್ರತಿ ತಿಂಗಳು ಕಂತು ಪಾವತಿಸುತ್ತಿದ್ದರು. ಆದರೆ ಅನಾರೋಗ್ಯದ ಹಿನ್ನೆಲೆ ಇತ್ತೀಚೆಗೆ ಒಂದು ತಿಂಗಳ ₹15,100 ಕಂತು ಪಾವತಿಸಲು ಕಾಲಾವಕಾಶ ಕೋರಿದ್ದರೂ, ಕಂಪನಿ ಅಧಿಕಾರಿಗಳು ಅದಕ್ಕೆ ಅವಕಾಶ ನೀಡದೆ ನಿರಂತರವಾಗಿ ಮನೆಗೆ ಬಂದು ಒತ್ತಡ ಹೇರುತ್ತಿದ್ದರೆಂದು ಕುಟುಂಬದವರು ದೂರಿದ್ದಾರೆ.

ಈ ಕಿರುಕುಳದಿಂದ ನೊಂದ ಪುಟ್ಟಲಕ್ಷ್ಮೀ ಅಕ್ಟೋಬರ್ 1ರಂದು ವಿಷ ಸೇವಿಸಿ ಆತ್ಮಹತ್ಯೆ ಯತ್ನ ಮಾಡಿದ್ದರು. ತಕ್ಷಣ ಪತಿ ಮಲ್ಲೇಶ್ ಅವರನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹಾಸನದ ಹಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಮೃತೆ ಪತಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು. ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪತಿ ಮಲ್ಲೇಶ್ ನೀಡಿದ ದೂರಿನ ಮೇರೆಗೆ ವಾಸ್ತು ಹೌಸಿಂಗ್ ಫೈನಾನ್ಸ್ ವ್ಯವಸ್ಥಾಪಕ ಹಾಗೂ ಇಬ್ಬರು ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ ವಿವಿಧ ಪ್ರಗತಿಪರ ಸಂಘಟನೆಗಳು ಕಿರುಕುಳದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಾಲದ ಒತ್ತಡದಿಂದ ಜನರ ಜೀವ ಹಾಳಾಗುತ್ತಿರುವುದು ಖಂಡನೀಯ ಎಂದು ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

ಬರಹಗಾರ ಪ್ರೊ. ಮೊಗಳ್ಳಿ ಗಣೇಶ್ ನಿಧನ
ಹೊಸಪೇಟೆ (ವಿಜಯನಗರ ಜಿಲ್ಲೆ): ಬರಹಗಾರ ಪ್ರೊ. ಮೊಗಳ್ಳಿ ಗಣೇಶ್ (64) ಅವರು ಭಾನುವಾರ ಬೆಳಿಗ್ಗೆ ನಗರದ ತಮ್ಮ ಮನೆಯಲ್ಲಿ ನಿಧನರಾದರು. ಅವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಅವರು ಹಂಪಿ ವಿಶ್ವವಿದ್ಯಾಲಯದಲ್ಲಿ 26 ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು ಮತ್ತು ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರ ಜವಾಬ್ದಾರಿಯನ್ನೂ ನಿರ್ವಹಿಸಿದ್ದರು. ಅವರು ಜೂನ್ 30, 2024 ರಂದು ನಿವೃತ್ತರಾಗಿದ್ದರು.

ಅವರು 1962 ರಲ್ಲಿ ಚನ್ನಪಟ್ಟಣ ತಾಲೂಕಿನ ಸಂತಮೋಗೆನಹಳ್ಳಿ ಯಲ್ಲಿ ಜನಿಸಿದರು. ಅವರು ಅರ್ಥಶಾಸ್ತ್ರ ಮತ್ತು ಜಾನಪದ (Folklore) ವಿಷಯಗಳಲ್ಲಿ ಅಧ್ಯಯನ ಮಾಡಿದ್ದರು. ಸ್ಥಳೀಯ ಸಂಸ್ಕೃತಿಯ ಮೇಲಿನ ಅವರ ಆಳವಾದ ಪ್ರೀತಿಯು ಅವರನ್ನು ಅತ್ಯುತ್ತಮ ಕಥೆಗಾರ ಮತ್ತು ವಿಮರ್ಶಕರನ್ನಾಗಿ ಮಾಡಿತು.

ಸಾಹಿತ್ಯ ಕೊಡುಗೆ ಮತ್ತು ಪ್ರಶಸ್ತಿಗಳು

ಪ್ರೊ. ಮೊಗಳ್ಳಿ ಗಣೇಶ್ ಅವರು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ:

ಕಥಾ ಸಂಕಲನಗಳು: 9

ಕಾದಂಬರಿಗಳು: 7

ಸಂಸ್ಕೃತಿಯ ಕುರಿತ ಪುಸ್ತಕಗಳು: 18

ಕವನ ಸಂಕಲನಗಳು: 2

ನಾಟಕಗಳು: 4

ಪ್ರಬಂಧ ಸಂಕಲನ: 1

ಸಂಪಾದಿತ ಸಂಕಲನಗಳು: 6

ಜಾನಪದ ಅಧ್ಯಯನಕ್ಕೆ ಸಂಬಂಧಿಸಿದ ಪುಸ್ತಕಗಳು: 10

ಅವರ ‘ಬುಗುರಿ’, ‘ನನ್ನಜ್ಜನಿಗೆ ಒಂದಾಸೆಯಿತ್ತು’, ‘ಒಂದು ಹಳೆಯ ಚಡ್ಡಿ’ ಮತ್ತು ಇತರ ಕಥೆಗಳು ಕನ್ನಡದ ಅತ್ಯುತ್ತಮ ಸಣ್ಣ ಕಥೆಗಳಲ್ಲಿ ಗುರುತಿಸಿಕೊಂಡಿವೆ. ಅವರ ನಾಲ್ಕು ಕಥೆಗಳು ಪ್ರಜಾವಾಣಿ ಕಥಾ ಸ್ಪರ್ಧೆಯಲ್ಲಿ ಬಹುಮಾನ ಪಡೆದಿವೆ.

ಅವರ ಕವನ ಸಂಕಲನ “ಸೂರ್ಯನನ್ನು ಬಚ್ಚಿಡಬಹುದೇ?” ಆಗಿದೆ. ಗಣೇಶ್ ಅವರ ಪ್ರಮುಖ ಕಾದಂಬರಿಗಳಲ್ಲಿ ‘ತೊಟ್ಟಿಲು’ ಮತ್ತು ‘ಕಿರೀಟ’ ಸೇರಿವೆ. ಅವರ ಗಮನಾರ್ಹ ಪ್ರಬಂಧ ಸಂಕಲನ ‘ಕಥನ’ ಆಗಿದೆ. ಅವರ ಪ್ರಮುಖ ವಿಮರ್ಶಾ ಕೃತಿಗಳೆಂದರೆ ‘ಸೊಳ್ಳು’ ಮತ್ತು ‘ವಿಮರ್ಶೆ’. ಅವರ ‘ವಿಶ್ಲೇಷಣೆ’ ಅಂಕಣವು ಬಹಳ ಜನಪ್ರಿಯವಾಗಿತ್ತು.

‘ತೊಟ್ಟಿಲು’ ಕಾದಂಬರಿಯು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಅನುವಾದ ಪ್ರಶಸ್ತಿಗೆ ಆಯ್ಕೆಯಾಗಿ, ‘The Cradle’ ಎಂಬ ಶೀರ್ಷಿಕೆಯಡಿಯಲ್ಲಿ ಇಂಗ್ಲಿಷ್‌ಗೆ ಅನುವಾದಗೊಂಡಿದೆ. ಅವರ ‘ನನ್ನ ಕಥೆಗಳು’ ಸ್ಪ್ಯಾನಿಷ್, ಇಂಗ್ಲಿಷ್, ಜರ್ಮನ್ ಮತ್ತು ಪೋಲಿಷ್ ಸೇರಿದಂತೆ ಎಲ್ಲಾ ಪ್ರಮುಖ ಭಾರತೀಯ ಭಾಷೆಗಳಿಗೆ ಅನುವಾದಗೊಂಡಿವೆ.

ಮೊಗಳ್ಳಿ ಗಣೇಶ್ ಅವರಿಗೆ ಮಾಸ್ತಿ ಪ್ರಶಸ್ತಿ, ದೂರದರ್ಶನದ ‘ಚಂದನ’ ಪ್ರಶಸ್ತಿ, ದೆಹಲಿಯ ರಾಷ್ಟ್ರೀಯ ‘ಸಂಸ್ಕೃತಿ’ ಪ್ರಶಸ್ತಿ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ.

ಕುಟುಂಬ ಸದಸ್ಯರು ಭಾನುವಾರ ಸಂಜೆ ಮಂಡ್ಯ ಜಿಲ್ಲೆಯ ಮಾದನಾಯಕನಹಳ್ಳಿ ಯಲ್ಲಿ ಅಂತ್ಯಕ್ರಿಯೆಗಳನ್ನು ನೆರವೇರಿಸಿದರು.

ಮೊಗಳ್ಳಿ ಗಣೇಶ್ ಅವರ ಆಕಸ್ಮಿಕ ನಿಧನದಿಂದ ನಾನು ಆಘಾತಗೊಂಡಿದ್ದೇನೆ. ಕನ್ನಡ ಸಾಹಿತ್ಯಕ್ಕೆ ಕಥೆ ಮತ್ತು ಕಾದಂಬರಿಗಳ ಮೂಲಕ, ಮತ್ತು ಜಾನಪದ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಸಂಶೋಧನೆ ಮತ್ತು ಅಧ್ಯಯನಗಳಿಗೆ ಅವರ ಕೊಡುಗೆಗಳು ಗಮನಾರ್ಹವಾಗಿವೆ. ಅವರ ಅಗಲುವಿಕೆಗೆ ನನ್ನ ಸಂತಾಪಗಳು; ಅವರ ಕುಟುಂಬ ಮತ್ತು ಸ್ನೇಹಿತರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ.

ಖ್ಯಾತ ಚಿತ್ರನಟ, ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ
ಹಾಸ್ಯನಟ, ನಿರ್ದೇಶಕ, ನಾಟಕಕಾರ, ರಚನೆಕಾರ, ಸಂಭಾಷಣಾಕಾರರಾಗಿ ತಮ್ಮ ಕಲೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದ ಯಶವಂತ ಸರದೇಶಪಾಂಡೆ (60) ಇಂದು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೃದಯಾಘಾತ ಉಂಟಾದ ಕೂಡಲೇ ಅವರನ್ನು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇವರು ನಟಿಸಿ-ನಿರ್ದೇಶಿಸಿರುವ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಪಾತ್ರವಹಿಸಿದ್ದರು. ಇವರ ಪತ್ನಿ ಮಾಲತಿ ಸಹ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಜನಪ್ರಿಯ ಕಲಾವಿದೆಯಾಗಿದ್ದರು.

ಯಶವಂತ ಸರದೇಶಪಾಂಡೆಯವರು ಹುಟ್ಟಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಎಂಬ ಹಳ್ಳಿಯಲ್ಲಿ. ಈಗಾಗಲೇ ಹಲವು ಸಿನಿಮಾಗಳು ಮತ್ತು ಕಿರುತೆರೆಯಲ್ಲೂ ನಟಿಸಿದ ಖ್ಯಾತಿ ಯಶವಂತ ಸರದೇಶಪಾಂಡೆ ಅವರಿಗಿದೆ.

ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮಿಗಳು ವಿಧಿವಶ
ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮಿಗಳು ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೆಂಗೇರಿಯಲ್ಲಿ ಶ್ರೀಮಠ ಸ್ಥಾಪಿಸಿದ್ದ ಅವರು ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆದಿಚುಂಚನಗಿರಿಯ ಮಠಕ್ಕೆ ಪರ್ಯಾಯವಾಗಿ ಉದಯಿಸಿದ ಈ ಮಠಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರವಾದದ್ದು.

ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಹಿತಿ ತಿಳಿದ ಭಕ್ತರು ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ವಿವಿಧ ಮಠಾಧೀಶರು, ಗಣ್ಯರು, ಭಕ್ತರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು. ಶ್ರೀಗಳ ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅಂತ್ಯಕ್ರಿಯೆಯ ವಿಧಿ ವಿಧಾನ ನೆರವೇರಿಸುವರು.

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ
ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾದರು.

ಅವರು ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು.

ಮಲಿಕ್ ಅವರು ಆಗಸ್ಟ್ 2018 ರಿಂದ ಅಕ್ಟೋಬರ್ 2019 ರವರೆಗೆ ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಕೊನೆಯ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯಲ್ಲಿಯೇ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಮತ್ತು ಆಗಸ್ಟ್ 5, 2019 ರಂದು ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಯಿತು.

ಮಲಿಕ್ ಅವರ ವೃತ್ತಿಜೀವನವು ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳ, ಕಾಂಗ್ರೆಸ್ ಮತ್ತು ವಿಪಿ ಸಿಂಗ್ ನೇತೃತ್ವದ ಜನತಾ ದಳ ಸೇರಿದಂತೆ ವಿವಿಧ ರಾಜಕೀಯ ಸಂಬಂಧಗಳ ಮೂಲಕ ಸಾಗಿ, ಅಂತಿಮವಾಗಿ 2004 ರಲ್ಲಿ ಬಿಜೆಪಿಗೆ ಸೇರಿದರು.

ಅಂತರರಾಷ್ಟ್ರೀಯ ಕುಸ್ತಿಪಟು, ಹಾಲಿವುಡ್ ನಟ ಹಲ್ಕ್ ಹೋಗನ್ ನಿಧನ
ಕುಸ್ತಿಪಟು ಹಾಗೂ ಹಾಲಿವುಡ್ ನಟ ಹಲ್ಕ್ ಹೋಗನ್ ತಮ್ಮ 71 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮನರಂಜನಾ ಜಗತ್ತಿನ ಅತಿ ದೊಡ್ಡ ವೇದಿಕೆಯಾಗಿರುವ WWE ಸಂಸ್ಥೆಯಲ್ಲಿ ಸುಮಾರು 4 ದಶಕಗಳ ಕಾಲ ತಮ್ಮದೇ ಆದ ಅಸ್ಮಿತೆ ಉಳಿಸಿಕೊಂಡಿದ್ದ ದಂತಕತೆ ಹೃದಯಾಘಾತಕ್ಕೆ ತುತ್ತಾಗಿ ನಿಧನ ಹೊಂದಿದ್ದಾರೆ.

ಆಗಸ್ಟ್ 11, 1953 ರಂದು ಜಾರ್ಜಿಯಾದ ಆಗಸ್ಟಾದಲ್ಲಿ ಜನಿಸಿದ ಹಲ್ಕ್ ವೃತ್ತಿಪರ ಕುಸ್ತಿಯ ಇತಿಹಾಸದಲ್ಲಿ ಅತ್ಯಂತ ದೊಡ್ಡ ಐಕಾನ್ ವ್ಯಕ್ತಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಕುಸ್ತಿಯ ಸುವರ್ಣ ಯುಗದ ಮುಖವೆಂದು ಆಗಾಗ್ಗೆ ಪ್ರಶಂಸಿಸಲ್ಪಡುತ್ತಿದ್ದ ಹೊಗನ್ ಅವರ ಪ್ರಭಾವವು ಕುಸ್ತಿಯನ್ನೂ ಮೀರಿದಂತೆ ಜಾಗತಿಕ ಸೂಪರ್ ಸ್ಟಾರ್ ಎಂಬಂತೆ ಬಿಂಬಿಸಲ್ಪಟ್ಟಿದೆ.

ಅವರ ಕುಸ್ತಿ ವೃತ್ತಿಜೀವನವು 1979 ರಲ್ಲಿ ಪ್ರಾರಂಭವಾಯಿತು, ಆದರೆ 1980 ರ ದಶಕದಲ್ಲಿ ಹೊಗನ್ ಮನೆಮಾತಾದರು, ಅನೇಕ ರೆಸಲ್‌ಮೇನಿಯಾ ಈವೆಂಟ್‌ಗಳಲ್ಲಿ ಪ್ರಮುಖ ಪಾತ್ರ ವಹಿಸಿದರು.