ಬೆಂಗಳೂರು – Peepal Media

ಕೆರೆ ಒತ್ತುವರಿ ಮಾಡಿದರೆ ನಿಮ್ಮ ಮೇಲೆ ಬೀಳುತ್ತೆ ಕ್ರಿಮಿನಲ್ ಕೇಸ್ – ಈಶ್ವರ್ ಖಂಡ್ರೆ
ಬೆಂಗಳೂರು: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಒತ್ತುವರಿ ಮಾಡಿದ್ದರೆ ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಇನ್ನು ಮುಂದೆ ಹೊಸದಾಗಿ ಕೆರೆ ಒತ್ತುವರಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 32,504 ಕೆರೆಗಳಿದ್ದು, ಈ ಪೈಕಿ 11,498 ಕೆರೆಗಳು ಒತ್ತುವರಿಗೆ ಒಳಗಾಗಿದ್ದವು. ಈಗಾಗಲೇ 6,670 ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ. ಇನ್ನೂ 4,828 ಕೆರೆಗಳಿಗೆ ಸೇರಿದ 11,671 ಎಕರೆ ಒತ್ತುವರಿ ತೆರವುಗೊಳಿಸಬೇಕಿದೆ ಎಂದು ತಿಳಿಸಿದರು.

ಉಳಿದ ಕೆರೆಗಳ ಒತ್ತುವರಿ ತೆರವು ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆರೆಗಳನ್ನು ಹೊಸದಾಗಿ ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಅಂತರ್ಜಲ ಕುಸಿತ ಗಂಭೀರ ಸಮಸ್ಯೆ:

ರಾಜ್ಯದ ಹಲವು ಭಾಗಗಳಲ್ಲಿ ಭೂಮಿಯೊಳಗೆ ಹೆಬ್ಬಂಡೆ ಮತ್ತು ಲ್ಯಾಟರೈಟ್ ಪದರಗಳಿರುವುದರಿಂದ ಮಳೆನೀರು ಸಮರ್ಪಕವಾಗಿ ಇಂಗದೆ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದರ ಜೊತೆಗೆ ಅಂತರ್ಜಲದ ಅತಿಯಾದ ಬಳಕೆಯೂ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ ಎಂದು ಖಂಡ್ರೆ ಹೇಳಿದರು.

ಮುಂದಿನ ದಿನಗಳಲ್ಲಿ ಕೆರೆ, ಕಟ್ಟೆ, ಸರೋವರ ಮತ್ತು ನದಿಗಳಂತಹ ಮೇಲ್ಮೈ ಜಲಮೂಲಗಳ ಸಂರಕ್ಷಣೆ ಅತ್ಯಂತ ಅಗತ್ಯ. ಅವುಗಳನ್ನು ರಕ್ಷಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.

ಜಲಮೂಲಗಳ ಸಂರಕ್ಷಣೆಗೆ ರಾಷ್ಟ್ರೀಯ ಯೋಜನೆಗೆ ಒತ್ತಾಯ:

ದೆಹಲಿಯಲ್ಲಿ ಜಲಶಕ್ತಿ ಸಚಿವಾಲಯ ಆಯೋಜಿಸಿದ್ದ ಎರಡು ದಿನಗಳ ಸುಸ್ಥಿರ ಜಲ ಕುರಿತ ಶೃಂಗಸಭೆಯಲ್ಲಿ ಭಾಗವಹಿಸಿದ್ದಾಗಿ ತಿಳಿಸಿದ ಖಂಡ್ರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಕರ್ನಾಟಕದಲ್ಲಿ ಜಲ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ನೀಡಿರುವುದಾಗಿ ಹೇಳಿದರು.

ಕೆರೆ, ಸರೋವರ ಮತ್ತು ನದಿಗಳು ತ್ಯಾಜ್ಯದಿಂದ ಕಲುಷಿತಗೊಳ್ಳದಂತೆ ಹಾಗೂ ಒತ್ತುವರಿಯಾಗದಂತೆ ಸಂರಕ್ಷಿಸಲು ರಾಷ್ಟ್ರಮಟ್ಟದಲ್ಲಿ ಸಮಗ್ರ ಯೋಜನೆ ರೂಪಿಸಬೇಕು ಎಂದು ಶೃಂಗಸಭೆಯಲ್ಲಿ ಒತ್ತಾಯಿಸಿರುವುದಾಗಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಮುಂಬರುವ ಡಿಸೆಂಬರ್‌ನಲ್ಲಿ ಚುನಾವಣೆ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಅಧ್ಯಕ್ಷ ಸ್ಥಾನಕ್ಕೆ ಮುಂಬರುವ ಡಿಸೆಂಬರ್‌ನಲ್ಲಿ ಚುನಾವಣೆ (Election) ನಡೆಯುವ ಸಾಧ್ಯತೆಯಿದ್ದು, ಆಕಾಂಕ್ಷಿಗಳ ನಡುವೆ ಈಗಾಗಲೇ ಸ್ಪರ್ಧೆ ಬಿರುಸಾಗಿದೆ. ಚುನಾವಣಾ ದಿನಾಂಕ ಇನ್ನೂ ಅಧಿಕೃತವಾಗಿ ಘೋಷಣೆಯಾಗದಿದ್ದರೂ, ಪ್ರಮುಖ ಅಭ್ಯರ್ಥಿಗಳು (Candidates) ಈಗಿನಿಂದಲೇ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ಪ್ರಸ್ತುತ ಕಸಾಪ ಕಾರ್ಯಕಾರಿ ಸಮಿತಿಯ ಅಧಿಕಾರಾವಧಿ ನವೆಂಬರ್ 23ಕ್ಕೆ ಮುಕ್ತಾಯಗೊಳ್ಳಲಿದ್ದು, ವರ್ಷಾಂತ್ಯದಲ್ಲೇ ಮತದಾನ ನಡೆಯುವ ನಿರೀಕ್ಷೆಯಿದೆ. ಪರಿಷತ್ತಿನ ಬೈಲಾ ತಿದ್ದುಪಡಿಯ ನಂತರ ಅಧಿಕಾರಾವಧಿಯನ್ನು ಮೂರರಿಂದ ಐದು ವರ್ಷಕ್ಕೆ ವಿಸ್ತರಿಸಲಾಗಿದ್ದು, ಇದು ವಿಸ್ಕೃತ ಅವಧಿಯ ನಂತರ ನಡೆಯುತ್ತಿರುವ ಎರಡನೇ ಚುನಾವಣೆಯಾಗಿದೆ. ಈ ಬಾರಿಯ ಚುನಾವಣೆಗೆ ಹಿರಿಯ ಐಎಎಸ್ ಅಧಿಕಾರಿ ಎ.ಬಿ. ಬಸವರಾಜು ಅವರನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಸಾಪದ ಕೇಂದ್ರ ಸಮಿತಿಯ ಜೊತೆಗೆ 31 ಜಿಲ್ಲಾ ಹಾಗೂ 6 ಗಡಿನಾಡು ಘಟಕಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಅಧ್ಯಕ್ಷೀಯ ಪಟ್ಟಕ್ಕಾಗಿ ಈ ಬಾರಿ ಪ್ರಬಲ ಸ್ಪರ್ಧೆ ಏರ್ಪಟ್ಟಿದೆ. ಸಾಹಿತ್ಯ ಪರಿಷತ್ತಿನ ಪುನರುಜ್ಜಿವನ ಹಾಗೂ ಉನ್ನತ ಸ್ಥಾನಕ್ಕೆ ಮಹಿಳಾ ಪ್ರಾತಿನಿಧ್ಯದ ಆಶಯದೊಂದಿಗೆ ಮಕ್ಕಳ ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಅಖಾಡಕ್ಕಿಳಿಯಲು ಸಿದ್ಧರಾಗಿದ್ದಾರೆ. ಅವರೊಂದಿಗೆ ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ್ ಹಾಗೂ ಹಿರಿಯ ಪತ್ರಕರ್ತ, ಕನ್ನಡ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಅವರು ಪ್ರಮುಖ ಆಕಾಂಕ್ಷಿಗಳಾಗಿ ಮುಂಚೂಣಿಯಲ್ಲಿದ್ದಾರೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಕಸಾಪ ಸದಸ್ಯರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಪ್ರಸ್ತುತ ಪರಿಷತ್ತಿನ ಸದಸ್ಯರ ಸಂಖ್ಯೆ 4.35 ಲಕ್ಷಕ್ಕೆ ತಲುಪಿದೆ. ಆದರೆ ನಿಯಮಗಳ ಪ್ರಕಾರ ಚುನಾವಣೆ ಘೋಷಣೆಯಾದ ದಿನದಿಂದ ಮೂರು ವರ್ಷಗಳ ಮುಂಚಿತವಾಗಿ ಸದಸ್ಯತ್ವ ಪಡೆದವರಿಗೆ ಮಾತ್ರ ಮತದಾನದ ಹಕ್ಕಿರುತ್ತದೆ. ಪ್ರಸ್ತುತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಭರದಿಂದ ಸಾಗುತ್ತಿದ್ದು, ಕರಡು ಪಟ್ಟಿ ಸಿದ್ಧಗೊಂಡ ನಂತರ ಸುಮಾರು 3.45 ಲಕ್ಷದಿಂದ 3.50 ಲಕ್ಷ ಸದಸ್ಯರು ಅಂತಿಮವಾಗಿ ಮತದಾನಕ್ಕೆ ಅರ್ಹತೆ ಪಡೆಯಲಿದ್ದಾರೆ ಎಂದು ಆಡಳಿತಾಧಿಕಾರಿ ಕೆ.ಎ. ದಯಾನಂದ್ ತಿಳಿಸಿದ್ದಾರೆ. 2021ರ ಚುನಾವಣೆಯಲ್ಲಿ 21 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 3.10 ಲಕ್ಷ ಮತದಾರರಿದ್ದರು. ಈ ಬಾರಿ ಮತದಾರರ ಸಂಖ್ಯೆ ಹೆಚ್ಚಿರುವುದರಿಂದ ಚುನಾವಣಾ ಕಣ ಮತ್ತಷ್ಟು ಕಾವು ಪಡೆದುಕೊಂಡಿದೆ.

ಪೋಕ್ಸೋ ಕೇಸ್ ಪುತ್ರನಿಗೆ ನಮ್ಮಬಗ್ಗೆ ಮಾತಾಡಲು ಯೋಗ್ಯತೆ ಏನಿದೆ – ಶಿವರಾಜ್ ತಂಗಡಗಿ ಪ್ರಹಾರ
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್‌ ತಂಗಡಗಿ(Shivaraj S Tangadagi) ಅವರು ತೀವ್ರ ವಾಗ್ದಾಳಿ ನಡೆಸಿದ್ದು, ವಿಜಯೇಂದ್ರ ಅವರ ಆರೋಪಗಳು “ಅವಿವೇಕತನ ಹಾಗೂ ಕೀಳು ಮಟ್ಟದ ಭಾಷಣ” ಎಂದು ಕಿಡಿಕಾರಿದ್ದಾರೆ. ತಮ್ಮ ವಿರುದ್ಧ ವಿಜಯೇಂದ್ರ ಏಕವಚನದಲ್ಲಿ ಮಾತನಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಸಾಮಾಜಿಕ ಜಾಲತಾಣದ ಮೂಲಕ ಸಾಲು ಸಾಲು ಪ್ರಶ್ನೆಗಳನ್ನು ಎಸೆದಿದ್ದಾರೆ.

ವಯಸ್ಸು, ಅನುಭವದಲ್ಲಿ ನಾನು ನಿಮಗಿಂತ ಹಿರಿಯ: ಸಂಸ್ಕಾರದ ಪಾಠ

“ರಾಜಕೀಯ ಅನುಭವ, ವಯಸ್ಸು ಮತ್ತು ಜನಸೇವೆಯಲ್ಲಿ ನಾನು ನಿಮಗಿಂತ ಹಿರಿಯ. ಹಿರಿಯರಿಗೆ ಏಕವಚನದಲ್ಲಿ ಮಾತನಾಡಿದರೆ ದೊಡ್ಡವರಾಗುತ್ತೇವೆ ಅಂದುಕೊಂಡಿರುವುದು ನಿಮ್ಮ ದಡ್ಡತನ. ನನಗೂ ನಿಮಗಿಂತ ಕೀಳು ಭಾಷೆಯಲ್ಲಿ ಮಾತನಾಡಲು ಬರುತ್ತದೆ, ಆದರೆ ನನಗೆ ಸಂಸ್ಕಾರವಿದೆ. ಕ್ಷೇತ್ರದ ಜನ ನನಗೆ ಆಶೀರ್ವಾದ ಮಾಡಿದ್ದು ಜನಸೇವೆಗೆ ಹೊರತು ಬಾಯಿ ನಂಜು ಮಾಡಿಕೊಳ್ಳಲು ಅಲ್ಲ” ಎಂದು ತಂಗಡಗಿ ತಿರುಗೇಟು ನೀಡಿದ್ದಾರೆ. ವಿಜಯೇಂದ್ರ ಅವರ ಈ ಹೇಳಿಕೆಗಳು ಅಲುಗಾಡುತ್ತಿರುವ ತಮ್ಮ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ನಡೆಸುತ್ತಿರುವ “ಸ್ಮಶಾನ ರೋದನೆ” ಎಂದು ಲೇವಡಿ ಮಾಡಿದ್ದಾರೆ.

ಸುರಂಗ ರಸ್ತೆ ಯೋಜನೆಯಲ್ಲಿ ₹40,000 ಕೋಟಿ ನಿಧಿ ಅಡಗಿದೆ: ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪ್ರಸ್ತಾಪಿಸಲಾಗಿರುವ ಸುರಂಗ ರಸ್ತೆ (ಟನಲ್ ರೋಡ್) ಯೋಜನೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರಲು ತೀವ್ರ ಹಠ ಹಿಡಿದಿದೆ. ಈ ಯೋಜನೆಯ ಕೊನೆಯಲ್ಲಿ ₹40,000 ಕೋಟಿ ಮೌಲ್ಯದ ನಿಧಿ ಅಡಗಿದೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರಂಗ ರಸ್ತೆ ನಿರ್ಮಾಣದ ನೆಪದಲ್ಲಿ ನಗರದ ಉದ್ಯಾನವನಗಳು, ಕೆರೆಗಳು ಹಾಗೂ ವೈಜ್ಞಾನಿಕ ನಗರ ಯೋಜನೆಯನ್ನು ರಕ್ಷಿಸುವ ಪ್ರಮುಖ ಕಾನೂನುಗಳನ್ನು ಸರ್ಕಾರ ಬಲಿಕೊಟ್ಟಿದೆ ಎಂದು ಆರೋಪಿಸಿದರು.

ಸುರಂಗ ರಸ್ತೆ ಯೋಜನೆಗಾಗಿ ಸ್ಯಾಂಕಿ ಕೆರೆ, ಲಾಲ್‌ಬಾಗ್ ಮತ್ತು ಎನ್.ಆರ್. ಕಾಲೋನಿಯ ಕೃಷ್ಣರಾವ್ ಪಾರ್ಕ್‌ಗಳ ಜಾಗವನ್ನು ವಶಪಡಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಹೈಕೋರ್ಟ್‌ನಲ್ಲಿ ಎದುರಾಗಬಹುದಾದ ಕಾನೂನು ತೊಡಕುಗಳನ್ನು ತಪ್ಪಿಸಲು, ಸರ್ಕಾರವು ಉದ್ಯಾನವನ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದು ಶೇ. 5ರಷ್ಟು ಪಾರ್ಕ್ ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಹಾಗೂ ಮಾರಾಟ ಮಾಡಲು ಕಾನೂನುಬದ್ಧಗೊಳಿಸಿತ್ತು.

ಸಾರ್ವಜನಿಕರ ತೀವ್ರ ಪ್ರತಿಭಟನೆಯ ನಂತರ ಈ ತಿದ್ದುಪಡಿಯನ್ನು ಮರುಪರಿಶೀಲಿಸುವುದಾಗಿ ಸರ್ಕಾರ ಹೇಳಿದೆಯಾದರೂ, ಹಿಂದಿನ ಕಾಯ್ದೆಯನ್ನೇ ಸಂಪೂರ್ಣವಾಗಿ ಮರುಸ್ಥಾಪಿಸುವವರೆಗೆ ನಾಗರಿಕರ ಹೋರಾಟ ಮುಂದುವರಿಯಲಿದೆ ಎಂದರು.

ಇದಲ್ಲದೆ, ಹೆಬ್ಬಾಳ ಕೆರೆ ವ್ಯಾಪ್ತಿಯಲ್ಲಿ ಕಿರು ಸುರಂಗ ಯೋಜನೆಗಾಗಿ 3.5 ಎಕರೆ ಕೆರೆ ಜಾಗವನ್ನು ಪಡೆಯಲು ರಾಜ್ಯ ಸರ್ಕಾರವು ‘ಕರ್ನಾಟಕ ಕೆರೆ ಸಂರಕ್ಷಣಾ ಕಾಯ್ದೆ’ಗೆ ತಿದ್ದುಪಡಿ ತಂದಿದೆ. ಇದರ ಮೂಲಕ ಕೆರೆಗಳ ಬಫರ್ ವಲಯವನ್ನು 30 ಮೀಟರ್‌ನಿಂದ ಕೇವಲ 3 ಮೀಟರ್‌ಗೆ ಇಳಿಸಲಾಗಿದೆ. ಇದು ವಾಸ್ತವದಲ್ಲಿ ಯಾವುದೇ ಬಫರ್ ವಲಯವೇ ಇಲ್ಲದಂತಹ ಸ್ಥಿತಿಯನ್ನು ನಿರ್ಮಿಸಿದ್ದು, ನಗರದ ಎಲ್ಲಾ ಕೆರೆಗಳ ಅಸ್ತಿತ್ವಕ್ಕೆ ಮಾರಕವಾಗಿದೆ.

ಬೆಂಗಳೂರು ತನ್ನ ನೀರಿನ ಅಗತ್ಯಕ್ಕಾಗಿ ಅಂತರ್ಜಲ ಮತ್ತು ಬೋರ್‌ವೆಲ್‌ಗಳನ್ನು ಅವಲಂಬಿಸಿರುವಾಗ, ಕೆರೆಗಳನ್ನು ನಾಶಪಡಿಸಿದರೆ ನಗರದ ಭವಿಷ್ಯದ ಜಲ ಭದ್ರತೆ ಸಂಪೂರ್ಣವಾಗಿ ಅಪಾಯಕ್ಕೆ ಸಿಲುಕಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ನಗರದ ವೈಜ್ಞಾನಿಕ ಯೋಜನೆಗಾಗಿ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ 18 ವರ್ಷಗಳ ನಾಗರಿಕ ಹೋರಾಟದ ಫಲವಾಗಿ ಜಾರಿಗೆ ತರಲಾಗಿದ್ದ ‘ಬಿಎಂಎಲ್‌ಟಿಎ’ (BMLTA) ಕಾಯ್ದೆಯ ಸೆಕ್ಷನ್ 19 ಅನ್ನು ಕೂಡ ಸರ್ಕಾರ ಹಿಂಪಡೆದಿದೆ ಎಂದು ಸೂರ್ಯ ದೂರಿದರು. ಈ ನಿಯಮದ ಪ್ರಕಾರ ಎಲ್ಲಾ ಮೂಲಸೌಕರ್ಯ ಯೋಜನೆಗಳನ್ನು ಸ್ವತಂತ್ರ ಸಂಸ್ಥೆಯಾದ ಬಿಎಂಎಲ್‌ಟಿಎ ಪರಿಶೀಲನೆಗೆ ಒಳಪಡಿಸಬೇಕಿತ್ತು. ಆದರೆ ಸುರಂಗ ರಸ್ತೆಗೆ ಯಾವುದೇ ತಡೆ ಇರಬಾರದು ಎಂಬ ಕಾರಣಕ್ಕೆ ಈ ಕಾಯ್ದೆಯನ್ನೂ ದುರ್ಬಲಗೊಳಿಸಲಾಗಿದೆ.

ಉದ್ಯಾನವನ, ಕೆರೆ ಸಂರಕ್ಷಣೆ ಮತ್ತು ಬಿಎಂಎಲ್‌ಟಿಎ ಕಾಯ್ದೆಗಳಿಗೆ ತಂದಿರುವ ಜನವಿರೋಧಿ ತಿದ್ದುಪಡಿಗಳನ್ನು ಸರ್ಕಾರ ಸಂಪೂರ್ಣವಾಗಿ ಹಿಂಪಡೆಯುವವರೆಗೂ ಈ ಹೋರಾಟ ಮುಂದುವರಿಯಲಿದೆ ಎಂದು ಅವರು ಎಚ್ಚರಿಸಿದರು.

ಬೆಂಗಳೂರು | ಸಾಲದ ವಿಚಾರಕ್ಕೆ ಮನೆಗೆಲಸದ ಮಹಿಳೆಯ ಅಪಹರಣ, ಬೆತ್ತಲೆಗೊಳಿಸಿ ವಿಡಿಯೋ ಚಿತ್ರೀಕರಣ: ನಾಲ್ವರ ಬಂಧನ
ಬೆಂಗಳೂರು: ಸಾಲ ವಾಪಸ್ ಮಾಡಿಲ್ಲವೆಂಬ ಕಾರಣಕ್ಕೆ 30 ವರ್ಷದ ಗೃಹಕಾರ್ಮಿಕ ಮಹಿಳೆಯೊಬ್ಬರನ್ನು ಅಪಹರಿಸಿ, ಅಕ್ರಮವಾಗಿ ಕೂಡಿಹಾಕಿ, ವಿವಸ್ತ್ರಗೊಳಿಸಿ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ದೂರಿನ ಮೇರೆಗೆ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ದೂರಿನ ಪ್ರಕಾರ, ಸಂತ್ರಸ್ತೆ ನಜಾತ್ ಎಂಬಾಕೆಯ ಬಳಿ ₹50,000 ಹಾಗೂ ರೇಷ್ಮಾ ಎಂಬಾಕೆಯ ಬಳಿ ₹1 ಲಕ್ಷ ಸಾಲ ಪಡೆದುಕೊಂಡಿದ್ದರು. ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಸಕಾಲಕ್ಕೆ ಹಣ ಮರುಪಾವತಿಸಲು ಸಾಧ್ಯವಾಗದಿದ್ದಾಗ ಸಾಲ ನೀಡಿದವರಿಂದ ನಿರಂತರ ಬೆದರಿಕೆಗಳು ಬಂದ ಕಾರಣ ಮಹಿಳೆ ತಮ್ಮ ವಾಸ್ತವ್ಯವನ್ನು ಬೇರೆಡೆಗೆ ಬದಲಾಯಿಸಿದ್ದರು. ಆದರೆ ಆಗಸ್ಟ್ 27 ರಂದು ನಜಾತ್ ತನ್ನ ಮನೆಗೆ ಬರುವಂತೆ ನಂಬಿಸಿ ಮಹಿಳೆಯನ್ನು ಕರೆಸಿಕೊಂಡಿದ್ದಾಳೆ. ‌

ಅಲ್ಲಿಗೆ ನುಗ್ಗಿದ ರೇಷ್ಮಾ, ಆಕೆಯ ಪತಿ ಸುಹೇಲ್ ಹಾಗೂ ಇತರರು ಮಹಿಳೆಯ ಮೇಲೆ ಚಾಕು ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿ ಮೊಬೈಲ್ ಫೋನ್ ಪುಡಿಮಾಡಿದ್ದಾರೆ. ನಂತರ ಮಹಿಳೆ ಹಾಗೂ ಆಕೆಯ ಪುಟ್ಟ ಮಗನನ್ನು ಬಲವಂತವಾಗಿ ಆಟೋರಿಕ್ಷಾದಲ್ಲಿ ಕುಂಬಳಗೋಡಿನಲ್ಲಿರುವ ರೇಷ್ಮಾ ಮನೆಗೆ ಅಪಹರಿಸಿಕೊಂಡು ಹೋಗಿದ್ದಾರೆ.

ಮರುದಿನ ಸುಹೇಲ್ ಬಾಲಕನನ್ನು ಆತನ ಅಜ್ಜಿಯ ಮನೆಯ ಬಳಿ ಬಿಟ್ಟು ಬಂದಿದ್ದು, ಮಹಿಳೆಯನ್ನು ಮಾತ್ರ ಮನೆಯಲ್ಲೇ ಕೂಡಿಹಾಕಿ ನಿರಂತರವಾಗಿ ದೈಹಿಕ ಹಿಂಸೆ ನೀಡಲಾಗಿದೆ. ಬಡ್ಡಿ ಸೇರಿ ₹11 ಲಕ್ಷ ನೀಡುವಂತೆ ಒತ್ತಾಯಿಸಿ ಮಹಿಳೆಯನ್ನು ಬೆತ್ತಲೆಗೊಳಿಸಿ ಮೊಬೈಲ್‌ನಲ್ಲಿ ಅಸಭ್ಯ ವಿಡಿಯೋ ಚಿತ್ರೀಕರಿಸಿಕೊಳ್ಳಲಾಗಿತ್ತು. ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ವಕೀಲರೊಬ್ಬರ ಮುಂದೆ ಬಲವಂತವಾಗಿ ಪತ್ರಗಳಿಗೆ ಸಹಿ ಹಾಕಿಸಿಕೊಳ್ಳಲಾಗಿತ್ತು. ಕೊನೆಗೆ ಆಗಸ್ಟ್ 31 ರಂದು ಹೇಗೋ ಪೊಲೀಸರಿಗೆ ಮಾಹಿತಿ ಮುಟ್ಟಿಸಲು ಯಶಸ್ವಿಯಾದ ಮಹಿಳೆಯನ್ನು ಕುಂಬಳಗೋಡಿನ ಮನೆಯಿಂದ ರಕ್ಷಿಸಲಾಗಿದೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ನಜಾತ್ (ಎ1), ರೇಷ್ಮಾ (ಎ2), ಸುಹೇಲ್ (ಎ3) ಮತ್ತು ಸೈಫ್ (ಎ4) ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಹಲವು ಕಠಿಣ ಸೆಕ್ಷನ್‌ಗಳು ಹಾಗೂ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66(ಇ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫುಟ್‌ಪಾತ್‌ ಒತ್ತುವರಿ ಮಾಡಿದ್ರೆ ಎಫ್‌ಐಆರ್ ದಾಖಲು – ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ನಗರದ ವಿವಿಧೆಡೆ ಈಗಾಗಲೇ ತೆರವುಗೊಳಿಸಿರುವ ಫುಟ್‌ಪಾತ್‌ಗಳಲ್ಲಿ ಮತ್ತೆ  ಒತ್ತುವರಿ (footpath encroachers) ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು (Greater Bengaluru Development) ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಫುಟ್‌ಪಾತ್ ಒತ್ತುವರಿ ಕುರಿತಂತೆ ನಡೆದ ವರ್ಚುವಲ್‌ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆ ಪರಿಶೀಲಿಸಿದ ಸಚಿವರು, ಒತ್ತುವರಿ ತೆರವುಗೊಳಿಸಿದ ಬಳಿಕ ಅದೇ ಸ್ಥಳದಲ್ಲಿ ಮತ್ತೆ ಒತ್ತುವರಿ ಕಾಣಿಸಿಕೊಳ್ಳುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಶಾಶ್ವತ ವ್ಯವಸ್ಥೆ ರೂಪಿಸಬೇಕು. ಪ್ರತಿ ನಗರ ಪಾಲಿಕೆ ವ್ಯಾಪ್ತಿಯಲ್ಲೂ ಪೊಲೀಸ್ ಮತ್ತು ಪಾಲಿಕೆ ಅಧಿಕಾರಿಗಳನ್ನೊಳಗೊಂಡ ಜಂಟಿ ಟಾಸ್ಕ್‌ಫೋರ್ಸ್ ಇರಬೇಕು. ತೆರವುಗೊಳಿಸಿರುವ ಫುಟ್‌ಪಾತ್‌ಗಳನ್ನು ನಿಯಮಿತವಾಗಿ ಹಾಗೂ ಅನಿರೀಕ್ಷಿತವಾಗಿ ಪರಿಶೀಲಿಸಬೇಕು. ಮರು ಒತ್ತುವರಿ ಕಂಡುಬಂದರೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಬೈರೇಗೌಡ ನಿರ್ದೇಶಿಸಿದರು.

ಮರುಒತ್ತುವರಿ ಪ್ರಕರಣಗಳನ್ನು ತಕ್ಷಣ ಗುರುತಿಸಿ, ಛಾಯಾಚಿತ್ರ ಹಾಗೂ ಜಿಯೋ-ಟ್ಯಾಗ್‌ ಮಾಡಿದ ದಾಖಲೆಗಳೊಂದಿಗೆ ವರದಿ ಮಾಡಬೇಕು. ಮಾರ್ಷಲ್‌ಗಳು ಮತ್ತು ಬೀಟ್‌ ಪೊಲೀಸರು ಜಂಟಿಯಾಗಿ ನಿಯಮಿತ ತಪಾಸಣೆ ನಡೆಸಬೇಕು. ಎಫ್‌ಐಆರ್ ದಾಖಲಿಸುವುದು, ಒತ್ತುವರಿಗೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳುವುದು ಹಾಗೂ ನಿಯಮಾನುಸಾರ ಹೆಚ್ಚಿನ ದಂಡ ವಿಧಿಸುವುದು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಬೀದಿ ವ್ಯಾಪಾರಕ್ಕೆ ನಿರ್ಬಂಧ ಅಥವಾ ನಿಷೇಧ ಇರುವ ರಸ್ತೆಗಳನ್ನು ಸ್ಪಷ್ಟವಾಗಿ ಗುರುತಿಸಿ, ಹೆಚ್ಚು ಸಂಚಾರವಿರುವ ಪ್ರಮುಖ ರಸ್ತೆಗಳಲ್ಲಿ ಪಾದಚಾರಿಗಳು ಹಾಗೂ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮರುಒತ್ತುವರಿ ಪತ್ತೆ ಹಾಗೂ ಕಾನೂನು ಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರ ಮಟ್ಟದಲ್ಲಿ ಜಂಟಿ ಆದೇಶ/ಸುತ್ತೋಲೆ ಹೊರಡಿಸಬೇಕು ಎಂದು ಸಚಿವರು ನಿರ್ದೇಶಿಸಿದರು.

ಸರ್ಕಾರಿ ಬಸ್ ಪ್ರಯಾಣ ದರ ಶೀಘ್ರ ಏರಿಕೆ – ಜನಸಾಮಾನ್ಯರಿಗೆ ಮತ್ತೆ ಶಾಕ್
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆಯಿಂದ ಈಗಾಗಲೇ ಕಂಗೆಟ್ಟಿರುವ ಸಾರ್ವಜನಿಕರಿಗೆ ಶೀಘ್ರದಲ್ಲೇ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು (Bus Price) ಶೀಘ್ರವೇ ಪರಿಷ್ಕರಣೆ (Big Shocking News) ಮಾಡಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಸಾರಿಗೆ ಸಚಿವ ಭೈರತಿ ಸುರೇಶ್ (Byrathi Suresh) ದರ ಏರಿಕೆಯ ಸುಳಿವು ನೀಡಿದ್ದಾರೆ.

ಸಾರಿಗೆ ಇಲಾಖೆಗೆ ಸಾವಿರಾರು ಕೋಟಿ ರೂಪಾಯಿ ನಷ್ಟ

ಕಳೆದ ಎಂಟು ತಿಂಗಳಿನಿಂದ ಕೇಂದ್ರ ಸರ್ಕಾರವು ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ದರವನ್ನು ಸತತವಾಗಿ ಏರಿಸುತ್ತಾ ಬಂದಿದ್ದರೂ, ರಾಜ್ಯ ಸರ್ಕಾರವು ಬಸ್ ಪ್ರಯಾಣ ದರವನ್ನು ಹೆಚ್ಚಿಸದೆ ಹಾಗೆಯೇ ಕಾಯ್ದುಕೊಂಡಿತ್ತು. ಇದರಿಂದಾಗಿ ರಾಜ್ಯದ ಸಾರಿಗೆ ನಿಗಮಗಳು ಸಾವಿರಾರು ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಈ ನಷ್ಟದ ಹೊರೆಯನ್ನು ಸರಿದೂಗಿಸಲು ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ದರ ಪರಿಷ್ಕರಣೆಯ ಕುರಿತು ಅಧ್ಯಯನ ನಡೆಸುತ್ತಿರುವ ಈ ಸಮಿತಿಯು ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ರಾಜ್ಯದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕರಿಗೆ ಅತಿಯಾದ ಹೊರೆಯಾಗದಂತೆ ಅಲ್ಪ ಪ್ರಮಾಣದಲ್ಲಿ ಪ್ರಯಾಣ ದರ ಪರಿಷ್ಕರಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಸರ್ಕಾರದ ಪ್ರಮುಖ ‘ಶಕ್ತಿ’ ಯೋಜನೆಯ ಕುರಿತು ಮಾತನಾಡಿದ ಅವರು, ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಕಲ್ಪಿಸಲಾಗಿರುವ ಉಚಿತ ಪ್ರಯಾಣ ಸೌಲಭ್ಯವನ್ನು ಇನ್ನಷ್ಟು ಸರಳಗೊಳಿಸಲು ಮೊದಲ ಹಂತದಲ್ಲಿ ಒಂದು ಕೋಟಿಗೂ ಅಧಿಕ ಮಹಿಳಾ ಫಲಾನುಭವಿಗಳಿಗೆ ಉಚಿತ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಲಾಗುವುದು. ಸುಮಾರು 250 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಗೊಳ್ಳಲಿರುವ ಈ ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಗೆ ಶೀಘ್ರದಲ್ಲೇ ಅಧಿಕೃತ ಚಾಲನೆ ಸಿಗಲಿದೆ.

BMTC ಟೀಮ್‌ ಸೇರಲಿದೆ 4,500 ಇ-ಬಸ್‌ಗಳು

ಇನ್ನೊಂದೆಡೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಇತಿಹಾಸದಲ್ಲೇ ಪ್ರಥಮ ಬಾರಿಗೆ ಬೃಹತ್ ಪ್ರಮಾಣದ ಎಲೆಕ್ಟ್ರಿಕ್ ಬಸ್‌ಗಳನ್ನು ಸೇರ್ಪಡೆಗೊಳಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಕೇಂದ್ರ ಸರ್ಕಾರದ ‘ಪಿಎಂ ಇ-ಡ್ರೈವ್’ ಯೋಜನೆಯಡಿ ಒಟ್ಟು 4,500 ಪರಿಸರ ಸ್ನೇಹಿ ಇ-ಬಸ್‌ಗಳು ಬಿಎಂಟಿಸಿ ಪಡೆ ಸೇರಲಿವೆ. ಈ ಯೋಜನೆಗಾಗಿ ರಾಜ್ಯ ಸರ್ಕಾರವು ವರ್ಷಕ್ಕೆ 600 ಕೋಟಿ ರೂಪಾಯಿಯಂತೆ, ಮುಂದಿನ 20 ವರ್ಷಗಳಲ್ಲಿ ಒಟ್ಟು 12,000 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಿದೆ. ಈ ಬಸ್‌ಗಳಲ್ಲಿ 12 ಮೀಟರ್ ಉದ್ದದ 3,800 ಬಸ್‌ಗಳು ಹಾಗೂ 9 ಮೀಟರ್ ಉದ್ದದ 900 ಬಸ್‌ಗಳಿರಲಿದ್ದು, ಇವುಗಳಲ್ಲಿ 400 ಎಸಿ ಇ-ಬಸ್‌ಗಳು ಸೇರಿವೆ. ಈ ಇ-ಬಸ್‌ಗಳ ಆಗಮನದಿಂದ ಸಿಲಿಕಾನ್ ಸಿಟಿಯಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಲಿದೆ. ಜೊತೆಗೆ, ಸಾರಿಗೆ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರದಿಂದ 2,000 ಕೋಟಿ ರೂಪಾಯಿ ಸಾಲ ಪಡೆದು, ರಾಜ್ಯಾದ್ಯಂತ ಹೊಸ ಬಸ್ ಡಿಪೋಗಳ ನಿರ್ಮಾಣ ಹಾಗೂ ಹಳೆಯ ನಿಲ್ದಾಣಗಳ ನವೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ತಪ್ಪಿತಸ್ಥರಲ್ಲದವರನ್ನು ಶಿಕ್ಷಿಸಬೇಡಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಂದ ಮನವಿ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶುವೈದ್ಯಾಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮದ ಆರೋಪ ಎದುರಿಸದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ತಕ್ಷಣವೇ ನೇಮಕಾತಿ ಆದೇಶ ನೀಡುವಂತೆ ಆಯ್ಕೆಯಾದ ಅಭ್ಯರ್ಥಿಗಳ ಸಮಿತಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಅಕ್ರಮದ ಆರೋಪ ಎದುರಿಸುತ್ತಿರುವವರನ್ನು ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ಪ್ರಾಮಾಣಿಕರಿಗೆ ಶೀಘ್ರ ನೇಮಕಾತಿ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿನ 400 ಪಶುವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ 2024ರ ಜುಲೈನಲ್ಲಿ ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿತ್ತು. 2026ರ ಜುಲೈ 17ರಂದು ಪ್ರಕಟಗೊಂಡ ಅಂತಿಮ ಆಯ್ಕೆ ಪಟ್ಟಿಯಲ್ಲಿ 329 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದು, ಸೂಕ್ತ ಅಭ್ಯರ್ಥಿಗಳಿಲ್ಲದೆ 71 ಹುದ್ದೆಗಳು ಖಾಲಿ ಉಳಿದಿದ್ದವು. ಆದರೆ, ಅಕ್ರಮದ ಶಂಕೆಯ ಹಿನ್ನೆಲೆಯಲ್ಲಿ 29 ಅಭ್ಯರ್ಥಿಗಳ ಹೆಸರುಗಳನ್ನು ಒಳಗೊಂಡ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದ್ದು, ಇಡೀ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದೆ.

ತನಿಖೆಯನ್ನು ಸ್ವಾಗತಿಸಿರುವ ಅಭ್ಯರ್ಥಿಗಳು, ಸುಪ್ರೀಂ ಕೋರ್ಟ್‌ನ ‘ಜೋಗಿಂದರ್ ಪಾಲ್ ವಿರುದ್ಧ ಪಂಜಾಬ್ ಸರ್ಕಾರ (2015)’ ತೀರ್ಪನ್ನು ಉಲ್ಲೇಖಿಸಿ, “ನ್ಯಾಯಾಲಯದ ಮಾರ್ಗಸೂಚಿಯಂತೆ ಅಕ್ರಮವೆಸಗಿದವರನ್ನು ಮತ್ತು ಪ್ರಾಮಾಣಿಕರನ್ನು ಪ್ರತ್ಯೇಕಿಸಿ ನೇಮಕಾತಿ ಪ್ರಕ್ರಿಯೆ ಮುಂದುವರಿಸಬೇಕು. ತನಿಖೆಯ ನೆಪದಲ್ಲಿ ತನಿಖಾ ಸಂಸ್ಥೆಗೆ ಸಂಪೂರ್ಣ ಸಹಕಾರ ನೀಡುತ್ತಿರುವ ಸುಮಾರು 300 ನಿರಪರಾಧಿ ಅಭ್ಯರ್ಥಿಗಳ ಭವಿಷ್ಯವನ್ನು ಅತಂತ್ರಗೊಳಿಸುವುದು ಸರಿಯಲ್ಲ” ಎಂದು ಪ್ರತಿಪಾದಿಸಿದ್ದಾರೆ. ರಾಜ್ಯದಲ್ಲಿ 2016-17ರ ನಂತರ ಯಾವುದೇ ಹೊಸ ನೇಮಕಾತಿ ನಡೆದಿಲ್ಲ.

ಮಂಜೂರಾದ 3,432 ಹುದ್ದೆಗಳ ಪೈಕಿ 1,449 ಹುದ್ದೆಗಳು ಖಾಲಿ ಇದ್ದು, ಗ್ರಾಮೀಣ ಭಾಗದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆ ಮತ್ತು ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಸಿಐಡಿಯಿಂದ ಒಂದು ತಿಂಗಳೊಳಗೆ ಮಧ್ಯಂತರ ವರದಿ ಪಡೆದು, ಕ್ಲೀನ್‌ಚಿಟ್ ಪಡೆದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಹೊರಡಿಸಬೇಕೆಂದು ಅಭ್ಯರ್ಥಿಗಳು ಸರ್ಕಾರವನ್ನು ಕೋರಿದ್ದಾರೆ.

ಕೇರಳ ಕರ್ನಾಟಕ, ದಕ್ಷಿಣ ಭಾರತದಲ್ಲಿ ED ಭರ್ಜರಿ ದಾಳಿ – 30 ಕಡೆ ಶೋಧ
ಬೆಂಗಳೂರು: ‘ನಶಾ ಮುಕ್ತ ಭಾರತ’ (ಮಾದಕ ವಸ್ತು ಮುಕ್ತ ಭಾರತ) ಅಭಿಯಾನದಡಿ ಜಾರಿ ನಿರ್ದೇಶನಾಲಯ (ED) ಗುರುವಾರ ದಕ್ಷಿಣ ಭಾರತದ ವಿವಿಧ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆ ನಡೆಸಿದೆ.

ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳ ಒಟ್ಟು 30 ಸ್ಥಳಗಳಲ್ಲಿ ಈ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಭಾರತದ ವಿವಿಧ ರಾಜ್ಯಗಳ ತನಿಖಾ ಸಂಸ್ಥೆಗಳು ಹಾಗೂ ಮಾದಕ ವಸ್ತು ನಿಯಂತ್ರಣ ಬ್ಯೂರೋ (NCB) ದಾಖಲಿಸಿರುವ ಹಲವು ಮಾದಕ ವಸ್ತು ಸಂಬಂಧಿತ ಪ್ರಕರಣಗಳ ಆರೋಪಿಗಳು ಹಾಗೂ ಶಂಕಿತರೊಂದಿಗೆ ಸಂಪರ್ಕ ಹೊಂದಿರುವ 30 ಸ್ಥಳಗಳಲ್ಲಿ ED ಏಕಕಾಲದಲ್ಲಿ ಶೋಧ ನಡೆಸಿದೆ.

ಈ ಪ್ರಕರಣಗಳನ್ನು 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ED ತನಿಖೆ ನಡೆಸುತ್ತಿದೆ. PMLA ಕಾಯ್ದೆಯ ಸೆಕ್ಷನ್ 17ರ ಅಡಿಯಲ್ಲಿ ಈ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ತಮಿಳುನಾಡಿನ ಚೆನ್ನೈನಲ್ಲಿ 7 ಸ್ಥಳಗಳು, ರಾಮನಾಥಪುರಂನಲ್ಲಿ 2, ನಾಗಪಟ್ಟಿಣಂ ಮತ್ತು ವೇಲಾಂಕಣ್ಣಿಯಲ್ಲಿ 6 ಹಾಗೂ ತಿರುನೆಲ್ವೇಲಿಯಲ್ಲಿ ಒಂದು ಸ್ಥಳದಲ್ಲಿ ಶೋಧ ನಡೆದಿದೆ.

ಕರ್ನಾಟಕದ ಕೋಲಾರ, ಮಾಲೂರು ಮತ್ತು ಹೊಸಕೋಟೆ ಪ್ರದೇಶಗಳಲ್ಲಿ 3 ಸ್ಥಳಗಳಲ್ಲೂ ಕಾರ್ಯಾಚರಣೆ ನಡೆದಿದೆ. ತೆಲಂಗಾಣದ ಕೆಲ ಪ್ರದೇಶಗಳಲ್ಲೂ ಶೋಧ ನಡೆಸಲಾಗಿದೆ. ಕೇರಳದ ಕೊಚ್ಚಿ, ಕೋಯಿಕ್ಕೋಡ್ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಆರೋಪಿಗಳಿಗೆ ಸಂಬಂಧಿಸಿದ ತಲಾ ನಾಲ್ಕು ಸ್ಥಳಗಳಲ್ಲೂ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗುರುವಾರ ಮುಂಜಾನೆಯೇ ಭದ್ರತಾ ಸಿಬ್ಬಂದಿ ಹಾಗೂ ವಿವಿಧ ರಾಜ್ಯಗಳ ಪೊಲೀಸ್ ಪಡೆಗಳ ಸಹಕಾರದೊಂದಿಗೆ ದಾಳಿ ಆರಂಭಿಸಲಾಯಿತು. PMLA ಅಡಿಯಲ್ಲಿ ED ತನಿಖೆ ನಡೆಸುತ್ತಿರುವ 8 ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಶೋಧ ಕಾರ್ಯಾಚರಣೆ ನಡೆದಿದೆ. ಈ ಪೈಕಿ 4 ಪ್ರಕರಣಗಳು ತಮಿಳುನಾಡಿಗೆ, 2 ಕೇರಳಕ್ಕೆ ಹಾಗೂ ತಲಾ ಒಂದು ಪ್ರಕರಣ ಕರ್ನಾಟಕ ಮತ್ತು ತೆಲಂಗಾಣಕ್ಕೆ ಸಂಬಂಧಿಸಿವೆ.

“ನಶಾ ಮುಕ್ತ ಭಾರತ ಅಭಿಯಾನದಡಿ ದಕ್ಷಿಣ ಭಾರತದ ಎಲ್ಲ ವಲಯಗಳಲ್ಲಿ ಮಾದಕ ವಸ್ತುಗಳಿಗೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ಒಟ್ಟು 30 ಸ್ಥಳಗಳಲ್ಲಿ ED ಏಕಕಾಲದಲ್ಲಿ ಬೃಹತ್ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಕೇರಳ, ಕರ್ನಾಟಕ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈ ಸ್ಥಳಗಳು ಹರಡಿಕೊಂಡಿವೆ. PMLA ಅಡಿಯಲ್ಲಿ ತನಿಖೆ ನಡೆಯುತ್ತಿರುವ 8 ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಶೋಧ ನಡೆಯುತ್ತಿದೆ. ತನಿಖೆ ಮುಂದುವರಿದಿದೆ” ಎಂದು ಕಾರ್ಯಾಚರಣೆಗೆ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ಶೇ. 7.8 ರಷ್ಟು ಆರ್ಥಿಕ ಬೆಳವಣಿಗೆ ಎಂದ ಮೋದಿ – ಕಾಂಗ್ರೆಸ್ ನಿಂದ ಪ್ರಶ್ನೆಗಳ ಸುರಿಮಳೆ
ಬೆಂಗಳೂರು: ಜಿಡಿಪಿ ಬೆಳವಣಿಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನಿ ಮೋದಿ ಸರ್ಕಾರಕ್ಕೆ ಕೆಲವು ಪ್ರಶ್ನೆಗಳನ್ನು ಕೇಳಿದೆ.  ಕಾಂಗ್ರೆಸ್ ಹಿರಿಯ ನಾಯಕ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪಕ್ಷದ ಹೇಳಿಕೆಯನ್ನು ಬಿಡುಗಡೆ ಮಾಡಿ, ಮೋದಿ ಸರ್ಕಾರಕ್ಕೆ 7.8% ಜಿಡಿಪಿ ಹೇಳಿಕೆಯ ಕುರಿತು ನಾಲ್ಕು ಪ್ರಶ್ನೆಗಳನ್ನು ಕೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇ. 7.8 ರಷ್ಟು ನೈಜ ಜಿಡಿಪಿ ಬೆಳವಣಿಗೆಯನ್ನು ಶ್ಲಾಘಿಸಿದರು, ಇದು ಜನರ “ಸಾಮೂಹಿಕ ಶಕ್ತಿಯ” ಪ್ರತಿಬಿಂಬ ಎಂದು ಕರೆದರು ಮತ್ತು ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿಯವರ ವಿರುದ್ಧ “ಝೂಟ್ ಕಿ ಗೂಂಜ್” ಎಂದು ವಾಗ್ದಾಳಿ ನಡೆಸಿದ್ದರು. ಅವರು ದೇಶದಲ್ಲಿ “ಹತಾಶೆಯನ್ನು ಹರಡುತ್ತಿದ್ದಾರೆ” ಎಂದು ಆರೋಪಿಸಿದರು. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊ ಸಂದೇಶದಲ್ಲಿ, ಪ್ರಧಾನಿ ಮೋದಿ ಭಾರತದ ಜನರ ಕಠಿಣ ಪರಿಶ್ರಮಕ್ಕಾಗಿ ಅವರನ್ನು ಅಭಿನಂದಿಸಿದರು ಮತ್ತು ಯುದ್ಧಗಳು, ಬಿಕ್ಕಟ್ಟುಗಳು ಮತ್ತು ಅಡ್ಡಿಪಡಿಸಿದ ಪೂರೈಕೆ ಸರಪಳಿಗಳು ಸೇರಿದಂತೆ ಜಾಗತಿಕ ಸವಾಲುಗಳ ಹೊರತಾಗಿಯೂ ದೇಶದ ಆರ್ಥಿಕ ಬೆಳವಣಿಗೆ ಬಂದಿದೆ ಎಂದು ಹೇಳಿದರು. ವಿರೋಧ ಪಕ್ಷಗಳು ಸುಳ್ಳುಗಳನ್ನು ಪ್ರತಿಧ್ವನಿಸುತ್ತಿವೆ ಮತ್ತು ಹತಾಶೆಯನ್ನು ಹರಡುತ್ತಿವೆ ಎಂದು ಆರೋಪಿಸಿದರು.