ಬಾಗಲಕೋಟೆ – Peepal Media

ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ: ತಮಿಳುನಾಡಿನತ್ತ ಮುಖ ಮಾಡಿದ ಸರ್ಕಾರ
ಬಾಗಲಕೋಟೆ, ಅಕ್ಟೋಬರ್ 13: ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುತ್ತಾ, ಅವರ ಆರೋಗ್ಯ ಸುಧಾರಣೆಯಾಗುತ್ತಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು.

ಸಚಿವ ಪ್ರಿಯಾಂಕ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ ಎಂದರು.

ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಸಂಬಂಧವಿಲ್ಲ

ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್ ನ ಆರ್ಶೀವಾದವಿರಬೇಕು. ಇಂದಿನ ಭೋಜನಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಎಂದರು.

ನನಗೆ ಮಾಟಮಂತ್ರಗಳಲ್ಲಿ ನಂಬಿಕೆಯಿಲ್ಲ

ಶಾಸಕ ಮುನಿರತ್ನ ಮತ್ತು ಡಿಕೆ ಶಿವಕುಮಾರ್ ಅವರ ನಡೆದ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ಬಾಗ್ ನಂತೆ ಮತ್ತಿಕರೆಯ ಜೆ ಪಿಪಾರ್ಕ್ ದಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ . ನಾನು ಯಾವುದೇ ಮಾಟಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸೂಕ್ತ ಅನುದಾನ ನೀಡಿ, ಮುಂದಿನ ನಾಲ್ಕು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಸಂಪುಟ ಪುನರ್ರಚನೆ

ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜಿನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ರಾಜ್ಯ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ, ಅಕ್ಟೋಬರ್ 13: ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಲ್ಲರ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ,ಇವರ ನೇತೃತ್ವದಲ್ಲಿ ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ ಆಯೋಜಿಸಲಾಗಿದ್ದ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು.

ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಕಂದಾಚಾರ, ಮೌಢ್ಯ ಪಾಲಿಸಿದರೆ ವಿದ್ಯಾವಂತರಾಗಿಯೂ ಪ್ರಯೋಜನವಿಲ್ಲ

ಖಾಯಿಲೆ ಬಂದರೆ ಶರೀರಕ್ಕೆ ಯಾರ ರಕ್ತವಾದರೂ ಕೊಡಿ. ಪ್ರಾಣ ಉಳಿದರೆ ಸಾಕು ಎನ್ನುತ್ತೇವೆ. ಇಂಥವರದ್ದೇ ರಕ್ತ ಕೊಡಿ ಎಂದು ಕೇಳುವುದಿಲ್ಲ. ಗುಣಮುಖರಾದ ನಂತರ ಯಾವ ಜಾತಿ ಎಂದು ಕೇಳುವುದು ನ್ಯಾಯವೇ ಎಂದು ಸಿಎಂ ಪ್ರಶ್ನಿಸಿದರು. ಬಸವಣ್ಣನವರು ದಯೆ ಇಲ್ಲದ ಧರ್ಮ ಯಾವುದಯ್ಯ? ದಯೆಯೇ ಧರ್ಮದ ಮೂಲ ಎಂದು ಹೇಳಿದ್ದಾರೆ. ಇದನ್ನು ತಿಳಿದುಕೊಳ್ಳಬೇಕು. ಯಾರೂ ಹುಟ್ಟುವಾಗ ಇಂಥ ಜಾತಿಯಲ್ಲೇ ಹುಟ್ಟಬೇಕೆಂದು ಅರ್ಜಿ ಹಾಕಿಕೊಳ್ಳುವುದಿಲ್ಲ. ಮೂಲಭೂತವಾಗಿ ನಾವೆಲ್ಲರೂ ಮನುಷ್ಯರು. ಪ್ರಾಣಿಗಳನ್ನು ಪ್ರೀತಿಸುವ ನಾವು ಮನುಷ್ಯರನ್ನು ದ್ವೇಷಿಸುತ್ತೇವೆ. ಜಾತಿ ವ್ಯವಸ್ಥೆಯಿಂದ ಗುಲಾಮಗಿರಿ ಮನೆ ಮಾಡಿಕೊಂಡಿದೆ ಎಂದರು. ವಿದ್ಯಾವಂತರಾದ ಮೇಲೂ ಕಂದಾಚಾರ, ಮೌಢ್ಯ ಪಾಲಿಸಿದರೆ ವಿದ್ಯಾವಂತರಾಗಿಯೂ ಪ್ರಯೋಜನವಿಲ್ಲ ಎಂದರು.

ವಿದ್ಯೆ ಯಾರ ಸ್ವತ್ತೂ ಅಲ್ಲ

ನಮ್ಮ ಸಮಾಜದ ಬಹುತೇಕ ಜನ ಅವಿದ್ಯಾವಂತರಾಗಿದ್ದಾರೆ. ಶೂದ್ರರಿಗೆ ಹಾಗೂ ಮಹಿಳೆಯರಿಗೆ ವಿದ್ಯೆ ಕಲಿಯುವ ಅವಕಾಶವಿರಲಿಲ್ಲ. ವಿದ್ಯೆ ಯಾರ ಸ್ವತ್ತೂ ಅಲ್ಲ. ಈ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡಿದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಮೂಢನಂಬಿಕೆ, ಕಂದಾಚಾರಗಳ ವಿರುದ್ಧ ಬಸವಣ್ಣನವರು ವಚನಗಳನ್ನು ರಚಿಸಿದ್ದಾರೆ. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಜಡತ್ವವಿರುವ ವ್ಯವಸ್ಥೆಯಾಗಿರುವುದರಿಂದ ಇಷ್ಟು ವರ್ಷಗಳಾದರೂ ಬದಲಾವಣೆಯಾಗಿಲ್ಲ. ಜಾತ್ಯತೀತ ಸಮಾಜ ನಿರ್ಮಾಣವಾಗಲು ಸಾಧ್ಯವಾಗಿಲ್ಲ ಎಂದರು. ಸಮಾಜದ ಅಸಮಾನತೆಯನ್ನು ತೊಡೆದುಹಾಕುವವರೆಗೆ ಸ್ವಾತಂತ್ರ್ಯ ಯಶಸ್ವಿಯಾಗುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ ಎಂದರು. ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಅಸಮಾನತೆಗಳನ್ನು ತೊಡೆದುಹಾಕದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂಬ ಎಚ್ಚರಿಕೆಯನ್ನೂ ಅವರು ಕೊಟ್ಟಿದ್ದಾರೆ ಎಂದು ತಿಳಿಸಿದರು.

ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ: ಖಂಡಿಸಬೇಕು

ಇತ್ತೀಚೆಗೆ ಸನಾತನ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿದ್ದಾರೆ. ಯಾವ ಧರ್ಮವೂ ದ್ವೇಷಿಸಬೇಕು ಎಂದು ಹೇಳುವುದಿಲ್ಲ. ಕಾನೂನು ಓದಿರುವ ವಕೀಲನೊಬ್ಬ ರೀತಿ ಮಾಡುವುದನ್ನು ನಾವು ಖಂಡಿಸಬೇಕು. ಸಹಿಸಿಕೊಳ್ಳಬಾರದು. ಇಂಥವೆಲ್ಲಾ ನಡೆದರೆ ಸಮಾಜದಲ್ಲಿ ಶಾಂತಿ ಎಲ್ಲಿ ನೆಲೆಸುತ್ತದೆ ಎಂದರು.

ಚಕ್ರವರ್ತಿ ದಾನೇಶ್ವರ ಸ್ವಾಮೀಜಿ, ಅಬಕಾರಿ ಸಚಿವ ಬಿ. ಬಿ ತಿಮ್ಮಾಪುರ, ಮಾಜಿ ಸಚಿವರು ಹಾಗೂ ಮೇಲ್ಮನೆ ಸದಸ್ಯೆ ಉಮಾಶ್ರೀ, ವಿಜಯಾನಂಧ ಕಾಶಪ್ಪನವರ್, ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಂಜಯ್ಯ್ ಮಠ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಮಾಜಿ ಶಾಸಕ ನಂದ ನ್ಯಾಮದಾಳ, ಮೊದಲಾದವರು ಉಪಸ್ಥಿತರಿದ್ದರು.

ನನ್ನ ಪೀಠ ಜನರ ಹೃದಯದಲ್ಲಿದೆ, ಅಲ್ಲಿಂದ ನನ್ನನ್ನು ಉಚ್ಛಾಟಿಸಲು ಸಾಧ್ಯವಿಲ್ಲ: ಬಸವ ಜಯಮೃತ್ಯುಂಜಯ ಸ್ವಾಮಿ
ಕೂಡಲಸಂಗಮ: “ಜಗತ್ತಿನಲ್ಲಿ ಯಾರೂ ನನ್ನನ್ನು ಉಚ್ಚಾಟಿಸುವ ಅಧಿಕಾರ ಹೊಂದಿಲ್ಲ. ನಾನು ಭಕ್ತರ ಹೃದಯದಲ್ಲಿ ಪೀಠವನ್ನು ಕಟ್ಟಿದ್ದೇನೆ. ಪೀಠಕ್ಕೂ ಮತ್ತು ಟ್ರಸ್ಟಿಗೂ ಯಾವುದೇ ಸಂಬಂಧವಿಲ್ಲ” ಎಂದು ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮಿ ಹೇಳಿದ್ದಾರೆ.

ಸೋಮವಾರ ಕೂಡಲಸಂಗಮದ ಸಂಗಮೇಶ್ವರ ದೇವಾಲಯದ ಆವರಣದಲ್ಲಿ ನಡೆದ ಖಂಡನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಧರ್ಮಗುರುಗಳನ್ನು ಉಚ್ಚಾಟಿಸುವ ಅಧಿಕಾರ ಇರುವುದು ದೇವರಿಗೆ ಮತ್ತು ದೇವಸ್ವರೂಪಿ ಭಕ್ತರಿಗೆ ಮಾತ್ರ. ಉಚ್ಚಾಟನೆ ಏಕಪಕ್ಷೀಯ ಮತ್ತು ಕಾನೂನು ಬಾಹಿರವಾಗಿದೆ. ಭಕ್ತರ ತೀರ್ಮಾನವೇ ಅಂತಿಮ” ಎಂದರು.

ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಕೂಡಲಸಂಗಮದಲ್ಲಿ ರಾಜ್ಯಮಟ್ಟದ ಭಕ್ತರ ಸಭೆ ಕರೆಯುವುದಾಗಿ ತಿಳಿಸಿದ ಸ್ವಾಮೀಜಿ, ಭಕ್ತರು ಹೇಳಿದಂತೆ ನಡೆದುಕೊಳ್ಳುವುದಾಗಿ ಹೇಳಿದರು. ಇಲ್ಲೇ ಮತ್ತೊಂದು ಮಠ ಕಟ್ಟುವ ವಿಚಾರವಿದೆ ಎಂದೂ ತಿಳಿಸಿದರು.

“ಕೂಡಲಸಂಗಮದಲ್ಲಿ 13 ಗುಂಟೆ ಮತ್ತು ದಾವಣಗೆರೆಯಲ್ಲಿ ಭಕ್ತರು ಭೂಮಿ ದಾನ ಮಾಡಿದ್ದಾರೆ. ನಾನು ಯಾವುದೇ ಚಟುವಟಿಕೆ ಮಾಡಿಲ್ಲ, ಭಕ್ತರ ಕಾಣಿಕೆ ಅಥವಾ ಮಠದ ಆಸ್ತಿಯಿಂದ ಯಾವುದೇ ಆಸ್ತಿ ಮಾಡಿಲ್ಲ. ಸುಮ್ಮನೆ ನನ್ನ ತೇಜೋವಧೆ ಮಾಡಬಾರದು. ಕೃತಕ ಬುದ್ಧಿಮತ್ತೆ (AI) ಯಿಂದ ಏನಾದರೂ ಕೃತ್ಯ ಮಾಡಿದರೂ ಅದನ್ನು ಭಕ್ತರು ನಂಬುವುದಿಲ್ಲ. ಜನರಿಗೆ ಸತ್ಯ ಏನು ಎಂಬುದು ಗೊತ್ತಿದೆ. ಏನೇ ಬಂದರೂ ಗಟ್ಟಿಯಾಗಿ ಎದುರಿಸುತ್ತೇನೆ” ಎಂದು ಸ್ವಾಮೀಜಿ ಹೇಳಿದರು.

“ಪಾದಯಾತ್ರೆ ಶುರುವಾದಾಗಿನಿಂದಲೂ ಇಂತಹ ಷಡ್ಯಂತ್ರಗಳು ನಡೆಯುತ್ತಲೇ ಬಂದಿವೆ. ನಾನು ತಲೆಕೆಡಿಸಿಕೊಂಡಿಲ್ಲ. ಭಕ್ತರು ಎಲ್ಲಿ ತೋರಿಸುತ್ತಾರೋ, ಅಲ್ಲಿಯೇ ಪೀಠವನ್ನು ಆರಂಭಿಸುತ್ತೇನೆ” ಎಂದರು.

ಮಧ್ಯಾಹ್ನ ಮೂರು ಗಂಟೆಗೆ ಕೂಡಲಸಂಗಮದ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಶ್ರೀಗಳನ್ನು ಭಕ್ತರು ಸ್ವಾಗತಿಸಿದರು.

ಘೋಷಣೆಗಳನ್ನು ಕೂಗುತ್ತಾ ಕಾಲ್ನಡಿಗೆಯಲ್ಲಿ ಸಂಗಮೇಶ್ವರ ದೇವಾಲಯಕ್ಕೆ ತೆರಳಿದ ಭಕ್ತರು, ದೇವಾಲಯದ ಆವರಣದಲ್ಲಿರುವ ನದಿದಡದ ಆಲದ ಮರದ ಕೆಳಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಮುಖಂಡರಾದ ಬಸವರಾಜ ಕಡಪಟ್ಟಿ, ಮಹಾಂತೇಶ ಕಡಪಟ್ಟಿ, ಮಲ್ಲನಗೌಡ ಪಾಟೀಲ, ವಿಜಯಪುರದ ರುದ್ರಗೌಡ ಪಾಟೀಲ ಮತ್ತು ಬಾಗಲಕೋಟೆಯ ಧರಿಯಪ್ಪ ಸಾಂಗ್ಲೀಕರ್ ಉಪಸ್ಥಿತರಿದ್ದರು.

ತಾಳಿ ಕಟ್ಟಿದ ಕೆಲವೇ ನಿಮಿಷಗಳಲ್ಲಿ ವರನಿಗೆ ಹೃದಯಾಘಾತ, ಸಾವು; ಬಾಗಲಕೋಟೆಯಲ್ಲೊಂದು ಘೋರ ದುರಂತ
ಮದುವೆ ಮನೆ ಎಂದರೆ ಅದೊಂದು ಸಂಭ್ರಮ ಸಡಗರ. ಹೊಸ ಸಂಬಂಧಗಳಿಂದ ವಧು ವರರಾಧಿಯಾಗಿ ಎರಡೂ ಮನೆಯವರು ಖುಷಿ ಮತ್ತು ಲವಲವಿಕೆಯಿಂದ ಇರುವ ಒಂದು ತಾಣ. ಆದರೆ ಇಲ್ಲೊಂದು ಕಡೆ ಮದುವೆ ಮನೆಯಲ್ಲಿ ತಾಳಿ ಕಟ್ಟಿದ ಕೆಲವೇ ನಿಮಿಷಗಳಲ್ಲಿ ವರನಿಗೆ ಹೃದಯಾಘಾತವಾಗಿ ಇಡೀ ಮದುವೆಯ ಸಂಭ್ರಮವೇ ಸೂತಕದ ಮನೆಯಾಗಿ ಮಾರ್ಪಟ್ಟಿದೆ.

ಹೌದು. ಬಾಗಲಕೋಟೆ ಜಿಲ್ಲೆ ಜಮಖಂಡಿ ‌ನಗರದ ನಂದಿಕೇಶ್ವರ ಕಲ್ಯಾಣಮಂಟಪದಲ್ಲಿ ಮದುವೆ ಸಮಾರಂಭದಲ್ಲಿ ವಧುವಿಗೆ ತಾಳಿ ಕಟ್ಟಿದ ಕೆಲವೇ ನಿಮಿಷಗಳಲ್ಲಿ ವರ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದ ನಿವಾಸಿ ಪ್ರವೀಣ ಕುರ್ನೆ ಎಂಬಾತನೇ ಮೃತ ದುರ್ದೈವಿ. ಕಲ್ಯಾಣಮಂಟಪದಲ್ಲಿ ಪ್ರವೀಣ ಕುರ್ನೆ ಹಾಗೂ ಯುವತಿಯ ಮದುವೆ ಸಮಾರಂಭ ನಡೆಸುತ್ತಿತ್ತು. ತಾಳಿ ಕಟ್ಟಿದ ನಂತರ ಆರತಕ್ಷತೆಗೆ ವಧು ವರರನ್ನು ವೇದಿಕೆಗೆ ಕರೆತರುವ ವೇಳೆಗೆ ವರ ಪ್ರವೀಣ್ ಕುರ್ನೆಗೆ ತೀವ್ರ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಾಳಿ ಕಟ್ಟಿದ ಕೆಲವೇ ನಿಮಿಷಗಳಲ್ಲಿ ಮದುಮಗ ಪ್ರವೀಣನಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಬೇಕು ಎನ್ನುವಾಗಲೇ ಮದುವೆ ಮಂಟಪದಲ್ಲಿಯೇ ಕುಸಿದು ಬಿದ್ದು ಸಾವು ಕಂಡಿದ್ದಾನೆ. ಕುಸಿದು ಬಿದ್ದ ಬಳಿಕ ಮಾತನಾಡದೆ ಇರುವುದನ್ನ ಗಮನಿಸಿ ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ವೈದ್ಯರು ಪರೀಕ್ಷೆ ನಡೆಸಿ ಪ್ರವೀಣ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಇದರ ಬೆನ್ನಲ್ಲಿಯೇ ಪೋಷಕರ‌ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ದುರ್ದೈವಿ ಪ್ರವೀಣ ಕುರ್ನೆ ರಾಜ್ಯ ಸೈಕ್ಲಿಂಗ್ ಸಂಘದ ಕಾರ್ಯದರ್ಶಿ ಶ್ರೀಶೈಲ ಕುರ್ನೆ ಪುತ್ರ ಎಂದು ತಿಳಿದು ಬಂದಿದೆ.

ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಾಗಲಕೋಟೆ, ಏಪ್ರಿಲ್ 30: ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯವಾದರೆ ಯುದ್ಧ ಮಾಡಬೇಕು ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಬೇಕು. ಎಲ್ಲರಿಗೂ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೂಡಲಸಂಗಮ ಸಭಾಭವನ ಹತ್ತಿರ ಮಾಧ್ಯಮದರೊಂದಿಗೆ ಮಾತನಾಡಿದರು.
ಹಿಂದೆ ಇಂದಿರಾ ಗಾಂಧಿಯವರು 1971ರಲ್ಲಿ ಯುದ್ಧ ಮಾಡಿ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದರು. ಪಾಕಿಸ್ತಾನದ ಸುಮಾರು 80 ಸಾವಿರ ಸೈನಿಕರು ಶರಣಾಗತರಾಗಿದ್ದರು ಎಂದರು.

ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಮುಖ್ಯ
ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ ಆಗಬೇಕೆಂದು ಹೇಳಿದ್ದು, ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಾರೋ ಅಥವಾ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡುತ್ತಾರೋ ತಿಳಿದಿಲ್ಲ. ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ಮಾಡುವುದಾಗಿ ಹೇಳಿದೆ. ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಯಾಗಬೇಕಿರುವುದು ಬಹಳ ಮುಖ್ಯ ಎಂದರು.

ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗಿದ್ದು, ಈ ಬಗ್ಗೆ ಸಚಿವರು ಲಿಖಿತವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದು, ಅದು ಸಲ್ಲಿಕೆಯಾದ ನಂತರ ಪುನಃ ಸಚಿವ ಸಂಪುಟ ಕರೆದು ಚರ್ಚೆ ಮಾಡುತ್ತೇವೆ ಎಂದರು.

ಮಾನಹಾನಿ ಮಾಡಬಾರದು
ಮೋದಿಯವರ ತಲೆ ಇಲ್ಲದ ಚಿತ್ರ ಹಾಕಿ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು, ಅದನ್ನು ತೆಗೆದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಾಮಾಜಿಕ ಮಾಧ್ಯಮದಲ್ಲಿ ನರೇಂದ್ರ ಮೋದಿಯವರದ್ದಾಗಲಿ ಬೇರೆ ಯಾರದ್ದೇ ಆಗಲಿ ಮಾಡಬಾರದು. ವಾಕ್ ಮತ್ತು ವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಇನ್ನೊಬ್ಬರ ಮಾನಹಾನಿ ಮಾಡಬಾರದು ಎಂದರು.

ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮ ಬೆಂಬಲ ಇದೆ
ಉಗ್ರರ ದಾಳಿಯ ನಂತರ ಕೇಂದ್ರ ಸರ್ಕಾರದ ರಾಜತಾಂತ್ರಿಕ ನಡೆಯಿಂದಾಗಿ ತಾಯಿ ಮಕ್ಕಳು ಅಗಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮ ಬೆಂಬಲ ಇದೆ ಎಂದರು.

ಅನರ್ಹ ಬಿಪಿಎಲ್ ಕಾರ್ಡ್ ಮಾತ್ರ ವಾಪಾಸ್ ಪಡೆಯಲಾಗುವುದು: ಅರ್ಹರ ಕಾರ್ಡುಗಳಿಗೆ ತೊಂದರೆ ಇಲ್ಲ: ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ ನ 17: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದರು.

ಬಿಪಿಎಲ್ ಕಾರ್ಡ್ ರದ್ದಾಗುತ್ತಿವೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ ಎಂದು ಮರು ಪ್ರಶ್ನಿಸಿದ ಸಿಎಂ, ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂದರು.

40% ಕಮಿಷನ್ ಆರೋಪದಿಂದ ಮುಕ್ತರಾಗಿದ್ದೇವೆ ಎನ್ನುವ ಆರ್.ಅಶೋಕ್ ಮಾತಿನ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಕೊಟ್ಟ ದೂರಿನ ಆಧಾರದಲ್ಲಿ ನಾವು ತನಿಖೆಗೆ ಸೂಚಿಸಿದ್ದೆವು. ಸಾಕ್ಷ್ಯಾಧಾರಗಳ ಕೊರತೆಯಿಂದ ಕೊಲೆ ಆರೋಪಿಗಳು ಬಿಡುಗಡೆ ಆಗುತ್ತಾರೆ. ಹಾಗಂತ ಕೊಲೆಯೇ ಆಗಿಲ್ಲ ಅಂದರೆ ಅದರಲ್ಲಿ ಅರ್ಥ ಇಲ್ಲ. ಕೊಲೆ ನಡೆದಿರುತ್ತದೆ. ಸಾಕ್ಷಿಗಳು ಸಾಕ್ಷ್ಯ ಹೇಳಿರುವುದಿಲ್ಲ ಅಷ್ಟೆ ಅಂದರು.

ಆಪರೇಷನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಲಾಗಿತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ” ಬಿಜೆಪಿಯವರು ಆಪರೇಷನ್ ಕಮಲಕ್ಕೆ ಪ್ರಯತ್ನಿಸಿದರು, ವಿಫಲರಾದರು ಎಂದರು.

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಆಲಮಟ್ಟಿ, ಆಗಸ್ಟ್‌ 21: ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು, ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್ ನಿಂದ 524.25 ಮೀಟರ್ ಎತ್ತರಕ್ಕೆ ಹೆಚ್ಚಿಸಬೇಕಾಗಿದೆ. ಆದರೆ ಇದಕ್ಕೆ ಕೇಂದ್ರಸರ್ಕಾರದ ನೋಟಿಫಿಕೇಶನ್ ಇನ್ನೂ ಆಗಿರುವುದರಿಂದ ಎತ್ತರವನ್ನು ಹೆಚ್ಚಿಸಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಕೇಂದ್ರಸರ್ಕಾರವು , ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ಇತ್ಯರ್ಥ ಮಾಡಿಸುವುದು ಅಗತ್ಯವಿದೆ. ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲು ನಾನು ಮತ್ತು ಉಪಮುಖ್ಯಮಂತ್ರಿ ಅವರು ಈಗಾಗಲೇ ಪ್ರಧಾನಮಂತ್ರಿ ಅವರನ್ನು ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ ಎಂದರು.
ಇದಕ್ಕೆ ಸಂಬಂಧಿಸಿದಂತೆ ನಾವು ಪುನರ್‌ ವಸತಿ ಮತ್ತು ಪುನರ್‌ ನಿರ್ಮಾಣಕ್ಕಾಗಿ ಸಿದ್ದರಿದ್ದೇವೆ. ನಮ್ಮ ಹಿಂದಿನ ಅವಧಿಯಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ 51,148 ಕೋಟಿ ರೂ.ಗಳ ಅಂದಾಜಿಗೆ ಅನುಮೋದನೆ ನೀಡಲಾಗಿತ್ತು. ಈಗ ಈ ಮೊತ್ತ 80 ಸಾವಿರ ಕೋಟಿ ರೂ.ಗಳಷ್ಟಾಗಬಹುದು ಎಂಬ ಅಂದಾಜಿದೆ. ಪ್ರತಿ ವರ್ಷ ನಮ್ಮ ಸರ್ಕಾರ 20,000 ಕೋಟಿ ಖರ್ಚು ಮಾಡುವ ಮೂಲಕ, 5 ವರ್ಷಕ್ಕೆ ಅಂದಾಜು 1 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಬೇಕೆಂಬುದು ನಮ್ಮ ಸರ್ಕಾರದ ಉದ್ದೇಶಿಸಲಾಗಿದೆ. ಆದರೆ ಇದಕ್ಕೆ ಮೊದಲು ಕೇಂದ್ರ ಸರ್ಕಾರದ ನೋಟಿಫಿಕೇಷನ್ ಆಗಬೇಕಿರುವುದರಿಂದ, ಪ್ರಧಾನಮಂತ್ರಿಗಳ ಮಧ್ಯಸ್ಥಿಕೆಯಲ್ಲಿ ನಿರ್ಣಯವಾದರೆ, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆಗೆ ನಾವು ಚಾಲನೆ ನೀಡಬಹುದು.
ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಡಿ 16.47 ಲಕ್ಷ ಎಕರೆ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ. ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳದಿಂದ ಯೋಜನೆಯಿಂದ ಒಟ್ಟು 5.94 ಲಕ್ಷ ಹೆಕ್ಟೇರ್ (14.68 ಲಕ್ಷ ಎಕರೆ) ಅಚ್ಚುಕಟ್ಟು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ. ಬಾಗಲಕೋಟೆ, ಬಿಜಾಪುರ, ಯಲಬುರ್ಗಾ, ಕೊಪ್ಪಳರಾಯಚೂರು, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಇವರ ಜನಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಪುನರ್ವಸತಿ, ಪುನರ್ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ ಮಾಡಲಿದ್ದೇವೆ.
ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ, ಇಲ್ಲಿಯೂ ಸಮಾನಾಂತರ ಜಲಾಶಯ ನಿರ್ಮಾಣದ ಪ್ರಸ್ತಾಪ ತಮ್ಮ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಜಲಾಶಯದಲ್ಲಿ ಹೂಳು ತುಂಬಿರುವ ಪ್ರಮಾಣ, ನೀರಿನ ಸಾಮರ್ಥ್ಯ, ಇದರಿಂದ ರೈತರಿಗಾಗಬಹುದಾದ ತೊಂದರೆ ಬಗ್ಗೆ ಚರ್ಚೆ ನಡೆಸುತ್ತೇವೆ.
ರೈತರ ಅನುಕೂಲಕ್ಕಾಗಿ ಬಸವ ಸಾಗರ ಸೇರಿದಂತೆ ಇತರ ಜಲಾಶಯಗಳಿಗೆ ನೀರು ಮರುಹಂಚಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಯೋಜನೆಯಲ್ಲಿ ಸ್ಕೀಂ ಎ ಮತ್ತು ಬಿ ಎರಡು ವಿಧವಿದ್ದು, ಯೋಜನಾವಾರು 3ನೇ ಹಂತದಲ್ಲಿ ಹಂಚಿಕೆಯಾಗಿದೆ. ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಾಗಿದೆ. ಈ ನೀರನ್ನು ಸಂಬಂಧಪಟ್ಟ ಜಿಲ್ಲೆಗೆ ನೀರು ಮರುಹಂಚಿಕೆ ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್‌ಗೇಟ್ ಅಳವಡಿಕೆಯನ್ನು ಮೂರ್ನಾಲ್ಕು ದಿನಗಳ ಒಳಗಾಗಿ ಪೂರ್ಣಗೊಳಿಸಲಾಗಿದೆ. ದುರಸ್ತಿಯ ಅವಧಿಯಲ್ಲಿ 35 ಟಿಎಂಸಿ ನೀರು ಮಾತ್ರ ಪೋಲಾಗಿದೆ. ಇಂದಿಗೂ ಜಲಾಶಯದಲ್ಲಿ ಸುಮಾರು 78 ಟಿಎಂಸಿ ನೀರಿದೆ. ಇನ್ನೂ 20 ಟಿಎಂಸಿ ನೀರು ಹರಿದುಬಂದರೆ, ಜಲಾಶಯ ಶೇ.95 ರಷ್ಟು ಭರ್ತಿಯಾಗುತ್ತದೆ. ಈಗಾಗಲೇ ಕರ್ನಾಟಕ, ತೆಲಂಗಾಣ, ಆಂಧ್ರದ ರೈತರ ಮೊದಲ ಬೆಳೆಗೆ ನೀರು ಬಿಡಲಾಗಿದೆ. ಆದ್ದರಿಂದ ರೈತರಿಗೆ ಯಾವುದೇ ಆತಂಕ ಬೇಡ ಎಂದು ಹೇಳಿದರು.

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ: ಮೋದಿ ನಿಮ್ಮ ಹಾದಿ ತಪ್ಪಿಸಿ ಎತ್ತಿ ಕಟ್ಟುತ್ತಿದ್ದಾರೆ: ಸಿ.ಎಂ.ಸಿದ್ದರಾಮಯ್ಯ
ಬಾಗಲಕೋಟೆ (ರಬಕವಿ ಬನಹಟ್ಟಿ) ಏ 27: ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲೀಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೋರು ಧ್ವನಿಯಲ್ಲಿ ಬಹಿರಂಗವಾಗಿ ಘರ್ಜಿಸಿದರು.

ಬಾಗಲಕೋಟೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥ ಸಂಯುಕ್ತ ಪಾಟೀಲ್ ಗೆಲುವಿಗೆ ಕರೆ ನೀಡಲು ಕರೆದಿದ್ದ ಬೃಹತ್ ಜನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಈ ರೀತಿಯಾಗಿ ಪ್ರಶ್ನಿಸಿದರು.

ದೇಶದಲ್ಲಿ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆದ ಬಳಿಕ ಬಿಜೆಪಿ ಸೋಲುತ್ತದೆ ಎನ್ನುವ ಸುಳಿವು ಮೋದಿಯವರಿಗೆ ಸ್ಪಷ್ಟವಾಗಿ ಸಿಕ್ಕಿದೆ. ಈ ಕಾರಣಕ್ಕೆ ಭಯಾನಕ ಸುಳ್ಳು ಹೇಳ್ಕೊಂಡು ತಿರುಗುತ್ತಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕೊಡುತ್ತಿದ್ದಾರೆ ಎನ್ನುವ ಸುಳ್ಳನ್ನು ಹೇಳುವ ಮೂಲಕ ಹಿಂದುಳಿದವರನ್ನು ಮುಸ್ಲೀಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಎಚ್ಚರ ವಹಿಸಿ ಎಂದು ಹಿಂದುಳಿದ ಜಾತಿ-ಸಮುದಾಯಗಳಿಗೆ ಎಚ್ಚರಿಸಿದರು.

ಮೋದಿ ಮೀಸಲಾತಿ ವಿಚಾರದಲ್ಲೂ ಸುಳ್ಳು ಹೇಳ್ತಿದಾರೆ. ಇವರಿಗೆ ಸಂವಿಧಾನದ ತಿಳಿವಳಿಕೆ ಇಲ್ಲ. ಈ ಮಟ್ಟದ ಸುಳ್ಳು ಹೇಳುವ ಇವರಿಗೆ ನಾಚಿಕೆ, ಮಾನ ಮರ್ಯಾದೆ ಏನಾದರೂ ಇದೆಯಾ ಎಂದು ಸಿ.ಎಂ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.

ಮಂಡಲ್ ವರದಿ ವಿರೋಧಿಸಿ ಹಿಂದುಳಿದವರ ಹಾದಿ ತಪ್ಪಿಸಿ ಆತ್ಮಹತ್ಯೆಗೆ ದೂಡಿದ್ದು ಇದೇ ಬಿಜೆಪಿ. ಹಿಂದುಳಿದವರ ಮೀಸಲಾತಿ ವಿರೋಧಿಸಿ ಕೋರ್ಟ್ ಗೆ ಹೋಗಿದ್ದ ರಾಮಾಜೋಯಿಸ್ ಬಿಜೆಪಿಯವರು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟಾಗ ಅದನ್ನು ವಿರೋಧಿಸಿ ಪ್ರತಿಭಟಿಸಿದ್ದು ಇದೇ ಬಿಜೆಪಿ. ಹಿಂದುಳಿದವರ, ಮಹಿಳೆಯರ ವಿರೋಧಿಯಾಗಿರುವ ಇವರು ಈಗ ಹಿಂದುಳಿದವರನ್ನು ಮುಸ್ಲೀಮರ ವಿರುದ್ಧ ಎತ್ತಿ ಕಟ್ಟಿ ಏಕ ಕಾಲದಲ್ಲಿ ಎರಡೂ ಸಮುದಾಯಗಳ ಜೀವಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.‌

ಬಾಗಲಕೋಟೆಯಲ್ಲಿ ತಂದೆಯನ್ನೇ ಕೊಂದು ಕೊಳವೆ ಬಾವಿಗೆ ತುರುಕಿದ ಮಗ
ಬಾಗಲಕೋಟೆ: ತಂದೆಯನ್ನು ಕೊಂದು 30 ತುಂಡುಗಳನ್ನಾಗಿ ಮಾಡಿ ಕೊಳವೆ ಭಾವಿಗೆ ತುರುಕಿದ ಘಟನೆ ಬಾಗಲಕೋಟೆಯ ಮುಧೋಳದಲ್ಲಿ ನಡೆದಿದ್ದು, ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಇತ್ತೀಚ್ಚೆಗೆ ಅತಿ ಹೆಚ್ಚು ಸುದ್ದಿಯಲ್ಲಿರುವ, ಜನರನ್ನು ನಿಬ್ಬೆರಗು ಗೊಳಿಸಿದ ಘಟನೆ ದೆಹಲಿಯಲ್ಲಿ ಶ್ರದ್ಧಾಳ ಕೊಲೆ ಪ್ರಕರಣ. ಶ್ರದ್ಧಾಳನ್ನು ತುಂಡು ತುಂಡುಗಳನ್ನಾಗಿ ಕತ್ತರಿಸಿ ಪ್ರಿಡ್ಜ್‌ನಲ್ಲಿ ಇಟ್ಟರೆ, ಮತ್ತೊಂದು ಪ್ರಕರಣದಲ್ಲಿ ಸೂಟ್ಕೇಸ್‌ನಲ್ಲಿ, ಚೀಲದಲ್ಲಿ ಹೀಗೆ ಒಂದೊಂದಾಗಿ ಹೆಚ್ಚಾಗುತ್ತಲೇ ಇವೆ. ಇದೀಗ ಅದೇ ರೀತಿ ಮಗ ತನ್ನ ತಂದೇಯನ್ನೇ ಕೊಂದು ಕೊಳವೆಬಾವಿಯನ್ನು ತುರುಕಿರುವ ಘಟನೆ  ಬಾಗಲಕೋಟೆಯಲ್ಲಿ ನಡೆದಿದೆ.

ತಂದೆ ಕುಡಿದ ಮತ್ತಿನಲ್ಲಿ ಮನೆಗೆ ಬಂದು ಪ್ರತಿದಿನ ಗಲಾಟೆ ಮಾಡುತ್ತಿದ್ದ ಕಾರಣ ಅದನ್ನು ಸಹಿಸಿಕೊಳ್ಳಲಾಗದೆ 21 ವರ್ಷದ ವಿಠ್ಠಲ ಕುಳಲಿ ಎಂಬಾತನು ಆತನ ತಂದೆ ಪರಶುರಾಮ ಕುಳಲಿ(54) ಅವರನ್ನು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ನಂತರ ದೇಹವನ್ನು ಕತ್ತರಿಸಿ ಕೊಳವೆ ಬಾವಿಯಲ್ಲಿ ತುರುಕಿರುವ ಘಟನೆ ಮುಧೋಳದಲ್ಲಿ ನಡೆದಿದೆ.

ಪತಿ ಕಾಣೆಯಾಗಿದ್ದಾರೆಂದು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ನಂತರ ಕೊಲೆ ರಹಸ್ಯ ಬಯಲಾಗಿದ್ದು, ಈ ಕುರಿತು ಮುಧೋಳ ಪೊಲೀಶ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಠ್ಠಲ್‌ ಕುಳಲಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕುಡಚಿ ರೈಲ್ವೆ: ಭೂಸ್ವಾಧೀನವಾದ ಸಂತ್ರಸ್ಥರ ಮಕ್ಕಳ ನೌಕರಿಗೆಂದು ಸಿಎಂಗೆ ಮನವಿ
ಬಾಗಲಕೋಟೆ: ಕುಡಚಿ ರೈಲ್ವೆ ನಿರ್ಮಾಣಕ್ಕೆ ಜಮೀನು ಕಳೆದುಕೊಂಡ ಬಾಗಲಕೋಟೆಯ ಸಂತ್ರಸ್ಥರು ನಮ್ಮ ಜಮೀನನ್ನು ಹಿಂತಿರುಗಿಸಿ ಇಲ್ಲವಾದರೆ ನಮ್ಮ ಮಕ್ಕಳಿಗೆ ನೌಕರಿ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದ್ದಾರೆ.

ಬಾಗಲಕೋಟೆ, ಮುಚಖಂಡಿ, ನೀರಲಕೇರಿ, ಸೂಳಿಕೇರಿ, ಕಗಲಗೊಂಬ, ಕಟಗೇರಿ, ಕೆರಕಲಮಟ್ಟಿ, ಹಿರೇಶಿಲ್ಲಿಕೇರಿ, ಚಿಕ್ಕಶೆಲ್ಲಿಕೇರಿ, ಕಳಕೊಪ್ಪ, ಕಲಾದಗಿ, ಖಜ್ಜಿಡೋಣಿ ಹಾಗೂ ಇತರೆ ಗ್ರಾಮಗಳ ಗ್ರಾಮಸ್ಥರು ಕುಡಚಿ ರೈಲ್ವೆಗೆ ತಮ್ಮ ಜಮೀನನ್ನು ಕಳೆದುಕೊಂಡಿದ್ದು, ಬಾಗಲಕೋಟೆಯ ಜಿಲ್ಲಾಧಿಕಾರಿಗಳ ಮುಖಾಂತರ ಭೂಸ್ವಾಧೀನ ಸಂತ್ರಸ್ಥರೆಲ್ಲಾ ಸೇರಿ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಕಳುಹಿಸಿದ್ದಾರೆ.

ಸದರಿ ಕಳೆದ 12 ವರ್ಷಗಳಿಂದ ಬಾಗಲಕೋಟೆ – ಕುಡಚಿ ರೈಲ್ವೇ ಮಾರ್ಗಕ್ಕೆ ನಮ್ಮ ಅಮೂಲ್ಯವಾದ ಜೀವನೋಪಾಯ ಜಮೀನುಗಳನ್ನು ರೈಲ್ವೆ ಮಾರ್ಗಕ್ಕೆ ಕಳೆದುಕೊಂಡಿದ್ದು, ಇದರಿಂದ ನಮ್ಮ ಕುಟುಂಬದ ಇನ್ನಿತರ ಸದಸ್ಯರಿಗೆ ಜೀವನೋಪಾಯಕ್ಕೆ ತೊಂದರೆದಾಯಕವಾಗಿದ್ದು, ಸರ್ಕಾರವು ಹಾಗೂ ರೈಲ್ವೆ ಇಲಾಖೆಯು ಭೂಮಿ ಕಳೆದುಕೊಂಡ ಸಂತ್ರಸ್ಥ ಕುಟುಂಬದವರಿಗೆ ರೈಲ್ವೆ ಇಲಾಖೆಯಲ್ಲಿ ಅವರವರ ವಿದ್ಯಾರ್ಹತೆ ಅನುಸಾರ ನೌಕರಿ ನೀಡುವ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ರೈಲ್ವೆ ಇಲಾಖೆಗೆ ಕಳೆದ 12 ವರ್ಷಗಳಿಂದ ಮಾನ್ಯ ಉಪವಿಭಾಗಾಧಿಗಳು, ಬಾಗಲಕೋಟೆಯಿಂದ “Looser Certificate” ಹಾಗೂ ಇನ್ನಿತರ ಶೈಕ್ಷಣಿಕ ಅರ್ಹತೆಗಳೊಂದಿಗೆ ರೈಲ್ವೆ ಇಲಾಖೆಗೆ ಅರ್ಜಿ ಸಲ್ಲಿಸಿದರೂ ಇದುವರೆಗೆ ಕುಡಚಿ ರೈಲ್ವೆಗೆ ಭೂಮಿ ಕಳೆದುಕೊಂಡ ಸಂತ್ರಸ್ಥ ಕುಟುಂಬದ ಸದಸ್ಯರಿಗೆ ಇದುವರೆಗೆ ನೇಮಕಾತಿ ಕುರಿತು ಸ್ಪಷ್ಟವಾದ ಆದೇಶ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಸಚಿವರು, ಸಂಸದರು, ಶಾಸಕರು ಹಾಗೂ ರೈಲ್ವೆ ಇಲಾಖೆಯ ಉನ್ನತಾಧಿಕಾರಿಗಳಿಗೆ ವಿನಂತಿಸಿ ಮನವಿ  ಮಾಡಿದರೂ ಆ ಪ್ರಯತ್ನ ವ್ಯರ್ಥವಾಗಿದ್ದು, ಸದರಿ ಸಚಿವರಾಗಲಿ, ರೈಲ್ವೆ ಅಧಿಕಾರಿಗಳಾಗಲಿ ನೌಕರಿ ನೀಡುವ ಬಗ್ಗೆ ಸ್ಪಷ್ಟವಾದ ನಿರ್ಣಯ ನೀಡದೆ ಕಾಲಹರಣ ಮಾಡುತ್ತಲೇ ಬಂದಿದ್ದಾರೆ ಎಂದು ಮನವಿ ಪತ್ರದಲ್ಲಿ ಆರೋಪಿಸಿದ್ದಾರೆ.

ಭೂಸಂತ್ರಸ್ಥರ ಕುಟುಂಬದ ಸದಸ್ಯರಿಗೆ ನಿಗದಿತ ಅವಧಿಯೊಳಗೆ ರೈಲ್ವೆ ಇಲಾಖೆಯಲ್ಲಿ ನೌಕರಿ ನೀಡದೇ ಇದ್ದ ಪಕ್ಷದಲ್ಲಿ ಜಮೀನನ್ನು ಮರಳಿಸುವ ಕುರಿತು ಉಗ್ರ ಹೋರಾಟ ನಡೆಸುವುದಾಗಿ ಸಂತ್ರಸ್ಥರು ಎಚ್ಚರಿಕೆ ನೀಡಿದ್ದಾರೆ.