ಬೆಳಗಾವಿ – Peepal Media

ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ, ಅಕ್ಟೋಬರ್ 4: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು.

ಬಿಮ್ಸ್ ಆಸ್ಪತ್ರೆ-ಖಾಸಗಿ ನಿರ್ವಹಣೆ ಇಲ್ಲ
ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಹಾಗೂ ಇಂದು ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಲಾಗಿಲ್ಲ ಎಂದರು.

ಕಾಂಗ್ರೆಸ್ ನ ಆಂತರಿಕ ವಿಚಾರದಲ್ಲಿ ಬಿಜೆಪಿ ತಲೆಕೆಡಿಸಿಕೊಳ್ಳಬೇಕಿಲ್ಲ
ಶಾಸಕ ಸಿ.ಟಿ.ರವಿಯವರು ಮುಖ್ಯಮಂತ್ರಿಯವರ ವಿಚಾರದಲ್ಲಿ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದರು.

ಒಳಮೀಸಲಾತಿ ಸಮೀಕ್ಷೆ ಪೂರ್ಣಗಳ್ಳುತ್ತಿದ್ದಂತೆ 20 ಸಾವಿರ ಶಿಕ್ಷಕರ ನೇಮಕ ?
ಬೆಳಗಾವಿ:  ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ,ವಿದ್ಯಾರ್ಥಿಗಳ ಜೊತೆಗೆ ಒಟ್ಟಾಗಿ ಕುಳಿತು ಬಿಸಿಯೂಟ ಸೇವಿಸಿದ್ದಾರೆ.ಈ ವೇಳೆ ಶಿಕ್ಷಕರ ನೇಮಕಾತಿಯ ಕುರಿತು ಮಧು ಬಂಗಾರಪ್ಪ ಸಿಹಿ ಸುದ್ದಿ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಒಳಮೀಸಲಾತಿ ಸಮೀಕ್ಷೆ ನಡೆಯುತ್ತಿದ್ದು,ಈ ಸರ್ವೇ ಪೂರ್ಣಗೊಳ್ಳುತ್ತಿದ್ದಂತೆ,ರಾಜ್ಯದ ಸರ್ಕಾರಿ ಶಾಲೆಗಳು,ಅನುದಾನೂತ ಶಾಲೆಗಳು ಮತ್ತು ಕಾಲೇಜುಗಳಿಗೆ ಖಾಲಿಯಿರುವ 20 ಸಾವಿರ ಶಿಕ್ಷರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಇದೇ ವೇಳೆ ನೂತನ ಕೊಠಡಿಗಳ ಉದ್ಘಾಟನೆ ಮಾಡಿ ಮಾತನಾಡಿದ ಸಚಿವ ಮಧು ಬಂಗಾರಪ್ಪ,ನಾನು ಧಾರ್ಮಿಕ ಕಾರ್ಯಗಳಿಗೆ ಅಥವಾ ದೇವಸ್ಥಾನದ ಕಾರ್ಯಗಳಿಗೆ ಅನುದಾನ ನೀಡುವುದು ವಿರಳ.ಆದ್ರೆ ವಿದ್ಯೆಯ ವಿಚಾರದಲ್ಲಿ ಹೆಚ್ಚು ಅನುದಾನ ನೀಡುತ್ತೇನೆ ಎಂದಿದ್ದಾರೆ. ಹೀಗಾಗಿ ತಮ್ಮ ಶಕ್ತಿ ಮೀರಿ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಲು ಮುಂದಾಗಿರುವುದಾಗಿ ಹೇಳಿದ್ದಾರೆ.

ರಾಜ್ಯದ 46 ಸಾವಿರ ಸರ್ಕಾರಿ ಶಾಲೆಗಳ 57 ಲಕ್ಷ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದ್ದು,ನೀಟ್, ಸಿ.ಇ.ಟಿ ಪರೀಕ್ಷೆಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿ ಎಂದು 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ನೀಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಲೆ ಏರಿಕೆ ವಿರೊಧಿಸಿ ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ : ಲಕ್ಷ್ಮೀ ಹೆಬ್ಬಾಳ್ಕರ್‌
ಬೆಳಗಾವಿ: ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಪ್ರಿಲ್ 27 ಅಥವಾ 28 ರಂದು ಬೃಹತ್ ಪ್ರತಿಭಟನೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಮಂಗಳವಾರ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಅಗತ್ಯ ವಸ್ತುಗಳ ಬೆಲೆ ಏರಿಕೆ, ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ಕೇಂದ್ರದ ನೀತಿ ವಿರುದ್ಧ ಪ್ರತಿಭಟಿಸಲಾಗುವುದು ಎಂದರು.

ಕೇಂದ್ರ ಸರಕಾರ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರವನ್ನು ಏರಿಕೆ ಮಾಡಿ, ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಬಿಜೆಪಿ ನಾಯಕರು ತಮ್ಮ ಒಳಬೇಗುದಿಯನ್ನು ಮರೆಯಾಚಿಸುವ ಸಲುವಾಗಿ ರಾಜ್ಯ ಸರಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಹುಟ್ಟಿಕೊಂಡಿದ್ದೇ ಬೆಲೆ ಏರಿಕೆಯ ಕಾರಣದಿಂದ, ಗ್ಯಾರಂಟಿ ಯೋಜನೆಗಳಿಂದ ಬೆಲೆ ಏರಿಕೆಯಾಗುತ್ತಿದೆ ಎನ್ನುತ್ತಿರುವುದು ಶುದ್ಧ ಸುಳ್ಳು. ಬಿಜೆಪಿ ನಾಯಕರ ನಡುವಿನ ಆಂತರಿಕ ಕಚ್ಚಾಟವನ್ನು ಮರೆಮಾಚಲು ಜನರ ದಾರಿ ತಪ್ಪಿಸುವ ಸಲುವಾಗಿ ಜನಾಕ್ರೋಶ ಯಾತ್ರೆ ಮಾಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.

ರಾಷ್ಟ್ರೀಯ ನಾಯಕರು ಪ್ರತಿಭಟನೆಯಲ್ಲಿ ಭಾಗಿ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ರಾಷ್ಟ್ರೀಯ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದರು.

ನಗರದ ಸಿಪಿಎಡ್ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ, ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ತನಿಖೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕರಿಗೆ ಕಿರುಕುಳ

ಕಾಂಗ್ರೆಸ್ ನಾಯಕರ ಧ್ವನಿಯನ್ನು ದಮನ ಮಾಡುವ ಉದ್ದೇಶದಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪಕ್ಷದ ಮುಖಂಡರ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆ. ಇದರ ಬಗ್ಗೆ ಸತ್ಯಾಸತ್ಯತೆಯನ್ನು ಎಲ್ಲರೂ ಪರಿಶೀಲನೆ ಮಾಡಬೇಕು. ಬಿಜೆಪಿಯವರು ನ್ಯಾಷನಲ್ ಹೆರಾಲ್ಡ್ ಆಸ್ತಿ 5 ಸಾವಿರ ಕೋಟಿ ಇದೆ ಅಂತಾರೆ. ಆದರೆ ಐಟಿಯವರೇ 359 ಕೋಟಿ ಅಂತಾ ಹೇಳುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಸುಳ್ಳುಗಳನ್ನು ಸತ್ಯ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಯಾಕೆ ತರಲಾಯಿತು ಅನ್ನೋದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಜನರ ದಾರಿ ತಪ್ಪಿಸುವುದೇ ಬಿಜೆಪಿಯವರ ಕೆಲಸ. ಜನ ಸಾಮಾನ್ಯರ ಬದಲಿಗೆ ಕೇಂದ್ರ ಸರಕಾರ ಅಂದಾನಿ, ಅಂಬಾನಿಯವರಿಗಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರ ಸಚಿವರಾದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿ.ಎಂ ಪುನರುಚ್ಚಾರ
ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು.

ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು.

ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದರು.

ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಕೊಡಲು ಶುರು ಮಾಡಿದೆವು ಎಂದರು.

ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ 23 ಸಾವಿರ ಕೋಟಿ ಖರ್ಚು ಮಾಡುತ್ತಿದೆ.
ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದರು.

ಸಾಮಾಜಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇಲ್ಲ: ಆರ್.ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು
ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಅವರು ಸುಳ್ಳೇ ಹೇಳುವುದು. ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದರು.

ಜಾತಿಗಣತಿ: ಸಚಿವರ ಅಭಿಪ್ರಾಯದ ನಂತರ ಅಂತಿಮ ತೀರ್ಮಾನ

ಕಾಂಗ್ರೆಸ್ ಶಾಸಕರೇ ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ ಯಾರೂ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದರು.

ಯಾವ ಜಾತಿಗೂ ಅನ್ಯಾಯವಾಗಬಾರದು
ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
[1:26 pm, 20/4/2025] +91 94481 42741: ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ

ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ

ಬೆಳಗಾವಿ ಏ 20:
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು.

ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು.

ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ ಎಂದರು.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದರು.

ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.

ಶಿಕ್ಷಣ, ಸಂಘಟನೆ , ಹೋರಾಟ – ಶೋಷಿತವರ್ಗಗಳಿಗೆ ಮೂಲಮಂತ್ರವಾಗಬೇಕು; ಶಿಕ್ಷಣದಿಂದ ಗುಲಾಮಗಿರಿ ತೊಡೆದು ಸ್ವಾಭಿಮಾನದ ಬದುಕು ಸಾಧ್ಯ- ಸಿದ್ದರಾಮಯ್ಯ
ಬೆಳಗಾವಿ(ಚಿಕ್ಕೋಡಿ): ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗಮಾತ್ರ ಗುಲಾಮಗಿರಿಯನ್ನು ನೀಗಿಸಿ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ರಾಜ್ಯ ಗೊಲ್ಲ(ಯಾದವ) ಹಣಬರ ಸಂಘದ ಶತಮಾನೋತ್ಸವ ಹಾಗೂ ಶ್ರೀ ಯಾದವಾನಂದ ಸ್ವಾಮಿಗಳ 16 ನೇ ಪಟ್ಟಾಭಿಷೆಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಎಲ್ಲ ಜಾತಿಗಳು ತಮ್ಮ ಕಸುಬಿನಿಂದಲೇ ನಿರ್ಮಾರ್ಣವಾಗಿವೆ. ಸಮಾಜವನ್ನು ವಿಭಜಿಸಲು, ಕಸುಬಿನ ಆಧಾರದಲ್ಲಿ ಜಾತಿಯೆಂದು ಕರೆಯಲಾಯಿತು. ಗೊಲ್ಲ ಜಾತಿಯಲ್ಲಿ ,ಕಾಡು ಗೊಲ್ಲ, ಅಡವಿ ಗೊಲ್ಲ ಸೇರಿದಂತೆ ಹಲವು ಉಪಜಾತಿಗಳಿವೆ ಎಂದರು.

ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರು

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ದೀನದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಅವಕಾಶವಂಚಿತರು ಸಮಾಜದಲ್ಲಿ ಏಳಿಗೆಯನ್ನು ಕಾಣಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ, ಸಂಘಟನೆ , ಹೋರಾಟ ಎಂಬ ಮೂರುಮಂತ್ರಗಳನ್ನು ಶೋಷಿತವರ್ಗಗಳಿಗೆ ಬೋಧಿಸಿದ್ದಾರೆ. ಸಮಾಜದಲ್ಲಿ ಅಸಮಾನತೆ ಸಾಕಷ್ಟಿದೆ. ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮನುಸ್ಮೃತಿಯ ಪಾಲನೆಯಿಂದ, ಸಮಾಜದಲ್ಲಿ ತಂದು, ಬ್ರಾಹ್ಮಣರು, ವೈಶ್ಯರು,ಕ್ಷತ್ರಿಯರು ಹಾಗೂ ಶೂದ್ರರು ಎಂದು ಚತುರ್ವಣ ಪದ್ಧತಿಯನ್ನು ಜಾರಿಗೆ ತಂದು, ಶೂದ್ರರನ್ನು ಶಿಕ್ಷಣದ ಅವಕಾಶವನ್ನು ನೀಡಲಾಗಿರಲಿಲ್ಲ. ಆದ್ದರಿಂದ ಸಮಾನ ಅವಕಾಶ ಹಾಗೂ ಶಿಕ್ಷಣ ಪಡೆದ ವರ್ಗಗಳಷ್ಟೇ ಸಮಾಜದಲ್ಲಿ ಉನ್ನತಿಯನ್ನು ಕಾಣಲು ಸಾಧ್ಯವಾಯಿತು ಎಂದರು.

ಸಮಾನತೆಯಿಂದ ಸಮಾಜದ ಅಭಿವೃದ್ಧಿ
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯಿರುವ ವೈರುಧ್ಯದ ಸಮಾಜದಲ್ಲಿ ಕಾಲಿಡುತ್ತಿದ್ದೇವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ರವರು ತಿಳಿಸಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಅವಕಾಶ ವಂಚಿತರಿಗೆ, ಬಡವರಿಗೆ, ಶೋಷಿತರಿಗೆ ಸಮಾನ ಅವಕಾಶ ಹಾಗೂ ಸಮಾನತೆಯನ್ನು ಪಡೆಯಲು ಹೋರಾಟ ಮಾಡಬೇಕು ಎಂದರು.

1918ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಸಂಬಂಧ ಮಿಲ್ಲರ್ ಆಯೋಗವನ್ನು ರಚಿಸಿದರು. ಬ್ರಾಹ್ಮಣೇತರ ಸಮುದಾಯಗಳಿಗೆ ಶೇ.75 ರಷ್ಟು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡಲಾಯಿತು. ನಂತರ ಮೀಸಲಾತಿ ಸೌಲಭ್ಯಕ್ಕಾಗಿ ಹಲವು ಆಯೋಗಗಳನ್ನು ರಚಿಸಲಾಗಿದೆ. ಶಿಕ್ಷಣ ಪಡೆಯದಿದ್ದರೆ ಗುಲಾಮಗಿರಿ ಹೆಚ್ಚಲಿದ್ದು, ಸ್ವಾಭಿಮಾನದ ಬದುಕು ಸಾಧ್ಯವಾಗುವುದಿಲ್ಲ. ಶಿಕ್ಷಣ ಪಡೆದಿದ್ದರಿಂದ ಮಾತ್ರ ಮುಖ್ಯಮಂತ್ರಿಯ ಹುದ್ದೆಗೇರಲು ಸಾಧ್ಯವಾಯಿತು ಎಂದು ಮುಖ್ಯಮಂತ್ರಿಗಳು ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ, ಶಿಕ್ಷಣದ ಮಹತ್ವವನ್ನು ಸಭಿಕರಿಗೆ ವಿವರಿಸಿದರು.

ಸಮಾಜಕ್ಕೆ ಆರ್ಥಿಕ ಸಹಾಯ ನೀಡಲು ಸಿಎಂ ಭರವಸೆ
ಗೊಲ್ಲ ಸಮಾಜದವರೂ ಸೇರಿದಂತೆ ಎಲ್ಲ ತಳಸಮುದಾಯದವರು ಉತ್ತಮ ಶಿಕ್ಷಣ ಪಡೆದು ವೈದ್ಯರು, ಐಪಿಎಸ್-ಐಎಎಸ್ ಅಧಿಕಾರಿಗಳು, ವಕೀಲರಾಗಬಹುದು. ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆಇದೆ. ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಆರ್ಥಿಕ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸಮಾಜದ ಸಂಘಟನೆಯತ್ತ ಯಾದವ ಸಮುದಾಯದ ಮುಖಂಡರು ಗಮನಹರಿಸಬೇಕು ಎಂದರು.

ಬಿಜೆಪಿಯಿಂದ ʼಭೀಮ ಹೆಜ್ಜೆ 100ʼ ಅಂಬೇಡ್ಕರ್‌ ಕಾರ್ಯಕ್ರಮ: ಇಂದು ನಿಪ್ಪಾಣಿಯಲ್ಲಿ ಉದ್ಘಾಟನೆ
ಬೆಂಗಳೂರು:  ಡಾ.ಅಂಬೇಡ್ಕರರ ಜನ್ಮದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ  ಹಾಗೂ ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ “ಭೀಮ ಹೆಜ್ಜೆ 100” ಎಂಬ ಹೆಸರಿನ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದೆ. ಎಂದು ಸಚಿವ ಪ್ರಲ್ಹಾದ್ ಜೋಶಿ ಅವರು ಹೇಳಿದರು.

ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯು ಸಂದರ್ಭದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ; ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ವೇಳೆ ತಿಳಿಸುತ್ತೇವೆ ಎಂದು ಘೋಷಿಸಿದರು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು. ಅವರು ಸಂವಿಧಾನ ರಚನಾ ಸಭೆಯಲ್ಲಿ ಇರಬಾರದೆಂಬ ಕಾರಣಕ್ಕೆ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಟ್ಟ ಸಂಗತಿಯನ್ನು ಜನರ ಮುಂದೆ ಇಡುತ್ತೆವೆ. ಜೊತೆಗೆ ಎರಡೆರಡು ಬಾರಿ ಅವರನ್ನು ಸೋಲಿಸಿದ್ದು, ಮಧ್ಯಂತರ ಸರಕಾರಕ್ಕೆ ಬಾರದಂತೆ ತಡೆದುದನ್ನು ಸಹ ಬಹಿರಂಗಪಡಿಸುತ್ತೇವೆ ಎಂದರು.

ದಲಿತರ ಮೀಸಲಾತಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ವಿರೋಧಿಸಿದ್ದನ್ನು ಜನರ ಮುಂದೆ ತೆರೆದಿಡುತ್ತೇವೆ. ಈಗಲೂ ಖರ್ಗೆಯವರಿಗೆ ಅವಮಾನ ಮಾಡಿದ್ದನ್ನೂ ತಿಳಿಸುತ್ತೇವೆ ಎಂದು ಅವರು ಹೇಳಿದರು.

ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ ಶಾಸಕಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬಂದು 100 ವರ್ಷವಾಗುತ್ತಿದೆ ಎಂದು ಸರಕಾರದ ಗಮನ ಸೆಳೆದಿದ್ದಾರೆ. ಬೆಳಗಾವಿಗೆ ಮಹಾತ್ಮ ಗಾಂಧಿಯವರು ಬಂದ ಕಾರ್ಯಕ್ರಮ ಅವರು ಮಾಡಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದರು.

ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭೇಟಿಯ 100 ವರ್ಷ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಸರಕಾರ ಈ ಕಾರ್ಯಕ್ರಮ ಮಾಡಿದ್ದರೆ ನಾವು ಮಾಡುತ್ತಿರಲಿಲ್ಲ. ಇದು ನಮ್ಮ ಬದ್ಧತೆ ಎಂದು  ಜೋಶಿ ತಿಳಿಸಿದರು.

ರಜೆ ಸಿಗದೆ ಕೆಎಸ್‌ಆರ್‌ಟಿಸಿ ಚಾಲಕ ಬಸ್ಸಿನಲ್ಲೆ ಆತ್ಮಹತ್ಯೆಗೆ ಶರಣು
ಬೆಳಗಾವಿ : ಬೆಳಗಾವಿಯಲ್ಲಿ  ಘೋರ ಘಟನೆ ನಡೆದಿದೆ. ತಮ್ಮ ಮನೆಯಲ್ಲಿಯೇ ನಡೆಯುತ್ತಿರುವ ಮದುವೆಗೆ ತೆರಳಲೂ ಮೇಲಧಿಕಾರಿಗಳು ರಜೆ  ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ಕೆಎಸ್ಆರ್ಟಿಸಿ ಚಾಲಕನೊಬ್ಬ  ಬಸ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿದ್ದಾನೆ. ಇಲ್ಲಿನ ಹಳೆ ಗಾಂಧಿ‌ನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ (47) ಸಾವಿಗೆ ಶರಣಾದವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು.

ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ‌ ಮ್ಯಾನೇಜರ್ ಬಳಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರು ರಜೆ ಕೊಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವ್ಯಚ್ಯ ಪದ ಬಳಕೆ ಅದೊಂದು ಕೆಟ್ಟ ಘಳಿಗೆ ಎಂದ ಸಿ.ಟಿ ರವಿ
ಬೆಳಗಾವಿ : ಚಳಿಗಾಲದ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವ್ಯಚ್ಯ ಪದ ಬಳಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸಿಟಿ ರವಿ ಪ್ರತಿಕ್ರಿಯಿಸಿದ್ದು, ಅದೊಂದು ಕೆಟ್ಟ ಘಳಿಗೆ ಎಂದು ಹೇಳಿದರು.ಚಳಿಗಾಲದ ಅಧಿವೇಶನದ ನಂತರ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡಿದ ಸಿಟಿ ರವಿ ತಮ್ಮ ಪತ್ನಿಯೊಂದಿಗೆ ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ಬಗ್ಗೆ ಮಾತನಾಡಿದ ಸಿಟಿ ರವಿ, ಡಿಸೆಂಬರ್ ನಲ್ಲಿ ನಡೆದ ಘಟನೆಯ ಹಿನ್ನೆಲೆ ಕಾರ್ಯಕರ್ತರು ಹರಕೆಯನ್ನು ಹೊತ್ತಿದ್ರು. ದಕ್ಷಿಣ ಕಪಿಲೇಶ್ವರ ದೇವಾಲಯದಲ್ಲಿ ಜಲಾಭಿಷೇಕ ಮಾಡಿದ್ದೇನೆ. ನನ್ನೊಳಿಗಿನ ಕೆಟ್ಟ ಗುಣಗಳು ದೂರವಾಗಲಿ. ನಮ್ಮಿಂದ ಯಾರಿಗೂ ಕೆಟ್ಟದ್ದು ಆಗೋದು ಬೇಡ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದರು.ಅಲ್ಲದೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಪದದಲ್ಲಿ ನಿಂದಿಸಿರುವುದು ಅದೊಂದು ಕೆಟ್ಟ ಘಳಿಗೆ ಅದರ ವಿಷಯವಾಗಿ ಮಾತಾಡಲ್ಲ, ಎಲ್ಲರಿಗೂ ಒಳ್ಳೆಯದಾಗಲಿ ಎಂದಷ್ಟೇ ಹೇಳುತ್ತೇನೆ ಎಂದು ಸಿಟಿ ರವಿ ಹೇಳಿದರು.

ಬೆಳಗಾವಿ | ʼನಾವೂ ಕನ್ನಡಿಗರುʼ ಎಂದು ಚಾಲಕನ ಮೇಲಿನ ಪ್ರಕರಣ ಹಿಂಪಡೆದ ಬಾಲಕಿಯ ತಾಯಿ
ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧ ದಾಖಲಿಸಿದ್ದ ಪೋಕ್ಸೋ ಕೇಸ್ ಅನ್ನು ಬಾಲಕಿಯ ಪೋಷಕರು ವಾಪಸ್ ಪಡೆಯುತ್ತಿದ್ದಾರೆ.

ಈ ಕುರಿತು ಬಾಲಕಿ ಪೋಷಕರು ವಿಡಿಯೋ ಹೇಳಿಕ ಬಿಡುಗಡೆ ಮಾಡಿ ಸ್ಪಷ್ಟಪಡಿಸಿದ್ದಾರೆ. ಈ ವಿಡಿಯೋದಲ್ಲಿ ಮಾತನಾಡಿರುವ ಅಪ್ರಾಪ್ತೆಯ ಪೋಷಕರು, ಬೆಳಗಾವಿಯಿಂದ ಬಾಳೇಕುಂದ್ರಿಗೆ ನಮ್ಮ ಮಗಳು ಬರುತ್ತಿದ್ದಳು. ಟಿಕೆಟ್ ಪಡೆಯುವ ಸಂಬಂಧ ಆಗಿರುವ ಜಗಳ ಇದು. ನಾವೂ ಕನ್ನಡದ ಅಭಿಮಾನಿಗಳು, ನಮ್ಮಲ್ಲಿ ಜಾತಿ ಭೇದ ಭಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ. ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಸ್ವಇಚ್ಛೆಯಿಂದ ಪ್ರಕರಣ ವಾಪಸ್ ಪಡೆಯುತ್ತಿದ್ದೇವೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಬಾಲಕಿಯ ಪೋಷಕರು ಸ್ಪಷ್ಟನೆ ನೀಡಿದ್ದಾರೆ.

‘ಕಳೆದ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಬೆಳಗಾವಿ ಸಿಬಿಟಿಯಿಂದ ಸುಳೇಬಾವಿಗೆ ಹೊರಟಿದ್ದ ಬಸ್‌ನಲ್ಲಿ ಓರ್ವ ಯುವಕ, ಯುವತಿ ಪ್ರಯಾಣಿಸುತ್ತಿದ್ದರು. ಟಿಕೆಟ್‌ ಪಡೆಯಲು ನಿರ್ವಾಹಕ ಹೇಳಿದಾಗ, ಮರಾಠಿ ಭಾಷೆಯಲ್ಲಿ ಯುವಕ ಉತ್ತರಿಸಿದ್ದಾನೆ. ಮರಾಠಿ ಭಾಷೆ ಅರ್ಥವಾಗುತ್ತಿಲ್ಲ. ಕನ್ನಡದಲ್ಲಿ ಮಾತನಾಡಿ ಎಂದು ಕಂಡಕ್ಟರ್‌ ಹೇಳಿದ್ದಾರೆ.

ಈ ಕಾರಣಕ್ಕೆ ಯುವಕ-ಯುವತಿ ಇಬ್ಬರೂ ನಿರ್ವಾಹಕ ಮಹಾದೇವ ಅವರ ಮೇಲೆ ಮುಗಿಬಿದ್ದಿದ್ದಾರೆ. ಬಸ್‌ ಸುಳೇಬಾವಿ ಗ್ರಾಮ ಪ್ರವೇಶಿಸುತ್ತಿದ್ದಂತೆ ತಮ್ಮೂರಿನ ನಾಲ್ವರು ಯುವಕರನ್ನು ಕರೆಯಿಸಿಕೊಂಡು ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ,’ ಎಂದು ಡಿಸಿಪಿ ರೋಹನ್‌ ಜಗದೀಶ ಘಟನೆಯ ವಿವರ ನೀಡಿದ್ದರು.