ಚಾಮರಾಜನಗರ – Peepal Media

ಹನೂರು: ಹುಲಿ ಸಾವಿನ ಪ್ರಕರಣ; ಮತ್ತೆ ನಾಲ್ವರ ಬಂಧನ
ಹನೂರು (ಚಾಮರಾಜನಗರ ಜಿಲ್ಲೆ): ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮದ ವ್ಯಾಪ್ತಿಯ ಹನೂರು ಬಫರ್ ಪ್ರದೇಶದಲ್ಲಿ ಹುಲಿಯೊಂದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರನ್ನು ಬಂಧಿಸಲಾಗಿದೆ.

12 ವರ್ಷದ ಈ ಹುಲಿಯನ್ನು ವಿಷ ಹಾಕಿ ಕೊಂದು, ನಂತರ ಅದನ್ನು ಮೂರು ಭಾಗಗಳಾಗಿ ಕತ್ತರಿಸಿ ಹನೂರು ವಲಯದ ಪಚ್ಚೇದೊಡ್ಡಿ ಬಳಿ ಹೂಳಲಾಗಿತ್ತು. ಈ ಘಟನೆಯ ನಂತರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (PCCF) ಸ್ಮಿತಾ ಬಿಜೂರ್ ಅವರ ನೇತೃತ್ವದಲ್ಲಿ ಸಮಿತಿಯ ತನಿಖೆಗೆ ಆದೇಶಿಸಿದ್ದರು. ಈಗಾಗಲೇ ಶನಿವಾರ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿತ್ತು.

ಭಾನುವಾರ ಪೊಲೀಸರು ಪಚ್ಚೆಮಲ್ಲು, ಗಣೇಶ್, ಗೋವಿಂದೇಗೌಡ ಮತ್ತು ಶಾಂಪು ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಜೆಎಂಎಫ್‌ಸಿ (JMFC) ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ತನಿಖೆಯಿಂದ ತಿಳಿದುಬಂದಿರುವ ವಿಷಯವೆಂದರೆ, ಮೇಯಲು ಅರಣ್ಯಕ್ಕೆ ಹೋಗಿದ್ದ ಒಂದು ಹಸುವನ್ನು ಈ ಹುಲಿ ಕೊಂದು ತಿಂದುದರಿಂದ ದುಷ್ಕರ್ಮಿಗಳು ಆ ಹೆಣ್ಣು ಹುಲಿಗೆ ವಿಷ ಹಾಕಿ ಕೊಂದಿದ್ದಾರೆ.

ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ಜೂನ್ 2025 ರಲ್ಲಿ ಎಂ.ಎಂ. ಹಿಲ್ಸ್ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಒಂದು ಹುಲಿ ಮತ್ತು ಅದರ ನಾಲ್ಕು ಮರಿಗಳನ್ನು ವಿಷ ಹಾಕಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಹಲವು ಮಂದಿ ಭಾಗಿಯಾಗಿರುವ ಶಂಕೆಯಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಅಸಹಜ ಸಾವು; ಐವರು ಶಂಕಿತ ಆರೋಪಿಗಳು ಅರೆಸ್ಟ್
ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಹುಲಿ ಮರಿಗಳು ಏಕಕಾಲದಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶದ ಅನ್ವಯ ತನಿಖೆ ನಡೆಸಿದ ಇಲಾಖೆ ಅಧಿಕಾರಿಗಳು ಐವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಕಳೆದ ಬುಧವಾರ ಸಂಜೆ ಈ ಭಾಗದ ಅರಣ್ಯ ಸಿಬ್ಬಂದಿ ಗಸ್ತು ನಡೆಸುವಾಗ ತಾಯಿ ಹುಲಿ ಸೇರಿದಂತೆ ನಾಲ್ಕು ಮಂದಿ ಹುಲಿಗಳ ಅಸಹಜ ಸಾವು ಪತ್ತೆಯಾಗಿದೆ. ಮೇಲ್ನೋಟಕ್ಕೆ ಹುಲಿಗಳ ಸಾವು ವಿಷಪ್ರಾಶನದಿಂದ ಆಗಿರುವ ಶಂಕೆ ವ್ಯಕ್ತವಾಗಿದೆ‌.

ಹುಲಿಗಳು ಮೃತಪಟ್ಟ ಕೆಲವೇ ದೂರದಲ್ಲಿ ಹಸುವೊಂದರ ಕಳೇಬರ ಸಹ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇದೊಂದು ಅಸಹಜ ಸಾವು ಮತ್ತು ವಿಷಪ್ರಾಶನದಿಂದಲೇ ನಡೆದಿದೆ ಎಂದು ಅರಣ್ಯ ಇಲಾಖೆ ಮೂಲಗಳು ದೃಢಪಡಿಸಿವೆ.

ಹಸುವಿಗೆ ಇಬ್ಬರು ವಿಷಪ್ರಾಶನ ಮಾಡಿರುವ ಬಗ್ಗೆ ಇದೀಗ ಶಂಕೆ ವ್ಯಕ್ತವಾಗುತ್ತಿದೆ. ಹಸುವಿಗೆ ಇಟ್ಟ ವಿಷಯದಿಂದ ಹುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ.ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿ ಸಾವು ಸಂಬಂಧ ಐವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಜನಾಕ್ರೋಶ ಕೇವಲ ರಾಜಕೀಯವಾಗಿಯೇ ಹೊರತು, ಜನರಲ್ಲಿ ಆಕ್ರೋಶ ಇಲ್ಲ; ಬಿಜೆಪಿ ಅವಧಿಯಲ್ಲಿ ಹಣದ ಲೂಟಿ ನಡೆದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆ.ಆರ್.ನಗರ, ಮೇ 23: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೆ.ಆರ್. ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕೆ.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ 404 ಕೋಟಿ ರೂ.ಗಳ ಶಂಕುಸ್ಥಾಪನೆ , 109 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಸೇರಿ ಒಟ್ಟು 513 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಉದ್ಗಾಟನೆ ಮತ್ತು ಶಂಕುಸ್ಥಾಪನೆ ನೆರವೇರಿದ್ದು, ಇದಕ್ಕೆ ಸ್ಥಳೀಯ ಶಾಸಕರಾದ ರವಿಶಂಕರ್ ಕಾರಣ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಸಣ್ಣ ನೀರಾವರಿ ಸಚಿವರು 197 ಕೋಟಿ ರೂ.ಗಳ ವೆಚ್ಚದ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ತಮ್ಮ ಇಲಾಖೆಯೊಂದರಲ್ಲಿಯೇ ಮಾಡಿದ್ದಾರೆ. ಆರೋಗ್ಯ ಇಲಾಖೆಯಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ನೆರವೇರಿದೆ ಎಂದರು.

ಪಾಪರ್ ಸರ್ಕಾರವಾಗಿದ್ದರೆ 513 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿತ್ತೇ?

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರಿಂದ ಅಭಿವೃದ್ಧಿ ಕಾರ್ಯಗಳಿಗೆ ಈ ಸರ್ಕಾರದ ಬಳಿ ಹಣವಿಲ್ಲ ಎಂದು ಟೀಕಿಸುತ್ತಾರೆ. ಪಾಪರ್ ಸರ್ಕಾರವಾಗಿದ್ದರೆ 513 ಕೋಟಿ ರೂ.ಗಳ ಕಾಮಗಾರಿಗಳನ್ನು ಇಲ್ಲಿ ಕೈಗೊಳ್ಳಲು ಸಾಧ್ಯವಾಗುತ್ತಿತ್ತೇ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಬಿಜೆಪಿ ಮತ್ತು ಜೆಡಿಎಸ್ ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಆದರೆ ಟೀಕೆ ಮಾಡುವುದನ್ನು ಹಾಗೂ ಸುಳ್ಳು ಹೇಳುವುದನ್ನು ಮಾತ್ರ ಬಿಡುವುದಿಲ್ಲ. ಬಿಜೆಪಿ ಜೆಡಿಎಸ್ ಪಕ್ಷಗಳು ಹೇಳಿಕೊಂಡಿರುವ ಚಾರ್ಜ್ ಶೀಟ್ ನಲ್ಲಿ ಬರೀ ಸುಳ್ಳುಗಳನ್ನೇ ಹೇಳಿದ್ದಾರೆ. ಹೀಗೆ ಅವರಿಗೆ ಸುಳ್ಳು ಹೇಳಲು ನಾಚಿಕೆಯಾಗುವುದಿಲ್ಲವೇ ಎಂದರು. ಆರ್.ಅಶೋಕ್, ಹೆಚ್. ಡಿ. ಕುಮಾರ್ ಸ್ವಾಮಿ, ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಇವರೆಲ್ಲರೂ ಬಹಳ ವರ್ಷಗಳಿಂದ ರಾಜಕೀಯದಲ್ಲಿದ್ದು, ಸುಳ್ಳು ಹೇಳುತ್ತಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿ ಮಾಡಿದೆ. ಜನರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳುತ್ತಿರುವಾಗ ಸುಳ್ಳು ಎಂದು ಹೇಗೆ ಹೇಳುತ್ತಾರೆ ಎಂದರು. ರಾಜ್ಯದ 3.50 ಕೋಟಿ ಮಹಿಳೆಯರು ಯಾವುದೇ ಬೇಧ ಭಾವವಿಲ್ಲದೇ ಶಕ್ತಿ ಯೋಜನೆಯನ್ನು ಬಳಸಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಇಂಥ ಯೋಜನೆಯನ್ನು ಜಾರಿ ಮಾಡಿತ್ತೇ? ಎಂದು ಪ್ರಶ್ನಿಸಿದ ಸಿಎಂ ಈವರೆಗೆ 500 ಕೋಟಿ ಮಹಿಳೆಯರು ಉಚಿತವಾಗಿ ಓಡಾಡಿದ್ದಾರೆ. ಪ್ರತಿ ದಿನ 50-60 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

ಜಿಎಸ್ ಟಿ ಸಂಗ್ರಹಣೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ

ಜಿಎಸ್ ಟಿ ಸಂಗ್ರಹಣೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮುಂದಿನ ವರ್ಷ ನಾವು ಮೊದಲ ಸ್ಥಾನಕ್ಕೆ ಬರುವ ಪ್ರಯತ್ನ ಮಾಡುತ್ತೇವೆ ಎಂದ ಮುಖ್ಯಮಂತ್ರಿಗಳು, ಕಬಿನಿ ಸೇತುವೆಗೆ 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ . ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಸಾಗರಕಟ್ಟೆ ಸೇತುವೆ, ರಸ್ತೆ ಅಗಲೀಕರಣ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ. ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಇರಬೇಕೆಂಬುದು ಸರ್ಕಾರದ ಆಶಯ ಎಂದರು.

ಜನಾಕ್ರೋಶ ಕಾರ್ಯಕ್ರಮ ಮೂಲಕ ಬಿಜೆಪಿ ಸುಳ್ಳು ಪ್ರಚಾರ

ಶಕ್ತಿ ಯೋಜನೆಯಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪ್ರಶಂಸಿಸಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದರು. ಗ್ಯಾರಂಟಿ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಸರ್ಕಾರದ ಎರಡು ವರ್ಷದ ಕಾರ್ಯಕ್ರಮ ಯಶಸ್ವಿಯಾಗಿ ನಡೆದು, ಸುಮಾರು 3 ರಿಂದ 4 ಲಕ್ಷ ಜನ ಆಗಮಿಸಿದ್ದರು. ಆದರೆ ಬಿಜೆಪಿಯವರು ಜನಾಕ್ರೋಶ ಕಾರ್ಯಕ್ರಮ ಮಾಡಿ, ಅಭಿವೃದ್ಧಿ ನಡೆಯುತ್ತಿಲ್ಲ, ಬೆಲೆ ಏರಿಕೆಯಾಗಿದೆ ಎಂಬ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಯಾವ ಕೆಲಸವನ್ನೂ ಮಾಡದೇ, ಕಾಂಗ್ರೆಸ್ ಸರ್ಕಾರದ ಯಶಸ್ಸಿಗೆ ಮರುಗುತ್ತಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಶಕ್ತಿ ಯೋಜನೆ , ನಂತರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತರಲಾಯಿತು. ತದನಂತರ ಜನವರಿ 2024 ರಲ್ಲಿ ಯುವನಿಧಿಯನ್ನು ಜಾರಿಗೊಳಿಸಲಾಗಿದ್ದು, ಇದಕ್ಕಾಗಿ 52000 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ ಎಂದರು.

ಇದುವರೆಗೆ ಗ್ಯಾರಂಟಿಗಳಿಗೆ 90 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ. 60 ಸಾವಿರ ಕೋಟಿ ರೂ.ಗಳಿಗೆ ವಿವಿಧ ಪಿಂಚಣಿಗಳು, 7 ನೇ ವೇತನ ಆಯೋಗ, ವಿದ್ಯುತ್ ಸಬ್ಸಿಡಿ ಸೇರಿದಂತೆ ವಿವಿಧ ಜನೋಪಯೋಗಿ ಯೋಜನೆಗಳಿಗೆ ಒಟ್ಟು 1.12 ಲಕ್ಷ ಕೋಟಿಗಳನ್ನು ವೆಚ್ಚಮಾಡಲಾಗಿದೆ. 2 .06 ಲಕ್ಷ ಕೋಟಿ ಗಳ ಸವಲತ್ತುಗಳನ್ನು ಕೃಷಿಯ ವಿವಿಧ ಯೋಜನೆಗಳಿಗೆ ನೀಡಲಾಗಿದೆ. ಮೈಸೂರು ಭಾಗದ ಕೃಷಿಕರು ಕೃಷಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಉತ್ತಮ ಯಂತ್ರೋಪಕರಣ,ಬೀಜ ಗೊಬ್ಬರ ನೀಡಲಾಗುತ್ತಿದೆ. ರೈತರು ಯಂತ್ರೋಪಕರಣ ಬಳಸಿ, ಉತ್ತಮ ರೀತಿಯಲ್ಲಿ ಬೆಳೆ ಬೆಳೆಯಬೇಕು. ಜನಾಕ್ರೋಶ ಕೇವಲ ರಾಜಕೀಯವಾಗಿಯೇ ಹೊರತು, ಜನರಲ್ಲಿ ಆಕ್ರೋಶ ಇಲ್ಲ. ನುಡಿದಂತೆ ನಡೆಯುವ ನಮ್ಮ ಸರ್ಕಾರದ ಮೇಲೆ ಜನರು ತಮ್ಮ ವಿಶ್ವಾಸವನ್ನು ತೋರಿದ್ದಾರೆ ಎಂದರು.

ಬಿಜೆಪಿ ಅವಧಿಯಲ್ಲಿ ಹಣದ ಲೂಟಿ ನಡೆದಿದೆ

ಹಿಂದೆ ನಮ್ಮ ಸರ್ಕಾರ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಸ್ತುತ ನಮ್ಮ ಸರ್ಕಾರ 593 ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ತಿಳಿಸಿದ್ದು, 242 ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಸರ್ಕಾರ ಇನ್ನುಳಿದ ವರ್ಷಗಳಲ್ಲಿ ಉಳಿದ ಎಲ್ಲ ಭರವಸೆಗಳನ್ನೂ ಈಡೇರಿಸಲಿದೆ. ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಣ ಲೂಟಿ ಹೊಡೆದರು. 270000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಹಣವಿಲ್ಲದೇ ಮಂಜೂರಾತಿ ನೀಡಿದರು. ಬಿಜೆಪಿಯ ಬಸವರಾಜ ಬೊಮ್ಮಾಯಿಯವರು ತಮ್ಮ ಅವಧಿಯಲ್ಲಿ 166000 ಕೋಟಿ ರೂ. ಯೋಜನೆಗಳಿಗೆ ಹಣವಿಲ್ಲದೇ ಮಂಜೂರು ಮಾಡಿದ ಫಲವಾಗಿ , ನಮ್ಮ ಸರ್ಕಾರದ ಬಾಕಿ ಮೊತ್ತವನ್ನು ಪಾವತಿಸುತ್ತಿದೆ ಎಂದರು.

ಕೇಂದ್ರದ ಬೆಲೆ ಏರಿಕೆ ಬಗ್ಗೆ ಬಿಜೆಪಿ ಮಾತನಾಡುವುದಿಲ್ಲ

ಕೆ.ಆರ್.ನಗರದ ಶಾಸಕರು ಪ್ರಾಮಾಣಿಕರಾಗಿದ್ದು, ಕ್ಷೇತ್ರದ ಒಳಿತಿಗೆ ಶ್ರಮಿಸುತ್ತಿದ್ದಾರೆ. ಅವರನ್ನು ಮುಂದಿನ ಚುನಾವಣೆಯಲ್ಲಿ ಬೆಂಬಲಿಸಿ ಎಂದು ಜನರಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದರು. ಹಾಲಿನ ದರ ಏರಿಕೆಯಾಗಿದ್ದು, ಹೆಚ್ಚಿನ ಮೊತ್ತ ರೈತರಿಗೆ ತಲುಪುತ್ತಿದೆಯೇ ಹೊರತು, ಸರ್ಕಾರದ ಬೊಕ್ಕಸಕ್ಕೆ ಬರುತ್ತಿಲ್ಲ. ನೆರೆರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ಹಾಲಿನ ದರ ಕಡಿಮೆಯಿದೆ. ಬಿಜೆಪಿಯವರು ಕೇಂದ್ರದಲ್ಲಿ ಹೆಚ್ಚಿಸಿರುವ ದರಗಳ ಬಗ್ಗೆ ಮಾತನಾಡುವುದಿಲ್ಲ. ಡೀಸೆಲ್ ಬೆಲೆ ಹಿಂದೆ ಇದ್ದ 46 ರೂ. ಇದ್ದ ಬೆಲೆ , ಈಗ 91 ರೂ.ಗಳಿಗೆ ಹೆಚ್ಚಳವಾಗಿದೆ ಎಂದರು.

ಉಸ್ತುವಾರಿ ಸಚಿವ ಡಾ: ಹೆಚ್.ಸಿ ಮಹದೇವಪ್ಪ, ಸಚಿವರಾದ ಕೆ.ವೆಂಕಟೇಶ್, ದಿನೇಶ್ ಗುಂಡೂರಾವ್, ಬೋಸರಾಜು, ಬೈರತಿ ಸುರೇಶ್, ಶಾಸಕರಾದ ರವಿಶಂಕರ್, ವಿಧಾನ ಪರಿಷತ್ ಸದಸ್ಯ ಡಾ: ತಿಮ್ಮಯ್ಯ, ಕೆ.ಆರ್.ನಗರ ಪುರಸಭೆ ಅಧ್ಯಕ್ಷ ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿ ಎಮ್‌ ಸಿದ್ಧರಾಮಯ್ಯ
ಹೆಚ್.ಡಿ.ಕೋಟೆ ಮೇ12: ನಮ್ಮ ಸರ್ಕಾರ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಎಂದರೆ.

ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ಹೋಗುತ್ತದೆ. ಬುದ್ದ, ಬಸವ ಅವರು ಜಾತಿಹೋಗಬೇಕೆಂದು ಹೋರಾಟ ಮಾಡಿದರೂ ಇನ್ನೂ ಜಾತಿ ಹೋಗಿಲ್ಲ. ಬಸವಣ್ಣರನ್ನು ಪ್ರೀತಿಸ್ತೀವಿ, ಪೂಜಿಸ್ತೀವಿ. ಆದರೆ ಬಸವಣ್ಣರನ್ನು ಪಾಲಿಸುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಹುಟ್ಡಿದ ಜಾತಿಯಲ್ಲೇ ಸಾಯಬೇಕು. ನಾವು ಮೇಲಕ್ಜೆ ಹೋಗುವಂತಿಲ್ಲ. ಜಾತಿ ಸಮಾಜಕ್ಕೆ ಚಲನೆ ಇಲ್ಲ. ವರ್ಗಕ್ಕೆ ಚಲನೆ ಇದೆ. ಎಲ್ಲರಿಗೂ ಶಿಕ್ಷಣ ಸಿಕ್ಕು , ಆರ್ಥಿಕವಾಗಿ, ಸಾಮಾಜಿಕವಾಗಿ ಅವಕಾಶಗಳು ಸಿಕ್ಕಾಗ ಮಾತ್ರ ಸಮಾಜಕ್ಕೆ ಚಲನೆ ಸಿಗುತ್ತದೆ ಎಂದರು.

ಜಾತಿ ಅಸಮಾನತೆ ಕಾರಣಕ್ಕೆ ಅಂಬೇಡ್ಕರ್ ಬೌದ್ಧ ಧರ್ಮಕ್ಕೆ ಸೇರಿ, ತಾನು ಹಿಂದೂವಾಗಿ ಹುಟ್ಟಿ ಹಿಂದೂವಾಗಿ ಸಾಯುವುದಿಲ್ಲ ಎಂದು ಘೋಷಿದಿದ್ದನ್ನು ಸ್ಮರಿಸಿದರು.

ಒಳ‌ಮೀಸಲಾತಿ ಕುರಿತಾದ ಗೊಂದಲ ನಿವಾರಿಸಲು ನಾಗಮೋಹನ್ ದಾಸ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿಯ ಶಿಫಾರಸ್ಸಿನಂತೆ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ಆರಂಭಿಸಿದ್ದೇವೆ ಎಂದರು. ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆ ಒಳ ಮೀಸಲಾತಿಯ ಎಲ್ಲಾ ಗೊಂದಲಗಳನ್ನು ನಿವಾರಿಸುತ್ತದೆ ಎನ್ನುವ ಭರವಸೆ ಇದೆ ಎಂದರು.

ಅಂಬೇಡ್ಕರ್ ಅವರು ಮೀಸಲಾತಿ ಕೊಡದೇ ಹೋಗಿದ್ದರೆ ನಾವು ಮನುಷ್ಯರಾಗಲು ಸಾಧ್ಯವೇ ಇರಲಿಲ್ಲ. ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ . ಶತ ಶತಮಾನಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಡಲಾಗಿತ್ತು. ಸಂವಿಧಾನದ ಕಾರಣದಿಂದ ಧಿಕ್ಷಣ ಪಡೆದು ಮುಖ್ಯಮಂತ್ರಿ ಆದೆ, ಇಲ್ಲದಿದ್ದರೆ ಕುರಿನೊ, ಎಮ್ಮೆನೊ ಕಾಯ್ಕಂಡು ಇರಬೇಕಿತ್ತು ಎಂದರು.

ನಮ್ಮ ಸ್ಥಿತಿಗೆ ಶಿಕ್ಷಣ ಮತ್ತು ಸಾಮಾಜಿಕ ಪರಿಸ್ಥಿತಿಗಳೇ ಕಾರಣವೇ ಹೊರತು ಹಣೆಬರಹ ಕಾರಣ ಅಲ್ಲ. ಪೂರ್ವ ಜನ್ಮದ ಪಾಪದ ಕಾರಣಕ್ಕೆ ಈಗ ಬಡತನ ಬಂದಿದೆ ಎನ್ನುವ ಕರ್ಮ ಸಿದ್ಧಾಂತ ಅಪ್ಪಟ ಸುಳ್ಳು. ಅದಕ್ಕೇ ಕರ್ಮ‌ ಸಿದ್ದಾಂತ ತಿರಸ್ಕರಿಸಿ ಎಂದು ಬಸವಣ್ಣನವರು ಕರೆ ನೀಡಿದರು ಎಂದರು.

140 ಕೋಟಿ ಸವಲತ್ತು ವಿತರಣೆ

ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ.

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80 ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4ರೂ ಹೆಚ್ಚು ಮಾಡಿ ಇದರಲ್ಲಿ ಒಂದೂ ರೂಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ.

ಆದರೆ ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್ , ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ, ಮೋದಿ ಸರ್ಕಾರ. ಆದ್ದರಿಂದ ಜನಾಕ್ರೋಶ ಇರುವುದು ಬಿಜೆಪಿ ಸರ್ಕಾರದ ಮೋದಿಯ ವಿರುದ್ಧವೇ ಹೊರತು ನಮ್ಮ ಕಾಂಗ್ರೆಸ್ ಸರ್ಕಾರದ ಮೇಲಲ್ಲ ಎಂದು ಬಿಜೆಪಿ ಯ ಜನಕ್ರೋಶ ಯಾತ್ರೆಯನ್ನು ವ್ಯಂಗ್ಯವಾಡಿದರು.

ಬಾಲ್ಯವಿವಾಹ : ಚಾಮರಾಜನಗರದಲ್ಲಿ ಮತ್ತೊಂದು ಪ್ರಕರಣದಲ್ಲಿ ಎಂಟು ಮಂದಿ ವಿರುದ್ದ ದೂರು ದಾಖಲು
ಚಾಮರಾಜನಗರ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಮಹಿಳಾ ಪೊಲೀಸರು ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 15 ವರ್ಷದ ಬಾಲಕಿಯನ್ನು 27 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿಸಿದ ಸಂಬಂಧ ಈ ಪ್ರಕರಣ ದಾಖಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಸಹಾಯವಾಣಿ 1098ಕ್ಕೆ ದೂರು ಬಂದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಏಪ್ರಿಲ್ 30 ರಂದು ವಿಶೇಷ ದಿನವಾಗಿರುವ ಹಿನ್ನೆಲೆಯಲ್ಲಿ ಈ ದಿನವೂ ಸಹ ಬಾಲ್ಯ ವಿವಾಹ ನಡೆಯಬಹುದು ಎಂದು ಊಹಿಸಲಾಗಿದೆ. ಅಕಸ್ಮಾತ್ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098 ಅಥವಾ ಪೊಲೀಸ್‌ ಸಹಾಯವಾಣಿ 112ಕ್ಕೆ ಇಲ್ಲವೇ ಸಂಬಂಧಪಟ್ಟ ಹತ್ತಿರದ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾ ಆಡಳಿತ ತಿಳಿಸಿದೆ.

“ಬಾಲ್ಯ ವಿವಾಹವು ಕಾನೂನಿನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಅಂತಹ ಸಂದರ್ಭಗಳಲ್ಲಿ, ಪೋಷಕರು, ಸಂಬಂಧಿಕರು, ಪುರೋಹಿತರು ಮತ್ತು ಮದುವೆಗೆ ಸಹಾಯ ಮಾಡುವ ಅಥವಾ ಭಾಗವಹಿಸುವ ಯಾರನ್ನಾದರೂ ತಪ್ಪಿತಸ್ಥರೆಂದು ಪರಿಗಣಿಸಲಾಗುತ್ತದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬಹುದು” ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಹೇಳಿದ್ದಾರೆ. ಈ ಕಾನೂನಿನ ಅಡಿಯಲ್ಲಿ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹ 1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ನೀಡುತ್ತದೆ ಎಂದು ಹೇಳಿದರು.

ಮಲೆ ಮಹದೇಶ್ವರ ಬೆಟ್ಟ (Malemahadeshwara Betta) ಹಾಡಿಗಳಿಗೆ ಆಂಬುಲೆನ್ಸ್‌ ಸೇವೆ ಆರಂಭ
ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ (Malemahadeshwara Betta) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಡಿಗಳ ಜನರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ತಿಳಿಸಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಲೆ ಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಗ್ರಾಮಗಳಿದ್ದು ಬೆಟ್ಟ ಗುಡ್ಡಗಳಿಂದ ಅರಣ್ಯದ ಮಧ್ಯಭಾಗದಲ್ಲಿ ಇರುವುದರಿಂದ ಸಮರ್ಪಕ ರಸ್ತೆ ಇಲ್ಲದೆ ಇರುವುದರಿಂದ ಸಾರಿಗೆ ವ್ಯವಸ್ಥೆ ಇಲ್ಲದೆ ಇಲ್ಲಿ ನಾನ್ ನಿವಾಸಿಗಳು ತೊಂದರೆ ಅನುಭವಿಸುತ್ತಿರುವುದರ ಬಗ್ಗೆ ಶಾಸಕ ಎಂಆರ್ ಮಂಜುನಾಥ್ ರವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಜಿಲ್ಲಾ ಉಸ್ತುವಾರಿ ಸಚಿವರು ಪ್ರಾಧಿಕಾರದ ವೆಂಕಟೇಶ್ ರವರ ಗಮನಕ್ಕೆ ತಂದು ಪ್ರಾಧಿಕಾರದ ಅನುಮೋದನೆಯೊಂದಿಗೆ 18.5 ಲಕ್ಷ ವೆಚ್ಚದಲ್ಲಿ ವಿಶೇಷ ವ್ಯವಸ್ಥೆಯುಳ್ಳ ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿದೆ ಎಂದರು.

ಶಾಸಕರಿಂದ ಹಸ್ತಾಂತರ: ಶ್ರೀ ಕ್ಷೇತ್ರ ಮಲೆಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಖರೀದಿಸಿರುವ ವಿಶೇಷ ಆಂಬುಲೆನ್ಸ್ ವಾಹನವನ್ನು ಶಾಸಕ ಎಂಆರ್ ಮಂಜುನಾಥ್, ಜಿಲ್ಲಾಧಿಕಾರಿ ಸಿ ಟಿ ಶಿಲ್ಪನಾಗ್ ರವರ ಸಮ್ಮುಖದಲ್ಲಿ ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಯಿತು.

ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಕಾಡಂಚಿನ ಗ್ರಾಮಗಳ ನಿವಾಸಿಗಳು ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ತಕ್ಷಣ ನೀವಿರುವ ಸ್ಥಳಕ್ಕೆ ಬಂದು ಚಿಕಿತ್ಸೆ ಕೊಡಿಸಲು ಕರೆದೊಯ್ಯುತ್ತಾರೆ. ಈ ನಿಟ್ಟಿನಲ್ಲಿ ಕಾಡಂಚಿನ ಗ್ರಾಮಗಳ ನಿವಾಸಿಗಳು ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ, ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಆಧುನಿಕ ಭಾರತದ ಪರಂಜ್ಯೋತಿ ಬಾಬಾಸಾಹೇಬ್ ಅಂಬೇಡ್ಕರ್: ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ
ಕೊಳ್ಳೆಗಾಲ, ಫೆ 09 : “ಜಾನಪದ ಲೋಕದಲ್ಲಿ ಧರೆಗೆ ದೊಡ್ಡವರಾಗಿ ಸರ್ವಜನಾಂಗದ ಪಾಲಿನ ಪರಂಜ್ಯೋತಿಯಾದ ಮಂಟೇಸ್ವಾಮಿಯವರಂತೆ ಬಹುಜನರಿಗೆ ಭಾರತ ಸಂವಿಧಾನವೆಂಬ ಮಹಾಬೆಳಕನ್ನಿತ್ತ ಆಧುನಿಕ ಭಾರತದ ಪರಂಜ್ಯೋತಿ ಬಾಬಾಸಾಹೇಬ್ ಅಂಬೇಡ್ಕರ್” ಎಂದು ರಾಷ್ಟ್ರಪತಿ ಪ್ರಶಸ್ತಿ-ಮಹರ್ಷಿ ವ್ಯಾಸ್ ಸಮ್ಮಾನ್ ಪುರಸ್ಕೃತ ಯುವ ವಿದ್ವಾಂಸ ಹಾಗೂ ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ತಮ್ಮ ಅಭಿಪ್ರಯಾವನ್ನು ವ್ಯಕ್ತಪಡಿಸಿದರು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ದಲಿತ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕ ಹಾಗೂ ರೋಟರಿ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಭಾರತ ಸಂವಿಧಾನ ದಿನ ಹಾಗೂ ಸಮಾನತೆಯ ಸಾಲುದೀಪ ನಮನ” ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ

“ಜನಸಂಸ್ಕೃತಿಯ ಮಹಾಸಂತರಾದ ಪರಂಜ್ಯೋತಿ ಮಂಟೇಸ್ವಾಮಿ ಅವರನ್ನು ಕುರಿತು ಜನಪದರು ಹಾಡಿರುವ ಮಹಾಕಾವ್ಯವು ಪ್ರಾತಃಸ್ಮರಣೀಯ. ಆ ಕಾವ್ಯದಲ್ಲಿ ಬರುವ ‘ತಿಪ್ಪೆ ಮೇಲೆ ಕಸಮಡಗಿದರೆ ಭಿನ್ನಭೇದವಿಲ್ಲದಂತೆ ಏಕವಾಗಿ ಉರಿವ ಪರಂಜ್ಯೋತಿ” ಎಂಬ ಜನನುಡಿಯು ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರ ನಾಯಕತ್ವದಲ್ಲಿ ರಚನೆಗೊಂಡ ಭಾರತ ಸಂವಿಧಾನಕ್ಕೆ ಅರ್ಥಪೂರ್ಣವಾಗಿ ಅನ್ವಯವಾಗುವಂಥದು. ಸಮಸ್ತ ಭಾರತೀಯರಿಗೂ ಯಾವುದೇ ಭೇದವಿಲ್ಲದೆ ಒಂದೇ ಸಮನಾದ ಹಕ್ಕು, ಬಾಧ್ಯತೆ, ಅವಕಾಶಗಳನ್ನು ನೀಡಿ ಸಹಭಾಗಿತ್ವ ಹಾಗೂ ಸಾಮರಸ್ಯದ ಬದುಕನ್ನಿತ್ತಿರುವುದು ನಮ್ಮ ಹೆಮ್ಮೆಯ ಸಂವಿಧಾನ. ಇದು ಏಕನೆಲೆಗೆ ಎಂದೂ ಸೀಮಿತವಾದುದಲ್ಲ. ಭಾರತದ ಬಹುನೆಲೆಗಳಲ್ಲಿ ಏಕವಾಗಿ ಉರಿವ ಪರಂಜ್ಯೋತಿಯೇ ಆಗಿದೆ ಎಂದು ಬಣ್ಣಿಸಿದರು.

ಅಂಬೇಡ್ಕರ್ ಅವರು ತಳನೆಲೆಯಿಂದ ಅಸಂಖ್ಯ ನೋವು, ಅವಮಾನಗಳನ್ನು ಅನುಭವಿಸಿ ಬಂದವರಾದರೂ ತಮ್ಮ ದೃಷ್ಟಿಯನ್ನು ವಿಶಾಲಗೊಳಿಸಿಕೊಂಡವರು. ಅವರ ಜ್ಞಾನವಾಗಲೀ ಕಾಯಕವಾಗಲೀ ಏಕಕೋನೀಯವಾಗಿರಲಿಲ್ಲ, ಬಹುಕೋನೀಯವಾಗಿತ್ತು. ೩೬೦ ಡಿಗ್ರಿಯಷ್ಟು ವಿಶಾಲವೂ ಆಳವೂ ಆಗಿದ್ದ ಅಂಬೇಡ್ಕರ್ ದೃಷ್ಟಿಕೋನದಿಂದಲೇ ಭಾರತ ಸಂವಿಧಾನವು ಸರ್ವಜನಾಂಗದ ಬದುಕುಗಳನ್ನು ನಿತ್ಯವೂ ಬೆಳಗುವಂತಾಗಿರುವುದು. ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವೆಂಬ ಪ್ರಸಿದ್ಧಿಗೆ ಪಾತ್ರವಾಗಿರುವುದು. ಇಂತಹ ಸಂವಿಧಾನದ ಬೆಳಕನ್ನು ಆರಿಸಿ ಸರ್ವಾಧಿಕಾರದ ಏಕಮತೀಯ ಸಂವಿಧಾನ ತರ್ತೀವಿ ಅನ್ನೋಸು ಜನದ್ರೋಹಿ, ದೇಶದ್ರೋಹದ ಕೃತ್ಯವಲ್ಲವೆ ಎಂದು ತಿಳಿಸಿದರು.

ಭಾರತ ಸಂವಿಧಾನಕ್ಕೆ ಕನ್ನಡ ನೆಲದ ಸೃಜನಶೀಲ ಮನಸ್ಸು ನೀಡಿದ ಹೃದಯಸಂವಾದದ ಸಾಕ್ಷಿಯಾಗಿ ಮಹಾಕವಿ ಕುವೆಂಪು ವಿರಚಿತ ‘ ಶ್ರೀಸಾಮಾನ್ಯರ ದೀಕ್ಷಾಗೀತೆ’ ಕವಿತೆ ಕಾಣುತ್ತದೆ. ೧೯೫೦ರ ಜನವರಿ ೩೬ರಂದು ಮೈಸೂರಿನಲ್ಲಿ ಕುವೆಂಪು ಬರೆದ ಈ ಕವಿತೆಯು, ಕೊನೆಗೊಂಡಿತು ಓರೋರ್ವರ ಗರ್ವದ ಕಾಲ, ಇದು ಸರ್ವರ ಕಾಲ, ಶ್ರೀಸಾಮಾನ್ಯನೇ ಭಗವನ್ ಮಾನ್ಯಂ, ಶ್ರೀಸಾಮಾನ್ಯದ ಪೂಜೆಗೆ ದೀಕ್ಷೆಯ ಕೊಳ್ಳಿರಿ ಎಂದು ಸಾರುತ್ತದೆ. ಸಂವಿಧಾನ ರಚನಾ ಸಮಯದ ಚರ್ಚೆಯಲ್ಲಿ “ಶ್ರೀಸಾಮಾನ್ಯರೇ ನನ್ನ ದೇವರು” ಎಂದಿದ್ದ ಅಂಬೇಡ್ಕರ್ ಅವರ ಮಹದಾಶಯವನ್ನು ಹೃದಯಗಿವಿಯಿಂದ ಆಲಿಸಿ, ಆಲಂಗಿಸಿಕೊಂಡ ಮಹಾಕವಿಯ ಉಲಿಯಂತೆ ಕಾಣುತ್ತದೆ ಎಂದರು.

ಶೋಷಣೆ ಮಾಡಿದವರನ್ನು ದ್ವೇಷ ಮಾಡುತ್ತಲೋ ಅಥವಾ ಅಧಿಕಾರ ಸಿಕ್ಕಾಗ ಮರುಶೋಷಣೆ ಮಾಡುವುದರಿಂದಲೋ ಭಾರತ ಬೆಳಗುವುದಿಲ್ಲ, ಅಸಮಾನತೆ ಅಳಿಯುವುದಿಲ್ಲ. ದ್ವೇಷಿಸುವವರು ಹಾಗೂ ಶೋಷಿಸುವವರೇ ನಮ್ಮನ್ನು ಗೌರವಿಸುವಂಥ ಸಾಧನೆ ಬದುಕು ನಮ್ಮದಾಗಬೇಕು. ಅದಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರೇ ನಮಗೆ ಬಹುದೊಡ್ಡ ಮಾದರಿ ಮತ್ತು ಮಾರ್ಗದಾತರಾಗಿದ್ದಾರೆ ಎಂದರು.
ಬಾಬಾಸಾಹೇಬ್ ಅಂಬೇಡ್ಕರ್ ಅವರು ಅಸಮಾನತೆಯ ಅಸ್ಪೃಶ್ಯಭಾರತ ಭೂಗರ್ಭದಿಂದ ಪುಟಿದೆದ್ದ ಕ್ರಾಂತಿವಜ್ರ. ಅವರ ಜ್ಞಾನ, ಶೀಲ ಹಾಗೂ ಕ್ರಾಂತಿಯಾನವು ವಜ್ರದಷ್ಟೇ ಹೊಳಪುಳ್ಳದ್ದು ಹಾಗೂ ಮೌಲ್ಯಯುತವಾದದ್ದು. ಇಂತಹ ವಜ್ರದೀಪ್ತಿಯುಳ್ಳ ಡೈಮಂಡ್ ಸ್ಟಾರ್ ಆದ ಅಂಬೇಡ್ಕರ್ ಅವರನದನು ನಮ್ಮೆಲ್ಲರ ಎದೆಗಳಲ್ಲಿ ಬೆಳಗಿಕೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಜಾನಪದ ಕಲಾವಿದರೂ ದಲಿತ ಸಾಹಿತ್ಯ ಪರಿಷತ್ತಿನ ಚಾಮರಾಜನಗರ ಜಿಲ್ಲಾಧ್ಯಕ್ಷರೂ ಆದ ಸಿ.ಎಂ.ನರಸಿಂಹಮೂರ್ತಿ ಅವರು ಅಧ್ಯಕ್ಷತೆ ವಹಿಸಿದ್ದರು. ಸಮಾನತೆಯ ಸಾಲುದೀಪಗಳು ಕುರಿತಾದ ಉಪನ್ಯಾಸದಲ್ಲಿ ‘ಮಾನವತೆಯ ಕ್ರಾಂತಿಜ್ಯೋತಿ ಸಾವಿತ್ರಿ ಬಾಫುಲೆ’ ಕುರಿತು ಚಾಮರಾಜನಗರ ವಿವಿಯ ಕನ್ನಡ ಅಧ್ಯಾಪಕಿ ಡಾ.ಆರ್.ಶಶಿಕಲಾ ಅವರು ಮಾತನಾಡಿದರು. ‘ಬಾಬಾಸಾಹೇಬರ ಭೀಮಬಲ ರಮಾಬಾಯಿ ಅಂಬೇಡ್ಕರ್’ ಕುರಿತು ನಿವೃತ್ತ ಉಪನ್ಯಾಸಕಿಯಾದ ಡಾ.ಸರಸ್ವತಿ ಹೊನ್ನಪ್ಪ ಅವರು ವಿಚಾರ ಮಂಡಿಸಿದರು. ಕೊಳ್ಳೇಗಾಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಗರಾಜು ಕೊಂಗರಹಳ್ಳಿ ಹಾಗೂ ಸಾಹಿತ್ಯ ಮಿತ್ರಕೂಟದ ಅಧ್ಯಕ್ಷರಾದ ದೊರೆಸ್ವಾಮಿ ಅವರು ಮುಖ್ಯ ಅತಿಥಿಗಳಾಗಿದ್ದರು. ದಲಿತ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷರಾದ ಡಾ.ಕವಿತಾ ಡಿ.ಎಲ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಷತ್ತಿನ ಪದಾಧಿಕಾರಿ ನಾಗರಾಜ್ ಸ್ವಾಗತಿಸಿದರು. ಕನ್ನಡ ಭಾಷಾ ಶಿಕ್ಷಕಿ ಪ್ರೇಮಕುಮಾರಿ ಅವರು ನಿರೂಪಿಸಿದರು. ಗಮಕಿಗಳಾದ ಶಿವಣ್ಣ ಇಂದ್ವಾಡಿ, ವಿದ್ವಾಂಸರಾದ ಡಾ.ಆದೆಪ್ಪ ಕೆ.ಹಂದಿಹಾಳ್, ದಸಾಪ ತಾಲ್ಲೂಕು ಕಾರ್ಯದರ್ಶಿ ಡಾ.ದಿಲಿಪ್ ಎನ್.ಕೆ, ಹಿರಿಯರಾದ ಪುಟ್ಟ ಅರಸ ಶೆಟ್ಟಿ, ರಾಜಪ್ಪಾಜಿ, ರಾಮಣ್ಣ, ಭಾಗ್ಯಮ್ಮ, ಆನಂದರಾಜ್, ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಗುಲಾಮಗಿರಿಯ ಮನಸ್ಥಿತಿ ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಚಾಮರಾಜನಗರ, ಡಿಸೆಂಬರ್ 07: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಕೊಳ್ಳೇಗಾಲ ಸಂಘ ಸಂಸ್ಥೆಗಳು, ಭಕ್ತವೃಂದ ಹಾಗೂ ಜೆ.ಎಸ್.ಎಸ್ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಡಾ: ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ 109 ನೇ ಜಯಂತ್ಯೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಸಮಾಜದಲ್ಲಿ ಬದಲಾವಣೆ ತರಲು, ಮುಖ್ಯವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣ ಇಲ್ಲದೇ ಹೋದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವಾಗುವುದಿಲ್ಲ. ಗುಲಾಮಗಿರಿ ಮನಸ್ಥಿತಿಯನ್ನು ಕಿತ್ತೊಗೆಯಬೇಕು. ಇದು ವೈಜ್ಞಾನಿಕ ಶಿಕ್ಷಣದಿಂದ ಸಾಧ್ಯ ಎಂದರು.‌

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಒಬ್ಬ ಶ್ರೇಷ್ಠ ಸಂತರು. ಇಡೀ ಸಮಾಜಕ್ಕೆ ಮಾನವೀಯತೆಯ ಸಂದೇಶವನ್ನು ಸಾರಿದ್ದರು. ಆ ಕಾಲದಲ್ಲಿಯೇ ರಾಜೇಂದ್ರ ಮಹಾಸ್ವಾಮಿಗಳು ಗ್ರಾಮೀಣ ಮಕ್ಕಳಿಗೆ ಶಿಕ್ಷಣ, ವಸತಿನಿಲಯ ನಿರ್ಮಿಸಿದ್ದರಿಂದ ಇಂದು ಸುತ್ತೂರು ಮಹಾಸಂಸ್ಥಾನ ಹೆಮ್ಮರವಾಗಿ ಬೆಳೆಯಲು ಸಾಧ್ಯವಾಗಿದೆ. ಅವರ ಕಾಲದಲ್ಲಿ ಸಣ್ಣ ಝರಿಯಾಗಿದ್ದ ಸಂಸ್ಥೆ ಇಂದು ದೊಡ್ಡ ಸಮುದ್ರವಾಗಿದೆ. ಬಸವಣ್ಣನವರ ಸಂದೇಶವನ್ನು ರಾಜೇಂದ್ರ ಮಹಾಸ್ವಾಮಿಗಳು ಬಹಳ ವ್ಯಾಪಕವಾಗಿ ದೇಶ, ವಿದೇಶಗಳಲ್ಲಿಯೂ ಪಸರಿಸಿದ್ದಾರೆ ಎಂದರು.

ಮಾನವ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು
ಮಾನವ ಸಮಾಜದಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ಧ್ವೇಷಿಸುವುದನ್ನು ಸಂಪೂರ್ಣವಾಗಿ ಬಿಡಬೇಕು. ಎಲ್ಲರೂ ಕೂಡ ಮಾನವ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕೆಂದು ಸಂತರು, ಸಾಧುಗಳು, ಸೂಫಿಗಳು, ಸಮಾಜ ಸುಧಾರಕರು ಈ ದೇಶದಲ್ಲಿ ಹೇಳಿದ್ದಾರೆ. ಸುತ್ತೂರು ಗ್ರಾಮದಿಂದ ಬಂದ ಸ್ವಾಮಿಗಳು ಹಳ್ಳಿ ಜನರ ಬದುಕನ್ನು ಅರ್ಥ ಮಾಡಿಕೊಂಡಿದ್ದರು. ಸಮಾಜದಲ್ಲಿ ಅನೇಕ ನೂನ್ಯತೆ, ಅಸಮಾನತೆಗಳನ್ನು ಕಾಣುತ್ತೇವೆ. ಅಸಮಾನತೆ ನಿರ್ಮಾಣವಾಗಿದ್ದರೆ ಜಾತಿ ವ್ಯವಸ್ಥೆಯ ಕಾರಣದಿಂದ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಬಹುಸಂಖ್ಯಾತ ಜನ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದರು ಎಂದರು.

ಸಂವಿಧಾನದಿಂದ ಎಲ್ಲರಿಗೂ ಸಮಾನ ಅವಕಾಶಗಳು

ವ್ಯಕ್ತಿಯ ಯೋಗ್ಯತೆಯನ್ನು ಅವನ ಜಾತಿಯ ಆಧಾರದ ಮೇಲೆ ಅಳೆಯಲಾಗುತ್ತದೆ. ನೈಜ ಪ್ರತಿಭೆಯನ್ನು ಸಾಧನೆಯಿಂದ ಅಳೆಯಲಾಗುತ್ತದೆ. ಇದನ್ನು ರಾಜೇಂದ್ರ ಸ್ವಾಮಿಗಳು ಕಣ್ಣಾರೆ ಕಂಡಿದ್ದ ರಾಜೇಂದ್ರ ಸ್ವಾಮಿಗಳು ಶಿಕ್ಷಣ ಬಹಳ ಮುಖ್ಯ ಎಂದು ಅರ್ಥ ಮಾಡಿಕೊಂಡಿದ್ದರು. ಸುತ್ತೂರಿನಿಂದ ಮೈಸೂರಿಗೆ ಬಂದ ನಂತರ ವಸತಿ ನಿಲಯಗಳನ್ನು ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭ ಮಾಡಿದರು. ವಸತಿ ನಿಲಯಗಳಿಲ್ಲದೇ ಹೋದರೇ ಬಹಳ ಜನರಿಗೆ ಓದುವ ಅವಕಾಶ ತಪ್ಪುತ್ತಿತ್ತು. ಸಂವಿಧಾನ ಬಂದ ನಂತರ ಎಲ್ಲರಿಗೂ ಸಮಾನ ಅವಕಾಶಗಳನ್ನು ಪಡೆಯುವಂತಾಗಿದೆ. ಯಾರೂ ಯಾರಿಂದಲೂ ಶೋಷಣೆಗೆ ಒಳಗಾಗಬಾರದು, ಎಲ್ಲರಿಗೂ ಸಮಾನ ಶಿಕ್ಷಣ, ಬದುಕುವ ಅವಕಾಶಗಳನ್ನು , ಸಂವಿಧಾನದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ದೊರಕಿಸಿ ಕೊಟ್ಟಿದ್ದಾರೆ. ಅದಕ್ಕಾಗಿಯೇ ನಮ್ಮ ಸರ್ಕಾರ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲಿಯೂ ಓದಿಸಲಾಗುತ್ತಿದೆ. ಸಂವಿಧಾನದ ಆಶಯಗಳು ಹಾಗೂ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು. ಸಂವಿಧಾನ ಗೊತ್ತಿಲ್ಲದೇ ಹೋದರೆ ನಮಗಿರುವ ಹಕ್ಕುಗಳು ಯಾವುವು, ನಮ್ಮ ಕರ್ತವ್ಯಗಳೇನು ಎಂದು ತಿಳಿಯುವುದಿಲ್ಲ. ನಮಗೆ ಹಕ್ಕುಗಳು ತಿಳಿದರೆ ಅವುಗಳನ್ನು ಪಡೆಯುವ ಪ್ರಯತ್ನ ಮಾಡಬಹುದು. ಎಲ್ಲರಿಗೂ ಒಂದೇ ರೀತಿಯ ಹಕ್ಕುಗಳಿವೆ. ದಲಿತರು, ಹಿಂದುಳಿದವರು, ಮುಂದುವರೆದವರು ಬಹುಸಂಖ್ಯಾತರಿಗೆ ಒಂದೇ ರೀತಿಯ ಹಕ್ಕುಗಳಿವೆ ಎಂದರು.

ಮನುಷ್ಯರಾಗಿ, ಮಾನವರಾಗಿ ಬದುಕುವ ಪ್ರಯತ್ನ ಮಾಡಬೇಕು
ಧರ್ಮವನ್ನು ನಾವು ಸರಿಯಾಗಿ ಅರ್ಥ ಮಡಿಕೊಳ್ಳಬೇಕು. ‘ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ’ ಎಂದು ಬಸವಣ್ಣ ಅರ್ಥವಾಗುವ ರೀತಿಯಲ್ಲಿ ಹೇಳಿದ್ದಾರೆ. ದಯೆ ಪ್ರತಿಯೊಬ್ಬರಲ್ಲಿಯೂ ಇರಬೇಕು. ಅದಕ್ಕಾಗಿಯೇ 12 ನೇ ಶತಮಾನದಲ್ಲಿಯೇ ಸಮಸಮಾಜಕ್ಕಾಗಿ ಕ್ರಾಂತಿ ಮಾಡಿದರು. ಕಂದಾಚಾರ, ಮೌಢ್ಯಗಳ ವಿರುದ್ಧ ಹೋರಾಟ ಮಾಡಿದವರು, ಜೊತೆಗೆ ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಇದನ್ನು ಅರ್ಥ ಮಡಿಕೊಳ್ಳಬೇಕು. ಈಗಲೂ ಅನೇಕರು ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಡುತ್ತಾರೆ. ಸ್ವರ್ಗ ನರಕದ ಕಲ್ಪನೆಯನ್ನು ನಿರಾಕರಿಸಿದ್ದ ಬಸವಣ್ಣ ‘ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ’ ಎಂದು ಹೇಳಿದ್ದರು. ಇದನ್ನು ನಾವು ಪಾಲನೆ ಮಾಡಬೇಕು. ನಾವೆಲ್ಲರೂ ಮನುಷ್ಯರಾಗಿ, ಮಾನವರಾಗಿ ಬದುಕುವ ಪ್ರಯತ್ನ ಮಾಡಬೇಕು. ಧರ್ಮ ಹಾಗೂ ಶಿಕ್ಷಣದ ಕೆಲಸವನ್ನು ಸುತ್ತೂರು ಸಂಸ್ಥೆಗಳು ಮಾಡುತ್ತಿವೆ. ಅದಕ್ಕೆ ಅಡಿಪಾಯವನ್ನು ಹಾಕಿದವರು ರಾಜೇಂದ್ರ ಮಹಾಸ್ವಾಮಿಗಳು. ಅವರು ಬಯಸಿದಂತಹ ಸಮಾಜ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ ಎಂದರು.

ಜಗದ್ಗುರು ಡಾ: ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿ, ಸಾಲೂರು ಬೃಹನ್ಮಠದ ಶ್ರೀ ಮಲೆಮಹದೇಶ್ವರ ಬೆಟ್ಟದ ಡಾ: ಶ್ರೀ ಶಾಂತಿ ಮಲ್ಲಿಕಾರ್ಜುನ ಸ್ವಾಮಿಗಳು, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಮರಿಸ್ವಾಮಿ , ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ , ಉಪಾಧ್ಯಕ್ಷರಾದ ಎ.ಪಿ.ಶಂಕರ್ ಮೊದಲಾದವರು ಉಪಸ್ಥಿತರಿದ್ದರು.

ಚಾಮರಾಜನಗರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್‌ ಢಿಕ್ಕಿ, ಸ್ಥಳದಲ್ಲೇ ಸಾವು
ಚಾಮರಾಜನಗರ : ವ್ಯಕ್ತಿಯೊಬ್ಬರು ರಾಷ್ಟ್ರೀಯ ಹೆದ್ದಾರಿಯನ್ನುದಾಟುತ್ತಿದ್ದಾಗ ವೇಗವಾಗಿ ಬಸ್ಸೊಂದು ಬಂದು ಗುದ್ದಿದ ಕಾರಣ ವ್ಯಕ್ತಿ ಸ್ಥಳದಲ್ಲೇ ಮರಣ ಹೊಂದಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪ ರಾಘವಪುರ ಗೇಟ್ ಬಳಿಯಿಂದ ಘಟನೆಯ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ನಂಜನಗೂಡು ತಾಲ್ಲೂಕಿನ ಹುರ ಗ್ರಾಮದವರೆಂದು ಗುರುತಿಸಲಾಗಿದೆ.

ಅಪಘಾತದ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ: ರಾಜ್ಯದ ಸಂಸದರಿಗೆ ಸಿಎಂ‌ ಕರೆ
ಚಾಮರಾಜನಗರ ಜು 10: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿತನದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರದಲ್ಲಿ ರಾಜ್ಯದ ಪರವಾಗಿ ನಿರಂತರ ಹೋರಾಟ ಮುಂದುವರೆಸಿ ಎಂದು ರಾಜ್ಯದ ಸಂಸದರಿಗೆ ಚಾಮರಾಜನಗರದ ವೇದಿಕೆಯಲ್ಲಿ ನಿಂತು ಸಿಎಂ ಕರೆ ನೀಡಿದರು.

ನೆಹರೂ ಅವಧಿಯಿಂದ ಇವತ್ತಿನವರೆಗೆ ಕಾಂಗ್ರೆಸ್ ನಿರಂತರವಾಗಿ ಸಮಾಜದ ಸಮಗ್ರ ಅಭಿವೃದ್ಧಿಗೆ, ಸರ್ವ ಜನರ ಪ್ರಗತಿ ಮತ್ತು ಸಾಮರಸ್ಯಕ್ಕಾಗಿ ಶ್ರಮಿಸುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.

ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ದಲಿತರು, ಮಹಿಳೆಯರು, ಹಿಂದುಳಿದವರು, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಕೊಡಬೇಕು ಎನ್ನುವುದು ನನ್ನ ಗುರಿಯಾಗಿದೆ. ಇದೇ ಕಾಂಗ್ರೆಸ್ ಪಕ್ಷದ ಆಧ್ಯತೆಯೂ ಆಗಿದೆ ಎಂದರು.

ಈ ದೇಶದ ಸ್ವಾತಂತ್ರ್ಯಕ್ಕಾಗಿ ಅತಿ ಹೆಚ್ಚು ಪ್ರಾಣ, ಆಸ್ತಿ, ಪಾಸ್ತಿ ಕಳೆದುಕೊಂಡವರು ನಾವು ಕಾಂಗ್ರೆಸ್ಸಿಗರು. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಮಹಾತ್ಮಗಾಂಧಿ ಕರೆ ಕೊಟ್ಟಾಗ ಜನಸಂಘ (ಬಿಜೆಪಿಯವರು) ಬ್ರಿಟಿಷರ ಜೊತೆ ಕೈಜೋಡಿಸಿದರೆ ಉಳಿದ ಭಾರತೀಯರೆಲ್ಲರೂ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು ಎಂದು ಹೋರಾಟದ ದಿನಗಳನ್ನು ನೆನಪಿಸಿದರು.

ಸರ್ವ ಜಾತಿ ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ ಮನೆಗೆ ತಲುಪಿಸಿದ್ದೇವೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ, ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.

ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದರು.

ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ 80 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಬಿಜೆಪಿಯವರು ದೇಶದ ಮತದಾರರನ್ನು ದಡ್ಡರು ಎಂದು ಬಿಂಬಿಸುತ್ತಿದ್ದಾರೆ. ಆದರೆ ನಮ್ಮ ಮತದಾರರು ದಡ್ಡರಲ್ಲ ಎಂದರು.

ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿದೆವು. ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಸ್ವಲ್ಪ ಹಣ ಬಿಡುಗಡೆ ಮಾಡಿತು. ಹೀಗಾಗಿ ಕೇಂದ್ರದಲ್ಲಿ ರಾಜ್ಯದ ಪರವಾಗಿ ಹೋರಾಟ ಮುಂದುವರೆಸಲು ಎಲ್ಲಾ 28 ಮಂದಿ ಸಂಸದರಿಗೆ ಸೂಚನೆ ನೀಡಿದ್ದೇವೆ ಎಂದರು.

ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಜಮೀರ್ ಅಹಮದ್ ಖಾನ್, ಕೆ.ಹೆಚ್.ಮುನಿಯಪ್ಪ, ಸಂಸದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿ ಮೈಸೂರು, ಚಾಮರಾಜನಗರ ಜಿಲ್ಲೆಗಳ ಶಾಸಕರುಗಳಾದ ಪುಟ್ಟರಂಗಶೆಟ್ಟಿ, ಕೃಷ್ಣಮೂರ್ತಿ, ಅನಿಲ್ ಚಿಕ್ ಮಾದು, ಗಣೇಶ್ ಪ್ರಸಾದ್, ಮಾಜಿ ಶಾಸಕರಾದ ನರೇಂದ್ರ, MLC ತಿಮ್ಮಯ್ಯ, ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್, ಪಕ್ಷದ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್ ಸೇರಿ‌ ಇತರೆ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.