ಚಿಕ್ಕಬಳ್ಳಾಪುರ – Peepal Media

2028ಕ್ಕೆ ನಾನೇ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ್ ವಿಶ್ವಾಸ
ಚಿಕ್ಕಬಳ್ಳಾಪುರ: ಮುಂಬರುವ 2028 ರ ವಿಧಾನಸಭಾ ಚುನಾವಣೆಯಲ್ಲಿ ಸನಾತನ ಹಿಂದೂ ಧರ್ಮವನ್ನು ರಕ್ಷಣೆ ಮಾಡುವವರೇ ರಾಜ್ಯದ ನೇತೃತ್ವ ವಹಿಸಬೇಕು ಎಂದು ಹೇಳುವ ಮೂಲಕ, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಾವು ಮುಖ್ಯಮಂತ್ರಿಯಾಗುವ ವಿಶ್ವಾಸವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಈಶಾ ಕೇಂದ್ರದ ಬಳಿ ಹರಿಕೃಷ್ಣ ಫೌಂಡೇಷನ್ ಆಯೋಜಿಸಿದ್ದ ಗೋದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ಕರ್ನಾಟಕದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾದರಿಯ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಆಶಿಸಿದರು. ಇದೇ ಸಂದರ್ಭದಲ್ಲಿ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಹೆಸರನ್ನು ಪ್ರಸ್ತಾಪಿಸದೆ, “ವಿಧಾನಸಭೆಯೊಳಗೆ ಜೋಕರ್‌ಗಳನ್ನು ಕಾಣುವಂತಾಗಿದೆ” ಎಂದು ವ್ಯಂಗ್ಯವಾಡಿದರು.

ಸಂವಿಧಾನದಲ್ಲಿ ರಾಮ ಮತ್ತು ಗೋ ರಕ್ಷಣೆ

ಡಾ. ಬಿ.ಆರ್. ಅಂಬೇಡ್ಕರ್ ಅವರು ಗೋ ಸಂಪತ್ತು ರಕ್ಷಣೆ ಮಾಡಬೇಕು ಎಂದು ಸಂವಿಧಾನದಲ್ಲಿ ಸೇರಿಸಿದ್ದಾರೆ. ಅಂಬೇಡ್ಕರ್ ಬರೆದ ಸಂವಿಧಾನದ ಮೂಲ ಪ್ರತಿಯ ಮುಖಪುಟದಲ್ಲಿ ರಾಮ, ಲಕ್ಷ್ಮಣ, ಸೀತೆ, ಮತ್ತು ಹನುಮಂತ ಅವರ ಚಿತ್ರವಿದೆ ಎಂದು ಯತ್ನಾಳ್ ಹೇಳಿದರು. “ಗೋ ರಕ್ಷಣೆ ಮಾಡಬೇಕು ಎಂದು ನಮ್ಮ ಸನಾತನ ಧರ್ಮ ಹೇಳುತ್ತದೆ. ಆದರೆ ನಮ್ಮ ದೇಶದಲ್ಲಿ ಗೋ ಹಂತಕರ ಸರ್ಕಾರಗಳು ಮತ್ತು ಸ್ವಾಮೀಜಿಗಳನ್ನು ಅಪಮಾನ ಮಾಡುವ ಸರ್ಕಾರಗಳು ಬರುತ್ತಿವೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ಜಾತಿ ಸಮೀಕ್ಷೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು
ಚಿಂತಾಮಣಿ (ಚಿಕ್ಕಬಳ್ಳಾಪುರ ಜಿಲ್ಲೆ): ಜಾತಿ ಗಣತಿ ಸಮೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 58 ವರ್ಷದ ಶಿಕ್ಷಕರೊಬ್ಬರು ಭಾನುವಾರ ಸಂಜೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರನ್ನು ಚಿಂತಾಮಣಿ ತಾಲ್ಲೂಕಿನ ಯಗವಕೋಟೆ ಕ್ಲಸ್ಟರ್ ಅಡಿಯಲ್ಲಿ ಬರುವ ದಿಗವಕೋಟೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೈ.ವಿ. ರಾಮಕೃಷ್ಣ ಎಂದು ಗುರುತಿಸಲಾಗಿದೆ. ಅವರು ಪತ್ನಿ ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.

ಕೆಲಸದ ಒತ್ತಡದ ಆರೋಪ

ಶಿಕ್ಷಕರ ಸಂಘಟನೆಗಳು ಈ ಘಟನೆಗೆ ಕೆಲಸದ ಒತ್ತಡವೇ ಕಾರಣ ಎಂದು ಆರೋಪಿಸಿವೆ. ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ರಾಮಕೃಷ್ಣ ಅವರ ಮೇಲೆ ಒತ್ತಡವಿತ್ತು ಎಂದು ಸಂಘಟನೆಗಳು ಹೇಳಿವೆ.

ಮಾಹಿತಿಗಳ ಪ್ರಕಾರ, ರಾಮಕೃಷ್ಣ ಅವರಿಗೆ ಆಂಡ್ರಾಯ್ಡ್ ಫೋನ್ ಬಳಕೆಯಲ್ಲಿ ಹೆಚ್ಚು ಪರಿಣತಿ ಇರಲಿಲ್ಲ. ಗುರಿಯನ್ನು ಪೂರೈಸಲು ತಮ್ಮ ಅಸಾಧ್ಯತೆಯನ್ನು ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದರು. ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೆ ಅವರು ಮತ್ತೊಬ್ಬ ಶಿಕ್ಷಕರ ಸಹಾಯದಿಂದ ಸಮೀಕ್ಷೆ ನಡೆಸಿದ್ದರು. ಬಳಿಕ ಅವರಿಗೆ ಅಸ್ವಸ್ಥತೆ ಉಂಟಾದ ಕಾರಣ ವೈದ್ಯರನ್ನು ಭೇಟಿಯಾಗಿದ್ದಾರೆ. ವೈದ್ಯರು ಕೂಡಲೇ ಹತ್ತಿರದ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ. ರಾಮಕೃಷ್ಣ ಅವರು ಖಾಸಗಿ ಆಸ್ಪತ್ರೆಗೆ ತಲುಪಿದಾಗ, ಪರೀಕ್ಷೆ ನಡೆಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಗೌರಿಬಿದನೂರಲ್ಲಿ ಗಣೇಶ ವಿಸರ್ಜನೆ ವೇಳೆ ಅಪಘಾತ; ಇಬ್ಬರ ದುರ್ಮರಣ
ಹಾಸನದ ಮೊಸಳೆಹೊಸಳ್ಳಿ ಗಣೇಶ ವಿಸರ್ಜನೆ ದುರಂತ ಇನ್ನೂ ಕಣ್ಣಮುಂದೆ ಇರುವಾಗಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಲ್ಲೂ ಇದೇ ಮಾದರಿಯ ಘೋರ ಅನಾಹುತವೊಂದು ಸಂಭವಿಸಿದೆ. ಗಣೇಶ ವಿಸರ್ಜನೆ ನೋಡಲು ತೆರಳುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾಸನದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರತ್ತ ನುಗ್ಗಿದ್ದ ಟ್ರಕ್​ ದುರಂತದಲ್ಲಿ 10 ಯುವಕರು ಸಾವನ್ನಪ್ಪಿದ್ದರು. ಇದೇ ರೀತಿಯಲ್ಲಿ ಈಗ ಗೌರಿಬಿದನೂರಿನ ವಡ್ಡರ ಬಂಡೆ ಕ್ರಾಸ್​​​ ಬಳಿ ಗಣೇಶ ವಿಸರ್ಜನೆಗೆ ತೆರಳುತ್ತಿರುವಾಗಲೇ ಘೋರ ಅಪಘಾತ ಸಂಭವಿಸಿದೆ.

ಮಂಚೇನಹಳ್ಳಿಯಿಂದ ಬೈಪಾಸ್ ಗಣೇಶ ಮೆರವಣಿಗೆ ವೀಕ್ಷಣೆಗೆ ಕಾರಲ್ಲಿ ತೆರಳುತ್ತಿದ್ದಾಗ, ವಡ್ಡರ ಬಂಡೆ ಬಳಿ ನಿಯಂತ್ರಣ ಕಳೆದುಕೊಂಡು ಕಾರು ಮರಕ್ಕೆ ಡಿಕ್ಕಿಯಾಗಿ ಈ ಅನಾಹುತ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಡ್ಡರ ಬಂಡೆ ಕ್ರಾಸ್​​​ ಬಳಿ ಅಪಘಾತವಾಗಿದ್ದು, ಕಾರಿನಲ್ಲಿದ್ದ ಮುನಿರಾಜು (28), ಶಶಿ (42) ಅಸುನೀಗಿದರೆ, ರಮೇಶ್ ಗೆ (40) ಗಂಭೀರಗಾಯವಾಗಿದೆ. ಗಾಯಾಳುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಬಳ್ಳಾಪುರ: ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲು
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಚಾಲಕ ಬಾಬು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂಸದ ಸುಧಾಕರ್ ಮತ್ತು ಅವರ ಬೆಂಬಲಿಗರ ಹೆಸರನ್ನು ಬರೆದಿಟ್ಟು ಬಾಬು ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದರು.

ಮೃತ ಬಾಬು ಅವರ ಪತ್ನಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅಟ್ರಾಸಿಟಿ ಕೇಸ್ ಕೂಡ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಸಂಸದ ಡಾ.ಕೆ.ಸುಧಾಕರ್ ಅವರನ್ನು ಎ1 (ಪ್ರಥಮ ಆರೋಪಿ) ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, ನಾಗೇಶ್ ಮತ್ತು ಮಂಜುನಾಥ್ ಎಂಬವರ ಹೆಸರನ್ನು ಕೂಡ ಎಫ್‌ಐಆರ್‌ನಲ್ಲಿ ನಮೂದಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್‌ನಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಬಾಬು ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದು, ಈ ಪ್ರಕರಣವು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಅವರ ಆತ್ಮಹತ್ಯೆಗೆ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಮತ್ತು ಅವರ ಬೆಂಬಲಿಗರೇ ಕಾರಣ ಎಂದು ಆರೋಪಿಸಲಾಗಿದೆ.

ಬಾಬು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಬರೆದಿದ್ದು, ಅದರಲ್ಲಿ ಸಂಸದ ಡಾ. ಕೆ. ಸುಧಾಕರ್ ಮತ್ತು ಅವರ ಕೆಲವು ಬೆಂಬಲಿಗರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎಂದು ವರದಿಯಾಗಿದೆ. ಈ ಡೆತ್ ನೋಟ್‌ನಲ್ಲಿ, ಬಾಬು ತಮ್ಮ ಸಾವಿಗೆ ನೇರವಾಗಿ ಸುಧಾಕರ್ ಮತ್ತು ಅವರ ಬೆಂಬಲಿಗರ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ. ಈ ಡೆತ್ ನೋಟ್ ಪ್ರಕರಣದ ತನಿಖೆಯಲ್ಲಿ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲ್ಪಟ್ಟಿದೆ.

ಎಂದೆಂದೂ ನೀನು ಸುಖವಾಗಿರು – ಪ್ರಜ್ವಲ್‌ ಹೆಸರಿನಲ್ಲಿ ಪೂಜೆ ಮಾಡಿಸಿದ ರೇವಣ್ಣ
ಚಿಕ್ಕಮಗಳೂರು : ಕೆ. ಆರ್. ನಗರ ಮೂಲದ ಮಹಿಳೆ ಮೇಲಿನ ರೇಪ್ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಜೈಲುವಾಸದಲ್ಲಿದ್ದಾರೆ. ಆಗಸ್ಟ್ 5 ಪ್ರಜ್ವಲ್ ರೇವಣ್ಣ (prajwal revanna) ಹುಟ್ಟು ಹಬ್ಬದ ಹಿನ್ನೆಲೆ, ಶೃಂಗೇರಿ ಶಾರದಾಂಬೆಗೆ (Sringeri Sharadamba Temple) ಮಾಜಿ ಸಚಿವ ಹೆಚ್.ಡಿ.ರೇವಣ್ಣ( hd revanna) ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಗ ಪ್ರಜ್ವಲ್ ಗೆ ಎದುರಾಗಿರೋ ಸಂಕಷ್ಟ ನಾಶವಾಗಲಿ ಎಂದು ರೇವಣ್ಣ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಶೃಂಗೇರಿ ಗುರುಗಳನ್ನು ರೇವಣ್ಣ ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಇಂದು ಬೆಳ್ಳಂ ಬೆಳಗ್ಗೆಯೇ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪ್ರಜ್ವಲ್ ಹೆಸರಲ್ಲಿ ಅರ್ಚನೆ ಮಾಡಿಸಿದ ನಂತರ ಬೆಂಗಳೂರಿಗೆ ಹೊರಟಿದ್ದಾರೆ.

ದೇವೇಗೌಡರ ಕುಟುಂಬ ಸುಮಾರು 50 ವರ್ಷಗಳಿಂದ ಶಾರದಾಂಬೆಯ ಭಕ್ತರಾಗಿದ್ದಾರೆ. ಆಗಿಂದ್ದಾಗ್ಗೆ ರೇವಣ್ಣ ಶೃಂಗೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿರುತ್ತಾರೆ. ಸದ್ಯ ರೇವಣ್ಣ ಕುಟುಂಬ ಸಂಕಷ್ಟದಲ್ಲಿದ್ದು, ರಾಜ್ಯದ ವಿವಿಧ ದೇಗುಲಗಳಿಗೆ ಭೇಟಿ ನೀಡಿ ರೇವಣ್ಣ ಪ್ರಾರ್ಥನೆ ಮಾಡ್ತಿದ್ದಾರೆ.

ಇನ್ನು, ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಮಂಗಳವಾರ ತಮ್ಮ ಜನ್ಮದಿನವನ್ನೂ ಆಚರಿಸಿಕೊಳ್ಳುತ್ತಿದ್ದಾರೆ. ಆ. 5. 1990 ರಂದು ಜನಿಸಿದ ಪ್ರಜ್ವಲ್‌ ರೇವಣ್ಣ ಇಂದು ತಮ್ಮ 35 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಪ್ರತಿವರ್ಷ ಸಂಭ್ರಮದ ಆಚರಣೆಯಾಗಿದ್ದ ಜನ್ಮದಿನ ಇಂದು ಮಾತ್ರ ಶೋಕದ ಗೂಡಾಗಿ ಪರಿಣಮಿಸಿದೆ.

2023 ರ ತಮ್ಮ ಬರ್ತ್‌ ಡೇ ಹಿಂದಿನ ದಿನ ಪ್ರಜ್ವಲ್‌ ರೇವಣ್ಣ ಒಂದು ಸಾಮಾನ್ಯ ವಿಡಿಯೋ ಹೊರಬಿಟ್ಟಿದ್ದರು. ಇದರಲ್ಲಿ ತಾವು ತಮ್ಮ ಜನ್ಮದಿನವನ್ನು ಸರಳವಾಗಿ ಆಚರಿಸಿಕೊಳ್ಳಲು ಇಚ್ಛಿಸಿದ್ದೇನೆ ಎಂದು ಹೇಳಿದ್ದರು. ಅಲ್ಲದೇ ಯಾರೂ ಸಹ ಮನೆಯಬಳಿ ಬರಬಾರದು. ಹೂಹಣ್ಣು, ಕೇಕ್‌ ಗಳನ್ನು ತರಬಾರದು ಎಂದು ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಅದಾದ ಎರಡೇ ವರ್ಷಕ್ಕೇ ಪ್ರಜ್ವಲ್‌ ರೇವಣ್ಣ ಮುಂದಿನ ಬರ್ತ್‌ ಡೇ ಜೈಲಿನಲ್ಲಿ ಆಚರಿಸಿಕೊಳ್ಳುವಂತಾಗಿದೆ.

ಸಹಸ್ರಾರು ಮಂದಿ ಪ್ರಜ್ವಲ್‌ ರೇವಣ್ಣ ಅಭಿಮಾನಿಗಳಿದ್ದರೂ ಸಹ ಜೈಲಿನಲ್ಲಿ ಒಂಟಿಯಾಗಿ ಜನ್ಮದಿನವನ್ನು ಕಳೆಯ ಬೇಕಾದ ದುಸ್ಥಿತಿಯಲ್ಲಿ ಪ್ರಜ್ವಲ್‌ ರೇವಣ್ಣ ಇದ್ದಾರೆ. ಈಗಿನ ಪರಿಸ್ಥಿತಿ ಗಮನಿಸಿದರೆ ಇನ್ನೂ ಹಲವು ಜನ್ಮದಿನಗಳನ್ನು ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿಯೇ ಆಚರಿಸಿಕೊಳ್ಳಬೇಕಿರುವುದು ಖಚಿತವಾಗಿದೆ.

ನೂರಾರು ಮಂದಿಯ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿರುವ ಪ್ರಜ್ವಲ್‌ ರೇವಣ್ಣ ಅದನ್ನು ತಮ್ಮ ಮೊಬೈಲ್‌ ನಲ್ಲಿ ವಿಡಿಯೋ ಮಾಡಿಕೊಳ್ಳುವ ಚಾಲಿಯನ್ನೂ ಹೊಂದಿದ್ದು, ಇದೇ ಪ್ರಕರಣಕೆಕ ಪ್ರಮುಖ ಸಾಕ್ಷಿಯಾಗಿ ಪರಿಣಮಿಸಿತ್ತು.ಅತ್ಯಾಚಾರಕ್ಕೊಳಗಾದವರಲ್ಲಿ ಮಹಿಳಾ ಪೊಲೀಸ್‌, ಸರ್ಕಾರಿ ಅಧಿಕಾರಿಗಳು, ನಟಿಯರು, ಮನೆಗೆಲಸದವರು, ಕೂಲಿ ಕಾರ್ಮಿಕರು ಮಾತ್ರವಲ್ಲದೇ ವಯೋವೃದ್ಧರೂ ಸಹ ಸಾಕಷ್ಟು ಮಂದಿ ಇದ್ದರು.

‘ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿʼ: ನಿಖಿಲ್‌ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ
ಶಿಡ್ಲಘಟ್ಟ: ‘ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ, ಶಿಡ್ಲಘಟ್ಟಕ್ಕೆ ರವಿಕುಮಾರ್’ ಎಂಬ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯ ಹೇಳಿಕೆಗೆ ಮಿತ್ರಪಕ್ಷ ಬಿಜೆಪಿಯಿಂದ ಆಕ್ಷೇಪ ವ್ಯಕ್ತವಾಗಿದೆ.

ಈ ಹೇಳಿಕೆ ಜೆಡಿಎಸ್‌ನ ಅಭಿಪ್ರಾಯವಾಗಿದ್ದರೂ, ಬಿಜೆಪಿ-ಜೆಡಿಎಸ್ ಮೈತ್ರಿಯ ನಾಯಕರ ಒಮ್ಮತದ ತೀರ್ಮಾನವಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಸೋಮವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. “ವಿಧಾನಸಭೆ ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ನಾಯಕರು ಒಟ್ಟಿಗೆ ನಿರ್ಧರಿಸುತ್ತಾರೆ,” ಎಂದು ಅವರು ಸ್ಪಷ್ಟಪಡಿಸಿದರು.

“ಪಕ್ಷ ಸಂಘಟನೆಗಾಗಿ ಜೆಡಿಎಸ್ ಕುಮಾರಸ್ವಾಮಿಯನ್ನೋ ಅಥವಾ ಬೇರೆ ಯಾರನ್ನಾದರೂ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಕೊಂಡರೆ ನಮಗೆ ಯಾವುದೇ ತಕರಾರಿಲ್ಲ,” ಎಂದು ರಾಮಚಂದ್ರಗೌಡ ಹೇಳಿದರು.

“ಮಾಜಿ ಶಾಸಕ ಎಂ. ರಾಜಣ್ಣ ಅವರೊಂದಿಗೆ ನನಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮ ನಡುವೆ ಯಾವುದೇ ಮುನಿಸೂ ಇಲ್ಲ. ಕೆಲವೊಮ್ಮೆ ಪಕ್ಷದ ಪದಾಧಿಕಾರಿಗಳ ನೇಮಕ ಅಥವಾ ಇತರ ವಿಷಯಗಳ ಬಗ್ಗೆ ನಮ್ಮ ಬೆಂಬಲಿಗರು ಮತ್ತು ಅವರ ಬೆಂಬಲಿಗರ ನಡುವೆ ಭಿನ್ನಾಭಿಪ್ರಾಯ ಸಹಜ. ಆದರೆ, ರಾಜಣ್ಣ ಮತ್ತು ನಾನು ಒಟ್ಟಿಗೆ ಸೇರಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇವೆ,” ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಎಂ. ರಾಜಣ್ಣ, ಬಿಜೆಪಿ ತಾಲೂಕು ಅಧ್ಯಕ್ಷ ಸೀಕಲ್ ಆನಂದಗೌಡ, ಸುರೇಂದ್ರಗೌಡ, ಕನಕಪ್ರಸಾದ್, ಮತ್ತು ನಗರಸಭೆ ಸದಸ್ಯ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ʼದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣʼ ಇದು ರಾಜ್ಯದ ಜನರ ಬಯಕೆ – ನಿಖಿಲ್‌ ಕುಮಾರಸ್ವಾಮಿ
ಚಿಕ್ಕಬಳ್ಳಾಪುರ, ಜುಲೈ 10: ದೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಂತೆ, ರಾಜ್ಯಕ್ಕೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿಯವರೇ ಎಂಬ ಭಾವನೆ ಕೇವಲ ಜನತಾ ದಳ (ಜೆಡಿಎಸ್) ಕಾರ್ಯಕರ್ತರಲ್ಲಿ ಮಾತ್ರವಲ್ಲ, ರಾಜ್ಯದ ಜನತೆಯ ಮನಸ್ಸಿನಲ್ಲೂ ಗಟ್ಟಿಯಾಗಿ ಬೇರೂರಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜನವರಿ 9ರಂದು ಆಯೋಜಿಸಲಾದ ಜನರೊಂದಿಗಿನ ಜೆಡಿಎಸ್‌ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಕುಮಾರಣ್ಣನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಜನತೆ ಇಂದಿಗೂ ನೆನಪಿಸಿಕೊಳ್ಳುತ್ತಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಸಂಚರಿಸಿದಾಗ, ಜನತೆಯಿಂದ ‘ಕುಮಾರಣ್ಣನವರು ಮತ್ತೆ ಸಿಎಂ ಆಗಬೇಕು’ ಎಂಬ ಆಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾದರೆ ರಾಜ್ಯದಲ್ಲಿ ಸಮೃದ್ಧಿಯ ವಾತಾವರಣ ನಿರ್ಮಾಣವಾಗಲಿದೆ,” ಎಂದು ಹೇಳಿದರು.

ನಿಖಿಲ್ ಕುಮಾರಸ್ವಾಮಿ ತಮ್ಮ ಭಾಷಣದಲ್ಲಿ ಜೆಡಿಎಸ್‌ ಪಕ್ಷದ ವ್ಯಾಪ್ತಿಯನ್ನು ಒತ್ತಿ ಹೇಳಿದರು. “ನಮ್ಮ ಪಕ್ಷವು ಕೇವಲ ಹಳೆ ಮೈಸೂರು ಭಾಗಕ್ಕೆ ಸೀಮಿತವಲ್ಲ. ನಮ್ಮ ಶಾಸಕರಲ್ಲಿ ಶೇಕಡ 50 ರಷ್ಟು ಜನರು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಿಂದ ಆಯ್ಕೆಯಾಗುತ್ತಾರೆ. ಈ ಪ್ರದೇಶಗಳಿಗೆ ನಾನು ನಿಯಮಿತವಾಗಿ ಭೇಟಿ ನೀಡುತ್ತೇನೆ ಮತ್ತು ಕಾರ್ಯಕರ್ತರ ಜೊತೆಗೆ ಸಂವಾದ ನಡೆಸುತ್ತೇನೆ,” ಎಂದು ತಿಳಿಸಿದರು.

2028ರ ವಿಧಾನಸಭೆ ಚುನಾವಣೆಯ ಬಗ್ಗೆ ಆತ್ಮವಿಶ್ವಾಸ ವ್ಯಕ್ತಪಡಿಸಿದ ನಿಖಿಲ್, “ನಾವು ಯಾವುದೇ ಅನೈತಿಕ ಮಾರ್ಗಗಳಿಂದ ಮುಂದಿನ ಮೂರು ವರ್ಷಗಳಲ್ಲಿ ಅಧಿಕಾರ ಹಿಡಿಯಲು ಯತ್ನಿಸುವುದಿಲ್ಲ. 2028ರಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯು 150ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದು, ಸಮ್ಮಿಶ್ರ ಸರ್ಕಾರವನ್ನು ರಚಿಸಲಿದೆ. ನಮ್ಮ ನಾಯಕರಾದ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡರು ಮತ್ತು ಕುಮಾರಣ್ಣನವರಂತಹ ಜನಮನ್ನಣೆಯ ನಾಯಕರು ಈ ಗುರಿಯನ್ನು ಸಾಧಿಸಲಿದ್ದಾರೆ. ಕುಮಾರಣ್ಣನವರು ಮತ್ತೆ ಸಿಎಂ ಆಗಬೇಕೆಂಬುದು ಕೇವಲ ನಮ್ಮ ಆಕಾಂಕ್ಷೆಯಲ್ಲ, ಇದು ಕಾರ್ಯಕರ್ತರ ಮತ್ತು ಜನತೆಯ ಒಲವೂ ಆಗಿದೆ,” ಎಂದು ಒತ್ತಿ ಹೇಳಿದರು.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳು ಜೆಡಿಎಸ್‌ಗೆ ಯಾವಾಗಲೂ ಬಲವಾದ ಭದ್ರಕೋಟೆಗಳಾಗಿವೆ. “ರಾಮನಗರ ಮತ್ತು ಚಿಕ್ಕಬಳ್ಳಾಪುರ ನಮಗೆ ಎರಡು ಕಣ್ಣುಗಳಂತೆ. ಶಿಡ್ಲಘಟ್ಟ ಶಾಸಕ ರವಿಕುಮಾರ್ ಮತ್ತು ಚಿಂತಾಮಣಿಯ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿಯವರು ಪಕ್ಷಕ್ಕೆ ಆಧಾರ ಸ್ತಂಭಗಳಂತೆ,” ಎಂದು ನಿಖಿಲ್ ವಿವರಿಸಿದರು.

ಯುವಕರಿಗೆ ರಾಜಕಾರಣಕ್ಕೆ ಬರಲು ಪ್ರೋತ್ಸಾಹಿಸುವ ಸಂದೇಶವನ್ನು ನೀಡಿದ ಅವರು, “ಯುವಕರು ರಾಜಕೀಯ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದರೆ ಬದಲಾವಣೆ ಸಾಧ್ಯವಾಗುತ್ತದೆ. ಸಮಾಜದ ಕೊನೆಯ ವ್ಯಕ್ತಿಯ ಸಮಸ್ಯೆಗಳನ್ನೂ ಪರಿಹರಿಸುವ ಛಲವಿರಬೇಕು. ಚುನಾವಣೆಗಳಲ್ಲಿ ಗೆಲುವು-ಸೋಲು ಸಾಮಾನ್ಯ. ಕೆಲವರಿಗೆ ಫಲ ಸಿಕ್ಕಿರಬಹುದು, ಕೆಲವರಿಗೆ ಸಿಕ್ಕಿಲ್ಲದಿರಬಹುದು, ಆದರೆ ಇದು ರಾಜಕೀಯದ ಸಹಜ ಭಾಗ,” ಎಂದು ತಿಳಿಸಿದರು.

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ, ಜುಲೈ 2: ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ ಸತ್ಯವನ್ನಲ್ಲ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಅವರು ಇಂದು ನಂದಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ ಎಂದು ಪ್ರಶ್ನಿಸಿದ ಸಿಎಂ, ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್ ಡಿ ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ ಎಂದು ಪ್ರಶ್ನಿಸಿದರು.

ಜಾತಿಗಣತಿ: ಆನ್ ಲೈನ್ ಮೂಲಕ ಜಾತಿ ನಮೂದಿಸಬಹುದು

ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮಾಡಲು ತೊಂದರೆಯಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟರ ಜಾತಿ/ವರ್ಗ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಸಾಮಾಜಿಕ ಕಳಂಕ ಇದ್ದರೆ ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು ಎಂದರು.

ಸಚಿವ ಸ್ಥಾನ :ವರಿಷ್ಠರಿಂದ ಅಂತಿಮ ತೀರ್ಮಾನ

ಪ್ರಜಾಪ್ರಭುತ್ವದಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. 142 ಜನ ನಮ್ಮ ಪಕ್ಷದವರಿದ್ದಾರೆ. 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು. ಎಲ್ಲರನ್ನು ಮಾಡಲಾಗುವುದಿಲ್ಲ. ಶೇ.15% ಜನರನ್ನು ಮಾತ್ರ ಮಾಡಬಹುದು ಎಂದರು.

ಐದು ವರ್ಷ ನಾನೇ ಮುಖ್ಯಮಂತ್ರಿ

ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿಗಳು ನವೆಂಬರ್ ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ಇಳಿಯಲಿದ್ದಾರೆ ಎಂಬ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಬಿಜೆಪಿ ನಮ್ಮ ಹೈ ಕಮಾಂಡ್ ಅಲ್ಲ ಎಂದರು.

ಆರ್.ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಹೇಳಿದೆಲ್ಲಾ ಸತ್ಯವಲ್ಲ ಎಂದರು.

ರಾಜ್ಯದ ಎಲ್ಲಾ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ

ರಾಜ್ಯದ ಎಲ್ಲಾ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂದು ತೀರ್ಮಾನಿಸಿ ಗುಲ್ಬರ್ಗಾ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಇನ್ನು ಕೆಲವೇ ದಿನಗಳಲ್ಲಿ ಬೆಳಗಾವಿ ಹಾಗೂ ವಿಜಯಪುರದಲ್ಲಿ ಕೂಡ ನಡೆಸಲಾಗುವುದು ಎಂದರು.

ಚಿಕ್ಕಬಳ್ಳಾಪುರದಲ್ಲಿ ಬೆಂಗಳೂರು ಕಂದಾಯ ವಿಭಾಗದ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಬಜೆಟ್ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಸಣ್ಣಪುಟ್ಟ ಕೆಲಸಗಳಿದ್ದರೆ ಮಾಡಿ ಕೊಡಲಾಗುವುದು ಎಂದರು.

ರಾಜ್ಯ ಸುಭಿಕ್ಷವಾಗಲಿ
ರಾಜ್ಯದಲ್ಲಿ ಒಳ್ಳೆ ಮಳೆ ಬೆಳೆಯಾಗಿ , ಸಮೃದ್ಧಿಯಾಗಿ. ಜನ ಸಂತೋಷದಿಂದಿರಲಿ ಮಾನವೀಯ ಸಮಾಜ ನಿರ್ಮಾಣವಾಗುತ್ತ ಪ್ರಯತ್ನ ಮಾಡಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಿಧಾನಸೌಧದಲ್ಲಿ ನಡೆದ RCB ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗೌರಿಬಿದನೂರು, ಜೂನ್ 11: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ ನೀಡಲಾಗಿತ್ತು.

ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು.

ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದರು.

ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು ಎಂದರು.

ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದರು.

ಪರಿಹಾರ ನೀಡಲಾಗಿದೆ

ಕಾಲ್ತುಳಿತದಲ್ಲಿ ಮಾಡಿದವರ ಕುಟುಂಬಕ್ಕೆ ತಲಾ 25 ಲಕ್ಷ ರೂ.ಗಳನ್ನೂ ಈಗಾಗಲೇ ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕನ್ನಡದ ಅಭಿವೃದ್ಧಿಗೆ ಅನುದಾನ ಲಭ್ಯವಿದೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಅಗತ್ಯವಿದ್ದರೆ ಅನುದಾನ ಒದಗಿಸಲಾಗುವುದು. ಕನ್ನಡದ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ

ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಮಾಡಬೇಕಿದ್ದು ಅದನ್ನು ಮುಂದಕ್ಕೆ ಹಾಕಿದ್ದೇವೆ ಎಂದರು.

ಹೊಸ ಜಿಲ್ಲೆ ರಚನೆ: ಚರ್ಚಿಸಿ ತೀರ್ಮಾನ

ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿರುವುದು ಈ ಭಾಗದ ಜನರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ 19 ರಂದು ಸಚಿವ ಸಂಪುಟ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಮಾವಿಗೆ ಬೆಂಬಲ ಬೆಲೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ

ಮಾವಿನ ಬೆಲೆ ಕುಸಿತದ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ ಆಂಧ್ರದಲ್ಲಿ ತೋತಾಪುರಿ ಮಾವಿಗೆ ಒಂದು ಕೆಜಿ ಗೆ 4 ರೂ. ನೀಡಲಾಗುತ್ತಿದ್ದು, ಇಲ್ಲಿಯೂ ಕೊಡಬೇಕು ಎನ್ನುವ ಬೇಡಿಕೆಯನ್ನು ಸಚಿವ ಎಂ.ಸಿ.ಸುಧಾಕರ್ ಅವರು ಮಾಡಿದ್ದು, ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದರು.

ಬಿಜೆಪಿ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತದೆ : ಸಿಎಂ ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ (ಗೌರಿಬಿದನೂರು): ಜೂನ್ 11: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.

ಇಡಿ ಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಾಮಾಜಿಕ ,ಆರ್ಥಿಕ, ಶೈಕ್ಷಣಿಕ ಸಮೀಕ್ಷೆ: ಮರು ಗಣತಿ

ಜಾತಿ ಗಣತಿ ಬಗ್ಗೆ ಕೆಲವು ದೂರುಗಳು ಬಂದಿವೆ. ಸಮೀಕ್ಷೆ ನಡೆದು 10 ವರ್ಷಗಳಾಗಿದ್ದು, ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಕಡಿಮೆ ಅವಧಿಯಲ್ಲಿ ಮರುಗಣತಿ ಕೈಗೊಳ್ಳಲು ಸೂಚಿಸಿದ್ದಾರೆ. ವರದಿಯನ್ನು ನಾವು ತಿರಸ್ಕರಿಸುವುದಿಲ್ಲ. ತಾತ್ವಿಕವಾಗಿ ವರದಿಯನ್ನು ಒಪ್ಪಿಕೊಳ್ಳಲಾಗಿದೆ ಎಂದರು.

ಗ್ರೇಟರ್ ಬೆಂಗಳೂರಿಗೆ ತುಮಕೂರು: ಸಚಿವ ಸಂಪುಟದಲ್ಲಿ ಚರ್ಚೆ

ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ನಾಮಕರಣ ಮಾಡಲು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಚಿವ ಸಂಪುಟದ ಮುಂದೆ ಬಂದಾಗ ಪರಿಶೀಲಿಸಲಾಗುವುದು ಎಂದರು.

30 ದಿನಗಳಲ್ಲಿ ವರದಿ
ಕಾಲ್ತುಳಿತ ಪ್ರಕರಣದಲ್ಲಿ ಅನೇಕ ಆಯೋಗ ರಚನೆಯಾಗಿದ್ದು ಇವು ತಾರ್ಕಿಕ ಅಂತ್ಯ ಕಾಣುವುದೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ತನಿಖೆ ಕೈಗೊಳ್ಳಲು ಏಕ ವ್ಯಕ್ತಿ ಆಯೋಗ ರಚನೆ ಮಾಡಿದ್ದು ಅದು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಈ ಬಗ್ಗೆ ಮಾತನಾಡಲು ಇಚ್ಛಿಸುವುದಿಲ್ಲ ಎಂದರು.

ಪಕ್ಷದ ವರಿಷ್ಠರ ತೀರ್ಮಾನ

ಕಾಂತರಾಜ ಆಯೋಗ ವರದಿ ಬಗ್ಗೆ ಪಕ್ಷದ ವರಿಷ್ಠರ ನಿರ್ಧಾರ ಮುಖ್ಯಮಂತ್ರಿಗಳಿಗೆ ನಿರಾಸೆ ತಂದಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಪಕ್ಷದ ವರಿಷ್ಠರು ನಿರ್ಧಾರ ಮಾಡಿದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಇದು ನಮ್ಮ ತೀರ್ಮಾನವಲ್ಲ ಎಂದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ಸರ್ಕಾರ ಒತ್ತು ನೀಡಿದೆ

ರಾಜ್ಯದ ವಿಶ್ವ ವಿದ್ಯಾನಿಲಯಗಳಲ್ಲಿಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾತನಾಡಿ ಖಾಲಿ ಇರುವಡೆಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇನ್ನು ಹೆಚ್ಚಿನ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು, ಅವರ ವೇತನವನ್ನು ಹೆಚ್ಚಿಸಿ, ಸೌಲಭ್ಯಗಳನ್ನು ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ನಮ್ಮ ಸರ್ಕಾರ ಒತ್ತುನೀಡಿದೆ ಎಂದರು.

ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ

ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಪ್ರತಿಕ್ರಿಯೆ ನೀಡಿ ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದರು.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ

ಜಲ ಜೀವನ್ ಯೋಜನೆಯಡಿ ರಾಜ್ಯ ಸರ್ಕಾರ 50% ಅನುದಾನ ನೀಡಿದ್ದಾರೆ 30% ಮಾತ್ರ ಕೇಂದ್ರ ಸರ್ಕಾರ ನೀಡುತ್ತದೆ. 20% ಫಲಾನುಭವಿಗಳು ನೀಡುತ್ತಾರೆ. ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ರಾಜ್ಯ ಸರ್ಕಾರದ ಪಾಲು ಹೆಚ್ಚಿದ್ದರೂ ಆಯುಷ್ಮಾನ್ ಭಾರತ್ ಯೋಜನೆ ಎನ್ನುತ್ತಾರೆ. ಅನೇಕ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಪ್ರಧಾನ ಮಂತ್ರಿಗಳ ಹೆಸರಿರುತ್ತದೆ. ಕುಸುಮ್ ಬಿ ಯೋಜನೆಯಡಿ 30% ಕೇಂದ್ರದಿಂದ ಬರುತ್ತದೆ. ಒಪ್ಪದೇ ಹೋದರೆ ಅದೂ ಬರುವುದಿಲ್ಲ. ರೈತರಿಗೆ ಒಳ್ಳೆಯದಾಗಬೇಕು, ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಇದನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.

ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣವಾಗಲಿದೆ

ಎತ್ತಿನಹೊಳೆ ಯೋಜನೆ ಎರಡು ವರ್ಷಗಳಲ್ಲಿ ಮುಕ್ತಾಯವಾಗಬಹುದು ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ಭಾಗದ ಸಚಿವರು, ಶಾಸಕರು, ಹಾಗೂ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ ಎಂದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ

ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲಾಗಿದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಳೆದ ವರ್ಷ 52000 ಕೋಟಿ ರೂ.ಗಳ ಬಂಡವಾಳ ವೆಚ್ಚ ಇತ್ತು. ಈ ವರ್ಷ 83 ಸಾವಿರ ಕೋಟಿಯಾಗಿದೆ ಎಂದರು. 31000 ಕೋಟಿ ಬಂಡವಾಳ ವೆಚ್ಚ ಒಂದು ವರ್ಷದಲ್ಲಿ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರ ದಿವಾಳಿ ಹೇಗೆ ಆಗುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಐವತ್ತು ಸಾವಿರಕ್ಕೂ ಹೆಚ್ಚು ಅನುದಾನ ಒದಗಿಸಲಾಗಿದೆ ಎಂದರು.

ಎರಡು ವರ್ಷಗಳಲ್ಲಿ 242 ಭರವಸೆಗಳನ್ನು ಈಡೇರಿಸಿದೆ

ನಮ್ಮ ಸರ್ಕಾರ ಎರಡು ವರ್ಷಗಳಲ್ಲಿ 593 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಿದ್ದು, ಕೇಂದ್ರ ಸರ್ಕಾರ 600 ಭರವಸೆಗಳನ್ನು ನೀಡಿ ಶೇ.10ರಷ್ಟನ್ನೂ ಅನುಷ್ಠಾನ ಮಾಡಿಲ್ಲ ಎಂದರು.