ಚಿತ್ರದುರ್ಗ – Peepal Media

ಒಳಮೀಸಲಾತಿ ಪಡೆಯಲು ‘ಜಾತಿ ಘೋಷಣೆ’ ಕಡ್ಡಾಯ: ಕೆಪಿಸಿಸಿ ಉಪಾಧ್ಯಕ್ಷ ಎಚ್. ಆಂಜನೇಯ
ಚಿತ್ರದುರ್ಗ: ಪರಿಶಿಷ್ಟ ಜಾತಿ (SC) ಸಮುದಾಯದವರು ಒಳಮೀಸಲಾತಿ ಸೌಲಭ್ಯಗಳನ್ನು ಪಡೆಯಬೇಕಿದ್ದರೆ, ಜಾತಿ ಸಮೀಕ್ಷೆಯ ವೇಳೆ ‘ಜಾತಿ ಘೋಷಣೆ’ ಕಡ್ಡಾಯವಾಗಿ ಮಾಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್. ಆಂಜನೇಯ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಸಮೀಕ್ಷೆಯಲ್ಲಿ ‘ಆದಿ ಕರ್ನಾಟಕ (AK)’, ‘ಆದಿ ದ್ರಾವಿಡ (AD)’, ಅಥವಾ ‘ಆದಿ ಆಂಧ್ರ (AA)’ ಎಂದು ಬರೆಸಿಕೊಂಡಿರುವವರು ಈಗ ಕಡ್ಡಾಯವಾಗಿ ತಮ್ಮ ಜಾತಿಯನ್ನು ಘೋಷಿಸಿಕೊಳ್ಳಬೇಕು. ವಿಶೇಷವಾಗಿ, ಹೊಲೆಯ ಮತ್ತು ಮಾದಿಗ ಸಮುದಾಯದವರು ಯಾವುದೇ ಗೊಂದಲಗಳಿಗೆ ಒಳಗಾಗದೆ, ತಮ್ಮ ಸಮುದಾಯದವರು ಅದಲು-ಬದಲಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಸಲಹೆ ನೀಡಿದರು.

ತಪ್ಪು ಘೋಷಣೆಯ ವಿರುದ್ಧ ಎಚ್ಚರಿಕೆ

‘ಜಾತಿ ಸೂಚಕ ವರ್ಗದಲ್ಲಿ AK, AD, AA ಎಂದು ಗುರುತಿಸಿಕೊಂಡವರು ‘ಎ’ ಅಥವಾ ‘ಬಿ’ ಗುಂಪಿನಲ್ಲಿ ತಮ್ಮನ್ನು ಗುರುತಿಸಿಕೊಳ್ಳಬೇಕಾಗಿದೆ. ಈ ಪ್ರಕ್ರಿಯೆಯಲ್ಲಿ ಬೇರೆಯವರು ಕಳ್ಳದಾರಿಯಲ್ಲಿ ನಮ್ಮ ‘ಬಿ’ ಗುಂಪಿಗೆ ಪ್ರವೇಶಿಸಿದರೆ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ. ಅವರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ನಡೆಸುತ್ತೇವೆ’ ಎಂದು ಆಂಜನೇಯ ಅವರು ಎಚ್ಚರಿಕೆ ನೀಡಿದರು.

ಸಾಮಾಜಿಕ ಸಮೀಕ್ಷೆ ರಾಜ್ಯದ ಪ್ರಗತಿಗೆ ದಾರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಬದ್ಧತೆಯಿಂದ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯನ್ನು ನಡೆಸುತ್ತಿದೆ. ಈ ಸಮೀಕ್ಷೆಯು ರಾಜ್ಯದ ಪ್ರಗತಿಗೆ ದಾರಿ ಮಾಡಿಕೊಡಲಿದೆ. ಯಾವುದೇ ರಾಜ್ಯ ಅಭಿವೃದ್ಧಿ ಕಾಣಬೇಕಾದರೆ, ಅಲ್ಲಿನ ಜನರ ಸ್ಥಿತಿಗತಿ ಅರಿತುಕೊಳ್ಳಬೇಕು. ಸಮುದಾಯಗಳ ಜನಸಂಖ್ಯೆ ಮತ್ತು ಹಿಂದುಳಿದಿರುವಿಕೆ ಮಾಹಿತಿಯ ಅಗತ್ಯವಿದೆ. ಆದ್ದರಿಂದ ಯಾರೊಬ್ಬರೂ ವಿರೋಧ ಮಾಡದೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಅಕ್ಟೋಬರ್ 18ರವರೆಗೆ ಸಮೀಕ್ಷೆಯನ್ನು ವಿಸ್ತರಣೆ ಮಾಡಿರುವುದು ಉತ್ತಮ ಕ್ರಮ ಎಂದರು.

ಸಂಘಟನೆಗಳ ಪ್ರತಿಭಟನೆ ಸರಿಯಲ್ಲ

ಸಮೀಕ್ಷೆ ವಿರುದ್ಧ ಕೆಲವು ಸಂಘಟನೆಗಳು ಸಚಿವ ಎಚ್.ಸಿ. ಮಹಾದೇವಪ್ಪ ಸೇರಿ ಇತರ ಸಚಿವರ ಮನೆಗಳಿಗೆ ಮುತ್ತಿಗೆ ಹಾಕುವುದಾಗಿ ಹೇಳುತ್ತಿರುವುದು ಸರಿಯಲ್ಲ. ಈ ಹಿಂದೆ ಕಾಂತರಾಜು ಆಯೋಗವು ವೈಜ್ಞಾನಿಕ ವರದಿ ನೀಡಿತ್ತು. ಆದರೆ, ಅದು 10 ವರ್ಷ ಹಳೆಯದಾಗಿದೆ ಎಂಬ ಆರೋಪ ಕೇಳಿಬಂದ ಕಾರಣ ಮತ್ತೊಮ್ಮೆ ಸಮೀಕ್ಷೆ ನಡೆಸಲಾಗುತ್ತಿದೆ. ಈ ಕಾರ್ಯಕ್ಕೆ ಆರಂಭದಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದ್ದರೂ, ಈಗ ವಾಸ್ತವತೆ ಅರಿತು ಎಲ್ಲರೂ ಪಾಲ್ಗೊಳ್ಳುತ್ತಿರುವುದು ಸ್ವಾಗತಾರ್ಹ ನಡೆ ಎಂದು ಆಂಜನೇಯ ಅಭಿಪ್ರಾಯಪಟ್ಟರು.

ಇದಲ್ಲದೆ, ಒಳಮೀಸಲಾತಿ ವಿಷಯದಲ್ಲಿ ಯಾವುದೇ ಗೊಂದಲಗಳಿಲ್ಲ. ಅನಗತ್ಯವಾಗಿ ಸುಳ್ಳು ವದಂತಿಗಳಿಗೆ ಕಿವಿಗೊಡದೆ ಮೀಸಲು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಲು ಮುಂದಾಗಬೇಕು. ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ, ಉದ್ಯೋಗಸ್ಥರನ್ನಾಗಿ ಮಾಡಲು ಶ್ರಮಿಸಬೇಕು ಎಂದು ಅವರು ಮನವಿ ಮಾಡಿದರು.

ಕಾಡುಗೊಲ್ಲ ಸಮುದಾಯದವರು ಈಗ ಜಾಗೃತರಾಗಿದ್ದು, ಅವರು ಜಾತಿ ಕಲಂನಲ್ಲಿ ಕಾಡುಗೊಲ್ಲ ಎಂದೇ ಬರೆಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಅವರ ಈ ಕಾರ್ಯ ಸ್ವಾಗತಾರ್ಹ. ಸಮೀಕ್ಷೆ ಕಾರ್ಯದಲ್ಲಿ ಸಮುದಾಯಗಳ ಪ್ರತಿಯೊಬ್ಬ ವ್ಯಕ್ತಿಯೂ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯ ಸುಟ್ಟ ಶವ ಪತ್ತೆ; ಶಂಕಿತ ಆರೋಪಿ ವಶಕ್ಕೆ
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಗೊನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ-48ಕ್ಕೆ ಹೊಂದಿಕೊಂಡಿರುವ ಹೊಲದಲ್ಲಿ 19 ವರ್ಷದ ಯುವತಿಯ ಅರ್ಧ ಸುಟ್ಟ ಶವ ಪತ್ತೆಯಾದ ಒಂದು ದಿನದ ನಂತರ, ಆಕೆಯ ಸಾವಿಗೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತೆ ಹರ್ಷಿತಾ (ಹೆಸರನ್ನು ಬದಲಾಯಿಸಲಾಗಿದೆ), ಚಿತ್ರದುರ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡನೇ ವರ್ಷದ ಬಿ.ಎ. ವಿದ್ಯಾರ್ಥಿನಿ. ಅವರು ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯದಲ್ಲಿ ವಾಸಿಸುತ್ತಿದ್ದರು. ಅಂದಹಾಗೆ, ಹರ್ಷಿತಾ ನಾಲ್ಕು ದಿನಗಳ ಹಿಂದೆ ಮನೆಗೆ ಹೋಗಲು ಕಾಲೇಜಿನಿಂದ ರಜೆ ಪಡೆದಿದ್ದರು. ಆದರೆ, ಅವರು ಮನೆ ತಲುಪದಿದ್ದಾಗ ಅವರ ಪೋಷಕರು ಚಿಂತಿತರಾದರು.

ಮಂಗಳವಾರ, ಗೊನ್ನೂರು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಹೊಲವೊಂದರಲ್ಲಿ ಸುಟ್ಟ ಶವ ಪತ್ತೆಯಾಗಿತ್ತು. ಮೃತಳು ಹರ್ಷಿತಾ ಎಂದು ದೃಢಪಡಿಸಿದ ಪೊಲೀಸರು, ಆಕೆಯನ್ನು ಪೆಟ್ರೋಲ್ ಸುರಿದು ಸುಟ್ಟುಹಾಕಲಾಗಿದೆ ಎಂದು ಕಂಡುಕೊಂಡರು. ನಂತರ, ಪೊಲೀಸರು ಹರ್ಷಿತಾ ಅವರ ಸ್ನೇಹಿತನಾದ 21 ವರ್ಷದ ಚೇತನ್‌ನನ್ನು ಬುಧವಾರ ವಶಕ್ಕೆ ಪಡೆದುಕೊಂಡರು.

“ಹೆದ್ದಾರಿ-48ರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆಗೆಂದು ತಮ್ಮ ವಾಹನ ನಿಲ್ಲಿಸಿದಾಗ ಶವವನ್ನು ಪತ್ತೆಯಾಯಿತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಪ್ರಾಥಮಿಕ ವಿಚಾರಣೆಯಲ್ಲಿ ಚೇತನ್ ಕೊಲೆಯ ಶಂಕಿತ ಆರೋಪಿ ಎಂದು ತಿಳಿದು ಬಂದ ನಂತರ, ನಾವು ಆತನನ್ನು ವಶಕ್ಕೆ ತೆಗೆದುಕೊಂಡೆವು. ಹರ್ಷಿತಾ ಸಾವಿಗೆ ಮುನ್ನ ಆಕೆಯ ಮೇಲೆ ದೌರ್ಜನ್ಯ ನಡೆಸಲಾಗಿದೆಯೇ ಎಂಬುದು ಮುಂದಿನ ತನಿಖೆಯಲ್ಲಿ ತಿಳಿಯಲಿದೆ” ಎಂದು ಎಸ್‌ಪಿ ರಂಜಿತ್ ಕುಮಾರ್ ಬಂಡಾರು ಅವರು ಪತ್ರಕರ್ತರಿಗೆ ತಿಳಿಸಿದರು.

ಈ ಮಧ್ಯೆ, ಈ ಬರ್ಬರ ಕೊಲೆಯನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ: ಮಗಳ ಅಂತರ್ಜಾತಿ ವಿವಾಹದಿಂದ ಬೇಸತ್ತ ವ್ಯಕ್ತಿ ಆತ್ಮಹತ್ಯೆ
ಮಗಳ ಅಂತರ್ಜಾತಿ ವಿವಾಹದ ನಂತರ ಪೊಲೀಸರು ತನ್ನ ದೂರಿನ ಮೇಲೆ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯ ಎದುರೇ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.

ಗಿಲಕೇನಹಳ್ಳಿ ನಿವಾಸಿ ಅಜ್ಜಯ್ಯ (50) ಹೊಳಲ್ಕೆರೆ ಪೊಲೀಸ್ ಠಾಣೆಯ ಮುಂದೆ ವಿಷ ಸೇವಿಸಿ ನಂತರ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು ಠಾಣೆಯ ಹೊರಗೆ ನಾಟಕೀಯ ದೃಶ್ಯಗಳಿಗೆ ಕಾರಣವಾಯಿತು, ಕುಟುಂಬ ಸದಸ್ಯರು ಅವರ ಮೃತದೇಹವನ್ನು ಪ್ರವೇಶದ್ವಾರದಲ್ಲಿ ಇರಿಸಿ ಸುಮಾರು ಒಂದು ಕಿಲೋಮೀಟರ್ ವರೆಗೆ ಸಂಚಾರವನ್ನು ನಿರ್ಬಂಧಿಸಿದರು.

ಪೊಲೀಸರ ಪ್ರಕಾರ, ಅಜ್ಜಯ್ಯ ತನ್ನ ಮಗಳು ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ್ದರು, ಆಕೆ ಅಪ್ರಾಪ್ತ ವಯಸ್ಕಳಾಗಿದ್ದು, ಓಡಿಹೋಗಿದ್ದಾಳೆ ಎಂದು ಹೇಳಿದ್ದರು. ಆದರೆ ಆಕೆಯ ಆಧಾರ್ ಮತ್ತು ಶಾಲಾ ದಾಖಲೆಗಳಲ್ಲಿ ಆಕೆಯ ವಯಸ್ಸು 19 ಎಂದು ತೋರಿಸಲಾಗಿದ್ದು, ಆಕೆ ಮೇಜರ್ ಆಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ವಾರದ ನಂತರ ಭೋವಿ (ಎಸ್‌ಸಿ/ಎಸ್‌ಟಿ) ಸಮುದಾಯದ ತನ್ನ ಸಂಗಾತಿಯೊಂದಿಗೆ ಹಿಂದಿರುಗಿದ ನಂತರ, ಆಕೆ ತನ್ನ ವಯಸ್ಸನ್ನು ದೃಢಪಡಿಸಿಕೊಂಡು ಅವನೊಂದಿಗೆ ಇರಲು ಬಯಸುವುದಾಗಿ ವ್ಯಕ್ತಪಡಿಸಿದ್ದಾಳೆ. ಆಕೆಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ನಾಪತ್ತೆ ದೂರನ್ನು ಕೊನೆಗೊಳಿಸಿದರು.

ಆನಂತರ ಕುಟುಂಬವು ಆಕೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವಳು ಎಂದು ಜನನ ಪ್ರಮಾಣಪತ್ರವನ್ನು ಸಲ್ಲಿಸಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸ ದಾಖಲೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಆದರೆ ಅಂತರ್ಜಾತಿ ಸಂಬಂಧದ ಬಗ್ಗೆ ಬೇಸರಗೊಂಡ ತಂದೆ ಅಜ್ಜಯ್ಯ, ತನಿಖೆ ಪ್ರಕ್ರಿಯೆಯು ಪೂರ್ಣಗೊಳ್ಳುವ ಮೊದಲೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

“ಆ ಹುಡುಗಿ ಕಾಣೆಯಾಗಿಲ್ಲ. ಶಾಲೆ ಮತ್ತು ಆಧಾರ್ ದಾಖಲೆಗಳ ಪ್ರಕಾರ ಅವಳಿಗೆ 19 ವರ್ಷ. ಪೋಷಕರ ಆರಂಭಿಕ ದೂರಿನಲ್ಲಿಯೂ ಸಹ ಆಕೆಯ ವಯಸ್ಸು 19 ಎಂದು ನಮೂದಿಸಲಾಗಿತ್ತು. ನಂತರ ಅವರು ಆಕೆಯನ್ನು ಅಪ್ರಾಪ್ತ ವಯಸ್ಕ ಎಂದು ತೋರಿಸುವ ಮತ್ತೊಂದು ದಾಖಲೆಯನ್ನು ಸಲ್ಲಿಸಿದರು. ತಂದೆ ಆತ್ಮಹತ್ಯೆ ಮಾಡಿಕೊಂಡಾಗ ನಾವು ಅದನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿದ್ದೆವು” ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸ್ಪಷ್ಟಪಡಿಸಿದ್ದಾರೆ.

ಪೊಲೀಸರ ನಿರ್ಲಕ್ಷ್ಯದ ಆರೋಪಗಳನ್ನು ಅವರು ತಳ್ಳಿಹಾಕಿದರು, ಎಲ್ಲಾ ಕಾನೂನು ವಿಧಾನಗಳನ್ನು ಅನುಸರಿಸಲಾಗಿದೆ ಮತ್ತು ಕುಟುಂಬಕ್ಕೆ ಸಹಕಾರ ನೀಡಲಾಗಿದೆ ಎಂದು ಹೇಳಿದರು. ಅಂತರ್ಜಾತಿ ವಿವಾಹದಿಂದ ಅಜ್ಜಯ್ಯ ಅವರ ಮಾನಸಿಕ ತೊಂದರೆ ಅವರನ್ನು ಆತ್ಮಹತ್ಯೆಗೆ ಕಾರಣವೆಂದು ತೋರುತ್ತದೆ ಎಂದು ಎಸ್ಪಿ ಹೇಳಿದರು.

ಶಾಲೆಗಳು ಎಲ್‍ಕೆಜಿ ಮತ್ತು 1ನೇ ತರಗತಿಗೆ ದಾಖಲಾತಿ ಪ್ರಕ್ರಿಯೆ ನಿರ್ವಹಿಸುವಾಗ ಪ್ರವೇಶ ಪರೀಕ್ಷೆ ಸಂದರ್ಶನ ನಡೆಸುವಂತಿಲ್ಲ: ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಖಾಸಗಿ ಅನುದಾನ ರಹಿತ ಶಾಲೆಗಳು ಸರ್ಕಾರದ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸರ್ಕಾರದ ನಿಯಮಾವಳಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಖಾಸಗಿ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂದು ತಿಳಿಸಿದ ಅವರು, ಸರ್ಕಾರದ ನಿಯಮಗಳನ್ನು ಪಾಲನೆ ಮಾಡಬೇಕು. ಯಾವುದೇ ಕಾರಣಕ್ಕೂ ನಿಯಮಗಳ ಉಲ್ಲಂಘನೆ ಮಾಡಬಾರದು. ಒಂದು ವೇಳೆ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರದ ನಿಯಮಾವಳಿ ಉಲ್ಲಂಘನೆ ಕುರಿತು ದೂರು ಬಂದರೆ ತಕ್ಷಣವೇ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಖಾಸಗಿ ಶೈಕ್ಷಣಿಕ ಸಂಸ್ಥೆಗಳು ಪ್ರವೇಶ ಶುಲ್ಕದ ಮಾಹಿತಿಯನ್ನು ಪ್ರಚುರ ಪಡಿಸದೇ ಇರುವುದು, ಒಂದೇ ಬಾರಿಗೆ ಡೋನೇಷನ್ ಶುಲ್ಕ ಕಟ್ಟುವಂತೆ ಬೇಡಿಕೆಯಿಡುವುದು, ಮೂಲಸೌಲಭ್ಯಗಳ ಕೊರತೆ, ನಾಮಕಾವಸ್ಥೆಗೆ ಶಿಕ್ಷಣ ಸಂಸ್ಥೆ ನಡೆಸುವುದು, ಉತ್ತಮ ಫಲಿತಾಂಶಕ್ಕೆ ಪಡೆಯಲು ಗಮನಹರಿಸದೇ ಇರುವುದು, ಶಿಕ್ಷಕರಿಗೆ ಓರಿಯಂಟೇಷನ್ ಕಾರ್ಯಾಗಾರ ಮಾಡದೇ ಇರುವುದು, ಅರ್ಹತೆ ಇಲ್ಲದೇ ಇರುವ ಶಿಕ್ಷಕರ ನೇಮಕ ಮಾಡಿಕೊಳ್ಳುವುದು ಸೇರಿದಂತೆ ಕೆಲವು ಶಿಕ್ಷಣ ಸಂಸ್ಥೆಗಳ ವಿರುದ್ಧ ದೂರುಗಳು ಬಂದಿವೆ. ಹಾಗಾಗಿ ಶಾಲಾ ದಾಖಲಾತಿ ಪ್ರಕ್ರಿಯೆಯಲ್ಲಿ ನಿಯಮಗಳ ಉಲ್ಲಂಘನೆಯಾಗದಂತೆ ಕ್ರಮವಹಿಸಬೇಕು. ಮುಖ್ಯವಾಗಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರಿಗೆ ಓರಿಯಂಟೇಷನ್ ಕಾರ್ಯಾಗಾರ, ಬೋಧನಾ ಕೌಶಲ್ಯಗಳ ಅಭಿವೃದ್ಧಿಗಾಗಿ ಪುನಃಶ್ಚೇತನ ಕಾರ್ಯಾಗಾರಗಳನ್ನು ಕಾಲಕಾಲಕ್ಕೆ ಹಮ್ಮಿಕೊಳ್ಳಬೇಕು ಎಂದು ಹೇಳಿದರು.

ತಾಲ್ಲೂಕುವಾರು ನೋಡಲ್ ಅಧಿಕಾರಿಗಳ ನೇಮಕ: ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮಾವಳಿ ಪ್ರಕಾರದ ದಾಖಲಾತಿ ಪ್ರಕ್ರಿಯೆ ನಿರ್ವಹಿಸಲಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಹೊರತುಪಡಿಸಿ ಬೇರೆ ಇಲಾಖೆಯ ಅಧಿಕಾರಿಗಳನ್ನು ತಾಲ್ಲೂಕುವಾರು ನೋಡಲ್ ಅಧಿಕಾರಿಗಳ ನೇಮಕ ಮಾಡಿ ಪರಿಶೀಲನೆ ನಡೆಸಲಾಗುವುದು. ನಿಯಮ ಉಲ್ಲಂಘನೆ ಕಂಡುಬಂದರೆ ಶಾಶ್ವತವಾಗಿ ಶಿಕ್ಷಣ ಮುಚ್ಚಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಸೀಟುಗಳ ಲಭ್ಯತೆ ಮತ್ತು ಪ್ರವೇಶಾತಿ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಶಾಲಾ ಫಲಕದಲ್ಲಿ ಪ್ರಕಟಿಸಬೇಕು. ಪ್ರತಿ ವರ್ಷ ಏಪ್ರಿಲ್ ತಿಂಗಳ ನಂತರವೇ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಬೇಕು. ಪ್ರತಿ ಶಾಲೆಯಲ್ಲೂ ಇಲಾಖಾ ಮಾರ್ಗದರ್ಶನದಂತೆ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಗತ್ಯ ಮೂಲಭೂತ ಸೌಲಭ್ಯಗಳಾದ ಪ್ರತ್ಯೇಕವಾಗಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಆಟದ ಮೈದಾನ, ಪಾಠೋಪಕರಣಗಳು ಮತ್ತು ಪೀಠೋಪಕರಣಗಳ ಇತರೆ ಸೌಲಭ್ಯಗಳನ್ನು ಕಲ್ಪಿಸಬೇಕು. ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಅಗ್ನಿನಂದಕ, ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚನೆ ನೀಡಿದರು.

ಶಾಲಾ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದಂತಹ ಪ್ರಕರಣಗಳನ್ನು ತಪ್ಪಿಸಲು ಶಾಲಾ ಪರಿಮಿತಿಯಲ್ಲಿಇ ಆಡಳಿತ ಮಂಡಳಿಗಳು ಸುರಕ್ಷತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಖಾಸಗಿ ಶಾಲೆಗಳಲ್ಲಿ ನಿಗದಿತ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿ ಅನುದಾನ ಸಹಿತ ಶಾಲೆಗಳಲ್ಲಿ 73 ಪ್ರಾಥಮಿಕ ಶಾಲೆಗಳು, 204 ಪ್ರೌಢಶಾಲೆಗಳು ಇವೆ. ಅನುದಾನ ರಹಿತ ಶಾಲೆಗಳಲ್ಲಿ 252 ಪ್ರಾಥಮಿಕ ಶಾಲೆಗಳು ಹಾಗೂ 138 ಪ್ರೌಢಶಾಲೆಗಳು ಇವೆ ಎಂದು ಸಭೆಗೆ ಮಾಹಿತಿ ನೀಡಿದರು.

ಪ್ರತಿ ವರ್ಷ ದಾಖಲಾತಿ ಪ್ರಕ್ರಿಯೆಯಲ್ಲಿ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಮೀಸಲಾತಿ ಅನ್ವಯಿಸಿ ದಾಖಲಾತಿ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಎಲ್‍ಕೆಜಿ ಮತ್ತು 1ನೇ ತರಗತಿಗೆ ದಾಖಲಾತಿ ಪ್ರಕ್ರಿಯೆ ನಿರ್ವಹಿಸುವಾಗ ಪ್ರವೇಶ ಪರೀಕ್ಷೆ ಸಂದರ್ಶನ ನಡೆಸತಕ್ಕದ್ದಲ್ಲ ಎಂದು ಹೇಳಿದರು.

2025-26ನೇ ಸಾಲಿಗೆ ಆರ್‍ಟಿಇ ಅಡಿ ಮೀಸಲಿರುವ ಸೀಟುಗಳಿಗೆ ಪ್ರವೇಶಾತಿ ಮತ್ತು ದಾಖಲಾತಿ ಪ್ರಕ್ರಿಯೆ ಅನುದಾನಿತ ಶಾಲೆಗಳಿಗೆ ಮಾತ್ರ ಪ್ರವೇಶ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಆರ್‍ಟಿಇ ಅಡಿಯಲ್ಲಿ 56 ಶಾಲೆಗಳಲ್ಲಿ 247 ಸೀಟುಗಳು ಲಭ್ಯವಿವೆ ಎಂದು ತಿಳಿಸಿದರು.

2025-26ನೇ ಶೈಕ್ಷಣಿಕ ವರ್ಷದಿಂದ ಎಲ್‍ಕೆಜಿ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ, ಯುಕೆಜಿ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಹಾಗೂ ಜೂನ್ 1ನೇ ತಾರೀಖಿಗೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಅವಕಾಶವಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಸಿದ್ದಪ್ಪ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಎಲ್ಲ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖ್ಯ ಶಿಕ್ಷಕರು ಇದ್ದರು.

ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು: ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ನಡೆಯಬೇಕು ಎಂದು ಸೂಚನೆ ನೀಡಿದರು.

ಕಂದಾಯ ಗ್ರಾಮಗಳ ರಚನೆಗೆ ಜಿಲ್ಲೆಯಲ್ಲಿ ಒಟ್ಟು 316 ಗ್ರಾಮಗಳ ಗುರುತಿಸಲಾಗಿದ್ದು, ಈಗಾಗಲೇ 296 ಪ್ರಾಥಮಿಕ ಸೂಚನೆ ಹಾಗೂ 206 ಅಂತಿಮ ಅಧಿಸೂಚನೆಯಾಗಿದೆ. ಇನ್ನೂ 61 ಗ್ರಾಮಗಳು ಅಂತಿಮ ಅಧಿಸೂಚನೆಗೆ ಬಾಕಿ ಇದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿಯಲ್ಲಿ ವಸತಿ ಪ್ರದೇಶಗಳ ಪಟ್ಟಿ ಇದೆ. ಕಂದಾಯ ಗ್ರಾಮಗಳ ಸಂಖ್ಯೆಗಿಂತ ವಸತಿ ಪ್ರದೇಶಗಳ ಸಂಖ್ಯೆ ಹೆಚ್ಚಿದೆ. ಇಲ್ಲಿ ದಾಖಲೆ ರಹಿತ ವಸತಿ ಪ್ರದೇಶಗಳ ಎಂಟ್ರಿ ಇರುತ್ತವೆ. ಕಂದಾಯ ಇಲಾಖೆಯ ಬಳಿ ದಾಖಲೆ ಸಹಿತ ಗ್ರಾಮಗಳ ಮಾಹಿತಿ ಇರುತ್ತದೆ ಎಂದು ತಿಳಿಸಿದ ಅವರು, ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗಮನಿಸಿ, ಗ್ರಾಮ ರಚನೆ ಮಾಡಬೇಕು. ದಾಖಲೆ ರಹಿತ ಇದ್ದಲ್ಲಿ ಅವರಿಗೆ ಒಂದು ದಾಖಲೆ ಕಲ್ಪಿಸಿ, ಬದುಕು ಕಲ್ಪಿಸಿಕೊಡಬೇಕಿದೆ. ಈಗಾಗಲೆ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ನಿವೇಶನ, ಕಟ್ಟಡಗಳಿಗೆ ಬಿ-ಖಾತಾ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಅದೇ ರೀತಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿಯೂ ಅನಧಿಕೃತವಾಗಿ ರಚನೆಯಾಗಿರುವ ಕಂದಾಯ ನಿವೇಶನ, ಕಟ್ಟಡಗಳಿಗೂ ಬಿ-ಖಾತಾ ವಿತರಣೆಗೆ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಹತ್ತು ದಿನಗಳಲ್ಲಿ ಈ ಪ್ರಕ್ರಿಯೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಜನರ ಬದುಕಿಗೆ ನಿಶ್ಚಿತತೆ ಇರಬೇಕು. ಹಾಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವರು ಹೇಳಿದರು.

ಕಂದಾಯ ಗ್ರಾಮಗಳ ರಚನೆ ಕುರಿತಂತೆ ಜೂನ್ 30 ರ ಗಡುವನ್ನು ನಿಗದಿಪಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಜನಗಣತಿ ಕಾರ್ಯದ ಪ್ರಕ್ರಿಯೆ ಆರಂಭವಾದರೆ, ಹೊಸ ಕಂದಾಯ ಘಟಕಗಳ ರಚನೆಗೆ ನಿಷೇಧ ಅನ್ವಯ ಆಗಲಿದೆ. ಈ ನಿಷೇಧ ತೆರವಾಗಲು ಎರಡು ವರ್ಷ ಆಗಬಹುದು. ಹೀಗಾಗಿ ಬಾಕಿ ಇರುವ ಎಲ್ಲ ಕಂದಾಯ ಗ್ರಾಮಗಳ ರಚನೆ ಕಾರ್ಯ ಜೂ. 30 ರ ಒಳಗಾಗಿ ಪೂರ್ಣಗೊಳ್ಳಬೇಕು ಎಂದು ತಾಕೀತು ಮಾಡಿದರು.

ಗ್ರಾಮದ 1 ಕಿ.ಮೀ ವ್ಯಾಪ್ತಿ ಒಳಗೆ ಇದ್ದು, 10 ಮನೆಗಳಿಗಿಂತಲೂ ಹೆಚ್ಚು ಇದ್ದರೆ ಉಪ ಗ್ರಾಮ ರಚನೆ ಮಾಡಲು ಅವಕಾಶ ಇದೆ. ಜನರಿಗೆ ನಾವು ಸ್ಥಿರ ಬದುಕು ನೀಡಬೇಕು. ಬಿಟ್ಟು ಹೋಗಿರುವ ಕಂದಾಯ ಗ್ರಾಮಗಳ ರಚನೆ ಹಾಗೂ ಗುರುತಿಸುವ ಕಾರ್ಯ ಆಗಬೇಕು. ಈ ನಿಟ್ಟಿನಲ್ಲಿ ಯಾದವ ಹಾಗೂ ತಾಂಡಾ ಸಂಘದವರಿಂದ ಮಾಹಿತಿ ಪಡೆದು ಗ್ರಾಮ ಪಂಚಾಯಿತಿಯಿಂದ ಜನವಸತಿ ಪಟ್ಟಿ ಪಡೆಯುವಂತೆ ಸಚಿವರು ಸೂಚನೆ ನೀಡಿದರು.

ಹೊಸಪೇಟೆಯಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ:
ಇದೇ ಮೇ.20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ 01 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ, ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ನಾವು ಮಾಡಿರುವ ಕೆಲಸವನ್ನು ಜನರಿಗೆ ಸಮರ್ಪಣೆ ಮಾಡುತಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಇದು 2 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮ ಅಲ್ಲ, ನಾವು ಮಾಡಿರುವ ಮಹತ್ವಪೂರ್ಣ ಕಾರ್ಯವನ್ನು ಜನರಿಗೆ ಸಮರ್ಪಿಸಿ, ಅವರ ಬದುಕಿಗೆ ಸ್ಥಿರತೆ ತಂದು ಕೊಡುವ ಅರ್ಥಪೂರ್ಣ ಕಾರ್ಯಕ್ರಮ ಇದಾಗಲಿದೆ. ಜನರಿಗೆ ಶಕ್ತಿ ತುಂಬುವ ಮೂಲಕ ಸರ್ಕಾರದ ಎರಡು ವರ್ಷಗಳ ಸಾಧನೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ 1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ, ದಾಖಲೆ ವಿತರಿಸುವ ಮೂಲಕ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಎಲ್ಲ ಸಚಿವರು ಭಾಗವಹಿಸಲಿದ್ದು, ನಮ್ಮ ಸರ್ಕಾರ ಜನಪರ ಹಾಗೂ ಬಡವರ ಪರವಾಗಿದೆ. ರಾಜ್ಯದ ಜನತೆಗೆ ಸಮರ್ಪಿಸಲು 2 ವರ್ಷದ ಸಾಧನೆ ಕಾರ್ಯಕ್ರಮ ವೇದಿಕೆಯಾಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಈ ಕಾರ್ಯಕ್ರಮಕ್ಕೆ ಪ್ರತಿ ಫಲಾನುಭವಿ ಜೊತೆಗೆ ಅವರ ಕುಟುಂಬ ಸದಸ್ಯರೊಬ್ಬರು ಆಗಮಿಸುವ ರೀತಿ ವ್ಯವಸ್ಥೆ ಮಾಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಿಂದಲೂ ವಿವಿಧ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಸಮರ್ಪಕವಾಗಿ ಕರೆತರುವ ರೀತಿಯಲ್ಲಿ ವ್ಯವಸ್ಥೆ ಕೈಗೊಳ್ಳಬೇಕು, ಹಾಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿ, ಫಲಾನುಭವಿ ಹಾಗೂ ಕುಟುಂಬದ ಒರ್ವ ಸದಸ್ಯರನ್ನು ಕರೆತರುವ ಮೂಲಕ ಸವಲತ್ತು ವಿತರಣಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕುಗಳ ತಹಸಿಲ್ದಾರರು ಪಾಲ್ಗೊಂಡಿದ್ದರು.

ಪೋಕ್ಸೋ ಅಪರಾಧ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ: ನಾಲ್ಕು ಹಂತದಲ್ಲಿ ಜಾರಿ ತಂಡಗಳ ರಚನೆಗೆ ಜಿಲ್ಲಾಧಿಕಾರಿ ಸೂಚನೆ
ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜಾರಿ ತಂಡಗಳನ್ನು ರಚನೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಬಾಲ್ಯ ವಿವಾಹ, ಪೋಕ್ಸೋ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿ ಪೊಲೀಸ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಮಾತನಾಡಿದರು.

ಪೋಕ್ಸೋ ಹಾಗೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ. ಇವುಗಳನ್ನು ತಡೆಗಟ್ಟಲು ಚುನಾವಣೆಯ ಮತದಾನ ಜಾಗೃತಿ ಮಾದರಿಯಲ್ಲಿ ಪ್ರತಿ ಮನೆ ಮನೆಗಳಿಗೂ ತೆರಳಿ ವ್ಯಾಪಕವಾಗಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಪ್ರತಿ ಹಳ್ಳಿಗಳಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆ, ಗ್ರಾಮ ಸಹಾಯಕ, ಆರ್.ಡಿ.ಪಿ.ಆರ್ ಸಿಬ್ಬಂದಿ, ಬೀಟ್ ಪೊಲೀಸ್, ಸ್ಥಳೀಯ ಶಾಲೆಯ ಮುಖ್ಯ ಶಿಕ್ಷಕ ಹಾಗೂ ಹಾಸ್ಟೆಲ್ ವಾರ್ಡ್‍ಗಳ ನೇತೃತ್ವದಲ್ಲಿ ಜಾರಿ ತಂಡಗಳನ್ನು ರಚಿಸಬೇಕು.

ಈ ತಂಡಗಳು ಪ್ರತಿ ಮನೆ ಮನೆಗೆ ತೆರಳಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸುವುದರೊಂದಿಗೆ ಮಾಹಿತಿ ಸಂಗ್ರಹಿಸಬೇಕು. ಈ ತಂಡಗಳ ಮೇಲುಸ್ತುವಾರಿಗೆ ಗ್ರಾಮ ಪಂಚಾಯಿತಿ ಹಂತದಲ್ಲಿ ಪಿಡಿಓ, ರಾಜಸ್ವ ನಿರೀಕ್ಷಕ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ, ವಾರ್ಡನ್, ಸಬ್ ಇನ್ಸ್‍ಪೆಕ್ಟರ್, ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ, ಹಾಗೂ ಅಂಗನವಾಡಿ ಮೇಲ್ವಿಚಾರಕರ ನೇತೃತ್ವದಲ್ಲಿ ಎರಡನೇ ಹಂತದ ಜಾರಿ ತಂಡ ರಚಿಸಬೇಕು. ಈ ತಂಡ ಹಳ್ಳಿಗಳ ಜಾರಿ ತಂಡದಿಂದ ಪ್ರತಿದಿನ ಮಾಹಿತಿ ಪಡೆದು ವಾರಕೊಮ್ಮೆ ಸಭೆ ನಡೆಸಬೇಕು. ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ತಡೆಯಬೇಕು.

ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಜಾರಿ ತಂಡ ರಚಿಸಬೇಕು. ಇದರಲ್ಲಿ ತಾ.ಪಂ.ಇಓ, ಸಿಡಿಪಿಓ, ಬಿಇಓ, ಸಿಪಿಐ, ತಾಲ್ಲೂಕು ಆರೋಗ್ಯಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಸೇರಿದಂತೆ ಇತರೆ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಇರಬೇಕು. ಪ್ರತಿ ತಾಲ್ಲೂಕಿಗೂ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಬೇಕು. ತಾಲ್ಲೂಕು ಹಂತದ ತಂಡ ಪ್ರತಿ 15 ದಿನಗಳಿಗೊಮ್ಮೆ ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳ ಕುರಿತು ಸಭೆ ನಡೆಸಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ, ಸಿಇಓ, ಎಸ್.ಪಿ, ಡಿವೈಎಸ್‍ಪಿ, ಸೇರಿದಂತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಪಿಯು, ಸಮಾಜ ಕಲ್ಯಾಣ, ಆರೋಗ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳ ಕೋರ್ ಕಮಿಟಿ ರಚಿಸಬೇಕು. ಈ ಸಮಿತಿ 30 ದಿನಗಳಿಗೊಮ್ಮೆ ಪರಿಶೀಲನೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ಸಹ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚು ಚರ್ಚೆಯಾಗುತ್ತಿವೆ. ಈ ಪಿಡುಗಳು ಜಿಲ್ಲೆಯಲ್ಲಿ ಹೆಚ್ಚಾಗಲು ಸಾಮಾಜಿಕ ಹಾಗೂ ಆರ್ಥಿಕ ಕಾರಣಗಳು ಇವೆ. ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ CAP-SECUR ( Comprehensive Approach to Prevent- Sexual Explotation, Child-marriages & to Uplift the Right of-Children) ಎನ್ನುವ ವಿನೂತನ ಕಾರ್ಯಕ್ರಮ ಜಾರಿಗೊಳಿಸಲಾಗುತ್ತದೆ. ಇತರೆ ಇಲಾಖೆ ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ತಂಡಗಳನ್ನು ರಚಿಸಿ, ಸಮಾಜದ ಅತ್ಯಂತ ದುಸ್ತರದಲ್ಲಿರುವ ಸ್ಥಳಗಳಲ್ಲಿ ಮಕ್ಕಳನ್ನು ಲೈಂಗಿಕ ಶೋಷಣೆ ಹಾಗೂ ಬಲವಂತದ ಮದುವೆಯಿಂದ ಪಾರು ಮಾಡಿ, ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಗುರಿ ಹೊಂದಲಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ 93, 2023-24ನೇ ಸಾಲಿನಲ್ಲಿ 131, 2024-25ನೇ ಸಾಲಿನಲ್ಲಿ 150 ಹಾಗೂ 2025-26ನೇ ಸಾಲಿನಲ್ಲಿ ಪ್ರಸ್ತುತ 21 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ದಾಖಲಾದ ಈವರೆಗಿನ ಪೋಕ್ಸೋ ಪ್ರಕರಣಗಳಲ್ಲಿ 18 ತುಂಬಿದ ಹಾಗೂ 30 ವರ್ಷದ ಒಳಗಿನ ಆರೋಪಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಲವು ಪ್ರಕರಣಗಳಲ್ಲಿ ಪೊಕ್ಸೋ ಕಾಯ್ದೆಯ ಅರಿವು ಇಲ್ಲದೇ ತಪ್ಪು ಮಾಡಿ, ಶಿಕ್ಷೆ ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈ ಪಿಡುಗುಗಳನ್ನು ತೊಡೆದು ಹಾಕಲು ವಿನೂತನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕಿದೆ. ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳ ತಡೆಗೆ ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪೊಲೀಸ್ ಇಲಾಖೆ ಸೇರಿ ವಿವಿಧ ಇಲಾಖೆಗಳು ಮುನ್ನೆಚ್ಚರಿಕೆ ವಹಿಸಬೇಕು. ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅರಿವು ಮೂಡಿಸಲು ವಿಶೇಷ ಗಮನಹರಿಸಬೇಕು.
ಶಾಲಾ-ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಲಾವಿದರ ಮೂಲಕ ಗ್ರಾಮಗಳಲ್ಲಿ ಕಿರು ನಾಟಕಗಳನ್ನು ಏರ್ಪಡಿಸಿ, ಮನಮುಟ್ಟುವಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕಿದೆ ಎಂದು ತಿಳಿಸಿದ ಅವರು, ಇನ್ನು ಮುಂದೆ ಪೋಕ್ಸೋ, ಬಾಲ್ಯ ವಿವಾಹ ಪ್ರಕರಣಗಳು ವರದಿಯಾದರೆ ಆಶಾ ಕಾರ್ಯಕರ್ತೆಯರು, ಸಂಬಂಧಪಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಬೀಟ್ ಪೊಲೀಸರು, ಕ್ಷೇತ್ರ ಮಟ್ಟದ ಅಧಿಕಾರಿಗಳು ಪ್ರಕರಣದ ಸಂಪೂರ್ಣ ಹಿನ್ನಲೆ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕಾಗುತ್ತದೆ ಎಂದು ಹೇಳಿದರು.

ಬಾಲ್ಯ ವಿವಾಹ, ಬಾಲ ಗರ್ಭಿಣಿ, ಪೋಕ್ಸೋ, ದೌರ್ಜನ್ಯ ತಡೆ ಕಾಯ್ದೆಗಳ ಕುರಿತು ಕರಪತ್ರಗಳನ್ನು ಮುದ್ರಿಸಿ, ಪ್ರತಿ ಮನೆಗಳಿಗೆ ಹಂಚುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸಲಹೆ ನೀಡಿದರು.

ಬಾಲ್ಯ ವಿವಾಹ, ಬಾಲಕಾರ್ಮಿಕ ಹಾಗೂ ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಸಭೆಗೆ ಮಾಹಿತಿ ನೀಡಿದರು. ಶಾಲೆಗೆ ಗೈರಾದ ಮಕ್ಕಳ ಮಾಹಿತಿಯನ್ನು ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

“ಜಾಗೃತಿ ಕಾರ್ಯಕ್ರಮಗಳು ಪ್ರತಿಯೊಬ್ಬರಿಗೂ ಹಾಗೂ ಪ್ರತಿ ಮನೆ ಮನೆಗೂ ತಲುಪುವಂತಾಗಬೇಕು. ಪ್ರತಿ ಗ್ರಾಮದಲ್ಲೂ ನಿಗಾ ಸಮಿತಿ ರಚಿಸಬೇಕು. ಪ್ರಕರಣ ಜರುಗಿದ ತಕ್ಷಣ ಗಮನಕ್ಕೆ ಬರುವಂತೆ ನಿರ್ವಹಣೆ ಆಗಬೇಕು. ಈ ಸಮಿತಿಗೆ ನಿಯಮಿತವಾಗಿ ಮಾನಿಟರಿಂಗ್ ಮಾಡುವ ಮೂಲಕ ವರದಿ ಪಡೆದುಕೊಳ್ಳಬೇಕು. ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಪೊಲೀಸ್ ಉಪಾಧೀಕ್ಷಕ ಪಿ.ಕೆ. ದಿನಕರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಸೇರಿದಂತೆ ಎನ್‍ಜಿಒ ಪ್ರತಿನಿಧಿಗಳು ಇದ್ದರು.

ಆಶಾ ಕಿರಣ ಯೋಜನೆ: 40 ವರ್ಷ ದಾಟಿದ ದೃಷ್ಟಿ ದೋಷವಿರುವ ನಾಗರೀಕರಿಗೆ ಉಚಿತ ಕನ್ನಡಕ ವಿತರಣೆ
ಆಶಾ ಕಿರಣ ಯೋಜನೆ ಅಡಿಯಲ್ಲಿ 40 ವರ್ಷ ದಾಟಿದ ದೃಷ್ಟಿ ದೋಷವಿರುವ ನಾಗರೀಕರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮಟ್ಟದ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಆಶಾ ಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಿ.ಓ.ನಾಗರಾಜ್ ಹೇಳಿದರು.

ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಶಾ ಕಿರಣ ಯೋಜನೆಯಡಿ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಶಾ ಕಿರಣ ಯೋಜನೆಯಡಿ ಮೊದಲ ಹಂತದಲ್ಲಿ ಮನೆ ಮನೆ ಭೇಟಿ, ಅಂಧತ್ವ ದೃಷ್ಟಿ ದೋಷ ತಪಾಸಣೆ ನಡೆಸಿ, ಜಿಲ್ಲೆಯಲ್ಲಿ 40ವರ್ಷ ಮೇಲ್ಪಟ್ಟ ಒಟ್ಟು 55000 ಫಲಾನುಭವಿಗಳನ್ನು ಮತ್ತು ಶಾಲಾ ವಿದ್ಯಾರ್ಥಿಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 3600 ಫಲಾನುಭವಿಗಳು ಪತ್ತೆ ಹಚ್ಚಿ, ಗುರುತಿಸಿ ಗಣಕೀಕೃತ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಈಗ ಆಶಾ ಕಿರಣ ಎರಡನೇಯ ಹಂತದಲ್ಲಿ ಉಚಿತ ಕನ್ನಡಕ ವಿತರಿಸುವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳು, ಎಲ್ಲಾ ತಾಲ್ಲೂಕು ಮಟ್ಟದ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಆಶಾ ಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗುತ್ತದೆ. ಎಲ್ಲಾ ರೀತಿಯ ಕಣ್ಣಿನ ತೊಂದರೆಗಳ ತಪಾಸಣೆ, ಉಚಿತ ಚಿಕಿತ್ಸೆ ಅಗತ್ಯವಿದ್ದಲ್ಲಿ ಕನ್ನಡಕ ವಿತರಣೆ ಮಾಡಲಾಗುತ್ತದೆ. ನೇತ್ರ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ನಿಮ್ಮೊಡನೆ ಇದ್ದು ಸಹಕರಿಸಲಿದ್ದಾರೆ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿ, ಸಿರಿಗೆರೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಈಗಾಗಲೇ ಗುರುತಿಸಲಾದ 78 ಫಲಾನುಭವಿಗಳು (40 ವರ್ಷ ಮೇಲ್ಪಟ್ಟ) ಉಚಿತವಾಗಿ ಕನ್ನಡಕಗಳನ್ನು ವಿತರಿಸಿ, ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಮನೆ ಭೇಟಿ ನಡೆಸಿದಾಗ ದೃಷ್ಟಿ ದೋಷ ಕಂಡುಬರುವ ಪ್ರಕರಣಗಳನ್ನು ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಿ, ಉನ್ನತ ಮಟ್ಟದ ತಪಾಸಣಾ ಯಂತ್ರೋಪಕರಣಗಳು ಲಭ್ಯವಿದೆ. ನೇತ್ರಾಧಿಕಾರಿ ನಿಮ್ಮ ಕಣ್ಣುಗಳ ಪರೀಕ್ಷೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಾರೆ ಎಂದರು.

ಸಿರಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಪ್ರದೀಪ್ ಅವರು ಸಾಂಕೇತಿಕವಾಗಿ ಕನ್ನಡಕ ವಿತರಿಸಿ, ಇಂತಹ ಜನಪರ ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ.ತುಳಸಿರಂಗನಾಥ್, ಡಾ.ಪವಿತ್ರಾ, ಡಾ.ಶಿಲ್ಪಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ನೇತ್ರಾಧಿಕಾರಿ ಬರ್ಕತ್ ಆಲಿ, ಫಾರ್ಮಸಿ ಅಧಿಕಾರಿ ಮೋಹನ್ ಕುಮಾರ್, ಆರೋಗ್ಯ ಸುರಕ್ಷತಾಧಿಕಾರಿ ಶಾರದ, ಶೋಭಾ, ಮಂಜುಳಾ, ಪಿ.ಡಿ.ಒ. ಅನ್ಸೀರಾ ಬಾನು, ಮಾಜಿ ಅಧ್ಯಕ್ಷ ನಾಗರಾಜ್ ಹಾಗೂ ಫಲಾನುಭವಿಗಳು ಇದ್ದರು.

ಕ್ಷಯರೋಗಿಗಳಿಗೆ ಪೋಷಕಾಂಶಯುಕ್ತ ಆಹಾರ ಅತ್ಯವಶ್ಯ ದಾನಿಗಳು ಮುಂದೆ ಬನ್ನಿ: ಟಿಹೆಚ್‍ಒ ಡಾ.ಬಿ.ವಿ.ಗಿರೀಶ್
ಚಿತ್ರದುರ್ಗ, ಮಾರ್ಚ್26: ಕ್ಷಯರೋಗಿಗಳಿಗೆ ಪೋಷಕಾಂಶಯುಕ್ತ ಆಹಾರ ಅತ್ಯವಶ್ಯಕವಾಗಿದ್ದು, ದಾನಿಗಳು ಮುಂದೆ ಬನ್ನಿ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ವಿಶ್ವ ಕ್ಷಯರೋಗ ದಿನದ ಅಂಗವಾಗಿ ಕ್ಷಯರೋಗದ ಬಗ್ಗೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕ್ಷಯರೋಗಿಗಳಿಗೆ ಅವರ ಚಿಕಿತ್ಸಾ ಅವಧಿಯಲ್ಲಿ ಹೈಯರ್ ಆಂಟಿಬಯೋಟಿಕ್ ಡ್ರಗ್ಸ್ ಬಳಸುತ್ತಿರುವುದರಿಂದ ಪೋಷಕಾಂಶಗಳು ಹೆಚ್ಚಾಗಿರುವ ಆಹಾರ ಪೂರೈಕೆ ಮಾಡಲೆಂದು ನಿಕ್ಷಯ್ ಮಿತ್ರ ಯೋಜನೆಯಡಿಯಲ್ಲಿ ದಾನಿಗಳು ಮುಂದೆ ಬರಬೇಕು ಎಂದು ಮನವಿ ಮಾಡಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ನಿಮಗೆ ನೀಡಿರುವ ಆಹಾರ ಬುಟ್ಟಿಗಳ ಉಪಯೋಗ ಸಮರ್ಪಕವಾಗಿ ಮಾಡಿಕೊಳ್ಳಿ. ಮುಂದಿನ ದಿನಗಳಲ್ಲಿ ಕ್ಷಯರೋಗ ಮುಕ್ತ ಮಾಡಲು ಸರ್ಕಾರ ಕ್ಷಯರೋಗ ಪ್ರಕರಣಗಳ ಮನೆ ಸಂಪರ್ಕಿಗಳಿಗೆ, ವಯೋವೃದ್ಧರಿಗೆ, ಶಾಲಾ ಮಕ್ಕಳಿಗೆ ಮತ್ತು ದೀರ್ಘ ಕಾಲದ ಸಹವರ್ತಿ ರೋಗಗಳನ್ನು ಹೊಂದಿರುವವರಿಗೆ ಬಿ.ಸಿ.ಜಿ. ಲಸಿಕೆ ನೀಡಲು ಯೋಜನೆ ತಯಾರಿಸುತ್ತಿದೆ. ಪ್ರಾಯೋಗಿಕವಾಗಿ ಆರೋಗ್ಯ ಸಚಿವರು ಈಗಾಗಲೇ ಚಾಲನೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಪ್ರಾರಂಭವಾಗುತ್ತದೆ. ಎಲ್ಲರು ಕ್ಷಯಮುಕ್ತ ಸಮಾಜ ಕಟ್ಟುವಲ್ಲಿ ಸಹಕರಿಸಿ ಎಂದರು.
ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆ, ನಿಕ್ಷಯ ಮಿತ್ರ ಚಟುವಟಿಕೆ, ಜಾನ್ ಮೈನ್ಸ್ ಸಹಯೋಗದೊಂದಿಗೆ ಪೋಷಕಾಂಶಯುಕ್ತ ಆಹಾರ ಪದಾರ್ಥಗಳ ಬುಟ್ಟಿಗಳನ್ನು 35 ಫಲಾನುಭವಿಗಳಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಾನ್ ಮೈನ್ಸ್ ವ್ಯವಸ್ಥಾಪಕ ಅಜಿತ್, ವೈದ್ಯಾಧಿಕಾರಿಗಳಾದ ಡಾ.ತುಳಸಿ ರಂಗನಾಥ, ಡಾ.ಪವಿತ್ರ, ಡಾ.ಬಿಂದ್ಯಾ, ಡಾ.ಶಿಲ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಸಮುದಾಯ ಆರೋಗ್ಯಾಧಿಕಾರಿ ಯಶಸ್ವಿನಿ, ಆರೋಗ್ಯ ನಿರೀಕ್ಷಣಾಧಿಕಾರಿ ನವೀನ್, ಶುಶ್ರೂಷಕಾಧಿಕಾರಿ ನಾಗವೇಣಿ, ರತ್ನಮ್ಮ, ಮಂಜುಳಾ, ಜಿಲ್ಲಾ ಕ್ಷಯರೋಗ ಮೇಲ್ವಿಚಾರಣಾ ಅಧಿಕಾರಿ ಮಹೇಂದ್ರಕುಮಾರ್, ಮಾರುತಿ, ಆಶಾ ಕಾರ್ಯಕರ್ತೆಯರು ಇದ್ದರು.

ಒಳ ಮೀಸಲಾತಿ ಹೋರಾಟಗಾರರ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು
ಹಿರಿಯೂರು : ಒಳ ಮೀಸಲಾತಿ ಹಾಗೂ ಸರ್ಕಾರದ ಬ್ಯಾಕ್ಲಾಗ್ ಹುದ್ದೆಗಳನ್ನು ಒಳ ಮೀಸಲಾತಿ ಜಾರಿ ಮಾಡುವವರೆಗೂ ತುಂಬಬಾರದು ಎಂದು ಆಗ್ರಹಿಸಿ ಆಡಳಿತ ಕಾಂಗ್ರೆಸ್ ಸರ್ಕಾರಕ್ಕೆ ಹರಿಹರದ ಪ್ರೊಫೆಸರ್ ಬಿಕೆ ಕೃಷ್ಣಪ್ಪ ಅವರ ಮೈತ್ರಿ ವನದಿಂದ ಬೆಂಗಳೂರಿನ ರಾಜಭವನಕ್ಕೆ ಕ್ರಾಂತಿಕಾರಿ ಪಾದಯಾತ್ರೆಯನ್ನ ಹಮ್ಮಿಕೊಂಡಿದ್ದು ಈ ಕ್ರಾಂತಿಕಾರಿ ಪಾದಯಾತ್ರೆಯ ನೇತೃತ್ವವನ್ನು ದಲಿತ ಸಮುದಾಯದ ಮುಖಂಡರಾದ ಬಿ ಆರ್ ಭಾಸ್ಕರ್ ಪ್ರಸಾದ್ ನೆಲಮಂಗಲ ಇವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕಡೆ ಎಚ್ಚರಿಕೆಯನ್ನು ಕೊಡುವ ಸಲುವಾಗಿ ಒಳ ಮೀಸಲಾತಿ ಜಾರಿ ಮಾಡಲು ಆಗ್ರಹ ಮಾಡಿದೆ .

ಈ ಪಾದಯಾತ್ರೆ ಹರಿಹರದಿಂದ ಸಾಗಿ ಹಿರಿಯೂರು ದಾಟಿ 9ನೇ ದಿನ ಜಾಗೋಂಡನಹಳ್ಳಿಯಿಂದ ಶುರುವಾಯಿತು , ಈ ಪಾದಯಾತ್ರೆಯಲ್ಲಿ ನೂರಾರು ಜನ ಭಾಗಿಯಾಗಿ ಸಾಗುತ್ತಿದ್ದರು ಅದರಲ್ಲಿ ಗುಡೆಮಾರನಹಳ್ಳಿ ನಾಗರಾಜ್ ತಿಪ್ಪೇಶ ಚಿಕ್ಕಮಗಳೂರು ಬಸವರಾಜ್ ಹೊಸಮನಿ ಗದಗ ಹಾಗೂ ಹನುಮೇಶ ಮರಿಯಮ್ಮನಹಳ್ಳಿ ಇವರು ಪಾಲಯಾತ್ರೆಯಲ್ಲಿ ಇದ್ದಕ್ಕಿದ್ದಂತೆ ಆಯಾಸಗೊಂಡು ಕೆಲವೇ ಕ್ಷಣಗಳಲ್ಲಿ ಅವರ ಆರೋಗ್ಯ ಏರುಪೇರಾಯಿತು ಇದನ್ನರಿತು ನಮ್ಮ ಜೊತೆಯಲ್ಲಿದ್ದ ಆಂಬುಲೆನ್ಸ್ ನಲ್ಲಿ ಇವರನ್ನ ಹತ್ತಿಸಿಕೊಂಡು ಪ್ರಥಮ ಚಿಕಿತ್ಸೆಯ ಮೂಲಕ ಶಿರಾ ಸರ್ಕಾರಿ ಆಸ್ಪತ್ರೆಗೆ ಬಂದು ಅಡ್ಮಿಟ್ ಮಾಡಿಸಿದೆವು , ಅವರ ಆರೋಗ್ಯವನ್ನು ಚೆಕ್ ಮಾಡಿದಾಗ ಗುಡೆಮಾರನಹಳ್ಳಿ ನಾಗರಾಜ್ ಇವರು ತುಂಬಾ ನಿಶಕ್ತರಾಗಿ ಬಳಲುತ್ತಿದ್ದರು ಹಾಗೂ ತಿಪ್ಪೇಶ ಇವರಿಗೆ ಹೈಬಿಪಿಯಾಗಿತ್ತು ಹಾಗೂ ಬಸವರಾಜ್ ಹೊಸಮನಿ ಇವರಿಗೆ ಹೊಟ್ಟೆ ನೋವು ಮತ್ತು ಮೊಣಕಾಲು ನೋವಿನಿಂದ ಬಳಲುತ್ತಿದ್ದರು ಹಾಗೂ ಹನುಮೇಶ್ ಮರಿಯಮ್ಮನಹಳ್ಳಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ವೈದ್ಯರು ಸೂಕ್ತ ಚಿಕಿತ್ಸೆ ನೀಡತ್ತಿರುವುದಾಗಿ ವರದಿಯಾಗಿದೆ.

ಚಿಕತ್ಸೆ ಪಡೆಯುತ್ತಿರುರ ಹೋರಾಟಗಾರರನ್ನು ಹೊರತುಪಡಿಸಿ ಉಳಿದ ಹೋರಾಟಗಾರರು ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ ಎಂದು ಹೋರಾಟ ಸಮಿತಿ ತಿಳಿಸಿದೆ.

ಜೀತ ಪದ್ಧತಿಯ ಸ್ವರೂಪ ಈಗ ಬದಲಾಗಿದ್ದು, ನಿರ್ಮೂಲನೆ ಸವಾಲಾಗಿದೆ- ನ್ಯಾ. ಎಂ. ವಿಜಯ್
ದೇಶದಲ್ಲಿ ನಿಷೇಧಗೊಂಡಿರುವ ಜೀತ ಪದ್ಧತಿಯ ಸ್ವರೂಪ, ಆಧುನಿಕ ಕಾಲಕ್ಕೆ ತಕ್ಕಂತೆ ಈಗ ಬೇರೆಯದೇ ಸ್ವರೂಪದಲ್ಲಿ ನಡೆದಿದ್ದು, ಇದರ ನಿರ್ಮೂಲನೆ ಸವಾಲಿನ ವಿಷಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಅವರು ಕಳವಳ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಮುಕ್ತಿ ಅಲಿಯನ್ಸ್ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಶುಕ್ರವಾರ ಏರ್ಪಡಿಸಲಾದ “ಜೀತ ಪದ್ಧತಿ ನಿಷೇಧ ಕಾರ್ಯಾಗಾರ” ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದಿನ ದಿನಗಳಲ್ಲಿ ಅಸ್ತಿತ್ವದಲ್ಲಿದ್ದಂತಹ ಅತ್ಯಂತ ಕೆಟ್ಟ ಪದ್ಧತಿ ಎಂದರೆ ಅದು ಜೀತ ಪದ್ಧತಿ.  ಇದರ ನಿರ್ಮೂಲನೆಗಾಗಿಯೇ 1976 ರ ಫೆಬ್ರವರಿ 09 ರಂದು ಜೀತ ಪದ್ಧತಿ ನಿಷೇಧ ಕಾಯ್ದೆ ಜಾರಿಗೆ ಬಂದಿತು.  ಇದರ ಸ್ಮರಣೆಗಾಗಿಯೇ ಪ್ರತಿ ವರ್ಷ ಫೆಬ್ರವರಿ ತಿಂಗಳಿನಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಆಚರಿಸಲಾಗುತ್ತಿದೆ.

ಈ ಹಿಂದೆ ಇದ್ದಂತಹ ಜೀತ ಪದ್ಧತಿ ಪ್ರಸ್ತುತ ದಿನಗಳಲ್ಲಿ ಇಲ್ಲ, ಇದು ನಿರ್ಮೂಲನೆ ಆಗಿದೆ ಎಂಬ ಭಾವನೆ ಇದೆ. ಜಿಲ್ಲೆಯಲ್ಲಿಯೂ ಕೂಡ ಇಂತಹ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದರೆ ಪ್ರಕರಣ ವರದಿಯಾಗಿಲ್ಲ ಎಂದ ಮಾತ್ರಕ್ಕೆ ಇದು ಸಂಪೂರ್ಣ ನಿರ್ಮೂಲನೆ ಆಗಿದೆ ಎಂದು ಹೇಳಲು ಆಗುವುದಿಲ್ಲ. ಕಾಲ ಕಳೆದಂತೆ ಜೀತ ಪದ್ಧತಿಯು ಅನೇಕ ರೂಪಗಳನ್ನು ಪಡೆದು, ಅಸ್ತಿತ್ವದಲ್ಲಿದೆ, ಇದರ ಸ್ವರೂಪವೂ ಬದಲಾಗಿದೆ.

ಇದರಲ್ಲಿ ಪ್ರಮುಖವಾದುದು ಮಾನವ ಕಳ್ಳ ಸಾಗಾಣಿಕೆ. ನವೀನ ಮಾದರಿಯ ಜೀತಪದ್ಧತಿ, ಮಾನವ ಕಳ್ಳ ಸಾಗಾಣಿಕೆ, ಬಲವಂತವಾಗಿ ದುಡಿಸಿಕೊಳ್ಳುವಿಕೆ, ಈ ಮೂರು ವಿಧಾನಗಳು ಈಗಲೂ ಕಂಡುಬರುತ್ತವೆ. ಹೀಗಾಗಿ ಇದರ ನಿರ್ಮೂಲನೆಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಜೀತ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳನ್ನು ನೇಮಿಸಿ ಕಳೆದ ವರ್ಷ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಅಧಿಕಾರಿಗಳು, ಕಾಯ್ದೆಯ ಬಗ್ಗೆ ಹಾಗೂ ಕರ್ತವ್ಯಗಳ ಬಗ್ಗೆ ಅರಿತುಕೊಂಡು, ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಮಾತನಾಡಿ, ಜೀತ ಪದ್ಧತಿ ಈಗ ವಿರಳ, ನಗರ, ಪಟ್ಟಣ ಪ್ರದೇಶಗಳಲ್ಲಿ ಕಂಡುಬರದಿದ್ದರೂ, ಗ್ರಾಮೀಣ ಪ್ರದೇಶಗಳಲ್ಲಿ ಸರಿಯಾದ ರೀತಿಯಲ್ಲಿ ಸಮೀಕ್ಷೆ ಮಾಡಿದರೆ, ಅಲ್ಲಲ್ಲಿ ಕಂಡುಬರಬಹುದು.  ಆದರೆ ಅದರ ಸ್ವರೂಪ ಬೇರೆಯಾಗಿರುತ್ತದೆ.  ಈ ಹಿಂದೆ ಮದುವೆ, ಮನೆ ಇತ್ಯಾದಿಗಾಗಿ ಸಾಲ ಪಡೆದು, ಅವರ ಹೊಲ ಮನೆಗಳಲ್ಲಿಯೇ ಸಾಲ ಹಾಗೂ ಬಡ್ಡಿ ತೀರಿಸಲು ಬೇಸಾಯ, ಕುರಿ ಕಾಯುವುದು, ದನಕರುಗಳನ್ನು ಕಾಯುವಂತಹ ಪ್ರಕರಣಗಳು ಹೆಚ್ಚು ಇದ್ದವು.

1976 ರಲ್ಲಿಯೇ ಜೀತ ಪದ್ಧತಿ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ್ದು, ಸಂತ್ರಸ್ಥರನ್ನು ಜೀತದಿಂದ ಮುಕ್ತಿಗೊಳಿಸಿ, ಅವರಿಗೆ ಪುನರ್ವಸತಿ ಹಾಗೂ ಪರಿಹಾರ ಒದಗಿಸುವ ಕಾರ್ಯವನ್ನು ಸರ್ಕಾರದಿಂದೇ ಮಾಡಲಾಗುತ್ತದೆ. ರಾಜ್ಯದಲ್ಲಿ ಕೃಷಿ, ರೇಷ್ಮೆ, ಕಟ್ಟಡ ಕಾಮಗಾರಿ, ಹೋಟೆಲ್, ಇಟ್ಟಿಗೆ ಭಟ್ಟಿ, ಕೋಳಿ ಫಾರಂ ಮುಂತಾದ ಕಡೆಗಳಲ್ಲಿ ಬಲವಂತವಾಗಿ ದುಡಿಯುವ ಜೀತ ಕಾರ್ಮಿಕರು ಕಂಡುಬರುತ್ತವೆ. ಹೀಗಾಗಿ ಜೀತ ಪದ್ಧತಿ ನಿರ್ಮೂಲನೆಯಾಗಿದ್ದರೂ, ಇದು ಬೇರೆ ಸ್ವರೂಪದಲ್ಲಿ ಈಗಲೂ ಅಸ್ತಿತ್ವದಲ್ಲಿದೆ.

ಗ್ರಾಮೀಣ ಮಟ್ಟದಲ್ಲಿ, ಜೀತ ಕಾರ್ಮಿಕ ನಿಷೇಧ ಅಧಿಕಾರಿಗಳು, ಯಾವುದೇ ಪ್ರಭಾವಕ್ಕೆ, ಒತ್ತಡಕ್ಕೆ ಮಣಿಯದೆ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ, ಅಂತಹ ಜೀತ ಕಾರ್ಮಿಕರನ್ನು ವಿಮುಕ್ತಿಗೊಳಿಸಿದ ಪುಣ್ಯ ಪ್ರಾಪ್ತಿಯಾಗುತ್ತದೆ. ಕೇವಲ ವರದಿ ನೀಡಬೇಕು ಎಂಬ ಕಾರಣಕ್ಕಾಗಿಯೇ “ಯಾರೂ ಜೀತ ಕಾರ್ಮಿಕರು ಇಲ್ಲ” ಎಂಬ ವರದಿಯನ್ನು ಸಲ್ಲಿಸುವುದು ಸರಿಯಲ್ಲ. ಹೀಗಾಗಿ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಜಿಲ್ಲೆಯಲ್ಲಿ ಆಗಬೇಕಿದ್ದು, ಇದಕ್ಕೆ ಅಧಿಕಾರಿ, ಸಿಬ್ಬಂದಿಗಳ ಸಹಕಾರ ಅಗತ್ಯವಾಗಿದೆ ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಅವರು ಮಾತನಾಡಿ, ಜೀತ ಪದ್ಧತಿ ನಿಷೇಧದ ಬಗ್ಗೆ ಈಗ ಜನರಲ್ಲಿ ಜಾಗೃತಿ ಹಾಗೂ ಅರಿವು ಇದ್ದು, ಪ್ರಕರಣಗಳು ಕಡಿಮೆ ಇದೆ.  ಆದರೆ ಇದು ಅವರ ಅರಿವಿಲ್ಲದೇ ಬೇರೆ ಸ್ವರೂಪದಲ್ಲಿ ನಡೆಯುತ್ತಿದೆ.  ಇದರ ತಡೆಗಾಗಿಯೇ ಜಿಲ್ಲೆಯಲ್ಲಿ ಕಾರ್ಯಪಡೆ ಇದೆ.  ಮಾಹಿತಿ ಇದ್ದರೂ, ಅದನ್ನು ಸಂಬಧಪಟ್ಟ ಅಧಿಕಾರಿಗಳಿಗೆ ನೀಡದೇ ಇರುವುದು ಕೂಡ ತಪ್ಪಾಗುತ್ತದೆ.  ಜಿಲ್ಲೆಯಲ್ಲಿ ಯಾವುದೇ ಬಗೆಯ ಜೀತ ಪದ್ಧತಿ, ಜೀತ ಕಾರ್ಮಿಕರು, ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಕಂಡುಬಂದರೆ ಪೊಲೀಸ್ ಸಹಾಯವಾಣಿ 112 ಕ್ಕೆ ಕರೆ ಮಾಡಿ ನೀಡಬಹುದು ಎಂದರು.

ಕಾರ್ಯಕ್ರಮದ ಅಂಗವಾಗಿ ಜೀತ ಪದ್ಧತಿ ನಿರ್ಮೂಲನೆ ಕುರಿತು ಎಲ್ಲ ಗಣ್ಯರು, ಅಧಿಕಾರಿಗಳು ಇದೇ ವೇಳೆ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಮುಕ್ತಿ ಅಲಯನ್ಸ್‍ನ ಸಂಚಾಲಕರಾದ ಬೃಂದಾ ಅಡಿಗ, ರಾಜೇಂದ್ರನ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.