ದಕ್ಷಿಣ ಕನ್ನಡ – Peepal Media

ಕಲ್ಲಡ್ಕ ಭಟ್ ವಿರುದ್ಧ ಎಫ್ಐಆರ್; ಬಿಎಲ್ ಸಂತೋಷ್ ಮೌನ : ಬಿಜೆಪಿ ಒಳಗೆ ಎಲ್ಲವೂ ಸರಿಯಿಲ್ಲ
ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, RSS ಹಿನ್ನೆಲೆಯ ಬಿ.ಎಲ್. ಸಂತೋಷ್ ಮೌನ ತಾಳಿದ್ದಾರೆ. ಎಲ್ಲಿಯೂ ಸಹ ತಾವಾಗಲಿ, ತಮ್ಮ ಬೆಂಬಲಿಗರಾಗಲಿ ಈ ಬಗ್ಗೆ ಮಾತನಾಡದೇ ಇರುವುದು ದಕ್ಷಿಣ ಕನ್ನಡ ಬಿಜೆಪಿ ಒಳಬೇಗುದಿ ಎತ್ತಿ ಹಿಡಿಯುವಂತಿದೆ.

ಧರ್ಮಸ್ಥಳ ವಿಷಯ ಮತ್ತು ಕಲಬುರಗಿಯಲ್ಲಿ ಆರ್‌ಎಸ್‌ಎಸ್ ರೂಟ್ ಮಾರ್ಚ್ ನಡೆಸಲು ಅನುಮತಿ ನಿರಾಕರಿಸಿದ ಬಗ್ಗೆ ಸಂತೋಷ್ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಬಹಿರಂಗವಾಗಿ ಮಾತನಾಡಿದ್ದರು. ಧರ್ಮಸ್ಥಳದ ಬಗ್ಗೆ, ಸಂತೋಷ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಪೋಸ್ಟ್ ಮಾಡಿದ್ದರು ಮತ್ತು ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ ರಹಸ್ಯವಾಗಿ ಮಾತನಾಡಿದ್ದರು. ತಮ್ಮ ಹೇಳಿಕೆಗಳ ಮೂಲಕ, ಸಂತೋಷ್ ಎರಡೂ ವಿವಾದಗಳಲ್ಲಿ ಕರ್ನಾಟಕ ಬಿಜೆಪಿಗೆ ನಿರ್ದೇಶನ ನೀಡಿದರು.

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧದ ಎಫ್‌ಐಆರ್ ಬಗ್ಗೆ ಬಿಎಲ್ ಸಂತೋಷ್ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಸಂಘದ ಹಿಂದುತ್ವ ಪ್ರಯೋಗಾಲಯ ಎಂದು ಕರೆಯಲ್ಪಡುವ ಪ್ರಭಾಕರ್ ಭಟ್‌ಗೆ ಕಾಂಗ್ರೆಸ್ ಪಕ್ಷದ ಡಿಕೆಶಿ ಕಡೆಯಿಂದಲೂ ಭಾರಿ ಬೆಂಬಲವಿದೆ. ಆದರೂ ಸಹ ಅಕ್ಟೋಬರ್ 25 ರಂದು ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಫ್ಐಆರ್ ದಾಖಲಾದ ನಾಲ್ಕು ದಿನಗಳ ನಂತರವೂ ಸಂತೋಷ್ ಫೇಸ್‌ಬುಕ್‌ನಲ್ಲಿ ಪ್ರಭಾಕರ್ ಭಟ್‌ ಜೊತೆ ಒಗ್ಗಟ್ಟು ಪ್ರದರ್ಶಿಸಿಲ್ಲ ಅಥವಾ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಅದರ ಬಗ್ಗೆ ಪೋಸ್ಟ್ ಮಾಡಿಲ್ಲ. ಇದು ಈಗ ಇಬ್ಬರು ನಾಯಕರ ನಡುವಿನ ಸಂಬಂಧದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಖಾಸಗಿ ವಾಹಿನಿಗಳ ಮೂಲದ ವರದಿಯಂತೆ ಪ್ರಭಾಕರ್ ಭಟ್ ಅವರಿಗೆ ಸ್ಥಳೀಯವಾಗಿ ಎದುರಾಳಿಗಳು ಕಾಂಗ್ರೆಸ್‌ನಲ್ಲಿ ಯಾರೂ ಇಲ್ಲ. ಬದಲಾಗಿ ಆರ್‌ಎಸ್‌ಎಸ್‌ನಲ್ಲೇ ಅವರಿಗೆ ಎದುರಾಳಿಗಳು ಇದ್ದಾರೆ. ಕೆಲವು ವರ್ಷಗಳ ಹಿಂದೆ, ಕಲ್ಲಡ್ಕದ ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳು ಬಾಬರಿ ಮಸೀದಿ ಧ್ವಂಸವನ್ನು ನೃತ್ಯ ಪ್ರದರ್ಶನದ ಮೂಲಕ ಪುನರಾವರ್ತಿಸಿದಾಗ, ಹಿರಿಯ ಆರ್‌ಎಸ್‌ಎಸ್ ನಾಯಕರೊಬ್ಬರು ಶಾಲೆಯನ್ನು ಆರ್‌ಎಸ್‌ಎಸ್ ನಡೆಸುತ್ತಿಲ್ಲ ಎಂದು ಹೇಳಿ ಶಾಲೆಯ ಚಟುವಟಿಕೆಗಳಿಂದ ದೂರ ಉಳಿದಿದ್ದರು ಎಂದು ವರದಿಯಾಗಿದೆ. ಆದರೆ ಆ ಶಾಲೆ ಕಲ್ಲಡ್ಕ ಪ್ರಭಾಕರ ಭಟ್ ಅಧೀನದಲ್ಲಿತ್ತು. ಆ ಸಮಯದಲ್ಲೂ  ಶಾಲೆಯ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿತ್ತು.

ಮೂಲಗಳ ಪ್ರಕಾರ, ಸಂತೋಷ್ ಅವರ ಮೌನ ಎದ್ದು ಕಾಣುತ್ತಿದ್ದು, ಭಟ್ ಅವರೊಂದಿಗಿನ ಸಂಬಂಧ ಹಳಸಿದೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ. ಅನೇಕ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಈಗ ಈ ವಿಷಯವನ್ನು ಖಾಸಗಿಯಾಗಿ ಚರ್ಚಿಸುತ್ತಿದ್ದಾರೆ. ಸಂತೋಷ್ ಅವರ ಮೌನವು ಪಕ್ಷದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ತಳಮಟ್ಟದ ಕಾರ್ಯಕರ್ತರು ಮಾತನಾಡಿಕೊಳ್ಳುತ್ತಿದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಯ ತನಿಖೆಗಾಗಿ SIT ಅನ್ನು ರಚಿಸಲಾಗಿತ್ತು. ಏತನ್ಮಧ್ಯೆ, ಭಟ್ ಧರ್ಮಸ್ಥಳ ವಿವಾದದಿಂದ ದೂರವಿದ್ದದ್ದುದ್ದು ದಕ್ಷಿಣ ಕನ್ನಡ ಬಿಜೆಪಿ ಮತ್ತು ಆರ್‌ಎಸ್‌ಎಸ್ ಒಳಗೆ ಎಲ್ಲವೂ ಸರಿಯಿಲ್ಲ ಎಂಬಂತಾಗಿದೆ.

ಸಾರ್ವಜನಿಕ ಶಿಕ್ಷಣದ ಉಳಿವಿಗಾಗಿ ಮತ್ತು ಹಾಸ್ಟೆಲ್ ಬಲವರ್ಧನೆಗಾಗಿ, ದಕ್ಷಿಣಕನ್ನಡದಲ್ಲಿ SFI ಶೈಕ್ಷಣಿಕ ಜಾಥಾ
ಮಂಗಳೂರು : ಭಾರತ ವಿದ್ಯಾರ್ಥಿ ಫೇಡರೇಷನ್ ಕರ್ನಾಟಕ ರಾಜ್ಯ ಸಮಿತಿ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ ಮತ್ತು ಹಾಸ್ಟೆಲ್ ಬಲವರ್ಧನೆಗಾಗಿ ಎಂಬ ಧ್ಯೇಯದೊಂದಿಗೆ ಅಕ್ಟೋಬರ್ 13ರಂದು ಧಾರವಾಢ ದಿಂದ ಆರಂಭಗೊಂಡ ರಾಜ್ಯ ಮಟ್ಟದ ಜಾಥ ಇಂದು 28/10/2025 ಮಂಗಳವಾರ ಮಂಗಳೂರು ತಲುಪಿತು. ಮಂಗಳೂರಿನ ಕ್ಲಾಕ್ ಟವರ್ ಬಳಿ ಜಾಥಾ ತಂಡವನ್ನು ಸ್ವಾಗತಿಸಲಾಯಿತು.
ನಂತರ ಜಾಥಾ ಉದ್ದೇಶಿಸಿ ಪ್ರಾಸ್ತವಿಕವಾಗಿ SFI ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಅವರು ಮಾತನಾಡಿದರು. ನಂತರ SFI ರಾಜ್ಯಧ್ಯಕ್ಷರು ಆದ ಶಿವಪ್ಪರವರು ಮಾತನಾಡುತ್ತಾ ಶಿಕ್ಷಣದ ವ್ಯಾಪಾರಿಕರಣ ನಿಲ್ಲಬೇಕು, ಅದಲ್ಲದೆ ಇಂಜಿನಿಯರ್ ಅಲ್ಲದೆ ಮೆಡಿಕಲ್ ಕಾಲೇಜುಗಳು ಪ್ರತಿ ಜಿಲ್ಲೆಯಲ್ಲೂ ನಿರ್ಮಾಣವಾಗ ಬೇಕು. ಅದಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಾಸ್ಟೆಲ್ಗಳಿದ್ದರೂ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಯೋಗ್ಯವಾಗಿಲ್ಲ ಹಾಸ್ಟೆಲ್ ಗಳು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾಗಿಲ್ಲ ರಾಜ್ಯದೆಲ್ಲೆಡೆ ವಿದ್ಯಾರ್ಥಿ ಸ್ನೇಹಿ ಹಾಸ್ಟೆಲ್ ನಿರ್ಮಾಣ ಆಗಬೇಕೆಂದು ಆಗ್ರಹಿಸಿದರು. ನಂತರ ಅರ್ಪಿತಾ SFI ರಾಜ್ಯ ಮುಖಂಡರು ಮತ್ತು DYFI ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿರುವ ಸಂತೋಷ್ ಬಜಾಲ್ ರಾಜ್ಯಮಟ್ಟದ ಶೈಕ್ಷಣಿಕ ಜಾಥಾಕ್ಕೆ ಶುಭ ಹಾರೈಸಿದರು. ನಂತರ ಕಾರ್ಯಕ್ರಮದಲ್ಲಿ ಸಮುದಾಯ ಮಂಗಳೂರು ತಂಡದಿಂದ ವಿದ್ಯಾರ್ಥಿ ಯುವಜನರ ಸಮಸ್ಯೆಯಾದ ನಿರುದ್ಯೋಗದ ವಿರುದ್ಧ ಹಾಗೂ ಶಿಕ್ಷಣದ ಕೊರತೆ ಆಗುವ ಸಮಸ್ಯೆಗಳನ್ನೊಳಗೊಂಡ ಸೈರನ್ ಎಂಬ ಬೀದಿನಾಟಕ ಪ್ರದರ್ಶನ ಮಾಡಲಾಯಿತು. ಎಸ್ ಎಫ್ ಐ ರಾಜ್ಯಮಟ್ಟದ ಶೈಕ್ಷಣಿಕ ಜಾಥಾ ಅಕ್ಟೋಬರ್ 30ರಂದು ಹಾವೇರಿಯಲ್ಲಿ ಸಮಾರೋಪಗೊಳ್ಳಲಿರುವ ಜಾಥಾ ಮಂಗಳೂರಿಂದ ಉಡುಪಿ ಜಿಲ್ಲೆಗೆ ಬೀಳ್ಕೊಡಲಾಯಿತು

ಈ ಕಾರ್ಯಕ್ರಮದಲ್ಲಿ SFI ಜಿಲ್ಲಾಧ್ಯಕ್ಷರು ಇನಾಝ್ ಬಿ ಕೆ, ವಿದ್ಯಾರ್ಥಿ ಮುಖಂಡರಾದ ಇಶಾನ್, ಅಫ್ರೋಸ್, ಹಸ್ಲಾನ್, DYFI ಮುಖಂಡರುಗಳಾದ ರಿಜ್ವಾನ್ ಹರೇಕಳ, ಅಧಿತಿ ಬೆಳ್ತಂಗಡಿ, ಅಭಿಶೇಕ್ ಪದ್ಮುಂಜ ತೈಯೂಬ್, ಮತ್ತು ಮಾಧುರಿ ಬೋಳಾರ ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು SFI ದ. ಕ.ಜಿಲ್ಲಾ ಕಾರ್ಯದರ್ಶಿಯಾಗಿರುವ ವಿನುಷರಮಣ ಸ್ವಾಗತಿಸಿ ನಿರೂಪಿಸಿದರು, ಜಿಲ್ಲಾ ಮುಖಂಡರಾದ ತಿಲಕ್ ರಾಜ್ ಕುತ್ತಾರ್ ಧನ್ಯವಾದ ಸಮರ್ಪಿಸಿದರು..

ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ.ಸಿಂಧು ಭಾರತೀಯ ಬ್ಯಾಡ್ಮಿಂಟನ್ ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ: ಸಿ.ಎಂ.ಸಿದ್ದರಾಮಯ್ಯ
ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಮಾತನಾಡಿದರು.

ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ.

DySP ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ2 ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ3 ಕ್ಕೆ ಹೆಚ್ವಿಸಿದ್ದೇವೆ. ಜೊತೆಗೆ ಒಲಂಪಿಕ್ ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಪದಕ ತನ್ನಿ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ವಿಶ್ವದ ಅತ್ಯಂತ ಜನಪ್ರಿಯ ಆಟಗಳಲ್ಲಿ ಬ್ಯಾಂಡ್ಮಿಂಟನ್ ಕೂಡ ಒಂದು. ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ.ಸಿಂಧು ಭಾರತೀಯ ಬ್ಯಾಡ್ಮಿಂಟನ್ ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

ಈ ಪಂದ್ಯಾವಳಿ ನಡೆಯುತ್ತಿರುವ ಈ ಉರ್ವ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದ್ದು ನಾನೇ, ಉದ್ಘಾಟನೆ ಕೂಡ ನಾನೇ ಮಾಡಿದೆ. ನಮ್ಮ ಸರ್ಕಾರದ್ದೇ ಹಣ. ಹಿಂದಿನ ಬಿಜೆಪಿ ಸರ್ಕಾರ ಈ ಕ್ರೀಡಾಂಗಣ ಪೂರ್ಣಗೊಳ್ಳಲು ಸಹಕಾರ ನೀಡಲಿಲ್ಲ. ಆದರೆ ಮತ್ತೆ ನಾನೇ ಮುಖ್ಯಮಂತ್ರಿ ಆಗಿ ಬಂದು ಒಟ್ಟು 38 ಕೋಟಿ ರೂಪಾಯಿಗಳನ್ನು ನೀಡಿ ಕ್ರೀಡಾಂಗಣ ಪೂರ್ಣಗೊಳಿಸಲಾಯಿತು ಎಂದು ವಿವರಿಸಿದರು.

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್ ಐ ಆರ್- ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರು, ಅಕ್ಟೋಬರ್ 27: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

ಎಸ್ ಐ ಟಿ ವರದಿ

ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್ ಐ ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್ ಐ ಟಿ ಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್ ಐ ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್ ಐ ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು.

ವಾಹನ ಸೌಲಭ್ಯ

ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಹೈಕಮಾಂಡ್ ನದೇ ಅಂತಿಮ ತೀರ್ಮಾನ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ದ್ವೇಷ ಭಾಷಣ: ವಿಚಾರಣೆಗೆ ಹಾಜರಾಗುವಂತೆ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನೋಟಿಸ್ ನೀಡಿದ ಪೊಲೀಸರು
ಪುತ್ತೂರು: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪುತ್ತೂರು ಗ್ರಾಮಾಂತರ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅಕ್ಟೋಬರ್ 30 ರಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚಿಸಲಾಗಿದೆ.

ದೂರಿನ ವಿವರಗಳು:

ಘಟನೆ: ಅಕ್ಟೋಬರ್ 20 ರಂದು ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಪ್ರಭಾಕರ ಭಟ್ ಅವರು ಭಾಷಣ ಮಾಡಿದ್ದರು.

ಆರೋಪ: ಈ ಭಾಷಣವು ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವಂತಿತ್ತು ಎಂದು ಆರೋಪಿಸಲಾಗಿದೆ.

ದೂರುದಾರರು: ಮಹಿಳಾ ಪರ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.

ದಾಖಲಾದ ಪ್ರಕರಣ:

ದೂರಿನ ಆಧಾರದ ಮೇಲೆ, ಅಕ್ಟೋಬರ್ 25 ರಂದು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

ವಿಚಾರಣೆಗೆ ಸೂಚನೆ:

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 35(3) ಅಡಿಯಲ್ಲಿ ದಾಖಲಾಗಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.30 ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ಇಲಾಖೆಯು ಪ್ರಭಾಕರ ಭಟ್ ಅವರ ಮನೆಗೆ ನೋಟಿಸ್ ತಲುಪಿಸಿದೆ.

ಧರ್ಮಸ್ಥಳ ಪ್ರಕರಣ – ತಿಮರೋಡಿ, ಮಟ್ಟಣ್ಣನವರ್ ಸೇರಿ ಐವರಿಗೆ ಎಸ್ಐಟಿಯಿಂದ ಪುನಃ ನೋಟಿಸ್; ಪ್ರಣವ್ ಮೊಹಂತಿ ನೇತೃತ್ವದಲ್ಲಿ ವಿಚಾರಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿನ ವಿವಾದಿತ ‘ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ’ ಸಂಬಂಧಿಸಿದಂತೆ, ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್, ಮತ್ತು ವಿಠಲಗೌಡ ಅವರಿಗೆ ಎಸ್‌ಐಟಿ ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಈ ಐವರಿಗೂ ಸೂಚಿಸಲಾಗಿದ್ದು, ಇಂದು (ಸೋಮವಾರ) ಬೆಳಗ್ಗೆ 10:30ಕ್ಕೆ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಬರುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ವಿಚಾರಣೆ ನಡೆಸಲು ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರು ಮೂರು ದಿನಗಳ ಕಾಲ ಬೆಳ್ತಂಗಡಿಯಲ್ಲೇ ವಾಸ್ತವ್ಯ ಹೂಡಿದ್ದು, ಅವರ ಸಮ್ಮುಖದಲ್ಲಿಯೇ ಈ ನಾಲ್ವರು ಪ್ರಮುಖರ ವಿಚಾರಣೆ ನಡೆಯಲಿದೆ.

ಪ್ರಕರಣದಲ್ಲಿ ಸುಳ್ಳು ಕಥೆ ಸೃಷ್ಟಿಸಿ ರಾದ್ಧಾಂತಕ್ಕೆ ಕಾರಣರಾಗಿದ್ದ ಆರೋಪ ಎದುರಿಸುತ್ತಿರುವ ಸುಜಾತಾ ಭಟ್ ಅವರಿಗೂ ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿಯಿಂದ ನೋಟಿಸ್ ನೀಡಲಾಗಿದೆ. ಈ ಹಿಂದೆ ಸುಜಾತಾ ಭಟ್ ಹಲವು ಬಾರಿ ವಿಚಾರಣೆಗೆ ಹಾಜರಾಗಿದ್ದರು.

ಎಸ್‌ಐಟಿ ಮುಖ್ಯಸ್ಥರ ನೇತೃತ್ವದಲ್ಲಿ ನಡೆಯಲಿರುವ ಈ ಐವರ ಮಹತ್ವದ ವಿಚಾರಣೆಯ ವೇಳೆ, ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಹೊಸ ವಿಷಯಗಳು ಹೊರಬರುವ ಸಾಧ್ಯತೆ ಇದೆ.

ಸುರತ್ಕಲ್: ಕಾನ ಪೆಟ್ರೋಲ್ ಪಂಪ್ ಬಳಿ ಇಬ್ಬರಿಗೆ ಚೂರಿ ಇರಿತ; ಓರ್ವನ ಸ್ಥಿತಿ ಗಂಭೀರ
ಸುರತ್ಕಲ್: ಗುರುವಾರ ತಡರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಪೆಟ್ರೋಲ್ ಪಂಪ್ ಬಳಿ ನಾಲ್ಕು ಮಂದಿ ದುಷ್ಕರ್ಮಿಗಳ ತಂಡವು ಇಬ್ಬರು ಯುವಕರಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಸುರತ್ಕಲ್‌ನ ಚೊಕ್ಕಬೆಟ್ಟು ನಿವಾಸಿ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ನಿಝಾಮ್ ಅವರ ಹೊಟ್ಟೆಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಅವರಿಗೆ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮುರ್ಷಿದ್ ಅವರಿಗೆ ಸಣ್ಣ ಪ್ರಮಾಣದ ಇರಿತದ ಗಾಯಗಳಾಗಿದ್ದು, ಅವರು ಮುಕ್ಕದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಸಂದರ್ಭದಲ್ಲಿ, ಐದು ಮಂದಿ ಸ್ನೇಹಿತರು ಎರಡು ದ್ವಿಚಕ್ರ ವಾಹನಗಳಲ್ಲಿ ಕೃಷ್ಣಾಪುರದ ಕಡೆಗೆ ಹೋಗುತ್ತಿದ್ದರು. ಈ ವೇಳೆ ನಿಝಾಮ್ ಮತ್ತು ಮುರ್ಷಿದ್ ಇದ್ದ ವಾಹನದ ಪೆಟ್ರೋಲ್ ಖಾಲಿಯಾದ ಕಾರಣ ರಸ್ತೆ ಬದಿಯಲ್ಲಿ ನಿಂತಿದ್ದರು. ಇನ್ನೊಂದು ವಾಹನದಲ್ಲಿದ್ದ ಅವರ ಸ್ನೇಹಿತರು ಪೆಟ್ರೋಲ್ ತರಲೆಂದು ಪೆಟ್ರೋಲ್ ಪಂಪ್‌ಗೆ ಹೋಗಿದ್ದರು. ಈ ಸಂದರ್ಭದಲ್ಲಿ ಸಮೀಪದ ಬಾರ್‌ನಿಂದ ಬಂದ ನಾಲ್ವರು ಅಪರಿಚಿತರು “ಹನೀಫ್ ಗೊತ್ತಾ?” ಎಂದು ಕೇಳಿ ಮಾತು ಆರಂಭಿಸಿದ್ದಾರೆ. ಬಳಿಕ ಎರಡೂ ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ದುಷ್ಕರ್ಮಿಗಳಲ್ಲಿ ಓರ್ವ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ ಎಂದು ಗಾಯಾಳುಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಆಸ್ಪತ್ರೆಗೆ ತೆರಳಿ ಸಂತ್ರಸ್ತರಿಂದ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಾತಿ ಧರ್ಮ ಎಂದು ಜಗಳ ತರುವವರು ಅವರ ಮಕ್ಕಳನ್ನು ಗಲಭೆ ಹಚ್ಚಲು ಕಳಿಸುವುದಿಲ್ಲ. ಬಡವರ ಮಕ್ಕಳನ್ನು, ಅಮಾಯಕರನ್ನು ದಬ್ಬುತ್ತಾರೆ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ
ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಶೋಕ ಜನ-ಮನ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಶೋಕ್ ಅವರು ಕಾಂಗ್ರೆಸ್ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ಪ್ರತಿ ವರ್ಷ ವಸ್ತ್ರದಾನ ಮಾಡುವ ಕಾರ್ಯವನ್ನು 13 ವರ್ಷಗಳಿಂದ ಮಾಡ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಇತರರಿಗೆ ಅವರು ಸ್ಫೂರ್ತಿಯಾಗಲಿ ಎಂದರು.

ಸಮಾಜದಲ್ಲಿನ ದುರ್ಬಲರಿಗೆ ತಮ್ಮ ಗಳಿಕೆಯ ಒಂದು ಭಾಗವನ್ನು ನೀಡುವುದು ಒಳ್ಳೆಯ ಕೆಲಸ ಎಂದರು. ಸಮ ಸಮಾಜ ನಿರ್ಮಾಣ ಸಂವಿಧಾನದ ಉದ್ದೇಶ. ಕಾಯಕ ಮತ್ತು ದಾಸೋಹ ತತ್ವವನ್ನು ಬಸವಣ್ಣ ನಮಗೆ ನೀಡಿದ್ದಾರೆ ಎಂದರು.

ಸಹಿಷ್ಣುತೆ, ಸಹಬಾಳ್ವೆ ಅಗತ್ಯ

ನಮ್ಮ ನಾಡು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ಪರಸ್ಪರ ಕಚ್ಚಾಡುವ, ಅಸಮಾನತೆವುಳ್ಳ ಸಮಾಜ ನಿರ್ಮಾಣವಾಗಬಾರದು. ಇತರೆ ಧರ್ಮಗಳ ಬಗ್ಗೆ ಸಹಿಷ್ಣುತೆ ಅಗತ್ಯ. ಸಹಬಾಳ್ವೆ ಇರಬೇಕು. ಇದನ್ನು ಎಲ್ಲರೂ ಪಾಲಿಸಿದಾಗ ಸಂವಿಧಾನದ ಧ್ಯೇಯೋದ್ದೇಶಗಳನ್ನು ಪಾಲಿಸಿದಂತಾಗುತ್ತದೆ ಎಂದರು.

ತಲಾ ಆದಾಯದಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ

ರಾಜ್ಯ ಹಸಿವು ಮುಕ್ತವಾಗಬೇಕೆಂದು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ತಲಾ ಆದಾಯದಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸುತ್ತಾರೆ. ಸರ್ಕಾರದ ಬಳಿ ಹಣವಿಲ್ಲದಿದ್ದರೆ ಕಾಂಗ್ರೆಸ್ ಸರ್ಕಾರ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2500 ಕೋಟಿ ರೂ. ಗಳ ಅನುದಾನ ಕೊಡಲು ಸಾಧ್ಯವಾಗುತ್ತಿತ್ತೆ ಎಂದು ಪ್ರಶ್ನಿಸಿದರು.

ಜಿಲ್ಲೆಯಲ್ಲಿ ಜಾತಿ ಧರ್ಮದ ಹೆಸರಿನಲ್ಲಿ ಜಗಳ ಉಂಟು ಮಾಡುವುದಕ್ಕೆ ಕಡಿವಾಣ

ಟೀಕೆ ಮಾಡುವವರು ಸುಮ್ಮನೆ ಟೀಕೆ ಮಾಡುತ್ತಾರೆ. ಏಕೆಂದರೆ ಜಾತಿ ಧರ್ಮದ ಹೆಸರಿನಲ್ಲಿ ಜಗಳ ತರುವುದರಲ್ಲಿ ಜಿಲ್ಲೆ ನಂಬರ್ ಒನ್ ಸ್ಥಾನದಲ್ಲಿತ್ತು. ಅದಕ್ಕೆಲ್ಲಾ ನಮ್ಮ ಸರ್ಕಾರ ಕಡಿವಾಣ ಹಾಕಿದೆ ಎಂದರು.

ಜಾತಿ ಧರ್ಮ ಎಂದು ಜಗಳ ತರುವವರ ಮಕ್ಕಳನ್ನು ಇದಕ್ಕೆ ಕಳಿಸುವುದಿಲ್ಲ. ಬಡವರ ಮಕ್ಕಳನ್ನು, ಅಮಾಯಕರನ್ನು ಕಳಿಸುತ್ತಾರೆ. ದಕ್ಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಈಗ ಸುಧಾರಣೆಯಾಗಿದೆಯಲ್ಲವೆ ಎಂದು ಕೇಳಿದರು. ಪೋಲಿಸ್ ಅಧಿಕಾರಿಗಳು ದಕ್ಷರಾಗಿದ್ದರೆ ಬದಲಾವಣೆ ತರಲು ಸಾಧ್ಯ. ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಅನ್ಯೋನ್ಯತೆಯಿಂದ ಕೆಲಸ ಮಾಡಬೇಕು ಎಂದರು.

ಪುತ್ತೂರಿನಲ್ಲಿಯೇ ವೈದ್ಯಕೀಯ ಕಾಲೇಜು
ಬಜೆಟ್ ನಲ್ಲಿ ಘೋಷಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವೈದ್ಯಕೀಯ ಕಾಲೇಜು ಪುತ್ತೂರಿನಲ್ಲಿಯೇ ನಿರ್ಮಾಣವಾಗಲಿದೆ ಈ ಬಗ್ಗೆ ಯಾರಿಗೂ ಅನುಮಾನ ಬೇಡವೆಂದು ಮುಖ್ಯಮಂತ್ರಿಗಳು ತಿಳಿಸಿದರು.

ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ವೆಚ್ಚ

ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿಗಳನ್ನು ಸರ್ಕಾರ ವೆಚ್ಚ ಮಾಡಿದ್ದು , ಸರ್ಕಾರ ದಿವಾಳಿಯಾಗಿಲ್ಲ ,
ಆಗುವುದೂ ಇಲ್ಲ. ಮುಂದಿನ ಚುನಾವಣೆಯಲ್ಲಿ ಎಂಟೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಇದಕ್ಕೆ ನೀವು ಆಶೀರ್ವಾದಿಸಬೇಕು ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ವೈದ್ಯಕೀಯ ಕಾಲೇಜು ನಿರ್ಮಾಣವನ್ನು ಸರ್ಕಾರ ಮಾಡಿಯೇ ತೆರಳಲಿದೆ. ಎಲ್ಲಾ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ನಮ್ಮ ಬದ್ಧತೆಯಾಗಿದೆ. ಇಲ್ಲಿಯವರೆಗೆ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣವಾಗಿದೆ ಎಂದರು.

ಬಡವರ ಕೆಲಸವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಜಿಎಸ್ ಟಿ ಕಡಿತದಿಂದ: ಕರ್ನಾಟಕಕ್ಕೆ 15 ಸಾವಿರ ಕೋಟಿ ನಷ್ಟ

2017ರಲ್ಲಿ ಜಿ ಎಸ್ ಟಿ ಜಾರಿಗೆ ತಂದಿದ್ದು ನರೇಂದ್ರ ಮೋದಿ. ಎಂಟು ವರ್ಷಗಳಾಗಿದೆ. ಎಂಟು ವರ್ಷಗಳಲ್ಲಿ ಭಾರತೀಯರಿಂದ ತೆರಿಗೆ ಲೂಟಿ ಮಾಡಿದ್ದೂ ಅವರೇ. ಈಗ ಕಮ್ಮಿ ಮಾಡಿ ಈಗ ದೀಪಾವಳಿ ಗಿಫ್ಟ್ ಎಂದು ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿಯ ಸೋಗಲಾಡಿತನವನ್ನು ಟೀಕಿಸಿದರು.

ಜಿಎಸ್ ಟಿ ಬದಲಾವಣೆಯ ಪರಿಣಾಮದಿಂದಾಗಿ ಕರ್ನಾಟಕಕ್ಕೆ 15 ಸಾವಿರ ಕೋಟಿ ನಷ್ಟವಾಗುತ್ತಿದೆ ಎಂದರು.

ಕೋಮು ಸೌಹಾರ್ದತೆ ಇದ್ದರೆ ಯಾವುದೇ ರಾಜ್ಯ, ಜಿಲ್ಲೆ ಬೆಳವಣಿಗೆಯಾಗಲು ಸಾಧ್ಯ

ಕೋಮು ಸೌಹಾರ್ದತೆ ಇದ್ದರೆ ಯಾವುದೇ ರಾಜ್ಯ, ಜಿಲ್ಲೆ ಬೆಳವಣಿಗೆಯಾಗಲು ಸಾಧ್ಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಹಾಗೂ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದರು. ಈ ಬಗ್ಗೆ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಹೆಚ್.ಕೆ ಪಾಟೀಲ್ ಅವರು ಕಾನೂನು ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದರು.

ನಾವು ಆದೇಶ ಹೊರಡಿಸಿದರೆ ಜಾತಿ ಬಣ್ಣ ಕಟ್ಟುತ್ತಾರೆ

ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಯಾವುದೇ ಸಂಘಟನೆ ಸಾರ್ವಜನಿಕ ಅಥವಾ ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆ ಹಮ್ಮಿಕೊಂಡರೆ ನಿಷೇಧ ಮಾಡಬೇಕೆಂದು ಆದೇಶ ಹೊರಡಿಸಿದ್ದರು. ನಾವೂ ಅದನ್ನೇ ಮಾಡಿದ್ದೇವೆ. ಅದಕ್ಕೆ ಆರ್ ಎಸ್ ಎಸ್ ಬಲಿ ಹಾಕಲು ಹೊರಟಿದ್ದಾರೆ ಎಂದು ಟೀಕಿಸುತ್ತಾರೆ. ನಾವು ಮಾಡಿದರೆ ಜಾತಿ ಬಣ್ಣ ಕಟ್ಟುತ್ತಾರೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಇಂಥ ಸೂಕ್ಷ್ಮಗಳನ್ನು ಅರಿತುಕೊಳ್ಳಬೇಕು ಎಂದರು.

ಜೇನು ಕಚ್ಚಿ ಮೃತಪಟ್ಟವರಿಗೆ 5 ಲಕ್ಷ ಪರಿಹಾರ

ಜಿಲ್ಲೆಯಲ್ಲಿ ಜೇನು ಕಚ್ಚಿ ಮೃತಪಟ್ಟ ವ್ಯಕ್ತಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ಪರಿಹಾರ ನೀಡಲಾಗುವುದು ಎಂದರು.

ಧರ್ಮಸ್ಥಳ ಪ್ರಕರಣ: ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರಿಂದ ಬೆಳ್ತಂಗಡಿಗೆ ಭೇಟಿ, ತನಿಖಾ ಪ್ರಗತಿ ಪರಿಶೀಲನೆ
ಮಂಗಳೂರು: ಧರ್ಮಸ್ಥಳ ಪ್ರಕರಣದ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರು ಬುಧವಾರ ಬೆಳ್ತಂಗಡಿಯಲ್ಲಿರುವ ತಂಡದ ಕಚೇರಿಗೆ ಭೇಟಿ ನೀಡಿ, ನಡೆಯುತ್ತಿರುವ ತನಿಖೆಯ ಪ್ರಗತಿಯ ಕುರಿತು ಪರಿಶೀಲನಾ ಸಭೆ ನಡೆಸಿದರು.

ತಮ್ಮ ಭೇಟಿಯ ವೇಳೆ ಮೊಹಾಂತಿ ಅವರು ಅಧಿಕಾರಿಗಳಿಗೆ ಮುಂದಿನ ಕಾರ್ಯತಂತ್ರದ ಬಗ್ಗೆ ನಿರ್ದೇಶನ ನೀಡಿದರು ಮತ್ತು ಪ್ರಕರಣದಲ್ಲಿ ಇಲ್ಲಿಯವರೆಗೆ ಆಗಿರುವ ಪ್ರಗತಿಯನ್ನು ಪರಿಶೀಲಿಸಿದರು. ತನಿಖೆಯ ಇತ್ತೀಚಿನ ಬೆಳವಣಿಗೆಗಳು ಮತ್ತು ಎದುರಾಗುತ್ತಿರುವ ಸವಾಲುಗಳನ್ನು ನಿರ್ಣಯಿಸಲು ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ತನಿಖೆಯನ್ನು ಸುಗಮಗೊಳಿಸುವುದು, ಸಂಗ್ರಹಿಸಿದ ಸಾಕ್ಷ್ಯಗಳನ್ನು ವಿಶ್ಲೇಷಿಸುವುದು ಮತ್ತು ಇತ್ತೀಚಿನ ವಿಚಾರಣೆಗಳಿಂದ ಹೊರಹೊಮ್ಮಿದ ಹೊಸ ಸುಳಿವುಗಳನ್ನು ಗುರುತಿಸುವ ಕುರಿತು ಸಭೆಯಲ್ಲಿ ಚರ್ಚೆಗಳು ನಡೆದವು.

ಆಡಳಿತಾತ್ಮಕ ಮತ್ತು ಸಾಕ್ಷ್ಯಗಳ ವಿಶ್ಲೇಷಣೆ

ಮೊಹಾಂತಿ ಅವರು ತನಿಖೆ ಮತ್ತು ಕಾರ್ಯಾಚರಣೆಯ ಕೆಲಸದ ಮುಂದುವರಿಕೆಗೆ ಅಗತ್ಯವಿರುವ ಬಿಲ್‌ಗಳು ಮತ್ತು ಅಧಿಕೃತ ದಾಖಲೆಗಳಿಗೆ ಸಹಿ ಹಾಕುವಿಕೆ ಸೇರಿದಂತೆ ಕೆಲವು ಬಾಕಿ ಉಳಿದಿದ್ದ ಆಡಳಿತಾತ್ಮಕ ಅನುಮೋದನೆಗಳನ್ನು ಸಹ ಇತ್ಯರ್ಥಪಡಿಸಿದರು ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ, ಎಸ್ಐಟಿ ತಂಡವು ಪ್ರಕರಣಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಸಂಬಂಧ ಹೊಂದಿರುವ ಹಲವಾರು ವ್ಯಕ್ತಿಗಳನ್ನು ಪ್ರಶ್ನಿಸುವುದನ್ನು ಮುಂದುವರಿಸಿದೆ. ಇವರಲ್ಲಿ ಆಂಬ್ಯುಲೆನ್ಸ್ ಚಾಲಕರು ಮತ್ತು ದೂರುದಾರ/ಸಾಕ್ಷಿಗೆ ಆರ್ಥಿಕವಾಗಿ ಬೆಂಬಲ ನೀಡಿದ್ದಾರೆ ಎಂದು ಶಂಕಿಸಲಾದ ವ್ಯಕ್ತಿಗಳು ಸೇರಿದ್ದಾರೆ.

ಪ್ರಕರಣದ ಹಿಂದಿನ ಸಂಪರ್ಕಜಾಲವನ್ನು ಸ್ಪಷ್ಟಪಡಿಸಲು ಮತ್ತು ಅವರ ಭಾಗವಹಿಸುವಿಕೆಯ ಸಂಪೂರ್ಣ ಸರಣಿಯನ್ನು ಸ್ಥಾಪಿಸಲು, ತನಿಖಾ ತಂಡವು ಪ್ರತಿ ಆರ್ಥಿಕ ಮತ್ತು ಲಾಜಿಸ್ಟಿಕ್ ಸಂಪರ್ಕವನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದೆ ಎಂದು ಹೇಳಲಾಗಿದೆ.

‘ಧರ್ಮಸ್ಥಳ ಪ್ರಕರಣದ ಎಸ್ಐಟಿ ಮುಖ್ಯಸ್ಥರ ಬದಲಾವಣೆ ಬಗ್ಗೆ ಸರ್ಕಾರ ನಿರ್ಧರಿಸಲಿದೆ’ ಎಂದು ಪರಮೇಶ್ವರ ಹೇಳಿದ್ದಾರೆ.

ದಕ್ಷಿಣ ಕನ್ನಡದಲ್ಲಿ ದನಕ್ಕೆ ಸಿಗುವ ಮರ್ಯಾದೆ ಹಿಂದೂ ಹೆಣ್ಣು ಮಗಳಿಗೆ ಸಿಗುವುದಿಲ್ಲ: ಪ್ರತಿಭಾ ಕುಳಾಯಿ ಆಕ್ರೋಶ
ಮಂಗಳೂರು: ಕೃಷ್ಣ ರಾವ್ ಪ್ರಕರಣದಲ್ಲಿ ಜಿಲ್ಲೆಯ ಯಾವುದೇ ಹಿಂದೂ ಸಂಘಟನೆಗಳು ಮಾತನಾಡದಿರುವುದಕ್ಕೆ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದಲ್ಲಿ ಹಿಂದೂ ಹೆಣ್ಣು ಮಗಳಿಗೆ ದನಕ್ಕೆ ಇರುವ ಮರ್ಯಾದೆಯೂ ಇಲ್ಲ ಎಂದು ಅವರು ಕಟುವಾಗಿ ಟೀಕಿಸಿದರು. ಒಂದು ವೇಳೆ ಇದು ಹಿಂದೂ-ಮುಸ್ಲಿಂ ಸಮಸ್ಯೆಯಾಗಿದ್ದರೆ, ಪರಿಸ್ಥಿತಿಯ ಚಿತ್ರಣವೇ ಬದಲಾಗುತ್ತಿತ್ತು ಮತ್ತು ಎಷ್ಟೋ ಜನರ ಪ್ರಾಣ ಹೋಗುತ್ತಿತ್ತು. ಆದರೆ, ಸಂತ್ರಸ್ತೆಯು ಹಿಂದುಳಿದ ಸಮುದಾಯಕ್ಕೆ ಸೇರಿದವಳಾದ್ದರಿಂದ ಮತ್ತು ಅಲ್ಲಿ ಒಗ್ಗಟ್ಟಿಲ್ಲದ ಕಾರಣ, ಜಿಲ್ಲೆಯ ನೀಚ ರಾಜಕಾರಣಿಗಳು ಇವತ್ತು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ ಎಂದು ಅವರು ದೂರಿದರು.

ಮದುವೆಯಾಗುವ ಭರವಸೆ ನೀಡಿ ಸಂತ್ರಸ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು, ಮಗುವನ್ನು ನೀಡಿದ ನಂತರ ಇದೀಗ ಆರೋಪಿ ಕೃಷ್ಣ ರಾವ್ ಮದುವೆಗೆ ಒಪ್ಪುತ್ತಿಲ್ಲ. ಆರೋಪಿ ಬೇಕಾದ ಕಡೆ ಮಕ್ಕಳನ್ನು ಮಾಡುತ್ತಿದ್ದಾನೆ. ಆತನ ಅಪ್ಪ ಆಶ್ರಮ ಓಪನ್ ಮಾಡುವುದು ಒಳ್ಳೆಯದು ಎಂದು ಪ್ರತಿಭಾ ಕುಳಾಯಿ ವ್ಯಂಗ್ಯವಾಡಿದರು. ನಮ್ಮ ಜಿಲ್ಲೆಯಲ್ಲಿ ಹಿಂದುತ್ವ ಬಿಟ್ಟರೆ ಬೇರೆ ಯಾವುದೇ ಮುಖ್ಯ ವಿಷಯ (ಸಬ್ಜೆಕ್ಟ್) ಇಲ್ಲ. ಆದರೂ, ಹಿಂದುಳಿದ ಸಮುದಾಯದ ಯುವತಿಗೆ ಅನ್ಯಾಯವಾದಾಗ ಯಾರು ಮುಂದೆ ಬರುತ್ತಿಲ್ಲ. ಇವತ್ತು ಈಕೆಗೆ ಈ ಸಮಸ್ಯೆ ಬಂದಿದೆ, ನಾಳೆ ಇನ್ನೊಬ್ಬ ಯುವತಿಗೆ ಇದೇ ಪರಿಸ್ಥಿತಿ ಎದುರಾಗುತ್ತದೆ ಎಂದು ಅವರು ಎಚ್ಚರಿಸಿದರು.

ಬೆಂಗಳೂರಿನಿಂದ ನಂಜುಡಿಯವರಂತಹವರು ಬಂದು ಈ ಪ್ರಕರಣದಲ್ಲಿ ಹೋರಾಟ ಮಾಡುತ್ತಿದ್ದಾರೆ. ‘ಯಾಕೆ ನಮ್ಮ ಜಿಲ್ಲೆಯಲ್ಲಿ ಯಾರು ಗಂಡಸರು ಇಲ್ಲವಾ, ಹಿಂದೂ ಹೆಣ್ಣುಮಗಳು ಅಂದರೆ ಅಷ್ಟು ಕೀಳಾ?’ ಎಂದು ಪ್ರತಿಭಾ ಕುಳಾಯಿ ಪ್ರಶ್ನಿಸಿದರು. ಡಿಎನ್‌ಎ ಪರೀಕ್ಷೆ (DNA Test) ಆಗಿ ಇಷ್ಟು ದಿನ ಕಳೆದರೂ ಆರೋಪಿಯನ್ನು ಮದುವೆಗೆ ಒಪ್ಪಿಸಲು ಇವರಿಗೆ ಸಾಧ್ಯವಾಗಿಲ್ಲ. ಅವರ ಸಮಾಜದಲ್ಲಿ ಯಾರೂ ಗಂಡಸರು ಇಲ್ಲವಾ ಎಂದು ಅವರು ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಸಂತ್ರಸ್ತೆಯ ತಾಯಿ ನಮಿತಾ ಮತ್ತು ಸಮುದಾಯದ ಕಾರ್ಯಕರ್ತೆ ಅರ್ಚನಾ ಅವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.