ದಾವಣಗೆರೆ – Peepal Media

‘ಪೂರ್ವಾಗ್ರಹ ಪೀಡಿತರ ಕುರಿತು ಆರ್‌ಎಸ್‌ಎಸ್ ತಲೆಕೆಡಿಸಿಕೊಳ್ಳುವುದಿಲ್ಲ’ – ಸಿ.ಟಿ.ರವಿ
ದಾವಣಗೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ರಾಷ್ಟ್ರೀಯ ಭಾವನೆಯನ್ನು ಬಲಪಡಿಸುವ ಕೆಲಸ ಮಾಡುತ್ತಿದೆ. ಕೆಲವರಲ್ಲಿ ಈ ಕುರಿತು ತಪ್ಪು ಅಭಿಪ್ರಾಯಗಳಿದ್ದು, ಅದನ್ನು ಮನವರಿಕೆ ಮಾಡುವ ಪ್ರಯತ್ನವನ್ನು ಸಂಘ ಮಾಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.

ಗುರುವಾರ (ಅ.23) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರ್‌ಎಸ್‌ಎಸ್ ಬಗ್ಗೆ ಪೂರ್ವಾಗ್ರಹ ಪೀಡಿತರ ಮನಸ್ಥಿತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ಹಾಗಾಗಿ, ಅಂತಹವರ ಬಗ್ಗೆ ಸಂಘವು ತಲೆಕೆಡಿಸಿಕೊಳ್ಳದೆ ತನ್ನ ಕೆಲಸವನ್ನು ಮುಂದುವರಿಸುತ್ತದೆ” ಎಂದರು.

ಕಾಂಗ್ರೆಸ್ ಕುರಿತು ಟೀಕೆ:

“ಕಾಂಗ್ರೆಸ್‌ನವರು ಪ್ರಜಾಪ್ರಭುತ್ವವನ್ನೇ ಜೈಲಿಗೆ ಹಾಕಿದವರು. ತುರ್ತು ಪರಿಸ್ಥಿತಿ ಹೇರಿ ಸಂವಿಧಾನವನ್ನು ಐಸಿಯುನಲ್ಲಿ ಇಟ್ಟವರು. ಆದ್ದರಿಂದ ಕಾಂಗ್ರೆಸ್‌ನ ಹಳೆಯ ಚಾಳಿ ಆಗಾಗ ಮರುಕಳಿಸುತ್ತಿದೆ. ಶಾಶ್ವತವಾಗಿ ಆರ್‌ಎಸ್‌ಎಸ್‌ ಅನ್ನು ನಿಷೇಧಿಸಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ರಾಜಕೀಯ ಉತ್ತರಾಧಿಕಾರಿ ಕುರಿತು:

ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ನಮ್ಮ ಮಾಲೀಕರು. ಉತ್ತರಾಧಿಕಾರಿಗಳು ಯಾರಾಗಬೇಕು ಎಂಬುದನ್ನು ಜನರೇ ನಿರ್ಧರಿಸಬೇಕು. ಜನರು ಆಶೀರ್ವದಿಸಿದವರಿಗೆ ಮಾತ್ರ ವಾರಸುದಾರಿಕೆ ಸಿಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ನಮ್ಮ ತಂದೆಯ ಆಸ್ತಿಯನ್ನು ಪಾಲು ಮಾಡಿದಾಗ ವಾರಸುದಾರಿಕೆ ಬರುತ್ತದೆ. ಆದರೆ, ರಾಜಕೀಯದಲ್ಲಿ ಉತ್ತರಾಧಿಕಾರಿಯನ್ನು ಹೇಗೆ ನೇಮಕ ಮಾಡುತ್ತೀರಿ? ಸಿದ್ದರಾಮಯ್ಯನವರ ಆಸ್ತಿಗೆ ಯತೀಂದ್ರ ಸಿದ್ದರಾಮಯ್ಯ ಉತ್ತರಾಧಿಕಾರಿ ಆಗಬಹುದು. ಆದರೆ ರಾಜಕೀಯ ವಾರಸುದಾರಿಕೆಯನ್ನು ಪ್ರಜಾಪ್ರಭುತ್ವದಲ್ಲಿ ಪ್ರಜೆಗಳು ನೀಡಬೇಕು” ಎಂದು ಸ್ಪಷ್ಟಪಡಿಸಿದರು.

ಯತ್ನಾಳ್ ಮರುಸೇರ್ಪಡೆ ಬಗ್ಗೆ:

ಸಂಸದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, “ಕೆಲವು ವಿಚಾರಗಳನ್ನು ಕಾಲವೇ ನಿರ್ಣಯ ಮಾಡುತ್ತದೆ. ಕಾಲ ಬರುವವರೆಗೂ ಕಾಯಬೇಕಿದೆ. ಇದು ಯಾವುದನ್ನೂ ಹೇಳುವ ಕಾಲವಲ್ಲ” ಎಂದು ತಿಳಿಸಿ ಮಾತು ಮುಗಿಸಿದರು.

ಜಾತಿ ಗಣತಿ ಸಮೀಕ್ಷೆಯಿಂದ ಗೈರುಹಾಜರಾದ ಶಿಕ್ಷಕರಿಗೆ ಶಾಕ್: ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದ ಸರ್ಕಾರ
ದಾವಣಗೆರೆ: ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯದಲ್ಲಿ ಭಾಗವಹಿಸಲು ವಿಫಲರಾದ ಸಿಬ್ಬಂದಿ ವಿರುದ್ಧ ಕರ್ನಾಟಕ ಸರ್ಕಾರವು ಕಠಿಣ ಕ್ರಮ ಕೈಗೊಂಡಿದೆ. ಇಬ್ಬರು ಶಿಕ್ಷಕರು ಮತ್ತು ಒಬ್ಬ ಹಾಸ್ಟೆಲ್ ವಾರ್ಡನ್‌ ಸೇರಿದಂತೆ ಮೂವರು ನೌಕರರನ್ನು ಅಮಾನತುಗೊಳಿಸಲಾಗಿದೆ.

ಈ ಅಮಾನತು ಆದೇಶವನ್ನು ದಾವಣಗೆರೆ ಜಿಲ್ಲಾಧಿಕಾರಿ ಮತ್ತು ಶಿಸ್ತು ಪ್ರಾಧಿಕಾರಿಯಾದ ಜಿ.ಎಂ. ಗಂಗಾಧರಸ್ವಾಮಿ (ಐಎಎಸ್) ಅವರು ಹೊರಡಿಸಿದ್ದಾರೆ.

ದಾವಣಗೆರೆ ಉತ್ತರ ವಲಯದ ಜಮಾಪುರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕರಾದ ಮಂಜುನಾಥ ಡಿ.ಕೆ., ಮತ್ತು ಇತರ ಇಬ್ಬರನ್ನು, ಇಲಾಖಾ ವಿಚಾರಣೆ ಬಾಕಿ ಇರುವವರೆಗೆ ಕರ್ನಾಟಕ ನಾಗರಿಕ ಸೇವೆಗಳ (ವರ್ಗೀಕರಣ ಮತ್ತು ಮೇಲ್ಮನವಿ) ನಿಯಮಗಳು, 1957 ರ ನಿಯಮ 10(1)(ಡಿ) ಅಡಿಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಾತಿ ಗಣತಿ ಸಮೀಕ್ಷೆಯಲ್ಲಿ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಸರ್ಕಾರ ಒತ್ತಿಹೇಳಿದ್ದು, ಗೈರುಹಾಜರಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಉಚಿತ ಅಕ್ಕಿ ತಿಂದು, ಬಸ್‌ನಲ್ಲಿ ಓಡಾಡಿದರೆ ಸಾಕಾ, ಕೆಲಸ ಬೇಡ್ವ?: ಯುವಕರ ಉದ್ಯೋಗದ ಕುರಿತು ಯತ್ನಾಳ್ ಪ್ರಶ್ನೆ
ದಾವಣಗೆರೆ: ರಾಜ್ಯದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಮತ್ತು ಯಾವುದೇ ನೇಮಕಾತಿಗಳು ನಡೆಯುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ರಾಜ್ಯದಲ್ಲಿ ನೇಪಾಳದಲ್ಲಿ ಆದ ಸ್ಥಿತಿ ಬರಲಿದೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು:

ನೇಮಕಾತಿಗಳ ವಿಳಂಬ: ಪೊಲೀಸ್ ನೇಮಕಾತಿಯಲ್ಲಿ ವಿಳಂಬವಾಗುತ್ತಿದೆ. ಇಂದು ಧಾರವಾಡದಲ್ಲಿ ಪೊಲೀಸ್ ನೇಮಕಾತಿಗಾಗಿ 16 ಸಾವಿರಕ್ಕೂ ಹೆಚ್ಚು ಯುವಕರು ಸೇರಿದ್ದಾರೆ.

ವಯಸ್ಸಿನ ಮಿತಿ ಸಡಿಲಿಕೆ ಆಗ್ರಹ: “ನಾನು ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದೇನೆ, ಸದನದಲ್ಲಿಯೂ ಕೇಳಿಕೊಂಡಿದ್ದೇನೆ. ಪೊಲೀಸ್ ನೇಮಕಾತಿಯಲ್ಲಿ ವಯಸ್ಸಿನ ಮಿತಿಯನ್ನು ಸ್ವಲ್ಪ ಸಡಿಲಗೊಳಿಸಿ. ಈಗಾಗಲೇ ನೇಮಕಾತಿಗಾಗಿ ಕಾದು ಕಾದು ಹಲವರ ವಯಸ್ಸಿನ ಮಿತಿ ಕಳೆದಿದೆ. ಅವರು ಏನು ಮಾಡಬೇಕು? ಸರ್ಕಾರದ ತಪ್ಪಿಗೆ ಅಭ್ಯರ್ಥಿಗಳಿಗೆ ಶಿಕ್ಷೆಯಾಗುತ್ತಿದೆ” ಎಂದು ಯತ್ನಾಳ್ ಹೇಳಿದರು.

ಉದ್ಯೋಗದ ಕೊರತೆ: ಯಾವುದೇ ಒಂದು ಇಲಾಖೆಯ ನೇಮಕಾತಿಯನ್ನು ಸರ್ಕಾರ ಮಾಡುತ್ತಿಲ್ಲ. ಉದ್ಯೋಗಕ್ಕಾಗಿ ಅಲೆದು ಅಲೆದು ಯುವಕರು ರೋಸಿಹೋಗುತ್ತಿದ್ದಾರೆ ಎಂದು ಅವರು ಟೀಕಿಸಿದರು.

‘ಉಚಿತ ಸೌಲಭ್ಯಗಳಿಂದ ತೃಪ್ತರಾಗಬೇಕೇ?’:

ಮುಂದುವರಿದು ಮಾತನಾಡಿದ ಯತ್ನಾಳ್, ಸರ್ಕಾರವು ನೀಡುತ್ತಿರುವ ಉಚಿತ ಸೌಲಭ್ಯಗಳ ಕುರಿತು ಪ್ರಶ್ನಿಸಿದರು:

“ಉಚಿತ ಅಕ್ಕಿ ಅನ್ನ ತಿಂದು, ಬಸ್‌ನಲ್ಲಿ ಓಡಾಡಿಕೊಂಡು ಇರಬೇಕಾ? ಕೆಲಸಕ್ಕಾಗಿ ಹೀಗೆ ಅಡ್ಡಾಡುತ್ತಾ ಇದ್ದರೆ ಸಾಕೇ? ಈ ರೀತಿ ಇದ್ದರೆ ರಾಜ್ಯದಲ್ಲಿ ನೇಪಾಳದಲ್ಲಿ ಆದ ಸ್ಥಿತಿ ಬರುತ್ತದೆ. ಇದೇ ರೀತಿ ಆಗುವ ಮೊದಲು ಸರ್ಕಾರ ಎಚ್ಚರ ವಹಿಸಲಿ” ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಮಹಿಳಾ ಎಸ್‌ಪಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಪ್ರಕರಣ ದಾಖಲು
ದಾವಣಗೆರೆ: ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ (SP) ಉಮಾ ಪ್ರಶಾಂತ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ, ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾವಣಗೆರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಶಾಸಕರು, ಶಮನೂರು ಕುಟುಂಬದ (ಪ್ರಮುಖ ಕಾಂಗ್ರೆಸ್ ಕುಟುಂಬ) ಚುನಾಯಿತ ಪ್ರತಿನಿಧಿಗಳಿಗಾಗಿ ಎಸ್‌ಪಿ “ನಾಯಿಯಂತೆ ಕಾಯುತ್ತಾರೆ” ಆದರೆ ವಿರೋಧ ಪಕ್ಷದ ಶಾಸಕರನ್ನು ಗೌರವಿಸುವುದಿಲ್ಲ ಎಂದು ಆರೋಪಿಸಿದ್ದರು.

“ಶಾಮನೂರು ಕುಟುಂಬದ ಚುನಾಯಿತ ಪ್ರತಿನಿಧಿಗಳು ಬಂದಾಗ, ಅಧಿಕಾರಿ ನಾಯಿಯಂತೆ ವರ್ತಿಸುತ್ತಾರೆ. ಅವರು ಕಾರ್ಯಕ್ರಮಗಳಿಗೆ ತಡವಾಗಿ ಬಂದರೂ, ಅಧಿಕಾರಿ ‘ನಾಯಿಯಂತೆ’ ಕಾಯುತ್ತಾರೆ.”

ಎಸ್‌ಪಿ ನೀಡಿದ ದೂರಿನ ಆಧಾರದ ಮೇಲೆ, ಕೆಟಿಜೆ ನಗರ ಪೊಲೀಸರು ಶಾಸಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಯ ಸೆಕ್ಷನ್ 79 ಮತ್ತು 132 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಚಿವ ರಾಜಣ್ಣ ವಜಾ | ಇದು ದಲಿತರಿಗೆ ಮಾಡಿದ ಅವಮಾನ: ನಿಖಿಲ್‌ ಕುಮಾರಸ್ವಾಮಿ
ದಾವಣಗೆರೆ: ಸಹಕಾರ ಸಚಿವರಾಗಿದ್ದ ಕೆ.ಎನ್‌. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್‌ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಅಗೌರವ ತೋರಿದೆ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ಹೇಳುವ ಕಾಂಗ್ರೆಸ್, ಅದೇ ಸಮುದಾಯದ ನಾಯಕರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು. ರಾಜಣ್ಣ ಅವರಂತಹ ಹಿರಿಯ ನಾಯಕರಿಂದ ಗೌರವಯುತವಾಗಿ ರಾಜೀನಾಮೆ ಪಡೆಯುವ ಅವಕಾಶ ಕಾಂಗ್ರೆಸ್‌ಗೆ ಇತ್ತು, ಆದರೆ ಏಕಾಏಕಿ ಅವರನ್ನು ಸಂಪುಟದಿಂದ ಕಿತ್ತುಹಾಕಿ ಮುಜುಗರಕ್ಕೀಡು ಮಾಡಿದೆ ಎಂದು ಅವರು ಟೀಕಿಸಿದರು.

‘ಆಂತರಿಕ ಪ್ರಜಾಪ್ರಭುತ್ವವಿಲ್ಲ’

“ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಸತ್ಯವನ್ನು ನುಡಿದ ರಾಜಣ್ಣ ಅವರನ್ನು ಬಲಿಪಶು ಮಾಡಲಾಗಿದೆ. ಮತ ಕಳ್ಳತನದ ಬಗ್ಗೆ ರಾಜಣ್ಣ ನೀಡಿದ ಹೇಳಿಕೆಯಲ್ಲಿ ತಪ್ಪೇನಿದೆ?” ಎಂದು ನಿಖಿಲ್ ಪ್ರಶ್ನಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮೈತ್ರಿ ಮುಂದುವರಿಕೆ

ಇದೇ ವೇಳೆ, ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ನಿಖಿಲ್‌, “ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಚುನಾವಣೆಗಳಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು. ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸುವ ಪ್ರಸ್ತಾವನೆಗೆ ಬಿಜೆಪಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಸಿದ್ಧಪಡಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದರು.

“ವಿಧಾನಸಭಾ ಚುನಾವಣೆಗೂ ಮುನ್ನ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕರ್ತರಿಗೆ ಅಧಿಕಾರ ಸಿಕ್ಕರೆ ವಿಧಾನಸಭಾ ಚುನಾವಣೆ ಸುಲಭವಾಗಲಿದೆ. ಪಕ್ಷ ಸಂಘಟನೆಗೆ ಒತ್ತು ನೀಡಲು ಮತ್ತು ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಲು ರಾಜ್ಯದಲ್ಲಿ ಎರಡು ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಗಿದೆ” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

56 ಇಂಚಿನ ಎದೆ useless ಆಗಿದೆ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ: ಸಿಎಂ ಸಿದ್ದರಾಮಯ್ಯ
ದಾವಣಗೆರೆ ಜೂ 16: ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ 1350 ಕೋಟಿ ವಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ದಾವಣಗೆರೆ ಜಿಲ್ಲೆಯ 1350 ಕೋಟಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

56 ಇಂಚಿನ ಎದೆಯ ಪ್ರಧಾನಿ ಮೋದಿಯವರು useless ಆಗಿದ್ದಾರೆ.‌ ಎದೆ ಎಷ್ಟು ಇಂಚು ಎನ್ನುವುದು ಮುಖ್ಯವಲ್ಲ. ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇಲ್ಲವಾಗಿದೆ ಎಂದು ಟೀಕಿದಿದರು.

ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ 1350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು.

ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್ ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1892 ಮನೆಗಳನ್ನು ವಿತರಿಸಿದ್ದೇವೆ ಎಂದರು.

ಸಮಾಜದ ಎಲ್ಲಾ ಜಾತಿ, ವರ್ಗ ಮತ್ತು ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡುವುದು ನಮ್ಮ ಸರ್ಕಾರದ ಜವಾಬ್ದಾರಿ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ನಾವು ಸಾಮಾಜಿಕ ನ್ಯಾಯದ ಕಾರ್ಯಗಳನ್ನು ಜಾರಿಗೊಳಿಸುತ್ತಾ ಸಮ ಸಮಾಜದ ಆಶಯವನ್ನು ಈಡೇರಿಸುತ್ತಿದ್ದೇವೆ ಎಂದರು.

ಮೋದಿಯವರ ಅಚ್ಚೇ ದಿನ್ ಆಯೆಗಾ ಬರೀ ಡೈಲಾಗ್. ಯಾರ ಕಣ್ಣಿಗಾದರೂ ಅಚ್ಚೆ ದಿನ ಕಂಡಿದೆಯಾ ? ಮೋದಿ ಪ್ರಧಾನಿ ಆಗುವ ಮೊದಲು ಪೆಟ್ರೋಲ್, ಡೀಸೆಲ್, ಚಿನ್ನ, ರಸಗೊಬ್ಬರ ಬೆಲೆ ಎಷ್ಟಿತ್ತು. ಈಗ ಎಷ್ಟಿದೆ ಮೋದಿಯವರೇ ಎಂದು ಪ್ರಶ್ನಿಸಿದ ಸಿಎಂ, ಬೆಲೆ ಏರಿಕೆಯ ಕಾರಣಕರ್ತ ಪ್ರಧಾನಿ ಮೋದಿಯವರೇ ಆಗಿದ್ದಾರೆ ಎಂದರು.

ಹೀಗಾಗಿ ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವ್, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ಕಾಂಗ್ರೆಸ್ ಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎಂದು ಭರವಸೆ ವ್ಯಕ್ತಪಡಿಸಿದರು.

ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ಅನ್ಯಾಯ ಆಯಿತು. 11500 ಕೋಟಿ ರೂಪಾಯಿ 15 ನೇ ಆಯೋಗದಿಂದ ಅನ್ಯಾಯವಾಯಿತು. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5000 ಕೋಟಿಯಲ್ಲಿ ಒಂದು ರೂಪಾಯಿಯನ್ನೂ ನೀಡಲಿಲ್ಲ ಎಂದು ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡಿದ ದ್ರೋಹ ಮತ್ತು ಅನ್ಯಾಯಗಳನ್ನು ಪಟ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಬಾಕ್ಸ್

ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ: ಸಿಎಂ

ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಸವಾಲು ಹಾಕಿದರು.

ಬಾಕ್ಸ್ 2

ಅಶೋಕ್- ವಿಜಯೇಂದ್ರ ಸಾರ್ವಜನಿಕ‌ ಚರ್ಚಗೆ ಬನ್ನಿ

ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

ದಾವಣಗೆರೆಯಲ್ಲಿ ಪತ್ತೆಯಾದ ವಿಕ್ರಮಾದಿತ್ಯ 1 ರ ಕಾಲದ ಹಳೆಯ ಶಾಸನ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಮಾದಾಪುರ ಸರೋವರದಲ್ಲಿ ಬಾದಾಮಿ ಚಾಲುಕ್ಯ ರಾಜವಂಶದ ವಿಕ್ರಮಾದಿತ್ಯ I ರ ಕಾಲದ ಅಪರೂಪದ ಶಾಸನವೊಂದು ಪತ್ತೆಯಾಗಿದೆ ಎಂದು ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

“ಈ ಶಾಸನವು ಸುಮಾರು ಐದು ಅಡಿ ಉದ್ದವಿದ್ದು, ಹಳೆಯ ಕನ್ನಡ ಲಿಪಿಯಲ್ಲಿ ಕೆತ್ತಲಾದ 17 ಸಾಲುಗಳನ್ನು ಒಳಗೊಂಡಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಈ ಶಾಸನವು ಕ್ರಿ.ಶ. 7 ನೇ ಶತಮಾನಕ್ಕೆ ಸೇರಿದ್ದು, ನಿರ್ದಿಷ್ಟವಾಗಿ ಕ್ರಿ.ಶ. 654 ರಿಂದ 681 ರ ನಡುವೆ ಆಳಿದ ಬಾದಾಮಿ ಚಾಲುಕ್ಯರ ಮೊದಲನೇ ವಿಕ್ರಮಾದಿತ್ಯನ ಆಳ್ವಿಕೆಯ ಕಾಲದ್ದು. ಆ ಯುಗದ ಆಡಳಿತ ಮತ್ತು ಸಾಮಾಜಿಕ ಸಂಘಟನೆಗೆ ಇದು ಒಂದು ಪ್ರಮುಖ ಪುರಾವೆಯಾಗಿದೆ” ಎಂದು ಕಮಲಾಪುರದ ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪ ನಿರ್ದೇಶಕ ಆರ್. ಶೇಜೇಶ್ವರ್ ಹೇಳಿದರು.

ಮಂಗಳವಾರ ಮಾದಾಪುರ ಕೆರೆಯ ತಳಭಾಗದಿಂದ ಕೆಲವು ಸ್ಥಳೀಯ ಗ್ರಾಮಸ್ಥರು ಜೆಸಿಬಿ ಬಳಸಿ ಅಗೆದು ಮಣ್ಣನ್ನು ತೆಗೆಯುತ್ತಿದ್ದಾಗ ಇಲಾಖೆಗೆ ಶಾಸನಗಳ ಬಗ್ಗೆ ಮಾಹಿತಿ ಸಿಕ್ಕಿತು ಎಂದು ಅವರು ಹೇಳಿದರು.

“ಬಲ್ಲವಿ ಪ್ರದೇಶವನ್ನು ಆಳುತ್ತಿದ್ದ ವಿಕ್ರಮಾದಿತ್ಯ I ರ ಅಧಿಕಾರಿ ಸಿಂಘವೆಣ್ಣನ ಗಮನಾರ್ಹ ಕೃತ್ಯವನ್ನು ಈ ಶಾಸನವು ವಿವರಿಸುತ್ತದೆ. ಕಲ್ಯಾಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಆಡಳಿತಾತ್ಮಕ ಸೂಚಕವಾಗಿ ಸಿಂಘವೆಣ್ಣ ಸ್ಥಳೀಯ ಗ್ರಾಮಸ್ಥರ ಮೇಲಿನ ಕೆಲವು ತೆರಿಗೆಗಳನ್ನು ಮನ್ನಾ ಮಾಡಿದ್ದಾರೆ ಎಂದು ಅದು ದಾಖಲಿಸುತ್ತದೆ. ಹೆಚ್ಚುವರಿಯಾಗಿ, ಸರೋವರವನ್ನು ನಿರ್ಮಿಸಲು ಕಾರಣರಾದ ರಾಜರಿಗೆ ಆರು ಎಕರೆ ಭೂಮಿಯನ್ನು ದಾನ ಮಾಡಿದ್ದನ್ನು ಇದು ಉಲ್ಲೇಖಿಸುತ್ತದೆ. ಈ ಭೂಮಿ ಐತಿಹಾಸಿಕವಾಗಿ ಬಲ್ಲವಿಯ 77 ಕುಟುಂಬಗಳ ಒಡೆತನದಲ್ಲಿತ್ತು ಎಂದು ಶಾಸನವು ಉಲ್ಲೇಖಿಸುತ್ತದೆ, ಇದು ಸಹಸ್ರಮಾನದ ಹಿಂದಿನ ಭೂ ಹಿಡುವಳಿ ಮಾದರಿಗಳು ಮತ್ತು ಸಮುದಾಯ ರಚನೆಗಳ ಮೇಲೆ ಬೆಳಕು ಚೆಲ್ಲುತ್ತದೆ, ”ಎಂದು ಅವರು ಹೇಳಿದರು.

“ಈ ಶಾಸನದ ಕುತೂಹಲಕಾರಿ ವೈಶಿಷ್ಟ್ಯವೆಂದರೆ 17 ನೇ ಶತಮಾನದ ಅಪೂರ್ಣ ಉಬ್ಬು ಶಿಲ್ಪವು ಕಲ್ಲಿನ ಚಪ್ಪಡಿಯ ಮುಂಭಾಗ ಮತ್ತು ಹಿಂಭಾಗದಲ್ಲಿ ಇದೆ. ಇದು ನಂತರದ ಶತಮಾನಗಳಲ್ಲಿ ಈ ಸ್ಥಳವು ಸಾಂಸ್ಕೃತಿಕ ಅಥವಾ ಧಾರ್ಮಿಕ ಮಹತ್ವವನ್ನು ಹೊಂದಿತ್ತು ಎಂದು ಸೂಚಿಸುತ್ತದೆ, ನಂತರದ ಕೆತ್ತನೆಗಳು ಅದರ ಐತಿಹಾಸಿಕ ನಿರೂಪಣೆಗೆ ಪದರಗಳನ್ನು ಸೇರಿಸುತ್ತವೆ ಎಂದು ಅಧಿಕಾರಿಗಳು ಹೇಳುತ್ತಾರೆ,” ಎಂದು ಶೇಜೇಶ್ವರ್ ಹೇಳಿದರು.

ದಾವಣಗೆರೆಯಲ್ಲಿ ಏ.26ರಂದು ಸಂವಿಧಾನ ಸಂರಕ್ಷಕರ ಸಮಾವೇಶ
ಬೆಂಗಳೂರು: ಎದ್ದೇಳು ಕರ್ನಾಟಕ ಸಂಘಟನೆಯಿಂದ ದಾವಣಗೆರೆಯಲ್ಲಿ ಏ026ರಂದು ಸಂವಿಧಾನ ಸಂರಕ್ಷಕರ ಸಮಾವೇಶ ನಡೆಯಲಿದೆ ಎಂದು ಸಂಘಟನೆಯ ಸಂಚಾಲಕಿ ಪ್ರಕಟಣೆಯಲ್ಲಿ ಶ್ರೀಗೌರಿ ಹೇಳಿದ್ದಾರೆ.

ಸ್ವಾತಂತ್ರ್ಯದ ಜಾಗದಲ್ಲಿ ಸರ್ವಾಧಿಕಾರ ಮೇರೆಯುತ್ತಿದೆ, ಸಮಾನತೆಯ ಜಾಗದಲ್ಲಿ ಬಲಾಢ್ಯರ ಅಭಿವೃದ್ದಿ, ಸೋದರತ್ವದ ಜಾಗದಲ್ಲಿ ಸನಾತನವಾದ, ಸಾಮಾಜಿಕ ನ್ಯಾಯದ ಜಾಗದಲ್ಲಿ ಮೇಲ್ವರ್ಗದವರಿಗೆ ಮೇಲ್ಪಂಕ್ತಿ ಹಾಕಿ ಕೊಡುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಕುಸಿಯುತ್ತಿವೆ. ಇವುಗಳೆಲ್ಲದ ಅದರ  ಜಾಗೃತಿ ಮೂಡಿಸುವುದಕ್ಕಾಗಿ ಸಮಾವೇಶ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸರ್ವರನ್ನು ಒಳಗೊಂಡ ಬಹುತ್ವದ ಭಾರತವನ್ನು ಉಳಿಸಿಕೊಳ್ಳಲು ರಾಜ್ಯದ ಪ್ರತಿ ಊರು, ಕೇರಿ, ಹಾಡಿ, ಮೊಹಲ್ಲಾಗಳಲ್ಲಿ ಎದ್ದೇಳು ಕರ್ನಾಟಕದ ವತಿಯಿಂದ “ಸಂವಿಧಾನ ಸಂರಕ್ಷಣಾ ಪಡೆ” ಕಟ್ಟುವ ಮಹಾಯಾನಕ್ಕೆ ಚಾಲನೆಯಾಗಿ ದಾವಣಗೆರೆಯಲ್ಲಿ “ಸಂವಿಧಾನ ಸಂರಕ್ಷಕರ ಮಹಾ ಸಮಾವೇಶ” ಹಮ್ಮಿಕೊಳ್ಳಲಾಗುತ್ತಿದೆ. ದುಡಿಯುವ ವರ್ಗದ ಹೋರಾಟಗಳಿಗೆ ಹೆಸರಾಗಿದ್ದ ದಾವಣಗೆರೆ ಹೊಸ ತಲೆ ಮಾರಿನ ಮಹಾಯಾನಕ್ಕೆ ವೇದಿಕೆಯಾಗುತ್ತಿದೆ. ಏಪ್ರಿಲ್ 26ರಂದು ಶನಿವಾರ ದಾವಣಗೆರೆಯ ಕೇಂದ್ರ ನಗರಿಯ ಹೈಸ್ಕೂಲ್‌ ಫೀಲ್ಡ್‌ ಬಳಿಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಂವಿಧಾನ ಈ ದೇಶದ ದುಡಿಯುವ ಜನರಾದ ರೈತ, ಕೂಲಿ, ಕಾರ್ಮಿಕ, ಸಾಮಾನ್ಯ ಜನರಿಗೆ ನೀಡಿದ್ದ ಹಕ್ಕುಗಳನ್ನೆಲ್ಲಾ ವೇಗಗತಿಯಲ್ಲಿ ರದ್ದುಗೊಳಿಸಲಾಗುತ್ತಿದೆ. ಈ ದೇಶದ ದಮನಿತ ಸಮುದಾಯಗಳಾದ ದಲಿತ, ಆದಿವಾಸಿ, ಅಲ್ಪಸಂಖ್ಯಾತ, ಅತಿಹಿಂದುಳಿದ, ಮಹಿಳಾ, ಲೈಂಗಿಕ ಅಲ್ಪಸಂಖ್ಯಾತ ಮುಂತಾದ ಜನ ವರ್ಗಗಳಿಗೆ ಸಾಮಾಜಿಕವಾಗಿ ಮುಂದೆ ಬರಲು ನೀಡಲಾಗಿದ್ದ ಅವಕಾಶಗಳ ಮಾರ್ಗಗಳನ್ನೆಲ್ಲಾ ಮುಚ್ಚಲಾಗುತ್ತಿದೆ. ಸರ್ಕಾರಿ ಶಿಕ್ಷಣ, ಸರ್ಕಾರಿ ಚಿಕಿತ್ಸೆ ಕಣ್ಮರೆಯಾಗುತ್ತಿವೆ. ಇವು ಲೂಟಿಕೋರ ದಂಧೆಗಳಾಗಿ ಪರಿವರ್ತನೆಯಾಗಿವೆ. ನಿರುದ್ಯೋಗ ವೇಗಗತಿಯಲ್ಲಿ ಹೆಚ್ಚಾಗುತ್ತಿದೆ. ಉದ್ಯೋಗ ಸಿಕ್ಕರೂ ಘನತೆಯಿಂದ ಬದುಕುವ ವೇತನವಿಲ್ಲ. ಜನಸಾಮಾನ್ಯರು ಸಾಲದ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ಮಿತಿಮೀರಿ ಬೆಳೆಯುತ್ತಿವೆ, ಜಾತಿ ಧರ್ಮದ ಹೆಸರಿನಲ್ಲಿ ನೆತ್ತರು ಹರಿದಾಡುತ್ತಿದೆ. “ನಾಡಲ್ಲವೋ ಇದು ವಿಷದ ಸಮುದ್ರ” ಎಂಬಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಶ್ರೀಗೌರಿ ಹೇಳಿದ್ದಾರೆ.

ಇದಕ್ಕೆಲ್ಲ ಪರಿಹಾರ ಕಂಡುಕೊಳ್ಳಬೇಕಿದೆ. ಸ್ವಾತಂತ್ರ್ಯದ ದೀವಿಗೆ ಈಗ ನಮ್ಮ ಕೈಯಲ್ಲಿದೆ. ಅದನ್ನು ಹಿಡಿದುಕೊಂಡು ನಾಡಿಗೆ ಬೆಳಕು ನೀಡಬೇಕಿದೆ. ಆ ನಿಟ್ಟಿನಲ್ಲಿ ದೊಡ್ಡ ಪ್ರಯತ್ನವಾಗಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು ಎಂದು ಅವರು ಕೋರಿದ್ದಾರೆ.

‘ಮನಿಹೈಸ್ಟ್’ ಮಾದರಿಯ ದರೋಡೆ; ಕರ್ನಾಟಕದ ಚಿನ್ನ, ತಮಿಳುನಾಡಿನಲ್ಲಿ ಪತ್ತೆ!
ತಮಿಳುನಾಡಿನ ಮೂಲತಃ ಮಧುರೈನ ಸುರಹೊನ್ನೆ ಎಂಬ ಊರಿನ ಬೇಕರಿ ವ್ಯಾಪಾರಿ ವಿಜಯಕುಮಾರ್ (30), ವಿಜಯ್ ಸಹೋದರ ಅಜಯ ಕುಮಾರ್ (28) ನಡೆಸಿದ ದರೋಡೆ ಪ್ರಕರಣ, ಅದಕ್ಕೆ ಸಿದ್ಧತೆಗಳು ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಅಷ್ಟೇ ಅಲ್ಲದೆ ಈ ಪ್ರಕರಣ ಭೇದಿಸಿದ ದಾವಣಗೆರೆ ಪೊಲೀಸರ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ಎಸ್ ಬಿಐ ಬ್ಯಾಂಕ್ ಕಳ್ಳತನದ ಐದು ತಿಂಗಳ ನಂತರ, ಮಾಸ್ಟರ್ ಮೈಂಡ್ ಆಗಿರುವ ತಮಿಳುನಾಡಿನ ಮಧುರೈನ ವಿಜಯ್ ಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಎಸ್‌ಬಿಐ ಶಾಖೆಯನ್ನು ಗುರಿಯಾಗಿಸಿಕೊಂಡು ಸುಮಾರು 16 ಕೋಟಿ ರೂ. ಮೌಲ್ಯದ 17.7 ಕೆಜಿ ಚಿನ್ನವನ್ನು ಲೂಟಿ ಮಾಡುವ ಮೊದಲು, ಬ್ಯಾಂಕ್ ದರೋಡೆ ಸಾಕ್ಷ್ಯಚಿತ್ರಗಳು ಮತ್ತು ಯೂಟ್ಯೂಬ್ ವೀಡಿಯೊಗಳು ಹಾಗೂ ನೆಟ್ ಫ್ಲಿಕ್ಸ್ ನ ‘ಮನಿ ಹೀಸ್ಟ್ ‘ ಎಂಬ ವೆಬ್ ಸೀರೀಸ್ ನ್ನು 15 ಬಾರಿ ವೀಕ್ಷಿಸಿದ್ದ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

ಅಪರಾಧ ಎಸಗಿದ ವಿಜಯಕುಮಾರ್ (30), ವಿಜಯ್ ಸಹೋದರ ಅಜಯ ಕುಮಾರ್ (28), ನ್ಯಾಮತಿ ಪಟ್ಟಣದ ಬೆಳಗುತ್ತಿ ಕ್ರಾಸ್ ನ ಶಾಂತಿನಗರ ಶಾಲೆಯ ಎದುರಿನ ವಾಸಿ ಅಭಿಷೇಕ (23), ಸುರಹೊನ್ನೆಯ ಶಾಂತಿನಗರ ವಾಸಿ ತೆಂಗಿನ ವ್ಯಾಪಾರಿ ಚಂದ್ರು (23), ಚಾಲಕ ಮಂಜುನಾಥ್ 32) ಹಾಗೂ ಸಿಹಿ ತಿಂಡಿ ವ್ಯಾಪಿರ ಪರಮಾನಂದ (30) ಇವರನ್ನು ಬಂಧಿಸಲಾಗಿದೆ. ಒಟ್ಟು 17 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಮುಖ ಆರೋಪಿ ವಿಜಯ್ ಈ ಹಿಂದೆ ತಮ್ಮ ಬೇಕರಿ ವ್ಯವಹಾರಕ್ಕಾಗಿ ಎಸ್ ಬಿಐ ನ್ಯಾಮತಿ ಶಾಖೆಯಲ್ಲಿ 15 ಲಕ್ಷ ರೂ. ಸಾಲಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ಕಡಿಮೆ ಸಿಬಿಲ್ ಸ್ಕೋರ್ ಕಾರಣ ಆತನ ಅರ್ಜಿಯನ್ನು ತಿರಸ್ಕರಿಸಲಾಯಿತು. ಹತಾಶೆಗೊಂಡ ವಿಜಯ್ ಸಾಲ ತಿರಸ್ಕಾರದ ಏಕೈಕ ಉದ್ದೇಶಕ್ಕೆ ಈ ದರೋಡೆಗೆ ಇಳಿದ” ಎಂದು ದಾವಣಗೆರೆ ಐಜಿ ರವಿಕಾಂತೇ ಗೌಡ ಹೇಳಿದರು.

ಕದ್ದು ತಂದಂತಹ ಚಿನ್ನವನ್ನು ವಿಜಯಕುಮಾರನು ತನ್ನ ಮನೆಯಲ್ಲಿದ್ದಂತಹ ಸಿಲ್ವರ್ ಕಲರ್ ಡಸ್ಟರ್ ಕಾರಿನ ಡಿಕ್ಕಿಯಲ್ಲಿ ಬಚ್ಚಿಟ್ಟಿದ್ದು ಅದನ್ನು ಯಾವ ರೀತಿಯಲ್ಲಿ ವಿಲೇವಾರಿ ಮಾಡಬೇಕೆಂದು ಪ್ರತ್ತೇಕವಾದ ಪ್ಲಾನ್ ಮಾಡಿದ್ದ. ಕೃತ್ಯಕ್ಕೆ ಬಳಸಿದ ವಸ್ತುಗಳಾದ ಮಂಕಿ ಕ್ಯಾಪ್, ಹ್ಯಾಂಡ್ ಗ್ಲೌಸ್‌ಗಳನ್ನು ನಾಶಪಡಿಸಿದ್ದು, ಇನ್ನುಳಿದ ಹೈಡ್ರಾಲಿಕ್ ಕಟ್ಟರ್, ಗ್ಯಾಸ್ ಸಿಲೆಂಡರ್ ಇತರ ವಸ್ತುಗಳನ್ನು ಸವಳಂಗ ಕೆರೆಗೆ ಎಸೆದಿದ್ದ.

ಎಸ್.ಬಿ.ಐ. ಬ್ಯಾಂಕ್ ನಿಂದ ತಂದಿದ್ದಂತಹ ಹಾರ್ಡ್ ಡಿಸ್ಕ್, ಡಿವಿಆರ್‌ನ್ನು ಮೊದಲು ಕಲ್ಲಿನಿಂದ ಜಜ್ಜಿ ಹಾಳು ಮಾಡಿ ನಂತರ ಕೆರೆಗೆ ಎಸೆದಿದ್ದ. ಕಳೆದ ವರ್ಷದ ನವೆಂಬರ್ ಮೊದಲನೆ ವಾರದಲ್ಲಿ ವಿಜಯ ತನ್ನ ಸ್ವಂತ ಊರಾದ ತಮಿಳುನಾಡಿನ ಮಧುರೈನ ಮನೆಗೆ ಒಬ್ಬನೇ ತನ್ನ ಡಸ್ಟರ್ ಕಾರಿನಲ್ಲಿ ತಲುಪಿ, ಮನೆಯು ಊರಿನ ಹೊರಗಡೆ ನಿರ್ಜನ ಪ್ರದೇಶದಲ್ಲಿದ್ದು ಸುತ್ತಲೂ ದಟ್ಟ ಅರಣ್ಯವಿದ್ದದ್ದನ್ನು ಗಮನಿಸಿದ್ದಾನೆ. ಸುಮಾರು 25ರಿಂದ 30 ಅಡಿ ಆಳವಿರುವ ಬಾವಿಯಲ್ಲಿ ಒಂದು ಸಣ್ಣ ಲಾಕರ್‌ಗೆ ಚಿನ್ನವನ್ನು ತುಂಬಿ ಅದಕ್ಕೆ ಹಗ್ಗ ಕಟ್ಟಿ ಆ ಬಾವಿಯಲ್ಲಿ ಯಾರಿಗೂ ಗೊತ್ತಾಗದ ರೀತಿಯಲ್ಲಿ ಬಚ್ಚಿಟ್ಟಿದ್ದ. ಈ ವಿಷಯ ಯಾರಿಗೂ ಹೇಳಿರಲಿಲ್ಲ.

ಆ ಚಿನ್ನದಲ್ಲಿ ಸ್ವಲ್ಪ ಭಾಗ ತೆಗೆದುಕೊಂಡು ಬ್ಯಾಂಕ್‌ಗಳಲ್ಲಿ ಮತ್ತು ಚಿನ್ನದ ಅಂಗಡಿಗಳಲ್ಲಿ ತನ್ನ ಹಾಗೂ ಸಂಬಂಧಿಕರ ಹೆಸರಿನಲ್ಲಿ ಅಡವಿಟ್ಟು ಹಣ ಪಡೆದಿದ್ದ. ಆ ಹಣದಿಂದ ಸ್ವಲ್ಪ ಹಣವನ್ನು ಅಭಿ, ಚಂದ್ರು, ಮಂಜುಗೆ ತಲಾ 1 ಲಕ್ಷ ತಂದುಕೊಟ್ಟು ಊರಿನಲ್ಲಿ ಒಂದು ದೊಡ್ಡ ಮನೆ ಕಟ್ಟಿಸಿದ್ದ. ಕೆಲವು ನಿವೇಶನಗಳನ್ನು ಖರೀದಿ ಮಾಡಿದ್ದು, ತನ್ನ ಸಂಬಂಧಿಗಳಿಗೆ ಸ್ವಲ್ಪ ಚಿನ್ನವನ್ನು ಕೊಟ್ಟಿರುವುದಾಗಿ ತಿಳಿಸಿದ್ದ.

ಉಳಿದ ಚಿನ್ನವನ್ನು 2ರಿಂದ 3 ವರ್ಷಗಳ ವರೆಗೆ ತೆಗೆಯಬಾರದೆಂದು, ಪೊಲೀಸರು ಆ ಪ್ರಕರಣದ ತನಿಖೆ ಅಥವಾ ವಿಚಾರಣೆಯನ್ನು ನಿಲ್ಲಿಸಿದಾಗ ಈ ಚಿನ್ನವನ್ನು ಹೊರತೆಗೆಯೋಣ ಎಂದು ಪ್ಲ್ಯಾನ್ ರೂಪಿಸಿದ್ದ ಎಂದು ಐಜಿಪಿ ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ.

ದುಷ್ಟ ಶಕ್ತಿಗಳು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇಂಥಾ ವಿಕೃತರಿಂದ ಯುವ ಜನತೆ ದೂರ ಉಳಿಯಿರಿ: ಸಿ.ಎಂ ಕರೆ
ದಾವಣಗೆರೆ ಜ5: ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂಥಾ ವಿಕೃತರಿಂದ ಯುವ ಜನತೆ ದೂರ ಉಳಿದು ತಮ್ಮ ಬದುಕು-ಭವಿಷ್ಯ ಕಾಪಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಜಿಲ್ಲಾಡಳಿತ ಆಯೋಜಿಸಿದ್ದ ರಾಜ್ಯ ಮಟ್ಟದ ಯುವ ಜನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಯುವ ಜನತೆ ಸಮಾಜಮುಖಿಯಾಗಿ ಬೆಳೆದಾಗ ದೇಶದ ಆಸ್ತಿ ಆಗುತ್ತಾರೆ. ಇದಕ್ಕಾಗಿ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾನ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾಜದ ಪ್ರಗತಿಗೆ ಕಾರಣರಾಗಬೇಕು ಎಂದರು.

ನಾವು ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು ಎನ್ನುವ ಸಂಕಲ್ಪದೊಂದಿಗೆ ಯುವ ಜನತೆ ಸಜ್ಜಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂವಿಧಾನದ ಸಾರ ಪ್ರತಿಯೊಬ್ಬರಿಗೂ ಅರ್ಥ ಆಗಬೇಕು. ಪ್ರತೀ ಪ್ರಜೆಗೂ ಅರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರೆಯಬೇಕು. ಪ್ರತಿಯೊಬ್ಬರಿಗೂ ಅವರವರ ಧರ್ಮ ನಂಬಿಕೆಯ ಆಚರಣೆಗೆ ಅವಕಾಶ ಇರಬೇಕು ಎನ್ನುವುದೇ ಸಂವಿಧಾನದ ಸಾರ. ಈ ಸಂವಿಧಾನ ಇದ್ದುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಆದ್ದರಿಂದ ಈ ಸಂವಿಧಾನವನ್ನು ಕಾಪಾಡುವುದೇ ನಮ್ಮ ಜವಾಬ್ದಾರಿ ಎಂದರು.

ದೇಶ ನಮಗೇನು ಕೊಟ್ಟಿತು ಎನ್ನುವುದಕ್ಕಿಂತ, ದೇಶಕ್ಕೆ ನಾವೇನು ಕೊಟ್ಟೆವು ಎನ್ನುವುದೇ ನಮಗೆ ಮುಖ್ಯವಾಗಬೇಕು. ಅನೇಕ ದುಷ್ಟ ಶಕ್ತಿಗಳು ದೇಶದ ನೆಮ್ಮದಿ ಕೆಡಿಸಲು, ಪ್ರಗತಿ ಹಾಳು ಮಾಡಲು ಕೆಲವರು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥಾ ವಿಕೃತರಿಂದ ಯುವ ಜನತೆ ದೂರ ಉಳಿದು ಮನುಷತ್ಯ ಬೆಳೆಸಿಕೊಂಡು, ಸಮಾಜಮುಖಿಯಾಗಿ ಬೆಳೆಯಬೇಕು. ಇದರಿಂದ ಪ್ರಜಾಪ್ರಭುತ್ವ ಉಳಿಸಿ, ಬೆಳೆಸಲು ಸಾಧ್ಯ ಎಂದರು.

ಒಂದು ಲಕ್ಷದ 62 ಸಾವಿರ ಮಂದಿ ಯುವ ಜನತೆಯ ಖಾತೆಗೆ ಯುವನಿಧಿ ಹಣ ವರ್ಗಾವಣೆ ಮಾಡಿ, ಇವರಿಗೆ ಸ್ಕಿಲ್ ತರಬೇತಿಯನ್ನೂ ನೀಡುತ್ತಿದ್ದೇವೆ. ಇದಕ್ಕಾಗಿ 213 ಕೋಟಿ ಹಣ ಕೊಟ್ಟಿದ್ದೇವೆ. ವಿದ್ಯಾವಂತ ನಿರುದ್ಯೋಗಿ ಪದವೀಧರರ ನೆರವಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕು ಎನ್ನುವ ಸಂಕಲ್ಪದಿಂದ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.