ಧಾರವಾಡ – Peepal Media

ಹಿಂದೂ ಧರ್ಮದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರ ಮಕ್ಕಳು ವಿದೇಶಿ ವ್ಯಾಸಂಗ ಮಾಡುತ್ತಿದ್ದಾರೆ: ಸಚಿವ ಲಾಡ್ ವ್ಯಂಗ್ಯ
ಧಾರವಾಡ: ಹಿಂದೂ ಧರ್ಮದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರ ಮಕ್ಕಳು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ, ಆದರೆ ನಮ್ಮ ಮಕ್ಕಳನ್ನು ಧರ್ಮಕ್ಕಾಗಿ ಬೀದಿಗಳಲ್ಲಿ ಹೋರಾಡುವಂತೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ವ್ಯಂಗ್ಯವಾಡಿದ್ದಾರೆ.

ಆಗಸ್ಟ್ 5 ರಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ನಾಯಕರು ಹಿಂದೂಗಳ ಹೆಸರನ್ನು ಬಳಸಿಕೊಂಡು ಮತಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಅವರ ಮಕ್ಕಳೆಲ್ಲ ವಿದೇಶದಲ್ಲಿ ನೆಲೆಸಿದ್ದಾರೆ. ಆದರೆ ನಮ್ಮಲ್ಲಿ ಬೀದಿ ಬೀದಿಗಳಲ್ಲಿ ಹಿಂದೂ ಮತ್ತು ಮುಸ್ಲಿಂ ಯುವಕರಿಗೆ ಜಗಳ ಹಚ್ಚಿಸಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ ಎಂದು ದೂರಿದರು. ಕಳೆದ 10 ವರ್ಷಗಳಲ್ಲಿ ಯಾವ ಹಿಂದೂಗಳಿಗೆ ಲಾಭವಾಗಿದೆ ಎಂಬುದರ ಬಗ್ಗೆ ಬಿಜೆಪಿ ಚರ್ಚಿಸಲಿ ಎಂದು ಸವಾಲು ಹಾಕಿದ ಸಚಿವ ಲಾಡ್, ಧರ್ಮ ಒಡೆಯುತ್ತಿರುವವರು ಯಾರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಪ್ರಶ್ನಿಸಬೇಕು. ಇದಲ್ಲದೇ, ಎಷ್ಟು ಹಿಂದೂಗಳು ದೇಶ ಬಿಟ್ಟು ಹೋಗಿದ್ದಾರೆ ಎಂಬ ಬಗ್ಗೆಯೂ ಜೋಶಿ ಅವರನ್ನು ಕೇಳಬೇಕು ಎಂದರು.

ವಿದೇಶಿ ಭಾಷಣ ಮತ್ತು ಕಪ್ಪುಹಣದ ವಾಗ್ದಾಳಿ

ಬಿಜೆಪಿ ನಾಯಕರು ಕೆನಡಾ, ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ದೊಡ್ಡ ದೊಡ್ಡ ಭಾಷಣಗಳನ್ನು ಮಾಡುತ್ತಾರೆ. ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇದೆಯಾ? ಎಂದು ವಾಗ್ದಾಳಿ ನಡೆಸಿದರು. ಸ್ವಿಸ್ ಬ್ಯಾಂಕ್‌ನಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತರುತ್ತೇವೆ ಎಂದು ಹೇಳಿದ್ದರು. ಆದರೆ, ಹೊರ ದೇಶದಲ್ಲಿರುವ ಆ ಹಣ ಈಗ ಮೂರು ಪಟ್ಟಾಗಿದೆ. ಕಪ್ಪು ಹಣ ಎಲ್ಲಿಗೆ ಹೋಯ್ತು? ಅದನ್ನು ವಾಪಸ್ ಏಕೆ ತರಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಗಣತಿಯಿಂದ ಒಳ್ಳೆಯದೇ ಆಗುತ್ತದೆ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಗಣತಿ ಅಥವಾ ಸಮೀಕ್ಷೆಯಿಂದ ಒಳ್ಳೆಯದೇ ಆಗುತ್ತದೆ ಎಂದು ಸಚಿವ ಸಂತೋಷ ಲಾಡ್ ಸಮರ್ಥಿಸಿಕೊಂಡರು. ಈ ರೀತಿಯ ಸಮೀಕ್ಷೆ ಇಡೀ ಭಾರತದಲ್ಲಿ ಎಲ್ಲಿಯೂ ಆಗಿಲ್ಲ. ಸಮಾಜದಲ್ಲಿ ಬಡವರು ಯಾರು ಇದ್ದಾರೆ ಎಂಬುದನ್ನು ಕಂಡು ಹಿಡಿಯುವ ಉದ್ದೇಶವೇ ಈ ಗಣತಿಯದ್ದಾಗಿದೆ. ಶೈಕ್ಷಣಿಕ ಮಾಹಿತಿ, ರಾಜಕಾರಣಿಗಳು, ಜಮೀನು ಇತ್ಯಾದಿಗಳ ಕುರಿತಂತೆ 60 ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆಯಲಾಗುತ್ತಿದೆ. ಈಗಾಗಲೇ ಶೇ. 70 ರಷ್ಟು ಸರ್ವೇ ಮುಗಿದಿದ್ದು, ಕೇವಲ ಶೇ. 30 ರಷ್ಟು ಮಾತ್ರ ಉಳಿದಿದೆ. ಗಣತಿ ಮಾಡುತ್ತಿರುವ ಎಲ್ಲರಿಗೂ ಅವರು ಧನ್ಯವಾದ ತಿಳಿಸಿದರು.

ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ: ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ‌ ಅಧ್ಯಯನ‌ ನಡೆಸಿ ಪರಿಹಾರ ಹುಡುಕಬೇಕು: ಸಿ.ಎಂ.ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ‌ ಅಧ್ಯಯನ‌ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಆಹಾರದ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದಕ್ಕೆ ಸ್ಪಷ್ಟ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೃಷಿ ವಿವಿಗಳು ಹೆಚ್ಚೆಚ್ಚು ಅಧ್ಯಯನ‌ ನಡೆಸಿ. ಇದಕ್ಕೆ ಅಗತ್ಯವಾದ ಹಣಕಾಸಿನ‌ ನೆರವನ್ನು ಸಂಪೂರ್ಣವಾಗಿ ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು.

ಸದ್ಯ ರಾಜ್ಯ ಹಾಲಿನ‌ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರ ರಾಜ್ಯವನ್ನು ಹಿಂದಿಕ್ಕಿ ನಾವೇ ನಂಬರ್ ಆದರೂ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲಿನಾವು ಅಪಾರ ಪ್ರಗತಿ ಸಾಧಿಸಿದ್ದೇವೆ ಎಂದರು.

ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿದ್ದು ಡಯಾಬಿಟಿಕ್ ಸಮಸ್ಯೆ ಇರುವವರ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯ ಕೃಷಿಗೆ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.

ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ಕೃಷಿ ವಿವಿಗಳಿಗೆ ಕರೆ ನೀಡಿದರು.

ಮೊದಲೆಲ್ಲಾ ಕೃಷಿ ಚಟುವಟಿಕೆಗೆ ಪೂರಕವಾಗಿ ಗ್ರಾಮ ಸಹಾಯಕರು ಇದ್ದು ಅವರು ಗ್ರಾಮಗಳಲ್ಲೇ ನೆಲೆಸುತ್ತಿದ್ದರು. ಈಗ ಇವರ ಸಂಖ್ಯೆ ಕಡಿಮೆ ಆಗಿದ್ದು ಮತ್ತೆ ಇವರ ಪ್ರಮಾಣ ಹೆಚ್ಚಾಗುವ ದಿಕ್ಕಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಸಿಎಂ ಸೂಚಿಸಿದರು.

ಕೃಷಿ ಭೂಮಿಗಳು ಹೆಚ್ಚಾಗದೆ, ಕೃಷಿಯ ಪ್ರಮಾಣ ಹೆಚ್ಚಾಗದೆ ಕೇವಲ ಕೃಷಿ ವಿವಿಗಳನ್ನು ಹೆಚ್ಚಿಸಿದರೆ ಹೆಚ್ಚಿನ ಅನುಕೂಲಗಳು ಆಗುವುದಿಲ್ಲ ಎಂದರು.

ಬೆಣ್ಣೆಹಳ್ಳಕ್ಕೆ 200 ಕೋಟಿ ಕೊಟ್ಟಿದ್ದೇವೆ. ಟೆಂಡರ್ ಕರೆಯಲಾಗಿದೆ. ಸದ್ಯದಲ್ಲೇ ಕೆಲಸ ಕೂಡ ಆರಂಭವಾಗಲಿದೆ ಎಂದರು.

ಮಳೆಹಾನಿಯಿಂದ ಆಗಿರುವ ಬೆಳೆ ಹಾನಿ ಮತ್ತು ಅನಾಹುತಗಳ ಬಗ್ಗೆ ಧಾರವಾಡ ಜಿಲ್ಲಾಡಳಿತ ಶೇ 90 ರಷ್ಟು ಪ್ರಗತಿ ಪರಿಹಾರ ವರದಿ ನೀಡಿರುವುದಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರಿಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು.

ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.

ಸಂಘದ ಬೇಡಿಕೆ

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ನುಡಿದರು.

2-3 ತಿಂಗಳಲ್ಲಿ ಜಿ.ಪಂ. ಮತ್ತು ತಾ.ಪಂ. ಚುನಾವಣೆ ಅಧಿಸೂಚನೆ: ಪ್ರಿಯಾಂಕ್ ಖರ್ಗೆ
ಹುಬ್ಬಳ್ಳಿ: ರಾಜ್ಯದಲ್ಲಿ ಬಹುಕಾಲದಿಂದ ಬಾಕಿ ಉಳಿದಿರುವ ಜಿಲ್ಲಾ ಪಂಚಾಯತ್ (ಜಿ.ಪಂ.) ಮತ್ತು ತಾಲೂಕು ಪಂಚಾಯತ್ (ತಾ.ಪಂ.) ಚುನಾವಣೆಗಳ ಅಧಿಸೂಚನೆಯನ್ನು ಮುಂದಿನ ಎರಡರಿಂದ ಮೂರು ತಿಂಗಳಲ್ಲಿ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪ್ರಸ್ತುತ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ಅಧಿಸೂಚನೆಯು ಎರಡು-ಮೂರು ತಿಂಗಳಲ್ಲಿ ಹೊರಬೀಳಲಿದೆ. ನಿಗದಿತ ಸಮಯಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ಸುಪ್ರೀಂ ಕೋರ್ಟ್ ಮಾಡಿದ ಹೇಳಿಕೆಗಳ ಬಗ್ಗೆ ಕೇಳಿದಾಗ, “ಗಡಿ ಪ್ರದೇಶದ ಗ್ರಾಮಸ್ಥರು ಚೀನೀ ಸೈನಿಕರು ಪ್ರವೇಶಿಸಿದ್ದಾರೆ ಎಂದು ಹೇಳುತ್ತಿದ್ದಾರೆ” ಎಂದು ಅವರು ಪ್ರತಿಕ್ರಿಯಿಸಿದರು.

ಸರ್ಕಾರ ಜನಸಾಮಾನ್ಯರಿಗೆ ನೀಡುವ ಸಹಾಯಧನ, ಪರಿಹಾರ ಧನವನ್ನು ಸಾಲಕ್ಕೆ ವಜಾ ಮಾಡಿದರೆ ಬ್ಯಾಂಕ್‌ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್
ಧಾರವಾಡ: ರೈತರು ಸೇರಿದಂತೆ ಅನೇಕ ಕುಶಲಕರ್ಮಿಗಳು, ಉದ್ಯೋಗಿಗಳು ಬ್ಯಾಂಕ್‍ ಗಳಿಂದ ಸಾಲ ಸೌಲಭ್ಯ ಪಡೆಯುತ್ತಾರೆ. ಕೆಲವು ಸಂದರ್ಭಗಳಲ್ಲಿ ಅನಿವಾರ್ಯ ಕಾರಣಗಳಿಂದ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಸಾಧ್ಯವಾಗದೆ ಸುಸ್ಥಿದಾರ ಆಗುತ್ತಾರೆ. ಬ್ಯಾಂಕ್‍ ಗಳು ರೈತರಿಂದ ಅಥವಾ ಸುಸ್ತಿದಾರರಿಂದ ಸಾಲ ವಸೂಲಾತಿಯಲ್ಲಿ ನೈಜ ಕಾರಣ ಪರಿಗಣಿಸಿ, ಮಾನವೀಯತೆ ತೋರಬೇಕು.

ಮರುಪಾವತಿಗೆ ಕಾಲಾವಕಾಶ ನೀಡಬೇಕು. ಸಾಲ ವಸೂಲಿಗಿಂತ ಜನರ ಜೀವ ಮುಖ್ಯವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ಬ್ಯಾಂಕರ್ಸ್ ಗಳೊಂದಿಗೆ ರೈತ ಆತ್ಮಹತ್ಯೆ ಪ್ರಕರಣಗಳು ಮತ್ತು ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಭೆ ನಡೆಸಿದರು.

ಸಾಲ ವಸೂಲಾತಿಯಲ್ಲಿ ಮಾನವೀಯತೆ ಮೀರಿ ಯಾರೂ ವರ್ತಿಸಬಾರದು. ಜನರ ಜೀವ ಮುಖ್ಯ. ರೈತ ಆತ್ಮಹತ್ಯೆಗಳು ಯಾವ ಕಾರಣಕ್ಕಾಗಿ ಮತ್ತು ಯಾವ ಸಂದರ್ಭಗಳಿಂದ ಘಟಿಸುತ್ತಿವೆ ಎಂಬುವುದರ ಕುರಿತು ಅಧ್ಯಯನ ಮಾಡಲು ಕೃಷಿ ವಿಶ್ವವಿದ್ಯಾಲಯ, ಕಂದಾಯ, ಕೃಷಿ ಇಲಾಖೆ, ಬ್ಯಾಂಕ್ ಅಧಿಕಾರಿ ಹಾಗೂ ಸಾಮಾಜಿಕ ತಜ್ಞರ ಒಳಗೊಂಡ ಸಮಿತಿಯನ್ನು ರಚಿಸಲು ಕ್ರಮವಹಿಸಲಾಗುತ್ತದೆ. ಕೃಷಿ ತಜ್ಞರನ್ನು ಸಹ ಭಾಗಿ ಮಾಡಿಕೊಂಡು ವೈಜ್ಞಾನಿಕವಾಗಿ ಅಧ್ಯಯನವನ್ನು ಮಾಡಲಾಗುತ್ತದೆ. ಬ್ಯಾಂಕ್ ಅಧಿಕಾರಿಗಳು ರೈತರ ಮನೆಗಳಿಗೆ ಹೋಗಿ ಸಾಲ ಮರುಪಾವತಿಗಾಗಿ ತಿಳಿವಳಿಕೆ ನೀಡಬೇಕು. ಅವರ ಆರ್ಥಿಕ ಸ್ಥಿತಿ, ಉದ್ಯೋಗ ಬಗ್ಗೆ ತಿಳಿದು ಕಾಲಾವಕಾಶ ನೀಡಬೇಕೆಂದು ಹೇಳಿದ್ದಾರೆ.

ಸರ್ಕಾರದಿಂದ ಸಿಗುವ ಪಿಂಚಣಿ, ಪರಿಹಾರ, ಸಹಾಯಧನ ಮುಟ್ಟುವಂತಿಲ್ಲ: ರಾಷ್ಟ್ರೀಕೃತ ಬ್ಯಾಂಕ್, ಯಾವುದೇ ಬ್ಯಾಂಕ್ ಇದ್ದರೂ ಸಹ ಎನ್.ಪಿ. ಆಗಿರುವ ಅಕೌಂಟ್‍ಗಳಿಗೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಸಹಾಯಧನ, ಪಿಂಚಣಿ, ಬೆಳೆ ಪರಿಹಾರ, ವಿಮೆ ಪರಿಹಾರ, ಇತರ ಸಾಲ ಸೌಲಭ್ಯಗಳಿಂದ ಯಾವುದೇ ರೀತಿ ಹಣ ಅವರ ಉಳಿತಾಯ ಖಾತೆಗೆ ಬಂದರೂ ಯಾವುದೇ ಕಾರಣಕ್ಕೂ ಬ್ಯಾಂಕ್‍ದವರು ಅದನ್ನು ಸಾಲಕ್ಕೆ ಮರು ಹೊಂದಾಣಿಕೆ ಅಥವಾ ಸಾಲದ ಖಾತೆಗೆ ಜಮೆ ಪಡೆಯುವ ಅವಕಾಶವಿಲ್ಲ. ಮತ್ತು ಈ ರೀತಿ ಕ್ರಮ ವಹಿಸಲು ಬ್ಯಾಂಕ್‍ನವರಿಗೆ ಯಾವುದೇ ರೀತಿ ಕಾನೂನಿನಲ್ಲಿ ಅವಕಾಶವಿಲ್ಲ. ಇದರ ಬಗ್ಗೆ ಮಾನ್ಯ ಮುಖ್ಯಮಂತ್ರಿ ಅವರ ಜೊತೆ ಚರ್ಚೆಯನ್ನು ಸಹ ಮಾಡುತ್ತೇನೆ. ಕ್ರಾಪ್ ಲೋನ್ ಆಗಿರಲಿ, ಬೇರೆ ಯಾವುದೇ ರೀತಿಯ ಲೋನ್ ತೆಗೆದುಕೊಂಡರೂ ಸರ್ಕಾರದ ಸಬ್ಸಿಡಿಗೆ ಅದನ್ನು ಅಟ್ಯಾಚ್ ಮಾಡಬಾರದು ಎಂದು ಸಚಿವ ಸಂತೋಷ ಲಾಡ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ಕುಂದಗೋಳ ಶಾಸಕ ಎಂ. ಆರ್. ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿದರು.

ವೇದಿಕೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಎಂ. ಬ್ಯಾಕೋಡ್ ಹಾಗೂ ಪ್ರೊಬೇಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ ಇದ್ದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕೆ.ಸಿ.ಭದ್ರಣ್ಣವರ, ಲೀಡ್ ಬ್ಯಾಂಕ್ ಮ್ಯಾನೇಜರ್ ಬಸವರಾಜ ಗಡಾದ, ಎಲ್ಲ ತಾಲೂಕುಗಳ ತಹಶೀಲ್ದಾರರು, ಅಧಿಕಾರಿಗಳು ಭಾಗವಹಿಸಿದ್ದರು.

ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪರಿಣಾಮಕಾರಿ ಕ್ರಮ ವಹಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ: ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆಗೆ ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ತಾಲೂಕು ಟಾಸ್ಕಪೆÇರ್ಸ್ ಸಮಿತಿ ಸದಸ್ಯರು ಸಮನ್ವಯದಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತಹಶಿಲ್ದಾರ ಅಧ್ಯಕ್ಷತೆಯಲ್ಲಿ ತಾಲೂಕು ಟಾಸ್ಕಪೆÇರ್ಸ್ ಸಮಿತಿಗಳ ಸಭೆಗಳು ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜರುಗಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿರ್ದೇಶಿಸಿದರು.

ಅವರು ಇಂದು (ಜೂ.09) ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ತಾಲೂಕು ಟಾಸ್ಕಪೆÇರ್ಸ್ ಸಮಿತಿಗಳು ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆ ಹಾಗೂ ಪುನರ್ವಸತಿ ಕಾರ್ಯವನ್ನು ತೃಪ್ತಿಕರವಾಗಿ ಮಾಡದಿರುವುದು ಕಂಡು ಬಂದಿದೆ. ಬಾಲ ಕಾರ್ಮಿಕರು ಇರಬಹುದಾದ ಕೈಗಾರಿಕೆ, ಇಟ್ಟಂಗಿ ಭಟ್ಟಿ, ಹೊಟೇಲ್ ಹಾಗೂ ಇತರ ಸ್ಥಳಗಳಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಇತರ ಇಲಾಖೆಗಳ ಅನಿರೀಕ್ಷಿತ ಭೇಟಿ, ದಾಳಿಗಳ ಸಂಖ್ಯೆ ಹೆಚ್ಚಾಗಬೇಕು. ಬಾಲ ಮತ್ತು ಕಿಶೋರ ಕಾರ್ಮಿಕರನ್ನು ಕಳುಹಿಸುವ ಪಾಲಕರಿಗೆ ಮತ್ತು ದುಡಿಸಿಕೊಳ್ಳುವ ಮಾಲೀಕರಿಗೆ ತಕ್ಕ ಕಾನೂನು ಶಾಸ್ತಿ ಆಗಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ತಾಲೂಕು ಮಟ್ಟದಲ್ಲಿ ನಿಯಮಿತವಾಗಿ ಸಭೆಗಳು ಜರುಗಿಸುವುದು ಹಿರಿಯ ಕಾರ್ಮಿಕ ಅಧಿಕಾರಿಗಳ ಜವಾಬ್ದರಿ. ಸಭೆಗಳು ಆಗದೇ, ತಾಲೂಕಿನಲ್ಲಿ ಬಾಲ ಕಾರ್ಮಿಕರು ಪತ್ತೆ ಆದರೆ ಜಿಲ್ಲಾ ಮಟ್ಟದ ಕಾರ್ಮಿಕ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

ಮಕ್ಕಳು ಶಾಲೆಗಳಿಗೆ ಗೈರು ಉಳಿಯುತ್ತಿರುವುದು ಬಾಲಕಾರ್ಮಿಕರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಆಯಾ ತಾಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿಯಿಂದ ನಿರಂತರ ಶಾಲೆಗೆ ಗೈರು ಆಗಿರುವ ಮಕ್ಕಳ ಮಾಹಿತಿ ಪಡೆದುಕೊಂಡು ಗೈರು ಮಕ್ಕಳ ಮನೆಗಳಿಗೆ ಭೇಟಿ ಮಾಡಿ, ಸಮೀಕ್ಷಾ ವರದಿ ಸಲ್ಲಿಸಬೇಕು. ಮಕ್ಕಳು ಶಾಲೆಯಲ್ಲಿ ಇರುವುದು ಹೆಚ್ಚು ಸುರಕ್ಷ. ಆದ್ದರಿಂದ ಪ್ರತಿ ಮಗು ಶಾಲೆಗೆ ಬರುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯಿಂದ ಶಾಲೆಗೆ ನಿರಂತರ ಗೈರಾದ ಮಕ್ಕಳ ಮನೆಗಳಿಗೆ ಭೇಟಿ ನೀಡಿ, ಪ್ರತಿ ತಿಂಗಳು 5 ನೇ ದಿನಾಂಕದೊಳಗೆ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಬಾಲ ಕಾರ್ಮಿಕ ಮುಕ್ತ ಜಿಲ್ಲೆ ಮಾಡಲು ಕ್ರಿಯಾಯೋಜನೆ ರೂಪಿಸಿ, ಪರಿಣಾಮಕಾರಿಯಾಗಿ ಜಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದಾಚರಣೆ ಅಂಗವಾಗಿ ಸ್ಲಂ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು, ಬೀದಿ ನಾಟಕಗಳನ್ನು ಪ್ರದರ್ಶಿಸಬೇಕು. ಶಾಲಾಕಾಲೇಜುಗಳಲ್ಲಿ ಚಿತ್ರಕಲೆ, ಪ್ರಬಂಧ, ಭಾಷಣೆ ಸ್ಪರ್ಧೆಗಳನ್ನು ಆಯೋಜಿಸಬೇಕೆಂದು ಅವರು ಸೂಚಿಸಿದರು.

ಕಾರ್ಮಿಕ ಅಧಿಕಾರಿ ಅಕ್ಬರ ಮುಲ್ಲಾ ಅವರು ಸಭೆ ನಿರ್ವಹಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕಿ ಡಾ.ಎಚ್.ಎಚ್.ಕುಕನೂರ, ಜಿಲ್ಲಾ ನಗರಾಭಿವೃದ್ಧಿಕೊಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಹೆಸ್ಕಾಂ ಇಇ ನರೇಂದ್ರ ಗದಗಕರ, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತ ಸಚೀನ ಹಳೆಮನಿ, ಮಾರಿಕಾಂಭ ಹುಲಕೋಟಿ, ಹಿರಿಯ ಕಾರ್ಮಿಕ ನಿರೀಕ್ಷಕಾರಾದ ಅಕ್ರಮ ಅಲ್ಲಾಪುರ, ಭುವನೇಶ್ವರಿ ಕೋಟಿಮಠ, ರಜನಿ ಹಿರೇಮಠ, ಸಂಗೀತಾ ಬೆನಕೊಪ್ಪ, ಮೀನಾಕ್ಷಿ ಸಿಂದಿಹಟ್ಟಿ, ಲತಾ ಟಿ.ಎಸ್. ಶಾಲಾ ಶಿಕ್ಷಣ ಇಲಾಖೆ ಅಧಿಕಾರಿ ಡಾ.ರೇಣುಕಾ ಅಮಲಜೇರಿ ಸೇರಿದಂತೆ ಇತರರು ಇದ್ದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ ಸ್ವಾಗತಿಸಿ, ವಂದಿಸಿದರು.

ಸ್ಪೀಕರ್ ಯು.ಟಿ. ಖಾದರ್ ಕಾಂಗ್ರೆಸ್ ಏಜೆಂಟ್‌ ರೀತಿ ವರ್ತಿಸುತ್ತಿದ್ದಾರೆ: ಅರವಿಂದ ಬೆಲ್ಲದ್ ಆರೋಪ
ಹುಬ್ಬಳ್ಳಿ: ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಕಾಂಗ್ರೆಸ್ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ ಎಂದು ವಿಧಾನಸಭಾ ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಯು.ಟಿ. ಖಾದರ್ ಯಾವುದೇ ಪಕ್ಷಕ್ಕೆ ಸೀಮಿತವಾಗಿರಬಾರದು. ಆದರೆ, ಅವರು ದಕ್ಷಿಣ ಕನ್ನಡ ಜಿಲ್ಲೆಯನ್ನು ತಮ್ಮ ರಿಪಬ್ಲಿಕ್ ಆಗಿ ಮಾಡಿಕೊಂಡಿದ್ದಾರೆ. ಅದೇ ರೀತಿ, ಕಲಬುರಗಿಯಲ್ಲಿ ಪ್ರಿಯಾಂಕ್ ಖರ್ಗೆ, ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿಯಲ್ಲಿ ಬಿ.ಕೆ. ಹರಿಪ್ರಸಾದ್, ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಸರ್ವಾಧಿಕಾರಿ ವರ್ತನೆ ಪ್ರದರ್ಶಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ರಾಜ್ಯದ ಪ್ರತಿಯೊಂದು ಜಿಲ್ಲೆಯೂ ಕಾಂಗ್ರೆಸ್ ಸಚಿವರ ರಿಪಬ್ಲಿಕ್ ಆಗಿವೆ. ಛಲವಾದಿ ನಾರಾಯಣ ಸ್ವಾಮಿ, ಹರೀಶ್ ಪೂಂಜ, ಸಿ.ಟಿ. ರವಿ ಸೇರಿದಂತೆ ಹಲವರ ವಿರುದ್ಧ ಆಧಾರರಹಿತ ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ, ಗೃಹ ಸಚಿವರು ಈ ವಿಷಯದಲ್ಲಿ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ” ಎಂದು ಅರವಿಂದ ಬೆಲ್ಲದ್ ಟೀಕಿಸಿದರು.

ಕೃಷಿ ವಿದ್ಯಾರ್ಥಿಗಳು, ಸಿಬ್ಬಂದಿಗಳು ರೈತ ಸಮುದಾಯದೊಂದಿಗೆ ಸಂಪರ್ಕ ಸಾಧಿಸಿ ಗ್ರಾಮೀಣ ಜೀವನಮಟ್ಟ ಸುಧಾರಿಸಬೇಕು: ಡಾ.ಚಿ.ಶ್ರೀನಿವಾಸ ರಾವ್
ಕೃಷಿ ಶಿಕ್ಷಣ ಕ್ಲಾಸ್ ರೂಮ್ ಹೊರಗೆ ನೀಡಬೆಕು. ಕೃಷಿ ವಿದ್ಯಾರ್ಥಿಗಳು, ಸಿಬ್ಬಂದಿಗಳು ರೈತರ ಬೇಡಿಕೆ ಮತ್ತು ಸವಾಲುಗಳನ್ನು ತಿಳಿದು. ಅವರೊಂದಿಗೆ ಬೆರೆತು ಗ್ರಾಮೀಣರ ಜೀವನಮಟ್ಟ ಸುಧಾರಣೆಗೆ ಕೂಡಿ ಕೆಲಸ ಮಾಡಬೇಕು. ಕ್ಲಾಸ್ ರೂಮ್ ಶಿಕ್ಷಣಕ್ಕೆ ಸಿಮಿತವಾಗಬಾರದು ಎಂದು ನವದೆಹಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ನಿರ್ದೇಶಕ ಹಾಗೂ ಕುಲಪತಿಗಳಾದ ಡಾ. ಚಿ.ಶ್ರೀನಿವಾಸ ರಾವ್ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಜರುಗಿದ ವಿಶ್ವವಿದ್ಯಾಲಯ 38ನೇ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಕರ್ನಾಟಕ ಕೃಷಿ ಕ್ಷೇತ್ರಕ್ಕೆ ಹವಾಮಾನ ವೈಪರಿತ್ಯ, ತಂತ್ರಜ್ಞಾನ ಮತ್ತು ನೀತಿಗಳು ಸವಾಲುಗಳಾಗಿವೆ. ಕರ್ನಾಟಕ ರಾಜ್ಯವು ಸರಿ ಸುಮಾರು 128 ಲಕ್ಷ ಹೆಕ್ಟೆರ್ ಕೃಷಿ ಭೂಮಿ ಹೊಂದಿದೆ. ಇದರಲ್ಲಿ ಸುಮಾರು 40 ಲಕ್ಷ ಹೆಕ್ಟೆರ್ ಭೂಮಿ ನೀರಾವರಿ, ಬಹು ಬೆಳೆ ಬೆಳೆಯುವ ಸುಮಾರು 21 ಲಕ್ಷ ಹೆಕ್ಟೆರ್ ಭೂಮಿ ಮುಖ್ಯವಾಗಿದೆ.

ಸುಮಾರು 80 ಲಕ್ಷ ಭೂ ಒಡೆಯರಾಗಿರುವವರು. ಅವರಲ್ಲಿ ಶೇ. 90 ರಷ್ಟು ಜನ ಸಣ್ಣ ಹಾಗೂ ಮಧ್ಯಮ ವರ್ಗದ ರೈತರಾಗಿದ್ದಾರೆ ಎಂದು ಅವರು ಹೇಳಿದರು.

2024 ರಲ್ಲಿ ಕರ್ನಾಟಕವು ಉತ್ತಮ ಮಾನ್ಸೂನ ಮಳೆ ಪಡೆಯಿತು. 2022 ರಲ್ಲಿ 13.78 ಮಿಲಿಯನ್ ಟನ್ ಆಹಾರ ಉತ್ಪನ್ನವಾಗಿದ್ದರೆ. 2023 ರಲ್ಲಿ ಅದು 14.18 ಕ್ಕೆ ಗೋವಿನ ಜೋಳ, ಹೆಸರು, ಕಬ್ಬು, ಹತ್ತಿ ಸೇರಿದಂತೆ ಪ್ರಮುಖ ಬೆಳೆಗಳ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ ಎಂದು ಡಾ. ಶ್ರೀನಿವಾಸ ಅವರು ತಿಳಿಸಿದರು.
ಕರ್ನಾಟಕ ಸರಕಾರವು 2025-26 ನೇ ಸಾಲಿನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಹಿಂದಿನ ವರ್ಷಗಳಿಗೆ ಹೊಸಿದಾಗ ಕೃಷಿ ಬೆಳವಣಿಗೆ ಕರ್ನಾಟಕದಲ್ಲಿ ಹೆಚ್ಚಾಗಿದೆ ಎಂದು ಅವರು ವಿವರಿಸಿದರು.

ಭಾರತದ ಕೃಷಿ ಹಸಿರುಕ್ರಾಂತಿ, ಶ್ವೇತಕ್ರಾಂತಿ, ಬಿಳಿಕ್ರಾಂತಿ ಮತ್ತು ಮ್ಯತ್ಸಕ್ರಾಂತಿಗಳನ್ನು ಅತ್ಯಂತ ಯಶಸ್ವಿಯಾಗಿ ಮಾಡಿದೆ. ಈ ಕ್ರಾಂತಿಗಳಿಂದಾಗಿ ಆರ್ಥಿಕ, ಸಾಮಾಜಿಕ, ಜೌದ್ಯೋಗಿಕ ಮತ್ತು ಸಾಮಾಜಿಕ ಬದಲಾವಣೆಗಳಾಗಿವೆ ಎಂದು ಅವರು ತಿಳಿಸಿದರು.

ಕೃಷಿ ಬೆಳವಣಿಗೆಗೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕೃಷಿ ವಿಜ್ಞಾನ ಕೇಂದ್ರಗಳು. ವಿಶ್ವವಿದ್ಯಾಲಯಗಳು ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಡಾ. ಚಿ. ಶ್ರೀನಿವಾಸ ರಾವ್ ಅವರು ಹೇಳಿದರು.

ಘಟಿಕೋತ್ಸವ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಆಗಿರುವ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ಮಾತನಾಡಿ, ಹವಾಮಾನದ ಬದಲಾವಣೆಯಿಂದ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಹಿನ್ನಡೆ, ಹಾನಿ ಆಗುತ್ತಿದೆ. ಕೃಷಿ ಪದವಿಧರರು ಹೆಚ್ಚಿನ ಸಂಶೋಧನೆ ಹಾಗೂ ವಿನೂತನ ಪ್ರಯೋಗಗಳನ್ನು ಮಾಡುವ ಮೂಲಕ ಕೃಷಿ ಕಾರ್ಯಕ್ಕೆ ಬಲ ತುಂಬಬೇಕು ಎಂದು ತಿಳಿಸಿದರು.

ವಿಶ್ವಮಟ್ಟದಲ್ಲಿ ಭಾರತದ ಕೃಷಿ ಮತ್ತು ಕೃಷಿ ಕ್ಷೇತ್ರದ ಸಂಶೋಧನೆಗಳು, ಸಾಧನೆಗಳು ಹೆಮ್ಮೆ ಮೂಡಿಸುತ್ತವೆ. ಯುವ ಸಂಶೋಧಕರು ಪ್ರಸಕ್ತದಲ್ಲಿರುವ ಕೃಷಿ ಕ್ಷೇತ್ರದ ಸವಾಲುಗಳನ್ನು ಗಂಭೀರವಾಗಿ ಪರಿಗಣಿಸಿ, ಪರಿಹಾರ ಕಂಡುಹಿಡಿಯಬೇಕು ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾತನಾಡಿ, ದೇಶದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯ ಅತ್ಯುತ್ತಮ ಸಂಸ್ಥೆಯಾಗಿದೆ. ರೈತರ ಅವಶ್ಯಕತೆಗಳಿಗೆ ಅನುಗುಣವಾಗಿ ಸಂಶೋಧನೆ, ಕೃಷಿ ತಂತ್ರಜ್ಞಾನದ ವರ್ಗಾವಣೆ, ಹೊಸ ತಳಿಗಳ ಪರಿಚಯಿಸುವಲ್ಲಿ ಈ ವಿಶ್ವವಿದ್ಯಾಲಯದ ಪಾತ್ರ ಮತ್ತು ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.

ಕರ್ನಾಟಕ ಸರಕಾರವು 2025-26 ನೇ ಸಾಲಿನ ರಾಜ್ಯ ಬಜೆಟನಲ್ಲಿ ಕೃಷಿಗೆ ಐವತ್ತು ಸಾವಿರ ಕೋಟಿಗೂ ಹೆಚ್ಚಿನ ಅನುದಾನ ನೀಡಿದೆ. ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದೆ ಎಂದು ಅವರು ಹೇಳಿದರು.

ಕೃಷಿ ನವೋದ್ಯಮಗಳಿಗೆ ಉತ್ತೇಜನ, ನಮ್ಮ ಸಿರಿಧಾನ್ಯ ಕಾರ್ಯಕ್ರಮ ಮೂಲಕ ಸಂಸ್ಕರಿಸಿದ ಸಿರಿಧಾನ್ಯಗಳನ್ನು ಮತ್ತು ಮೌಲ್ಯವರ್ಧಿತ ಸಿರಿಧಾನ್ಯಗಳನ್ನು ಕಡಿಮೆ ಬೆಲೆಗೆ ಗ್ರಾಹಕರಿಗೆ ತಲುಪಿಸುವುದು. ಆಹಾರ ಉತ್ಪಾದನೆ ಹೆಚ್ಚಿಸುವದಕ್ಕಾಗಿ ಹನಿ ನೀರಾವರಿ ಯೋಜನೆಗಳಿಗೆ ಪ್ರೋತ್ಸಾಹ, ಕೃಷಿ ಯಾಂತ್ರೀಕರಣಕ್ಕೆ ಆಧ್ಯತೆ, ಕೊಯ್ಲೋತ್ತರ ತಂತ್ರಜ್ಞಾನಗಳ ಬಳಕೆಗೆ ಹಾರ್ವೆಸ್ಟರ್ ಹಬ್ ಯೋಜನೆ ಜಾರಿ ಸೇರಿದಂತೆ ಅನೇಕ ರೀತಿಯ ಕೃಷಿ ಪ್ರೋತ್ಸಾಹದಾಯಕ ಕ್ರಮಗಳನ್ನು ಕರ್ನಾಟಕ ರಾಜ್ಯ ಸರಕಾರ ಜಾರಿಗೊಳಿಸಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು.

ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ಸ್ವಾಗತಿಸಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸಾಧನೆಗಳನ್ನು ಪ್ರಸ್ತುತಪಡಿಸಿದರು.

ಸಮಾರಂಭದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಮುತ್ತಣ್ಣ ಭೀರಪ್ಪ ಪೂಜಾರ, ದ್ಯಾಮನಗೌಡ ತಿಮ್ಮನಗೌಡ ಪಾಟೀಲ ಮತ್ತು ಶಂಕರ ಹನಮಂತ ಲಂಗಟಿ ಅವರಿಗೆ ರಾಜ್ಯಪಾಲರು ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಿದರು.

ಇಂದು ಜರುಗಿದ ಕೃಷಿ ವಿಶ್ವವಿದ್ಯಾಲಯದ 38ನೇ ಘಟಿಕೋತ್ಸವ ಸಮಾರಂಭದಲ್ಲಿ 41 ಪಿ.ಎಚ್.ಡಿ, 197 ಸ್ನಾತಕೋತ್ತರ, 625 ಸ್ನಾತಕ ಪದವಿಗಳು ಒಳಗೊಂಡಂತೆ ಒಟ್ಟು 863 ಅಭ್ಯರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಇದರಲ್ಲಿ 701 ಅಭ್ಯರ್ಥಿಗಳು ಹಾಜರಾತಿಯಲ್ಲಿಯೂ ಹಾಗೂ 162 ಅಭ್ಯರ್ಥಿಗಳು ಗೈರು ಹಾಜರಾತಿಯಲ್ಲಿ ತಮ್ಮ ಪದವಿಗಳನ್ನು ಸ್ವೀಕರಿಸಿದರು.

ಕೃಷಿ ಪದವಿ ವಿದ್ಯಾರ್ಥಿ ಕಾರ್ತಿಕ ಚಿಗರಿ ಹಾಗೂ ವಿದ್ಯಾರ್ಥಿನಿ ಐಶ್ವರ್ಯ ಬೆಟಗೇರಿ ಅವರು ಹೆಚ್ಚು ಚಿನ್ನದ ಪದಕಗಳೊಂದಿಗೆ ಪ್ರಸಕ್ತ ಸಾಲಿಗೆ ಕೃಷಿ ವಿಶ್ವವಿದ್ಯಾಲಯದ ಚಿನ್ನದ ಹುಡುಗ ಮತ್ತು ಚಿನ್ನದ ಹುಡಗಿ ಎಂಬ ಬಿರುದಿಗೆ ಭಾಜನರಾದರು.

ಸಮಾರಂಭದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರು, ವಿದ್ಯಾ ವಿಷಯಕ ಪರಿಷತ್ತಿನ ಸದಸ್ಯರು, ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪಾಲಕರು ಭಾಗವಹಿಸಿದ್ದರು.

ಹುಬ್ಬಳ್ಳಿ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಕೆಲವೇ ಗಂಟೆಗಳಲ್ಲಿ ಮಹಿಳಾ ಪಿಎಸ್ಐ ಗುಂಡೇಟಿಗೆ ಆರೋಪಿಯ ಎನ್ಕೌಂಟರ್
ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ಎಂಬ ಹೆಸರಿನವ ಎಂದು ಆತನ ಆಧಾರ್ ಕಾರ್ಡ್ ಪರಿಶೀಲನೆ ನಂತರ ಪೊಲೀಸರು ತಿಳಿಸಿದ್ದಾರೆ.

ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿತ್ತು. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದರು.

ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿತ್ತು. ಬಾಲಕಿ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದು ಹೊರೆಗೆ ಮಗು ಆಟವಾಡುತ್ತಿತ್ತು. ಇದನ್ನು ಗಮನಿಸಿದ ರಿತೇಶ್ ಕುಮಾರ್ ಚಾಕಲೇಟ್ ಕೊಡುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ.

ಆರೋಪಿ ರಿತೇಶ್ ಕುಮಾರ್ ಬಿಹಾರದ ಪಾಟ್ನಾ ಮೂಲದವನು. ಕಳೆದ ಕೆಲವು ವರ್ಷಗಳಿಂದ ಈತ ಮನೆಯಿಂದ ಹೊರಗಡೆ ಇದ್ದು, ಬೇರೆ ಬೇರೆ ಊರುಗಳಲ್ಲಿ ಕೆಲಸ ಮಾಡಿಕೊಂಡು ಇದೀಗ ಹುಬ್ಬಳ್ಳಿಗೆ ಕಳೆದ 2-3 ತಿಂಗಳ ಹಿಂದೆ ಬಂದಿರುವುದಾಗಿ ತಿಳಿಸಿದ್ದಾನೆ. ಇನ್ನು ವಾಸ ಎಲ್ಲಿ ಎಂದು ಕೇಳಿದಾಗ ತಾರಿಹಾಳ್‌ ಬ್ರಿಡ್ಜ್‌ ಕೆಳಗೆ ಎಂದು ಹೇಳಿದ್ದ.

ವಿಚಾರಣೆ ವೇಳೆ ಕೆಲವೇ ಕೆಲವು ಮಾಹಿತಿ ತಿಳಿಸಿದ ಈತ ಪೊಲೀಸರಿಗೆ ಸ್ಪಂದಿಸದೇ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ತಾರಿಹಾಳ ಬಳಿ ಸ್ಥಳ ಪರಿಶೀಲನೆಗೆ ಕರೆದೊಯ್ದಾಗ ಪೊಲೀಸ್ ವಾಹನದ ಮೇಲೆ ಕಲ್ಲು ತೂರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ.

ಅಶೋಕನಗರದ ಪಿಎಸ್‌ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ತಪ್ಪಿಸಿಕೊಂಡು ಓಡಲು ಯತ್ನಿಸಿದ. ಈ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದಾಗ ಆತನ ಕಾಲಿಗೆ ಹಾಗೂ ಬೆನ್ನಿಗೆ ಗುಂಡು ತಗುಲಿದೆ’ ಎಂದು ಘಟನೆ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಗಾಯಗೊಂಡಿದ್ದ ಅವನನ್ನು ತಕ್ಷಣ ಕೆಎಂಸಿ-ಆರ್‌ಐ ಆಸ್ಪತ್ರೆಗೆ ತರಲಾಯಿತು. ಅಷ್ಟರಲ್ಲಿ ಮೃತಪಟ್ಟಿದ್ದ. ಪೊಲೀಸ್‌ ಸಿಬ್ಬಂದಿ ಯಶವಂತ ಮೊರಬ ಮತ್ತು ವೀರೇಶ ಅವರೂ ಘಟನೆಯಲ್ಲಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ವಿವರಿಸಿದರು.

ರೈತರು ಸಾಂಪ್ರದಾಯಿಕ ಕೃಷಿ ಪದ್ಧತಿಗಿಂತ ವೈಜ್ಞಾನಿಕ ಚಿಂತನೆ, ಕಡಿಮೆ ನೀರಿನ ಬೆಳೆ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು: ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ
ಧಾರವಾಡ, ಮಾ.26: ಧಾರವಾಡ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ) ಯಲ್ಲಿ ನಿನ್ನೆ (ಮಾ. 25) ರಂದು ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ ದೊಡ್ಡಮನಿ ಅವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ವಿಶ್ವ ಜಲ ದಿನಾಚರಣೆಯ ಉದ್ದೇಶ ಜಲದ ಮಹತ್ವ, ನೈಸರ್ಗಿಸ ಸಂಪನ್ಮೂಲಗಳ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ ಕುರಿತು ಜಾಗೃತಿಯನ್ನು ಮೂಡಿಸುವುದಾಗಿದೆ. ನಮ್ಮ ದೇಶದಲ್ಲಿ ಭೂಮಿ, ಮಣ್ಣು, ಕಲ್ಲು, ನೀರು, ಗಿಡ ಪ್ರತಿಯೊಂದು ಪ್ರಕೃತಿ ಸಂಪತ್ತನ್ನು ಪೂಜಿಸಲಾಗುತ್ತದೆ. ರೈತರು ಸಾಂಪ್ರದಾಯಿಕ ಕೃಷಿ ಪದ್ಧತಿಯ ಬದಲಾಗಿ ವೈಜ್ಞಾನಿಕ ಚಿಂತನೆ ಮೂಲಕ ಕಡಿಮೆ ನೀರಿನ ಬೆಳೆ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು, ಸಾವಯವ ಕೃಷಿ ಮೂಲಕ ಮಣ್ಣಿನ ಜೈವಿಕ ಗುಣಧರ್ಮವನ್ನು ಉಳಿಸಿಕೊಳ್ಳಬೇಕು ಎಂದರು.

ವಾಲ್ಮಿ ಸಂಸ್ಥೆಯ ಅಧಿಕಾರಿ ಮತ್ತು ತಂಡದ ಪರಿಸರ ಕಾಳಜಿ ಮತ್ತು ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಶ್ಲಾಘನೆ ವ್ಯಕ್ತಪಡಿಸಿ ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕೈಜೋಡಿಸುವುದೆಂದರು. ರೈತರು ಗ್ರಾಹಕ ರಕ್ಷಣಾ ಆಯೋಗದ ಪ್ರಯೋಜನ ಪಡೆದುಕೊಳ್ಳಬೇಕು. ಬೀಜ, ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಉತ್ಪಾದಕರು ಮತ್ತು ಮಾರಾಟಗಾರರಿಂದ ಯಾವುದೇ ನಷ್ಟವಾಗಿದ್ದಲ್ಲಿ ಕಾನೂನು ನೆರವು ಪಡೆದುಕೊಳ್ಳಬಹುದು ಎಂದರು.

ಧಾರವಾಡ ನೇಚರ್ ಫಸ್ಟ್ ಇಕೋ ವಿಲೇಜ್‍ನ ಪಿ.ವಿ. ಹಿರೇಮಠ ಅವರು ಹವಾಮಾನ ವೈಪರಿತ್ಯದ ಕಾರಣದಿಂದ ಇಂದು ಭೂಮಿಯ ತಾಪಮಾನ ಏರಿಕೆಯಾಗುತ್ತಿದೆ. ಅರಣ್ಯ ಸಂಪನ್ಮೂಲದ ನಾಶದಿಂದಾಗಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ನೈಸರ್ಗಿಕ ಸಂಪನ್ಮೂಲ ಕೇವಲ ಮಾನವರಿಗೆ ಮಾತ್ರವಲ್ಲದೇ ಸಕಲ ಜೀವ ರಾಶಿಗಳಿಗೂ ಸಂಬಂಧಿಸಿದ್ದಾಗಿದೆ. ಇಂದು ಮಾನವ ನಿರ್ಮಿತ ಕಾರಣಗಳಿಂದಾಗಿ ಜೀವ ವೈವಿದ್ಯ ವಿನಾಶದ ಅಂಚಿಕೆ ತಲುಪುತ್ತಿದೆ. ನಮ್ಮ ದೇಶದಲ್ಲಿನ ಸಮೃದ್ಧವಾದ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವು ಇಂದಿನ ಅವಶ್ಯಕತೆಯಾಗಿದೆ ಎಂದರು.

ಧಾರವಾಡ ವಾಲ್ಮಿ ನಿರ್ದೇಶಕರ ಬಿ.ವೈ. ಬಂಡಿವಡ್ಡರ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ವಿಶ್ವ ಜಲ ದಿನಾಚರಣೆ-2025 ರ ಘೋಷವಾಕ್ಯ ಹಿಮನದಿಗಳ ಸಂರಕ್ಷಣೆಯಾಗಿದೆ. ಭೂಮಂಡಲದ ಉತ್ತರ ಮತ್ತು ದಕ್ಷಿಣ ಭಾಗವು ಸಂಪೂರ್ಣವಾಗಿ ಮಂಜಿನಿಂದ ಆವೃತ್ತವಾಗಿದೆ. ಭಾರತಕ್ಕೆ ಕಿರೀಟದಂತಿರುವ ಹಿಮಾಲಯ ಪರ್ವತ ಶ್ರೇಣಿಗಳು ಶುದ್ಧ ನೀರಿನ ಮೂಲಗಳಾಗಿದೆ. ಜಾಗತಿಕ ಹವಾಮಾನ ವೈಪರಿತ್ಯದ ಪರಿಣಾಮವಾಗಿ ಹಿಮಾಲಯ ಪರ್ವತ ಪ್ರದೇಶದಾದ್ಯಂತ ತಾಪಮಾನವು ಹೆಚ್ಚಾಗುತ್ತಿದೆ. ಹಿಮದ ಕರಗುವಿಕೆಗೂ ಮತ್ತು ನಮಗೂ ಏನೂ ಸಂಬಂಧವಿಲ್ಲವೆಂದು ಭಾವಿಸುವಂತಿಲ್ಲ. ಪ್ರಸ್ತುತ ಜಲ ಮೂಲಗಳ ಒತ್ತುವರಿ, ಅರಣ್ಯ ನಾಶ, ಕೈಗಾರೀಕರಣ, ನಗರೀಕರಣ, ತ್ಯಾಜ್ಯದ ನಿರ್ವಹಣೆ ಸಮಸ್ಯೆ, ಪ್ಲಾಸಿಕ್ ಬಳಕೆ, ರಾಸಾಯನಿಕ ಗೊಬ್ಬರ ಬಳಕೆ ಇವೆಲ್ಲವೂ ಮಣ್ಣಿನಲ್ಲಿ ನೀರನ್ನು ಹಿಡಿದಿಡುವ ಸಾಮಥ್ರ್ಯವನ್ನು ಕಡಿಮೆ ಮಾಡುತ್ತಿವೆ. ಜಾಗತಿಕವಾಗಿ ಇಂಗಾಲದ ಪ್ರಮಾಣದ ಏರಿಕೆಯಿಂದ ಹಿಮದ ಕರಗುವಿಕೆ ಹೆಚ್ಚಾಗುತ್ತಿದೆ. ಇದರಿಂದ ಪ್ರವಾಹಗಳು, ಅಂತರ್ಜಲ ಕುಸಿತ, ಸಮುದ್ರದ ಮಟ್ಟದ ಏರಿಕೆಯಂಥಹ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದರು.

ಜಮಖಂಡಿಯ ಪ್ರಗತಿಪರ ರೈತ ಪುಲಕೇಶಿ ಸುರೇಂದ್ರ ನಾಂದ್ರೇಕರ, ದಾವಣಗೆರೆಯ ಎಚ್. ಬಿ. ಸತೀಶ, ಡಿ. ನಿಂಗಪ್ಪ, ಕೋಡಿ ಬಸವೇಶ್ವರ ಅವರನ್ನು ಸನ್ಮಾನಿಸಲಾಯಿತು.
ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮತ್ತು ರೈತ ಮಹಿಳೆಯರೂ ಸೇರಿದಂತೆ, ಹಳಿಯಾಳ ಕೆ.ಎಲ್.ಎಸ್.ವಿ.ಟಿ.ಐ.ಟಿ, ಕಾಲೇಜು ವಿದ್ಯಾರ್ಥಿಗಳು, ಕರ್ನಾಟಕ ನೀರಾವರಿ ನಿಗಮ ಅಧಿಕಾರಿ, ಸಿಬ್ಬಂದಿಗಳು ಮತ್ತು ವಾಲ್ಮಿ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.