ಗದಗ – Peepal Media

ಇದು ಕೇವಲ ಜಾತಿಸಮೀಕ್ಷೆಯಲ್ಲ; ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಗದಗ, ಸೆಪ್ಟೆಂಬರ್ 20 : ರಾಜ್ಯದಲ್ಲಿ ನಡೆಸಲುದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗದಗ್ ನ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಾತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ನಡಿ ವಿವಿಧ ಜಾತಿಗಳನ್ನು ಉಲ್ಲೇಖಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಇದರ ಬಗ್ಗೆ ಅಭಿಪ್ರಾಯಗಳನ್ನು ತಿಳಿಸಲಾಗಿದ್ದು, ಅನಗತ್ಯವಿರುವ ಅಂಶಗಳನ್ನು ತೆಗೆದುಹಾಕಲು ಹಿಂದುಳಿದ ವರ್ಗಗಳ ಆಯೋಗವೇ ನಿರ್ಧರಿಸುತ್ತದೆ. ಆಯೋಗವು ಶಾಸನಬದ್ಧ ಸಂಸ್ಥೆಯಾಗಿದ್ದು, ಸಮೀಕ್ಷೆ ನಡೆಸಲು ಮಾರ್ಗಸೂಚಿಗಳನ್ನಷ್ಟೇ ಸರ್ಕಾರ ನೀಡಿದೆ. 1,75,000 ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕರ ನಿಯೋಜಿತರಾಗಿದ್ದಾರೆ. ಒಬ್ಬ ಶಿಕ್ಷಕರು ತಲಾ 150 ಮನೆಗಳಿಂದ ಮಾಹಿತಿ ಸಂಗ್ರಹಿಸಲಿದ್ದು, ಈ ಸಮೀಕ್ಷಾ ಕಾರ್ಯ 15 ದಿನಗಳ ಕಾಲ ನಡೆಯಲಿದೆ. ಸಮೀಕ್ಷೆಯಲ್ಲಿ ಧರ್ಮ, ಜಾತಿ, ಉಪಜಾತಿ, ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ಮಾಹಿತಿಗಳನ್ನು ಕಲೆಹಾಕಲಿದ್ದಾರೆ ಎಂದರು.

ಸಮೀಕ್ಷೆಗೆ ಯಾರ ವಿರೋಧವೂ ಇಲ್ಲ
ಜಾತಿಗಣತಿಯ ಹಿಂದೆ ಷಡ್ಯಂತ್ರವಿದೆ ಎಂದು ವಚನಾನಂದ ಸ್ವಾಮೀಜಿಗಳು ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರವೂ ಜಾತಿಸಮೀಕ್ಷೆ ನಡೆಸಲಿದ್ದು, ಅದರಲ್ಲಿಯೂ ಷಡ್ಯಂತ್ರವಿರಲಿದೆಯೇ? ಸಮೀಕ್ಷೆಗೆ ಯಾವುದೇ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ. ಸಮಾಜದಲ್ಲಿ ಸಮಾನತೆ ತರಲು ಬಡವರಿಗೆ ಸರ್ಕಾರಿ ಯೋಜನೆಗಳಲ್ಲಿ ಆದ್ಯತೆ ನೀಡಬೇಕಾಗುತ್ತದೆ ಎಂದರು.

ಜಾತಿ ಒಡೆಯುವ ಪ್ರಶ್ನೆಯೇ ಇಲ್ಲ- ಬಿಜೆಪಿ ರಾಜಕೀಯ ಮಾಡುತ್ತಿದೆ
ಸಮೀಕ್ಷೆಯ ನಿರ್ಧಾರವನನ್ನು ಮರುಪರಿಶೀಲಿಸಲು ಮಾನ್ಯ ರಾಜ್ಯಪಾಲರು ಸೂಚನೆ ನೀಡುವಂತೆ ಬಿಜೆಪಿಯವರು ಮನವಿ ಸಲ್ಲಿಸಿರುವ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮೀಕ್ಷೆಯ ವಿಚಾರದಲ್ಲಿ ಬಿಜೆಪಿಯು ರಾಜಕೀಯ ಮಾಡುತ್ತಿದೆ. ಸಮೀಕ್ಷೆಯ ವಿಚಾರದಲ್ಲಿ ಜಾತಿ ಒಡೆಯುವ ಪ್ರಶ್ನೆಯೇ ಇಲ್ಲ ಎಂದರು.

ಆಳಂದದ ಮತಗಳ್ಳತನ ಪ್ರಕರಣದ ಬಗ್ಗೆ ಎಸ್ ಐ ಟಿ ತನಿಖೆ :
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮತಗಳ್ಳತನದ ಬಗ್ಗೆ ಮಾಡಿರುವ ಆರೋಪದ ಕುರಿತ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರು ಅಳಂದ ಕ್ಷೇತ್ರದಲ್ಲಿ ಸುಮಾರು 6000 ಮತದಾರರ ಹೆಸರನ್ನು ಕೈಬಿಟ್ಟಿರುವ ಮತಗಳ್ಳತನದ ವಿಚಾರವನ್ನು ಉಲ್ಲೇಖಿಸಿದ್ದು, ಇದು ಸತ್ಯವಾಗಿದೆ. ಆಳಂದದಲ್ಲಿರುವ ಮತಗಳ್ಳತನ ಪ್ರಕರಣದ ಬಗ್ಗೆ ಎಸ್ ಐ ಟಿ ತನಿಖೆ ನಡೆಯಲಿದೆ ಎಂದರು.

ಕೇಂದ್ರ ಸರ್ಕಾರದ್ದೇ ಅಂತಿಮ ನಿರ್ಧಾರ

ಕುರುಬ ಸಮಾಜವನ್ನು ಎಸ್ ಟಿ ಗೆ ಸೇರಿಸುವ ಬಗ್ಗೆ ಪ್ರತಿಕ್ರಯಿಸಿ, ಕುರುಬ ಸಮಾಜವನ್ನು ಎಸ್ ಟಿ ಗೆ ಸೇರಿಸುವ ಶಿಫಾರಸ್ಸನ್ನು ಹಿಂದಿನ ಬಿಜೆಪಿ ಸರ್ಕಾರವೇ ಮಾಡಿತ್ತು. ಆದರೆ ಈ ಪ್ರಸ್ತಾವನೆಯನ್ನು ಕೇಂದ್ರಸರ್ಕಾರ ವಾಪಸ್ಸು ಕಳಿಸಿದ್ದು, ಅದಕ್ಕೆ ವಿವರಣೆಯನ್ನು ಸರ್ಕಾರ ನೀಡಲಿದೆ. ಯಾವುದೇ ಸಮುದಾಯವನ್ನು ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರವೇ ತೆಗೆದುಕೊಳ್ಳುತ್ತದೆ ಎಂದರು.

ಜಂಟಿ ಸಮೀಕ್ಷೆ- ವರದಿ ನಂತರ ಬೆಳೆಪರಿಹಾರ

ರಾಜ್ಯದಲ್ಲಿ ಭಾರಿ ಮಳೆಯಿಂದ ಬೆಳೆಹಾನಿ ಸಂಭವಿಸಿರುವ ಬಗ್ಗೆ ಉತ್ತರಿಸುತ್ತಾ, ರಾಜ್ಯದಲ್ಲಿ ಸಂಭವಿಸಿರುವ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದ್ದು, ವರದಿ ಬಂದ ನಂತರ ಬೆಳೆ ಪರಿಹಾರ ನೀಡಲಾಗುವುದು. ಗದಗ ಜಿಲ್ಲೆಯಲ್ಲಿ ಇನ್ನೆರೆಡು ದಿನಗಳಲ್ಲಿ ಜಂಟಿಸಮೀಕ್ಷೆಯ ಪೂರ್ಣಗೊಳ್ಳಲಿದೆ ಎಂದರು.

ರಸ್ತೆ ದುರಸ್ತಿಗೆ ಕ್ರಮ

ರಸ್ತೆಗುಂಡಿಗಳ ಬಗ್ಗೆ ಬಿಜೆಪಿಯವರು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಯಿಸಿ, ಈ ಬಾರಿ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಿರುವ ಕಾರಣ, ರಸ್ತೆಗಳು ಹಾಳಾಗಿರುವುದು ನಿಜ. ಈ ಬಗ್ಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಸಭೆ ನಡೆಸಿ , ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗುವುದು. ಬಿಜೆಪಿಯ ಅಧಿಕಾರಾವಧಿಯಲ್ಲಿ ಒಂದೂ ರಸ್ತೆಯನ್ನೂ ನಿರ್ಮಿಸಿಲ್ಲ ಹಾಗೂ ರಸ್ತೆಗುಂಡಿಯನ್ನೂ ಮುಚ್ಚಿರುವುದಿಲ್ಲ ಎಂದರು.

ಶೋಷಿತ ಜಾತಿ-ಸಮುದಾಯಗಳು ಜಾತಿ ಸಂಘಟನೆ ಮೂಲಕ ಹಕ್ಕುಗಳನ್ನು ಪಡೆದುಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ
ಗದಗ ಸೆ 20: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು.‌

ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ ಮನೆಯ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಂದೆ ಬರುವುದನ್ನು ಸಹಿಸುವುದಿಲ್ಲ. ಹೀಗಾಗಿ ದೇವರು, ಧರ್ಮದ ಹೆಸರಿನಲ್ಲಿ ಹಿಂದುಳಿದ ಜಾತಿಗಳ ಮನೆಯ ಮಕ್ಕಳನ್ನೇ ಬಲಿ ಆಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಹಿಂದುಳಿದವರ ಮಕ್ಕಳನ್ನು ಬಲಿ ಕೊಡುವವರ ಮಾತು ಕೇಳಿಕೊಂಡು ನಾವು ತಲೆ ಆಡಿಸುತ್ತಾ ಕೂರಬಾರದು ಎಂದು ಕರೆ ನೀಡಿದರು.

ಶಿಕ್ಷಣ-ಸಂಘಟನೆ-ಹೋರಾಟh ಎನ್ನುವುದು ಅಂಬೇಡ್ಕರ್ ಅವರು ಶೋಷಿತ, ಹಿಂದುಳಿದ ಜಾತಿ ಸಮುದಾಯಗಳಿಗೆ ಕೊಟ್ಟ ಮಂತ್ರವಾಗಿದೆ. ಈ ಮೂರೂ ಮಂತ್ರಗಳ ಮೂಲಕ ಶೋಷಿತ ಜಾತಿ ಸಮುದಾಯಗಳು ಶಿಕ್ಷಣ ಪಡೆದು ದೊಡ್ಡ ಸಂಘಟನೆ ಮಾಡಿಕೊಳ್ಳುವ ಮೂಲಕ ಹೋರಾಟದ ಹಾದಿಯಲ್ಲಿ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು.

ಜಾತಿ ವ್ಯವಸ್ಥೆಯಲ್ಲಿ ಜಾತಿ ಇರುವವರೆಗೂ ಸಮಾನತೆ ಬರುವುದಿಲ್ಲ. ಇದಕ್ಕೆ ಶಿಕ್ಷಣ ಮತ್ತು ಸಂಘಟನೆಯೇ ಪರಿಹಾರ ಎಂದರು.

ಶಿಕ್ಷಣ ಎಂದರೆ ಪ್ರಗತಿಪರ ಮತ್ತು ವೈಜ್ಞಾನಿಕವಾದ ಹಾಗೂ ವಿಚಾರಶೀಲವಾದ ಶಿಕ್ಷಣ ಪಡೆಯಬೇಕು. ಈಗ ಶಿಕ್ಷಿತರು ಎಂದು ಹೇಳಿಕೊಳ್ಳುವ ವೈದ್ಯರು, ಎಂಜಿನಿಯರ್ ಗಳೂ ಮೌಡ್ಯ, ಕಂದಾಚಾರವನ್ನು ಪಾಲಿಸುತ್ತಿದ್ದಾರೆ. ಶಿಕ್ಷಿತರೇ ಹೆಚ್ಚು ಜಾತಿವಾದಿಗಳಾಗಿ ಸಮಾಜದ ಪ್ರಗತಿಗೆ ಅಡ್ಡಿಯಾಗಿದ್ದಾರೆ ಎಂದರು.

ಸಹೋದರತ್ವ, ಸಮಾನತೆ ಮತ್ತು ಪರಧರ್ಮ ಸಹಿಷ್ಣುತೆ ನಮ್ಮ ಸಂವಿಧಾನ ನೀಡಿರುವ ಮಹೋನ್ನತ ಮೌಲ್ಯಗಳಾಗಿವೆ. ಈ. ಮೌಲ್ಯಗಳೇ ಹಿಂದುಳಿದ ಜಾತಿ, ಸಮುದಾಯಗಳಿಗೆ ದೊಡ್ಡ ಶಕ್ತಿ ಆಗಿದೆ ಎಂದರು.

ನಾಡ ಹಬ್ಬಕ್ಕೆ ಬಾನು ಮುಷ್ತಾಕ್: ಸುಪ್ರೀಂಕೋರ್ಟ್ ಕೂಡ ಸ್ವಾಗತಿಸಿದ್ದಕ್ಕೆ ಸಿಎಂ ಮೆಚ್ಚುಗೆ

ನಾಡ ಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ‌ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಜಾತಿ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ : ಸಿಎಂ ಕರೆ

ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಕರೆ ನೀಡಿದರು.

ನಾವೇ ನಂಬರ್ ಒನ್: ಸಿಎಂ

ನಾವು ಎಲ್ಲಾ ಜಾತಿ, ಎಲ್ಲಾ ಧರ್ಮ ಮತ್ತು ಎಲ್ಲಾ ಪಕ್ಷದವರಿಗಾಗಿ ಜಾರಿಗೆ ತಂದ ಗ್ಯಾರಂಟಿ ಕಾರ್ಯಕ್ರಮಗಳಿಂದ ರಾಜ್ಯದ ಜನತೆ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೆ ಏರಿದ್ದಾರೆ. ತಲಾ ಆದಾಯದಲ್ಲಿ ದೇಶದಲ್ಲಿ ನಾವೇ ನಂಬರ್ ಒನ್ ಆಗಿರುವುದೇ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿರುವುದಕ್ಕೆ ಸ್ಪಷ್ಟ ಸಾಕ್ಷಿ ಎಂದರು.

ಸಚಿವರಾದ ಎಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಾಸಕರಾದ ರಾಘವೇಂದ್ರ ಹಿಟ್ನಾಳ್ , ರಾಕೇಶ್ ಧವನ್ ಸಿದ್ದರಾಮಯ್ಯ ಸೇರಿ ಮಾಜಿ ಸಚಿವರು, ಶಾಸಕರು ಹಾಗೂ ಸಮುದಾಯದ ಮುಖಂಡರು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ದ್ವಿಭಾಷಾ ಸೂತ್ರ: ಮುಖ್ಯಮಂತ್ರಿ ನಿರ್ಧಾರವೇ ಅಂತಿಮ- ಸಚಿವ ಮಧು ಬಂಗಾರಪ್ಪ
ಗದಗ: ರಾಜ್ಯದಲ್ಲಿ ದ್ವಿಭಾಷಾ ಅಥವಾ ತ್ರಿಭಾಷಾ ಸೂತ್ರದ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಒಪ್ಪುವುದಿಲ್ಲ. ಬದಲಿಗೆ, ಪ್ರತ್ಯೇಕ ರಾಜ್ಯ ಶಿಕ್ಷಣ ನೀತಿಯನ್ನು (SEP) ರೂಪಿಸುವತ್ತ ಗಮನ ಹರಿಸಿದೆ. ಆದ್ದರಿಂದ, SEP ಸಮಿತಿಯ ಚರ್ಚೆಗಳಲ್ಲಿ ದ್ವಿಭಾಷಾ ಅಥವಾ ತ್ರಿಭಾಷಾ ಸೂತ್ರದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಒಂದು ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ನೇಮಕಾತಿ ಸಂದರ್ಭದಲ್ಲಿ ಮಹಿಳಾ ಅಭ್ಯರ್ಥಿಗಳು ತಮ್ಮ ಪತಿ ಅಥವಾ ತಂದೆಯ ಆದಾಯ ಪ್ರಮಾಣಪತ್ರ ಲಗತ್ತಿಸಬೇಕೇ ಎಂಬುದು ಈ ಪ್ರಕರಣದ ಪ್ರಮುಖ ಅಂಶವಾಗಿದೆ.

ಈ ಬಗ್ಗೆ ನ್ಯಾಯಾಲಯ ನೀಡುವ ತೀರ್ಮಾನವನ್ನು ಇಲಾಖೆ ಪಾಲಿಸಲಿದೆ. ಇಂತಹ ಸಮಸ್ಯೆಗಳು ಭವಿಷ್ಯದಲ್ಲಿ ಪುನರಾವರ್ತನೆಯಾಗದಂತೆ, ಹೊಸ ಶಿಕ್ಷಕರ ನೇಮಕಾತಿ ನಿಯಮಗಳ ಬಗ್ಗೆ ಕಾನೂನು ಇಲಾಖೆಯ ಅಭಿಪ್ರಾಯವನ್ನು ಕೇಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಾಜಪೇಯಿ ಹೆದ್ದಾರಿ ಅಭಿವೃದ್ಧಿಗೆ ಒತ್ತು ನೀಡಿದ್ದರು, ಮೋದಿ ರೈಲು ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುತ್ತಿದ್ದಾರೆ: ಸಚಿವ ಸೋಮಣ್ಣ
ರೈಲ್ವೆ ಯೋಜನೆಗಳನ್ನು ಪ್ರತಿ ಹಳ್ಳಿಗೂ ತಲುಪಿಸುವ ಚಿಂತನೆ ನಮ್ಮ ಸರ್ಕಾರದ್ದಾಗಿದೆ. ಅದಕ್ಕಾಗಿ ಪ್ರಧಾನ ಮಂತ್ರಿಗಳು ದೇಶದಲ್ಲಿ 7 ಲಕ್ಷ ಕೋಟಿ ರೂ ಹಳೆಯ ರೈಲ್ವೆ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಭಾರತ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಹೇಳಿದರು.

ಅವರು ಗುರುವಾರ ಕುಷ್ಟಗಿ ರೈಲು ನಿಲ್ದಾಣದಲ್ಲಿ ನೈಋತ್ಯ ರೈಲ್ವೆ ವಿಭಾಗದ ಗದಗ (ತಳಕಲ್ಲ) ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ ಹಾಗೂ ರೈಲು ಸಂಖ್ಯೆ. 17323 ಕುಷ್ಟಗಿ-ಎಸ್.ಎಸ್.ಎಸ್. ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

ರೈಲ್ವೆ ಸಾರಿಗೆಯಿಂದ ಜನರಿಗೆ ಅನುಕೂಲವಾಗಲಿದೆ. ರೈಲು ಒಂದು ಇಂಥ ಇಲಾಖೆ ಇದೆ ಇದರಲ್ಲಿ ಎಲ್ಲರೂ ಓಡಾಡುತ್ತಾರೆ. ದೇವೆಗೌಡರು ಪ್ರಧಾನಿಗಳಾಗಿದ್ದ ಸಮಯದಲ್ಲಿ ಬಸವರಾಜ ರಾಯರೆಡ್ಡಿ ಅವರು ಈ ಭಾಗದ ಸಂಸದರಾಗಿದ್ದ ಸಮಯದಲ್ಲಿ ಗದಗ-ವಾಡಿ ರೈಲು ಮಾರ್ಗದ ಯೋಜನೆ ಕೈಗೆತ್ತಿಕೊಂಡಿದ್ದರು. ಬಹು ದಿನಗಳ ನಂತರ ಈ ಭಾಗದ ಜನರ ಕನಸು ಈಗ ನನಸಾಗಿದೆ ಎಂದರು.

ವಾಜಪೇಯಿ ಅವರು ಪ್ರಧಾನಿಗಳಾಗಿದ್ದ ಸಮಯದಲ್ಲಿ ಅವರು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಒತ್ತು ನೀಡಿದರೆ ನರೇಂದ್ರ ಮೋದಿಜಿ ಅವರು ರೈಲ್ವೆ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಕಳೆದ ಹತ್ತು ವರ್ಷಗಳಲ್ಲಿ 45 ಸಾವಿರ ಕೋಟಿ ರೂ ರೈಲ್ವೆ ಯೋಜನೆಯನ್ನು ಕರ್ನಾಟಕದಲ್ಲಿ ಮಾಡುತ್ತಿದ್ದೆವೆ. 2014 ರಿಂದ 2024 ರವರೆಗೆ 5 ಲಕ್ಷ ಉದ್ಯೋಗ ರೈಲ್ವೆ ಇಲಾಖೆಯಲ್ಲಿ ಜನರಿಗೆ ನೀಡಲಾಗಿದೆ. ರೈಲ್ವೆ ಇಲಾಖೆಯಲ್ಲಿ ಕರ್ನಾಟಕದವರಿಗೆ ಉದ್ಯೋಗ ಸಿಗಲು ಅನುಕೂಲವಾಗಲು ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ. ಒಂದೇ ಭಾರತ 50 ಎಸಿ ಸ್ಲೀಪರ್ ಕೋಚ್ ಟ್ರೈನಗಳನ್ನು ಇನ್ನೂ ಒಂದುವರೆ ತಿಂಗಳಲ್ಲಿ ದೇಶದಲ್ಲಿ ಬಿಡುಗಡೆ ಮಾಡಲಿದ್ದೆವೆ ಎಂದು ಹೇಳಿದರು.

2025-26ನೇ ಸಾಲಿನಲ್ಲಿ ಗದಗ-ವಾಡಿ ರೈಲು ಯೋಜನೆಗೆ 549.45 ಕೋಟಿ ರೂ ಹಣವನ್ನು ಇರಿಸಿದ್ದೆವೆ. ಗದಗ-ವಾಡಿ ಮಧ್ಯ ಒಟ್ಟು 27 ರೈಲು ನಿಲ್ದಾಣಗಳು ಬರುತ್ತವೆ. ಎಲ್ಲಾ ರೈಲು ನಿಲ್ದಾಣಗಳ ಅಭಿವೃದ್ಧಿಗೆ ನಮ್ಮ ಸರ್ಕಾರದ ಆದ್ಯತೆ ನೀಡಿದೆ. ಇಂದು ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ್ದು, ಪ್ರತಿದಿನ ಕುಷ್ಟಗಿ-ಹುಬ್ಬಳ್ಳಿ ಮಧ್ಯ ಈ ರೈಲು ಸಂಚರಿಸಲಿದೆ. ಟಿಕೆಟ್ ದರ 70 ರೂ ಇದ್ದು. ಬೆಳಿಗ್ಗೆ 7 ಗಂಟೆಗೆ ಕುಷ್ಟಗಿಯಿಂದ ಹೊರಟ ರೈಲು 10.40ಕ್ಕೆ ಹುಬ್ಬಳ್ಳಿ ತಲುಪಲಿದೆ ಮತ್ತೆ ಸಂಜೆ 5 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 8.30 ಕುಷ್ಟಗಿ ಬಂದು ತಲುಪಲಿದೆ ಇದರಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಮಾತನಾಡಿ ಗದಗ-ವಾಡಿ ರೈಲು ಮಾರ್ಗದ ಬಹುದಿನಗಳ ಕನಸು ಈಗ ಇಡೇರಿದೆ. ಬಸವರಾಜ ರಾಯರೆಡ್ಡಿ ಅವರು ಸಂಸದರಾಗಿದ್ದ ಸಮಯದಲ್ಲಿ ಇದನ್ನು ಪ್ರಾರಂಭಿಸಿದರು. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶೇ. 50:50 ಪ್ರತಿ ಶತದಲ್ಲಿ ಅನುದಾನವನ್ನು ನೀಡುತ್ತವೆ. ಈ ಯೋಜನೆಗೆ ನಮ್ಮ ಸರ್ಕಾರ ಭೂಮಿ ಒದಗಿಸುವ ಕೆಲಸವನ್ನು ಮಾಡಿದೆ. ಈ ಭಾಗದಿಂದ ಬೆಂಗಳೂರಿಗೆ ಹೋಗುವ ಟ್ರೇನ್ ವ್ಯವಸ್ಥೆ ಆಗಬೇಕು. ದರೋಜಿ-ಬಾಗಲಕೋಟ ಸರ್ವೆ ಆಗಬೇಕು ಇದರಿಂದ ವಾಣಿಜ್ಯೋದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಮಾತನಾಡಿ, ಗದಗ-ವಾಡಿ ರೈಲ್ವೆ ಮಾರ್ಗ ಸ್ಥಾಪನೆಯು ಬಹು ವರ್ಷಗಳ ಬೇಡಿಕೆಯಾಗಿತ್ತು. ಈ ಮಾರ್ಗದಲ್ಲಿ ಬರುವ ಕುಷ್ಟಗಿ ಪಟ್ಟಣಕ್ಕೆ ಇಂದಿನಿAದ ರೈಲು ಸಂಚಾರ ಆರಂಭವಾಗಿದ್ದು, ಈ ಭಾಗದ ಅನೇಕ ಹಿರಿಯರು ಕಂಡ ಕನಸು ಇಂದು ನನಸಾಗಿದೆ. ಗದಗ-ವಾಡಿ ರೈಲು ಲೈನ್ ನಿಂದ ನಮ್ಮ ಭಾಗದ ಅಭಿವೃದ್ಧಿಗೆ ತುಂಬಾ ಅನುಕೂಲವಾಗಲಿದೆ. ಸದ್ಯ ಕುಷ್ಟಗಿಯಿಂದ ಹುಬ್ಬಳ್ಳಿವರೆಗೆ ರೈಲು ಸಂಚಾರ ಆರಂಭವಾಗಿದ್ದು, ಮುಂದಿನ ದಿನಮಾನಗಳಲ್ಲಿ ಈ ಮಾರ್ಗದಿಂದ ಲಿಂಕ್ ಲೈನ್ ಮಾಡಿ ಬೆಂಗಳೂರಿಗೂ ಪ್ರಯಾಣಿಸಲು ಅನುಕೂಲ ಮಾಡಿಕೊಡಬೇಕೆಂದು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಮಾತನಾಡಿ, ರೈಲ್ವೆ ಮಾರ್ಗಗಳನ್ನು ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ಇದಕ್ಕಾಗಿ ಬಹಳ ಪರಿಶ್ರಮಬೇಕು. 1996ರಲ್ಲಿ ನಾನು ಸಂಸದಾನ ಸಂದರ್ಭದಲ್ಲಿ ಮೊದಲನೆ ಬಾರಿಗೆ ಕೊಪ್ಪಳ ದಿಂದ ರಾಯಚೂರು ಮಾರ್ಗವಾಗಿ ಹೈದ್ರಾಬಾದಿಗೆ ರೈಲ್ವೆ ಮಾರ್ಗ ಆಗಬೇಕೆಂದು ಮುನಿರಾಬಾದ್-ಮಹೆಬೂಬ್ ನಗರ ರೈಲ್ವೆ ಮಾರ್ಗವನ್ನು ವಾಯಾ ಗಂಗಾವತಿ, ಸಿಂದನೂರ, ರಾಯಚೂರು ಮೂಲಕ ರೈಲ್ವೆ ಲೈನ್ ಮಾಡಿಸಲು ಪ್ರಯತ್ನಿಸಿದ್ದೆ. ತದನಂತರ 1997ರಲ್ಲಿ ಅಂದಿನ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೆಗೌಡ ಅವರನ್ನು ಕರೆಸಿ ಈ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಸರ್ವೇ ಮಾಡಿಸಲಾಯಿತು. ಅದೇ ಸಂದರ್ಭದಲ್ಲಿ ಗದಗ-ವಾಡಿ ರೈಲ್ವೆ ಮಾರ್ಗ ಆಗಬೇಕೆಂದು ಒತ್ತಾಯಿಸಲಾಯಿತು. ನಂತರದಲ್ಲಿ ಸರ್ವೇಯನ್ನು ಮಾಡಿಸಲಾಗಿತ್ತು. ಆಗ ಕೆಲವು ತಿಂಗಳುಗಳಲ್ಲಿ ಸಂಸತ್ ವಿಸರ್ಜನೆಗೊಂಡ ಕಾರಣ ಗದಗ-ವಾಡಿ ರೈಲ್ವೆ ಮಾರ್ಗ ವಿಳಂಭವಾಯಿತು ಎಂದರು.

2009 ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರ ಮೂಲಕ ಗದಗ-ವಾಡಿ ರೈಲ್ವೆ ಮಾರ್ಗವನ್ನು ಅಪ್‌ಡೇಟ್ ಮಾಡಲು ಒತ್ತಾಯಿಸಲಾಯಿತು. ನಂತರ 2013-14ರಲ್ಲಿ ಗದಗ-ವಾಡಿ ರೈಲ್ವೆ ಮಾರ್ಗಕ್ಕೆ ಅನುಮೋದನೆ ದೊರೆಯಿತು. ಅಂದೂ ಸಹ ಮುಖ್ಯಮಂತ್ರಿಗಳು ಆಗಿದ್ದ ಸಿದ್ದರಾಮ್ಯನವರು ಈ ಕಾಮಗಾರಿಗೆ ಶೇ. 50ರಷ್ಟು ಹಣವನ್ನು ಮತ್ತು ಭೂಸ್ವಾಧೀನಕ್ಕೆ ಒಪ್ಪಿಗೆ ನೀಡಿದ್ದರು. ಈ ಮಾರ್ಗಕ್ಕೆ ಒಟ್ಟು 257 ಕಿ.ಮೀ.ಗೆ 4195 ಎಕರೆ ಜಮೀನು ಬೇಕಿದ್ದು, ಈಗಾಗಲೇ 3867 ಎಕರೆ ಅಂದರೆ, ಶೇ.99ರಷ್ಟು ಭೂಸ್ವಾಧೀನ ಆಗಿದೆ. ನಮ್ಮ ರಾಜ್ಯದಲ್ಲಿ ಇಷ್ಟೊಂದು ತ್ವರಿತವಾಗಿ ಭೂಸ್ವಾಧೀನ ಆಗಿದ್ದು, ಗದಗ-ವಾಡಿ ಯೋಜನೆಯ ಮಾರ್ಗಕ್ಕೆ ಮಾತ್ರ ಆಗಿದೆ. ತಳಕಲ್ ನಿಂದ ಕುಷ್ಟಗಿ ವರೆಗೆ ಸುಮಾರು 56 ಕಿ.ಮೀ ವರೆಗೆ ಕಾಮಗಾರಿಯು ಪೂರ್ಣಗೊಂಡಿದೆ. ವಾಡಿಯಿಂದ ಶಹಪುರ ವರೆಗೆ 48 ರೈಲ್ವೆ ಲೈನ್ ಮುಕ್ತಾಯದ ಹಂತದಲ್ಲಿದೆ. 165 ಕಿ.ಮೀ ಕುಷ್ಟಗಿಯಿಂದ ಸುರಪೂರ ವರೆಗೆ ಕಾಮಗಾರಿಕೆ ಟೆಂಡರ್ ಮಾಡಲಾಗುತ್ತಿದ್ದು, ಇದನ್ನು ಒನ್ ಸಾಟ್ ಟೆಂಡರ್ ಮಾಡಿದರೇ ರಾಜ್ಯ ಸರ್ಕಾರದಿಂದ ಶೇ.50ರಷ್ಟು ಅನುದಾನವನ್ನು ಬಿಡುಗಡೆ ಮಾಡಿಸಲಾಗುವುದು. ಈ ಹಿನ್ನೆಲೆಯಲ್ಲಿ ಒನ್ ಸಾಟ್ ಟೆಂಡರ್ ಮಾಡಿಸಲು ಮನವಿ ಮಾಡಿಕೊಳ್ಳುತ್ತೇನೆ. ಇದರ ಜೊತೆಗೆ ಈ ಮಾರ್ಗದ ವಿದ್ಯುದ್ದೀಕರಣ ಆಗಬೇಕು. ಗದಗ-ವಾಡಿ ಕಾಮಗಾರಿ ಪೂರ್ಣಗೊಂಡರೆ, ಈ ಭಾಗದ ಜನರ ಪ್ರಯಾಣದ ಜೊತೆಗೆ ವಾಣಿಜ್ಯ ವ್ಯವಹಾರಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು.

ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಕುಷ್ಟಗಿ ಪುರಸಭೆ ಅಧ್ಯಕ್ಷರಾದ ಮಹಾಂತೇಶ , ಜಿಲ್ಲಾಧಿಕಾರಿ ನಲಿನ್ ಅತುಲ್, ನೈರುತ್ಯ ರೈಲ್ವೆ ಹುಬ್ಬಳ್ಳಿಯ ವಿಭಾಗೀಯ ವ್ಯವಸ್ಥಾಪಕರಾದ ಬೇಲಾ ಮೀನಾ, ಕಾಮಗಾರಿ ನಿರ್ಮಾಣ ವಿಭಾಗದ ಸಿಎಓ ಅಜಯ್ ಶರ್ಮಾ, ಮಾಜಿ ಸಚಿವರಾದ ಅಮರೇಗೌಡ ಪಾಟೀಲ್ ಬಯ್ಯಾಪುರ ಹಾಗೂ ಹಾಲಪ್ಪ ಆಚಾರ್, ಮಾಜಿ ಸಂಸದರಾದ ಕೆ.ವಿರೂಪಾಕ್ಷಪ್ಪ, ಮಾಜಿ ಶಾಸಕರಾದ ಕೆ.ಶರಣ್ಣಪ್ಪ ಹಾಗೂ ಬವರಾಜ ದಢೇಸೂಗೂರು, ಮುಖಂಡರಾದ ಡಾ. ಕೆ.ಬಸವರಾಜ ಹಾಗೂ ಇತರೆ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ: ಕಾರ್ಯಕ್ರಮದ ನಂತರ ರೈಲು ಸಂಖ್ಯೆ. 17323 ಕುಷ್ಟಗಿ-ಎಸ್.ಎಸ್.ಎಸ್. ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಕೇಂದ್ರ ಸರ್ಕಾರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು ಹಾಗೂ ಇತರೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಗದಗ: ರಾಸಾಯನಿಕ ಬಣ್ಣ ಎರಚಿದ ಕಿಡಿಗೇಡಿಗಳು; 8 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು
ಅಪರಿಚಿತ ವ್ಯಕ್ತಿಗಳು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿದ ಕಾರಣಎಂಟು ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಗದಗ ಜಿಲ್ಲೆಯ ಲಕ್ಷ್ಮಿಶ್ವರ ಪಟ್ಟಣದಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿದ್ದಾಗ, ಹೋಳಿ ಆಚರಣೆಯ ಭಾಗವಾಗಿ ಕೆಲವರು ದ್ವಿಚಕ್ರ ವಾಹನಗಳಲ್ಲಿ ಅಲ್ಲಿಗೆ ಬಂದರು. ನಂತರ ಅವುಗಳ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣವನ್ನುಎರಚಿದರು. ಇದರಿಂದಾಗಿ ವಿದ್ಯಾರ್ಥಿಗಳು ಇದ್ದಕ್ಕಿದ್ದಂತೆ ಅಸ್ವಸ್ಥರಾದರು.

ತೀವ್ರ ಎದೆ ನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡ ನಂತರ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಜನರು ತಮ್ಮ ಮೇಲೆ ಬಣ್ಣ ಎರಚಿಕೊಂಡು ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತನಿಖೆ ಆರಂಭಿಸಿದರು. ವಿಶೇಷ ತಂಡಗಳನ್ನು ನೇಮಿಸಿ ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಯಿತು. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ಈ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರಿಗೆ ಭರವಸೆ ನೀಡಲಾಯಿತು.

ಯುವಕರು ಸಿಂಪಡಿಸಿದ ಬಣ್ಣಗಳಲ್ಲಿ ಹಸುವಿನ ಸಗಣಿ, ಮೊಟ್ಟೆಗಳು, ಫೀನಾಯಿಲ್ ಮತ್ತು ಸಂಶ್ಲೇಷಿತ ಸಂಯುಕ್ತಗಳು ಇರುವುದು ಪ್ರಾಥಮಿಕ ವಿಧಿವಿಜ್ಞಾನ ತನಿಖೆಯಿಂದ ತಿಳಿದುಬಂದಿದೆ. ಅರಿವಿಲ್ಲದೆ ಉಸಿರಾಡಿ ದೇಹವನ್ನು ಪ್ರವೇಶಿಸಿದ್ದರಿಂದ ಸಂತ್ರಸ್ತರಿಗೆ ಉಸಿರಾಟದ ತೊಂದರೆ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ: ಸಿ.ಎಂ.ಆಕ್ರೋಶ
ಗದಗ್ (ರೋಣಾ) ಡಿ 15: ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, ಸಿರಿ ದಾನ್ಯ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

1,20,000 ಕೋಟಿ ಹಣವನ್ನು ಈ ವರ್ಷ ರಾಜ್ಯ ಸರ್ಕಾರ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗಿದ್ದೂ ಬಿಜೆಪಿ ಬುರುಡೆ ಬಿಡುತ್ತಿದೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಪದೇ ಪದೇ ಸುಳ್ಳು ಹೇಳಿ ಅವರ ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇವರ ಸುಳ್ಳು ನಂಬುವಷ್ಟು ಮೂರ್ಖರಲ್ಲ ಎಂದರು.

ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ. ಇದಲ್ಲದೆ ರಸ್ತೆ, ನೀರು, ಕೃಷಿ, ನೀರಾವರಿ ಯೋಜನೆಗಳಿಗೂ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದೇವೆ.

ಸಮಾಜ ಕಲ್ಯಾಣಕ್ಕೆ, ದಲಿತ ಸಮುದಾಯದ ಪ್ರಗತಿಗೆ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಸಾವಿರ ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ.

ಆದರೆ ಬಿಜೆಪಿ ಜಾತಿ-ಧರ್ಮದ ನಡುವೆ ದ್ವೇಷ ಹರಡಿ, ಜನರನ್ನು ವಿಭಜಿಸುವ ಏಕೈಕ ರಾಜಕಾರಣದಲ್ಲಿ ತೊಡಗಿದೆ ಎಂದರು.

ಬಸವಣ್ಣ, ಅಂಬೇಡ್ಕರ್, ಗಾಂಧಿ, ಬುದ್ಧ ಎಲ್ಲರ ಆಶಯದಂತೆ ಸಮ ಸಮಾಜವನ್ನು ಸೃಷ್ಟಿಸುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ, ಜಾರಿ ಮಾಡುತ್ತಿದೆ. ಆದರೆ ಸಮಾಜದಲ್ಲಿರುವ ಅಸಮಾನತೆಯ ಅತಿಹೆಚ್ಚು ಲಾಭ ಪಡೆಯುತ್ತಿರುವ ಬಿಜೆಪಿ, ಸಮಾನತೆಯ ವಿರೋಧಿಯಾಗಿದೆ ಎಂದರು.

ಗಜೇಂದ್ರಘಡದ ಅತ್ತೆ ಸೊಸೆ ಇಬ್ಬರೂ ಗೃಹಲಕ್ಷ್ಮಿ ಹಣವನ್ನು ಉಳಿಸಿ ಅದರಲ್ಲಿ ಬೋರ್ ವೆಲ್ ಕೊರೆಸಿ ಸಮಾಜಕ್ಕೆ ಮಾದರಿ ಆಗಿದ್ದಾರೆ ಎಂದು ಸ್ಮರಿಸಿದ ಸಿಎಂ ಅತ್ತೆ-ಸೊಸೆ ಜೋಡಿಗೆ ಅಭಿನಂದನೆ ಸಲ್ಲಿಸಿದರು.

ಇಡೀ ಜಗತ್ತಿನಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ಹೆಚ್ಚಿನ ನಾರಿನ ಅಂಶ ಇರುವ ಸಿರಿದಾನ್ಯ ಬಳಸುವುದರಿಂದ ಶರೀರದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ದೇಹಕ್ಕೆ ಅಗತ್ಯವಾದ ಪ್ರೋಟೋನ್ ಹೇರಳವಾಗಿ ಸಿಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಸಿರಿದಾನ್ಯ ಬೆಳೆಯುವ ರೈತರಿಗೆ ನಾನಾ ರೀತಿಯ ಅನುಕೂಲ ಮಾಡಿಕೊಡುತ್ತಿದೆ ಎಂದರು.

ಸುಳ್ಳು ಹೇಳಿದ ಮೋದಿಯವರಿಗೆ ಮತ ನೀಡಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗದಗ, (ಗಜೇಂದ್ರಗಡ) ಏಪ್ರಿಲ್ 25: ಕನ್ನಡ ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸದ ನರೇಂದ್ರ ಮೋದಿಯವರಿಗೆ ಲೋಕಸಭಾ ಚುನಾವಣೆ ಬಂದಾಗ ಮಾತ್ರ ಕನ್ನಡಿಗರ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ರ ಪರವಾಗಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮತದಾರರನ್ನುದ್ದೇಶಿಸಿ ಮಾತನಾಡಿದರು.

ಬಸವರಾಜ ಬೊಮ್ಮಾಯಿ ಅಭಿವೃದ್ಧಿ ಶೂನ್ಯ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿಸಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಕಾಲ ಇದ್ದರೂ, ಈ ಭಾಗಕ್ಕೆ ಅವರ ಕೊಡುಗೆ ಶೂನ್ಯ. ಈ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿಯನ್ನು ಮಾಡದ ಬಸವರಾಜ ಬೊಮ್ಮಾಯಿಯವರನ್ನು ಸೋಲಿಸುವುದು ಎಲ್ಲರ ಕರ್ತವ್ಯ. ರೋಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಗೆ 25 ಸಾವಿರಕ್ಕಿಂತಲೂ ಹೆಚ್ಚು ಮತವನ್ನು ಕೊಡುತ್ತೀರೆಂಬ ವಿಶ್ವಾಸವಿದೆ ಎಂದರು.

ಮೋದಿ ಹೇಳಿದ ಅಚ್ಛೇ ದಿನ್ ಬರಲೇ ಇಲ್ಲ

ಮೋದಿಯವರು 10 ವರ್ಷಗಳ ಪ್ರಧಾನಿಯಾಗಿದ್ದರೂ, ಅವರು ಕೊಟ್ಟ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದ್ದರಿಂದ ಮತ್ತೊಮ್ಮೆ ಜನರ ಬಳಿ ಮತ ಕೇಳುವ ನೈತಿಕತೆ ಅವರಿಗೆ ಇಲ್ಲ ಎಂದು ಜನರು ಹೇಳಬೇಕು. 2014 ರಲ್ಲಿ ವಿದೇಶಿ ಕಪ್ಪು ಹಣವನ್ನು ಎಲ್ಲರ ಖಾತೆಗೆ 15 ಲಕ್ಷ ನೀಡುವ ಭರವಸೆ, ಪ್ರತಿ ವರ್ಷ 2 ಕೋಟಿ ಉದ್ಯೋಗ, ರೈತರ ಆದಾಯ ದ್ವಿಗುಣಗೊಳಿಸುವ ಸುಳ್ಳನ್ನು ಹೇಳಿದ್ದಾರೆ. ಪೆಟ್ರೋಲ್, ಗ್ಯಾಸ್, ಆಹಾರವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಇನ್ನೂ ಹೆಚ್ಚಾಗಿದೆ. ಅವರು ಹೇಳಿದ ಅಚ್ಛೇ ದಿನ್ ಬರಲೇ ಇಲ್ಲ. 2014ರಲ್ಲಿ ಒಂದು ಡಾಲರ್ ಬೆಲೆ 58 ರೂ. ಇತ್ತು, ಇಂದು 83 ರೂ. ಆಗಿದೆ. ರೂಪಾಯಿ ಮೌಲ್ಯ ಮತ್ತಷ್ಟು ಕುಸಿದಿದ್ದು, ರೂಪಾಯಿ ಮೌಲ್ಯ ಹೆಚ್ಚಿಸುವ ಅವರ ಭರವಸೆ ಮೋದಿಯ ಮತ್ತೊಂದು ಸುಳ್ಳಾಗಿದೆ. ಮೇಲಿನ ಐದೂ ಭರವಸೆಗಳನ್ನು ಸುಳ್ಳಾಗಿಸಿರುವ ನರೇಂದ್ರ ಮೋದಿಯವರಿಗೆ ಜನರು ಮತ ನೀಡಬೇಕೇ ? ಸುಳ್ಳು ಹೇಳಿದ ನರೇಂದ್ರ ಮೋದಿಗೆ ಈ ಬಾರಿ ಮತ ನೀಡಬಾರದು ಎಂದು ಜನರಿಗೆ ಕರೆ ನೀಡಿದರು.

ರಾಜ್ಯಕ್ಕೆ ಬರಪರಿಹಾರ ಬಂದಿಲ್ಲ

ಕಳೆದ ಬಾರಿ ರಾಜ್ಯದಿಂದ ಬಿಜೆಪಿಯ 25 ಸಂಸದರು ಇದ್ದರೂ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರದಲ್ಲಿ ಎಂದೂ ಧ್ವನಿ ಎತ್ತಲಿಲ್ಲ. ಕಾಂಗ್ರೆಸ್ ನ ಸಂಸದ ಡಿ.ಕೆ.ಸುರೇಶ್ ಒಬ್ಬರೇ ಕೇಂದ್ರದ ವಿರುದ್ಧ ಧ್ವನಿ ಎತ್ತಿದ್ದವರು. ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಕೇಂದ್ರ ಅನ್ಯಾಯ ಮಾಡಿದೆ. ರಾಜ್ಯದ 223 ತಾಲ್ಲೂಕುಗಳಲ್ಲಿ ಬರಗಾಲವಿದ್ದರೂ ಕೇಂದ್ರ ಬರ ಪರಿಹಾರ ನೀಡಲಿಲ್ಲ ಎಂದರು.

ಮೋದಿ ರಾಜ್ಯದ ಜನರ ಕಷ್ಟವನ್ನು ಕೇಳುತ್ತಿಲ್ಲ

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯಕ್ಕೆ ಪ್ರವಾಹ ಬಂದಾಗ, ಮೋದಿಯವರು ರಾಜ್ಯದ ಜನರಿಗೆ ನೆರವನ್ನು ನೀಡಲಿಲ್ಲ. ಈಗ ರಾಜ್ಯಕ್ಕೆ ಬರಗಾಲ ಬಂದಿದ್ದರೂ, ಜನರ ಕಷ್ಟವನ್ನು ಮೋದಿಯವರು ಕೇಳುತ್ತಿಲ್ಲ. 2023 ರ ಸೆಪ್ಟೆಂಬರ್ ತಿಂಗಳಲ್ಲಿ ಬರ ಪರಿಹಾರ ಕೋರಿ, ಕೇಂದ್ರಕ್ಕೆ ಮನವಿ ಸಲ್ಲಿಸಲಾಯಿತು. ಕೇಂದ್ರದ ತಂಡ ಪರಿಶೀಲಿಸಿ ವರದಿ ನೀಡಿದ ನಂತರವೂ ಕೇಂದ್ರ ಪರಿಹಾರ ನೀಡಲಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಕೇಂದ್ರ ಸರ್ಕಾರ ಬರಪರಿಹಾರ ನೀಡುವ ನಿರೀಕ್ಷೆಯಿದೆ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನ ಬಳಿ ಹೋಗದಿದ್ದರೆ, ಕೇಂದ್ರ ರಾಜ್ಯಕ್ಕೆ ಬರಪರಿಹಾರ ನೀಡುವತ್ತ ಗಮನವನ್ನೇ ಹರಿಸುತ್ತಿರಲಿಲ್ಲ ಎಂದರು.

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರ ಕೆಂಗಣ್ಣು ಬೀರಿದೆ.

ನಮ್ಮ ಸಂಪನ್ಮೂಲದಿಂದ ಕುಡಿಯುವ ನೀರು, ಮೇವು ನೀಡುತ್ತಿದ್ದು, 24 ಲಕ್ಷ ರೈತರಿಗೆ ತಲಾ 2000 ರೂ. ನಂತೆ 650 ಕೋಟಿ ರೂ.ಗಳನ್ನು ನೀಡಲಾಗಿದೆ.ಕರ್ನಾಟಕದ ಬಗ್ಗೆ ಕೆಂಗಣ್ಣನ್ನು ಕೇಂದ್ರ ಸರ್ಕಾರ ಬೀರಿದೆ. ರಾಜ್ಯವನ್ನು ಕಡೆಗಣಿಸಿರುವ ಬಿಜೆಪಿಗೆ ಯಾವತ್ತೂ ಮತ ಹಾಕಬಾರದು ಎಂದು ನುಡಿದರು

ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಿದೆ

ಬೆಲೆಯೇರಿಕೆ ಹಾಗೂ ನಿರುದ್ಯೋಗದಿಂದ ರೈತರ ಜೀವನ ಕಷ್ಟಕ್ಕೆ ಸಿಲುಕಿದೆ. ಕಳೆದ ವಿಧನಸಭಾ ಚುನಾವಣೆಯಲ್ಲಿ ಭರವಸೆ ನೀಡಿದಂತೆ 82 ಭರವಸೆಗಳನ್ನು ಈಡೇರಿಸುವ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ,ಯುವನಿಧಿಯನ್ನು ಜಾರಿಗೊಳಿಸಿದೆ. 195 ಕೋಟಿ ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ್ದಾರೆ.

ಕನಿಷ್ಠ 1 ಲಕ್ಷ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆಲ್ಲಬೇಕು
ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಮಹಾದಾಯಿ ಯೋಜನೆಗೆ ಜಾರಿ ಮಾಡಿಲ್ಲ. ಕೇಂದ್ರ ಸರ್ಕಾರದಿಂದ ಪರಿಸರ ತೀರುವಳಿಯನ್ನು ಬಸವರಾಜ ಬೊಮ್ಮಾಯಿ ಕೊಡಿಸಲು ಆಗಲಿಲ್ಲ. ನರೇಂದ್ರ ಮೋದಿ ಅವರು ಇಂದಿನವರೆಗೆ ಅನುಮತಿ ನೀಡಿಲ್ಲ. ಕನಿಷ್ಠ 1 ಲಕ್ಷ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆಲ್ಲಬೇಕು. ಬಸವರಾಜ ಬೊಮ್ಮಾಯಿಯವರನ್ನು ಸೋಲಿಸಬೇಕು. ಜನತೆಯ ಆಶೀರ್ವಾದ ಕಾಂಗ್ರೆಸ್ ಅಭ್ಯರ್ಥಿ ಮೇಲಿರಲಿ ಎಂದು ಕರೆ ನೀಡಿದರು.

ಗದಗ: ನಟ ಯಶ್ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ, ಅಭಿಮಾನಿ ಸಾವು
ಬೆಂಗಳೂರು: ಗದಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಕಿಂಗ್ ಸ್ಟಾರ್ ಯಶ್ ಅವರ ಮತ್ತೊಬ್ಬ ಅಭಿಮಾನಿ ಮಂಗಳವಾರ ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ವಾಪಸಾಗುತ್ತಿದ್ದ ನಟನ ಬೆಂಗಾವಲು ವಾಹನ ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಅಪಘಾತಕ್ಕೀಡಾಗಿದ್ದಾನೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಯಶ್ ಸೋಮವಾರ ಸಂಜೆ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಜನವರಿ 8ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಲು ಗ್ರಾಮದಲ್ಲಿ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತರಾದ ಮೂವರು ಯುವಕರ ಕುಟುಂಬ ಸದಸ್ಯರನ್ನು ಭೇಟಿಯಾದರು. ನಂತರ ನಟ ಯಶ್ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಇಬ್ಬರು ಗಾಯಾಳುಗಳನ್ನು ಭೇಟಿಯಾದರು.

ನಂತರ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಹಿಂತಿರುಗುತ್ತಿದ್ದಾಗ ಯಶ್ ಪೊಲೀಸ್ ಬೆಂಗಾವಲು ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಪೊಲೀಸರು ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಮಂಗಳವಾರ ಬೆಳಗ್ಗೆ ಗಾಯಾಳು ಮೃತಪಟ್ಟಿದ್ದಾನೆ. ಗದಗ ಸಮೀಪದ ಮುಳುಗುಂದ ನಾಕಾದಲ್ಲಿ ಅಪಘಾತ ಸಂಭವಿಸಿದೆ. ನಟನನ್ನು ನೋಡಲೆಂದು ಈ ಯುವಕರು ಯಶ್ ಅವರ ವಾಹನವನ್ನು ಅನುಸರಿಸುತ್ತಿದ್ದರು.

ಮೃತರನ್ನು 20 ವರ್ಷದ ನಿಖಿಲ್ ಎಂದು ಗುರುತಿಸಲಾಗಿದೆ. ಇವರು ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿಯಾಗಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

injuries, actor yash fan suicide attempt in his residence, actor yash, sandalwood actor yash, reaction to casino royale, succumbed, actor’s fan suicide, kannada actor, the history and evolution of godzilla, top 30 news of the day,casino royale reaction,election in jammu and kashmir, yash fan, yash fan ravi

ಯಶ್ ಜನ್ಮದಿನ: ಗದಗ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ 3 ಅಭಿಮಾನಿಗಳು ಸಾವು
ಬೆಂಗಳೂರು: ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದಂದು ಬ್ಯಾನರ್ ಕಟ್ಟುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರನ್ನು ಹನುಮಂತ್ ಹರಿಜನ್ (21), ಮುರಳಿ ನಡುವಿನಮನಿ (20) ಮತ್ತು ನವೀನ್ (19) ಎಂದು ಗುರುತಿಸಲಾಗಿದೆ. ಮೃತ ಮೂವರೂ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ನಿವಾಸಿಗಳು.

ಭಾನುವಾರ ರಾತ್ರಿ, ಯಶ್ ಅವರ ಹಲವಾರು ಅಭಿಮಾನಿಗಳು ಗ್ರಾಮದಲ್ಲಿ ಜಮಾಯಿಸಿದ್ದರು ಮತ್ತು ಜನವರಿ 8ರಂದು ತಮ್ಮ 38ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಟ ಯಶ್ ಅವರ ಬ್ಯಾನರ್ ಮತ್ತು ಕಟೌಟ್‌ಗಳನ್ನು ನಿರ್ಮಿಸಿದ್ದರು. ದಾರವನ್ನು ಕಟ್ಟಿದ ನಂತರ ಉತ್ಸಾಹಭರಿತ ಅಭಿಮಾನಿಗಳು ಹೈಟೆನ್ಷನ್ ತಂತಿಯನ್ನು ಗಮನಿಸದೆ ಬ್ಯಾನರ್ ಎತ್ತಿದರು. ಮೇಲೆ. ಬ್ಯಾನರ್‌ಗೆ ವಿದ್ಯುತ್ ತಂತಿ ತಗುಲಿದ್ದರಿಂದ ಮೂವರು ಅಭಿಮಾನಿಗಳಿಗೆ ವಿದ್ಯುತ್ ಸ್ಪರ್ಶವಾಗಿದೆ. ಮೂವರನ್ನು ರಕ್ಷಿಸಲು ಯತ್ನಿಸಿದ ಇಬ್ಬರಿಗೆ ಗಾಯಗಳಾಗಿವೆ.

ಎಲ್ಲಾ ಐವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಲಕ್ಷ್ಮೇಶ್ವರದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಮೂವರು ಜೀವಗಳನ್ನು ಬಲಿತೆಗೆದುಕೊಂಡ ಘಟನೆಯ ಬಗ್ಗೆ ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.

ಮರಣೋತ್ತರ ಪರೀಕ್ಷೆ ಮತ್ತು ಇತರ ವಿಧಿವಿಧಾನಗಳ ನಂತರ ಮೂವರ ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು.

ಹುಟ್ಟುಹಬ್ಬದಂದು ಯಶ್ ಅಭಿಮಾನಿಗಳನ್ನು ಭೇಟಿ ಮಾಡಲ್ಲ

ಕೆಜಿಎಫ್ ಖ್ಯಾತಿಯ ನಟ ಈಗಾಗಲೇ ತಮ್ಮ ಹುಟ್ಟುಹಬ್ಬದಂದು ದೂರವಿರುವುದಾಗಿ ಘೋಷಿಸಿದ್ದರು ಮತ್ತು ಅವರ ಮುಂದಿನ ಚಿತ್ರ ‘ಟಾಕ್ಸಿಕ್’ ಮೇಲೆ ಪ್ರೀತಿಯನ್ನು ತೋರಿಸಿದ್ದಕ್ಕಾಗಿ ಅವರ ಅಭಿಮಾನಿಗಳಿಗೆ ಧನ್ಯವಾದಗಳು ಎಂದಿದ್ದಾರೆ.

ಡಿಸೆಂಬರ್ 8ರಂದು ಶೀರ್ಷಿಕೆಯನ್ನು ಬಹಿರಂಗಪಡಿಸಲಾಯಿತು. ಚಿತ್ರವನ್ನು ಏಪ್ರಿಲ್ 2025ರಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿದೆ ಮತ್ತು ಬಾಲಿವುಡ್ ನಟ ಕರೀನಾ ಕಪೂರ್ ನಟಿಸಲಿದ್ದಾರೆ ಎಂದು ವರದಿಯಾಗಿದೆ.

ಶಿರಹಟ್ಟಿ | ಹಾಲಶ್ರೀ ಸ್ವಾಮಿಯ ವಿರುದ್ಧ ಇನ್ನೊಂದು ವಂಚನೆ ಕೇಸು
ಶಿರಹಟ್ಟಿ: ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣದಲ್ಲಿ ಬಂಧಿರಾಗಿರುವ ಹಾಲಶ್ರೀ ಸ್ವಾಮಿಯ ವಿರುದ್ಧ ಇನ್ನೊಂದು ವಂಚನೆ ಪ್ರಕರಣ ದಾಖಲಾಗಿದ್ದು, ತನಗೆ ಒಂದು ಕೋಟಿ ರೂ ಮೋಸವಾಗಿದೆ ಎಂದು ದೂರುದಾರ ತಿಳಿಸಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂಜಯ್‌ ಚವಡಾಳ ಎನ್ನುವ ವ್ಯಕ್ತಿಯು ಹಾಲಶ್ರೀ ವಿರುದ್ಧ ವಂಚನೆ ಆರೋಪ ಮಾಡಿ, ಸೆಪ್ಟೆಂಬರ್ 19ರಂದು ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಶಿರಹಟ್ಟಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯೆಂದು ಬಿಂಬಿಸಿಕೊಂಡಿದ್ದ ಸಂಜಯ್ ಚವಡಾಳ ಬಿಜೆಪಿ ಟಿಕೆಟ್‌ ಪಡೆಯುವ ಸಲುವಾಗಿ ಹಾಲಶ್ರೀಗೆ ಲಂಚವಾಗಿ ನೀಡಿರುವುದಾಗಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈಗಾಗಲೇ ಪೊಲೀಸ್‌ ವಶದಲ್ಲಿರುವ ಹಾಲಶ್ರೀಯನ್ನು ನ್ಯಾಯಾಲಯ ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ವಶಕ್ಕೆ ಹತ್ತು ದಿನಗಳ ಮಟ್ಟಿಗೆ ನೀಡಿತ್ತು.