ಕಲ್ಬುರ್ಗಿ – Peepal Media

ಚಿತ್ತಾಪುರದಲ್ಲಿ RSS ಪಥ ಸಂಚಲನ ಅಕ್ಟೋಬರ್ 28ಕ್ಕೆ ಶಾಂತಿ ಸಭೆ – ಹೈಕೋರ್ಟ್
ಕಲಬುರಗಿ  : ಚಿತ್ತಾಪುರದಲ್ಲಿ ನವಂಬರ್ 2 ರಂದು ಆರ್‌ಎಸ್ಎಸ್ (RSS) ಪಥ ಸಂಚಲನ ನಡೆಸೋ ವಿಚಾರ ದೊಡ್ಡ ಸಂಚಲನ ಸೃಷ್ಟಿಸುತ್ತಿದೆ. ಅದೇ ದಿನ ಇನ್ನೂ (Kalburgi) ಐದಾರು ಸಂಘಟನೆಗಳು ಜಾಥಾ, ಮೆರವಣಿಗೆಗೆ ಅನುಮತಿ ಕೊಡಿ ಎಂದಿವೆ. ಹೀಗಾಗಿ ಅಕ್ಟೋಬರ್‌ 28ರವರೆಗೆ ಶಾಂತಿ ಸಭೆ ನಡೆಸಲು ಹೈಕೋರ್ಟ್ (High Court) ಸೂಚಿಸಿದೆ.

ವಿಶೇಷ ಪೀಠವು ಭಾನುವಾರ ವಿಚಾರಣೆ ನಡೆಸಿ, ನವೆಂಬರ್‌ 2 ಕ್ಕೆ ಪಥಸಂಚಲನ ನಡೆಸಲು ಸೂಚಿಸಿತ್ತು. ಅಲ್ಲದೇ ಜಿಲ್ಲಾಧಿಕಾರಿಗೆ ಮನವಿ ನೀಡಲು ಸೂಚಿಸಿತ್ತು. ಅದರಂತೆ ಮನವಿ ನೀಡಿದ್ದೇವೆ. ಎಲ್ಲಾ ಸಿದ್ಧತೆಗಳು ಆಗಿವೆ. ರೂಟ್‌ ಮ್ಯಾಪ್‌ ಸಹ ನೀಡಿದ್ದೇವೆ ಎಂದು RSS ಪರ  ವಕೀಲ ಎಂ ಅರುಣ್‌ ಶ್ಯಾಮ್‌ ಹೇಳಿದರು. ಬಳಿಕ ಜಿಲ್ಲಾಧಿಕಾರಿ ಸಲ್ಲಿಸಿರುವ ವರದಿ ಓದಿದ ಅಡ್ವೊಕೇಟ್‌ ಜನರಲ್‌. ಇದು ಹೆಚ್ಚು ಜನಸಂದಣಿ ಇರುವ ಪ್ರದೇಶ ಎಂದು ಹೇಳಲಾಗಿದೆ. ಇಲ್ಲಿ ಮೆರವಣಿಗೆ, ಸಭೆ ನಡೆಸಲು ಅನುಮತಿಸಲಾಗದು ಎಂದು ವರದಿಯಲ್ಲಿ ಹೇಳಲಾಗಿದೆ. ಜನಸಂದಣಿ ಉಂಟಾಗಲಿದೆ ಎಂದೂ ವರದಿಯಾಗಲಿದೆ ಎಂದರು.ಯಾವುದೇ ರೀತಿ ಸಭೆ, ಸಮಾರಂಭ, ಪಥಸಂಚಲನಕ್ಕೆ ಅನುಮತಿಸಿದರೆ ಕಾನೂನು ಮತ್ತು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ಎಜಿ ಹೇಳಿದ್ರೆ, ಅದರ ಅರ್ಥ ಏನು? ಎಂದು ಪೀಠ ಪ್ರಶ್ನಿಸ್ತು. ಪರಿಸ್ಥಿತಿ ಸದ್ಯ ಸಮಸ್ಯಾತ್ಮಕವಾಗಿದೆ. ಪರಿಸ್ಥಿತಿ ತಿಳಿಯಾದ ಮೇಲೆ ಅರ್ಜಿದಾರರ ಮನವಿ ಪರಿಗಣಿಸುತ್ತೇವೆ. ಹಲವು ಸಂಘಟನೆಗಳು ಅನುಮತಿ ಕೋರಿವೆ. ಇದು ಸಮಸ್ಯೆಯಾಗಿದೆ ಎಂದು ಎಜಿ ಹೇಳಿದರು.

ಆರ್‌ಎಸ್‌ಎಸ್ ಪಥ ಸಂಚಲನದ ಬಗ್ಗೆ ಕಲಬುರಗಿ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ನಾವು ಯಾವುದೇ ಕಾರಣಕ್ಕೂ ಯಾವುದೇ ಅರ್ಜಿಗಳನ್ನ ತಿರಸ್ಕರಿಸಿಲ್ಲ. ಬಹಳಷ್ಟು ಸಂಘಟನೆಗಳು  ನವೆಂಬರ್ 2 ರಂದೇ ಪಥ ಸಂಚಲನಕ್ಕೆ ಮತ್ತು ಪ್ರತಿಭಟನೆಗೆ ಅರ್ಜಿ ಸಲ್ಲಿಸಿವೆ. ಎಲ್ಲ ಸಂಘಟನೆಗಳನ್ನ ಕರೆದು ಜಿಲ್ಲಾಡಳಿತ ಶಾಂತಿಸಭೆ ನಡೆಸಿದೆ.  ರಾಜ್ಯದಲ್ಲಿ  ಎಲ್ಲಿಯೂ ಸಮಸ್ಯೆ ಆಗಿಲ್ಲ, ಆದರೆ ಕಲಬುರಗಿಯಲ್ಲಿ ಸಮಸ್ಯೆ ಆಗಿದೆ. ಬಂದೋಬಸ್ತ್‌ಗಾಗಿ ಎರಡು ವಾರಗಳ ಕಾಲ ಸಮಯಾವಕಾಶ ನೀಡಬೇಕೆಂದು ಸರ್ಕಾರದ ಪರ ವಕೀಲರು ಹೈಕೋರ್ಟ್​ಗೆ ಮನವಿ ಮಾಡಿಕೊಂಡರು. ಯಾವಾಗ ಅನುಮತಿ ಮಾಡಿಕೊಡುತ್ತೀರಿ? ಎಂದು ಪೀಠ ಪ್ರಶ್ನೆ ಮಾಡಿತು. ಹತ್ತು ದಿನ ಅಥವಾ ಎರಡು ವಾರದ ನಂತರ ಅರ್ಜಿ ವಿಚಾರಣೆ ನಡೆಸಿ. ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಎಜಿ ಹೇಳಿದ್ರು. ಎಲ್ಲರಿಗೂ ಸರ್ಕಾರ ಅನುಕೂಲ ಮಾಡಿಕೊಡಬೇಕು. ಎಲ್ಲರಿಗೂ ಗೆಲುವು ಧಕ್ಕುವಂತಾಗಬೇಕು ಎಂದು ಪೀಠ ಹೇಳಿತು.

ಪಿಎಸ್‌ಐ ಸ್ಕ್ಯಾಂ ಬಿಜೆಪಿ ಕಾರ್ಯಕರ್ತೆ ದಿವ್ಯಾ ಮನೆಯಲ್ಲಿ ಸಿಕ್ಕಿಬಿದ್ದ ಜೂಜುಕೋರರು
ಕಲಬುರಗಿ : ಪಿಎಸ್​ಐ ಹಗರಣದಲ್ಲಿ (PSI Scam) ಸಿಲುಕಿದ್ದ ಬಿಜೆಪಿ ಕಾರ್ಯಕರ್ತೆ (BJP) ದಿವ್ಯಾ ಹಾಗರಗಿ (Divya Hagaragi) ಮತ್ತೆ ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. PSI ಪರೀಕ್ಷೆ ಅಕ್ರಮದ ಆರೋಪಿ ದಿವ್ಯಾ ಹಾಗರಗಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ. ಮನೆಯಲ್ಲಿ ಇಸ್ಪೀಟ್ ಆಡುತ್ತಿದ್ದಾಗ CCB ದಾಳಿ ಮಾಡಿ ಶಾಕ್ ಕೊಟ್ಟಿದೆ. ದಿವ್ಯಾ ಹಾಗರಗಿ ಮನೆಯಲ್ಲಿ ಗುಂಪು ಕಟ್ಟಿ ಜೂಜಾಟ ಆಡಲಾಗುತ್ತಿತ್ತು. ಸಿಸಿಬಿ ದಾಳಿ ವೇಳೆ 42 ಸಾವಿರ ನಗದು ಜಪ್ತಿ ಮಾಡಲಾಗಿದ್ದು, 6 ಜನರನ್ನು ವಶಕ್ಕೆ ಪಡೆಯಲಾಗಿದೆ. ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರೋ ದಿವ್ಯ ಹಾಗರಗಿ ಮನೆ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ರು. ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ರಾಜು ಲೆಂಗಟಿ, ರವಿ ಮಾನಕರ್, ಭಗವಾನ್, ಸಂಗಮೇಶ ನಾಗನಹಳ್ಳಿ, ಶಿವಶರಣಪ್ಪ, ಮಲ್ಲಿನಾಥ್ ಮಂಗಲಗಿ ಖಾಕಿ ಬಲೆಗೆ ಬಿದ್ದಿದ್ದಾರೆ.

ದಿವ್ಯಾ ಹಾಗರಗಿ – ಯಾರೀಕೆ?

2020ರಲ್ಲಿ ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಸಂದರ್ಭದಲ್ಲಿ ಒಟ್ಟು 545 ಅಭ್ಯರ್ಥಿಗಳ ಪೈಕಿ ಕಲಬುರಗಿ ಜಿಲ್ಲೆಯಿಂದಲೇ 92 ಅಭ್ಯರ್ಥಿಗಳು ಆಯ್ಕೆಯಾಗಿದ್ರು. ಆದ್ರೆ ಇವರಲ್ಲಿ ಅಕ್ರಮವಾಗಿ ಪಾಸ್ ಆದವರು ಎಷ್ಟು ಮಂದಿ ಎಂಬುದರ ಕುರಿತಾಗಿಯೂ ತನಿಖೆ ನಡೆದಿತ್ತು.

ಕಲಬುರಗಿ ಜಿಲ್ಲೆಯ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆ ಬರೆದ ಬರೋಬ್ಬರಿ 11 ಅಭ್ಯರ್ಥಿಗಳು ಪಾಸ್ ಆಗಿದ್ದರು. ಇವರೆಲ್ಲರೂ ಅಕ್ರಮವಾಗಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದಲ್ಲಿ ಇದೇ ದಿವ್ಯಾ ಹಾಗರಗಿ ಭಾಗಿಯಾಗಿದ್ದರು ಎಂದು ಹೇಳಲಾಗಿತ್ತು.

16 ಪಿಎಸ್​ಐಗಳ ನೇಮಕಕ್ಕೆ ದಿವ್ಯಾ ಕಾರಣ?

2016-17ರ ಬ್ಯಾಚ್ ನೇಮಕಾತಿಯಲ್ಲೂ ಅಕ್ರಮವೆಸಗಿರುವ ಆರೋಪ ಕೇಳಿ ಬಂದಿತ್ತು. ಇದೇ ದಿವ್ಯಾ ಹಾಗರಗಿ ಮತ್ತು R.D. ಪಾಟೀಲ್​ ಅವರು ಅಕ್ರಮವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಯಾದಗಿರಿಯ ಶ್ರೀನಿವಾಸ್ ಕಟ್ಟಿ ಅನ್ನೋರು 16 ಅಭ್ಯರ್ಥಿಗಳು ಹಣ ಕಟ್ಟಿ‌ ನೇಮಕವಾಗಿದ್ದಾರೆ ಎಂದು ನೇರವಾಗಿ ಆರೋಪ ಮಾಡಿದ್ರು. ಆ 16 PSIಗಳ ಹೆಸರು, ಮೊಬೈಲ್ ಸಂಖ್ಯೆ ಸಮೇತ ದೂರಿನ ಪತ್ರ ಸಲ್ಲಿಸಿದ್ರು. 2016-17 ಪಿಎಸ್ಐ ಬ್ಯಾಚ್ ನಲ್ಲಿಯೂ ಬ್ಲೂಟೂತ್ ಡಿವೈಸ್ ಮತ್ತು ಪತ್ರಿಕೆ ಸೋರಿಕೆ ಮಾಡಿ ಅಕ್ರಮ ಮಾಡಿದ್ದಾರೆ. ಆಯ್ಕೆ ಡೀಲ್ ಗೆ 16 ಅಭ್ಯರ್ಥಿಗಳು ತಲಾ 40 ಲಕ್ಷ ರೂಪಾಯಿ ನೀಡಿದ್ದಾರೆ ಎಂದು ಸ್ವತಃ ನೊಂದ ಅಭ್ಯರ್ಥಿ ಎಂದು ಕರೆದುಕೊಂಡಿದ್ದ ಯಾದಗಿರಿಯ ಶ್ರೀನಿವಾಸ ಕಟ್ಟಿ ಸಿಎಂಗೆ ದೂರು ನೀಡಿದ್ದರು.
ಇಷ್ಟೆಲ್ಲಾ ಅಕ್ರಮ ಎಸಗಿದ ಆರೋಪ ಹೊತ್ತಿದ್ದ ದಿವ್ಯಾ ಹಾಗರಗಿ ಇದೀಗ ಇಸ್ಪೀಟ್ ಆಡಿಸ್ತಿದ್ರಂತೆ. ಅದರಲ್ಲೂ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷನೂ ಇಸ್ಪೀಟ್ ಆಡ್ತಾ ಇದ್ದ ಅನ್ನೋದು ದುರಂತ.

ಆಳಂದ ಮತಗಳವು ಪ್ರಕರಣಕ್ಕೆ ದೊಡ್ಡ ತಿರುವು: ಅಪಾರ ಪ್ರಮಾಣದ ಕಾಗದ ಪತ್ರಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಕ್ಕೆ ಯತ್ನ
ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತ ಕಳವು ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು, ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಅವರ ನಿವಾಸ ಸೇರಿದಂತೆ ಶುಕ್ರವಾರ ಕಲಬುರಗಿಯ ಹಲವು ಸ್ಥಳಗಳಲ್ಲಿ ಶೋಧ ಕಾರ್ಯವನ್ನು ನಡೆಸಿದ್ದಾರೆ.

ಮಾಜಿ ಶಾಸಕರ ಮನೆ ಮುಂದೆ ಕಾಗದ ಸುಡುವ ಯತ್ನ:

ಆಳಂದದಲ್ಲಿರುವ ಸುಭಾಷ್ ಗುತ್ತೇದಾರ ಅವರ ಮನೆಯ ಎದುರು ಅಪಾರ ಸಂಖ್ಯೆಯ ಮತದಾರರ ಪಟ್ಟಿ ಮತ್ತು ಮತದಾರರ ಚೀಟಿಗಳನ್ನು ಸುಟ್ಟಿರುವುದು ತನಿಖಾ ವೇಳೆ ಪತ್ತೆಯಾಗಿದೆ. ಆಳಂದದ ಆರ್‌ಎಸ್‌ಕೆ ಕಾಲೋನಿಯಲ್ಲಿರುವ ಗುತ್ತೇದಾರ ಅವರ ಮನೆಯ ಮುಂಭಾಗದಲ್ಲಿ ದೊಡ್ಡ ಪ್ರಮಾಣದ ಕಾಗದ ಪತ್ರಗಳ ರಾಶಿಗೆ ಬೆಂಕಿ ಹಚ್ಚಿ ಸುಡಲಾಗಿತ್ತು.

ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ, ಎಸ್‌ಐಟಿ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಅರೆಬರೆ ಸುಟ್ಟ ಈ ಕಾಗದ ಪತ್ರಗಳನ್ನು ಮಿನಿ ಟ್ರಕ್‌ನಲ್ಲಿ ತುಂಬಿಸಿ ಶಕಾಪುರ ಸೇತುವೆ ಸಮೀಪದ ಅಮರ್ಜಾ ನದಿಗೆ ಎಸೆಯಲಾಗಿದೆ.

ಚಾಲಕನ ಬಂಧನ ಹಾಗೂ ಸಾಕ್ಷ್ಯ ವಶ:

ಮಿನಿ ಟ್ರಕ್ ಅನ್ನು ಬೆನ್ನಟ್ಟಿದ ಎಸ್‌ಐಟಿ ಅಧಿಕಾರಿಗಳು ಮತ್ತು ಪೊಲೀಸರು ಅದರ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ನದಿಗೆ ಎಸೆಯಲಾಗಿದ್ದ ಸುಟ್ಟ ಕಾಗದ ಪತ್ರಗಳನ್ನು ಸಹ ತಕ್ಷಣವೇ ಪರಿಶೀಲನೆ ನಡೆಸಿ ವಶಕ್ಕೆ ಪಡೆಯಲಾಗಿದೆ. ಮತ ಕಳವು ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಸಾಕ್ಷ್ಯಗಳನ್ನು ನಾಶಪಡಿಸುವ ಪ್ರಯತ್ನ ಇದಾಗಿದೆಯೇ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ.

ಸಂಘ ಪರಿವಾರ ನಿಷೇಧಕ್ಕೆ ಖರ್ಗೆ ಪತ್ರ: ಮುಸ್ಲಿಮರ ಐ ಲವ್‌ ಮಹಮದ್‌ ಮಾದರಿಯ ಚಳವಳಿ ಮೊರೆ ಹೋದ ಬಲಪಂಥೀಯರು
ಕಲಬುರಗಿ: ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ, ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ವಾಕ್ಸಮರ ಆರಂಭಗೊಂಡಿದೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆ ಅವರ ತವರು ಜಿಲ್ಲೆಯಾದ ಕಲಬುರಗಿಯಲ್ಲೇ ‘ಐ ಲವ್ ಆರ್‌ಎಸ್‌ಎಸ್‌’ ಎಂಬ ಪೋಸ್ಟರ್ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ನೇರ ಸವಾಲನ್ನು ಒಡ್ಡಿದ್ದಾರೆ.

ಮಂಗಳವಾರ ಕಲಬುರಗಿ ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬೀದಿಗಿಳಿದು, ‘ಯಾರು ಭಾರತವನ್ನು ಪ್ರೀತಿಸುತ್ತಾರೋ, ಅವರು ಆರ್‌ಎಸ್‌ಎಸ್‌ ಅನ್ನೂ ಪ್ರೀತಿಸುತ್ತಾರೆ’ ಎಂಬ ಘೋಷವಾಕ್ಯವಿರುವ ಪೋಸ್ಟರ್‌ಗಳನ್ನು ಅಂಟಿಸಿದರು. ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ ಸೇರಿದಂತೆ ಅನೇಕ ಮುಖಂಡರು ಮತ್ತು ಯುವ ಕಾರ್ಯಕರ್ತರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಸಚಿವ ಪ್ರಿಯಾಂಕ್ ಖರ್ಗೆ ಅವರ ನಿಲುವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಬಿಜೆಪಿ ನಾಯಕರ ಆಕ್ರೋಶ

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು, ‘ಸಂಘ ಪರಿವಾರವು ದೇಶಾದ್ಯಂತ ದೇಶಭಕ್ತಿಯನ್ನು ಪಸರಿಸುವ ಮತ್ತು ಯುವಕರಿಗೆ ರಾಷ್ಟ್ರಪ್ರೇಮದ ಪಾಠ ಹೇಳುವ ಸಂಸ್ಥೆಯಾಗಿದೆ. ಇದನ್ನು ಸಚಿವರಿಗೆ ಅರಿಯುವ ಶಕ್ತಿಯಿಲ್ಲವೇ? ಸಂಘದ ಜನ್ಮ ಶತಾಬ್ದಿ ವರ್ಷಾಚರಣೆಯ ಹೊಸ್ತಿಲಲ್ಲಿ ಇಡೀ ದೇಶವೇ ಸಂಭ್ರಮಿಸುತ್ತಿರುವಾಗ, ಪ್ರಿಯಾಂಕ್ ಖರ್ಗೆ ಅವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ’ ಎಂದು ಆಕ್ರೋಶ ಹೊರಹಾಕಿದರು.

ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ರಾಜ್ಯದ ಇತರೆಡೆಯಿಂದಲೂ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ಜಗದೀಶ ಶೆಟ್ಟರ್ ವಾಗ್ದಾಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಜಗದೀಶ ಶೆಟ್ಟರ್ ಅವರು, ‘ಪ್ರಿಯಾಂಕ್ ಖರ್ಗೆ ಅವರಿಗೆ ಆರ್‌ಎಸ್‌ಎಸ್‌ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನವೇ ಜೀರ್ಣವಾಗುವುದಿಲ್ಲ. ಅವರು ತಮ್ಮ ತಂದೆಯ ವರ್ಚಸ್ಸಿನಿಂದ ಮತ್ತು ವಶೀಲಿಯಿಂದ ಮಂತ್ರಿಯಾದವರು. ಇಲ್ಲದಿದ್ದರೆ ಮೊದಲ ಬಾರಿಗೆ ಶಾಸಕರಾದವರಿಗೆ ಮಂತ್ರಿ ಸ್ಥಾನ ಸಿಗಲು ಹೇಗೆ ಸಾಧ್ಯ? ಇವರು ಏನೇ ಮಾಡಿದರೂ ಆರ್‌ಎಸ್‌ಎಸ್‌ ಅನ್ನು ಒಂದು ಕೂದಲನ್ನೂ ಅಲ್ಲಾಡಿಸಲು ಸಾಧ್ಯವಿಲ್ಲ,’ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರತಾಪ್ ಸಿಂಹ ಸವಾಲು: ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ‘ಆರ್‌ಎಸ್‌ಎಸ್ ಅನ್ನು ನಿಷೇಧಿಸುವ ಭ್ರಮೆಯಿಂದ ಹೊರಬನ್ನಿ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಕುಟುಂಬದಿಂದಲೇ ಅದು ಸಾಧ್ಯವಾಗಿಲ್ಲ. ಇನ್ನು ನೆಹರು ಅವರ ಮರಿ ಮೊಮ್ಮಗಳ ಹೆಸರಿಟ್ಟುಕೊಂಡಿರುವ ನಿಮ್ಮಿಂದ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಇದು ಸಾಧ್ಯವಾಗುವುದೇ?’ ಎಂದು ನೇರವಾಗಿ ಪ್ರಶ್ನಿಸುವ ಮೂಲಕ ಕಾಂಗ್ರೆಸ್‌ಗೆ ಇತಿಹಾಸವನ್ನು ನೆನಪಿಸಿದರು.

ಪ್ರವಾಹ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯರಿಂದ ಬೃಹತ್ ಘೋಷಣೆ: NDRF ಜೊತೆಗೆ ಹೆಚ್ಚುವರಿ ₹8,500 ಪ್ಯಾಕೇಜ್!
ಕಲಬುರಗಿ: ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಹ ಮತ್ತು ಬೆಳೆ ಹಾನಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಲಬುರಗಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ವೈಮಾನಿಕ ಸಮೀಕ್ಷೆ ಮತ್ತು ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಹಾಗೂ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಸಿಎಂ, ಕೇಂದ್ರದ NDRF ಪರಿಹಾರದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರ ಪ್ಯಾಕೇಜ್‌ ಘೋಷಿಸಿದರು.

ಪರಿಹಾರಕ್ಕೆ ₹8,500 ಹೆಚ್ಚಳ, ಒಟ್ಟು ಮೊತ್ತದಲ್ಲಿ ಭಾರೀ ಏರಿಕೆ

ಪ್ರವಾಹ ಪೀಡಿತ ರೈತರಿಗೆ ರಾಜ್ಯ ಸರ್ಕಾರವು ಪ್ರತಿ ಹೆಕ್ಟೇರ್‌ಗೆ ₹8,500 ಹೆಚ್ಚುವರಿ ಪರಿಹಾರ ನೀಡಲು ನಿರ್ಧರಿಸಿದೆ. ಈ ಹೆಚ್ಚುವರಿ ಪ್ಯಾಕೇಜ್‌ನಿಂದ ಬೆಳೆ ಹಾನಿ ಪರಿಹಾರದ ಒಟ್ಟು ಮೊತ್ತವು ದುಪ್ಪಟ್ಟಾಗಲಿದೆ.

NDRF ಹಣ ಮತ್ತು ರಾಜ್ಯ ಸರ್ಕಾರದ ಹೆಚ್ಚುವರಿ ಪ್ಯಾಕೇಜ್ ಸೇರಿ ಒಟ್ಟಾರೆಯಾಗಿ ₹2,000 ರಿಂದ ₹2,500 ಕೋಟಿಗೂ ಹೆಚ್ಚು ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಉತ್ತರ ಕರ್ನಾಟಕದಲ್ಲಿ ಶೇ. 95ರಷ್ಟು ಹಾನಿ.

ಸಿಎಂ ಸಿದ್ದರಾಮಯ್ಯ ಅವರು ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿ ನೀಡಿರುವ ಪ್ರಮುಖ ಮಾಹಿತಿ ಮತ್ತು ಸೂಚನೆಗಳು ಇಲ್ಲಿವೆ:

ಬೆಳೆ ಹಾನಿ ಮತ್ತು ಮಳೆ ಪ್ರಮಾಣ

ಬೆಳೆ ಹಾನಿ ಅಂದಾಜು: ರಾಜ್ಯದಲ್ಲಿ ಇದುವರೆಗೆ ಸುಮಾರು 9,60,578 ಹೆಕ್ಟೇರುಗಳಷ್ಟು ಬೆಳೆ ಹಾನಿಯಾಗಿದೆ (8,88,953 ಹೆಕ್ಟೇರ್ ಕೃಷಿ ಬೆಳೆ, 71,624 ಹೆಕ್ಟೇರ್ ತೋಟಗಾರಿಕಾ ಬೆಳೆ). ಪೂರ್ಣ ಪ್ರಮಾಣದ ಸಮೀಕ್ಷೆಯ ನಂತರ ಈ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಶೇ. 95ರಷ್ಟು ಹಾನಿ: ವಿಜಯಪುರ, ಬಾಗಲಕೋಟೆ, ಯಾದಗಿರಿ, ಬೀದರ್, ರಾಯಚೂರು, ಗದಗ, ಕಲಬುರಗಿ, ಧಾರವಾಡ ಸೇರಿ 8 ಜಿಲ್ಲೆಗಳಲ್ಲಿಯೇ 9,03,966 ಹೆಕ್ಟೇರುಗಳಷ್ಟು (ಶೇ. 95ರಷ್ಟು) ಬೆಳೆ ಹಾನಿ ಸಂಭವಿಸಿದೆ.

ಮಳೆಯ ಪ್ರಮಾಣ: ಜೂನ್ 1 ರಿಂದ ಸೆಪ್ಟೆಂಬರ್ 29ರವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ. 4 ರಷ್ಟು ಹೆಚ್ಚಿನ ಮಳೆ (879 ಮಿಮೀ) ಆಗಿದೆ. ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದೆ.

ಪರಿಹಾರ ಮತ್ತು ರಕ್ಷಣೆ

ಸಮೀಕ್ಷೆ: ಸದ್ಯ 5 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಜಂಟಿ ಸಮೀಕ್ಷೆ ಮುಗಿದಿದೆ. ಸಮೀಕ್ಷೆ ಪೂರ್ಣಗೊಂಡ ತಕ್ಷಣ ಹಣ ರೈತರ ಖಾತೆಗಳಿಗೆ ಹೋಗುತ್ತದೆ. ಜಂಟಿ ಸಮೀಕ್ಷೆ ಅತ್ಯಂತ ಸಮರ್ಪಕ ಮತ್ತು ವೈಜ್ಞಾನಿಕವಾಗಿರುವಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ.

ತಾತ್ಕಾಲಿಕ ಕ್ರಮ: ಅಗತ್ಯವಿರುವ ಕಡೆ ತಾತ್ಕಾಲಿಕ ಮತ್ತು ಶಾಶ್ವತ ತಡೆಗೋಡೆಗಳನ್ನು ನಿರ್ಮಿಸಿ ಅನಾಹುತದ ಪ್ರಮಾಣ ತಗ್ಗಿಸಲು ಸೂಚಿಸಲಾಗಿದೆ.

ಮಧ್ಯಂತರ ಅಧಿಸೂಚನೆ: ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು “ಪ್ರಕೃತಿ ವಿಕೋಪದಿಂದ ಆದ ಹಾನಿ” ಎಂದು ಮಧ್ಯಂತರ ಅವಧಿಗೆ ಅಧಿಸೂಚನೆ ಹೊರಡಿಸಲು ಸೂಚನೆ ನೀಡಲಾಯಿತು.

ಸಾರ್ವಜನಿಕ ಸುರಕ್ಷತೆ ಮತ್ತು ಮೂಲಸೌಕರ್ಯ ಕ್ರಮಗಳು

ಶಾಲಾ ಸುರಕ್ಷತೆ: ಪ್ರವಾಹ ಪೀಡಿತ ಗ್ರಾಮಗಳ ಶಾಲೆಗಳ ಫಿಟ್ನೆಸ್ ಪರೀಕ್ಷಿಸುವುದು ಕಡ್ಡಾಯ. ಫಿಟ್ನೆಸ್ ಇಲ್ಲದಿದ್ದರೆ ಶಾಲೆಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

ತಾತ್ಕಾಲಿಕ ಮತ್ತು ಶಾಶ್ವತ ಪರಿಹಾರ: ಪ್ರವಾಹದಿಂದ ಹಾಳಾದ ರಸ್ತೆ, ಸೇತುವೆಗಳ ಸಮೀಕ್ಷೆ ನಡೆಯುತ್ತಿದ್ದು, ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಪ್ರತಿ ಕ್ಷೇತ್ರಕ್ಕೆ ವಿಶೇಷ ಅನುದಾನವಾಗಿ ₹25 ರಿಂದ ₹50 ಕೋಟಿ ಈಗಾಗಲೇ ನೀಡಲಾಗಿದೆ.

ಫಲವತ್ತಾದ ಮಣ್ಣು ರಕ್ಷಣೆ: ಕೃಷಿ ಭೂಮಿಯ ಫಲವತ್ತಾದ ಮಣ್ಣು ಕೊಚ್ಚಿ ಹೋಗಿರುವುದರಿಂದ, ಕೆರೆಗಳಲ್ಲಿರುವ ಫಲವತ್ತಾದ ಹೂಳನ್ನು ತೆಗೆದು ಕೃಷಿ ಭೂಮಿಗೆ ಹಾಕಲು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಕ್ರಮ ಕೈಗೊಳ್ಳಲು ಚರ್ಚಿಸಲಾಯಿತು.

ಆರೋಗ್ಯ ಮತ್ತು ದಾಖಲೆಗಳು: ಅಂತರ್ಜಲ ಕಲುಷಿತಗೊಳ್ಳುವ ಅಪಾಯವಿರುವುದರಿಂದ ನೀರಿನ ಸ್ಯಾಂಪಲ್‌ಗಳನ್ನು ಪರೀಕ್ಷಿಸುವುದನ್ನು ಅಭಿಯಾನದ ರೂಪದಲ್ಲಿ ನಡೆಸಲು ಸೂಚಿಸಲಾಗಿದೆ. ಸಾಂಕ್ರಾಮಿಕ ರೋಗಗಳ ತಡೆಗೆ ಗಮನ ನೀಡಲು ಹಾಗೂ ಕಳೆದುಹೋದ ದಾಖಲೆಗಳನ್ನು ಅಭಿಯಾನದ ರೂಪದಲ್ಲಿ ಒದಗಿಸಲು ಆದೇಶಿಸಲಾಗಿದೆ.

ನೆರವಿಗೆ ಧಾವಿಸಲು ಖಡಕ್ ಸೂಚನೆ

ವಿಮಾ ಕಂಪನಿಗಳು ಮತ್ತು ಬ್ಯಾಂಕರ್‌ಗಳು: ಕೃಷಿ ವಿಮೆಯನ್ನು ಸಮರ್ಪಕವಾಗಿ ಒದಗಿಸುವಂತೆ ವಿಮಾ ಕಂಪನಿಗಳಿಗೆ ಖಡಕ್ ಸೂಚನೆ ನೀಡಬೇಕು. ಜಿಲ್ಲಾಧಿಕಾರಿಗಳು ಬ್ಯಾಂಕರ್‌ಗಳೊಂದಿಗೆ ಚರ್ಚಿಸಿ, ಸಂತ್ರಸ್ತ ರೈತರ ನೆರವಿಗೆ ಧಾವಿಸುವಂತೆ ಸೂಚಿಸಲಾಯಿತು.

ಪರಿಹಾರಕ್ಕೆ ಹಣಕಾಸು: ರಕ್ಷಣೆ ಮತ್ತು ಪರಿಹಾರ ಕಾರ್ಯಗಳ ಹಣಕಾಸಿಗೆ ಕೊರತೆ ಇಲ್ಲ, ಪಿಡಿ ಖಾತೆಯಲ್ಲಿ ಹಣ ಸಂಗ್ರಹವಿದೆ ಎಂದು ಸಿಎಂ ದೃಢಪಡಿಸಿದರು.

ಕೇಂದ್ರಕ್ಕೆ ಮನವಿ: ಮೂಲಭೂತ ಸೌಕರ್ಯಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿ ಆಗಿರುವುದರಿಂದ ರಾಜ್ಯಕ್ಕೆ ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.

ಪ್ರವಾಹದಿಂದ ಕಲಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಟ್ಟಾರೆ 117 ಗ್ರಾಮಗಳು ತೊಂದರೆಗೊಳಗಾಗಿದ್ದು, 80 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಇದುವರೆಗೂ 52 ಮಂದಿ ಮರಣ ಹೊಂದಿದ್ದು, 422 ಜಾನುವಾರುಗಳು ಮೃತಪಟ್ಟಿವೆ. ಮನೆ ಹಾನಿಗಾಗಿ ಒಟ್ಟಾರೆ ₹23.12 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರವಾಹ ಪರಿಹಾರ ವಿತರಣೆ ವಿಳಂಬಕ್ಕೆ ಸೂಚನೆ: ಎಲ್ಲರಿಗೂ ಒಟ್ಟಿಗೆ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ತೀರ್ಮಾನ
ಕಲಬುರಗಿ: ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಹ ಪರಿಹಾರ ಮತ್ತು ಪುನರ್ವಸತಿ ಕುರಿತು ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ಎರಡೂ ಹಂತದ ಹಾನಿಗೆ ಏಕಕಾಲಕ್ಕೆ ಪರಿಹಾರ ವಿತರಣೆ

ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಗೊಂದಲ ತಪ್ಪಿಸಲು ಸಿಎಂ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

“ಸೆಪ್ಟೆಂಬರ್ ಮೊದಲ ವಾರದವರೆಗೂ ಆಗಿರುವ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಮುಗಿದು ಪರಿಹಾರ ವಿತರಣೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಎರಡನೇ ಸುತ್ತಿನ ಬೆಳೆ ಹಾನಿ ಸಂಭವಿಸಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದ ನಂತರ ಆಗಿರುವ ಬೆಳೆ ಹಾನಿಯ ಸಮೀಕ್ಷೆಯನ್ನೂ ಮುಗಿಸಿ ಎಲ್ಲರಿಗೂ ಒಟ್ಟಿಗೇ ಪರಿಹಾರ ವಿತರಣೆ ಮಾಡುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ,” ಎಂದು ಸಿಎಂ ಸ್ಪಷ್ಟಪಡಿಸಿದರು. ಇಲ್ಲದಿದ್ದರೆ ಕೆಲವರಿಗೆ ಮಾತ್ರ ಪರಿಹಾರ ಸಿಕ್ಕಿ, ಉಳಿದವರಿಗೆ ಸಿಗದಿದ್ದರೆ ಗೊಂದಲ ಮತ್ತು ಅನುಮಾನಗಳು ಸೃಷ್ಟಿಯಾಗಬಹುದು ಎಂದು ಅವರು ತಿಳಿಸಿದರು.

ಪ್ರವಾಹ ಇಳಿದ ನಂತರ ವೈಜ್ಞಾನಿಕ ಸಮೀಕ್ಷೆ

ಸದ್ಯ ಪ್ರವಾಹದ ನೀರು ನಿಂತಿಲ್ಲದ ಕಾರಣ ಜಮೀನುಗಳಿಗೆ ಕಾಲಿಡುವ ಪರಿಸ್ಥಿತಿ ಇಲ್ಲ. ಪ್ರವಾಹ ಇಳಿದ ನಂತರ ವೈಜ್ಞಾನಿಕ ಜಂಟಿ ಸಮೀಕ್ಷೆ ನಡೆಸಿ, ತುರ್ತಾಗಿ ಪರಿಹಾರ ಒದಗಿಸಲು ಸರ್ಕಾರ ಸಿದ್ಧವಿದೆ. ಈ ಸಮೀಕ್ಷೆ ಪೂರ್ಣಗೊಂಡ ನಂತರವೇ ಮನೆಗಳು ಸೇರಿದಂತೆ ಎಲ್ಲಾ ಹಾನಿಗಳ ಪೂರ್ಣ ಲೆಕ್ಕ ಸಿಗಲಿದೆ. ಆಗ ಎಲ್ಲಾ ಸಂತ್ರಸ್ತರಿಗೂ ಪರಿಹಾರ ನೀಡಲು ಅನುಕೂಲವಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಅಧಿಕಾರಿಗಳ ನಿಯೋಜನೆ: ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರೆ ಇಲ್ಲದ ಜಿಲ್ಲೆಗಳಿಂದ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ರಸ್ತೆ, ಸೇತುವೆ, ಶಾಲಾ ಕಟ್ಟಡಗಳ ಪರಿಶೀಲನೆ ಕಡ್ಡಾಯ

“ಇತಿಹಾಸದಲ್ಲಿ ಕಂಡು ಕೇಳರಿಯದ ಮಳೆ ಮತ್ತು ಪ್ರವಾಹ” ಇದಾಗಿರುವುದರಿಂದ ಸಂಪರ್ಕ ರಸ್ತೆಗಳು, ಸೇತುವೆಗಳು ಮತ್ತು ಬ್ಯಾರೇಜ್‌ಗಳಿಗೆ ಭಾರಿ ಹಾನಿಯಾಗಿದೆ. ಈ ಬಗ್ಗೆಯೂ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಮಹಾರಾಷ್ಟ್ರದ ಉಜನಿ ಸೇರಿದಂತೆ ಬೇರೆ ಕಡೆಗಳಲ್ಲಿ ಆಗುತ್ತಿರುವ ಮಳೆ ಜೊತೆಗೆ ರಾಜ್ಯದಲ್ಲಿ ಬೀಳುತ್ತಿರುವ ದಾಖಲೆ ಮಳೆ ಅನಾಹುತದ ಪ್ರಮಾಣವನ್ನು ಹೆಚ್ಚಿಸಿದೆ ಎಂದು ಸಿಎಂ ಹೇಳಿದರು.

ಪ್ರವಾಹ ಪೀಡಿತ ಗ್ರಾಮಗಳ ಶಾಲೆಗಳ ಕುರಿತು ಸಿಎಂ ಖಡಕ್ ಸೂಚನೆ ನೀಡಿದರು:

ಶಾಲಾ ಫಿಟ್ನೆಸ್ ಪರಿಶೀಲನೆ: ಪ್ರವಾಹ ಪೀಡಿತ ಗ್ರಾಮಗಳ ಶಾಲೆಗಳ ಫಿಟ್ನೆಸ್ (Fitness) ಪರೀಕ್ಷೆಯನ್ನು ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಪರಿಶೀಲಿಸಬೇಕು.

ಪರ್ಯಾಯ ವ್ಯವಸ್ಥೆ: ಶಾಲಾ ಕಟ್ಟಡಗಳು ಫಿಟ್ನೆಸ್ ಹೊಂದಿಲ್ಲದಿದ್ದರೆ, ತಕ್ಷಣ ಶಾಲೆಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಪುನರ್ವಸತಿಗೆ ಯೋಜನೆ ರೂಪಿಸಿ

ಪದೇ ಪದೇ ಪ್ರವಾಹಕ್ಕೆ ತುತ್ತಾಗುವ ಮತ್ತು ಪುನರ್ವಸತಿ ಕಲ್ಪಿಸಲು ಸಾಧ್ಯವಾಗದ ಗ್ರಾಮಗಳ ಶಾಶ್ವತ ಸ್ಥಳಾಂತರದ ಕುರಿತು ಹಿಂದಿನ ಎಲ್ಲಾ ಇಲಾಖೆಗಳ ಅನುಭವಗಳನ್ನು ಪರಿಗಣಿಸಿ ಸೂಕ್ತ ಯೋಜನೆ ರೂಪಿಸಲು ಸಿಎಂ ಸೂಚಿಸಿದರು.

“ಹಣಕ್ಕೆ ಯಾವುದೇ ಕೊರತೆ ಇಲ್ಲ. ಪಿಡಿ (PD) ಖಾತೆಯಲ್ಲಿ ಹಣದ ಸಂಗ್ರಹವಿದೆ. ತುರ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಿರಂತರವಾಗಿ ನಡೆಸಿ,” ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕುರುಬ ಸಮುದಾಯವನ್ನು ಮತ್ತೆ ಎಸ್‌ಟಿ ಪಟ್ಟಿಗೆ ಸೇರಿಸಲು ಶಿಫಾರಸು: ಸಿಎಂ ಸಿದ್ದರಾಮಯ್ಯ ಘೋಷಣೆ
ಕಲಬುರಗಿ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹಿಂದೆ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು, ಆದರೆ ತಾಂತ್ರಿಕ ತೊಡಕುಗಳ ಕಾರಣದಿಂದ ಕಡತವು ಹಿಂದಕ್ಕೆ ಬಂದಿತ್ತು. ಈಗ ಕೇಂದ್ರ ಸರ್ಕಾರ ಕೇಳಿರುವ ಕೆಲವು ಸ್ಪಷ್ಟೀಕರಣಗಳನ್ನು ಸರಿಪಡಿಸಿ, ಪುನಃ ಕಡತವನ್ನು ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಅಧಿಕಾರ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಇದೆ ಎಂದು ಪುನರುಚ್ಚರಿಸಿದರು.

ಶಿಕ್ಷಣದಿಂದ ಮಾತ್ರ ಸ್ವಾಭಿಮಾನ

ರಾಜ್ಯದಲ್ಲಿ ಶೇ. 7ರಷ್ಟಿರುವ ಕುರುಬ ಸಮುದಾಯವು ಅಕ್ಷರಸ್ಥರಾಗಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು. 1992ರಲ್ಲಿ ತಾವು ಚುನಾವಣೆಯಲ್ಲಿ ಸೋತ ನಂತರ ರಾಜ್ಯಾದ್ಯಂತ ಸುತ್ತಿ ಗುರುಪೀಠ ಮಠವನ್ನು ಕಟ್ಟಿದ್ದರ ಉದ್ದೇಶವೇನು ಎಂಬುದನ್ನು ಅವರು ವಿವರಿಸಿದರು. ಮಠಗಳಿಂದ ಶಿಕ್ಷಣ ಸಂಸ್ಥೆಗಳು ಪ್ರಾರಂಭವಾಗಿ ತಮ್ಮ ಜನಾಂಗವು ಶಿಕ್ಷಣವಂತರಾಗಲಿ ಎಂಬುದೇ ಮುಖ್ಯ ಗುರಿಯಾಗಿತ್ತು ಎಂದರು.

ಈ ಸಂದರ್ಭದಲ್ಲಿ ಕೆಲವು ಟೀಕಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ಈಗ ಯಾರೋ ನಾವು ಮಠ ಕಟ್ಟಿದ್ದೇವೆ ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ. ಅವರೆಲ್ಲ ಡೋಂಗಿಗಳು. ಅವರ ಮಾತನ್ನು ಕಿವಿಗೆ ಹಾಕಿಕೊಳ್ಳಬೇಡಿ. ನಾನು ನಿಮ್ಮ ಜತೆಯಲ್ಲಿ ಸದಾ ಇರುತ್ತೇನೆ,” ಎಂದು ಭರವಸೆ ನೀಡಿದರು.

“ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದೇನೆ. ಶಿಕ್ಷಣ ಪಡೆಯುವುದರಿಂದ ಸ್ವತಂತ್ರರಾಗುತ್ತೀರಿ, ಸ್ವಾಭಿಮಾನಿಗಳಾಗುತ್ತೀರಿ, ಮತ್ತು ನಿಮ್ಮ ಮೇಲೆ ನಡೆಯುವ ದೌರ್ಜನ್ಯವನ್ನು ಎದುರಿಸುವ ತಿಳುವಳಿಕೆ ಬರುತ್ತದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರತ್ಯೇಕ ಸಚಿವಾಲಯ-ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ | ಬೆಳೆಹಾನಿ- ಜಂಟಿಸಮೀಕ್ಷೆಗೆ ಸೂಚನೆ-ವರದಿ ನಂತರ ಪರಿಹಾರ ವಿತರಣೆ-ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ,ಸೆಪ್ಟೆಂಬರ್ 17: ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಇನ್ನೊಂದು ವಾರದಲ್ಲಿ ಸಮೀಕ್ಷಾ ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ನಂತರ ಬೆಳೆಹಾನಿ ಪರಿಹಾರ ವಿತರಿಸಲಾಗುವುದು. ರಾಜ್ಯದಲ್ಲಿ ಒಟ್ಟಾರೆ ಈ ಬಾರಿ ಅದೃಷ್ಟವಶಾತ್ ವಾಡಿಕೆಗಿಂತ ಶೇ.4 ರಷ್ಟು ಮಳೆ ಜಾಸ್ತಿಯಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬೆಳೆ ಹಾನಿ ಹೆಚ್ಚು ಸಂಭವಿಸಿದ್ದು, ಬೆಳೆ ಪರಿಹಾರ ವಿತರಿಸಲಾಗುವುದು. 2024-25 ನೇ ಸಾಲಿನಲ್ಲಿ 656 ಕೋಟಿ ರೂ. ಬೆಳೆವಿಮೆ ಪಾವತಿಯಾಗಿದೆ. ಬೆಳೆವಿಮೆ ಮಾಡಿಕೊಳ್ಳದ ರೈತರಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲಿಸಿ ತೀರ್ಮಾನಿಸಲಾಗುವುದು ಹಾಗೂ ರೈತರ ಬೇಡಿಕೆಯಂತೆ ಸಾಲಮನ್ನಾ ಮಾಡುವ ಬಗ್ಗೆ ಪರೀಶೀಲಿಸಲಾಗುವುದು ಎಂದರು.

ಬ್ಯಾಂಕ್ ದರೋಡೆ-ಮುಂಜಾಗ್ರತಾ ಕ್ರಮಕ್ಕಾಗಿ ಪೊಲೀಸರಿಗೆ ಸೂಚನೆ
ವಿಜಯಪುರದಲ್ಲಿ ಎಸ್.ಬಿ.ಐ ಬ್ಯಾಂಕ್ ದರೋಡೆಯಾಗಿರುವ ಬಗ್ಗೆ ಹಾಗೂ ಬ್ಯಾಂಕ್ ನ ಸುರಕ್ಷತೆ ಬಗ್ಗೆ ಪ್ರತಿಕ್ರಿಯೆ ನೀಡಿ, ಘಟನೆಗೆ ಬಳಸಿದ ಕಾರು ಪತ್ತೆಯಾಗಿದ್ದು, ಕಳ್ಳತನದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಪತ್ತೆಹಚ್ಚುವಂತೆ ಜಿಲ್ಲಾ ಎಸ್ ಪಿ ಗೆ ಸೂಚಿಸಲಾಗಿದೆ ಹಾಗೂ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಜಾಗೃತರಾಗಿರುವಂತೆ ತಿಳಿಸಲು ಸೂಚಿಸಲಾಗಿದೆ. ಬ್ಯಾಂಕಿಗೆ ಸುರಕ್ಷತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವುದು ಆಯಾ ಬ್ಯಾಂಕಿನ ಜವಾಬ್ದಾರಿಯಾಗಿರುತ್ತದೆ. ಪೊಲೀಸರು ಬ್ಯಾಂಕಿಗೆ ಸುರಕ್ಷತೆ ನೀಡುತ್ತಾರೆ. ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.

ಪ್ರವಾಹಕ್ಕೆ ಪರಿಹಾರ
ಕಳೆದ ವರ್ಷ ರಾಜ್ಯದಲ್ಲಿ ಪ್ರವಾಹಪರಿಸ್ಥಿತಿಯ ಬಗ್ಗೆ ಕೇಂದ್ರಕ್ಕೆ ತಡವಾಗಿ ವರದಿ ನೀಡಲಾಗಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರವಾಹಪರಿಸ್ಥಿತಿಯ ವರದಿಯನ್ನು ಕೇಂದ್ರಕ್ಕೆ ಸಕಾಲದಲ್ಲಿಯೇ ನೀಡಲಾಗಿತ್ತು. ಆದರೆ ಕೇಂದ್ರಸರ್ಕಾರವೇ ಈ ಬಗ್ಗೆ ನಿಧಾನ ನಿಲುವು ತಾಳಿದ್ದರಿಂದ, ರಾಜ್ಯ ಸರ್ಕಾರ, ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿ, ಪರಿಹಾರವನ್ನು ಪಡೆದ ಬಗ್ಗೆ ಮುಖ್ಯಮಂತ್ರಿಗಳು ವಿವರಿಸಿದರು.

ಬಿಪಿಎಲ್ ಕಾರ್ಡ್-ಅನರ್ಹರನ್ನು ತೆಗೆದು ಅರ್ಹರನ್ನು ಸೇರಿಸಲು ಸೂಚನೆ
ಅನರ್ಹರ ಬಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಪಿಎಲ್ ಕಾರ್ಡ್ ಇರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅನರ್ಹರನ್ನು ಬಿಪಿಎಲ್ ಕಾರ್ಡ್ ನ ಸೌಲಭ್ಯದಿಂದ ತೆಗೆದುಹಾಕುವಂತೆ ಹಾಗೂ ಅರ್ಹರಿಗೆ ಈ ಸೌಲಭ್ಯವನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ
ರಾಜ್ಯಕ್ಕೆ ನೀಡಲಾಗುವ ಎನ್ ಡಿಆರ್ ಎಪ್ ಪರಿಹಾರವನ್ನು ಹೆಚ್ಚಿಸುವಂತೆ ಕೇಂದ್ರಸರ್ಕಾರವನ್ನು ಹಲವುಬಾರಿ ಕೋರಲಾಗಿದೆ. ಈ ಬಗ್ಗೆ ಕೇಂದ್ರ ವಿತ್ತಸಚಿವರನ್ನು ಹಾಗೂ ಕೇಂದ್ರ ಗೃಹಸಚಿವರನ್ನು ಖುದ್ದು ಭೇಟಿ ಮಾಡಲಾಗಿದ್ದರೂ, ಇದುವರೆಗೂ ಸರ್ಕಾರದ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂದರು.

ಸಿಐಡಿ ತನಿಖೆ ನಡೆಸಲು ಸೂಚನೆ
ಅನ್ನಭಾಗ್ಯದ ಅಕ್ಕಿ ಹೊರದೇಶಕ್ಕೆ ರಫ್ತಾಗುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತಿದ್ದು, ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು.

ಜಾತಿಸಮೀಕ್ಷೆ-ಬಿಜೆಪಿ ರಾಜಕಾರಣ ಮಾಡುತ್ತಿದೆ
ಜಾತಿಸಮೀಕ್ಷೆ ನಮೂನೆಯಲ್ಲಿ ‘ನಾಸ್ತಿಕ’ ಕಾಲಂವನ್ನು ಸೇರಿಸಿರುವ ಬಗ್ಗೆ ಬಿಜೆಪಿಯವರು ಆಕ್ಷೇಪವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಈ ವಿಷಯದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದ್ದು, ರಾಜ್ಯದ ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪರಿಸ್ಥಿಯ ಬಗ್ಗೆ ಸರ್ಕಾರ ತಿಳಿಯಬೇಕಾಗಿದೆ. ಸಮೀಕ್ಷೆ ವರದಿ ಬಂದ ನಂತರ, ಅದರಂತೆ ಸರ್ಕಾರದ ಯೋಜನೆಗಳನ್ನು ಹಮ್ಮಿಕೊಳ್ಳಲು ಅನುಕೂಲವಾಗುತ್ತದೆಂಬ ಉದ್ದೇಶ ಸರ್ಕಾರದ್ದಾಗಿದೆ ಎಂದರು.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಜಾತಿಸಮೀಕ್ಷೆ
ಜಾತಿಸಮೀಕ್ಷೆಯಲ್ಲಿ ಹಿಂದೂ ಜಾತಿಗಳಲ್ಲಿ ಕ್ರಿಶ್ಚಿಯನ್ ನ್ನು ಸೇರಿಸಿರುವುದನ್ನು ವಿರೋಧಿಸಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಶ್ಚಿಯನ್ನರು ಹಾಗೂ ಮುಸಲ್ಮಾನರನ್ನು ಸೇರಿಸಿದಂತೆ ಅಲ್ಪಸಂಖ್ಯಾತರು ಭಾರತದ ಪ್ರಜೆಗಳೇ. ಸಮೀಕ್ಷೆಗೆ 1.75 ಲಕ್ಷ ಶಿಕ್ಷಕರನ್ನು ನಿಯೋಜಿಸಿದ್ದು, ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಅವರು ರಾಜ್ಯದ ಪ್ರತಿ ಮನೆಗೂ ತೆರಳಿ ಮಾಹಿತಿಗಳನ್ನು ಕಲೆಹಾಕಲಿದ್ದಾರೆ. ಸಮೀಕ್ಷಾ ಕಾರ್ಯಕ್ಕೆ ಕಳೆದ ಬಾರಿಗಿಂತ 40 ಸಾವಿರ ಶಿಕ್ಷಕರನ್ನು ಹೆಚ್ಚಾಗಿ ನಿಯೋಜಿಸಲಾಗಿದೆ ಎಂದರು.

ಅಂತಿಮ ನಿರ್ಧಾರ ಕೇಂದ್ರಸರ್ಕಾರದ್ದು
ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸಲು ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಸಮುದಾಯವನ್ನು ಎಸ್ ಟಿ ಗೆ ಸೇರಿಸುವ ಅಂತಿಮ ತೀರ್ಮಾನ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ಈ ಬಗ್ಗೆ ರಾಜ್ಯಸರ್ಕಾರ ಕೇವಲ ಶಿಫಾರಸ್ಸು ಮಾಡಬಹುದಾಗಿರುತ್ತದೆ. ಈ ಬಗ್ಗೆ ಯಾರೂ ಸಹ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ ಎಂದರು.

ಕಲ್ಯಾಣಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ
ಪ್ರತ್ಯೇಕ ಸಚಿವಾಲಯ ಸೃಜಿಸುವ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದ್ದು, ಅಧಿಕಾರಿಗಳನ್ನು ಸಧ್ಯದಲ್ಲಿಯೇ ನೇಮಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಹೊಸ ವೇಗ ದೊರೆಯಲಿದೆ ಎಂದರು.

ಕಲಬುರಗಿಯಲ್ಲಿ ಮಳೆಹಾನಿ: ಜಂಟಿಸಮೀಕ್ಷೆ ನಡೆಸಿ ಬೆಳೆಪರಿಹಾರದ ಬಗ್ಗೆ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ, ಸೆಪ್ಟೆಂಬರ್ 17:ಕಲ್ಬುರ್ಗಿಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಬೆಳೆಹಾನಿಯಾಗಿರುವ ಬಗ್ಗೆ ಜಂಟಿಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ಬೆಳೆಪರಿಹಾದ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಲ್ಬುರ್ಗಿಯ ಮಳೆಬಾಧಿತ ಪ್ರದೇಶಗಳಿಗೆ ಭೇಟಿನೀಡಿ, ಅಲ್ಲಿನ ಬೆಳೆಹಾನಿಯ ಬಗ್ಗೆ ಪರಿಶೀಲನೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ತೊಗರಿ ಗುಲ್ಬರ್ಗಾದಲ್ಲಿ ಪ್ರಮುಖವಾದ ಬೆಳೆ. ಇಲ್ಲಿನ ರೈತರು ಎರಡು ಬಾರಿ ತೊಗರಿ ಬೆಳೆ ತೆಗೆಯಲು ಪ್ರಯತ್ನಿಸಿದರೂ, ಮಳೆಯಿಂದಾಗಿ ಹೊಲದಲ್ಲಿ ನೀರು ನಿಂತ ಕಾರಣ ಹಾಗೂ ನೆಟ್ಟೆ ರೋಗದಿಂದ ಬೆಳೆ ಹಾಳಾಗಿರುವುದಾಗಿ ತಮ್ಮ ಸಮಸ್ಯೆಯನ್ನು ವಿವರಿಸಿದ್ದಾರೆ. ಹೆಚ್ಚಿನ ಮಳೆಯಾಗಿರುವುದರಿಂದ ಸರ್ವೇಯನ್ನೂ ತ್ವರಿತಗತಿಯಲ್ಲಿ ನಡೆಸಲು ಸಾಧ್ಯವಾಗುವುದಿಲ್ಲ. ಆದಾಗ್ಯೂ ಬೆಳೆಹಾನಿಯಾಗಿರುವ ಬಗ್ಗೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆ ಪರಿಹಾರವನ್ನು ನೀಡಲಾಗುವುದು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಉತ್ಸುಕರಾಗಿದ್ದರು: ‌ಯತ್ನಾಳ್
ಕಲಬುರಗಿ: ಒಂದು ಆಘಾತಕಾರಿ ಹೇಳಿಕೆಯಲ್ಲಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಒಂದು ಕಾಲು ಕಾಂಗ್ರೆಸ್‌ನ ಹೊರಗಿದೆ ಮತ್ತು ಅವರು ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಸರ್ಕಾರ ರಚಿಸಲು ರಹಸ್ಯ ಒಪ್ಪಂದ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.

“ಶಿವಕುಮಾರ್ ಮತ್ತು ವಿಜಯೇಂದ್ರ ಅವರು ದೆಹಲಿಯಲ್ಲಿ ಭೇಟಿಯಾಗಿ ರಹಸ್ಯ ಒಪ್ಪಂದ ಮಾಡಿಕೊಂಡಿದ್ದರು. ಅದರ ಪ್ರಕಾರ, ಶಿವಕುಮಾರ್‌ ಅವರು 60-70 ಕಾಂಗ್ರೆಸ್ ಶಾಸಕರ ಬೆಂಬಲ ಪಡೆಯಲು ಯಶಸ್ವಿಯಾದರೆ, ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಮತ್ತು ವಿಜಯೇಂದ್ರ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಆದರೆ, ಹೆಚ್ಚು ಕಾಂಗ್ರೆಸ್ ಶಾಸಕರು ಶಿವಕುಮಾರ್ ಅವರೊಂದಿಗೆ ಇರದ ಕಾರಣ ಈ ಯೋಜನೆ ವಿಫಲವಾಯಿತು” ಎಂದು ಯತ್ನಾಳ್ ಸುದ್ದಿಗಾರರಿಗೆ ತಿಳಿಸಿದರು.

“ದೆಹಲಿಯಲ್ಲಿ ನಡೆದ ಸಭೆಯಲ್ಲಿ, ಶಿವಕುಮಾರ್ ಅವರು 60-70 ಕಾಂಗ್ರೆಸ್ ಶಾಸಕರ ಬೆಂಬಲ ತಮ್ಮಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಬಿಜೆಪಿ ನಾಯಕತ್ವವು ಆಂತರಿಕ ವರದಿಯ ಮೂಲಕ ಅವರ (ಡಿ.ಕೆ.ಎಸ್.) ಬೆಂಬಲಕ್ಕೆ 13 ಶಾಸಕರು ಸಹ ಇಲ್ಲ ಎನ್ನುವುದನ್ನು ತಿಳಿದುಕೊಂಡಿತು” ಎಂದು ಯತ್ನಾಳ್ ಹೇಳಿದರು.