ಕೊಡಗು – Peepal Media

ನಿರ್ಬಂಧದ ನಡುವೆಯೂ ಕೊಡಗು ಪ್ರವೇಶಿಸಿದ ಪುನೀತ್ ಕೆರೆಹಳ್ಳಿಯನ್ನು ಹೊರಗೆ ಓಡಿಸಿದ ಪೊಲೀಸರು
ಮಡಿಕೇರಿ: ಕೊಡಗು ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧವಿದ್ದರೂ, ಕುಶಾಲನಗರಕ್ಕೆ ಆಗಮಿಸಿದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದು ಜಿಲ್ಲೆಯಿಂದ ಹೊರ ಕಳುಹಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ “ನಿರಾಧಾರ ಆರೋಪ” ಮಾಡುತ್ತಿರುವವರನ್ನು ಬಂಧಿಸುವಂತೆ ಆಗ್ರಹಿಸಿ ಕುಶಾಲನಗರದಲ್ಲಿ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪುನೀತ್ ಕೆರೆಹಳ್ಳಿ ಬಂದಿದ್ದರು. ಆದರೆ, ಅವರ ಆಗಮನದ ಮುನ್ಸೂಚನೆ ಪಡೆದ ಪೊಲೀಸರು ಅವರನ್ನು ತಡೆಯಲು ಗಡಿಯಲ್ಲಿ ಕಣ್ಗಾವಲು ಇರಿಸಿದ್ದರು. ಪುನೀತ್ ಕೆರೆಹಳ್ಳಿ ಮೈಸೂರು ಜಿಲ್ಲೆಯ ಬೈಲುಕುಪ್ಪೆಯವರೆಗೆ ಕಾರಿನಲ್ಲಿ ಬಂದು, ನಂತರ ಪೊಲೀಸರ ಕಣ್ತಪ್ಪಿಸಿ ಆಟೋದಲ್ಲಿ ಕುಶಾಲನಗರ ಪ್ರವೇಶಿಸಿದ್ದರು ಎನ್ನಲಾಗಿದೆ.

ಪ್ರತಿಭಟನೆಯ ಸ್ಥಳದಲ್ಲಿ ವೇದಿಕೆ ಏರುತ್ತಿದ್ದಂತೆ ಪೊಲೀಸರು ಅಲ್ಲಿಗೆ ತೆರಳಿ ಜಿಲ್ಲೆಗೆ ಪ್ರವೇಶಿಸದಂತೆ ಇರುವ ನಿರ್ಬಂಧದ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಟ್ಟರು. ಆದರೆ, ಹಿಂದೂ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು ಪುನೀತ್ ಕೆರೆಹಳ್ಳಿಯನ್ನು ಹೊರ ಕಳುಹಿಸುವುದನ್ನು ತೀವ್ರವಾಗಿ ವಿರೋಧಿಸಿದರು.

ಈ ಹಂತದಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಮತ್ತು ಕುಶಾಲನಗರದ ಡಿವೈಎಸ್‌ಪಿ ಚಂದ್ರಶೇಖರ್ ಸೇರಿದಂತೆ ಇತರ ಅಧಿಕಾರಿಗಳು ಮಧ್ಯಪ್ರವೇಶಿಸಿ, ಜಿಲ್ಲಾಧಿಕಾರಿಗಳ ನಿರ್ಬಂಧದ ಆದೇಶವನ್ನು ವಿವರಿಸಿದರು ಮತ್ತು ವೇದಿಕೆಯಿಂದ ಇಳಿಯುವಂತೆ ಸೂಚಿಸಿದರು.

ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದವೂ ನಡೆಯಿತು. ಅಂತಿಮವಾಗಿ, ಪೊಲೀಸರು ಪುನೀತ್ ಕೆರೆಹಳ್ಳಿಯವರ ಮನವೊಲಿಸುವಲ್ಲಿ ಯಶಸ್ವಿಯಾಗಿ, ಅವರನ್ನು ಖಾಸಗಿ ವಾಹನದಲ್ಲಿ ಕುಶಾಲನಗರದಿಂದ ಪಿರಿಯಾಪಟ್ಟಣದ ಕಡೆಗೆ ಕಳುಹಿಸಿಕೊಟ್ಟರು.

ನಾವು ದೃಷ್ಟಿ ಹೀನರಾದರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ: ಕೆ ವಿ ಪ್ರಭಾಕರ್
ಕೊಡಗು ಜು 28: ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.

ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.

ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಸಮಾಜ ವಿಶೇಷ ಗೌರವ ನೀಡುತ್ತದೆ ಮತ್ತು ಸರ್ಕಾರ ವಿಶೇಷ ಸವಲತ್ತುಗಳನ್ನು ಕಲ್ಪಿಸುತ್ತದೆ. ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವೆ ಸೇತುವೆಗಳಾಗಿ ಕೆಲಸ ಮಾಡುತ್ತಾರೆ ಮತ್ತು ಸಮಾಜದ ನೋವುಗಳಿಗೆ ಕನ್ನಡಿ ಹಿಡಿಯುತ್ತಾರೆ ಎನ್ನುವ ಕಾರಣದಿಂದ ಈ ವಿಶೇಷ ಗೌರವ ಮತ್ತು ಸವಲತ್ತು ಸಿಗುತ್ತಿದೆ ಎಂದು ವಿವರಿಸಿದರು.

ಈ ಒಳ ದೃಷ್ಟಿ ಪತ್ರಕರ್ತರಿಗೆ ಇರಬೇಕು. ಈ ಸಮಾಜಮುಖಿ ದೃಷ್ಟಿಯನ್ನು ನಾವು ಕಳೆದುಕೊಂಡರೆ ನಾವು ಸಮಾಜದಲ್ಲಿ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುವ ಜೊತೆಗೆ ನಾವೂ ಹಾಗೇ ಬಿಡುವ ಅಪಾಯವಿದೆ ಎಂದರು.

ಇಂದು ಪತ್ರಿಕಾ ವೃತ್ತಿಯ ಬಗ್ಗೆ ಎರಡು ರೀತಿಯ ಬೇಸರದ ಮಾತುಗಳನ್ನು ಸ್ನೇಹಿತರು ನನ್ನ ಜೊತೆ ಹಂಚಿಕೊಳ್ಳುತ್ತಾರೆ. ಒಂದು, ಈ ವೃತ್ತಿ ಬದುಕು ಸಾಕಾಗಿದೆ ಸರ್. ಬ್ರೇಕಿಂಗ್ ನ್ಯೂಸ್, ಬ್ರೇಕಿಂಗ್ ನ್ಯೂಸ್ ಅಂತ ನಮ್ಮ ಉಸಿರು ಕಟ್ಟುತಾ ಇದೆ ಎನ್ನುವ ಬೇಸರ ಒಂದು ಕಡೆಗಿದೆ. ಮತ್ತೊಂದು ಕಡೆ ಬ್ರೇಕಿಂಗ್ ನ್ಯೂಸ್ ನೆಪದಲ್ಲಿ ಬರುತ್ತಿರುವ ಅಸತ್ಯ ಮತ್ತು ಅರ್ಧ ಸತ್ಯದ ಸುದ್ದಿಗಳಿಂದ ಸಮಾಜದ ಉಸಿರು ಕಟ್ಟುತ್ತಿದೆ ಎನ್ನುವ ಬೇಸರವೂ ಮತ್ತೊಂದು ಕಡೆಗಿದೆ. ಈ ಎರಡೂ ಬೇಸರಕ್ಕೂ ಬೇರೆ ಯಾರೂ ಕಾರಣರಲ್ಲ. ಪತ್ರಿಕೋದ್ಯಮದ ತೇರನ್ನು ಎಳೆಯುತ್ತಿರುವ ನಾವೇ ಕಾರಣಕರ್ತರು ಎನ್ನುವುದನ್ನು ನಾವು ಮರೆಯಬಾರದು ಎಂದರು.

ಏಕೆಂದರೆ ಸಮಾಜದ ಕಷ್ಟಗಳಿಗೆ ಕನ್ನಡಿ ಹಿಡಿಯುತ್ತಿದ್ದ ಪತ್ರಿಕೋದ್ಯಮ, ಈಗ ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಮತ್ತು ಕಾರ್ಪೋರೇಟ್ ಉದ್ಯಮಿಗಳಿಗೆ ಪರವಾಗಿ ಕನ್ನಡಿ ಹಿಡಿಯುತ್ತಿದೆ. ಇಂದು ವ್ಯಕ್ತಿಗತ ದ್ವೇಷ ಮತ್ತು ವೈಯುಕ್ತಿಕ ಬದುಕಿನ ಖಾಸಗಿತನವನ್ನು ಕೆದಕಿ ಕೆದಕಿ ಕಸವನ್ನೇ ಬ್ರೇಕಿಂಗ್ ಸುದ್ದಿಗಳನ್ನಾಗಿಸುತ್ತಿದ್ದೇವೆ.

ನಾವು ಕಸವನ್ನು ಕೆದಕುವಾಗ ನಮಗೆ ಕಸವೇ ಸಿಗುತ್ತದೆ. ನಾವು ಏನನ್ನು ಹುಡುಕುತ್ತೀವೋ ಅದೇ ನಮಗೆ ಸಿಗುತ್ತದೆ. ಇದೇ ಕಸ ಕಣ್ಣಿಗೆ, ಕಿವಿಗೆ ಬಿದ್ದರೆ ಸಮಾಜದಲ್ಲಿ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸಿದಂತಾಗುವುದಿಲ್ಲವೇ ಎನ್ನುವ ಪ್ರಶ್ನೆಯನ್ನು ಪತ್ರಕರ್ತರು ಮಾತ್ರವಲ್ಲ, ಇಂದು ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಮಕ್ಕಳೂ ಕೇಳಿಕೊಳ್ಳಬೇಕಿದೆ ಎಂದರು.

ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಮಕ್ಕಳು ಒಂದು ಮಾತನ್ನು ನೆನಪಿಡಬೇಕು. ನಿಮ್ಮಷ್ಟೇ ಪ್ರತಿಭೆ ಇರುವ, ನಿಮಗಿಂತ ಪ್ರತಿಭೆ ಇರುವ ನಾನಾ ಕ್ಷೇತ್ರಗಳಲ್ಲಿ ಕೆಲಸ ಮಾಡುವವರ ಮಕ್ಕಳು ಹೊರಗಿದ್ದಾರೆ. ಹೆಚ್ಚಿನವರಿಗೆ ಈ ಅವಕಾಶ ಮತ್ತು ಗೌರವ ಪ್ರಾಪ್ತಿ ಆಗುವುದಿಲ್ಲ. ಇಂಥಾ ಅವಕಾಶ ವಂಚಿತ ಮಕ್ಕಳ, ಅವಕಾಶ ವಂಚಿತ ಸಮಾಜದ ರಾಯಭಾರಿಗಳಾಗಿ ನೀವುಗಳು ಬೆಳೆಯಬೇಕಿದೆ ಎಂದು ಕರೆ ನೀಡಿದರು.

ಈ ರೀತಿಯ ಸಮಾಜಮುಖಿ ದೃಷ್ಟಿಕೋನವನ್ನು ನಾವು ಬೆಳೆಸಿಕೊಂಡಾಗ ನಮ್ಮ ಸಾಮಾಜಿಕ ಪ್ರಜ್ಞೆ ಬೆಳಯುತ್ತದೆ. ಈ ಪ್ರಜ್ಞೆ ಬೆಳೆದಾಗ ನೀವು ಸಮಾಜದ ಆಸ್ತಿ ಆಗುತ್ತೀರಿ. ಆಗ ಈ ಸಮಾಜದ ಋಣ ತೀರಿಸಿದಂತಾಗುತ್ತದೆ ಎಂದರು.

ಅಮ್ಮನ‌ ಮಡಿಲು-ಮನುಷ್ಯ ಸಂಬಂಧ ಅಳಿಯಬಾರದು

ತಂತ್ರಜ್ಞಾನ ಬೆಳೆದಂತೆ, ಅವಕಾಶಗಳು ದೊರೆತಂತೆ ಮನುಷ್ಯ ಸಂಬಂಧಗಳು ದುರ್ಬಲವಾಗುತ್ತಿವೆ. ತಾಯಿಯ ಮಡಿಲು, ಅಮ್ಮನ‌ ಕೈ ತುತ್ತು, ಹಳ್ಳಿ ಮನೆ, ಹಸು-ಕುರಿ-ಕೋಳಿ ಸಾಕಾಣೆ ಎಲ್ಲವೂ ದೂರವಾಗುತ್ತಿದೆ. ಕೊನೆಗೆ ಪೋಷಕರ ಜೊತೆಯ ಒಡನಾಟವೂ ಮೊಬೈಲ್ ಗೆ ಸೀಮಿತವಾಗಿ ಮಕ್ಕಳು ವಿದೇಶಕ್ಕೆ ಹೋಗಿ ಕುಳಿತಿರುವ ಪರಿಣಾಮ ಇಲ್ಲಿ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಇವೆಲ್ಲಾ ಆರೋಗ್ಯಕರ ಸಮಾಜದ ಲಕ್ಷಣವೇ ಯೋಚಿಸಿ ಎಂದು ಕರೆ ನೀಡಿದರು.

ಪತ್ರಕರ್ತರ ವಸತಿಗೆ ಯೋಜನೆ

ಈಗಾಗಲೇ ರಾಜ್ಯದ ಪತ್ರಕರ್ತರಿಗೆ ವಸತಿ ಸವಲತ್ತು ಕಲ್ಪಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯದಲ್ಲೇ ಯೋಜನೆ ರೂಪಿಸುವ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಸತಿ ಸಚಿವರ ಮಾಧ್ಯಮ ಸಂಯೋಜಕರಾದ ಲಕ್ಷ್ಮೀನಾರಾಯಣ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಸಂಘದ ರಾಜ್ಯ ಉಪಾಧ್ಯಕ್ಷರಾದ ರಮೇಶ್ ಕುಟ್ಟಪ್ಪ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಕೊಡಗು ಜಿಲ್ಲೆಯಾದ್ಯಂತ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳಗೆ ಜುಲೈ 5 ರವರೆಗೆ ಸಂಚಾರ ನಿಷೇಧ
ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂಧಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ, ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಜೀವ ಮತ್ತು ಆಸ್ತಿಗಳ ಹಿತದೃಷ್ಟಿಯಿಂದ ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ ಮಲ್ಟಿ ಆಕ್ಸಿಲ್ ಟ್ರಿಕ್ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್), ಆಪ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಭಂದಿಸಲು ಉಲ್ಲೇಖಿತ ಪತ್ರಗಳಲ್ಲಿ ವರದಿ ಸಲ್ಲಿಸಿರುತ್ತಾರೆ.

ಕಳೆದ 04-05 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ನೆರೆ ಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿರುತ್ತದೆ. ಸದರಿ ರಸ್ತೆಗಳನ್ನು ಈಗಾಗಲೇ ಮಳೆಹಾನಿ ದುರಸ್ಥಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸ್ತುತ ವರ್ಷದ ಮಳೆಗಾಲ ಸಹ ಪ್ರಾರಂಭವಾಗಿರುತ್ತದೆ. ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಭಾರೀ ವಾಹನ ಸಂಚಾರದಿಂದ ರಸ್ತೆಗೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಾಗೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಭಾರೀ ಸರಕು ವಾಹನಗಳ ಸಂಚಾರವನ್ನು ನಿಷೇದಿಸುವುದು ಸೂಕ್ತವಾಗಿರುತ್ತದೆ.

ಕೊಡಗು ಜಿಲೆಯಲ್ಲಿ ಕಳೆದ 4-5 ವರ್ಷಗಳ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ – ಸಾರ್ವಜನಿಕ ಆಸ್ತಿ – ಪಾಸ್ತಿಗಳಿಗೆ ಹಾನಿಯಾಗಿರುತ್ತದೆ. ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿರುತ್ತದೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ – ಪಾಸ್ತಿಗಳ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಈ   ಆದೇಶ  ಮಾಡಲಾಗಿದೆ ಎಂದು ಜಿಲ್ಲಾದಿಕಾರಿ ವೆಂಕಟರಾಜಾ ತಿಳಿಸಿದ್ದಾರೆ.  .

ನಿರ್ಭಂದಿತ ವಾಹನಗಳು:-
1) ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು
2) ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು
3) ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು / ಆಲ್ಬಕ್ಯೂಲೇಟೆಡ್ ವಾಹನಗಳು
ಮರಳು ಸಾಗಾಣಿಕೆ ವಾಹನಗಳು 4) ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು
5) ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು / ಆಲ್ಬಕ್ಯೂಲೇಟೆಡ್ ವಾಹನಗಳು

ನಿರ್ಭಂದದಿಂದ ವಿನಾಯಿತಿ ನೀಡಿದ ವಾಹನಗಳು
1) ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು
2) ಹಾಲು ಪೂರೈಕೆ ವಾಹನಗಳು
3) ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು
4) ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್ಗ ಸೇರಿದಂತೆ)

ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷದ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ  ಸೂಚಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ಕೊಡಗು ಮಾಂದಲ್‌ಪಟ್ಟಿ ಪ್ರಾಕೃತಿಕ ತಾಣದ ಅಭಿವೃದ್ಧಿಗೆ ಸರ್ಕಾರ ಗ್ರೀನ್‌ ಸಿಗ್ನಲ್
ಮಡಿಕೇರಿ: ಕೊಡಗಿನ ಪ್ರವಾಸಿ ತಾಣಗಳ ಪೈಕಿ ಪ್ರಾಕೃತಿಕ ಸೌಂದರ್ಯದಿಂದ ಶ್ರೀಮಂತವಾಗಿರುವ ಮಡಿಕೇರಿ ತಾಲ್ಲೂಕಿನ ಮಾಂದಲಪಟ್ಟಿ ಪ್ರಾಕೃತಿಕ ತಾಣಕ್ಕೆ ಕೊನೆಗೂ ಅಭಿವೃದ್ಧಿ ಯೋಗ ಒದಗಿ ಬಂದಿದೆ.ಕರ್ನಾಟಕ ಸರ್ಕಾರದ ಒಂದು ಜಿಲ್ಲೆ ಒಂದು ತಾಣ ಯೋಜನೆ ಅಡಿಯಲ್ಲಿ ಅಭಿವೃದ್ಧಿಗಾಗಿ ಗುರುತಿಸಲಾದ ಸ್ಥಳಗಳ ಪೈಕಿ ಮಾಂದಲ್ ಪಟ್ಟಿಯೂ ಸ್ಥಾನ ಪಡೆದುಕೊಂಡಿದ್ದು, ಇಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಯೋಜನೆಗಳ ಬಗ್ಗೆ ರೂಪರೇಷೆ ಸಿದ್ಧವಾಗುತ್ತಿದೆ. ಪ್ರವಾಸೋದ್ಯಮ ಇಲಾಖೆಯ ಮುತುವರ್ಜಿಯಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ.

ದೇಶದ ಪ್ರಮುಖ ಪ್ರವಾಸಿತಾಣವಾಗಿ ಕೊಡಗು ಗುರುತಿಸಿಕೊಂಡಿದ್ದು, ಇಲ್ಲಿನ ಪ್ರಕೃತಿ ಸೌಂದರ್ಯ ಸವಿಯಲು ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ. ವಾರಾಂತ್ಯ ಮತ್ತು ಇತರ ರಜಾ ದಿನಗಳಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ಹೋಗುತ್ತವೆ. 2018ರ ಪ್ರಾಕೃತಿಕ ದುರಂತ ಮತ್ತು ನಂತರದ ಬೆಳವಣಿಗೆಗಳು ಆರಂಭದಲ್ಲಿ ಸ್ವಲ್ಪ ಮಟ್ಟಿಗೆ ಪ್ರವಾಸೋದ್ಯಮದ ಮೇಲೆ ಹೊಡೆತ ನೀಡಿದ್ದರೂ ನಂತರದ ದಿನಗಳಲ್ಲಿ ಸಂಪೂರ್ಣ ಚೇತರಿಸಿಕೊಂಡಿದೆ.ಮಾಂದಲ್‌ ಪಟ್ಟಿಯಲ್ಲಿನ ಅದ್ಭುತ ಪ್ರಕೃತಿ ಸೌಂದರ್ಯ ಭಟ್ಟರ ಸೂಪರ್ ಹಿಟ್ ಸಿನಿಮಾ ‘ಗಾಳಿಪಟ’ದಲ್ಲಿ ಮುಗಿಲ್‌ಪೇಟೆ ಎಂದು ಗುರುತಿಸಿಕೊಂಡು ಪ್ರಸಿದ್ಧಿಗೆ ಬಂದಿರುವ ಸ್ಥಳವೇ ಮಾಂದಲ್‌ ಪಟ್ಟಿ. ನಂತರ ಹಲವು ಸಿನಿಮಾಗಳಲ್ಲೂ ಇಲ್ಲಿಯ ಅದ್ಭುತ ಪ್ರಾಕೃತಿಕ ಸೌಂದರ್ಯವನ್ನು ಸೆರೆ ಹಿಡಿಯಲಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಮಾಂದಲ್‌ ಪಟ್ಟಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಯಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬರುತ್ತಿದೆ.

ಮಡಿಕೇರಿಯಿಂದ ಸುಮಾರು 20 ಕಿಲೋ ಮೀಟರ್ ದೂರದಲ್ಲಿರುವಮಾಂದಲ್‌ ಪಟ್ಟಿ ಪುಷ್ಪ ಗಿರಿ ವನ್ಯಜೀವಿ ವಲಯಕ್ಕೆ ಸೇರಿದೆ. 2024-29ರ ಕರ್ನಾಟಕ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗಿದ್ದು, ಪ್ರವಾಸೋದ್ಯಮ ಇಲಾಖೆಯಿಂದ
ನೂತನ ಪ್ರವಾಸಿ ತಾಣಗಳನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಪಡೆಯುವ ಮೂಲಕ ಗುರುತಿಸಲಾಗುತ್ತಿದೆ. ಅಲ್ಲದೆ ಅವುಗಳ ಅಭಿವೃದ್ಧಿಗೆ ಆಯವ್ಯಯದಲ್ಲಿ ಇಲಾಖೆಗೆ ಒದಗಿಸುವ ಅನುದಾನದ ಲಭ್ಯತೆಗೆ ಅನುಗುಣವಾಗಿ ಪ್ರವಾಸಿ ತಾಣಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ತೆಗೆದು ಕೊಳ್ಳಲಾಗಿದೆ. ಇದರ ಜತೆಗೆ ಸಮಗ್ರ ಅಭಿವೃದ್ಧಿಗಾಗಿ ಪ್ರತಿ ಜಿಲ್ಲೆಯಲ್ಲೂ ಒಂದು ಜಿಲ್ಲೆ ಒಂದು ತಾಣ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಕೊಡಗು ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ಬೀತಿ ಜಿಲ್ಲಾಡಳಿತ ಎಚ್ಚರಿಕೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದೆ,ಜೊತೆಗೆ ಮಳೆಯೂ ಆಗುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಆತಂಕ ಎದುರಾಗಿದ್ದು, ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಜಿಲ್ಲೆಯಲ್ಲಿ ಕಳೆದ ತಿಂಗಳು ವಿಪರೀತ ಬಿಸಿಲು ಕಾಣಿಸಿಕೊಂಡಿತ್ತು. ಇದೀಗ ವಾತಾವರಣ ಬದಲಾಗಿದ್ದು, ಬಿಸಿಲಿನೊಂದಿಗೆ ಸಂಜೆ ಸಮಯದಲ್ಲಿ ಮಳೆಯಾಗುತ್ತಿದೆ. ಮಳೆಯ ನೀರು ಅಲ್ಲಲ್ಲಿ ಸಂಗ್ರಹವಾಗುವುದರಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಸಾಂಕ್ರಾಮಿಕ ರೋಗಗಳ ತಡೆಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಜಿಲ್ಲೆಯಾದ್ಯಂತ ಲಾರ್ವಾ ಉತ್ಪತ್ತಿ ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಸೊಳ್ಳೆಗಳ ಸಂತತಿ ಹೆಚ್ಚಾಗದಿರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆಯಿಂದ ಮಾಡಲಾಗುತ್ತದೆ.ಕಳೆದ ವರ್ಷ ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಡೆಂಗ್ಯು ಪ್ರಕರಣಗಳು ಪತ್ತೆಯಾಗಿದ್ದವು. ಸುಂಟಿಕೊಪ್ಪ, ಸಿದ್ದಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚು ಕಾಣಿಸಿಕೊಂಡಿದ್ದವು. ಆದರೆ ಈ ಬಾರಿ ಈ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದ್ದು, ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಂದೇ ಒಂದು ಡೆಂಗ್ಯು ಪ್ರಕರಣ ವರದಿಯಾಗಿದೆ.

ಬೇಸಿಗೆ ಬಿಸಿಲಿನ ಝಳದಿಂದ ಬಳಲಿಕೆ ಉಂಟಾಗುವುದು ಮಾತ್ರವಲ್ಲದೆ, ನಿಧಾನವಾಗಿ ಕಾಯಿಲೆಗಳೂ ಬರಲಾರಂಭಿಸಿವೆ. ಸೂಕ್ತ ರೀತಿಯಲ್ಲಿ ಮುಂಜಾಗ್ರತೆ ವಹಿಸದೇ ಹೋದರೆ ಖಾಯಿಲೆ ಮತ್ತಷ್ಟು ಹರಡುವ ಸಾಧ್ಯತೆ ಇದೆ.ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 492 ಮಂದಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಇವರೆಲ್ಲ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದೇ ತಾವೇ ಸ್ವಯಂ ಆರೈಕೆ ಮಾಡಿಕೊಂಡು, ಔಷಧ ಅಂಗಡಿಗಳಲ್ಲಿ ತಾವೇ ಮಾತ್ರೆ ಖರೀದಿಸಿ ಬಳಸಿ ಸುಧಾರಿಸಿಕೊಂಡವರೂ ಬಹಳ ಮಂದಿ ಇದ್ದಾರೆ. ಹೀಗಾಗಿ ಬೇಸಿಗೆಯ ಸಂದರ್ಭ ಆಹಾರ, ಪರಿಸರ ಸ್ವಚ್ಛತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಆರೋಗ್ಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಸಾಮಾನ್ಯವಾಗಿ ಬೇಸಿಗೆ ಸಮಯದಲ್ಲಿ ಆಹಾರ ಕಲುಷಿತಗೊಳ್ಳುವುದೂ ಅಧಿಕ. ಬೇಸಿಗೆ ವೇಳೆ ಸೊಳ್ಳೆಗಳು ಮಾತ್ರವಲ್ಲ ನೊಣಗಳೂ ಅಧಿಕ ಸಂಖ್ಯೆಯಲ್ಲಿ ವೃದ್ಧಿಯಾಗುತ್ತವೆ. ರೋಗವಾಹಕಗಳೆಂದೇ ಗುರುತಿಸಲಾಗುವ ಇವುಗಳು ಚರಂಡಿ ಸೇರಿದಂತೆ ಕಲುಷಿತ ನೀರು ಮತ್ತು ಕಲುಷಿತ ವಸ್ತುಗಳ ಮೇಲೆ ಕುಳಿತು ನಂತರ ಆಹಾರ ಪದಾರ್ಥಗಳ ಮೇಲೂ ಕುಳಿತು ರೋಗಾಣುಗಳನ್ನು ಅತ್ಯಂತ ಸುಲಭವಾಗಿ ಹರಡುತ್ತವೆ. ಹಾಗಾಗಿ, ಈ ವೇಳೆ ಅತಿ ಎಚ್ಚರ ವಹಿಸುವುದು ಒಳಿತು ಎಂಬುದು ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆಯಾಗಿದೆ.

ಬೇಸಿಗೆಯಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ

ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು. ತೆರೆದಿಟ್ಟ ಆಹಾರ ಪದಾರ್ಥಗಳನ್ನು ಸೇವಿಸಬಾರದು. ಆಹಾರ ಪದಾರ್ಥಗಳನ್ನು ಜಿರಲೆ, ನೊಣಗಳಿಂದ ರಕ್ಷಿಸುವ ಸಲುವಾಗಿ ಮುಚ್ಚಿಡಬೇಕು. ವಾಂತಿ, ಭೇದಿ ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ಬಿಸಿ ಇರುವ ಆಹಾರವನ್ನೇ ಸೇವಿಸಬೇಕು. ಮೀನು, ಮಾಂಸವನ್ನು ಸಮರ್ಪಕವಾಗಿ ಬೇಯಿಸಿ ತಿನ್ನಬೇಕು. ತಾಜಾ, ಮೀನು, ಮಾಂಸಾಹಾರವನ್ನೇ ಸೇವಿಸಬೇಕು. ಸೊಳ್ಳೆ, ನೊಣಗಳಿಂದ ರಕ್ಷಿಸಿಕೊಳ್ಳಬೇಕು. ಎಳನೀರು, ಒಆರ್‌ಎಸ್, ತಾಜಾ ಹಣ್ಣಿನ ರಸ, ಮಜ್ಜಿಗೆಯನ್ನು ಸೇವಿಸಬೇಕು. ವಾಂತಿ ಭೇದಿ ಕಾಣಿಸಿಕೊಂಡಾಗ ಮೂಢನಂಬಿಕೆಗಳನ್ನು ಅನುಸರಿಸದೆ ವೈದ್ಯರ ಸಲಹೆ ಪಡೆಯಬೇಕು. ಬೇಸಿಗೆಯಲ್ಲಿ ವಾಂತಿ ಭೇದಿಯಂತಹ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅಲ್ಲದೆ ಈಗ ಬಿಸಿಲಿನ ಜತೆ ಮಳೆಯೂ ಬೀಳುತ್ತಿರುವುದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತದೆ. ಹೀಗಾಗಿ ಆರೋಗ್ಯ ಇಲಾಖೆ ಡೆಂಗ್ಯು ಮತ್ತಿತರ ರೋಗಗಳು ಹರಡದಂತೆ ಎಚ್ಚರ ವಹಿಸುತ್ತಿದೆ. ಜನರು ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಮನೆ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು.

– ಡಾ. ಕೆ. ಎಂ. ಸತೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತ
ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ.

ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು.

ಭಾರೀ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ನೀರು ನದಿಯಂತೆ ಹರಿದಿದ್ದು, ದ್ವಿಚಕ್ರ ವಾಹನ ಸವಾರರ ಪಾಡು ಹೇಳತೀರದಂತಾಗಿತ್ತು.

ಇನ್ನು ಧಾರಾಕಾರ ಮಳೆಯಿಂದ ವಿದ್ಯುತ್‌ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಡಗು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಕೊಡಗಿನ ಪೊನ್ನಂಪೇಟೆಯಲ್ಲಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ
ಕೊಡಗು, ಮಾರ್ಚ್ 28: ಕೊಡಗು ಜಿಲ್ಲೆಯ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ದಂಪತಿ, ತಾಯಿ ಮತ್ತು ಮಗಳನ್ನು ಮಾರಕಾಸ್ತ್ರದಿಂದ ದಾಳಿ ಮಾಡಿ ಭೀಕರವಾಗಿ ಕೊಲೆಗೈದ ಘಟನೆ ನಡೆದಿದೆ.

ಪೊನ್ನಂಪೇಟೆ ಠಾಣೆ ವ್ಯಾಪ್ತಿಯ ಬೇಗೂರು ಗ್ರಾಮದ ನಿವಾಸಿಗಳಾದ ಕರಿಯ (75), ಗೌರಿ (70) ದಂಪತಿ ಹಾಗೂ ಅವರ ಮಗಳು ನಾಗಿ (30) ಮತ್ತು ಮೊಮ್ಮಗಳು ಕಾವೇರಿ (5) ಈ ದುರ್ಘಟನೆಯಲ್ಲಿ ಕೊಲೆಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆಯೊಳಗೆ ಜಗಳವೊಂದು ಉಂಟಾಗಿ, ಈ ನಾಲ್ವರ ಮೇಲೆ ಕತ್ತಿಯಿಂದ ತೀವ್ರವಾಗಿ ದಾಳಿ ನಡೆಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರು ಗಿರೀಶ್ ಎಂಬಾತ ಈ ಕೊಲೆಯನ್ನು ನಡೆಸಿ ಪರಾರಿಯಾಗಿದ್ದಾನೆ ಎಂದು ಶಂಕಿಸಿದ್ದು, ಆತನನ್ನು ಬಂಧಿಸಲು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮತ್ತು ಪೊನ್ನಂಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿರುವ ಪೊಲೀಸರು, ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೌಟುಂಬಿಕ ವೈಮನಸ್ಸು ಅಥವಾ ಆರ್ಥಿಕ ಸಂಬಂಧಗಳು ಈ ಭೀಕರ ಕೃತ್ಯಕ್ಕೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಬಳಿಕ ಘಟನೆಯ ನಿಖರ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.

ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಯ ಶೋಧಕ್ಕಾಗಿ ಸತತ ಪ್ರಯತ್ನ ನಡೆಸುತ್ತಿದ್ದಾರೆ. ಈ ಘಟನೆಯು ಕೊಡಗಿನ ಶಾಂತಿಪ್ರಿಯ ಪ್ರದೇಶದಲ್ಲಿ ಆತಂಕವನ್ನು ಉಂಟುಮಾಡಿದೆ.

ಹಲಸಿನ ಹಣ್ಣು ಕಿತ್ತಿದ್ದಕ್ಕಾಗಿ ದಲಿತನ ಯುವಕನ ಕೊ*
ಕೊಡಗು, ಜ.01 : ಯರವ ಸಮುದಾಯದ (ಪರಿಶಿಷ್ಟ ಪಂಗಡ) 23 ವರ್ಷದ ಯುವಕನನ್ನು ತನ್ನ ತೋಟದಿಂದ ಹಲಸಿನ ಹಣ್ಣು ಕೀಳುತ್ತಿದ್ದ ಎಂಬ ಕಾರಣಕ್ಕಾಗಿ ತೋಟದ ಮಾಲೀಕ ಗುಂಡಿಕ್ಕಿ ಕೊಂದಿದ್ದಾನೆ. ಡಿಸೆಂಬರ್ 27 ರಂದು ಕೊಡಗು ಜಿಲ್ಲೆಯ ಕರ್ನಾಟಕದ ಚೆಂಬೆಬೆಳ್ಳೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮೃತ ಪಣಿಯೆರವರ ಮೊನ್ನಣ್ಣ ಎಂಬ ಹುಡುಗ ʼಪೊರುಕೊಂಡ ಚಿನ್ನಪ್ಪ ಎಂಬುವರ ಒಡೆತನದ ಕಾಫಿತೋಟದಲ್ಲಿ ಕಾರ್ಮಿಕನಾಗಿದ್ದ. ಹಾಲಸು ಕಿತ್ತಿದ್ದಕ್ಕಾಗಿ ಚಿನ್ನಪ್ಪ ಜಾತಿ ನಿಂದನೆ ಮಾಡಿ ನಂತರ ತನ್ನ ಡಬಲ್‌ ಬ್ಯಾರೆಲ್‌ ಶಾಟ್ ಗನ್‌ ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಎನ್ನಾಲಗಿದೆ.

ಎಫ್‌ ಐ ಆರ್‌ ಪ್ರಕಾರ ಪೊನ್ನಣ್ಣ ಮತ್ತು ಆತನ ಪತ್ನಿ ಗೀತ ಕೆಲಸ ಮುಗಿದ ಮೇಲೆ ಅದೇ ತೋಟದಲ್ಲಿ ಹಲಸಿನ ಹಣ್ಣು ಕೀಳುತ್ತಿದ್ದಾಗ ಚಿನ್ನಪ್ಪ ಡಬಲ್‌ ಬ್ಯಾರೆಲ್‌ಶಾಟ್‌ ಗನ್‌ ನೊಂದಿಗೆ ಬಂದು ಜಾತಿ ನಿಂದನೆ ಮಾಡಿ ಗುಂಡು ಹಾರಿಸಿದ್ದಾರೆ. ಇದರಿಂದ ಮರದಿಂದ ಕೆಳಗೆ ಬಿದ್ದ ಪೊನ್ನಣ್ಣನಿಗೆ ತೀರ್ವ ಗಾಯಗಳಾಗಿವೆ. ಚಿನ್ನಣ್ಣ ಅಲ್ಲಿಂದ ನಿರ್ಗಮಿಸಿದ ಮೇಲೆ ತೋಟದ ಮಾಲೀಕ ಪೋರುಕೊಂಡ ಬನ್ಸಿ ಪೂಣಚ್ಚ ಅವರು ಪೊನ್ನಣ್ಣನನ್ನು ಆಸ್ಪತ್ರೆಗೆ ಕರೆದೊಯ್ದರು ಆದರೆ ಆಸ್ಪತ್ರೆಗೆ ಸೇರುವ ಮೊದಲೇ ಪೊನ್ನಣ್ಣ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸರು ಚಿನ್ನಪ್ಪನನ್ನು ಬಂಧಿಸಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿ ಇರಿಸಿದ್ದಾರೆ.

ಚಿನ್ನಪ್ಪನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103(1) (ಕೊಲೆ), ಪರಿಷ್ಕೃತ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(2)(v) (ಎಸ್‌ಸಿ/ಎಸ್‌ಟಿ ವ್ಯಕ್ತಿಯ ವಿರುದ್ಧದ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮತ್ತು ಸೆಕ್ಷನ್ 3 (ಪರವಾನಗಿ ಇಲ್ಲದೆ ಬಂದೂಕು ಒಯ್ಯುವುದು) ಮತ್ತು ಸೆಕ್ಷನ್ 25 (ಅಪರಾಧಗಳಿಗೆ ಶಿಕ್ಷೆ ಭಾರತೀಯ ಶಸ್ತ್ರಾಸ್ತ್ರ ಕಾಯಿದೆ) ಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದೇ ವೇಳೆ ಸಿಪಿಐ(ಎಂಎಲ್) ಮುಖಂಡರು ಹಾಗೂ ಆದಿವಾಸಿ ಸಂಘರ್ಷ ಮೋರ್ಚಾದ ಸದಸ್ಯರು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಜಿಲ್ಲಾ ಐಟಿಡಿಪಿ ಅಧಿಕಾರಿ ಹೊನ್ನೇಗೌಡ ಅವರನ್ನು ಭೇಟಿ ಮಾಡಿ ಪೊನ್ನಣ್ಣ ಕುಟುಂಬಕ್ಕೆ ಹಾಗೂ ಯರವ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಬೇಡಿಕೆಗಳ ಪಟ್ಟಿಯನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಚಿನ್ನಪ್ಪನ ಶಿಕ್ಷೆಗೆ ತ್ವರಿತ ತನಿಖೆ ಮತ್ತು ವಿಚಾರಣೆ ಹಾಗೂ ಪೊನ್ನಣ್ಣನ ಕುಟುಂಬಕ್ಕೆ ರೂ 20 ಲಕ್ಷ ಪರಿಹಾರ, ಪೊನ್ನಣ್ಣನ ಪತ್ನಿ ಗೀತಾಗೆ ಸರ್ಕಾರಿ ಉದ್ಯೋಗ, ಕುಟುಂಬಕ್ಕೆ ವಸತಿ ಮತ್ತು ಪೊನ್ನಣ್ಣನ ಕಿರಿಯ ಸಹೋದರನಿಗೆ ಶಿಕ್ಷಣದ ಬೆಂಬಲ ನೀಡಬೇಕು ಎಂಬು ಭೇಡಿಕೆಯನ್ನು ಇಟ್ಟಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ʼದ ನ್ಯೂಸ್‌ ಮಿನಿಟ್‌ʼ ನಲ್ಲಿ ಸುದ್ದಿ ಪ್ರಕಟವಾಗಿದ್ದು ಹೆಚ್ಚನ ಮಾಹಿತಿಗಳು ಇನ್ನಷ್ಟು ಬರಬೇಕಿದೆ.

ಕೊಡಗಿನಲ್ಲಿ ಪತ್ತೆಯಾದ 9 ನೇ ಶತಮಾನದ 69 ಶಾಸನಗಳ ನಕಲು ಕಾರ್ಯ ಪೂರ್ಣ
ಮಡಿಕೇರಿ: ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಹೊಸದಾಗಿ ಪತ್ತೆಯಾದ ಶಿಲಾ ಶಾಸನಗಳನ್ನು ನಕಲು ಮಾಡುವ ಕೆಲಸ ಇದೀಗ ಪೂರ್ಣಗೊಂಡಿದೆ.

2023 ರಲ್ಲಿ ಪ್ರಾರಂಭವಾದ ಸಮೀಕ್ಷೆಯಲ್ಲಿ ಪುರಾತತ್ವ, ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯುರೇಟರ್ ಬಿಪಿ ರೇಖಾ ಅವರು ಈ ಶಾಸನಗಳ ಪತ್ತೆಯನ್ನು ಬಿಎಲ್ ರೈಸ್ ನಂತರ ಕೊಡಗಿನಲ್ಲಿ ನಡೆದ ಅತಿದೊಡ್ಡ ಕಾರ್ಯ ಎಂದು ಕರೆದಿದ್ದಾರೆ.

ಬಿಎಲ್ ರೈಸ್ ಅವರು ಕೊಡಗಿನಲ್ಲಿ ದೊರೆತ 114 ಶಿಲಾ ಚಪ್ಪಡಿ ಶಾಸನಗಳ ಪ್ರತಿಲೇಖನವನ್ನು 1886 ರಲ್ಲಿ ‘ಎಪಿಗ್ರಾಫಿಯಾ ಕರ್ನಾಟಕ’ದಲ್ಲಿ ಪ್ರಕಟಿಸಿದ್ದರು. ಬಿ.ಪಿ.ರೇಖಾ ಅವರು ಇತ್ತೀಚೆಗೆ 69 ಶಾಸನಗಳನ್ನು ಕಂಡುಕೊಂಡಿದ್ದಾರೆ.

ಮೈಸೂರಿನ ಶಾಸನ ತಜ್ಞ ಎಚ್.ಎಂ.ನಾಗರಾಜರಾವ್ ಅವರು ಶಾಸನಗಳ ಪ್ರತಿಲೇಖನವನ್ನು ಸಿದ್ಧಪಡಿಸಿದ್ದು, ಕುತೂಹಲಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. ಉದಾಹರಣೆಗೆ ಕ್ರಿ.ಶ.9ನೇ ಶತಮಾನಕ್ಕೆ ಸೇರಿದ ನಿಲುವಾಗಿಲು ಗ್ರಾಮದಲ್ಲಿ ದೊರೆತಿರುವ ಶಾಸನದಲ್ಲಿ ಇಂದು ಕಾಣಸಿಗದ ವಾಸಂತಿ ದೇವಾಲಯದ ಬಗ್ಗೆ ಉಲ್ಲೇಖವಿದೆ.

9 ನೇ ಶತಮಾನದ ಎಡವಾರೆ ಗ್ರಾಮದಲ್ಲಿ ಕಂಡುಬರುವ ಮತ್ತೊಂದು ಶಾಸನದಲ್ಲಿ, ಸ್ವರ್ಗಕ್ಕೆ ಏರಿದ ವೆಂಡಿ ಎಂಬ ವ್ಯಕ್ತಿಯ ಬಗ್ಗೆ ಉಲ್ಲೇಖವಿದೆ. ಅವನನ್ನು ‘ಕಲಿಯುಗದ ಬ್ರಹ್ಮ’ ಎಂದು ಶಾಸನವು ಉಲ್ಲೇಖಿಸುತ್ತದೆ.

ಕನಕಸೇನಯ್ಯ ಎಂಬ ವ್ಯಕ್ತಿ ತನ್ನ ಗುರುವಿನ ಸ್ಮರಣಾರ್ಥ ವಿರಾಜಪೇಟೆಯ ಕಡು ಎಂಬಲ್ಲಿ ‘ನಿಶಿಧಿ’ ಶಾಸನವನ್ನು ಸ್ಥಾಪಿಸಿದ್ದ. ಹೀಗೆ ಜೈನ ಧರ್ಮಕ್ಕೆ ಸಂಬಂಧಿಸಿದಂತೆ ಹಲವಾರು ಶಾಸನಗಳಿವೆ.

ಕ್ರಿ.ಶ. 11-12 ನೇ ಶತಮಾನದಷ್ಟು ಹಿಂದಿನ ಶಿರಂಗಾಲದಲ್ಲಿ ಪತ್ತೆಯಾದ ಶಾಸನವು ಆ ಪ್ರದೇಶವನ್ನು ‘ಸಿರಿವಂಗಲ’ ಎಂದು ಉಲ್ಲೇಖಿಸುತ್ತದೆ. ಅಲ್ಲದೆ, ಕಾವೇರಿ ನದಿ ಮತ್ತು ಸಿರಿಯಮ್ಮ ಮತ್ತು ಕಾವ ಗೌಡ ಎಂಬ ವ್ಯಕ್ತಿಗಳ ಉಲ್ಲೇಖಗಳಿವೆ.

ಕೆಲವು ಶಾಸನಗಳು ಕ್ರಿ.ಶ.8ನೇ ಶತಮಾನದಷ್ಟು ಹಿಂದಿನವು. ರಾಜೇಂದ್ರ ಚೋಳನಿಗೆ ಸಂಬಂಧಿಸಿದ ಶಾಸನವೊಂದು ಸೀಗೆಹೊಸೂರಿನಲ್ಲಿ ದೊರೆತಿದ್ದು, ಇದು ಕೊಡಗಿನವರೆಗೆ ಅರಸರ ಸಾಮ್ರಾಜ್ಯ ವಿಸ್ತರಿಸಿತ್ತು ಎಂಬ ಅಂಶವನ್ನು ಎತ್ತಿ ತೋರಿಸುತ್ತದೆ.

ಮೃತ್ಯುಂಜಯ ದೇವಸ್ಥಾನದಲ್ಲಿ ಒಂದು ಶಾಸನವು ಕಂಡುಬಂದಿದ್ದು, ಇದು ‘ವಂಗಲ’ ಸ್ಥಳವನ್ನು ಉಲ್ಲೇಖಿಸುತ್ತದೆ. ಬಸವನಹಳ್ಳಿಯ ಮತ್ತೊಂದು ಅಪರೂಪದ ಶಾಸನದಲ್ಲಿ ಕೊಂಗಾಳ್ವದ ಬಡಿವರ ಉಲ್ಲೇಖವಿದೆ. ಇದು ಕೊಂಗಾಳ್ವರ ಬಗ್ಗೆ ಲಭ್ಯವಿರುವ ಅಪರೂಪದ ಶಾಸನವಾಗಿದೆ.

69 ಶಾಸನಗಳ ನಕಲು ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಬಿ.ಪಿ.ರೇಖಾ ತಿಳಿಸಿದರು. ಇವುಗಳ ವಿವರವಾದ ಅಧ್ಯಯನವು ಇತಿಹಾಸದ ಮೇಲೆ ಹೆಚ್ಚು ಬೆಳಕು ಚೆಲ್ಲುತ್ತದೆ.

ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳನ್ನು ಸಿಬಿಐಗೆ ಒಪ್ಪಿಸಿ: ಸಂಸದ ಯದುವೀರ್ ಆಗ್ರಹ
ಮಡಿಕೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಯನ್ನು ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಲೋಕಸಭೆ ಎಂಪಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗುರುವಾರ ಒತ್ತಾಯಿಸಿದರು.

ಮಡಿಕೇರಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ಹಗರಣದಲ್ಲಿ ಭಾಗಿಯಾಗದಿದ್ದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ವಹಿಸಲಿ. ಆರೋಪ ಎದುರಿಸುತ್ತಿರುವವರು ಆಡಳಿತದಲ್ಲಿ ಮುಂದುವರಿಯುವ ಮುನ್ನ ಸಿಬಿಐ ತನಿಖೆ ಎದುರಿಸಿ ದೋಷಮುಕ್ತ ಎನ್ನಿಸಿಕೊಳ್ಳಬೇಕು ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಸಂಸದ ಯದುವೀರ್, ಮುಡಾ ಸಂಸ್ಥೆಯನ್ನು ಹಿಂದಿನ ಮೈಸೂರು ಸಂಸ್ಥಾನದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನಿವೇಶನಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಆದರೆ, ಇಂದು ಪ್ರಾಧಿಕಾರ ಶ್ರೀಮಂತರಿಗೆ ನಿವೇಶನ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.