ಮೈಸೂರು – Peepal Media

ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ: ಮುಖ್ಯಮಂತ್ರಿ‌ ಸಿದ್ದರಾಮಯ್ಯ
ಮೈಸೂರು, ಜನವರಿ 26: ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ಅವಕಾಶವಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಿಳಿಸಿದರು.

ಅವರು‌ ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಮಾಧ್ಯಮದವರ ಜೊತೆ ಮಾತನಾಡಿದರು.‌

ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ಕೌಶಲ್ಯವಿರುವ ಮಾನವ ಸಂಪನ್ಮೂಲ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದರು.

ಸರ್ಕಾರ ಕೊಟ್ಟಿರುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ ಇದೆ
ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ವರದಿ ನೀಡಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿದ್ಯಮಾನಗಳ ಬಗ್ಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ ಎಂದರು.

ಕರ್ನಾಟಕದ ಸ್ತಬ್ಧಚಿತ್ರ ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ
ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಕ್ಕೆ ಪತ್ರ ವ್ಯವಹಾರವೆಲ್ಲಾ ಆಗಿದ್ದರೂ, ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ ಎಂದರು.

ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ

ನಿನ್ನೆ ನಡೆದ ಜೆಡಿಎಸ್ ಸಮಾವೇಶದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕಾನೂನಿನ ಪ್ರಕಾರ ಪ್ರಜ್ವಲ್ ರೇವಣ್ಣ ಅವರ ಬಂಧನವಾಗಿದ್ದು ಸರ್ಕಾರ ಅದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಇದೊಂದೇ ಪ್ರಕರಣವಲ್ಲ.ಯಾವುದೇ ಪ್ರಕರಣದಲ್ಲಿಯೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದರು. ಅಧಿಕಾರಿಗಳಿಗೆ ಸರ್ಕಾರ ಬಹುಮಾನ ಕೊಟ್ಟಿಲ್ಲ.ಅದೆಲ್ಲಾ ಸುಳ್ಳು ಎಂದರು. ನಮಗೂ ಸಮಯ ಬರುತ್ತದೆ ಎಂದು ಹೆಚ್. ಡಿ.ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಅವರು ಯಾವ ಸಂದರ್ಭದಲ್ಲಿ ಹೇಳುತ್ತಾರೆ ಎಂದು ಗೊತ್ತಿಲ್ಲ. 17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ ಎಂದು ಪ್ರಶ್ನಿಸಿದರು. ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದೇ ಇಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ. 2028 ಕ್ಕೂ ನಾವೇ ಅಧಿಕಾರಕ್ಕೆ ಬರುವುದು ಎಂದು ಸಿಎಂ ಭರವಸೆ ವ್ಯಕ್ತಪಡಿಸಿದರು. ಜಿಡಿಎಸ್ ಮತ್ತು ಬಿಜೆಪಿಯವರು ಮೈತ್ರಿ ಮಾಡಿಕೊಂಡರು ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಫೆಬ್ರವರಿಯಿಂದ ಬಜೆಟ್ ಕುರಿತ ಸಭೆ

ಬಜೆಟ್ ಸಭೆಗಳು ಫೆಬ್ರವರಿಯಿಂದ ಪ್ರಾರಂಭವಾಗುತ್ತದೆ ಎಂದರು .

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಜನವರಿ 13:ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು.

ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಗೊಂದಲವಿಲ್ಲ

ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು.

ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದರು.

ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ

ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದರು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಿದ್ಧ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಬಿಜೆಪಿ ಜೆಡಿಎಸ್ ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಮಾರ್ಚ್ ಮೊದಲ ವಾರದಲ್ಲಿ ಬಜೆಟ್

ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನಿಗೆ ಉತ್ತರಿಸಿದರು.

ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ನಡೆಸುವ ಬಗ್ಗೆ ಚಿಂತನೆ

ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಎಚ್. ಡಿ.ಕುಮಾರಸ್ವಾಮಿ ವರ್ತನೆಯನ್ನು ಗಮನಿಸುವುದಿಲ್ಲ

ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ರಾಜ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಈಗ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು , ಕ್ರಿಯಾಶೀಲರಾಗಿದ್ದಾರೆ. ಅವರ ವರ್ತನೆ, ಹಾವಭಾವ ಇವುಗಳನ್ನು ಮಾಧ್ಯಮಗಳೇ ಗಮನಿಸಬೇಕು ನಾವು ಗಮನಿಸುವುದಿಲ್ಲ ಎಂದರು.

ಬಳ್ಳಾರಿಯನ್ನು ಲೂಟಿ ಮಾಡಿದ ಬಿಜೆಪಿಯವರ ಪಾದಯಾತ್ರೆ ಹಾಸ್ಯಾಸ್ಪದ: ಸಚಿವ ಡಾ. ಎಚ್.ಸಿ. ಮಹದೇವಪ್ಪ ಟೀಕೆ
ಮೈಸೂರು: ಬಿಜೆಪಿಯ ಆಡಳಿತಾವಧಿಯಲ್ಲಿ ಬಳ್ಳಾರಿಯ ಸಂಪತ್ತು ಯಾರ ಪಾಲಾಗಿತ್ತು ಮತ್ತು ಅಲ್ಲಿನ ಪರಿಸ್ಥಿತಿ ಹೇಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಈಗ ಆರೋಪಿಗಳೇ ಪಾದಯಾತ್ರೆ ಮತ್ತು ಸಮಾವೇಶ ಮಾಡುತ್ತೇವೆ ಎನ್ನುವುದು ಅತ್ಯಂತ ಹಾಸ್ಯಾಸ್ಪದ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಲೇವಡಿ ಮಾಡಿದ್ದಾರೆ.

ಬಳ್ಳಾರಿ ಘಟನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿರುವ ಕುರಿತು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ರಾಜಕೀಯ ಪ್ರೇರಿತ ಯಾತ್ರೆಗಳಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.

ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರಕ್ಕೆ ಕಿರಣ್ ಮಜುಂದಾರ್ ಶಾ ಸೇರಿದಂತೆ ಹಲವರ ವಿರೋಧದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಕರ್ನಾಟಕದಲ್ಲಿ ನೆಲೆಸಿರುವ ಕಂಪನಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಲೇಬೇಕು. ಒಂದು ವೇಳೆ ಕನ್ನಡಿಗರ ಹಿತಾಸಕ್ತಿಯನ್ನು ಕಡೆಗಣಿಸಿದರೆ ಮುಂದೇನು ಮಾಡಬೇಕೋ ಅದನ್ನು ಸರ್ಕಾರ ಮಾಡಲಿದೆ” ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ (ನರೇಗಾ) ಯೋಜನೆಗೆ ತಿದ್ದುಪಡಿ ತರುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಈ ವಿಚಾರದಲ್ಲಿ ಯಾರೇ ಬಂದರೂ ಚರ್ಚೆಗೆ ನಾವು ಸಿದ್ಧರಿದ್ದೇವೆ. ಬಡವರ ಹಕ್ಕುಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷವು ‘ನರೇಗಾ ಬಚಾವೋ’ ಆಂದೋಲನವನ್ನು ಹಮ್ಮಿಕೊಳ್ಳುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಮುರುಘಾ ಶ್ರೀ ನಿರ್ದೋಷಿ – ಕೋರ್ಟ್‌ ತೀರ್ಪುನ ವಿರುದ್ಧ ಒಡನಾಡಿ ಸ್ಟಾನ್ಲಿ ಅಸಮಾಧಾನ
ಮೈಸೂರು : ಪೋಕ್ಸೊ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಯನ್ನು (Murugha Shree) ನಿರ್ದೋಷಿ ಎಂದು 2 ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಈ ಬೆನ್ನಲ್ಲೇ ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟಾನ್ಲಿ (Odanadi Stanley) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋರ್ಟ್ ತೀರ್ಪಿ‌ನ ಬಗ್ಗೆ ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸ್ಟಾನ್ಲಿ, ಈ ತೀರ್ಪನ್ನು ನಾವು ಎಂದಿಗೂ ನಿರೀಕ್ಷಿಸಿರಲಿಲ್ಲ. ಇದು ಹಣ ಮತ್ತು ಅಧಿಕಾರದ ಜಯವಲ್ಲವಾ? ದುಡ್ಡಿದ್ದರೆ, ಪವರ್ ಇದ್ದರೆ ಗೆದ್ದುಕೊಂಡು ಬರಬಹುದು ಎಂಬ ಸಂದೇಶವನ್ನು ಈ ತೀರ್ಪು ನೀಡುತ್ತದೆ. ಆರೋಪಿಗಳು ಕುಣಿದಾಡುತ್ತಾ ಹೊರಗೆ ಬಂದರೆ ಅವರಿಗೆ ನೈತಿಕ ಧೈರ್ಯ ತುಂಬುತ್ತದೆ, ಆದರೆ ನೊಂದ ಮಕ್ಕಳಿಗೆ ಧೈರ್ಯ ಕುಗ್ಗುತ್ತದೆ ಎಂದು ಕಿಡಿಕಾರಿದರು.

ಏನಿದು ಪ್ರಕರಣ?: ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲದೆ ಇತರೆ ಮಕ್ಕಳ ಮೇಲೂ ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಠದಲ್ಲಿನ ಅಡುಗೆ ಕೆಲಸದ ಮಹಿಳೆ ದೂರಿನಲ್ಲಿ ವಿವರಿಸಿದ್ದರು. ಇದರ ಆಧಾರದಡಿ ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ 2022ರ ಅಕ್ಟೋಬ‌ರ್ 13ರಂದು ಎಫ್‌ಐಆ‌ರ್ ದಾಖಲಿಸಲಾಗಿತ್ತು. ತದನಂತರ ಈ ದೂರನ್ನು ಚಿತ್ರದುರ್ಗ ಗ್ರಾಮೀಣ ಠಾಣೆಗೆ ವರ್ಗಾಯಿಸಲಾಗಿತ್ತು.

ಎಫ್‌ಐಆರ್‌ನಲ್ಲಿ ಆರೋಪಿ ಶರಣರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 376 (ಸಿ), 376 (2) (ಎನ್), 376 , 376 (3), 366, 366 (2), 323, 114 2 34, 5 (2), 6,7 2 17, ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ ಸೆಕ್ಷನ್ 3 (ಎಫ್ ಮತ್ತು 7 ಹಾಗೂ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ಸಂರಕ್ಷಣೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಇಬ್ಬರು ಸಂತ್ರಸ್ತೆಯರು ಇರುವ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದರು

ಕಲಿತ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ನವೆಂಬರ್ 11: ನಾವು ಕಲಿಯುವ ವಿದ್ಯೆ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ರೀತಿಯಲ್ಲಿರಬೇಕು. ಇಲ್ಲದಿದ್ದರೆ ಸಾಕ್ಷರರಾಗಿ ಪ್ರಯೋಜನೆವಿಲ್ಲ. ಶಿಕ್ಷಣ ವೈಚಾರಿಕತೆ ಹಾಗೂ ವೈಜ್ಞಾನಿಕತೆಯಿಂದ ಕೂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ ಯೋಜಿಸಿದ್ದ ಸಂಘದ ಪ್ರಥಮ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ದೇವರಾಜು ಅರಸು ಮತ್ತು ಹಾವನೂರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಬಿಸಿಎಂ ಹಾಸ್ಟೆಲ್ಗಳಲ್ಲಿ ಓದಿರುವವರಿಗೆ ಉಚಿತ ಶಿಕ್ಷಣ, ಆಹಾರ, ವಸತಿಗಳು ದೊರೆತಿದ್ದು, ಸರ್ಕಾರ ಹಿಂದುಳಿದ ವರ್ಗದ ಮಕ್ಕಳು, ಬಡವರ ಮಕ್ಕಳು ವಿದ್ಯಾವಂತರಾಬೇಕೆಂಬ ಉದ್ದೇಶದಿಂದ ಹಾಸ್ಟೆಲ್ಗಳನ್ನು ತೆರೆದು, ಪ್ರವೇಶ ನೀಡಿ ಓದಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇಲ್ಲಿ ಓದಿದವರು ಉನ್ನತ ಹುದ್ದೆಗೆ ಏರಿದ್ದಾರೆ, ಕೆಲವರು ಇತರೆ ಉದ್ಯೋಗ ಮಾಡುತ್ತಿದ್ದಾರೆ. ಶಿಕ್ಷಣ ಬಹಳ ಮುಖ್ಯ. ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಶಿಕ್ಷಣದ ಪ್ರಮಾಣ ಶೇ 10-12% ಮಾತ್ರವಿತ್ತು ಇಂದು ಶೇ 78% ರಷ್ಟು ಏರಿದೆ ಎಂದರು. ಶಿಕ್ಷಣದ ಪ್ರಮಾಣ ಶೇ 100 ರಷ್ಟು ಆಗಬೇಕಿದೆ ಎಂದರು.

ಎಲ್ಲರನ್ನೂ ಸಮಾನರಾಗಿ ಕಾಣಬೇಕು

ಜಾತಿ, ವರ್ಗ ರಹಿತ ವ್ಯವಸ್ಥೆ ನಿರ್ಮಾಣ, ಮೂಢನಂಬಿಕೆ ತೊಲಗಬೇಕು ಎಂದು 850 ವರ್ಷಗಳ ಹಿಂದೆಯೇ ಬಸವಣ್ಣ ಹೇಳಿದ್ದರು. ನಾವು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವುದು ಬಹಳ ಮುಖ್ಯ. ನಮ್ಮ ದೇಶದಲ್ಲಿ ಅನೇಕ ಧರ್ಮ ಮತ್ತು ಜಾತಿಗಳಿವೆ. ಎಲ್ಲ ಧರ್ಮಗಳೂ ಪರಸ್ಪರರನ್ನು ಪ್ರೀತಿಸಬೇಕು ಎಂದು ಹೇಳುತ್ತದೆಯೇ ಹೊರತು ಪರಸ್ಪರರನ್ನು ದ್ವೇಷಿಸಿ ಎಂದು ಹೇಳುವುದಿಲ್ಲ. ಎಲ್ಲರನ್ನೂ ಸಮಾನರಾಗಿ ಕಾಣಬೇಕು. ಕನಿಷ್ಠ ಪಕ್ಷ ವಿದ್ಯಾವಂತರಾದರೂ ಇದನ್ನು ಪಾಲಿಸಬೇಕು ಎಂದರು.

ಸಹಬಾಳ್ವೆ, ಪರಧರ್ಮ ಸಹಿಷ್ಣುತೆ ರಬೇಕು ಎಂದು ಸಂವಿಧಾನ ಹೇಳುತ್ತದೆ. ಇದು ಇದ್ದರೆ ದ್ವೇಷಿಸುವ ಪ್ರಮೇಯ ಇರುವುದಿಲ್ಲ. ಸತ್ಯ ತಿಳಿದೂ ಅಸತ್ಯವನ್ನೇ ಅಭ್ಯಾಸ ಮಾಡಿಕೊಳ್ಳಬಾರದು. ಹಿಂದೆ ಒಮ್ಮೆ ನನ್ನ ಕಾರಿನ ಮೇಲೆ ಕಾಗೆ ಕೂತಿದ್ದಕ್ಕೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ. ಈ ಬಾರಿ ಬಜೆಟ್ ಮಂಡಿಸುವುದಿಲ್ಲ ಎಂದೆಲ್ಲಾ ಟಿವಿ ವಾಹಿನಿಗಳಲ್ಲಿ ಹೇಳಿದ್ದರು. ಕಾಗೆ ಕೂತಿದ್ದು ಅನಿಷ್ಟ ಎಂದರು. ಇದಾದ ನಂತರ ಬಜೆಟ್ ಮಂಡಿಸಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದೇನೆ. ಈ ಬಾರಿ ಮುಖ್ಯಮಂತ್ರಿಯಾಗಿ ಎರಡೂವರೆ ವರ್ಷಗಳಾಯಿತು ಎಂದರು.

ಪ್ರೊ. ರವಿವರ್ಮಕುಮಾರ್ ಮದುವೆಯಾಗಿದ್ದು ರಾಹು ಕಾಲದಲ್ಲಿ. ಅವರು ಉತ್ತಮ ವಕೀಲರಾಗಿ ಎತ್ತರಕ್ಕೆ ಬೆಳೆದಿದ್ದಾರೆ. ದೇವರಾಜ ಅರಸು ಹಾಗೂ ಹಾವನೂರು ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದ್ದೇವೆ ಎಂದರು.

ಸಮಾಜದ ಋಣ ತೀರಿಸಿದಾಗ ಮಾತ್ರ ಸರ್ವತೋಮುಖವಾಗಿ ಅಭಿವೃದ್ಧಿ ಸಾಧ್ಯ

ಸರ್ಕಾರ ಶಿಕ್ಷಣವನ್ನು ಉಚಿತವಾಗಿ ನೀಡುತ್ತಿದ್ದು, ಕೆಲಸಕ್ಕೆ ಸೇರಿದ ಮೇಲೆ ಸಮಾಜಕ್ಕೆ ಹಿಂತಿರುಗಿ ಏನಾದರೂ ಕೊಡಬೇಕು. ಸಮಾಜದ ಋಣವನ್ನು ತೀರಿಸಬೇಕು . ನಾನು ಕಾನೂನು ಪದವಿ ಓದಿದ್ದರಲ್ಲಿ ಸಮಾಜದ ಋಣವೂ ಇದೆ. ಅದನ್ನು ತೀರಿಸಿದಾಗ ಮಾತ್ರ ಸಮಾಜ ಸರ್ವತೋಮುಖವಾಗಿ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು.

ಗುಲಾಮಗಿರಿಯಿಂದ ಹೊರಬಂದು ಸ್ವಾಭಿಮಾನ ಬೆಳೆಸಿಕೊಳ್ಳಬೇಕು

ರಾಜ್ಯದಲ್ಲಿ 3,88,000 ವಿದ್ಯಾರ್ಥಿಗಳು ಹಾಸ್ಟೆಲ್ ಗಳಲ್ಲಿ ವಿದ್ಯೆ ಪಡೆಯುತ್ತಿದ್ದಾರೆ. ಈಗ ಮೈಸೂರು ನಗರದಲ್ಲಿ 6500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸು ಅವರುಹಿಂದುಳಿದ ವರ್ಗಗಳಿಗೆ ಸಾಮಾಜಿಕವಾಗಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಶಕ್ತಿ ತುಂಬಿದರು. ಆದ್ದರಿಂದ ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದೇ ಖ್ಯಾತರಾಗಿದ್ದರು. 2013 ರ ನಮ್ಮ ಅವಧಿಯಲ್ಲಿಯೂ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಈ ಬಾರಿಯೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಸಮಾಜದಲ್ಲಿನ ಅಸಮಾನತೆಯನ್ನು ತೊಡೆದುಹಾಕುವ ಪ್ರಯತ್ನ ಮಾಡಲಾಗುತ್ತಿದೆ. ಸಮಾಜದ ಹಿಂದುಳಿದವರು ಗುಲಾಮಗಿರಿ ಮನಸ್ಥಿತಿಯಿಂದ ಹೊರಬಂದು ಸ್ವಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು.

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಬಲ

ಗ್ಯಾರಂಟಿ ಯೋಜನೆಗಳಿಂದ ದುರ್ಬಲವರ್ಗದವರಿಗೆ ಆರ್ಥಿಕ ಬಲ ಹೆಚ್ಚುವ ಜೊತೆಗೆ ಸಮಾಜದಲ್ಲಿ ಸಮಾನತೆ ತರಲು ಸಾಧ್ಯವಾಗುತ್ತದೆ. ಹಿಂದುಳಿದ ವರ್ಗಗಳ ಇಲಾಖೆಗೆ ಪ್ರಸ್ತುತ 3,500 ಕೋಟಿ ನೀಡಲಾಗುತ್ತಿದೆ. ಈ ಹಿಂದೆ ಅಕ್ಷರ ಸಂಸ್ಕೃತಿಯಿಂದ ಜನರನ್ನು ವಂಚಿಸಲಾಗುತ್ತಿದ್ದು, ಸಮಾನ ಅವಕಾಶಗಳನ್ನು ನೀಡಲಾಗುತ್ತಿರಲಿಲ್ಲ. ಆದ್ದರಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಾರ್ಥಕವಾಗಿ ಬದುಕಿ,ಸಮಾಜದ ಋಣವನ್ನು ತೀರಿಸಬೇಕು ಎಂದರು.

ರಾಜ್ಯದಲ್ಲಿ ಕನ್ನಡದ ವಾತಾವರಣ ಸೃಷ್ಟಿಯಾಗಲಿ

ಇಂದು ಕನ್ನಡ ರಾಜ್ಯೋತ್ಸವವನ್ನೂ ಆಚರಿಸಲಾಗಿದೆ. ನಾವೆಲ್ಲರೂ ಕನ್ನಡದಲ್ಲಿಯೇ ವ್ಯವಹರಿಸುತ್ತೇವೆ ಎಂಬ ಶಪಥ ಕೈಗೊಳ್ಳಬೇಕು. ಬೆಂಗಳೂರಿನಲ್ಲಿ ಕನ್ನಡ ಮಾತನಾಡುವುದು ವಿರಳವಾಗುತ್ತಿದೆ. ಆದ್ದರಿಂದ ಕನ್ನಡದ ವಾತಾವರಣ ಸೃಷ್ಟಿಸಿ, ಕನ್ನಡ ಕಲಿಕೆ ಎಂಬುದು ಅನಿವಾರ್ಯವಾಗುತ್ತದೆ. ಬ್ಯಾಂಕುಗಳೂ ಸೇರಿದಂತ ಸಾರ್ವಜನಿಕ ಸಂಸ್ಥೆಗಳು, ಜನರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಕರ್ನಾಟಕದ ಏಕೀಕರಣಕ್ಕಾಗಿ ಅನೇಕ ಮಹನೀಯರು ಕೊಡುಗೆ ನೀಡಿದ್ದು, ಕನ್ನಡ ರಾಜ್ಯೋತ್ಸವದಂದು ಅವರನ್ನು ಸ್ಮರಿಸಿಕೊಳ್ಳಬೇಕು. ಕನ್ನಡವನ್ನು ಮಾತನಾಡುವ ಜೊತೆಗೆ ಬೇರೆ ಭಾಷೆಯನ್ನು ಕಲಿಯಬಹುದಾದರೂ, ನಾವೆಲ್ಲರೂ ಕನ್ನಡಿಗರಾಗಿರಬೇಕು ಎಂದರು.

ಮೆಕ್ಕೆಜೋಳ ಆಮದು ನಿಲ್ಲಿಸುವಂತೆ ಕೇಂದ್ರಕ್ಕೆ ಒತ್ತಾಯ | ಮೆಕ್ಕೆಜೋಳದ ಬೆಲೆಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ನೆರವು-ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ನವೆಂಬರ್ 21: ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರದಿಂದ 70 ಲಕ್ಷ ಮೆ.ಟನ್ ಮೆಕ್ಕೆಜೋಳ ಆಮದು

ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400 ರೂ.ಗಳ ಎಂಎಸ್ ಪಿ ದರ ನಿಗದಿಯಾಗಿದ್ದು, ಇದುವರೆಗೆ ಖರೀದಿ ಕೇಂದ್ರ ಪ್ರಾರಂಭವಾಗಿಲ್ಲ. ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ರೈತರು ಒತ್ತಾಯಿಸುತ್ತಿದ್ದಾರೆ. ಆದ್ದರಿಂದ ಮೆಕ್ಕೆ ಜೋಳದ ಖರೀದಿ ಬಗ್ಗೆ ಸಂಬಂಧಪಟ್ಟ ಸಚಿವರು , ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಮಾರುಕಟ್ಟೆಯಲ್ಲಿ ಮೆಕ್ಕೆ ಜೋಳದ ಬೆಲೆ ಕುಸಿತ ಕಂಡಿದ್ದು, ಉತ್ಪಾದನೆ ಹೆಚ್ಚಾಗಿದೆ. ಸುಮಾರು 55 ಲಕ್ಷ ಮೆಟ್ರಿಕ್ ಟನ್ ನಷ್ಟು ಮೆಕ್ಕೆಜೋಳವನ್ನು ರೈತರು ಬೆಳೆಯಬಹುದೆಂಬ ಅಂದಾಜಿದೆ. ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮೆಕ್ಕೆ ಜೋಳ ಉತ್ಪತ್ತಿಯಲ್ಲಿ ಏರಿಕೆ ಕಂಡಿದ್ದರೂ ಸಹ , ಕೇಂದ್ರ ಸರ್ಕಾರ ಸುಮಾರು 70 ಲಕ್ಷ ಮೆ.ಟನ್ ನಷ್ಟು ಮೆಕ್ಕೆಜೋಳವನ್ನು ಆಮದು ಮಾಡಿಕೊಳ್ಳುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ನೋಡಲೆ ಏಜೆನ್ಸಿಗಳಾದ ನಫೆಡ್, ಎನ್ ಸಿ ಸಿಎಫ್ ಸಂಸ್ಥೆಗಳು ಮೆಕ್ಕೆ ಜೋಳ ಖರೀದಿ ಪ್ರಕ್ರಿಯೆ ನಡೆಸದೇ ಇರುವುದರಿಂದ, ರೈತರು ಕೆಲವಡೆ ಧರಣಿ ನಡೆಸುತ್ತಿದ್ದಾರೆ ಎಂದರು.

ಮೆಕ್ಕೆಜೋಳ ಖರೀದಿಗೆ ಡಿಸ್ಟಲರಿಗಳೊಂದಿಗೆ ಚರ್ಚೆ

ಡಿಸ್ಟಿಲರಿಗಳು ಮೆಕ್ಕೆ ಜೋಳ ಬೆಲೆ ಕಡಿಮೆ ಇದ್ದಾಗಲೇ ಹಿಂದೆಯೇ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಮೆಕ್ಕೆಜೋಳವನ್ನು ನಿಯಮಾಸುಸಾರ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸಲು ಡಿಸ್ಟಲರಿ ಮಾಲೀಕರೊಂದಿಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸರ್ಕಾರದಿಂದ 10 ಲಕ್ಷ ಮೆ.ಟನ್ ಖರೀದಿ

ಮೆಕ್ಕೆ ಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರ್ಕಾರ ಮಾಡಲಿದೆ. ರಾಜ್ಯ ಸರ್ಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿಯೇ ಹೇರಳವಾಗಿ ಮೆಕ್ಕೆಜೋಳವನ್ನು ಬೆಳೆದಿದ್ದು, ಅದನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಪತ್ರಮುಖೇನ ಕೋರಲಾಗುವುದು ಎಂದರು.

ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ

ಮೆಕ್ಕೆ ಜೋಳದ ಜೊತೆಗೆ ಹೆಸರು ಕಾಳು ಬೆಳೆ ಸಮಸ್ಯೆ ಬಗ್ಗೆ ಚರ್ಚಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಎಫ್ ಎ ಕ್ಯು ಬದಲಾವಣೆಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸುವ ಜೊತೆಗೆ ಸಂಬಂಧಪಟ್ಟವರ ತಂಡ ಈ ಬಗ್ಗೆ ದೆಹಲಿಗೂ ಭೇಟಿ ನೀಡಬೇಕೆಂದು ಸೂಚನೆ ನೀಡಲಾಗಿದೆ. ಇತ್ತೀಚೆಗೆ ಪ್ರಧಾನಿಯವರನ್ನು ಭೇಟಿಯಾಗಿ ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಕೋರಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 15.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ರಾಜ್ಯದ ಮನವಿಗೆ ಕೇಂದ್ರ ಪೂರಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸವಿದೆ ಎಂದರು.

ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು

ಕಾಂಗ್ರೆಸ್ ನ ಕೆಲ ಶಾಸಕರು ಪಕ್ಷದ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದಂತೆ ನಾನೆಂದೂ ಮಾತಿಗೆ ತಪ್ಪುವುದಿಲ್ಲ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಯ ಭರವಸೆಯನ್ನು ಈಡೇರಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರೆದು, ಮುಂದಿನ ಬಜೆಟ್ ಗಳನ್ನು ನಾನೇ ಮಂಡಿಸುವೆ. ಇಂದು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದರು.

ದೆಹಲಿಯಲ್ಲಿ ಬಾಂಬ್ ಸ್ಪೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಮೈಸೂರು, ನವೆಂಬರ್ 10: ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ದೆಹಲಿ ಸ್ಪೋಟದಲ್ಲಿ ಕೆಲವರು ಸತ್ತಿರುವ ಬಗ್ಗೆ ಮಾಹಿತಿ ಇದೆ. ಮೈಸೂರು ಪೊಲೀಸರೊಂದಿಗೆ ಈಗಾಗಲೇ ಮಾತನಾಡಿದ್ದು, ರಾಜ್ಯ ಮಟ್ಟದ ಐಜಿಪಿ, ಡಿಜಿಪಿ ಯವರೊಂದಿಗೆ ಕೂಡ ಮಾತನಾಡುತ್ತೇನೆ ಎಂದರು.

ಮೃತರ ಕುಟುಂಬದ ವರ್ಗದವರಿಗೆ ಸಂತಾಪ
ಸ್ಪೋಟದಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭದ್ರತಾ ಲೋಪವಾಗಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸ್ಪೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲವಾದ್ದರಿಂದ ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ: ಜಿಲ್ಲಾಡಳಿತಕ್ಕೆ ಸಿ.ಎಂ ಸೂಚನೆ

ಮೈಸೂರು ನ3: ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು.

ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ: ಜಿಲ್ಲಾಡಳಿತಕ್ಕೆ ಸಿ.ಎಂ ಸೂಚನೆ ನೀಡಿದರು.

ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು…

*ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು.

*ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ.

*ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು.

*ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧನಿಕ‌ ತಂತ್ರಜ್ಞಾನ ಬಳಕೆ ಬಗ್ಗೆ ಯೋಜನೆ ಸಿದ್ಧಪಡಿಸಿ.

*ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು. ಆಧುನಿಕ‌ ತಂತ್ರಜ್ಞಾನದ ನೆರವು ಪಡೆಯಬೇಕು.

*ಬಡಾವಣೆಗಳ ನಿರ್ಮಾಣದಲ್ಲಿ ಆಗುವಾಗ ಚರಂಡಿ, ರಸ್ಯೆಗಳು, ಒಳಚರಂಡಿ, ನೀರು, ವಿದ್ಯುತ್ ಜೊತೆಗೆ ಪಾರ್ಕ್ ಗಳು ವ್ಯವಸ್ಥಿತವಾಗಿರಬೇಕು.

*ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ plan ಮಾಡಿಕೊಳ್ಳಿ.

*ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಿ.

*ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾಬದ್ಧವಾಗಿರಬೇಕು.

*ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕು.

ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ನವೆಂಬರ್ 3: ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು ಎಂದರು. ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿವೆ. ಬಿಹಾರದಲ್ಲಿ ಎನ್ ಡಿ ಎ ಮೈತ್ರಿಕೂಟವೂ ರಾಜ್ಯದ ಗ್ಯಾರಂಟಿ ಯೋಜನೆಗಳ ಭರವಸೆಗಳ ಮಾದರಿಯನ್ನು ಅನುಸರಿಸಿದೆ. ಕರ್ನಾಟಕದಲ್ಲಿ 1.24 ಕೋಟಿ ಮಹಿಳೆಯರಿಗೆ ಪ್ರತಿಮಾಹೆ 2000 ರೂ. ಗೃಹಲಕ್ಷ್ಮಿ ಗ್ಯಾರಂಟಿ ನೀಡಲಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಲವು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದ್ದು,ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಬಿಹಾರದಲ್ಲಿ ಬಡತನನಿರ್ಮೂಲನೆಯಾಗಿಲ್ಲ. ಆದ್ದರಿಂದ ಬಡವರು, ಹಿಂದುಳಿದವರು, ದಲಿತರು ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪರ ಮತಚಲಾಯಿಸುವ ಭರವಸೆಯಿದೆ ಎಂದರು.

ರಾಜ್ಯೋತ್ಸವ ಪ್ರಶಸ್ತಿ*
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಬಾರಿ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದರು.

ಹುಲಿದಾಳಿ ಪ್ರಕರಣದ ಪರಿಶೀಲನೆಗೆ ಶೀಘ್ರದಲ್ಲಿ ಸಿಎಂ ಸಭೆ
ಮೈಸೂರಿನಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಸಭೆ ಈಗಾಗಲೇ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. ಅಲ್ಲದೇ, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಹೈಕಮಾಂಡ್ ತೀರ್ಮಾನ ಅಂತಿಮ
ರಾಜ್ಯದಲ್ಲಿ ನೆಲೆಸಿರುವ ಬಿಹಾರಿ ಮತದಾರರು,ಕರ್ನಾಟಕದ ಮುಖ್ಯಮಂತ್ರಿಗಳ ಬದಲಾವಣೆ ಕುರಿತ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರು ಅಭಿಪ್ರಾಯವೇನೇ ಇದ್ದರೂ, ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಈ ಬಗ್ಗೆ ಏನೂ ಹೇಳಿರುವುದಿಲ್ಲ . ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನ್ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.

ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು: ಸಿ.ಎಂ.ಸಿದ್ದರಾಮಯ್ಯ
ಮೈಸೂರು ನ3: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.

ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು ಎಂದು ವಿವರಿಸಿದರು.

ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ, ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.

ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ ಪ್ರತಿಭೆ ಇದೆ. ಅಂಬೇಡ್ಕರ್ ಮತ್ತು ವಾಲ್ಮೀಕಿ, ವ್ಯಾಸರು ಇದಕ್ಕೆ ಉದಾಹರಣೆ ಎಂದರು.

ನಮ್ಮ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಆಗಿದ್ದು ಅರಸು ಅವರ ಕಾಲದಲ್ಲಿ. ಇದರ ಸುವರ್ಣ ಸಂಭ್ರಮ ಮಾಡಿದ್ದು ನಮ್ಮ ಸರ್ಕಾರ ಎಂದು ಸ್ಮರಿಸಿದರು.