ರಾಯಚೂರು – Peepal Media

ಬಿರಿಯಾನಿ ಪ್ರಿಯರೇ ಎಚ್ಚರ, ರಾಜ್ಯದಲ್ಲಿ ಕಲರ್ ಕಲರ್ ನಕಲಿ ಮಸಾಲ ಪತ್ತೆ ?
ರಾಯಚೂರು : ಬಣ್ಣ ಬಣ್ಣದ ತೊಗರಿಬೇಳೆ. ಕೆಂಪು ಬಣ್ಣದ ತೊಗರಿ ಬೇಳೆ. ಬಿರಿಯಾನಿ ಎಲೆ ಬದಲು ನೀಲಗಿರಿ ಎಲೆ. ಕರಿಮೆಣಸಿನ ಬದಲಾಗಿ ಪಪ್ಪಾಯಿ ಬೀಜಗಳು. ಚಕ್ಕೆ ಬದಲು ಯಾವುದೋ ಮರದ ಬೇರು. ಬಣ್ಣ ಮಿಶ್ರಿತ ದನಿಯಾ. ಈ ನಕಲಿ ಮಸಾಲಾ ಮಾಯಾಜಾಲ ದೃಶ್ಯ ಕಂಡು ಬಂದಿದ್ದು, ರಾಯಚೂರಿನ ಮಾನ್ವಿ ತಾಲೂಕಿನ ಇಸ್ಲಾಂನಗರದಲ್ಲಿ.

ಸ್ಥಳೀಯರ ಮಾಹಿತಿ ಮೇರೆಗೆ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಲರ್ ಕಲರ್ ತೊಗರಿಬೇಳೆ, ಧನಿಯಾ, ಚೆಕ್ಕೆ, ಬಿರಿಯಾನಿ ಎಲೆ, ಮೆಣಸು ನೋಡಿ ದಂಗಾಗಿ ಹೋಗಿದ್ದಾರೆ. ಡ್ರಮ್​ ನೀರಿನಲ್ಲಿ ಕೆಮಿಕಲ್ ಬೆರೆಸಿ ಪದಾರ್ಥಗಳಿಗೆ ಹಾಕೋದು ಬಯಲಾಗಿದೆ. ಸಾಂಬಾರ್ ಮಸಾಲೆಯಲ್ಲಿ ಕಲಬೆರಕೆ ಕೆಮಿಕಲ್ ಪದಾರ್ಥಗಳು ಪತ್ತೆಯಾಗಿವೆ.

ದಾಳಿ ವೇಳೆ ಒಟ್ಟು‌ 846 ಕೆಜಿ ವಿವಿಧ ನಕಲಿ ಮಸಾಲೆ, 367 ಕೆಜಿ ಬಣ್ಣ ಮಿಶ್ರಿತ ದನಿಯಾ ಕಾಳು, 220 ಕೆಜಿ ಅರಿಶಿನ, 150 ಕೆಜಿ ಕೆಂಪು ಕಡಲೆ, 16 ಕೆಜಿ ಕೆಂಪು ಕೊಬ್ಬರಿ, 42 ಕೆಜಿ ಚಕ್ಕೆ, 500 ಗ್ರಾಂ ಹಳದಿ ಹಾಗೂ ಕೆಂಪು ಬಣ್ಣದ ಕೆಮಿಕಲ್ ಪೌಡರ್ ಜಪ್ತಿ ಮಾಡಿದ್ದಾರೆ. ಸದ್ಯ ಎಲ್ಲ ಪದಾರ್ಥಗಳನ್ನ ಸೀಜ್ ಮಾಡಲಾಗಿದ್ದು, ಕಲೆ ಬೆರೆಕೆ ಮಾಡ್ತಿದ್ದ ಆರೋಪಿಗಳ ಪತ್ತೆಗೆ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಜೆಡಿಎಸ್ ಅಪ್ಪ, ತಾತ, ಮಕ್ಕಳು, ಮೊಮ್ಮಕ್ಕಳ ಪಕ್ಷವಲ್ಲ: ಹೆಚ್.ಡಿ.ದೇವೇಗೌಡ
ಜೆಡಿಎಸ್‌ ಪಕ್ಷ ಯಾವತ್ತಿಗೂ ಅಪ್ಪ-ಮಕ್ಕಳು ಅಥವಾ ತಾತ-ಮೊಮ್ಮಕ್ಕಳ ಪಕ್ಷವಾಗಿಲ್ಲ. ಇದೊಂದು ಕಾರ್ಯಕರ್ತರ ಪಕ್ಷ. ಇದನ್ನು ಯಾರಿಂದಲೂ ನಾಶ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ಹಿರಿಯ ನಾಯಕ ಎಚ್‌. ಡಿ.ದೇವೇಗೌಡ ಗುಡುಗಿದರು. ರಾಯಚೂರಿನ ದೇವದುರ್ಗದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು ಈ ರೀತಿಯಾಗಿ ಹೇಳಿದ್ದಾರೆ.

ದೇವದುರ್ಗ ಪಟ್ಟಣದ ಬಸವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ “ಜನರೊಂದಿಗೆ ಜನತಾದಳ” ಕಾರ್ಯಕ್ರಮ ಹಾಗೂ ದೇವೇಗೌಡರ ಪ್ರತಿಮೆ ಅನಾವರಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ದೇವೇಗೌಡರು, ಇಲ್ಲಿರುವ ಯಾರೂ ನನ್ನ ಬಂಧುಗಳಲ್ಲ. ನಾನು ಅಥವಾ ನನ್ನ ಕಾರ್ಯಕರ್ತರು ಯಾವತ್ತೂ ಜಾತಿ ನೋಡಿ ರಾಜಕಾರಣ ಮಾಡಿದವರಲ್ಲ ಎಂದು ಹೇಳಿದರು.

“ಒಂದು ರಾಜಕೀಯ ಪಕ್ಷವನ್ನು ಉಳಿಸುವ ಶಕ್ತಿ ಯಾರಿಗಾದರೂ ಇದ್ದರೆ ಅದು ಕಾರ್ಯಕರ್ತರು ಮತ್ತು ಮುಖಂಡರಿಗೆ ಮಾತ್ರ. ಪಕ್ಷವನ್ನು ಎಲ್ಲರೂ ಒಗ್ಗೂಡಿ ಉಳಿಸಬೇಕು” ಎಂದು ದೇವೇಗೌಡರು ಕರೆ ನೀಡಿದರು.

ಪುನರಪಿ ಜನನಂ ಪುನರಪಿ ಮರಣಂ ಎಂಬ ಸಾಲನ್ನು ವ್ಯಾಖ್ಯಾನಿಸಿದ ದೇವೇಗೌಡರು ನಾನು ಇನ್ನು ಒಂದು ವರ್ಷ ಅಷ್ಟೇ ಇರುತ್ತೇನೆ ಎಂಬ ಮಾತನ್ನಾಡಿದರು. ನಾನು ಮತ್ತೆ ಬರುತ್ತೇನೆ. ನಿಮ್ಮ ಮಧ್ಯದಲ್ಲಿಯೇ ಇರುತ್ತೇನೆ. ಬರೀ ಹಳೆ ಮೈಸೂರಲ್ಲಿ ಈ ದೇವೇಗೌಡ ಇರುತ್ತಾರೆ ಎನ್ನುವುದು ಸುಳ್ಳು. ರಾಜ್ಯವನ್ನು ಪಕ್ಕದ ರಾಜ್ಯಗಳಿಗೆ ಸರಿಸಮನಾಗಿ ಬೆಳೆಸಲು ಯುವಕರು ಏಳಬೇಕು. ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶದಲ್ಲಷ್ಟೇ ಕಾಂಗ್ರೆಸ್‌ ಅಧಿಕಾರದಲ್ಲಿದೆ. ಮಹಾನಾಯಕ ರಾಜ್ಯದ ಬೊಕ್ಕಸ ಲೂಟಿ ಮಾಡಿದ್ದಾನೆ. ಬೆಂಗಳೂರಿನ ನಗರ ಪಾಲಿಕೆಯ ಗುಮಾಸ್ತರಿಗೆ ಸಂಬಳ ಕೊಡಲು ಸರಕಾರದ ಬಳಿ ದುಡ್ಡಿಲ್ಲ. ಇದನ್ನು ನಾನು ಹೇಳುತ್ತಿಲ್ಲ. ಅವರ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ ಎಂದರು.

ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿ ನಷ್ಟ: ಈ ಬಗ್ಗೆ ಬಿಜೆಪಿಯ ಯಾವುದೇ ಸಂಸದ ಧ್ವನಿ ಎತ್ತುತ್ತಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಯಚೂರು, ಜೂನ್ 23: 14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ

ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಪ್ರದಾನಿ ಮೋದಿಯವರೊಂದಿಗೆ ನಿಕಟಸಂಪರ್ಕ ಹೊಂದಿರುವ ಪ್ರಭಾವಿ ಸಚಿವ ಎಂದು ಹೇಳಲಾಗುತ್ತದೆ.11495 ಕೋಟಿ ರೂ.ಗಳನ್ನು ಹಣಕಾಸಿನ ಆಯೋಗದಲ್ಲಿ ವಿಶೇಷ ಅನುದಾನ ನೀಡಲು ಸಮ್ಮತಿ ನೀಡಲಾಗಿದ್ದರೂ , ಕೇಂದ್ರ ಸರ್ಕಾರ ಈ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲು ಅವರು ಯಾವುದೇ ಸಹಾಯವನ್ನು ಮಾಡಿಲ್ಲ. ಕರ್ನಾಟಕದ ಬಗ್ಗೆ ಮಾತನಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯಕ್ಕೆ 11495 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ ಎಂದರು.

ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದ ವಿಶೇಷ ಅನುದಾನ ಬಿಡುಗಡೆಗೆ ಒತ್ತಾಯ

ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತಾ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು ವಿಧೇಯಕಗಳ ಬಗ್ಗೆ ವಿವರಣೆ ನೀಡಲು ರಾಷ್ಟ್ರಪತಿಗಳನ್ನು ಭೇಟಿಯಾಗುವ ಸಮಯ ಕೋರಲಾಗಿದೆ. 16 ನೇ ಹಣಕಾಸಿನ ಆಯೋಗಕ್ಕೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಚರ್ಚಿಸಲು ಪ್ರಧಾನಿಯವರನ್ನು, ಹಣಕಾಸಿನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯಸರ್ಕಾರ 5 ಸಾವಿರ ಕೋಟಿಗಳ ವಿಶೇಷ ಅನುದಾನವನ್ನು ಪ್ರತಿವರ್ಷ ನೀಡುತ್ತಿದ್ದು, ಇದೇ ರೀತಿ, ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಅನುದಾನ ನೀಡಬೇಕೆಂದು ಒತ್ತಾಯಿಸಲಾಗಿದೆ. ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಮಾಡುವ ವಿಚಾರವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಶಿಕ್ಷಕರ ನೇಮಕಾತಿಗೆ ಆದೇಶ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆ ಕಾರಣವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಹೊಸ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆದೇಶ ನೀಡಲಾಗಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಹೊರಬರಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಿದೆ ಎಂದರು.

ಸಚಿವ ಎಚ್.ಕೆ.ಪಾಟೀಲ್ ಪತ್ರ: ಅಕ್ರಮ ಗಣಿಗಾರಿಕೆ ತನಿಖೆಗೆ ವಿಶೇಷ ಕೋರ್ಟ್ ರಚನೆಗೆ ಮನವಿ

ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆಯ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಿಂದಿನ ಅವಧಿಯಲ್ಲಿ ನಡೆದಿದ್ದು, ಈ ಬಗ್ಗೆ ತ್ವರಿತ ತನಿಖೆ ನಡೆಸಲು ವಿಶೇಷ ಕೋರ್ಟ್ ರಚಿಸಿ, ಗಣಿಗಾರಿಕೆಯಲ್ಲಿರುವ ಬಾಕಿಯ ವಸೂಲಾತಿಗೆ ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಲು ಪತ್ರದಲ್ಲಿ ತಿಳಿಸಿದ್ದಾರೆ. ಸಚಿವ ಸಂಪುಟದಲ್ಲಿ ಸದರಿ ವಿಷಯವನ್ನು ಚರ್ಚಿಸಿ ವಿಶೇಷ ನ್ಯಾಯಾಲಯ ರಚಿಸಬೇಕೆಂಬ ಉದ್ದೇಶದಿಂದ ಸಚಿವರು ಪತ್ರ ಬರೆದಿದ್ದಾರೆ. ಅಂದಿನ ಲೋಕಾಯುಕ್ತ ಸಂತೋಷ್ ಹೆಗಡೆಯವರು ಅಕ್ರಮ ಗಣಿಗಾರಿಕೆ ಬಗ್ಗೆ ವರದಿಯನ್ನೂ ನೀಡಿದ್ದರು. ಈ ವರದಿಯ ಬಗ್ಗೆ ವಿಧಾನಸಭೆಯಲ್ಲಿ ನಾನು ಕೇಳಿದ ಪ್ರಶ್ನೆಗೆ ಸರ್ಕಾರದಿಂದ ಸಮರ್ಪಕ ಉತ್ತರ ಬಂದಿರಲಿಲ್ಲ. ಆಗ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿಯಲ್ಲಿ ಪಾದಯಾತ್ರೆ ನಡೆಸಲಾಗಿತ್ತು ಎಂದರು.

ಕಾಂಗ್ರೆಸ್ ಶಾಸಕ ರಾಜು ಕಾಗೇ ಯವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಾರಂಭವಾಗದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು. ವಿಶೇಷ ಅನುದಾನವನ್ನು ಅಗತ್ಯವಿರುವ ವಿಧಾನಸಭಾ ಕ್ಷೇತ್ರಗಳಿಗೆ ನೀಡಲಾಗುತ್ತದೆ ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ವಸತಿ ಸಚಿವರು ರಾಜಿನಾಮೆ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ವಸತಿ ಇಲಾಖೆಯ ವಿಷಯದ ಕುರಿತು ಚರ್ಚಿಸಲು ಶಾಸಕ ಬಿ.ಆರ್.ಪಾಟೀಲ್ ರವರು ಇದೇ 25 ರಂದು ಭೇಟಿಯಾಗುವುದಾಗಿ ತಿಳಿಸಿದ್ದಾರೆ ಎಂದರು.

ಚಿನ್ನ, ಬೆಳ್ಳಿ, ಅಕ್ಕಿ, ಬೇಳೆ, ಅಡಿಗೆ ಎಣ್ಣೆ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ರಸಗೊಬ್ಬರ ಎಲ್ಲದರ ಬೆಲೆ ಹೆಚ್ಚಿಸಿದ್ದು ಮೋದಿ ಸರ್ಕಾರ: ಸಿ.ಎಂ.ಸಿದ್ದರಾಮಯ್ಯ
ರಾಯಚೂರು ಜೂ 23: ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.

ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ ದಶಮಾನೋತ್ಸವ ಮತ್ತು 936 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿ ಮಾಡಲಿಲ್ಲ. ಈಗ ಕಾಂಗ್ರೆಸ್ ಮಾಡುತ್ತಿರುವ ಅಭಿವೃದ್ಧಿಯನ್ನು ಬಿಜೆಪಿಯವರು ಸಹಿಸದೆ ಸುಳ್ಳಿನ ಸರಮಾಲೆ ಹಂಚುತ್ತಾ ತಿರುಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಈ ಚುನಾವಣೆ ವೇಳೆ 560 ಭರವಸೆಗಳನ್ನು ನೀಡಿದ್ದೆವು. ಇದರಲ್ಲಿ 235 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಸ್ಪಷ್ಟವಾಗಿ ತಿಳಿಸಿದರು.

2013 ರಿಂದ 2018 ರವರೆಗೆ ನಾವು ಆಡಳಿತ ನಡೆಸಿ ಕೊಟ್ಟ ಭರವಸೆಗಳೆಲ್ಲವನ್ನೂ ಈಡೇರಿಸಿ ಪ್ರಣಾಳಿಕೆಯಲ್ಲಿ ಇಲ್ಲದ ಹೆಚ್ಚುವರಿ 30 ಭರವಸೆಗಳನ್ನು ಈಡೇರಿಸಿ ದಾಖಲೆ ಮಾಡಿದ್ದೇವೆ. ಆದರೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದೇನು ಎಂದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದರು.

ಚಿನ್ನ, ಬೆಳ್ಳಿ, ಅಕ್ಕಿ, ಬೇಳೆ, ಅಡಿಗೆ ಎಣ್ಣೆ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ರಸಗೊಬ್ಬರ ಎಲ್ಲದರ ಬೆಲೆ ಹೆಚ್ಚಿಸಿದ್ದು ಮೋದಿ ಸರ್ಕಾರ. ಆದ್ರೂ ಬಿಜೆಪಿ ನಾಚಿಕೆ ಇಲ್ಲದೆ ರಾಜ್ಯದ ಜನರ ಎದುರು ಸುಳ್ಳು ಹೇಳಿ ನಾಚಿಕೆ ಇಲ್ಲದಂತೆ ವರ್ತಿಸುತ್ತಿದೆ ಎಂದು ಟೀಕಿಸಿದರು.

ಇವತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರಣವಾಗಿದ್ದು 371ಜೆ. ಇದನ್ನು ಜಾರಿಗೆ ತಂದಿದ್ದು ಮಲ್ಲಿಕಾರ್ಜುನ ಖರ್ಗೆ, ಧರಂ ಸಿಂಗ್ ಅವರ ನೇತೃತ್ವದ ಹೋರಾಟ ಮತ್ತು ಕೇಂದ್ರದಲ್ಲಿದ್ದ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ. ಈ 371 ಜೆ ಜಾರಿಗೊಳಿಸಲು ಬಿಜೆಪಿ ಸಂಪೂರ್ಣ ವಿರುದ್ಧವಿತ್ತು. ವಾಜಪೇಯಿ ಪ್ರಧಾನಿ ಆಗಿದ್ದಾಗ ಉಪಪ್ರಧಾನಿ ಅಡ್ವಾಣಿ ಅವರು 371ಜೆ ಜಾರಿ ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಹೀಗಾಗಿ ಬಿಜೆಪಿಯವರಿಗೆ ಅಭಿವೃದ್ಧಿ ವಿಚಾರದಲ್ಲಿ ನಮ್ಮನ್ನು ಟೀಕಿಸುವ ಯಾವ ನೈತಿಕ ಹಕ್ಕೂ ಇಲ್ಲ ಎಂದರು.

ನಮ್ಮ ಸರ್ಕಾರ ಬಂದ ಮೇಲೆ ಕಲ್ಯಾಣ ಕರ್ನಾಟಕ‌ ಅಭಿವೃದ್ಧಿಗೆ 13500 ಕೋಟಿ ರೂಪಾಯಿ ಕೊಟ್ಟಿದ್ದೇವೆ. ಇದನ್ನು ಖರ್ಚು ಮಾಡಿದ ಮೇಲೆ ಇನ್ನಷ್ಟು ಹೆಚ್ಚಿನ ಹ, ಅನುದಾನ‌ ಕೊಡ್ತೀನಿ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

371ಜೆ ಜಾರಿ ಕಾರಣದಿಂದ ಈ ಭಾಗದ ಯುವಕ ಯುವತಿಯರು ಎಂಜಿನಿಯರ್, ವೈದ್ಯರು, ಎಸಿ, ಡಿಸಿ, ಪೊಲೀಸ್ ಅಧಿಕಾರಿಗಳಾಗುತ್ತಿದ್ದಾರೆ. ಇದು ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದರು.

ರಾಯಚೂರು ಜಿಲ್ಲೆಯ ಜನರ ಆಶೀರ್ವಾದ ಸದಾ ನಮ್ಮ ಮೇಲಿರುತ್ತದೆ ಎನ್ನುವುದು ದಾಖಲಾಗಿದೆ. ಕಲ್ಯಾಣ ಕರ್ನಾಟಕ ಸದಾ ಕಾಂಗ್ರೆಸ್ ನ ಭದ್ರ ಕೋಟೆ: ಐದಕ್ಕೆ ಐದೂ ಲೋಕಸಭಾ ಸ್ಥಾನ ಗೆಲ್ಲಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನ್ಯವಾದ ಅರ್ಪಿಸಿದರು.

ಬಿಜೆಪಿಯ ಮನೆ ದೇವರೇ ಸುಳ್ಳು. ಅವರು ಕೇಂದ್ರದಲ್ಲಿ ಸರ್ಕಾರವಿದ್ದರೂ ರಾಜ್ಯಕ್ಕೆ ನಿರಂತರವಾಗಿ ದ್ರೋಹ ಎಸಗುತ್ತಿದ್ದಾರೆ. ಬಿಜೆಪಿ ನಾಯಕರು ಮತ್ತು ಬಿಜೆಪಿ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮುಂದೆ ಬರುತ್ತಿಲ್ಲ. ರಾಜ್ಯಕ್ಕೆ ಕೇಂದ್ರದ ಬಿಜೆಪಿ ಮಾಡುತ್ತಿರುವ ದ್ರೋಹವನ್ನು ತಡೆಯಲು ಬಿಜೆಪಿಯ ಒಬ್ಬ ಸಂಸದರೂ ಸಿದ್ದರಿಲ್ಲ. ಇದು ಬಿಜೆಪಿಯವರ ಯೋಗ್ಯತೆ ಎಂದು ಟೀಕಿಸಿದರು.

ಕುಡಿದ ಕಾರು ಚಲಾಯಿಸಿ ಅಪಘಾತ – ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು
ರಾಯಚೂರು : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಬಳಿ ರಾಗಿಹಳ್ಳಿ ಅರಣ್ಯ ಪ್ರದೇಶದ ಬಳಿ ನಡೆದಿದೆ.ಈ ವೇಳೆ ರಾಗಿಹಳ್ಳಿ ಅರಣ್ಯ ಪ್ರದೇಶದ ರಸ್ತೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು  ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಎಂದು ತಿಳಿದುಬಂದಿದೆ. ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು  ರಾತ್ರಿಪೂರ್ತಿ ಪಾರ್ಟಿ ಮಾಡಿ ತಡರಾತ್ರಿ ಕಾರು ಹತ್ತಿ ಹೊರಟ್ಟಿದ್ದಾರೆ.ಸದ್ಯ ಗಾಯಾಳುಗಳಾದ ದೇವನಾರಾಯಣ ಮತ್ತು ಸಾಹಿಲ್ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಾಲಕಿಯನ್ನು ಶಾಲೆಯಿಂದ ಕರೆದೊಯ್ದು ಅತ್ಯಾಚಾರ – ಆರೋಪಿ ಬಂಧನ
ರಾಯಚೂರು : ಏಳು ವರ್ಷದ ಬಾಲಕಿಯನ್ನು ಶಾಲೆಯಿಂದ ಕರೆದೊಯ್ದು ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆಯೊಂದು ರಾಯಚೂರಿನ ಮಾನವಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಎಸಗಿ ಬಾಲಕಿಯನ್ನು ಅಲ್ಲೇ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಕೆಲ ಹೊತ್ತಿನ ನಂತರ ಬಾಲಕಿ ಅಳುತ್ತಾ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿಯನ್ನು ಶಿವನಗೌಡ ಎಂದು ಗುರುತಿಸಲಾಗಿದೆ. ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 7 ವರ್ಷದ ಬಾಲಕಿಯನ್ನು ಯಾವುದೋ ಕಾರಣ ನೀಡಿ ಶಾಲೆಯಿಂದ ಕರೆದೊಯ್ಯಲಾಗಿದೆ. ಈ ವೇಳೆ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಲಾಗಿದೆ.

ಕೂಡಲೇ ಈ ಘಟನೆಗೆ ಸಂಬಂಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮತ್ತು ಶಾಲೆಯ ಆಡಳಿತ ಮಂಡಳಿಯರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಡಿಸೆಂಬರ್‌ ಹೊತ್ತಿಗೆ ಕರ್ನಾಟಕ ಬಿಜೆಪಿ ನಾಯಕತ್ವ ಬದಲಾವಣೆಯಾಗಲಿದೆ: ರಮೇಶ್ ಜಾರಕಿಹೊಳಿ
ರಾಯಚೂರು: ಮುಂದಿನ ತಿಂಗಳ ಹೊತ್ತಿಗೆ ಬಿಜೆಪಿ ನಾಯಕತ್ವವನ್ನು ಬದಲಾಯಿಸುವ ಬಗ್ಗೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸೋಮವಾರ ಸುಳಿವು ನೀಡಿದ್ದಾರೆ.

ಬಿವೈ ವಿಜಯೇಂದ್ರ ಅವರ ನಾಯಕತ್ವವನ್ನು ನಾವು ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ. ನಾವು ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರು. ಪಕ್ಷ ಸ್ವಂತ ಬಲದಿಂದ ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಆಶಯ. ಎರಡು ತಿಂಗಳಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಬದಲಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಗೋಕಾಕ ಶಾಸಕರಾದ ಜಾರಕಿಹೊಳಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು ಪಕ್ಷವನ್ನು ಬಲಪಡಿಸಲು ಶೀಘ್ರದಲ್ಲೇ ರಾಜ್ಯ ಪ್ರವಾಸ ಮಾಡಲಿದ್ದಾರೆ. ಆರು ಜಿಲ್ಲೆಗಳ ಜವಾಬ್ದಾರಿಯನ್ನು ನಾನೇ ಹೊತ್ತುಕೊಂಡಿದ್ದೇನೆ. ನಮಗೆ ಯಾವುದೇ ಹುದ್ದೆ, ಹುದ್ದೆ ಬೇಡ, ನಮಗೆ ಬೇಕಿರುವುದು ನಮ್ಮ ಪಕ್ಷ. ಮುಂದಿನ ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಸಾಕಷ್ಟು ಬದಲಾಗಿದ್ದಾರೆ. ಹಿಂದೆ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದರು. ಇದೀಗ ಕೇವಲ ಒಂದು ಸಮುದಾಯವನ್ನು ಓಲೈಸುತ್ತಿದ್ದಾರೆ. ಅವರ ಬಗ್ಗೆ ನನಗೆ ವಿಷಾದವಿದೆ ಎಂದು ಜಾರಕಿಹೊಳಿ ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ಕಿರುಕುಳ ತಾಳಲಾರದೆ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರ ಭ್ರಷ್ಟ ಸಚಿವರನ್ನು ರಕ್ಷಿಸುತ್ತಿದೆ. ಇದು ಜನರ ನಂಬಿಕೆಯನ್ನು ಕಳೆದುಕೊಂಡಿದೆ ಎಂದು ಆರೋಪಿಸಿದರು.

ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ವರಿಷ್ಠರು, ಸಚಿವ ಸಂಪುಟದೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಯಚೂರು, ಅಕ್ಟೋಬರ್ 5 : ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಂತರಾಜು ಆಯೋಗದ ಜಾತಿಗಣತಿ ವರದಿಯನ್ನು ಪ್ರಕಟಿಸುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಜಾತಿ ಗಣತಿ ವರದಿಯನ್ನು ಈಗಾಗಲೇ ಸ್ವೀಕರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೇಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ವರದಿಯಲ್ಲಿ ಸಣ್ಣ ಪುಟ್ಟ ದೋಷಗಳಿದ್ದರೆ ಅದನ್ನು ಸರಿಪಡಿಸುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದರು.

ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ

ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು , ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ. ಸುಳ್ಳು ಆರೋಪಗಳನ್ನು ಮಾಡಿದರೆ, ವಸ್ತುಸ್ಥಿತಿಯನ್ನು ಜನರ ಮುಂದಿಡುವ ಕೆಲಸ ಮಾಡುತ್ತೇವೆ ಎಂದರು.

ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ

ಜೆಡಿಎಸ್ ನ ಜಿಟಿದೇವೇಗೌಡ, ಮುಖ್ಯಮಂತ್ರಿಯವರನ್ನು ಬೆಂಬಲಿಸಿ ಮಾತನಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಲ್ಲಿದ್ದು, ಮುಡಾದ ಸದಸ್ಯರೂ ಆಗಿದ್ದಾರೆ. ಅವರು ಸತ್ಯ ಹೇಳಿರುವುದರಲ್ಲಿ ತಪ್ಪಿಲ್ಲ. ಈ ಪ್ರಕರಣದ ವಿರುದ್ದ , ವಿರೋಧಪಕ್ಷದವರ ಪಾದಯಾತ್ರೆಯನ್ನು ನಡೆಸುವುದು ಬೇಡ ಎಂದವರಲ್ಲಿ ಜಿ ಟಿ ದೇವೇಗೌಡರು ಒಬ್ಬರು ಎಂದರು.

ವಿರೋಧಪಕ್ಷದ ನಾಯಕರಾದ ಆರ್ ಅಶೋಕ್ ಅವರ ಮೇಲೆ ಎಫ್ ಐ ಆರ್ ಆಗಿರುವುದರಿಂದ , ತಾನು ರಾಜಿನಾಮೆ ನೀಡಲು ಸಿದ್ದ, ಸಿಎಂ ಅವರೂ ರಾಜಿನಾಮೆ ನೀಡಲಿ ಎಂದು ಹೇಳಿರುವ ಬಗ್ಗೆ ಉತ್ತರಿಸಿ, ಅವರು ಮೊದಲು ರಾಜಿನಾಮೆ ನೀಡಲಿ, ಜಮೀನು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮೊದಲು ರಾಜಿನಾಮೆ ನೀಡಲಿ ಎಂದರು.

ಕರ್ನಾಟಕ ಸಂಭ್ರಮ

ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. 1973 ರಲ್ಲಿ ಮೈಸೂರು ರಾಜ್ಯಕ್ಕೆ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ , ಕರ್ನಾಟಕ ಎಂದು ನಾಮಕರಣ ಮಾಡಿದ್ದಕ್ಕೆ 50 ವರ್ಷಗಳ ಸಂದಿರುವ ಸುಸಂದರ್ಭದಲ್ಲಿ ಕರ್ನಾಟಕ ಸಂಭ್ರಮವನ್ನು ಇಂದು ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆಯನ್ನೂ ಸಹ ಪ್ರತಿಷ್ಠಾಪಿಸಲಾಗುತ್ತಿದೆ.ಗೋಕಾಕ್ ಚಳುವಳಿ ಮತ್ತು ಕನ್ನಡ ಸಂಭ್ರಮಕ್ಕೆ ಸಂಬಂಧಪಟ್ಟಂತೆ ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಮಾಡುತ್ತಿರುವ ಕಾರ್ಯಕ್ರಮವಾಗಿದೆ ಎಂದರು.

ಸ್ವಾಭಿಮಾನಿ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದುಳಿದ ವರ್ಗದವರು, ದೀನದಲಿತರ, ಅಲ್ಪಸಂಖ್ಯಾತರ ವರ್ಗದವರ ಸ್ವಾಭಿಮಾನಿ ಸಮಾವೇಶ ಇದಾಗಿದೆ ಎಂದರು.

ಜಲಾಶಯದ ಕೆಳಭಾಗದ ರೈತರಿಗೆ ನೀರು ಬಿಡಲು ಶೀಘ್ರ ಕ್ರಮ

ತುಂಗಭದ್ರಾ ಜಲಾಶಯ ಹಾಗೂ ನವಲೆ ಜಲಾಶಯದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಪತ್ರಕರ್ತರ ಪ್ರಶ್ನೆಗೆ ಬಗ್ಗೆ ಉತ್ತರಿಸಿ, ಜಲಾಶಯದಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಪ್ರಸ್ತುತ 102 ಟಿಎಂಸಿ ನೀರು ಸಂಗ್ರಹವಿದೆ. ಸುಮಾರು 30 ಟಿಎಂಸಿ ನೀರಿಗೆ ಆಗುವಷ್ಟು ಹೂಳು ತುಂಬಿರುವುದರಿಂದ ಕೆಳಭಾಗದ ರೈತರಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ. 19 ನೇ ಗೇಟ್ ದುರಸ್ತಿಯನ್ನು ಐದು ದಿನಗಳೊಳಗೆ ದುರಸ್ತಿ ಮಾಡಿ ಬಾಗಿನ ಅರ್ಪಿಸಲಾಗಿದೆ. ಸರ್ಕಾರ ಕೆಳಭಾಗದ ರೈತರಿಗೆ ನೀರು ಒದಗಿಸಲು ಅನುಕೂಲವಾಗುವಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದರು.

ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ: ಸಿಎಂ ಕರೆ
ರಾಯಚೂರು ಅ 5: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ. ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಕನ್ನಡ ಸಂಭ್ರಮ 50ರ ಅಂಗವಾಗಿ ಆಯೋಜಿಸಿದ್ದ ಗೋಕಾಕ್ ಚಳವಳಿ: ಹಿನ್ನೋಟ-ಮುನ್ನೋಟ” ಬೃಹತ್ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ. ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. ಕನ್ನಡ ಅಗ್ರ ಭಾಷೆಯಾಗಲಿ, ಕನ್ನಡ ಮೊದಲ ಭಾಷೆಯಾಗಲಿ ಎಂದು ಸಿಎಂ ಕರೆ ನೀಡಿದರು.

ಗೋಕಾಕ್ ಚಳವಳಿಯ ಪರಿಣಾಮ ರಾಜ್ಯದಲ್ಲಿ ಕನ್ನಡದ ವಾತಾವರಣ ವಿಸ್ತರಿಸಲು ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಬಳಿಕ ಇದೇ ಸಮಿತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯಿತು ಎಂದರು.

ಪ್ರತಿಯೊಂದು ಭಾಷೆಯನ್ನೂ ಕಲಿಯಿರಿ, ಆದರೆ ಆಡಳಿತ ಭಾಷೆ ಕನ್ನಡ ಆಗಿರಲಿ ಎಂದರು.

ಕನ್ನಡ ನೆಲದಲ್ಲಿ ನಡೆದ ಕನ್ನಡ ಭಾಷಾ ಚಳವಳಿ ಅತ್ಯಂತ ಚರಿತ್ರಿಕವಾದದ್ದು. ನಾನು ಕಾವಲು ಸಮಿತಿ ಅಧ್ಯಕ್ಷನಾಗಿದ್ದಾಗ ಇಂಗ್ಲಿಷ್ ಟೈಮ್ ರೈಟರ್ ಗಳನ್ನು ಕಿತ್ತುಕೊಂಡು ಕನ್ನಡ ಟೈಪ್ ರೈಟರ್ ಗಳನ್ನು ಕೊಡ್ತಿದ್ದೆ ಎಂದು ತಮ್ಮ ಅವಧಿಯ ಕನ್ನಡ ಕಟ್ಟುವ ಕೆಲಸವನ್ನು ಸ್ಮರಿಸಿದರು.

ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ದಾರಾಳತನ ಬೇಡ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಹಿರಿಯ ಕನ್ನಡ ಚಳವಳಿಗಾರರನ್ನು, ಗೋಕಾಕ್ ಹೋರಾಟಗಾರರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.

ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್, ಬೋಸರಾಜು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಸೇರಿ ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರು, ಕನ್ನಡ ಚಳವಳಿಗಾರರು, ಹೋರಾಟಗಾರರು, ಕನ್ನಡದ ಕಾರ್ಯಕರ್ತರು ಉಪಸ್ಥಿತರಿದ್ದರು.‌

ರಾಯಚೂರು | ಹಟ್ಟಿ ಚಿನ್ನದ ಗಣಿಯಲ್ಲಿ ದುರಂತ, ಓರ್ವ ಕಾರ್ಮಿಕನ ಸಾವು, ನಾಲ್ವರಿಗೆ ಗಂಭೀರ ಗಾಯ
ರಾಯಚೂರು: ಇಲ್ಲಿಗೆ ಸಮೀಪದ ಹಟ್ಟಿ ಚಿನ್ನದ ಗಣಿಯಲ್ಲಿ ಶುಕ್ರವಾರ ಗಣಿಗಾರಿಕೆ ಕಂದಕದಲ್ಲಿ ಮಣ್ಣು ಕುಸಿದು 48 ವರ್ಷದ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಕಾರ್ಮಿಕರು ರಾತ್ರಿ ಪಾಳಿಯ ಕೆಲಸದಲ್ಲಿದ್ದಾಗ ಬೆಳಗಿನ ಜಾವ 3.30ಕ್ಕೆ ಈ ಘಟನೆ ಸಂಭವಿಸಿದೆ.

ಮೃತ ಕಾರ್ಮಿಕ ಮೌನೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಅವರ ದೇಹವನ್ನು ಹೊರತೆಗೆಯಲು ರಕ್ಷಣಾ ತಂಡವು ಬಹಳ ಕಷ್ಟಪಡಬೇಕಾಯಿತು.

ಗಾಯಾಳುಗಳನ್ನು ಚಿನ್ನದ ಗಣಿ ಬಳಿಯಿರುವ ಕಂಪನಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬೆಂಗಳೂರಿಗೆ ಸಾಗಿಸಲಾಗಿದೆ.

ಮೃತ ಕಾರ್ಮಿಕರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿ ಸಂಬಂಧಿಕರು ಹಾಗೂ ಕಾರ್ಮಿಕ ಮುಖಂಡರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

ಪರಿಹಾರ ನೀಡುವವರೆಗೆ ಮೃತ ಕಾರ್ಮಿಕನ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ಎಕ್ಸಿಕ್ಯೂಟಿವ್ ಡೈರೆಕ್ಟರ್, ಜನರಲ್ ಮ್ಯಾನೇಜರ್ ಹಾಗೂ ಇತರೆ ಅಧಿಕಾರಿಗಳು ದುರಂತ ನಡೆದ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.