ರಾಮನಗರ – Peepal Media

‘ಒಂದಿಂಚು ಭೂಮಿಯ ಸ್ವಾಧೀನಕ್ಕೂ ಬಿಡುವುದಿಲ್ಲ’: ಜಿಬಿಐಟಿ ವಿರುದ್ಧ ಜೆಡಿಎಸ್ ಪ್ರತಿಭಟನೆ
ಬಿಡದಿ (ರಾಮನಗರ): ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (GBIT) ಯೋಜನೆಗೆ ಒಂದಿಂಚು ಭೂಮಿ ಸ್ವಾಧೀನಕ್ಕೆ ಬಿಡುವುದಿಲ್ಲ. ಯೋಜನೆಯನ್ನು ಕೈಬಿಡದಿದ್ದರೆ ವಿಧಾನಸೌಧ ಮತ್ತು ಮುಖ್ಯಮಂತ್ರಿ ನಿವಾಸದವರೆಗೆ ಪಾದಯಾತ್ರೆ ನಡೆಸಿ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.

ಜಿಬಿಐಟಿ ವಿರೋಧಿಸಿ ಹೋಬಳಿಯ ಭೈರಮಂಗಲದಲ್ಲಿ ನಡೆಯುತ್ತಿರುವ ರೈತರ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲಿಸಿ ಜೆಡಿಎಸ್ ಭಾನುವಾರ ಹಮ್ಮಿಕೊಂಡಿದ್ದ ‘ಬಿಡದಿ ಉಳಿಸಿ, ಜಿಬಿಐಟಿ ನಿಲ್ಲಿಸಿ’ ಪ್ರತಿಭಟನಾ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ಎಚ್ಚರಿಕೆ ನೀಡಿದರು.

ಎತ್ತಿನಗಾಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಆಗಮನ

ನಿಖಿಲ್ ಕುಮಾರಸ್ವಾಮಿ ಅವರು ನಾಯಕರೊಂದಿಗೆ ಭೈರಮಂಗಲ ಕ್ರಾಸ್‌ನಿಂದ ಎತ್ತಿನಗಾಡಿಯಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಕಾರ್ಯಕರ್ತರು ಬೈಕ್ ಮತ್ತು ಇತರ ವಾಹನಗಳಲ್ಲಿ ಹಿಂಬಾಲಿಸಿದರು. ಮಾರ್ಗದುದ್ದಕ್ಕೂ ಜಿಬಿಐಟಿ ಯೋಜನೆ, ಸರ್ಕಾರ, ಡಿಸಿಎಂ ಮತ್ತು ಶಾಸಕ ಎಚ್.ಸಿ. ಬಾಲಕೃಷ್ಣ ವಿರುದ್ಧ ಘೋಷಣೆಗಳು ಮೊಳಗಿದವು.

ರೈತರ ಪರ ಕುಮಾರಸ್ವಾಮಿ ಧ್ವನಿ

ದೆಹಲಿಯಿಂದ ನೇರಪ್ರಸಾರದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, “ರೈತರ ಮೇಲಿನ ದಬ್ಬಾಳಿಕೆ, ಸರ್ವೆ ನಿಲ್ಲಿಸಬೇಕು. ರೈತರಿಗೆ ತೊಂದರೆಯಾದರೆ ನನ್ನ ಆರೋಗ್ಯವನ್ನೂ ಲೆಕ್ಕಿಸದೆ ಖುದ್ದು ಸ್ಥಳಕ್ಕೆ ಬಂದು ಹೋರಾಟದಲ್ಲಿ ಭಾಗವಹಿಸುತ್ತೇನೆ. ರೈತರು ಎದೆಗುಂದಬಾರದು. ನಿಮ್ಮೊಂದಿಗೆ ನಾನಿದ್ದೇನೆ,” ಎಂದು ಧೈರ್ಯ ತುಂಬಿದರು.

ಇದೇ ವೇಳೆ, ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದರು: “ಯೋಜನೆ ಕುರಿತು ರೈತರ ಜೊತೆ ಮೂರ್ನಾಲ್ಕು ಸಭೆ ನಡೆಸಿದ್ದೆ. ರೈತರು ವಿರೋಧಿಸಿದ್ದರಿಂದ ಭೂ ಸ್ವಾಧೀನಕ್ಕೆ ಮುಂದಾಗಲಿಲ್ಲ. ಯೋಜನೆ ಹೆಸರಲ್ಲಿ ಡಿ.ಕೆ. ಶಿವಕುಮಾರ್ ಆಡುತ್ತಿರುವ ಆಟ ಗೊತ್ತಿದೆ.”

ರಿಯಲ್ ಎಸ್ಟೇಟ್ ದಂಧೆಯ ಆರೋಪ

ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರದ ಉದ್ದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದರು: “ಇದು ನಿಜವಾಗಿಯೂ ಅಭಿವೃದ್ಧಿ ಯೋಜನೆಯಾಗಿದ್ದರೆ, ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿ ನಾಲ್ಕು ತಿಂಗಳಾದರೂ ಸಾಧಕ-ಬಾಧಕ ಕುರಿತು ಸ್ಥಳೀಯ ಶಾಸಕರು, ಡಿಸಿಎಂ ಹಾಗೂ ಅಧಿಕಾರಿಗಳು ರೈತರ ಜೊತೆ ಏಕೆ ಸಭೆ ನಡೆಸಿಲ್ಲ? ರೈತರ ಭೂಮಿ ಲಪಟಾಯಿಸುತ್ತಿರುವುದು ರಿಯಲ್ ಎಸ್ಟೇಟ್ ದಂಧೆಗೆ ಎಂಬುದು ಇದರಲ್ಲೇ ಗೊತ್ತಾಗುತ್ತದೆ,” ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಜವರಾಯಿ ಗೌಡ, ಮಾಜಿ ಶಾಸಕರಾದ ಎ. ಮಂಜುನಾಥ್, ಡಾ. ಕೆ. ಅನ್ನದಾನಿ, ರಮೇಶ್ ಗೌಡ ಹಾಗೂ ಇತರರು ಭಾಗವಹಿಸಿದ್ದರು.

ಸಮಾಜವನ್ನು ಒಡೆಯುವುದೇ ಆರ್. ಅಶೋಕ್ ಅಜೆಂಡಾ – ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
ರಾಮನಗರ: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ದ್ವೇಷ ಬಿತ್ತುವುದು ಮತ್ತು ಸಮಾಜವನ್ನು ವಿಭಜಿಸುವುದನ್ನೇ ತಮ್ಮ ಮುಖ್ಯ ಕಾರ್ಯಸೂಚಿಯನ್ನಾಗಿ ಇಟ್ಟುಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಶಾಂತಿಯನ್ನು ಸೃಷ್ಟಿಸುವ ಮತ್ತು ಶಾಂತಿಗೆ ಭಂಗ ತರುವ ಷಡ್ಯಂತ್ರಗಳನ್ನು ಅವರೇ ರೂಪಿಸುತ್ತಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದರು.

ರಾಮನಗರದ ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ, ದಸರಾ ಉದ್ಘಾಟನೆ ಮತ್ತು ಚಾಮುಂಡಿ ಬೆಟ್ಟದ ಪ್ರವೇಶದ ಕುರಿತು ಅಶೋಕ್ ಮಾಡಿದ್ದ ಟೀಕೆಗಳಿಗೆ ಪ್ರತಿಕ್ರಿಯಿಸಿದರು. “ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಬೇರೆ ಯಾವುದೇ ಕೆಲಸವಿಲ್ಲ. ಈ ಎಲ್ಲಾ ಷಡ್ಯಂತ್ರಗಳ ಬಗ್ಗೆ ತನಿಖೆ ನಡೆಯುತ್ತಿದೆ ಮತ್ತು ಸತ್ಯ ಶೀಘ್ರದಲ್ಲೇ ಹೊರಬರಲಿದೆ,” ಎಂದು ಅವರು ಹೇಳಿದರು.

ಮದ್ದೂರಿನಲ್ಲಿ ನಡೆದ ಕಲ್ಲುತೂರಾಟದ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ಘಟನೆಯ ಬಗ್ಗೆ ತನಗೆ ಸಂಪೂರ್ಣ ಮಾಹಿತಿ ಇಲ್ಲ. ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.

ಘಟನೆಯನ್ನು ಖಂಡಿಸಿ ಬಿಜೆಪಿ ನಾಯಕರು ಮದ್ದೂರಿನಲ್ಲಿ ಶೋಭಾಯಾತ್ರೆ ನಡೆಸುತ್ತಿರುವ ಬಗ್ಗೆ ವ್ಯಂಗ್ಯವಾಡಿದ ಅವರು, “ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ. ಜನರನ್ನು ಒಡೆಯುವುದು ಮತ್ತು ಬೆಂಕಿ ಹಚ್ಚುವುದು ಅವರ ಕೆಲಸ. ರಾಜಕೀಯ ಮಾಡುವುದು ಮಾತ್ರ ಅವರಿಗೆ ಗೊತ್ತು. ಅವರಿಂದ ಯಾವುದೇ ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ,” ಎಂದು ಟೀಕಿಸಿದರು.

ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ ಅವರು, “ಮೊದಲು ದೆಹಲಿಗೆ ಹೋಗಿ ನರೇಗಾ ಮತ್ತು ತೆರಿಗೆ ಹಣವನ್ನು ರಾಜ್ಯಕ್ಕೆ ತರಲಿ. ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಅನುಮತಿ ಕೊಡಿಸಲಿ,” ಎಂದು ಒತ್ತಾಯಿಸಿದರು.

ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯದಲ್ಲಿ ನಡೆಯುತ್ತಿರುವುದು “ತುಘಲಕ್ ದರ್ಬಾರ್” ಮತ್ತು ಇದು ನಿಜಾಮನ ಆಡಳಿತವನ್ನು ನೆನಪಿಸುತ್ತಿದೆ ಎಂದು ಹೇಳಿದರು. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತಮ್ಮ ನಿಲುವನ್ನು ಸರಿಪಡಿಸಿಕೊಳ್ಳದಿದ್ದರೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲಿದೆ ಮತ್ತು ಇದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನನ್ನದು ಬಿಜೆಪಿಗೆ ಹೋಗುವ ರಕ್ತವಲ್ಲ: ಡಿ.ಕೆ. ಶಿವಕುಮಾರ್
“ಇ.ಡಿ, ಐ.ಟಿ, ಸಿಬಿಐಗೆ ಹೆದರಿ ಬಿಜೆಪಿಗೆ ಸೇರುವ ರಕ್ತ ನನ್ನದು ಅಥವಾ ಕನಕಪುರದವರದ್ದು ಅಲ್ಲ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ದಾಖಲಿಸಿರುವ ಮಾನಹಾನಿ ಮೊಕದ್ದಮೆಯ ವಿಚಾರಣೆಗೆ ಬುಧವಾರ ಕನಕಪುರ ನ್ಯಾಯಾಲಯಕ್ಕೆ ಹಾಜರಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ವಿರುದ್ಧ ಇ.ಡಿ, ಐ.ಟಿ, ಸಿಬಿಐ ಪ್ರಕರಣಗಳಿವೆ. ಆದರೆ, ನಾನು ಬಿಜೆಪಿಗೆ ಸೇರುವುದಿಲ್ಲ. ಯತ್ನಾಳ ಅವರ ಬಾಯಿ ಕೆಟ್ಟದ್ದು. ಅವರು ನಾನು ಬಿಜೆಪಿ ಸೇರುತ್ತೇನೆ ಎಂದು ಅಪಪ್ರಚಾರ ಮಾಡಿದ್ದಾರೆ. ಹೀಗಾಗಿ, ಅವರ ವಿರುದ್ಧ ₹100 ಕೋಟಿ ಮಾನಹಾನಿ ಮೊಕದ್ದಮೆ ಹಾಕಿ, ₹1 ಕೋಟಿ ನ್ಯಾಯಾಲಯ ಶುಲ್ಕ ಪಾವತಿಸಿದ್ದೇನೆ” ಎಂದರು.

“ಯತ್ನಾಳ ಅವರು ಈ ಪ್ರಕರಣವನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿ, ಕನಕಪುರ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುವಂತೆ ಸೂಚಿಸಿತು. ಇಂದು ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಿದ್ದೇನೆ” ಎಂದು ಶಿವಕುಮಾರ್ ತಿಳಿಸಿದರು.

“ನಾನು ಈಗಾಗಲೇ ಎಲ್ಲಾ ಕಷ್ಟಗಳನ್ನು ಅನುಭವಿಸಿದ್ದೇನೆ. ಬಿಜೆಪಿಗೆ ಸೇರುವ ರಕ್ತ ನನ್ನದಲ್ಲ. ಕನಕಪುರದ ಜನರ ರಕ್ತ ಯಾರಿಗೂ ಶರಣಾಗುವಂತದ್ದಲ್ಲ” ಎಂದು ಅವರು ಒತ್ತಿ ಹೇಳಿದರು.

ರಾಮನಗರ ಇನ್ಮುಂದೆ ‘ಬೆಂಗಳೂರು ದಕ್ಷಿಣ’ ಜಿಲ್ಲೆ.. ; ಏನೇನು ಬದಲಾವಣೆ?
ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆ ಮೂಲಕ ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ, ಆದರೆ ಜಿಲ್ಲೆಯ ಹೆಸರಷ್ಟೇ ಬದಲಾವಣೆ ಮಾಡಲಾಗಿದೆ ಎಂದು ಸಂಪುಟ ಸಭೆ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ರಾಮನಗರವೇ ಜಿಲ್ಲಾ ಕೇಂದ್ರ ಸ್ಥಾನ ಆಗಿರುತ್ತದೆ. ರಾಮನಗರದ ಜಿಲ್ಲಾ ಕೇಂದ್ರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

2024ರ ಜುಲೈ ತಿಂಗಳಿನಲ್ಲಿ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿತ್ತು. ನಂತರ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಅನುಮೋದನೆಗಾಗಿ ಮನವಿ ಸಲ್ಲಿಸಿತ್ತು. ಆದರೆ ಕೇಂದ್ರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ, ರಾಜ್ಯ ಸಚಿವ ಸಂಪುಟ ಈ ನಿರ್ಧಾರಕ್ಕೆ ಬಂದಿದೆ.

ರಾಮನಗರದ ಜನರ ಬೇಡಿಕೆಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯು ಪ್ರಸ್ತುತ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಮತ್ತು ಹಾರೋಹಳ್ಳಿ ತಾಲೂಕುಗಳನ್ನು ಹೊಂದಿದ್ದು, ಅದು ಈಗ ಬೆಂಗಳೂರು ದಕ್ಷಿಣ ಜಿಲ್ಲೆಯ ಭಾಗವಾಗಲಿದೆ. ಬ್ರಾಂಡ್ ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೂಕ ಬಾಲಕಿ ಅ*ಚಾರ ಕೊ* ಪ್ರಕರಣ: ಶವ ಇಟ್ಟು ನ್ಯಾಯಕ್ಕಾಗಿ ಪ್ರತಿಭಟನೆ; ಕೊಳೆತ ಸ್ಥಿತಿ ತಲುಪಿದರೂ ಪಟ್ಟು ಬಿಡದ ಗ್ರಾಮಸ್ಥರು
ಮಾತು ಬಾರದ, ಕಿವಿ ಕೇಳದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಆರೋಪಿಯನ್ನು ಬಂಧಿಸುವ ವರೆಗೂ ಶವಸಂಸ್ಕಾರ ಮಾಡುವುದಿಲ್ಲ ಎಂದು ಬಾಲಕಿ ಕುಟುಂಬಸ್ಥರು ಪೊಲೀಸ್ ಸ್ಟೇಶನ್ ಎದುರು ಶವ ಇಟ್ಟು ಪ್ರತಿಭಟನೆ ಮಾಡಿದ ಘಟನೆ ರಾಮನಗರ ಜಿಲ್ಲೆ ಬಿಡದಿ ಬಳಿ ನಡೆದಿದೆ.

ಮೂರು ದಿನಗಳ ಹಿಂದೆ ಬಿಡದಿಯ ಭದ್ರಾಪುರ ಬಳಿ ರೈಲ್ವೆ ಹಳಿ ಪಕ್ಕ ಅರೆನಗ್ನಾವಸ್ಥೆಯಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಮಾತು ಬಾರದ, ಕಿವಿ ಕೇಳದ ಬಾಲಕಿ ಮೇಲೆ ಕಾಮುಕ ಅತ್ಯಾಚಾರವೆಸಗಿ, ಬಳಿಕ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹಕ್ಕಿಪಿಕ್ಕಿ ಸಮುದಾಯದವರಾದ ಮೃತ ಬಾಲಕಿ ತಾಯಿ ಆದ ಅನ್ಯಾಯಕ್ಕೆ ನ್ಯಾಯ ಸಿಗುವ ವರೆಗೂ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದು ಕೂತಿದ್ದಾರೆ.

ಶವ ಕೊಳೆತ ಸ್ಥಿತಿಗೆ ಬಂದರೂ ಲೆಕ್ಕಿಸದೆ ಗ್ರಾಮಸ್ಥರು ಧರಣಿ ನಡೆಸುತ್ತಿದ್ದು, ಊರಿನ ಬಾಲಕಿಗೆ ಆಗಿರುವ ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ಊರ ಜನರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಶವದ ಸ್ಥಿತಿ ನೋಡಿದರೆ ಮೂರ್ನಾಲ್ಕು ದಿನಗಳ ಹಿಂದೆಯೇ ಕಾಮುಕ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ. ಒಂದು ದಿನ ಕಳೆದ ನಂತರ ಬಾಲಕಿಯ ಪೋಷಕರಿಗೆ ಮೃತದೇಹ ಪತ್ತೆಯಾಗಿದೆ. ಆ ಸಂದರ್ಭದಲ್ಲೇ ಇದು ಕೊಳೆತ ಸ್ಥಿತಿ ತಲುಪಿದರೂ ಲೆಕ್ಕಿಸದೆ ಪೋಷಕರು ಮೃತ ದೇಹ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯಪಾಲರ ಹಿಂದಿ ಭಾಷಣದ ವಿರುದ್ಧ ಕನ್ನಡದ ಕಟ್ಟಾಳು ವಾಟಾಳ್ ನಾಗರಾಜ್ ಕಿಡಿ
ರಾಮನಗರ : ರಾಜ್ಯಪಾಲರ ಹಿಂದಿ ಭಾಷಣದ ವಿರುದ್ಧ ಕನ್ನಡದ ಕಟ್ಟಾಳು ವಾಟಾಳ್ ನಾಗರಾಜ್ ಕಿಡಿ ಕಾರಿದ್ದಾರೆ

ವಿಧಾನಸಭೆ ಜಂಟಿ ಅಧಿವೇಶನದ ವೇಳೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಿಂದಿಯಲ್ಲಿ ಭಾಷಣ ಮಾಡಿದ್ದನ್ನು ವಿರೋಧಿಸಿರುವ ವಾಟಾಳ್ ನಾಗರಾಜ್ ಇನ್ನು ಮುಂದೆ ರಾಜ್ಯಪಾಲರು ಭಾಷಣವನ್ನು ಕನ್ನಡದಲ್ಲಿ ಮಾಡಲಿ ಎಂದು ಆಗ್ರಹಿಸಿದ್ದಾರೆಕರ್ನಾಟಕ ರಾಜ್ಯದ ಮೇಲೆ ಹಿಂದಿ ಹೇರಿಕೆಯಾಗುತ್ತಿದ್ದು ಇಲ್ಲಿ ಹಿಂದಿ ಭಾಷಣದ ಅಗತ್ಯವಿಲ್ಲ ಎಂದ ವಾಟಾಳ್ ನಾಗರಾಜ್, ಇದು ಕರ್ನಾಟಕವೇ ಹೊರತು ಬೇರೆ ರಾಜ್ಯವಲ್ಲ.. ಹೀಗಾಗಿ ಇಲ್ಲಿ ಕನ್ನಡದಲ್ಲಿ ಭಾಷಣ ಮಾಡಿ ಎಂದು ರಾಜ್ಯಪಾಲರನ್ನು ಒತ್ತಾಯಿಸಿದ್ರು.

ರಾಮನಗರದ ಐಜೂರು ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವ ಮೂಲಕ ಕರ್ನಾಟಕದ ಮೇಲೆ ಹಿಂದಿ ಹೇರಿಕೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ರು. ಅದಲ್ಲದೆ ರಾಜ್ಯದ ಶಾಸಕರೆಲ್ಲರೂ ರಾಜ್ಯಪಾಲರ ಹಿಂದಿ ಭಾಷಣಕ್ಕೆ ವಿರೋಧ ವ್ಯಕ್ತಪಡಿಸಬೇಕಿತ್ತು. ಆದರೆ ಯಾವೊಬ್ಬ ಶಾಸಕನೂ ಈ ಕುರಿತು ಮಾತನಾಡಿಲ್ಲ ಎಂದು ಶಾಸಕರ ವಿರುದ್ಧವೂ ವಾಟಳ್ ಹರಿಹಾಯ್ದರು.

ಕಾಡಾನೆಗಳಿಗೆ ಬ್ರೇಕ್ ಹಾಕಲು ರೈಲ್ವೆ ಬ್ಯಾರಿಕೇಡ್ ಗೆ ಚಿಂತನೆ – ಸಚಿವ ಖಂಡ್ರೆ
ರಾಮನಗರ : ಇತ್ತೀಚೆಗೆ ಜಿಲ್ಲೆಯಲ್ಲಿ ಕಾಡಾನೆಗಳ ಕಾಟ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯ ಜನ ಅಸಮಾಧಾನ ವ್ಯಕ್ತಪಡಿಸಿದ್ದರು.ಹೀಗಾಗಿ ಹೆದ್ದಾರಿಗೆ, ರೈಲ್ವೆ ಹಳಿಗಳತ್ತ ಕಾಡಾನೆಗಳ ಎಂಟ್ರಿ ತಪ್ಪಿಸಲು ತಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅಗತ್ಯ ಹಣ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ರಾಮನಗರದ ಡಿಸಿ ಆಫೀಸ್ ನಲ್ಲಿ ಸ್ಥಳೀಯ ಶಾಸಕರಾದ ಸಿ.ಪಿ. ಯೋಗೇಶ್ವರ್, ಇಕ್ಬಾಲ್ ಹುಸೇನ್ ಜೊತೆಗೆ ಉನ್ನತಮಟ್ಟದ ಸಭೆ ನಡೆಸಿದ ಸಚಿವರು, ಕಾಡಾನೆಗಳು ನಾಡಿಗೆ ಬಂದು ಬೆಳೆಹಾನಿ, ಜೀವಹಾನಿ ಪ್ರಕರಣಗಳು ಘಟಿಸುತ್ತಿದ್ದು, ಇದನ್ನು ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಾವು ಅರಣ್ಯ ಸಚಿವರಾದ ಬಳಿಕ ರಾಮನಗರ ಜಿಲ್ಲೆಗೆ ಒಟ್ಟು 35 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು ಮಾಡಿದ್ದು, 25 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಗೆ ಬೆಂಬಲ ನೀಡಿ: ಹೆಚ್ ಡಿ ಕುಮಾರಸ್ವಾಮಿಯಿಂದ ಜೆಡಿಎಸ್ ಕಾರ್ಯಕರ್ತರಿಗೆ ಸೂಚನೆ
ಬಿಡದಿ (ರಾಮನಗರ ಜಿಲ್ಲೆ): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿಯನ್ನು ಬೆಂಬಲಿಸುವಂತೆ ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭಾನುವಾರ ತಮ್ಮ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಈ (ಚನ್ನಪಟ್ಟಣ ಉಪಚುನಾವಣೆ) ಸೋಲು ಪಕ್ಷದ ಭವಿಷ್ಯವನ್ನು ನಿರ್ಧರಿಸುವುದಿಲ್ಲ, ನಾವು ಮತ್ತೆ ಸಂಘಟಿತರಾಗಿ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡೋಣ ಎಂದು ಇಲ್ಲಿನ ಕೇತಗಾನಹಳ್ಳಿ ನಿವಾಸದಲ್ಲಿ ನಡೆದ ಪಕ್ಷದ ಶಾಸಕರು, ಹಾಲಿ ಮತ್ತು ಮಾಜಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಹೇಳಿದರು.

ನಿಖಿಲ್ ಅವರು ಪಕ್ಷದ ಭವಿಷ್ಯದ ನಾಯಕ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅವರಿಗೆ ಮಾರ್ಗದರ್ಶನ ನೀಡಬೇಕು. ಸದಸ್ಯತ್ವ ಅಭಿಯಾನವನ್ನು ಪುನರಾರಂಭಿಸುವ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು ಮತ್ತು ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದರು.

ಒಗ್ಗಟ್ಟಿನ ಮಂತ್ರ ಪಠಿಸಿದ ಅವರು, ”ನಮ್ಮದು ಕಾರ್ಯಕರ್ತರನ್ನು ಆಧರಿಸಿರುವ ಪಕ್ಷ, ನನಗೆ ಜಾತಿ ರಾಜಕಾರಣದಲ್ಲಿ ನಂಬಿಕೆ ಇಲ್ಲ, ಎಲ್ಲ ಸಮುದಾಯಗಳನ್ನು ಜೊತೆಯಲ್ಲಿ ಕರೆದುಕೊಂಡು ಹೋಗಲು ನಾವು ಬದ್ಧರಾಗಿದ್ದೇವೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕಣಕ್ಕಿಳಿಯಬೇಕು, ನಾವು ಒಗ್ಗಟ್ಟಾಗಿ ಇದ್ದರೆ ನಮ್ಮನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕ: ಡಿಸಿಎಂ ಡಿ ಕೆ ಶಿವಕುಮಾರ್
ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿದ ಪರಿಣಾಮ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಗೆಲುವು

ಕನಕಪುರ, ನ. 24:

“ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಹೊಂದಿದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಕನಕಪುರದಲ್ಲಿ ಭಾನುವಾರ ನಡೆದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ ಸರ್ಕಾರ ನಮ್ಮ ಗೃಹಲಕ್ಷ್ಮೀ ಯೋಜನೆಯನ್ನೇ ನಕಲು ಮಾಡಿ ‘ಮಾಝಿ ಲಡಕಿ ಬಹಿನ್ ಯೋಜನಾ’ ಎಂದು ಹೆಸರಿಟ್ಟು 1,500 ರೂಪಾಯಿಯನ್ನು ಕೊಟ್ಟಿದ್ದರು. ನಾವು ಮಹಾಲಕ್ಷ್ಮಿ ಎನ್ನುವ ಹೆಸರಿಟ್ಟು 3,000 ಸಾವಿರ ಕೊಡುವುದಾಗಿ ಭರವಸೆ ನೀಡಿದ್ದೆವು. ಆದರೆ ಅಲ್ಲಿನ ಬಿಜೆಪಿ ಮೈತ್ರಿ ಸರ್ಕಾರ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹಣ ನೀಡಿದ ಪರಿಣಾಮ ನಮಗಿಂತ ಅವರಿಗೆ ಹೆಚ್ಚು ಮತಗಳು ಬಂದವು.

ಸಾಮಾನ್ಯ ಮಹಿಳೆಯರು ಮುಂದೆ ಬರಬೇಕು

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರುಗಳು ತಮ್ಮ ಹೆಂಡತಿ, ತಂಗಿ, ಅಕ್ಕ ಅಥವಾ ಸಂಬಂಧಿಕರನ್ನು ನಿಲ್ಲಿಸುತ್ತಿದ್ದಾರೆ. ಸಾಮಾನ್ಯ ಮಹಿಳೆಯರು ಅಧಿಕಾರದ ಗದ್ದುಗೆ ಇರಲು ಮುಂದಕ್ಕೆ ಬರಬೇಕು.

ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಳ್ಳಿ

ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಗೆ ಒಪ್ಪಿಗೆ ದೊರೆತಿದೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಬೇಕಾಗಬಹುದು. ಅದಕ್ಕಾಗಿ ಸಾಮಾನ್ಯ ಮಹಿಳೆಯರು ಈಗಿನಿಂದಲೇ ತಮ್ಮಲ್ಲಿರುವ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಿ.

ಸ್ತ್ರೀಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೆ ನಾವು

ಎಸ್ಎಂ. ಕೃಷ್ಣ ಅವರ ಸಂಪುಟದಲ್ಲಿ ನಾನು ಸಹಕಾರ ಸಚಿವನಾಗಿದ್ದೆ. ಆಗ ಈ ಸ್ತ್ರೀ ಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೆ ನಾವು. ಸಹಕಾರ ಇಲಾಖೆಯ ಅಡಿಯಲ್ಲಿ ಬರುವ ಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ಸ್ವಸಹಾಯ ಗುಂಪುಗಳಿದ್ದವು, ಇವುಗಳನ್ನೇ ಸ್ತ್ರೀಶಕ್ತಿ ಸಂಘಗಳೆಂದು ಪರಿವರ್ತಿಸಿ, ಸಚಿವರಾಗಿದ್ದ ಮೋಟಮ್ಮ ಅವರಿಗೆ ನೇತೃತ್ವ ನೀಡಲಾಯಿತು.

ಮಹಿಳೆಯರ ಆರ್ಥಿಕ ಸ್ಥಿತಿ ಆರೋಗ್ಯವಾಗಿರಬೇಕು

ಸ್ತ್ರೀ ಶಕ್ತಿ ಸಂಘಗಳು ಮಾಡಿದ ಪರಿಣಾಮವಾಗಿ ಹೆಣ್ಣು ಮಕ್ಕಳು ಮನೆಯಲ್ಲಿ ಇರುತ್ತಿಲ್ಲ ಇಂದು ಅನೇಕ ನಾಯಕರು ನನಗೆ ಬೈದರು. ಮನೆಯಲ್ಲಿ ಹೆಣ್ಣಿಗೆ ಆರ್ಥಿಕವಾಗಿ ಶಕ್ತಿ ಕೊಡಬೇಕು ಎಂದು ಈ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತೆ. ಹೆಣ್ಣು ಕುಟುಂಬದ ಕಣ್ಣು. ಕುಟುಂಬದಲ್ಲಿ ಹೆಣ್ಣಿನ ಮನಸ್ಥಿತಿ, ಪರಿಸ್ಥಿತಿ ಆರೋಗ್ಯವಾಗಿ ಇದ್ದರೆ, ನಾವೆಲ್ಲರೂ ಆರೋಗ್ಯವಾಗಿ ಇದ್ದಂತೆ. ಪುರುಷರೂ ಇದಕ್ಕೆ ಕೊಡುಗೆ ಕೊಡಬೇಕು.

ಮಹಿಳೆಯರು ಜಮೀನು ಮಾರಲು ಬಿಡಬೇಡಿ

ಯಾವುದೇ ಕಾರಣಕ್ಕೂ ತಮ್ಮ ಪಾಲಿನ ಭೂಮಿ ಮಾರಾಟ ಮಾಡದಂತೆ ಮನೆಯ ಪುರುಷರಿಗೆ ಮಹಿಳೆಯರು ಬುದ್ಧಿ ಮಾತು ಹೇಳಬೇಕು. ಏಕೆಂದರೆ ಭೂಮಿಯ ಬೆಲೆ ಹೆಚ್ಚಾಗಿದೆ. ನಾನು ಮೊದಲ ಬಾರಿಗೆ ಇಲ್ಲಿ ಚುನಾವಣೆಗೆ ನಿಂತಾಗ, ಒಂದು ಎಕರೆಗೆ ಎರಡರಿಂದ ಮೂರು ಲಕ್ಷ ಮಾತ್ರ ಇತ್ತು. ಈಗ 50 ಲಕ್ಷ ಬೆಲೆಬಾಳುತ್ತದೆ.

ಇದನ್ನು ರಾಮನಗರ ಜಿಲ್ಲೆ ಎಂದು ಕರೆಯಬಹುದು ಆದರೆ ಮೂಲತಃ ನಾವೆಲ್ಲರೂ ಬೆಂಗಳೂರು ಜಿಲ್ಲೆಗೆ ಸೇರಿದವರು. ಕನಕಪುರ ಎಷ್ಟರಮಟ್ಟಿಗೆ ಅಭಿವೃದ್ಧಿ ಆಗುತ್ತದೆ ಎಂಬುದನ್ನು ನಾನು ಬಹಿರಂಗವಾಗಿ ಹೇಳುವುದಿಲ್ಲ. ಭೂಮಿ ಕಳೆದುಕೊಂಡರೆ ನಿಮ್ಮ ಜೇಬಿಗೆ ದುಡ್ಡನ್ನು ನಾನು ಹಾಕಲು ಆಗುವುದಿಲ್ಲ. ಜಮೀನು ಮಾರಿದರೆ ಒಳ್ಳೆಯ ಬೆಲೆ ಬರುತ್ತದೆ ಎಂದು ಆಮಿಷಕ್ಕೆ ಒಳಗಾಗಬೇಡಿ. ಯಾವುದೇ ಕಾರಣಕ್ಕೂ ಒಂದು ಕುಂಟೆ ಜಮೀನನ್ನು ಕಳೆದುಕೊಳ್ಳಬೇಡಿ.

ಕನಕಪುರಕ್ಕೆ ಹೊಸ ರೂಪ ನೀಡಬೇಕಾಗಿದೆ

ನಾವು ಇನ್ನೂ ಅಭಿವೃದ್ಧಿಯ ಮೈಲಿಗಲ್ಲನ್ನು ಸಾಧಿಸಬೇಕಾಗಿದೆ. ಕನಕಪುರಕ್ಕೆ ಹೊಸ ರೂಪವನ್ನು ನೀಡಬೇಕಾಗಿದೆ. 2025 ಕ್ಕೆ ಕನಕಪುರದ ಅಭಿವೃದ್ಧಿಗೆ ಹೊಸ ಕಾರ್ಯಕ್ರಮಗಳನ್ನು ನೀಡಲಾಗುವುದು. ಸರ್ಕಾರದಲ್ಲಿ ಹೆಚ್ಚಿನ ಜವಾಬ್ದಾರಿ ಇರುವ ಕಾರಣ ನಿಮ್ಮನ್ನು ಭೇಟಿಯಾಗಲು ಆಗುತ್ತಿಲ್ಲ. ಮುಂದಿನ ದಿನಗಳಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮೆಲ್ಲರ ಅಹವಾಲುಗಳನ್ನು ಕೇಳಲಾಗುವುದು.

ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ

ನನಗೆ ಯುವಕರು ಹಾಗೂ ಮಹಿಳೆಯರ ಮೇಲೆ ನಂಬಿಕೆ ಹೆಚ್ಚು. ಪಕ್ಷ ಅಧಿಕಾರಕ್ಕೆ ಬಂದರೆ ಇವರಿಗೆ ಸಹಾಯ ಮಾಡಬೇಕು ಎಂಬುದು ನನ್ನ ಅಭಿಲಾಷೆಯಾಗಿತ್ತು. ನಾನು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾದಾಗ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಭರವಸೆ ನೀಡಲಾಯಿತು. ಅದೇ ರೀತಿ ಅಧಿಕಾರಕ್ಕೆ ಬಂದ ತಕ್ಷಣ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ.

ಕೇವಲ ಸಾಲ ಪಡೆಯಬಾರದು, ಉದ್ಯೋಗ ನೀಡಬೇಕು

ಕನಕಾಂಬರಿ ಮಹಿಳಾ ಒಕ್ಕೂಟದ ಗೌರವ ಅಧ್ಯಕ್ಷ ಶ್ರೀಕಂಠು ಅವರ ನೇತೃತ್ವದಲ್ಲಿ ನಿಮಗೆ ಕೆನರಾ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಇವುಗಳನ್ನು ನೀವು ಬಳಸಿಕೊಂಡು ಉತ್ತಮ ಮಟ್ಟಕ್ಕೆ ಬೆಳೆದಿದ್ದೀರಿ ಎನ್ನುವುದು ನನ್ನ ಭಾವನೆ. ಸಾಲ ತೆಗೆದುಕೊಂಡವರು ಉತ್ತಮವಾಗಿ ಪಾವತಿ ಮಾಡುತ್ತಿದ್ದೀರಿ ಎಂಬುದನ್ನು ನಾನು ಕೇಳಲ್ಪಟ್ಟೆ.

ಈ ಸಂಸ್ಥೆಯಿಂದ ಸಾಲವನ್ನು ಪಡೆದವರು ತಮ್ಮ ಬದುಕನ್ನು ಗಟ್ಟಿಯಾಗಿ ಕಟ್ಟಿಕೊಳ್ಳಬೇಕು. ಕೇವಲ ಸಾಲ ಪಡೆಯುವವರಾಗಬಾರದು. ನೀವು ಸಾಲ ಪಡೆದು ಸ್ವಂತ ಉದ್ಯೋಗವನ್ನು ಕಟ್ಟಿ ನಾಲ್ಕು ಜನಕ್ಕೆ ಉದ್ಯೋಗ ಸೃಷ್ಟಿ ಮಾಡಬೇಕು.

ನಮ್ಮ ಸಂಸ್ಕೃತಿಯಲ್ಲಿ ಹೆಣ್ಣಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಯಾವುದೇ ದೇವರ ಹೆಸರನ್ನು ಕರೆಯುವಾಗ ಲಕ್ಷ್ಮೀ ವೆಂಕಟೇಶ್ವರ, ಶಿವ ಪಾರ್ವತಿ ಎಂದು ಕರೆಯಲಾಗುತ್ತದೆ. ಶ್ರೀಮತಿ ಹಾಗೂ ಡಿ. ಕೆ. ಶಿವಕುಮಾರ್ ಎಂದು ಲಗ್ನ ಪತ್ರಿಕೆಯಲ್ಲಿ ಬರೆಯುತ್ತಾರೆ.

ನಾನು ಈ ರಾಜ್ಯದ ಡಿಸಿಎಂ ಆಗಿರಬಹುದು ಆದರೆ ಮೊಟ್ಟ ಮೊದಲನೆಯದಾಗಿ ಈ ಕನಕಪುರದ ಮಗ. ನನ್ನ ಬೆಳೆಸಿದವರು ನೀವು. ನನ್ನ ಪರವಾಗಿ ಪ್ರತಿ ಚುನಾವಣೆಯಲ್ಲಿ ನಿಂತು ರಾಜಕೀಯವಾಗಿ ಬೆಳೆಸಿದವರು ನೀವು. ನನಗೆ ಶಕ್ತಿ ಕೊಟ್ಟವರು ಇಲ್ಲಿನ ಜನತೆ ಈ ಕಾರಣಕ್ಕೆ ಇಡೀ ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ಕೊಡುವಷ್ಟು ಅಧಿಕಾರ ನಮಗೆ ಸಿಕ್ಕಿದೆ.

ಶುಭಂ ಕರೋತಿ ಕಲ್ಯಾಣಂ, ಆರೋಗ್ಯ ಧನ ಸಂಪದಂ, ಜ್ಞಾನಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ. ಎನ್ನುವ ಶ್ಲೋಕದ ಮಾತಿನಂತೆ ಗೆಳೆಯ ಹಾಗೂ ಕನಕಪುರ ರೂರಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ, ಹಾಗೂ ಕನಕಾಂಬರಿ ಮಹಿಳಾ ಒಕ್ಕೂಟದ ಗೌರವ ಅಧ್ಯಕ್ಷ ಶ್ರೀಕಂಠು ಅವರು ಹೆಚ್ಚಿನ ಜನ ಸೇವೆ ಮಾಡಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಕನಕಪುರ ರೂರಲ್ ಎಜುಕೇಷನ್ ಸೊಸೈಟಿಯ ನಿರ್ದೇಶಕ ಮಂಡಳಿಯಲ್ಲಿ ನಾನೂ ಇದ್ದೇನೆ. ಈ ಹಿಂದೆ ಭೂಮಿಯ ಬೆಲೆ ಕಡಿಮೆ ಇದ್ದಾಗ ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದೆ. ಈಗ ನನ್ನ ಮಾತಿನ ಬೆಲೆ ಇವರಿಗೆ ಅರ್ಥವಾಗಿದೆ. ಈ ಸಂಸ್ಥೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಯನ್ನು ಕೊಡಲಾಗಿದೆ. ಕೃಷಿ ಬಿಎಸ್ಸಿ ಸೇರಿದಂತೆ ಅನೇಕ ಕೋರ್ಸ್ ಗಳನ್ನು ಪ್ರಾರಂಭ ಮಾಡಲು ಅನುಮತಿ ಕೊಡಿಸಿದ್ದೇನೆ. ನಾನು ಸಹ ಒಂದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ್ದೇನೆ. ಇದರ ಜೊತೆ ಪೈಪೋಟಿ ನಡೆಸುವುದು ಬೇಡ ಎಂದು ನನ್ನ ದೊಡ್ಡ ಆಲಹಳ್ಳಿಯಲ್ಲಿ ಇದ್ದ ಜಮೀನನ್ನು ಸರ್ಕಾರಿ ಶಾಲೆಗೆ ಬರೆದುಕೊಟ್ಟಿದ್ದೇವೆ.

65 ವಸಂತಗಳನ್ನು ಪೂರೈಸಿರುವ ಕನಕಪುರ ರೂರಲ್ ಎಜುಕೇಷನ್ ಸೊಸೈಟಿಯ ಶ್ರೀಕಂಠು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನೂ ಹೆಚ್ಚು ಜನಸೇವೆ ಮಾಡುವ ಶಕ್ತಿ ಅವರಿಗೆ ದೊರಕಲಿ.

ದರ್ಶನ್ ಧ್ರುವ ನಾರಾಯಣ್ ಗೆ ಉತ್ತಮ ಭವಿಷ್ಯವಿದೆ

ದರ್ಶನ್ ಧ್ರುವನಾರಾಯಣ್ ಚಿಕ್ಕ ವಯಸ್ಸಿನಲ್ಲಿ ಶಾಸಕನಾಗಿ ನಮ್ಮ ಜೊತೆ ಕೆಲಸ ಮಾಡುತ್ತಿದ್ದಾನೆ. ಅವರ ತಂದೆ ಅಕಾಲಿಕವಾಗಿ ಮರಣ ಹೊಂದದೆ ಇದ್ದಿದ್ದರೆ, ನಮ್ಮ ಜೊತೆ ಸಂಪುಟದಲ್ಲಿ ಮಂತ್ರಿ ಆಗುವುದನ್ನು ಯಾರು ಕೂಡ ತಪ್ಪಿಸಲು ಆಗುತ್ತಿರಲಿಲ್ಲ. ದರ್ಶನ್ ಧ್ರುವ ನಾರಾಯಣ್ ಗೆ ಉತ್ತಮ ಭವಿಷ್ಯವಿದೆ.

ದೇವೇಗೌಡರೇ ನಿಮ್ಮ ಪಾಳೆಗಾರಿಕೆ-ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ. ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ: ಸಿ ಎಂ
ಚನ್ನಪಟ್ಟಣ ನ 11: ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇಲ್ಲಿನ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ ಬಗ್ಗೆ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ ಮತ್ತು ಗೌರವ ಹಾಗೂ ಕಾಳಜಿ ಇಟ್ಟುಕೊಂಡಿದ್ದಾರೆ. ಹೀಗಾಗಿ ರೈತ ಕುಲದ ಉದ್ದಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ‌ ಎನ್ನಿಸಿಕೊಂಡರು ಎಂದು ಮೆಚ್ಚುಗೆ ಸೂಚಿಸಿದರು.

ಮಂಡ್ಯ ಲೋಕಸಭೆಯಲ್ಲಿ, ರಾಮನಗರ ವಿಧಾನಸಭೆಯಲ್ಲಿ ನಿಖಿಲ್ ಸೋತಿದ್ದಾರೆ. ಈಗ ಚನ್ನಪಟ್ಟಣಕ್ಕೆ ಕರೆತಂದು ನಿಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಭಾವ, ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರ ಗೆಲುವಿಗೆ ಯೋಗೇಶ್ವರ್ ಅವರು ಬಹಳ ಶ್ರಮಿಸಿದರು. ಆಗಲೇ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರಿಗೆ ಬೆಂಬಲಿಸಿ ಗೆಲ್ಲಿಸುವ ಭರವಸೆ ನೀಡಿದ್ದರು. ಆದರೆ ಚುನಾವಣೆ ಬಂದಾಗ ಕೈ ಕೊಟ್ಟರು ಎಂದು ವ್ಯಂಗ್ಯವಾಡಿದರು.‌

ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಬ್ಬೇ ಒಬ್ಬ ಒಕ್ಕಲಿಗರನ್ನೂ ಬೆಳೆಯಲು ಬಿಡಲ್ಲ. ನಾನು ಹಿಂದುಳಿದವನು ಅಂತ ನನ್ನನ್ನು ವಿರೋಧಿಸ್ತಾರೆ, ಓಕೆ. ಆದರೆ, ವೈ.ಕೆ.ರಾಮಯ್ಯ, ನಾಗೇಗೌಡ, ಬಚ್ಚೇಗೌಡ, ವರದೇಗೌಡ, ಪಟ್ಟಣ್ಣ, ಚಲುವರಾಯಸ್ವಾಮಿ, ಬಾಲಕೃಷ್ಣ, ಭೈರೇಗೌಡ, ಕೆ.ಆರ್.ಪೇಟೆ ಚಂದ್ರಶೇಖರ್ ಸೇರಿ ಸಾಲು ಸಾಲು ಒಕ್ಕಲಿಗರನ್ನು ರಾಜ್ಯದಲ್ಲಿ ಮುಗಿಸಿದರು. ರಾಜ್ಯದಲ್ಲಿ ಒಕ್ಕಲಿಗ ನಾಯಕತ್ವವೇ ಬೆಳೆಯದಂತೆ ಮಾಡುತ್ತಿದ್ದಾರೆ ಎಂದರು.

ಬುದ್ದವಂತ ಒಕ್ಕಲಿಗರು, ರಾಜಕೀಯ ಪ್ರಜ್ಞೆ ಇರುವ ಒಕ್ಕಲಿಗರು ಯಾರನ್ನೂ ದೇವೇಗೌಡರು ಬೆಳೆಯಲು ಬಿಡದೆ ಮುಗಿಸ್ತಾರೆ. ಈಗ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರನ್ನೂ ಮುಗಿಸುವ ಪರಯತ್ನ ಮಾಡ್ತಿದ್ದಾರೆ. ಆದರೆ ಇದು ಆಗಲ್ಲ. ನಾನು ಜಿ.ಟಿ.ದೇವೇಗೌಡರಿಗೂ ಎಚ್ಚರಿಸಿದ್ದೀನಿ. ಅಲ್ಲಿದ್ದರೆ ಮುಗಿಸ್ತಾರೆ. ಬೇಗ ಹೊರಗೆ ಬಂದ್ರೆ ನಿಮಗೆ ಒಳ್ಳೆಯದು ಎಂದು ಎಚ್ಚರಿಸಿದ್ದೀನಿ. ಮನೆ ಮಗ ಅಂತಿದ್ದ ಬಿ.ಎಲ್.ಶಂಕರ್, ವೈ.ಕೆ.ರಾಮಯ್ಯ ಅವರನ್ನೇ ಮುಗಿಸಿದವರು ಇನ್ನು ಯೋಗೇಶ್ವರ್ ಅವರನ್ನು ಸಹಿಸ್ತಾರಾ ಎಂದರು.

ಮೋದಿಯಂಥಾ ಸುಳ್ಳುಗಾರ ಇಲ್ಲ ಅಂದಿದ್ದ ದೇವೇಗೌಡರು

ಭಾರತ ಮೋದಿಯವರಂತಹಾ ಸುಳ್ಳ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡರು ಹೇಳಿದ್ದರು. ಈಗ ಮೋದಿಯವರನ್ನು ಯದ್ವಾತದ್ವಾ ಹೊಗಳುತ್ತಿದ್ದಾರೆ ಎಂದು ಛೇಡಿಸಿದರು.‌

ನಾನು, ಜಾಲಪ್ಪ ಅವರು ಇಲ್ಲದೇ ಹೋಗಿದ್ದರೆ 1994 ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಲು ಸಾಧ್ಯವೇ ಇರಲಿಲ್ಲ. ದೇವೇಗೌಡರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ರಾಷ್ಟ್ರೀಯ ಅಧ್ಯಕ್ಷರಾದ ಎಸ್.ಆರ್.ಬೊಮ್ಮಾಯಿ ಸಿದ್ದರಿರಲಿಲ್ಲ. ಏಕೆಂದರೆ ಇವರು ಬೊಮ್ಮಾಯಿ ಸರ್ಕಾರವನ್ನು ಕೆಡವಿದ್ದರು. ಆದರೂ ಆ ಸಂದರ್ಭದಲ್ಲಿ ನಾವೆಲ್ಲಾ ಒಟ್ಟಾಗಿ ದೇವೇಗೌಡರ ಪರವಾಗಿ ನಿಂತೆವು. ಈಗ ಸಿದ್ದರಾಮಯ್ಯ ಅವರಿಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ. ಇದು ಪಾಳೇಗಾರಿಕೆ ಅಲ್ವಾ ದೇವೇಗೌಡರೇ ಎಂದು ಪ್ರಶ್ನಿಸಿದರು.

ಆಕಸ್ಮಿಕವಾಗಿ ಪ್ರಧಾನಿ ಆದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ ? ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ ಬಿಜೆಪಿ ಯಿಂದ ಬೇರೆ ಯಾರಾದರೂ ನಿಂತಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಚನ್ನಪಟ್ಟಣದಲ್ಲಿ ನಿಂತು ಮತ ಕೇಳ್ತಿದ್ರಾ ? NDA ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧಿಸಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಇದ್ದು ಮತ ಕೇಳ್ತಿದ್ರಾ ಎಂದು ಪ್ರಶ್ನಿಸಿದರು.

ಇರಲಿ, ಚನ್ನಪಟ್ಟಣಕ್ಕೆ ಏನು ಮಾಡಿದ್ದೀರಿ ಎನ್ನುವುದನ್ನು ಕ್ಷೇತ್ರದ ಜನತೆ ಕೇಳಬೇಕು. ಬರೀ ಕಣ್ಣೀರು ಹಾಕೋದಲ್ಲ. ಅತ್ಯಾಚಾರಕ್ಕೆ ಒಳಗಾದ ಹಾಸನದ ಹೆಣ್ಣು‌ಮಕ್ಕಳ ಪರವಾಗಿ ಕಣ್ಣೀರೇ ಬರಲಿಲ್ಲ ಪಾಪ ದೇವೇಗೌಡರಿಗೆ ಎಂದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದೆ ಅಂತ ದೇವೇಗೌಡರಿಗೆ ಹೊಟ್ಟೆಯುರಿ. ಅದಕ್ಕೇ ನಮ್ಮ ಸರ್ಕಾರ ಕಿತ್ತಾಕುತ್ತೇವೆ ಎನ್ನುತ್ತಿದ್ದಾರೆ. ರಾಜ್ಯದ ಜನತೆ ಆರಿಸಿರುವ ನಮ್ಮ‌ ಸರ್ಕಾರವನ್ನು ಕುಮಾರಸ್ವಾಮಿ, ದೇವೇಗೌಡರಿಂದ ಕೀಳಲು ಸಾಧ್ಯವಿಲ್ಲ. ನಿಮ್ಮ ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ ಹೊರತು ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ ದೇವೇಗೌಡರೇ ಎಂದರು.

ಮೊದಲ ಬಾರಿ ಸಿಎಂ ಆಗಿ ಹತ್ತು ಹಲವು ಭಾಗ್ಯಗಳನ್ನು ನೀಡಿದೆ. ಎರಡನೇ ಬಾರಿ ಸಿಎಂ ಆಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ನಮ್ಮ ಸಾಧನೆಯ ಸಾಕ್ಷಿ ರಾಜ್ಯದ ಜನತೆಯ ಎದುರಿಗೆ ಇಟ್ಟಿದ್ದೀವಿ.

ನೀವು ಏನು ಸಾಧನೆ ಮಾಡಿದ್ದೀರಿ ಅಂತ ಚನ್ನಪಟ್ಟಣ ಜನತೆಯ ಎದುರು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದ್ದೀರಿ ಎಂದು ಪ್ರಶ್ನಿಸಿದರು.

400 ಕೋಟಿ ವೆಚ್ಚದ ಹಾಲಿನ ಪುಡಿ ಘಟಕ ಮಾಡಿದ್ದು ನಾವು. ಕನಕಪುರದಲ್ಲಿ 2016 ರಲ್ಲಿ ಡೈರಿ ಸಂಕೀರ್ಣವನ್ನು 700 ಕೋಟಿ ರೂ ವೆಚ್ಚದಲ್ಲಿ ಮಾಡಿದ್ದು ನಾವು. ಇಂಥವು ಇನ್ನೂ ಪಟ್ಟಿ ದೊಡ್ಡದಿದೆ. ಕುಮಾರಸ್ವಾಮಿ ಅವರು ಇಂಥಾ ಒಂದೇ ಒಂದನ್ನು ಮಾಡಿದ್ದಾರಾ ಹೇಳಿ ದೇವೇಗೌಡರೇ . ಇದನ್ನು ಚನ್ನಪಟ್ಟಣ ಜನತೆ ಕೂಡ ಕೇಳಬೇಕು ಎಂದು ಕರೆ ನೀಡಿದರು.

ಗ್ಯಾರಂಟಿಗಳನ್ನು ನಿಲ್ಸಲ್ಲ-ನಿಲ್ಸಲ್ಲ-ನಿಲ್ಸಲ್ಲ: ಸಿ.ಎಂ

ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಸಲ್ಲ, ನಿಲ್ಸಲ್ಲ, ನಿಲ್ಸಲ್ಲ ಎಂದು ಘೋಷಿಸಿದರು.

ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅಧಿಕೃತ ಘೋಷಣೆ ಮಾಡಿದ್ದೇವೆ ಎಂದು ಪುನರುಚ್ಚರಿಸಿದರು.