ವಿಜಯನಗರ – Peepal Media

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ : ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಜಯನಗರ(ಹೊಸಪೇಟೆ) ಮೇ 16: ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಕೆಲಸವನ್ನು ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿಗಳ ಆದೇಶ ಹೊರತಾಗಿಯೂ , ಕೆಲಸ ಮುಂದುವರೆದಿರುವ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದರು.

ಗ್ಯಾರಂಟಿಗಳಿಗೆ ಹಣದ ಕೊರತೆಯಿಲ್ಲ

ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ ಎಂದರು.

ಹೊಸಪೇಟೆಯಲ್ಲಿ ಎರಡು ವರ್ಷದ ಸಾಧನಾ ಸಮಾವೇಶ

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ ಎಂದರು.

ಆಡಳಿತಾತ್ಮಕ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ರಚನೆ

ಗ್ರೇಟರ್ ಬೆಂಗಳೂರು ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಟೀಕಿಸುತ್ತಿರುವ ಬಗ್ಗೆ ಉತ್ತರಿಸಿ, ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ವಿಭಾಗಗಳನ್ನು ರಚಿಸಬೇಕೆಂದು ಅಂದಿನ ಬಿಜೆಪಿಯ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ರವರು ಯೋಜಿಸಿದ್ದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನ ನೆಲೆಸಿದ್ದು, ಈ ನಗರದ ಆಡಳಿತವನ್ನು ಒಂದು ಮಹಾನಗರ ಪಾಲಿಕೆ ನಿರ್ವಹಿಸುವುದು ಕಷ್ಟಸಾಧ್ಯ. ಆದ್ದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಹೆಚ್ಚು ಮಹಾನಗರಪಾಲಿಕೆಗಳನ್ನು ರಚಿಸಬೇಕೆಂಬ ಚಿಂತನೆಯಿಂದ ನನ್ನ ಹಿಂದಿನ ಮುಖ್ಯಮಂತ್ರಿಯ ಅವಧಿಯಲ್ಲಿ ಬಿ.ಎಸ್.ಪಾಟೀಲ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಆದ್ದರಿಂದ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ, ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದರು.

ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ

ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅನರ್ಹತೆಯ ಕುರಿತ ಪ್ರಶ್ನೆಗೆ ಉತ್ತರಿಸಿ, ನ್ಯಾಯಾಲಯ ಅವರಿಗೆ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ. ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ ಎಂದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು

2008-2013ರವರೆಗೆ ವಿರೋಧಪಕ್ಷದ ನಾಯಕನಾಗಿ , ಲೋಕಾಯುಕ್ತ ಸಂತೋಷ್ ಹೆಗಡೆ ಅವರ ಅಕ್ರಮ ಗಣಿಗಾರಿಕೆಯ ವರದಿ ಆಧರಿಸಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಅಂದು ಬಿಜೆಪಿಸರ್ಕಾರದ ಅದನ್ನು ವಿರೋಧಿಸಿತ್ತು. ಅಂದು ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ ಹೋರಾಟಕ್ಕೆ ಇಂದು ಫಲ ದೊರೆತಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು ಹಾಗೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ತಿಳಿಸಿದರು.

ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ಸದಾ ವಿರೋಧಿಸಿದ್ದೇನೆ

ಸಿದ್ದರಾಮಯ್ಯನವರು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದರು ಎಂದು ಜನಾರ್ಧನ ರೆಡ್ಡಿಯವರ ಹೇಳಿಕೆಯ ಬಗ್ಗೆ ಪ್ರತಿಕ್ರಯಿಸಿ, ಅವರ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಎಂದರು.

ಹಂಪಿ ವಿ.ವಿ ಮೂರು ಜನ ಗಣ್ಯರಿಗೆ ನಾಡೋಜ ಗೌರವ ಪದವಿ ಪ್ರದಾನ
ವಿಜಯನಗರ : ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮೂರು ಜನ ಗಣ್ಯರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಡಾ.ಡಿ.ವಿ. ಪರಮಶಿವಮೂರ್ತಿ ತಿಳಿಸಿದ್ದಾರೆ ಹಂಪಿ ಕನ್ನಡ ವಿವಿಯ 33 ನೇ ನುಡಿಹಬ್ಬ ಏಪ್ರಿಲ್‌ 04ರಂದು ನಡೆಯಲಿದ್ದು, ಮೂವರು ಸಾಧಕರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಲಾಗುವುದು, ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್, ವಿಜಯನಗರದ ಕೊಟ್ಟೂರಿನ ಸಾಹಿತಿಗಳಾದ ಕುಂ ವೀರಭದ್ರಪ್ಪ, ಧಾರವಾಡದ ಹಿಂದೂಸ್ಥಾನಿ ಸಂಗೀತ ಕ್ಷೇತ್ರದ ಗಾಯಕ ಪಂಡೀತ್ ವೆಂಕಟೇಶ ಕುಮಾರ್ ಅವರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಲಾಗುವುದು.

ಘಟಿಕೋತ್ಸವದ ಭಾಷಣವನ್ನು ಸಸ್ಯಶಾಸ್ತ್ರಜ್ಞ ಪ್ರೊ.ಎ ರಾಜಾಸಾಬ್ ಮಾಡಲಿದ್ದು, ನಾನಾ ವಿಭಾಗದ 198 ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಕ ಸಚಿವ ಡಾ. ಎಂ.ಸಿ. ಸುಧಾಕರ್ ಪಿಎಚ್‌ಡಿ ಪದವಿ ಪ್ರದಾನ ಮಾಡಲಿದ್ದಾರೆ, ಇಬ್ಬರು ಯಕ್ಷಗಾನ ಕಲಾವಿದರು ಸೇರಿ 7 ಜನರಿಗೆ ಡಿ. ಲಿಟ್ ಪ್ರದಾನ ಮಾಡಲಾಗುತ್ತಿದ್ದು. ಹಂಪಿ ಕನ್ನಡ ವಿವಿಯ 33 ನೇ ನುಡಿಹಬ್ಬಕ್ಕೆ ರಾಜ್ಯಪಾಲರು ಮತ್ತು ಉನ್ನತ ಶಿಕ್ಷಣ ಸಚಿವರು ಭಾಗಿಯಾಗಲಿದ್ದಾರೆ.

ರೈತರ ವಿಷಯದಲ್ಲಿ ಚೆಲ್ಲಾಟ ಆಡಿದರೆ ಹುಷಾರ್: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
ವಿಜಯನಗರ ಜೂ21: ರೈತರಿಗೆ ಬೀಜ ಗೊಬ್ಬರದ ಕೊರತೆ ಆಗಬಾರದು. ಆದರೆ ನಿಮ್ಮನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಆಗಿರುವ ಮಳೆ ಮತ್ತು ಕೃಷಿ ಚಟುವಟಿಕೆಗಳ ಮಾಹಿತಿ ಪಡೆಯುವ ಮೂಲಕ ಮುಖ್ಯಮಂತ್ರಿಗಳು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಆರಂಭಿಸಿದರು. ಸಮಾಧಾನಕರವಾಗಿ ಮಳೆ ಆಗಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ರೈತರಿಗೆ ಅಗತ್ಯವಾದ ಬೀಜ, ರಸಗೊಬ್ಬರ ಇತ್ಯಾದಿ ಅಗತ್ಯಗಳ ಸಂಗ್ರಹದ ಪ್ರಮಾಣ ಎಷ್ಟಿದೆ ಎನ್ನುವ ಕುರಿತಂತೆ ಒಂದೊಂದಾಗಿ ಮಾಹಿತಿ ಪಡೆದು ಒಮ್ಮೆ ಕೊಟ್ಟ ಬೀಜ ಮೊಳಕೆಯೊಡೆಯದಿದ್ದರೆ ಎರಡನೇ ಸುತ್ತು ಕೂಡ ಬೀಜಗಳನ್ನು ಕಡ್ಡಾಯವಾಗಿ ರೈತರಿಗೆ ವಿತರಿಸಬೇಕು. ರೈತರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.

ಉಪ ರೈತ ಸಂಪರ್ಕಗಳನ್ನು ಹೆಚ್ಚೆಚ್ಚು ತೆರೆದು ರೈತರಿಗೆ ಬೀಜ, ರಸಗೊಬ್ಬರ ವಿತರಣೆ ಮಾಡಲು ಏನು ಸಮಸ್ಯೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಹಗರಿಬೊಮ್ಮನಹಳ್ಳಿ ಸೇರಿ ನಾನಾ ತಾಲ್ಲೂಕುಗಳಲ್ಲಿ ಈ ವ್ಯವಸ್ಥೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು.

ಬರ ಪರಿಹಾರ 130 ಕೋಟಿ ವಿತರಣೆಯಾಗಿದೆ: ಜಿಲ್ಲೆಯಲ್ಲಿ ಬಾಕಿ ಇಲ್ಲ

ರಾಜ್ಯ ಸರ್ಕಾರದಿಂದ ನೀಡಿದ ಬರ ಪರಿಹಾರದ ಮೊತ್ತ 130 ಕೋಟಿ ರೂಪಾಯಿಗಳನ್ನು ಸಂಪೂರ್ಣವಾಗಿ ವಿತರಣೆಯಾಗಿದೆ. ಜಿಲ್ಲೆಯಲ್ಲಿ ಯಾವ ಅರ್ಹ ರೈತರಿಗೂ ಬಾಕಿ ಉಳಿಸಿಕೊಂಡಿಲ್ಲ ಎಂದು ಅಧಿಕಾರಿಗಳು ದಾಖಲೆ ಮುಂದಿಟ್ಟು ವಿವರಿಸಿದರು.

ಬೆಳೆ ಸಮೀಕ್ಷೆಗಳನ್ನು ವೈಜ್ಞಾನಿಕವಾಗಿ ನಡೆಸಿ ಒಬ್ಬರಿಗೂ ಅನ್ಯಾಯ ಆಗದಂತೆ ಪ್ರತಿಯೊಬ್ಬ ರೈತರಿಗೂ ಡಿಬಿಟಿ ಮೂಲಕ ಒಬ್ಬರಿಗೂ ಬಾಕಿ ಉಳಿಯಂತೆ ಅವರ ಖಾತೆಗಳಿಗೆ ಹಣ ಜಮೆ ಆಗಿರುವುದನ್ನು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಬೆಳೆ ವಿಮೆ ಸಮರ್ಪಕವಾಗಿ ದೊರಕಿಸಲಾಗಿದೆ

ಅತಿ ಹೆಚ್ಚುಮಳೆಯಿಂದ ಆದ ಹಾನಿ, ನೋಂದಣಿ ಮಾಡಿಕೊಂಡ ಎಲ್ಲಾ ರೈತರಿಗೂ, ಬೆಳೆ ಕಟಾವು ಹೊತ್ತಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಳೆ ವಿಮೆ ವಿತರಣೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ರೈತರ ಜಮೀನುಗಳಿಗೆ ಹೋಗಿ ಮಣ್ಣಿನ ಗುಣಮಟ್ಟಕ್ಕೆ ತಕ್ಕಂತೆ ರೈತರಿಗೆ ತಿಳಿವಳಿಕೆ ನೀಡಿದ್ದೀರಾ ಎಂದು ಪ್ರಶ್ನಿಸಿದ ಅಧಿಕಾರಿಗಳು, ಯಾವ ಯಾವ ಅಧಿಕಾರಿಗಳು ಯಾವ ಯಾವ ಹಳ್ಳಿಗೆ ಹೋಗಿದ್ದೀರಿ? ಎಷ್ಟು ರೈತರಿಗೆ ತಿಳಿವಳಿಕೆ ನೀಡಿದ್ದೀರಿ? ನೀವು ಭೇಟಿ ನೀಡಿ ತಿಳಿವಳಿಕೆ ನೀಡಿದ ಡೈರಿ ಎಲ್ಲಿದೆ ಎಂದು ಪ್ರಶ್ನಿಸಿದರು. ಡೈರಿ ಬರೆದಿದ್ದೀನಿ. ಆದರೆ ಅದನ್ನು ಕಚೇರಿಯಲ್ಲೇ ಬಿಟ್ಟು ಬಂದಿದ್ದೀನಿ ಎಂದು ಮಾಹಿತಿ ನೀಡಿದ ಅಧಿಕಾರಿ ವಿರುದ್ಧ ಸಿಎಂ ಗರಂ ಆದರು. ಡೈರಿ ಇಲ್ಲದೆ ಬರಿ ಕೈಲಿ ಬಂದಿದ್ದಕ್ಕೆ ತರಾಟೆಗೆ ತೆಗೆದುಕೊಂಡು ಮುಂದೆ ಹೀಗಾಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದರು.

ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ವಿಳಂಬ: ತರಾಟೆ ತೆಗೆದುಕೊಂಡ ಸಿಎಂ

2023-24 ರಲ್ಲಿ ಒಟ್ಟು 34 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಸಾಲಿನಲ್ಲಿ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಅಧಿಕಾರಿಗಳ ಮಾಹಿತಿಗೆ ಪ್ರತಿಯಾಗಿ, ಇವರಲ್ಲಿ ಪ್ರತಿಯೊಬ್ಬ ರೈತರ ಕುಟುಂಬಕ್ಕೆ ಪರಿಹಾರ ದೊರಕಿದೆಯೇ ಎಂದು ಪ್ರಶ್ನಿಸಿದರು. ಉಳಿದೆಲ್ಲರಿಗೂ ಸರಿಯಾದ ಸಮಯಕ್ಕೆ ಆತ್ಮಹತ್ಯೆ ಪರಿಹಾರದ 5 ಲಕ್ಷ ಮೊತ್ತ ಜಮೆ ಆಗಿದೆ. ಐದು ಮಂದಿ ರೈತರ ಕುಟುಂಬಕ್ಕೆ ಮಾತ್ರ ತಾಂತ್ರಿಕ ತೊಂದರೆ ಆಗಿದ್ದು ಏಕೆ? ಎಫ್ಎಸ್ಎಲ್ ವರದಿ ೨೦ ದಿನದೊಳಗೆ ಬರುತ್ತದೆ. ಆದರೂ ಪ್ರಕ್ರಿಯೆ ತಡೆವಾಗಿದ್ದಕ್ಕೆ ಮುಖ್ಯಮಂತ್ರಿಗಳು ಗರಂ ಆಗಿ ತರಾಟೆಗೆ ತೆಗೆದುಕೊಂಡರು. ರೈತರ ಬದುಕು ಮತ್ತು ಬವಣೆಗಳ ಬಗ್ಗೆ ಚೆಲ್ಲಾಟ ಆಡಿದರೆ ಹುಷಾರ್ ಎಂದು ಎಚ್ಚರಿಸಿದರು.

ಸರ್ಕಾರ ಹಣ ಕೊಟ್ಟಿದೆ: ರೈತರಿಗೆ ತಲುಪಿಸಲು ಏನು ತೊಂದರೆ

ಸರ್ಕಾರ ಅಗತ್ಯವಿದ್ದಷ್ಟು ಹಣವನ್ನು ಕೊಟ್ಟು ಯಾವ ಕಾಲ ಆಯ್ತು. ಆದರೂ ಸರ್ಕಾರ ಕೊಟ್ಟ ಹಣವನ್ನು ರೈತರ ಕುಟುಂಬಗಳಿಗೆ ತಲುಪಿಸಲು ಏನು ತೊಂದರೆ ಆಗಿದೆ ಎಂದು ಪ್ರಶ್ನಿಸಿದ ಸಿಎಂ ಇದನ್ನು ಸಹಿಸುವುದಿಲ್ಲಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಶಾಸಕರಾದ ಗವಿಯಪ್ಪ, ಕಂಪ್ಲಿ ಗಣೇಶ್, ಲತಾ ಎಂ.ಪಿ.ಪ್ರಕಾಶ್, ಶ್ರೀನಿವಾಸ್ ಸಭೆಯಲ್ಲಿ ಉಪಸ್ಥಿತರಿದ್ದರು.

ಮೂರು ದಿನಗಳಲ್ಲಿ ಮದುವೆಯಾಗಬೇಕಿದ್ದ ಯುವತಿ ಭಾವಿ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ವಿಜಯನಗರ: ನವೆಂಬರ್ 23ರಂದು ಮದುವೆಯಾಗಬೇಕಿದ್ದ 26 ವರ್ಷದ ಯುವತಿಯೊಬ್ಬರು ಭಾನುವಾರ ರಾತ್ರಿ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿಯ ವರನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇದೀಗ ಪೊಲೀಸರು ವರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿಜಯನಗರ ಜಿಲ್ಲೆಯ ಐಶ್ವರ್ಯ ಮತ್ತು ಅಶೋಕ್ ಕುಮಾರ್ ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದರು. ಒಳ್ಳೆಯ ಕೆಲಸದಲ್ಲಿದ್ದ ಬದುಕಿನಲ್ಲಿ ನೆಲೆ ಕಂಡುಕೊಂಡಿರುವ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ. ಮನೆಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದರು. ಆದರೆ ಇಬ್ಬರ ಜಾತಿ ಬೇರೆಯಾದ್ದರಿಂದ ಎರಡೂ ಕುಟುಂಬದವರು ನಿರಾಕರಿಸಿದ್ದಾರೆ.

ಐಶ್ವರ್ಯಾ ಮತ್ತು ಅಶೋಕ್‌ ಪರಸ್ಪರ ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದರು. ಇದಕ್ಕೆ ಅಶೋಕ್ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಶೋಕ್ ಪೋಷಕರ ಬಳಿ ಒತ್ತಾಯ ಮಾಡಿ ಮನವೊಲಿಸಿದ್ದರು. ಐಶ್ವರ್ಯಾ ತನ್ನ ಪೋಷಕರಿಗೂ ಮನವರಿಕೆ ಮಾಡಿಸಿದ್ದರು. ಆದರೆ ಅಶೋಕ್ ಮನೆಯವರು ಈ ಮದುವೆಗೆ ಕೆಲವು ಷರತ್ತುಗಳನ್ನು ಹಾಕಿದ್ದಾರೆ. ಮದುವೆಯ ನಂತರ ಐಶ್ವರ್ಯಾ ತನ್ನ ಊರಿಗೆ ಹೋಗಬಾರದು ಮತ್ತು ಮದುವೆಗೆ ಅವರ ಕಡೆಯವರು ಯಾರೂ ಬರಬಾರದು. ಭವಿಷ್ಯದಲ್ಲಿ ಐಶ್ವರ್ಯಾ ತನ್ನ ಪೋಷಕರೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿರಬಾರದು ಎನ್ನುವುದು ಅವರ ಷರತ್ತಾಗಿತ್ತು. ಅದಕ್ಕೆ ಐಶ್ವರ್ಯಾ ಮತ್ತು ಆಕೆಯ ಪೋಷಕರು ಕೂಡ ಒಪ್ಪಿದ್ದರಿಂದ ನವೆಂಬರ್ 23ಕ್ಕೆ ಮದುವೆ ನಿಶ್ಚಯವಾಯಿತು.

ಹಾಗಾಗಿ ಐಶ್ವರ್ಯಾ ವಿವಾಹ ಪೂರ್ವದ ಸಂಭ್ರಮಾಚರಣೆಗಾಗಿ ತನ್ನ ಭಾವಿ ಪತಿ ಮನೆಗೆ ಹೋಗಿದ್ದಳು. ಆದರೆ ಏನಾಯಿತೋ ಗೊತ್ತಿಲ್ಲ.. ಸೋಮವಾರ ಐಶ್ವರ್ಯಾ ಭಾವಿ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪರಿಣಾಮವಾಗಿ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಗಲೇ ಐಶ್ವರ್ಯಾ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

“ನನಗೆ ತಿಳಿಸುವ ಮೊದಲು, ಆಕೆಯ ನಾಡಿಮಿಡಿತದಲ್ಲಿ ಇಳಿಕೆ ಕಂಡುಬಂದ ಕಾರಣ ಅವರು ಅವಳನ್ನು ಎರಡು ಬೇರೆ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ದರು. ನನ್ನ ಮಗಳು ಹೇಗೆ ಸತ್ತಳು ಎಂದು ನನಗೆ ತಿಳಿದಿಲ್ಲ. ಅವಳು ತುಂಬಾ ಬಲಶಾಲಿಯಾಗಿದ್ದಳು ಮತ್ತು ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ವರನ ಕುಟುಂಬದ ಸದಸ್ಯರು ಆಕೆಯನ್ನು ಕೊಂದಿದ್ದಾರೆ” ಎಂದು ಅವರು ಹೇಳಿದರು.

ದಿವ್ಯಾ ಪಣಿಯನ್ ಅವರಿಗೆ ಡಾಕ್ಟರೇಟ್‌‌ ಪ್ರಧಾನ: ಎರವ ಸಮುದಾಯ ಮೊದಲ ಪಿಎಚ್ಡಿ ಪದವೀಧರೆ
ವಿಜಯನಗರ: ಪಣಿಯನ್ ಬುಡಕಟ್ಟು ಸಮುದಾಯಕ್ಕೆ ಸೇರಿದವರಾದ ದಿವ್ಯಾ ಪಣಿಯನ್‌ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್‌ ನೋಡಿ ಗೌರವಿಸಿದೆ. ಇದರೊಂದಿಗೆ ಅವರು ಎರವ ಸಮುದಾಯದ ಮೊದಲ ಪಿಎಚ್ಡಿ ಪದವೀಧರರಾಗಿ ಹೊರಹೊಮ್ಮಿದ್ದಾರೆ.

ಹೆಗ್ಗಡದೇವನ ಕೋಟೆಯ ಡಿ ಬಿ ಕುಪ್ಪೆ ಗ್ರಾಮ ಪಂಚಾಯತಿಯ ಸೇಬಿನಕೊಲ್ಲಿ ಹಾಡಿಯ ನಿವಾಸಿಯಾದ ರಾಜು ಮತ್ತು ಲಕ್ಷ್ಮಿಯವರ ಮಗಳಾದ ದಿವ್ಯಾ ಎಸ್‌ ಆರ್‌ ಅವರು ಕಿತ್ತು ತಿನ್ನುವ ಬಡತನದ ನಡುವೆಯೇ ಛಲದಿಂದ ಓದಿ ಇಂದು ಸಮುದಾಯವೇ ಹೆಮ್ಮೆ ಪಡುವಂತಹ ಸಾಧನೆಯನ್ನು ಸಾಧಿಸಿದ್ದಾರೆ.

ತನ್ನ ಮಾರ್ಗದರ್ಶಕರಾದ ಕೆ ಎಮ್‌ ಮೇತ್ರಿ ಅವರೊಂದಿಗೆ ತನ್ನ ಪ್ರಬಂಧವನ್ನು ಪ್ರದರ್ಶಿಸುತ್ತಿರುವ ದಿವ್ಯಾ ಎಸ್ ಆರ್

ಅರಣ್ಯಧಾರಿತ ಜೀವನದ ನಡುವೆಯೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಚ್ಚೂರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಡಿ.ಬಿ ಕುಪ್ಪೆಯಲ್ಲಿ ಮಧ್ಯಾಮಿಕ ಶಿಕ್ಷಣ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜುನಲ್ಲಿ ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣ, ಸರಕಾರಿ ಪ್ರಥಮ ಧರ್ಜೆ ಕಾಲೇಜಿನಲ್ಲಿ ಪದವಿ ಶಿಕ್ಷಣ, ಛಾಯಾದೇವಿ ಬಿ ಎಡ್ ಕಾಲೇಜು ಎನ್ ಆರ್ ಮೊಹಲ್ಲ ಮೈಸೂರು ಇಲ್ಲಿ ವೃತ್ತಿ ಶಿಕ್ಷಣವನ್ನು ಹಾಗೂ ಎಂ ಎ ಮತ್ತು ಪಿಎಚ್ಡಿಯನ್ನು ಕನ್ನಡ ವಿಶ್ವವಿದ್ಯಾಲಯ, ಹಂಪಿಯಲ್ಲಿ ಪಡೆದಿದ್ದಾರೆ.

ದಿವ್ಯಾ ಅವರು ʼಪಣಿಯನ್ ಬುಡಕಟ್ಟಿನ ಸಾಮಾಜಿಕ ಅಧ್ಯಯನʼ ಎನ್ನುವ ವಿಷಯದ ಕುರಿತು ಡಾ. ಕೆ ಎಮ್‌ ಮೇತ್ರಿಯವರ ಮಾರ್ಗದರ್ಶನದಲ್ಲಿ ಸಲ್ಲಿಸಿದ ಪ್ರೌಢ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್‌ ಪದವಿ ನೀಡಿ ಗೌರವಿಸಿದೆ.

ಕೊರಗ ಸಮುದಾಯದ ಕಲಾವತಿ ಅವರಿಗೆ ಡಾಕ್ಟರೇಟ್ : ಪಿಎಚ್ಡಿ ಪಡೆದ ಸಮುದಾಯದ ಎರಡನೆಯ ಮಹಿಳೆ
ವಿಜಯನಗರ: ಕೊರಗ ಸಮುದಾಯದ ಕುರಿತು ಕೆ ಎಂ ಮೇತ್ರಿ ಅವರ ಮಾರ್ಗದರ್ಶನದಲ್ಲಿ ಅಧ್ಯಯನ ಪ್ರಬಂಧ ಮಂಡಿಸಿದ ಕಲಾವತಿಯವರಿಗೆ ವಿಜಯನಗರ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಪಿಎಚ್‌ಡಿ (ಡಾಕ್ಟರೇಟ್)‌ ಪದವಿ ನೀಡಿ ಗೌರವಿಸಿದೆ.

ʼಕೊರಗ ಆದಿಮ ಬುಡಕಟ್ಟಿನ ಸಮಾಜೋ – ಸಾಂಸ್ಕೃತಿಕ ಅಧ್ಯಯನʼ ಎನ್ನುವ ವಿಷಯದ ಕುರಿತು ಕಲಾವತಿಯವರು ಡಾ. ಕೆ ಎಮ್‌ ಮೇತ್ರಿಯವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕೊರಗ ಸಮುದಾಯಕ್ಕೆ ಸೇರಿದವರಾದ ಕಲಾವತಿಯವರು ಈ ಸಂಶೋಧನಾ ಪ್ರಬಂದ ಮಂಡಿಸುವುದರೊಂದಿಗೆ ಈ ಸಮುದಾಯದಿಂದ ಸಂಶೋಧನಾ ಪ್ರಬಂಧ ಮಂಡಿಸಿ ಡಾಕ್ಟರೇಟ್‌ ಪಡೆದ ಎರಡನೇ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.

ಈ ಹಿಂದೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಗುಂಡ್ಮಿಯ ಸಬಿತಾ ಕೊರಗ ಇವರು  ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರವಿಭಾಗದ ಪ್ರಾದ್ಯಾಪಕ ಪ್ರೊ.ಜೋಗನ್ ಶಂಕರ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ ʼಇವ್ಯಾಲುವೇಶನ್ಸ್ ಆಫ್ ಪಾಲಿಸಿಸ್ ಆ್ಯಂಡ್ ಪ್ರೋಗ್ರಾಮ್ಸ್ ಆಫ್ ಟ್ರೈಬಲ್ ಡೆವೆಲಪ್‌ಮೆಂಟ್ ಆಫ್ ಕರ್ನಾಟಕ ಸ್ಟೇಟ್ ಎ ಸಿಚುವೇಷನಲ್ ಅನಾಲಿಸಿಸ್ʼ ಎನ್ನುವ ವಿಷಯದ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತ್ತು.

ಕರಾವಳಿಯ ಮೂಲನಿವಾಸಿಗಳೆಂದೇ ಪರಿಗಣಿತವಾದ ಬುಡಕಟ್ಟು ಕೊರಗ ಸಮುದಾಯದಲ್ಲಿ ಡಾಕ್ಟರೇಟ್ ಪದವಿ ಪಡೆದ ಮೊತ್ತಮೊದಲ ಮಹಿಳೆಯೆನ್ನಿಸಿಕೊಂಡಿರುವ ಡಾ. ಸಬಿತಾ ಗುಂಡ್ಮಿ ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತಿದ್ದಾರೆ.

ಕಲಾವತಿಯವರು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕರ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಕಡoಗೋಡು ಎನ್ನುವ ಊರಿನವರಾಗಿದ್ದು, ಪ್ರಾಥಮಿಕ ವಿದ್ಯಾಭ್ಯಾಸವನ್ನು ಸೂರಾಲು ಎನ್ನುವ ಊರಿನಲ್ಲಿ ಮುಗಿಸಿರುತ್ತಾರೆ. ರೋಶನಿ ನಿಲಯ ಮಂಗಳೂರು ಸಂಸ್ಥೆಯಲ್ಲಿ ಅವರು BSW ಪದವಿಯನ್ನು ಮುಗಿಸಿರುತ್ತಾರೆ. ಕಲಾವತಿಯವರ ತಂದೆಯ ಹೆಸರು ದಿ. ಗುಂಬಳ ಕೊರಗ.

ತಮ್ಮ ಡಾಕ್ಟರೇಟ್‌ ಪದವಿಯ ಕುರಿತು ಪೀಪಲ್‌ ಮಿಡಿಯಾಕ್ಕೆ ಪ್ರತಿಕ್ರಿಯಿಸಿದ ಅವರು, “ನಾನು ಕೂಡ ಓರ್ವ ಶಾಲೆಯಿಂದ ಹೊರಗುಳಿದ ವಿದ್ಯಾರ್ಥಿ ಆಗಿದ್ದು, ಚಿಕ್ಕನಿಂದಲೂ ಸಮುದಾಯ ಸಂಘಟನೆಯೊಂದಿಗೆ ತೊಡಗಿಸಿಕೊಂಡಿದ್ದರ ಪರಿಣಾಮವಾಗಿ ಹಾಗೂ ನನ್ನ ಕುಟುಂಬ (ಅಕ್ಕ ಭಾವ) ಇವರ ಸಹಕಾರದಿಂದಾಗಿ ನಾನು phd ಹಂತಕ್ಕೆ ತಲುಪಲು ಸಾದ್ಯವಾಯಿತು. ಸಮುದಾಯದ ಹೋರಾಟಗಳಲ್ಲಿ ಭಾಗವಹಿಸಿದ್ದು ಕಳತ್ತುರು ಭೂಮಿ ಚಳುವಳಿಯಲ್ಲಿ 29 ಮಂದಿ ಜೈಲು ವಾಸ ಅನುಭವಿಸಿದ್ದು ಅದರಲ್ಲಿ ಒಬ್ಬಳು ನಾನು ಎನ್ನುವುದು ಹೆಮ್ಮೆಯಿದೆ. ನಾನು ನನ್ bsw ಪದವಿಯನ್ನು 2008ರಲ್ಲಿ ಮುಗಿಸಿದ್ದು ನಂತರ 8 ವರುಷಗಳ ಕಾಲ ಸಮಗ್ರ ಗ್ರಾಮೀಣ ಆಶ್ರಮ, ಪರ್ನಲ್, organization for the development of people, mysore, ಮಕ್ಕಳ ಸಹಾಯವಾಣಿ ಮೈಸೂರು ಇಲ್ಲಿ, ಸಮಾಜ ಸೇವಾ ಸಂಸ್ಥೆ ಗಳಲ್ಲಿ ಕೆಲಸವನ್ನು ನಿರ್ವಹಿಸಿದ್ದೇನೆ. 8 ವರ್ಷಗಳ ನಂತರ ಸಮಾಜಶಾಸ್ತ್ರ ವಿಷಯದಲ್ಲಿ MA ಪದವಿಯನ್ನು ಪಡೆದು, ಪ್ರಸ್ತುತ phD ಮುಗಿಸಿರುವುದು ಸಂತಸವನ್ನು ತಂದಿದೆ.” ಎಂದು ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ಹೊಸಪೇಟೆ: ಅಕ್ರಮ ಗಣಿಗಾರಿಕೆ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಯಾವುದೇ ವರ್ಗದ ಗಣಿಗಾರಿಕೆ ಕಾನೂನು ಪರವಾನಗಿ ಹೊಂದಿದ್ದರೆ, ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಂದ ಸಂಪೂರ್ಣ ಸಹಕಾರ ಇರುತ್ತದೆ ಎಂದು ಅವರು ಹೇಳಿದರು.

ಅವರು ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಗಣಿಗಾರಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಅರಣ್ಯ ಇಲಾಖೆಯೊಂದಿಗೆ ಸಭೆ ನಡೆಸಲಾಗಿದ್ದು, ಎ, ಬಿ, ಸಿ ಅಥವಾ ಯಾವುದೇ ವರ್ಗದ ಗಣಿಗಾರಿಕೆಗೆ ತೊಂದರೆಯಾಗದಂತೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು. ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಪರ್ಯಾಯ ಕ್ರಮಗಳ ಬಗ್ಗೆಯೂ ಚರ್ಚಿಸಲಾಯಿತು. ಅಕ್ರಮ ಗಣಿಗಾರಿಕೆ ವಿರುದ್ಧ ಈ ಹಿಂದೆಯೂ ಹೋರಾಟ ನಡೆಸಿದ್ದೇವೆ ಎಂದರು.

ಪರಿಶೀಲನೆ ಮತ್ತು ಕ್ರಮ:

36 ಕೋಟಿ ವೆಚ್ಚದಲ್ಲಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಹಾಗೂ ಗ್ರಂಥಾಲಯ ಕಟ್ಟಡಗಳು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಾಗಿದೆ. ಈ ಸುಸಜ್ಜಿತ ಕಟ್ಟಡಗಳಿಂದ ಸುಮಾರು 3 ಸಾವಿರ ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು. ವಿಜಯನಗರ ಜಿಲ್ಲೆಯಲ್ಲಿ ಮಹಿಳಾ ಪದವಿ ಕಾಲೇಜು ಹಾಗೂ ಮಹಿಳಾ ಪೊಲೀಸ್ ಠಾಣೆಯ ಅಗತ್ಯತೆ ಕುರಿತು ಮಾಧ್ಯಮಗಳು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರ ಬೀಳಿಸಲು ಬಿಜೆಪಿಯ ವ್ಯರ್ಥ ಪ್ರಯತ್ನ

ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂಬ ಶಾಸಕ ರಮೇಶ್ ಜಾರಕಿಹೊಳಿ ಅವರ ಭವಿಷ್ಯವಾಣಿಗೆ ಪ್ರತಿಕ್ರಿಯಿಸಿದ ಸಿಎಂ, ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳೊಂದಿಗೆ ಬಹುಮತ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷ ಆಡಳಿತ ನಡೆಸಲಿದೆ. ನಾನು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಆಪರೇಷನ್ ಕಮಲದಲ್ಲಿ ಬಿಜೆಪಿ ಒಮ್ಮೆ ಯಶಸ್ವಿಯಾದ ಕಾರಣ ಮತ್ತೊಮ್ಮೆ ಪ್ರಯತ್ನ ಮಾಡಬಹುದು ಎಂದು ಭಾವಿಸಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗುತ್ತದೆ ಎಂದರು.

ಹೈಕಮಾಂಡ್ ನಿರ್ಧಾರ

ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳು ಇರುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷವೇ ಹೊರತು ಪ್ರಾದೇಶಿಕ ಪಕ್ಷವಲ್ಲ. ಇಂತಹ ವಿಚಾರಗಳನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದರು.

ಹಂಪಿ ಉತ್ಸವ:

ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ವರ್ಷ ಜನವರಿಯಲ್ಲಿ ಹಂಪಿ ಉತ್ಸವ ಆಚರಿಸಿದಂತೆ ಈ ವರ್ಷವೂ ಜನವರಿಯಲ್ಲಿ ಆಚರಿಸಲಾಗುವುದು ಎಂದು ಉತ್ತರಿಸಿದರು.

ಸಕ್ಕರೆ ಕಾರ್ಖಾನೆ

ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಕುರಿತು ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನ

ಹಂಪಿ ವಿಶ್ವವಿದ್ಯಾನಿಲಯಕ್ಕೆ ಹಣದ ಕೊರತೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಂಪಿ ವಿಶ್ವವಿದ್ಯಾಲಯಕ್ಕೆ ಹಣ ಕೇಳಿದರೆ ತಕ್ಷಣ ಹಣ ನೀಡಲಾಗುವುದೆಂದು ಪ್ರತಿಕ್ರಿಯಿಸಿದರು.

ಮಹಿಳೆ ಕಾಣೆ: ಪ್ರಕರಣ ದಾಖಲು
ಹೊಸಪೇಟೆ(ವಿಜಯನಗರ).ಡಿ.9(ಕರ್ನಾಟಕ ವಾರ್ತೆ): ಕೂಡ್ಲಿಗಿ ತಾಲೂಕಿನ ಮಡಕಲಕಟ್ಟೆ ಗ್ರಾಮದ ಶಿವಲೀಲ ಎಂಬ 25ವರ್ಷದ ಮಹಿಳೆಯು ಡಿ.4ರಂದು ಕಾಣೆಯಾಗಿರುವ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ.

ಶಿವಲೀಲ ಗಂಡನಾಡ ಪ್ರಕಾಶ ಹಾಗೂ ಅವರ ತಾಯಿ ಇಬ್ಬರು ಡಿ.4ರಂದು ಬೆಳಗ್ಗೆ 6ಕ್ಕೆ ಶೇಂಗಾ ಮಿಷನ್ ಕೆಲಸಕ್ಕೆ ಹೋಗಿ ಮರಳಿ ಸಂಜೆ 6ಕ್ಕೆ ಮನೆಗೆ ಬಂದಾಗ ನನ್ನ ಹೆಂಡತಿಯು ಮನೆಯಲ್ಲಿ ಹಾಗೂ ಕಣದಲ್ಲಿ ಇರಲಿಲ್ಲ. ನಂತರ ನಮ್ಮ ಊರಿನಲ್ಲಿ ಹುಡುಕಾಡಿದರೂ ಕಂಡಿರುವುದಿಲ್ಲ. ನನ್ನ ಹೆಂಡತಿಯತವರು ಮನೆಯವರಿಗೆ ಹಾಗೂ ನಮ್ಮ ಸಂಬಂಧಿಕರಿಗೆ ಪೋನ್ ಮಾಡಿ ವಿಚಾರಿಸಿದ್ದು ಎಲ್ಲಿಯೂ ಇರುವ ಬಗ್ಗೆ ಮಾಹಿತಿ ಸಿಗಲಿಲ್ಲ ಎಂದು ದೂರಿನಲ್ಲಿ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಿವಲೀಲ ಕಾಣೆಯಾಗಿರುವ ಮಹಿಳೆ

ಕಾಣೆಯಾದ ಮಹಿಳೆಯ ಚಹರೆ ಗುರುತು: ಎತ್ತರ 5.4 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕೆಂಪು ಸೀರೆ, ಕೆಂಪು ಕುಪ್ಪಸ ಧರಿಸಿರುತ್ತಾಳೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಮಾತನಾಡುತ್ತಾಳೆ.
ಕಾಣೆಯಾದ ಮಹಿಳೆಯ ಮಾಹಿತಿ ದೊರೆತಲ್ಲಿ ಕೂಡ್ಲಿಗಿ ಪಿಎಸ್‍ಐ ದೂ.08391-220223, ಕೂಡ್ಲಿಗಿ ಸಿಪಿಐ ದೂ.08391-220033, ಕೂಡ್ಲಿಗಿ ಡಿಎಸ್ಪಿ ದೂ.08391-220326 ಮತ್ತು ವಿಜಯನಗರ ಜಿಲ್ಲೆ ಎಸ್ಪಿ ದೂ.08391-258400 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಹೋರಾಟಕ್ಕೆ ಮಣಿದ ಹಂಪಿ ವಿವಿ ಆಡಳಿತಾಂಗ; ಮುಷ್ಕರ ತಾತ್ಕಾಲಿಕ ನಿಲುಗಡೆ
ಹೊಸಪೇಟೆ: ಕಳೆದ ಮೂರು ದಿನಗಳಿಂದ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ನಡೆಸುತ್ತಿದ್ದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ವಿವಿ ಆಡಳಿತಾಂಗ ಮಣಿದಿದ್ದು ವಿದ್ಯಾರ್ಥಿಗಳ ಬೇಡಿಕೆ ಆಂಶಿಕವಾಗಿ ಈಡೇರಿದೆ.

ಈ ಕುರಿತು ʼಪೀಪಲ್‌ ಮೀಡಿಯಾʼದೊಂದಿಗೆ ಮಾತನಾಡಿದ ಸಂಶೋಧನಾ ವಿದ್ಯಾರ್ಥಿ ಪಂಪಾಪತಿಯವರು, ʼಇಂದು ಹೋರಾಟನಿರತ ವಿದ್ಯಾರ್ಥಿಗಳ ಬಳಿ ಧಾವಿಸಿದ ಪೊಲೀಸ್‌ ವರಿಷ್ಠಾಧಿಕಾರಿ ಹರಿಬಾಬು ವಿದ್ಯಾರ್ಥಿಗಳ ಅಹವಾಲು ಕೇಳಿಸಿಕೊಂಡ ಬಳಿಕ ವಿವಿಯ ಉಪಕುಲಪತಿ ಸ.ಚಿ.ರಮೇಶ್‌ ಮತ್ತು ಕುಲಸಚಿವರೊಂದಿಗೆ ಚರ್ಚೆ ನಡೆಸಿದ ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕಳೆದ 47 ತಿಂಗಳಿಂದ ಕೊಡದೇ ಬಾಕಿ ಉಳಿಸಿದ್ದ ಶಿಷ್ಯವೇತನವನ್ನು ನೀಡಲು ಒಪ್ಪಿಗೆ ನೀಡಿದ್ದಾರೆ. ನಂತರದಲ್ಲಿ 2017ನೇ ಸಾಲಿನ ವಿದ್ಯಾರ್ಥಿಗಳಿಗೆ ಬಾಕಿ ಇದ್ದ 26 ತಿಂಗಳ ವೇತನವನ್ನು ಅವರ ಖಾತೆಗೆ ಜಮಾ ಮಾಡಿಲಾಗಿದೆಯಲ್ಲದೆ 2018ರ ಸಾಲಿನ ವಿದ್ಯಾಥಿಗಳ 47 ತಿಂಗಳ ಬಾಕಿಯಲ್ಲಿ 40 ತಿಂಗಳ ವೇತನವನ್ನು ನೀಡಿದ್ದು ಮಿಕ್ಕ 2 ತಿಂಗಳ ಶಿಷ್ಯವೇತನವನ್ನು ಆದಷ್ಟು ಬೇಗ ಜಮಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೋರಾಟನಿರತ ವಿದ್ಯಾರ್ಥಿಗಳು ತಮ್ಮ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ನಿಲುಗಡೆ ಮಾಡಿದ್ದಾರೆʼ ಎಂದು  ತಿಳಿಸಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಹಂಪಿ ಕನ್ನಡ ವಿ.ವಿ. ವಿದ್ಯಾರ್ಥಿಗಳ ಅಹೋರಾತ್ರಿ ಧರಣಿ : ರಕ್ಷಣೆ ಕೋರಿ ಪೊಲೀಸರಿಗೆ ಮನವಿ

ಹಂಪಿ ಕನ್ನಡ ವಿವಿ ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ, ಭಾನುವಾರದಿಂದ ಅಹೋರಾತ್ರಿ ಧರಣಿ ನಡೆಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಫೆಲೋಶಿಪ್ ನೀಡುವಂತೆ ವಿವಿ ಆಡಳಿತಾಂಗಕ್ಕೆ ಮನವಿಗಳನ್ನು ಸಲ್ಲಿಸುತ್ತಾ ಬಂದಿದ್ದು, ಅಗತ್ಯವಿದ್ದಾಗ ಪ್ರತಿಭಟನೆ, ಧರಣಿ ಮಾಡುತ್ತಾ ಬಂದಿದ್ದರು ಕೂಡ, ವಿದ್ಯಾರ್ಥಿಗಳ ಅಳಲನ್ನು ಕೇಳಿಯೂ ಇಲ್ಲಿನ ಕುಲಪತಿಗಳು ಕಣ್ಣು ಮುಚ್ಚಿ ಕುಳಿತಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಹಂಪಿ ವಿವಿ- ಅಹೋರಾತ್ರಿ ಧರಣಿಯ ವೇಳೆ ವಿದ್ಯಾರ್ಥಿಯ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಈ ಕಾರಣ ಅಲ್ಲಿನ ST/SC ಸಂಶೋಧನ ವಿದ್ಯಾರ್ಥಿಗಳು ಬಾಕಿ ಉಳಿದಿರುವ 47 ತಿಂಗಳ ಶಿಷ್ಯವೇತನವನ್ನು ಕೂಡಲೇ ತಮ್ಮ ಖಾತೆಗೆ ಜಮಾ ಮಾಡಬೇಕು, ಇಲ್ಲವಾದರೆ  ಹಣ ನೀಡುವವರೆಗು ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಪಟ್ಟು ಹಿಡಿದು ಕುಳಿತಿದ್ದರು.

ಹಂಪಿ ವಿವಿ- ಅಹೋರಾತ್ರಿ ಧರಣಿಯ ವೇಳೆ ವಿದ್ಯಾರ್ಥಿಯ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಹೊಸಪೇಟೆ: ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತಿದ್ದು, ಧರಣಿಯ ವೇಳೆ ವಿದ್ಯಾರ್ಥಿಯೊಬ್ಬರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಮದ್ಯರಾತ್ರಿ ನಡೆದಿದೆ.

ಹಂಪಿ ವಿಶ್ವಾವಿದ್ಯಾಯದ ಸಂಶೋಧನಾ ವಿದ್ಯಾರ್ಥಿಗಳು ಹಲವಾರು ತಿಂಗಳುಗಳಿಂದ ಬಾಕಿ ಇರುವ ಸಹಾಯಧನವನ್ನು ನೀಡುವಂತೆ ಒತ್ತಾಯಿಸಿ ಭಾನುವಾರದಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದು, ಹೀಗಾಗಿ ಸೋಮವಾರ ರಾತ್ರಿ ಚಳಿಗೆ ಎರಿಸ್ವಾಮಿ ಎಂಬ ಸಂಶೋಧನ ವಿಧ್ಯಾರ್ಥಿಗೆ ಎದೆನೋವು ಕಾಣಿಸಿಕೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಳಲಿಸಲಾಗಿದೆ ಎಂದು ಅಲ್ಲಿನ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಮೂರನೇ ದಿನದ ಧರಣಿ ಕುರಿತು ʼಪೀಪಲ್‌ ಮೀಡಿಯಾʼದೊಂದಿಗೆ ಮಾತನಾಡಿದ ಸಂಶೋಧನಾ ವಿದ್ಯಾರ್ಥಿ  ದೇವೇಂದ್ರರವರು, ಎಸ್‌ಸಿ/ಎಸ್‌ಟಿ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ ಹಮ್ಮಿಕೊಂಡು ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದ್ದೇವೆ. ಧರಣಿಗೆ ಕೂತಿದ್ದ ಸಂಶೋಧನ ವಿದ್ಯಾರ್ಥಿ ಎರಿಸ್ವಾಮಿ ಎಂಬಾತನಿಗೆ ಸೋಮವಾರ ರಾತ್ರಿ ಚಳಿ ಇರುವ ಕಾರಣ ಎದೆ ನೋವು ಕಾಣಿಸಿಕೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಚರ್ಚೆ ನಡೆಸಿ, ಮಾಧ್ಯಮ ಮಿತ್ರರನ್ನು ಭೇಟಿ ಮಾಡಿ ಸಹಾಯ ಕೋರಲಾಯಿತು. ಹೀಗಾಗಿ ಮಾಧ್ಯಮ ಮಿತ್ರರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಮಾಡಿದಾಗ, ಅವರು ವಿದ್ಯಾರ್ಥಿಗಳ ಸಹಾಯಧನವು ಕಾಮಗಾರಿಗೆ ಬಂದಿದೆ ಎನ್ನುವ ಮಾಹಿತಿ ನೀಡಿದರು ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧ ಪಟ್ಟಂತೆ ಹಾಗೂ ಸರ್ಕಾರವು ಆದೇಶ ಪತ್ರದಲ್ಲಿ ತಿಳಿಸಿರುವಂತೆ. 11,89 ಕೋಟಿ ಹಣ ಬಿಡುಗಡೆಯಾಗಿರುವ ಹಣ ಮತ್ತು 3,42 ಕೋಟಿ ಹಾಗೂ 1,17 ಕೋಟಿ ರೂ. ಲ್ಯಾಪ್‌ಟಾಪ್‌, ಶಿಷ್ಯವೇತನ, ಎಲ್ಲವನ್ನು ಸೇರಿ ಒಟ್ಟು 15 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಆದರೂ ಕೂಡ ಕುಲಪತಿಗಳು ವಿದ್ಯಾರ್ಥಿಗಳ ಮನವಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದುವರೆದು ಮಾತನಾಡಿದ ಅವರು 21 ನವೆಂಬರ್‌ 2022 ರಂದು ಮುಖ್ಯಮಂತ್ರಿಗಳ ಆದೇಶದಂತೆ, ಸರ್ಕಾರ ಬಿಡುಗಡೆ ಮಾಡಿರುವ 11,89 ಕೋಟಿ ರೂ. ಹಣವನ್ನು ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಕೊಡಿ ಎಂದು ತಿಳಿಸಿದ್ದರೂ ಕೂಡ, ಕುಲಪತಿಗಳು ಆ ಹಣವನ್ನು ವಿಶ್ವವಿದ್ಯಾಲಯದ ಕಾಮಗಾರಿಗೆ ಬಲಸಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಯ ಸಂಶೋಧನಾ ವಿದ್ಯಾರ್ಥಿಯೊಬ್ಬರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದಾಗ, ಬಸವರಾಜ ಬೊಮ್ಮಾಯಿಯವರು ʼನಾನು ಯಾವ ಆದೇಶವನ್ನು ಹಿಂಪಡೆದಿಲ್ಲ ಆ ಹಣವನ್ನು ಶಿಷ್ಯವೇತನಕ್ಕೆ ನೀಡಿರುವುದಾಗಿ  ತಿಳಿಸಿದ್ದೇನೆʼ ಎಂದು ಹೇಳಿದ್ದಾರೆ. ಆದರೆ ಇಲ್ಲಿನ ಕುಲಪತಿಗಳು ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಕೊಡುವ ಯಾವುದೇ ಗಟ್ಟಿ ನಿರ್ಧಾರವನ್ನು ಕೈಗೊಳ್ಳತ್ತಿಲ್ಲ ಹಾಗೂ ಹಣ ನೀಡುವ ಭರವಸೆಯನ್ನು ಸಹ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಸಂಶೋಧನಾ ವಿದ್ಯಾರ್ಥಿಗಳು ನಾಲ್ಕು ವರ್ಷಗಳಿಂದ, ವಿಶ್ವವಿದ್ಯಾಲಯಕ್ಕೆ ಯಾವುದೇ, ಹಾನಿ, ಗೌರವ ಕಡೆಸುವಂತಹ ಕೆಲಸಗಳನ್ನು ಮಾಡದೆ, ಶಾಂತಿಯುತವಾಗಿ ಮನವಿ, ಪ್ರತಿಭಟನೆ ಮಾಡಿದರೂ ಯಾವುದೇ ಸ್ಪಂದನೆ ದೊರತಿಲ್ಲ. ಹೀಗಾಗಿ ಈ ಬಾರಿ ಇದಕ್ಕೆ ಒಂದು ಪರಿಹಾರ ನೀಡುವವರೆಗೂ ಮೌನವಾಗಿಯೇ ಪ್ರತಿಭಟನೆ ಮುಂದುವರೆಸುತ್ತೇವೆ ಎಂದರು.

ಧರಣಿ ಕೈಗೊಂಡಬಳಿಕ , ವಿಶ್ವವಿದ್ಯಾಲಯದ ಕುಲಪತಿಗಳಾದ ಸ.ಚಿ.ರಮೇಶ್‌ ರವರು ಏನು ಪತ್ರಿಕ್ರಿಯೆ ನೀಡಿದರು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಲಪತಿಗಳಿಂದ ಇನ್ನೂ ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ ಎಂದು ತಿಳಿಸಿದರು.