ವಿಜಯಪುರ – Peepal Media

ಕನ್ಹೇರಿ ಮಠದ ಸ್ವಾಮಿಗೆ ವಿಜಯಪುರ ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ
ವಿಜಯಪುರ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ಕನ್ಹೇರಿ ಕಾಡಸಿದ್ಧೇಶ್ವರ ಮಠದ ಪೀಠಾಧಿಪತಿಯಾದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿ ವಿಜಯಪುರ ಜಿಲ್ಲೆ ಪ್ರವೇಶಿಸುವುದನ್ನು ಜಿಲ್ಲಾಧಿಕಾರಿ ಆನಂದ್ ಕೆ ಅವರು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಈ ಆದೇಶದ ಪ್ರಕಾರ, ಸ್ವಾಮಿ ಅಕ್ಟೋಬರ್ 16ರಿಂದ ಡಿಸೆಂಬರ್ 16ರವರೆಗೆ ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.

ಮಹಾರಾಷ್ಟ್ರದ ಜತ್ ತಾಲೂಕಿನ ಬೀಳೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಸ್ವಾಮೀಜಿ ನೀಡಿದ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳ ಬೆಂಬಲಿತ ಲಿಂಗಾಯತ ಮಠಾಧೀಶರ ಒಕ್ಕೂಟವನ್ನು ಟೀಕಿಸಿದ್ದ ಅವರು, ಆ ಒಕ್ಕೂಟವು ‘ಬಸವ ಸಂಸ್ಕೃತಿ ಉತ್ಸವ’ ಹೆಸರಿನಲ್ಲಿ ಒಂದು ತಿಂಗಳ ಕಾಲ ಕರ್ನಾಟಕದಲ್ಲಿ ಪ್ರವಾಸ ಮಾಡಿದ ‘ಡ್ರಾಮಾ ತಂಡ’ ಎಂದು ಕರೆದಿದ್ದರು.

ಸ್ವಾಮಿ ತನ್ನ ಭಾಷಣದಲ್ಲಿ, “ಲಿಂಗಾಯತ ಮಠಾಧೀಶರ ಒಕ್ಕೂಟವು ತಮ್ಮ ಪ್ರವಾಸದ ಸಮಯದಲ್ಲಿ, ದೇವರು ದೇವಸ್ಥಾನಗಳಲ್ಲಿ ಇಲ್ಲ. ದೇವಸ್ಥಾನಗಳಿಗೆ ಹೋಗಬೇಡಿ. ಮನೆಯಲ್ಲಿರುವ ದೇವರುಗಳನ್ನು ತೆಗೆದು ನದಿಗೆ ಹಾಕಿ, ಹೋಟೆಲ್‌ಗೆ ಹೋಗಿ, ಮದ್ಯ ಕುಡಿಯಿರಿ, ಮಾಂಸ ತಿಂದು ಆರಾಮವಾಗಿರಿ ಎಂದು ಹೇಳಿದ್ದರು” ಎಂದಿದ್ದರು. ಅವರು ಮುಂದುವರಿದು, “ನಾನು ವೈಯಕ್ತಿಕವಾಗಿ ಆ ‘ಬ……..ಗಳಿಗೆ’ ಪಾಠ ಕಲಿಸಬೇಕು, ಮತ್ತು ಅವರನ್ನು ಥಳಿಸಬೇಕು” ಎಂದು ಹೇಳಿದ್ದಾರೆ.

ಸ್ವಾಮಿಯ ಈ ಹೇಳಿಕೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ಬಸವಣ್ಣನವರ ಅನುಯಾಯಿಗಳು ಮತ್ತು ಲಿಂಗಾಯತ ಮಠಾಧೀಶರು ಸ್ವಾಮೀಜಿಯ ಹೇಳಿಕೆಯನ್ನು ಖಂಡಿಸಿ, ವಿಜಯಪುರ ಸೇರಿದಂತೆ ಕರ್ನಾಟಕದಾದ್ಯಂತ ಪ್ರತಿಭಟನೆಗಳನ್ನು ನಡೆಸಿದರು ಮತ್ತು ಸ್ವಾಮಿಯ ಪ್ರತಿಕೃತಿಗಳನ್ನು ದಹಿಸಿ ಪ್ರತಿಭಟಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಈ ನಿರ್ಧಾರ ಕೈಗೊಂಡಿದ್ದಾರೆ.

ಚಡಚಣ ಬ್ಯಾಂಕ್ ದರೋಡೆ: ಪ್ರಮುಖ ಆರೋಪಿ ಹಾಗೂ ಪಿಸ್ತೂಲ್‌ಗಳನ್ನು ಪೂರೈಸಿದ ಬಿಹಾರದ ಮೂವರ ಬಂಧನ
ವಿಜಯಪುರ ಜಿಲ್ಲೆ: ಸೆಪ್ಟೆಂಬರ್ 16 ರಂದು ಜಿಲ್ಲೆಯ ಚಡಚಣದಲ್ಲಿರುವ ಎಸ್‌ಬಿಐ ಶಾಖೆಯಲ್ಲಿ ವರದಿಯಾದ ದರೋಡೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

ಈ ವಿಷಯವನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ-ಕಾನೂನು ಮತ್ತು ಸುವ್ಯವಸ್ಥೆ) ಆರ್. ಹಿತೇಂದ್ರ ಅವರು ಗುರುವಾರ ಇಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಪ್ರಕರಣದ ತನಿಖೆ ಇನ್ನೂ ನಡೆಯುತ್ತಿರುವ ಕಾರಣ, ಮಹಾರಾಷ್ಟ್ರದ ನಿವಾಸಿಯಾದ ಬಂಧಿತ ವ್ಯಕ್ತಿಯ ಹೆಸರನ್ನು ಅವರು ಬಹಿರಂಗಪಡಿಸಲಿಲ್ಲ. ಆತನಿಂದ 55 ಗ್ರಾಂ ತೂಕದ ಬಳೆಗಳು ಮತ್ತು ದರೋಡೆಗೆ ಬಳಸಿದ ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದರೋಡೆಗೆ ಸಂಚು ರೂಪಿಸುವ ಮೊದಲು ಆರೋಪಿಯು ಬ್ಯಾಂಕಿನ ಒಳಗೆ ಮತ್ತು ಹೊರಗೆ ಹಲವಾರು ಬಾರಿ ರೆಕಿ ಮಾಡಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ. ಆತ ಮಾಂಗ್ಲವಾಡದಲ್ಲಿ ಕಾರು ಕದ್ದು ಅದನ್ನು ದರೋಡೆಗೆ ಬಳಸಿದ್ದ. ಆತನನ್ನು ಅಕ್ಟೋಬರ್ 7 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಪ್ರಕರಣದಲ್ಲಿ ಪೊಲೀಸರು ಇಲ್ಲಿಯವರೆಗೆ 9.01 ಕೆಜಿ ಚಿನ್ನ ಮತ್ತು ₹ 86,31,220 ನಗದು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಇತರ ಇಬ್ಬರು ಆರೋಪಿಗಳ ಗುರುತು ಪತ್ತೆಯಾಗಿದ್ದು, ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಬ್ಯಾಂಕ್‌ನಿಂದ ದೋಚಲಾದ ಉಳಿದ ಚಿನ್ನ ಮತ್ತು ನಗದನ್ನು ಸಹ ವಶಪಡಿಸಿಕೊಳ್ಳಲಾಗುವುದು ಎಂದು ಎಡಿಜಿಪಿ ಹಿತೇಂದ್ರ ಹೇಳಿದ್ದಾರೆ.

ಆರೋಪಿಗಳಿಗೆ ಪಿಸ್ತೂಲ್‌ಗಳನ್ನು ಪೂರೈಸಿದ ಬಿಹಾರದ ಮೂವರನ್ನು ಸಹ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಹಿತೇಂದ್ರ ತಿಳಿಸಿದರು. ಬಂಧಿತರನ್ನು ಸಮಸ್ತಿಪುರದವರಾದ ರಾಕೇಶ್‌ಕುಮಾರ್ ಸಹಾನಿ (22), ರಾಜುಕುಮಾರ್ ಪಾಸ್ವಾನ್ (21) ಮತ್ತು ರಕ್ಷಕ್ ಕುಮಾರ್ ಮಾಟೋ (21) ಎಂದು ಗುರುತಿಸಲಾಗಿದೆ.

ಘಟನೆ ನಡೆದ ದಿನ, ಮೂವರು ಮುಸುಕುಧಾರಿಗಳು ಖಾತೆ ತೆರೆಯುವ ನೆಪದಲ್ಲಿ ಬ್ಯಾಂಕ್‌ಗೆ ಪ್ರವೇಶಿಸಿದ್ದರು. ಅವರು ಚಾಕು ಮತ್ತು ಪಿಸ್ತೂಲ್‌ಗಳನ್ನು ತೋರಿಸಿ ಬ್ಯಾಂಕ್ ಸಿಬ್ಬಂದಿಗೆ ಬೆದರಿಕೆ ಹಾಕಿ, ಹಗ್ಗಗಳಿಂದ ಕಟ್ಟಿಹಾಕಿ, ಸ್ಟ್ರಾಂಗ್ ರೂಂನಿಂದ ₹ 1.04 ಕೋಟಿ ನಗದು ಮತ್ತು ಸುಮಾರು 20 ಕೆಜಿ ಚಿನ್ನಾಭರಣಗಳನ್ನು (ಅಂದಾಜು ₹ 20 ಕೋಟಿ ಮೌಲ್ಯ) ದೋಚಿಕೊಂಡು ಹೋಗಿದ್ದರು. ಈ ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರ್ಗಿ ಅವರು ಏಳು ವಿಶೇಷ ತಂಡಗಳನ್ನು ರಚಿಸಿದ್ದರು.

ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ: ಸಿ.ಎಂ.ಸಿದ್ದರಾಮಯ್ಯ
ವಿಜಯಪುರ ಜು 14: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

4157 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, 401 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ ಮಾಡಿದ್ದೇನೆ. ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ. ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರದ ಸಾಧನೆ ಮತ್ತು ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ಸಾರ್ವಜನಿಕ‌ವಾಗಿ ದಾಖಲೆ ಸಮೇತ ಚರ್ಚೆ ನಡೆಸೋಣ. ಜನರೇ ತೀರ್ಮಾನಿಸಲಿ ಎಂದು ನುಡಿದರು.

ಬಿಜಾಪುರ ಜಿಲ್ಲೆ ಮೊದಲು ಹೇಗಿತ್ತು ? ನಮ್ಮ ಸರ್ಕಾರದಲ್ಲಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನು ಕೈಯಲ್ಲಿ ಹಿಡಿದು ನೋಡಿ. ಬಿಜಾಪುರ ಜಿಲ್ಲೆಯಲ್ಲಿ ನೀರಾವರಿ ಈ ಮಟ್ಟಕ್ಕೆ ಅಭಿವೃದ್ಧಿಗೊಳಿಗೆ, ಬರದ ನಾಡಾಗಿದ್ದ ಬಿಜಾಪುರವನ್ನು ಹಸಿರು ನಾಡು ಮಾಡಿದ್ದು ನಾವು ಎಂದು ನುಡಿದರು.

ಹಿಂದೆ ಬರಗಾಲ ಬಂದಾಗ ಜನ ನಿಂಬೆ ಗಿಡ ಕಿತ್ತು ಹಾಕುತ್ತಿದ್ದರು. ಅದೇ ದಿನ‌ ನಾನು ಇಂಡಿಗೆ ಬಂದಿದ್ದೆ. ನಿಂಬೆ ಬೆಳೆಗಾರರಿಗೆ ಭರವಸೆ ನೀಡಿದ್ದೆ. ಇಂದು ನಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನ ಬಿಡುಗಡೆ ಮಾಡಿ ನುಡಿದಂತೆ ನಡೆಯುವ ಕಾಂಗ್ರೆಸ್ಸಿನ ಪರಂಪರೆಯನ್ನು ಮುಂದುವರೆಸಿದ್ದೇವೆ ಎಂದರು.

ಬಿಜೆಪಿ-ಜೆಡಿಎಸ್ ಇಬ್ಬರೂ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಅಪಪ್ರಚಾರ ಮಾಡಿ ಜನರಿಂದಲೇ ತಿರಸ್ಕಾರಕ್ಕೆ ಒಳಗಾಗಿದ್ದಾರೆ. ನಾವು ಇವರ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳ ಮೂಲಕವೇ ಉತ್ತರ ಕೊಡುತ್ತಿದ್ದೇವೆ ಎಂದರು.

500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವುದು, 1.23 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಹಣ ಪಡೆದಿರುವುದು, 1.64 ಕೋಟಿ ಮನೆಗಳಿಗೆ ಉಚಿತವಾಗಿ 200 ಯೂನಿಟ್ ಹಣ ಪಡೆಯುತ್ತಿರುವುದು, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳ ಮೂಲಕ ಕೋಟಿ ಕೋಟಿ ಕನ್ನಡಿಗರ ಬದುಕಿಗೆ ನೆರವಾಗಿರುವುದು ಅಭಿವೃದ್ಧಿ ಅಲ್ಲವೇ ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಗ್ಯಾರಂಟಿಗಳಲ್ಲದೆ 83 ಸಾವಿರ ಕೋಟಿ ರೂಪಾಯಿ ಹಣ ಅಭಿವೃದ್ಧಿಗೆ ತೆಗೆದಿಟ್ಟುರುವುದು ನಮ್ಮ ಅಭಿವೃದ್ಧಿಪರವಾದ ಆಡಳಿತಕ್ಕೆ ಸ್ಪಷ್ಟ ನಿದರ್ಶನ. ಆದ್ದರಿಂದ ಬಿಜೆಪಿ-ಜೆಡಿಎಸ್ ನ ಸುಳ್ಳು ಆರೋಪಗಳನ್ನು ನಂಬಬೇಡಿ. ನಿಮ್ಮ ಕಣ್ಣೆದುರಿಗೇ ಇರುವ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿಯವರ ಮುಖಕ್ಕೆ ಹಿಡಿದು ಉತ್ತರಿಸಿ ಎಂದು ಕರೆ ನೀಡಿದರು.

ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರಿಗೆ ಸರ್ಕಾರದಿಂದ ಹಣ ತಂದು ಕ್ಷೇತ್ರದ ಅಭಿವೃದ್ಧಿ ಮಾಡುವುದು ಹೇಗೆ ಎನ್ನುವುದರಲ್ಲಿ ಬಹಳ ಪ್ರಾಮಾಣಿಕರು ಮತ್ತು ಚಾಣಾಕ್ಷರು. ನಮ್ಮದು ಸರ್ವರ ಅಭಿವೃದ್ಧಿಗೆ ಬದ್ದವಾಗಿರುವ ಸರ್ಕಾರ ಎಂದರು.

ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರ ಅಧ್ಯಕ್ಷತೆಯ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಶಿವಾನಂದ ಎಸ್.ಪಾಟೀಲ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವು ಮಂದಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಪಂಚಮಸಾಲಿ ಮೀಸಲು ಹೋರಾಟ| ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಮುಖ್ಯಮಂತ್ರಿ
ವಿಜಯಪುರ, ಡಿಸೆಂಬರ್ 13: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಬಗ್ಗೆ ಮಾತನಾಡಿ ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾನೂನಿನ ಮುಂದೆ ಎಲ್ಲರೂ ಸಮಾನರು

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದರು.

ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇವೆ

ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.

ಪ್ರತಿಭಟನಾಕಾರರು ಕಲ್ಲು ಹೊಡೆದಿರುವ ಫೋಟೋಗಳಿವೆ

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸ್ ಕಲ್ಲು ಹೊಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ ? ಎಂದು ಪ್ರಶ್ನಿಸಿದರು. ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ ಎಂದರು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು

ಮೀಸಲಾತಿ ಮುಂದೇನು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು 2ಬಿ ಯಲ್ಲಿರುವ 4% ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದ್ದಾರೆ.

ಹೋರಾಟಕ್ಕೆ ಬಿಜೆಪಿ ಬೆಂಬಲ

ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ 2% ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ 2% ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದನ್ನು ಸಿಎಂ ಉಲ್ಲೇಖಿಸಿದರು.

ಸಂಧಾನಕ್ಕೆ ಸಚಿವರನ್ನು ಕಳುಹಿಸಲಾಗಿತ್ತು

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ , ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ದೂರು ದಾಖಲು
ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅಸಭ್ಯ ಶಬ್ದ ಬಳಕೆ ಮಾಡಿದ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಇತರರ ವಿರುದ್ಧ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಗರ ಪಾಲಿಕೆ ನಾಮ‌ನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎನ್ನುವವರು ನೀಡಿದ ದೂರನ್ನು ಆಧರಿಸಿ ಈ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಅಕ್ಟೋಬರ್ 15ರಂದು ವಕ್ಫ್ ಕಾಯ್ದೆ ಕುರಿತು ನಡೆದ ಸಭೆಯಲ್ಲಿ ಯತ್ನಾಳ್ ಭಾಷಣ ಮಾಡುವಾಗ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಜತೆಗೆ ಮುಸ್ಲಿಂ ಧರ್ಮದ ನಿಂದನೆ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೇ, ಹಿಂದೂ-ಮುಸ್ಲಿಂ ಜಾತಿ ಮಧ್ಯೆ ಗಲಭೆ ಸೃಷ್ಟಿಸುವ ಉದ್ದೇಶದಿಂದ ಭಾಷಣ ಮಾಡಿದ್ದು, ಕೋಮು ಗಲಭೆ ಆಗುವ ಲಕ್ಷಣಗಳು ಕಂಡು ಬರುತ್ತಿವೆ. ಭಯದ ವಾತಾವರಣ ಮೂಡಿಸಿದ ಕಾರಣ ಶಾಸಕ‌ ಯತ್ನಾಳ್ ಹಾಗೂ ವೇದಿಕೆ ಮೇಲಿದ್ದ ಇತರರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಖಾಸಗಿ ಸುದ್ದಿ ವಾಹಿನಿಯ ಯೂಟ್ಯೂಬ್ ನಲ್ಲಿ ಪ್ರಸಾರವಾದ ಯತ್ನಾಳ್ ಭಾಷಣವನ್ನು ಆಧರಿಸಿ ಪರಶುರಾಮ ಈ ದೂರು ಕೊಟ್ಟಿದ್ದಾರೆ. ಸದ್ಯ ಭಾರತೀಯ ನ್ಯಾಯ ಸಂಹಿತೆ 2023 ರ (ಯು/ಎಸ್ -352, 353(2) ಕಲಂ ಅಡಿ ಕೇಸ್ ದಾಖಲಾಗಿದೆ.

ಗೌರಿ ಲಂಕೇಶ್ ಹ*ತ್ಯೆ ಪ್ರಕರಣದ ಆರೋಪಿಗಳಿಗೆ ಹಿಂದುತ್ವವಾದಿಗಳಿಂದ ಸನ್ಮಾನ
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಮತ್ತು ಮನೋಹರ್ ಯಾದವ್‌ಗೆ ಬೆಂಗಳೂರಿನಲ್ಲಿ ಹಿಂದುತ್ವ ಶಕ್ತಿಗಳು ಸನ್ಮಾನ ಮಾಡಿವೆ.

ಬೆಂಗಳೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ನಂತರ ಶುಕ್ರವಾರ ಇಬ್ಬರನ್ನೂ ಸನ್ಮಾನಿಸಲಾಯಿತು. ವಿಶೇಷ ನ್ಯಾಯಾಲಯ ಆರೋಪಿಗಳಿಗೆ ಇದೇ ತಿಂಗಳ 9ರಂದು ಜಾಮೀನು ಮಂಜೂರು ಮಾಡಿದೆ. ಆರೋಪಿಗಳಿಬ್ಬರು ವಿಜಯಪುರದ ಸ್ವಗ್ರಾಮ ತಲುಪಿದ ಬಳಿಕ ಸಂಘ ಪರಿವಾರ ಹಾಗೂ ಶ್ರೀರಾಮ ಸೇನೆ ವತಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವಿಡಿಯೋಗಳು ಭಾನುವಾರ ವೈರಲ್ ಆಗಿವೆ.

ವಿಜಯಪುರ ತಲುಪಿದ ಆರೋಪಿಗಳು ಕಾಳಿಮಾತಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಸಂಫು ಪರಿವಾರ ಹಾಗೂ ಶ್ರೀರಾಮ ಸೇನೆಯ ಸದಸ್ಯರು ಹೂಮಾಲೆ ಹಾಕಿ ಸನ್ಮಾನಿಸಿದರು. ನಗರದ ಶಿವಾಜಿ ವೃತ್ತದಲ್ಲಿರುವ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನ ಅವರ ನಿವಾಸದ ಮುಂದೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 25 ಮಂದಿಯನ್ನು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ 18 ಮಂದಿಗೆ ಜಾಮೀನು ಸಿಕ್ಕಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಹಿಂದುತ್ವವಾದಿ ಸಂಘಟನೆಗಳು ಹಾಗೂ ಬಿಜೆಪಿ ಬೆಂಬಲಿಗರು ಸನ್ಮಾನ ಮಾಡುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಆಗಸ್ಟ್‌ನಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿ ನವೀನ್ ಮನೆಗೆ ಭೇಟಿ ನೀಡಿ ಗೌರವ ಸಲ್ಲಿಸಿದ್ದರು. ಲಂಕೇಶ್ ಹಂತಕರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸಂಭ್ರಮದಿಂದ ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಕಿಡಿಕಾರಿದ್ದಾರೆ.

ವಿಜಯಪುರ: ಪಾದಚಾರಿಗಳಿಗೆ ಬೈಕ್ ಡಿಕ್ಕಿ ನಾಲ್ವರು ಸ್ಥಳದಲ್ಲೇ ಸಾವು
ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನು ತಾಳಿಕೋಟೆ ತಾಲೂಕಿನ ಗೋಟಖಂಡಕಿ ನಿವಾಸಿ ನಿಂಗರಾಜ ಚೌದರಿ(32), ದೇವರಹಿಪ್ಪರಗಿ ತಾಲೂಕಿನ ಹಂಚಲಿ ನಿವಾಸಿ ಅನಿಲ್ ಖೈನೂರ (23) ಮಲಗಲದಿನ್ನಿ ಗ್ರಾಮದ ನಿವಾಸಿ ಉದಯಕುಮಾರ ಪ್ಯಾಟಿ(19) ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಮತ್ತೊಬ್ಬ ಯುವಕ ರಾಯಪ್ಪ ಕೂಡ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಜಯಪುರ :ಜೂನ್ -16: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಸೇಡಿಗಾಗಿ ದರ ಏರಿಕೆ ಮಾಡಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ , ಈ ಬಾರಿ ಒಂಭತ್ತು ಸ್ಥಾನಗಳನ್ನು ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದನ್ನು ಈ ಬಾರಿ 19 ಕ್ಕೆ ಇಳಿದಿದ್ದಾರೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ ಎಂದು ಪ್ರಶ್ನಿಸಿದರು. ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು.

ಸೋತಿರುವುದು ಬಿಜೆಪಿ

ಚುನಾವಣೆಯಲ್ಲಿ ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ ಎಂದರು. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ನಾವು ಸೋತಿದ್ದೇವೆಯೇ ಎಂದರು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಡಿಮೆ ಮತ ಬಂದಿದೆ, ಮೋದಿ ಅಲೆ ಕಡಿಮೆಯಾಗಿದೆ ಎಂದರು.

ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ
ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 11.4.2021ರಂದು ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು. ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44 , ತೆಲಂಗಾಣದ ಹೈದರಾಬಾದ್ ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ ಎಂದರು.

ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕರ್ನಾಟಕದ ಇತಿಹಾಸದಲ್ಲಿ ಪೆಟ್ರೋಲ್ ಬೆಲೆ ಇಷ್ಟು ದುಬಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಹಿಂದೆ ಇದ್ದಾಗ ಶೇ 35% ಇತ್ತು. ಬಿಜೆಪಿ ಸರ್ಕಾರ ಇರುವ ರಾಜಸ್ಥಾನದಲ್ಲಿ 104.86 ರೂ.ಗಳಿದೆ ಹಾಗೂ ಮಧ್ಯಪ್ರದೇಶದಲ್ಲಿ 106.47 ರೂ
ಗಳಿದೆ. ಕರ್ನಾಟದಲ್ಲಿ ಈ ರಾಜ್ಯಗಳಿಗಿಂತ ಕಡಿಮೆ ಇದೆ. ಪಕ್ಕದ ರಾಜ್ಯಗಳಿಗೆ ಸಮವಾಹಿರಲಿ ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿರಲಿಲ್ಲ. ಚುನಾವಣೆಯ ನಂತರ ತಲೆಬದ್ಧಗೊಳಿಸಲು ಏರಿಕೆ ಮಾಡಿದ್ದೇವೆ. ಇತರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಿದೆ ಎಂದರು.

ಅನುದಾನ ನೀಡಲಾಗಿದೆ
ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ನಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅನುದಾನವನ್ನು ನೀಡಲಾಗಿದೆ ಎಂದರು.

ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ
ಸಾರ್ವಜನಿಕರಲ್ಲಿ ಗ್ಯಾರಂಟಿ ಗಳನ್ನು ನಿಲ್ಲಿಸುತ್ತಾರೆ ಎಂಬ ಗಾಳಿಸುದ್ದಿ ಎದ್ದಿರುವ ಬಗ್ಗೆ ಮಾತನಾಡಿ ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ ಎಂದರು.

ವಿಜಯಪುರದಲ್ಲಿ ಭೀಕರ ಅಪಘಾತ, ನಾಲ್ಕು ಸಾವು
ವಿಜಯಪುರ, ಏಪ್ರಿಲ್ 13 ಕರ್ನಾಟಕದ ವಿಜಯಪುರ ಜಿಲ್ಲೆಯ ಅರ್ಜುಣಗಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು 32 ವರ್ಷದ ಅರ್ಜುನ್ ಕುಶಾಲ್ ಸಿಂಗ್ ರಜಪೂತ್, 52 ವರ್ಷದ ರವಿನಾಥ್ ಪತ್ತಾರ್, 40 ವರ್ಷದ ಪುಷ್ಪಾ ರವಿನಾಥ್ ಪತ್ತಾರ್ ಮತ್ತು 12 ವರ್ಷದ ಮೇಘರಾಜ ರಜಪೂತ್ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಅವರ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯ ನಂತರ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ವಿಜಯಪುರ ನಗರದಿಂದ ಜಮಖಂಡಿ ಪಟ್ಟಣದ ದೇವಸ್ಥಾನಕ್ಕೆ ತೆರಳುತ್ತಿದ್ದರು.

ಸಿಮೆಂಟ್ ಹೊತ್ತ ಲಾರಿ ಜಮಖಂಡಿ ಕಡೆಯಿಂದ ವಿಜಯಪುರ ಕಡೆಗೆ ಬರುತ್ತಿತ್ತು. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದ ನಂತರ ಕಾರು ಜಖಂಗೊಂಡ ಸ್ಥಳಕ್ಕೆ ವಿಜಯಪುರ ಎಸ್ಪಿ ಋಷಿಕೇಶ ಸೋನಾವಾನೆ ಭಗವಾನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಬ್ಯಾನರ್ ಹರಿದು ಹಾಕಿದ್ದ ಮೂವರ ಬಂಧನ
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಕರ್ನಾಟಕ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತರನ್ನು ಯಾಸೀನ್, ಮೊಹಮ್ಮದ್ ಮತ್ತು ಸೊಹೈಲ್ ಎಂದು ಗುರುತಿಸಲಾಗಿದೆ.

ಬಿಜೆಪಿ ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಚಿತ್ರವಿದ್ದ ಬ್ಯಾನರ್ ಅನ್ನು ಆರೋಪಿಗಳು ಹರಿದು ಹಾಕಿದ್ದರು. ಗಣೇಶ ಹಬ್ಬದ ಶುಭಾಶಯ ಕೋರಲು ಇದನ್ನು ಹಾಕಲಾಗಿತ್ತು. ಬ್ಯಾನರ್‌ನಲ್ಲಿ ಗಣೇಶ ಮತ್ತು ಶಿವಾಜಿ ಮಹಾರಾಜರ ಚಿತ್ರಗಳಿದ್ದವು.

ಬಳಿಕ ಬ್ಯಾನರ್ ಹರಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಶಾಸಕ ಯತ್ನಾಳ್ ಬೆಂಬಲಿಗ ರಘು ವಿಜಯಪುರದ ಗಾಂಧಿ ಚೌಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಇದು ನಗರದಲ್ಲಿ ಕೋಮು ಸೌಹಾರ್ದ ಹಾಳು ಮಾಡುವ ಪ್ರಯತ್ನವಾಗಿದೆ ಎಂದು ದೂರಿದರು.

ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದೆ ಗಣೇಶ ಚತುರ್ಥಿ ಆಚರಿಸಿದ್ದು, ಈದ್ ಆಚರಣೆ ವೇಳೆ ಯುವಕರ ಗುಂಪು ಉದ್ದೇಶಪೂರ್ವಕವಾಗಿ ಹಿಂದೂ ದೇವರುಗಳ ಫೋಟೋ ಇರುವ ಬ್ಯಾನರ್ ಹರಿದು ಅವಮಾನ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.