Tuesday, June 25, 2024

ಸತ್ಯ | ನ್ಯಾಯ |ಧರ್ಮ

ಕಾವೇರಿ ವಿವಾದ : ಸೆ.1ಕ್ಕೆ ವಿಚಾರಣೆಯನ್ನು ಮುಂದೂಡಿದ ಸು.ಕೋರ್ಟ್

ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ತಮಿಳುನಾಡು ಸರ್ಕಾರದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ. ವಾದ ಮತ್ತು ಪ್ರತಿವಾದವನ್ನು ಆಲಿಸಿದ ನಂತರ ಮುಂದಿನ ವಿಚಾರಣೆಯನ್ನು ಬರುವ ಶುಕ್ರವಾರಕ್ಕೆ(ಸೆಪ್ಟೆಂಬರ್ 01) ಮುಂದೂಡಿದೆ.

ಈ ನಡುವೆ ಮುಂದಿನ ವಿಚಾರಣೆ ನಡೆಯುವ ಒಳಗೇ ಮಧ್ಯಂತರ ಸಭೆ ಕರೆಯುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ವಾದ ಪ್ರತಿವಾದದ ನಂತರ ವಿಚಾರಣೆ ಮುಂದೂಡುವ ಮುನ್ನ ತುರ್ತಾಗಿ ಆದೇಶ ಹೊರಡಿಸುವುದು ಕಷ್ಟ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ. ‘ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ . ನಾವು ತಜ್ಞರಲ್ಲ ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಈ ಮಧ್ಯಂತರ ಅವಧಿಯಲ್ಲಿ ಸಭೆ ಕರೆಯುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಿದೆ.

ವಿಚಾರಣೆ ಹಂತದಲ್ಲಿ ಮೊದಲು ವಾದ ಆರಂಭಿಸಿದ ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ, ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ 40 ಟಿಎಂಸಿ ನೀರು ಬಿಡುತ್ತಿಲ್ಲ. ಈ ಮೊದಲು 15 ದಿನಗಳ ಕಾಲ 10 ಸಾವಿರ ಕ್ಯೂಸೆಕ್ ನೀರು ಬಿಡಲು CWMA ಆದೇಶ ನೀಡಿತ್ತು. ಇದು ಮುಂದಿನ 20 ದಿನಗಳಿಗೆ ಮುಂದುವರೆಯಬೇಕು ಎಂದು ಸುಪ್ರೀಂಕೋರ್ಟ್​ ತ್ರೀಸದಸ್ಯ ಪೀಠದ ಮುಂದೆ ವಾದ ಮಂಡಿಸಿದರು.

ಕರ್ನಾಟಕದ ಪರ ವಾದ
ತಮಿಳುನಾಡು ಪರ ವಕೀಲರ ವಾದದ ನಂತರ ವಾದ ಮಂಡಿಸಿದ ಕರ್ನಾಟಕ ಪರ ವಕೀಲರಾದ ಶ್ಯಾಮ ದಿವಾನ್ ‘ಕರ್ನಾಟಕದಲ್ಲಿ ಈ ಬಾರಿ ಮಳೆ ಪ್ರಮಾಣ ಕಡಿಮೆ ಇದೆ. ಈ ಕಾರಣ ನೀರಿನ ಪ್ರಮಾಣ ಕೂಡಾ ತುಂಬಾ ಕಡಿಮೆ ಇದೆ. ಈ ವಿಚಾರವನ್ನು ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ನಾವು ನಮ್ಮ ಸಮಸ್ಯೆಗಳನ್ನು ಹೇಳಲು ಪ್ರಯತ್ನಿಸಿದಾಗ ತಮಿಳುನಾಡು ಸರ್ಕಾರದ ಅಧಿಕಾರಿಗಳು ಕೇಳದೆ ಸಭೆಯಿಂದ ಹೊರನಡೆದಿದ್ದಾರೆ ಎಂದು ಕರ್ನಾಟಕ ಪರ ಶ್ಯಾಮ ದಿವಾನ್ ವಾದ ಮಂಡಿಸಿದರು.

ಆ ನಂತರ ಮುಂದಿನ ವಿಚಾರಣೆಯನ್ನು ಬರುವ ಸೆಪ್ಟೆಂಬರ್ 01 ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ.

Related Articles

ಇತ್ತೀಚಿನ ಸುದ್ದಿಗಳು